Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ‘ಸ್ವಚ್ಛತಾ ಹೀ ಸೇವಾ – 2026’ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.   ಸೆ. 17 ರಿಂದ ಅಕ್ಟೋಬರ್ 02, 2025 (ಗಾಂಧಿ ಜಯಂತಿ) ವರೆಗೆ ನಡೆದ ಈ ಅಭಿಯಾನದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ Cleanliness Target Units (CTU) ಮತ್ತು ಸಾರ್ವಜನಿಕ ಸ್ಥಳಗಳಲ್ಲಿದ್ದ ‘ಬ್ಲಾಕ್ ಸ್ಪಾಟ್’ಗಳನ್ನು ಗುರುತಿಸಿ, ಅವುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸುಂದರ ಉದ್ಯಾನ ಸೃಷ್ಠಿಸಿ ಅನಾವರಣಗೊಳಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು. ​ಈ ಅಭಿಯಾನದ ಭಾಗವಾಗಿ ಕಸ ಬಿದ್ದ ಹಾಗೂ ಅಶುಚಿಯಾಗಿದ್ದ ಸ್ಥಳಗಳನ್ನು ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ಸುಂದರ ಉದ್ಯಾನ ಸೃಷ್ಠಿಸಿ ಅದರಲ್ಲಿ ವಿಶೇಷವಾಗಿ ಜಾಗೃತಿ ಫಲಕವನ್ನು ಇರಿಸಲಾಗಿದೆ. ಪರಿಶುದ್ಧ ಹಾಗೂ ಸ್ವಚ್ಛ ಸಾಲಿಗ್ರಾಮ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ ,ಸ್ವಚ್ಛತೆ ನಮ್ಮೆಲ್ಲರ ಹೊಣೆಗಾರಿಕೆ ಕಂಡಕಂಡಲ್ಲಿ ತ್ಯಾಜ್ಯ ಎಸೆದು ಮನುಕುಲಕ್ಕೆ ಸಂಕಷ್ಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ನಿಟ್ಟಿನಲ್ಲಿ ಹಳೆಯಂಗಡಿ ಗ್ರಾಮ ಪಂಚಾಯಿತಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಸಸಿಹಿತ್ಲು ಕಡಲ ತೀರದಲ್ಲಿ ಶುಕ್ರವಾರ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು. 500ಕ್ಕೂ ಅಧಿಕ ಮಂದಿ ಭಾಗವಹಿಸಿದ ಅಭಿಯಾನದಲ್ಲಿ ಕಡಲತೀರ ಹಾಗೂ ಸುತ್ತಮುತ್ತಲಿನ ಪ್ರದೇಶದಿಂದ ಸುಮಾರು 12.75 ಟನ್‌ಗಳಷ್ಟು ಪ್ಲಾಸ್ಟಿಕ್, ಗಾಜು, ರಬ್ಬರ್, ಥರ್ಮಕೋಲ್ ಸೇರಿದಂತೆ ವಿವಿಧ ಬಗೆಯ ತ್ಯಾಜ್ಯವನ್ನು ಸಂಗ್ರಹಿಸಲಾಯಿತು. ಗಾಂಧೀಜಿಯವರ ಸ್ವಚ್ಛತೆ ಮತ್ತು ಪರಿಸರ ಕಾಳಜಿಯ ಆಶಯವನ್ನು ಜನಜೀವನದಲ್ಲಿ ಅಳವಡಿಸುವ ಉದ್ದೇಶದಿಂದ ಆಯೋಜಿಸಲಾದ ಅಭಿಯಾನದಲ್ಲಿ ವಿವಿಧ ಸಂಘ–ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. ಬೆಳಗ್ಗಿನಿಂದಲೇ ಸಸಿಹಿತ್ಲು ಕಡಲತೀರದಲ್ಲಿ ಸ್ವಚ್ಛತಾ ಕಾರ್ಯ ಆರಂಭಗೊಂಡಿದ್ದು, ಕಡಲತೀರದ ವಿವಿಧ ಭಾಗಗಳಲ್ಲಿ ಚದುರಿದ್ದ ತ್ಯಾಜ್ಯವನ್ನು ಸಂಗ್ರಹಿಸಿ ಪ್ರತ್ಯೇಕವಾಗಿ ವಿಲೇವಾರಿಗೆ ಮಾಡಲಾಯಿತು. ನಿರಂತರ ಸ್ವಚ್ಛತಾ ಕಾರ್ಯಕ್ಕೆ ಸಂಕಲ್ಪ:ಹಳೆಯಂಗಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ, ಶಾಲಾ ಸಂಯೋಜಕರು ಹಾಗೂ ಇತರೆ ಸಿಬ್ಬಂದಿಗಳು ದೇಶದ ಈ ಮಹಾ ನಾಯಕರ ಭಾವಚಿತ್ರಗಳಿಗೆ ಪುಷ್ಪನಮನವನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಹಶಿಕ್ಷಕಿ ಕೃಪಾಶ್ರೀ ಅವರು ಮಾತನಾಡುತ್ತಾ ” ಬಾಪೂಜಿ ಮಹಾತ್ಮ ಗಾಂಧೀಜಿಯವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ಧಾರೆ ಎರೆದಿದ್ದಾರೆ. ಗಾಂಧಿಯವರ ಸತ್ಯ,ಶಾಂತಿ, ಅಹಿಂಸೆಯ ತತ್ವಗಳನ್ನು ಇಂದು ಪ್ರಪಂಚದಾದ್ಯಂತ ಪಾಲಿಸಲಾಗುತ್ತಿದೆ. ಈ ನಾಡಿನ ಶ್ರೇಯೋನ್ನತಿಗೆ ಶ್ರಮಿಸಿದ ಮಹಾತ್ಮನ ಬದುಕು ಮತ್ತು ಸಂದೇಶಗಳು ನಮ್ಮೆಲ್ಲರಿಗೂ ಮಾದರಿ” ಎಂದು ತಿಳಿಸಿದರು. ಸಹಶಿಕ್ಷಕಿ ಪೂರ್ಣಿಮಾ ಮಾತನಾಡಿ, “ಲಾಲ್ ಬಹುದ್ದೂರ್ ಶಾಸ್ತ್ರಿಯವರು ಈ ದೇಶ ಕಂಡ ಅಪ್ರತಿಮ ಪ್ರಧಾನಿಗಳಲ್ಲೊಬ್ಬರು. ದಿಟ್ಟ ನಿಲುವಿಗೆ ಹೆಸರಾಗಿದ್ದ ಶಾಸ್ತ್ರಿಯವರು ಹಸಿರು ಕ್ರಾಂತಿ ಮತ್ತು ಕ್ಷೀರ ಕ್ರಾಂತಿಗೆ ಮುನ್ನುಡಿ ಬರೆದವರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಕೃಷಿಕರನ್ನು ಕಾಣಬಹುದು ಆದರೆ ಕೃಷಿ ಕೂಲಿ ಕಾರ್ಮಿಕರನ್ನು ಯಾರೊಬ್ಬರು ಗುರುತಿಸುವುದಿಲ್ಲ ಆದರೆ ಪಂಚವರ್ಣ ಸಂಘಟನೆ ರೈತರೆಡೆಗೆ ಮೂಲಕ ಅಂತವರನ್ನು ಹುಡುಕಿ ಗುರುತಿಸಿ ಗೌರವಿಸುವ ಕಾರ್ಯ ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 57ನೇ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿ, ಕೃಷಿ ಕಾಯಕ ನಡೆಸುವ ಕೂಲಿ ಕಾರ್ಮಿಕರ ಸ್ಥಿತಿಗತಿಯನ್ನುಅರಿಯುವರು ವಿರಳ ಪ್ರಸ್ತುತ ಕೂಲಿ ಕಾರ್ಮಿಕರು ಕೊರತೆ ಇದ್ದು ಈ ಬಗ್ಗೆ ರೈತ ಸಮುದಾಯ ವಿಶೇಷ ಕಾಳಜಿ ಅಗತ್ಯ ಎಂದರಲ್ಲದೆ ಪಂಚವರ್ಣ ಸಂಘಟನೆ ಸಾಮಾಜಿಕ ಬದ್ಧತೆ ಎಲ್ಲರಿಗೂ ಮಾದರಿ ಎಂದರು. ಈ ಸಂದರ್ಭದಲ್ಲಿ ಹಂದಟ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಕೊಂಡು ಹೋಗಿದ್ದರು. ಈ ದೃಶ್ಯಾವಳಿಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ, ಪ್ರಮುಖ ಆರೋಪಿ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸ್ಕ್ರಿಮೊಹಮ್ಮದ್ ಸಿನಾನ್ (20) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ನೈರ್ಮಲ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸಹಾಯಕಿ ಪ್ರಾಧ್ಯಾಪಕಿಯಾಗಿರುವ ಸುಜಲಾ ನಂದಿನಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ವಿವರವಾಗಿ ತಿಳಿಸಿದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರು ತಮ್ಮಲ್ಲಿರುವ ಸಂದೇಹಗಳನ್ನು ಪ್ರಶ್ನೆ ಕೇಳುವ ಮೂಲಕ ಬಗೆಹರಿಸಿಕೊಂಡರು. ಸಹ ಶಿಕ್ಷಕಿ ರಮಣಿ ಅವರು ಪ್ರಾರ್ಥಿಸಿ, ಸಹಶಿಕ್ಷಕಿ ಪೂರ್ಣಿಮಾ ಶೇಟ್ ಅವರು ನಿರೂಪಿಸಿ, ಸಹಶಿಕ್ಷಕ ಸಾಗರ್ ಅವರು ವಂದನಾರ್ಪಣೆಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್‌ಬಹದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಶುಕ್ರವಾರದಂದು ಗೌರವ ಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಗಾಂಧೀಜಿ ಮತ್ತು ಲಾಲ್‌ಬಹದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಹಾಗೆಯೇ ಗಾಂಧೀಜಿ ಮತ್ತು ಶಾಸ್ತ್ರಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಪ್ರಾಂಶುಪಾಲರು, ಆಡಳಿತ ನಿರ್ದೇಶಕರು, ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನದಂದು ಕಾಲೇಜಿನ ಐಕ್ಯೂಎಸಿ, ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ, ಲಯನ್ಸ್ ಕ್ಲಬ್ ಕೋಟೇಶ್ವರ ಹಾಗೂ ಲಯನ್ಸ್ ಕ್ಲಬ್ ಕೋಟ ಗಿಳಿಯಾರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತೀಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಜಯಕರ್ ಶೆಟ್ಟಿ ಅವರು ರಕ್ತದಾನದ ಮಹತ್ವವನ್ನು ಹಾಗೂ ರಕ್ತದಾನ ಮಾಡಿದ ದಾನಿಗಳ ಆರೋಗ್ಯ ವೃದ್ಧಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಅವರು ಮಾತನಾಡಿ, ಆರೋಗ್ಯವಂತ ವ್ಯಕ್ತಿಗಳು ನಿಯಮಾನುಸಾರ ರಕ್ತದಾನ ಮಾಡುವುದರ ಮೂಲಕ ಸಮಾಜಕ್ಕೆ ಅಮೂಲ್ಯವಾದ ಸೇವೆ ಸಲ್ಲಿಸಬಹುದೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಡಾ. ಚೇತನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್ ನಿಷ್ಮಾ ಪೂಜಾರಿ ಅವರು ನವೆಂಬರ್‌ನಲ್ಲಿ ಭೂತಾನ್‌ನಲ್ಲಿ ನಡೆಯಲಿರುವ ಭಾರತ–ಭೂತಾನ್ ಯುವ ಸ್ನೇಹ ಶಿಬಿರಕ್ಕೆ (ಯುವ ವಿನಿಮಯ ಕಾರ್ಯಕ್ರಮ) ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಆಯ್ಕೆಯಾಗಿರುವ ನಾಲ್ವರು ಕೆಡೆಟ್‌ಗಳಲ್ಲಿ ನಿಷ್ಮಾ ಅವರೂ ಒಬ್ಬರಾಗಿದ್ದು, ಆಳ್ವಾಸ್ ಎನ್‌ಸಿಸಿ ಘಟಕದ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಾಧನೆಗಳ ಸಾಲಿಗೆ ಮತ್ತೊಂದು ಹೆಗ್ಗಳಿಕೆ ಸೇರ್ಪಡೆಯಾಗಿದೆ. ಭಾರತ ಮತ್ತು ಭೂತಾನ್ ದೇಶಗಳ ಯುವಜನರು ಹಾಗೂ ಎನ್‌ಸಿಸಿ ಕೆಡೆಟ್‌ಗಳ ನಡುವೆ ಸ್ನೇಹ, ಸಾಂಸ್ಕೃತಿಕ ವಿನಿಮಯ, ಪರಸ್ಪರ ತಿಳುವಳಿಕೆ ಮತ್ತು ಸಹಕಾರವನ್ನು ವೃದ್ಧಿಸುವ ಉದ್ದೇಶದಿಂದ ಯುವ ಸ್ನೇಹ ಶಿಬಿರವನ್ನು ಆಯೋಜಿಸಲಾಗುತ್ತದೆ. ವಿವಿಧ ದೇಶಗಳ ಕೆಡೆಟ್‌ಗಳು ಹಾಗೂ ಯುವ ಪ್ರತಿನಿಧಿಗಳೊಂದಿಗೆ ಸಂವಾದ, ಸಾಂಸ್ಕೃತಿಕ ವಿನಿಮಯ, ತಂಡ ಚಟುವಟಿಕೆಗಳು ಮತ್ತು ವಿವಿಧ ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶವನ್ನು ಈ ಶಿಬಿರ ಒದಗಿಸುತ್ತದೆ. ಈ ಮೂಲಕ ಯುವಜನರಲ್ಲಿ ನಾಯಕತ್ವ ಗುಣ, ತಂಡಸ್ಫೂರ್ತಿ, ಸಾಂಸ್ಕೃತಿಕ ಅರಿವು ಹಾಗೂ ಅಂತಾರಾಷ್ಟ್ರೀಯ ಸ್ನೇಹದ ಮನೋಭಾವ ಬೆಳೆಸುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸೇವಾ, ಸುಶಾಸನ ಮತ್ತು ಬಡವರ ಕಲ್ಯಾಣದ ಆಡಳಿತದ 25 ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ, ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಅಂಗನ್ ಉತ್ಸವ ನೆರವೇರಿತು. ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು, “ಮೋದಿಜಿ ಅವರ ನೇತೃತ್ವದಲ್ಲಿ ಅಂಗನವಾಡಿ ವ್ಯವಸ್ಥೆಗೆ ಹೊಸ ಆಯಾಮ ಸಿಕ್ಕಿದೆ. ಪೋಷಣ್ ಅಭಿಯಾನದ ಮೂಲಕ ಅಪೌಷ್ಟಿಕತೆ ಮುಕ್ತ ಭಾರತದ ಸಂಕಲ್ಪ ಸಾಕಾರವಾಗುತ್ತಿದೆ ಎಂದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು, “ಅಧಿಕಾರಕ್ಕಾಗಿ ಅಲ್ಲ, ಸೇವೆಗಾಗಿಯೇ 25 ವರ್ಷ. ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಮೋದಿಜಿ ತೋರಿದ ಅಭಿವೃದ್ಧಿ ಮಾದರಿ ಇಂದು ಜಗತ್ತಿಗೇ ಮಾದರಿಯಾಗಿದೆ” ಎಂದರು. ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ “ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು…

Read More