ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s ಎದುರಿನ v2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮವು ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆಯ ಅಂಗವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ) ಮನೆ ಮನೆಗೆ ಭೇಟಿ ನೀಡಿ, ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸುತ್ತಿದ್ದಾರೆ ಮತ್ತು ಸಂಗ್ರಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10,63,876 ಎನ್ಯುಮರೇಷನ್ ಫಾರ್ಮ್ಗಳನ್ನು ಮುದ್ರಿಸಲಾಗಿದ್ದು, ಈವರೆಗೆ (ಜುಲೈ 7) 118-ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,81,451 ಮತದಾರರಿಗೆ, 119-ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 1,59,874 ಮತದಾರರಿಗೆ, 120-ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,31,693 ಮತದಾರರಿಗೆ, 121-ಕಾಪು ವಿಧಾನಸಭಾ ಕ್ಷೇತ್ರದಲ್ಲಿ 1,28,356 ಮತದಾರರಿಗೆ ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 1,39,208 ಮತದಾರರಿಗೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 7,40,582 ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿರುತ್ತದೆ. 39,469 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಲಾಗಿದ್ದು, 282 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬAದಿರುತ್ತದೆ. 154 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 45 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ. ಸಾರ್ವಜನಿಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷ ಕಲೆಯನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಯಕ್ಷ ಶಿಕ್ಷಣ ರಿ. ಉಡುಪಿ ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಕೆದೂರಿನಲ್ಲಿ ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಹೆಸ್ಕುತ್ತೂರಿನ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ರವೂಫ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, “ಯಕ್ಷಗಾನವು ನಮ್ಮ ಸಂಸ್ಕೃತಿಯ ಕನ್ನಡಿಯಾಗಿದೆ. ಈ ಕಲೆಯು ಭಾಷಾ ಶುದ್ಧತೆಯನ್ನು ವೃದ್ಧಿಸುವುದರ ಜೊತೆಗೆ ಪುರಾಣ-ಇತಿಹಾಸದ ಜ್ಞಾನವನ್ನು ಮಕ್ಕಳಿಗೆ ಮನರಂಜನೆಯ ಮೂಲಕ ಕಲಿಸುತ್ತದೆ. ಕಲಿಯುವ ಆಸಕ್ತಿ ಮತ್ತು ನಿರಂತರ ಪ್ರಯತ್ನ ಇದ್ದರೆ ಯಾವುದೇ ಕಲೆಯನ್ನು ಸುಲಭವಾಗಿ ಕರಗತ ಮಾಡಿಕೊಳ್ಳಬಹುದು. ಓದಿನ ಜೊತೆಗೆ ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ” ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಕ್ಷಗುರು ಶ್ರೀ ನರಸಿಂಹ ತುಂಗ ಕೋಟ ಅವರು, “ಶೈಕ್ಷಣಿಕ ಬೆಳವಣಿಗೆಗೆ ಯಕ್ಷಗಾನ ಪೂರಕ ಕಲೆಯಾಗಿದೆ. ಇದು ಮಕ್ಕಳ ಸ್ಮರಣೆ, ವಾಚನ ಮತ್ತು ಬುದ್ಧಿಶಕ್ತಿಯನ್ನು ಚುರುಕುಗೊಳಿಸುತ್ತದೆ” ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ನವದೆಹಲಿ: ದಕ್ಷಿಣ ಭಾರತದ ಅಡಿಕೆ ಬೆಳೆಗಾರರ ಸಹಕಾರಿ ನಿಯೋಗದ ಜೊತೆಗೆ ಶಿವಮೊಗ್ಗ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಮಂಗಳವಾರ ನವದೆಹಲಿಯಲ್ಲಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾದರು. ಮಲ್ನಾಡ್ ಅಡಿಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ (MAMCOS), ಸೆಂಟ್ರಲ್ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (CAMPCO), ತೋಟ ಉತ್ಪನ್ನಗಳ ಮರಾಟ ಸಹಕಾರ ಸಂಘ ನಿಯಮಿತ (TUMCOS) ಮತ್ತು ಕರ್ನಾಟಕ ರಾಜ್ಯ ಅಡಿಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿಗಳ ಒಕ್ಕೂಟ ಸೇರಿದಂತೆ ದಕ್ಷಿಣ ಭಾರತದ ಪ್ರಮುಖ ಅಡಿಕೆ ಸಹಕಾರಿ ಸಂಸ್ಥೆಗಳನ್ನು ಪ್ರತಿನಿಧಿಸುವ ನಿಯೋಗದೊಂದಿಗೆ ಭೇಟಿ ಮಾಡಿದರು. ಮಹಾರಾಷ್ಟ್ರದಲ್ಲಿ ಉತ್ತಮ ಅಡಿಕೆ ಸಾಗಣೆ ಸರಕುಗಳನ್ನು ದೀರ್ಘಕಾಲದವರೆಗೆ ತಡೆಹಿಡಿಯಲಾಗಿರುವುದರಿಂದ ಕರ್ನಾಟಕದಾದ್ಯಂತ ಮತ್ತು ದಕ್ಷಿಣ ಭಾರತದ ವ್ಯಾಪಕ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಬೆಳೆಗಾರರಿಗೆ ಗಣನೀಯ ತೊಂದರೆ ಉಂಟಾಗಿದೆ ಎಂದು ನಿಯೋಗ ಮುಖ್ಯಮಂತ್ರಿಗಳ ಮಧ್ಯಪ್ರವೇಶವನ್ನು ಕೋರಿತು. ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಜನರ ಹೃದಯ ಶ್ರೀಮಂತಿಕೆ, ಆತಿಥ್ಯ, ಸರಳತೆ, ಪ್ರೀತಿ, ವಿಶ್ವಾಸ ಹಾಗೂ ಎಲ್ಲರನ್ನೂ ಆತ್ಮೀಯವಾಗಿ ಸ್ವೀಕರಿಸುವ ಗುಣ ಅಪೂರ್ವವಾದದ್ದು. ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚುವ ವಿಶಾಲ ಮನೋಭಾವದಲ್ಲಿ ಕುಂದಾಪುರದ ಜನರು ಸದಾ ಮುಂಚೂಣಿಯಲ್ಲಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್, ಐಪಿಎಸ್ ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕುಂದಾಪುರ ಕನ್ನಡ ಅಧ್ಯಯನ ಪೀಠ ಹಾಗೂ ಯಡಾಡಿ–ಮತ್ಯಾಡಿ ಸುಜ್ಞಾನ ಪಿಯು ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಕುಂದಾಪುರ ಕನ್ನಡ ಭಾಷಿಕ ಪ್ರದೇಶದ ವಿದ್ಯಾರ್ಥಿಗಳಿಗಾಗಿ ನಡೆದ ಸಾಂಸ್ಕೃತಿಕ ಮತ್ತು ಚಿತ್ರಕಲಾ ಸ್ಪರ್ಧೆಗಳ ‘ವಾಲ್ಬೆಲ್ಲ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಐಪಿಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ತಾಯಿಯ ಸನ್ನಿಧಿಗೆ ಬಂದು ಪ್ರಾರ್ಥಿಸಿದ್ದನ್ನು ಸ್ಮರಿಸಿದರು. ಬಳಿಕ ತಮ್ಮ ಮೊದಲ ಸೇವೆಯನ್ನು ಕುಂದಾಪುರ ಉಪವಿಭಾಗದ ಡಿವೈಎಸ್ಪಿಯಾಗಿ ಆರಂಭಿಸಿದ್ದು, ಇಂದು ಉಡುಪಿ ಜಿಲ್ಲೆಯ ಎಸ್‌ಪಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕುದುರೆಮುಖ ವನ್ಯ ಜೀವಿ ವಿಭಾಗದ ಐ.ಎಫ್.ಎಸ್, ಉಪ- ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಿವರಾಮ್ ಎಂ. ಬಾಬು ಅವರು ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ತರಬೇತಿಯು ಬಹಳ ಬೇಡಿಕೆಯಿರುವ ಕ್ಷೇತ್ರವಾಗಿರುವುದರಿಂದ ಆಸಕ್ತಿಯನ್ನು ಹೊಂದಿ ತರಬೇತಿಯಲ್ಲಿ ಪಾಲ್ಗೊಳ್ಳಿ ಎಂದರು. ಇಂತಹ ಅವಕಾಶಗಳನ್ನು ಎಂದಿಗೂ ವ್ಯರ್ಥ ಮಾಡದೇ, ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯವನ್ನು ಕಲಿತು, ಪಕ್ವತೆ ಪಡೆದುಕೊಳ್ಳುವುದು ಬಹಳ ಮುಖ್ಯ. ನಾವು ಅರಸಿಕೊಂಡು ಹೋಗುವ ಉದ್ಯೋಗ ಕೈಗೆ ಸಿಗದಿದ್ದರೂ ನಮ್ಮಲ್ಲಿರುವ ಕೌಶಲ್ಯದಿಂದ ಬದುಕು ಕಟ್ಟಿಕೊಳ್ಳಬಹುದು. ಹಾಗಾಗಿ ಕೌಶಲ್ಯದಿಂದ ಬದುಕು ಹಸನಾಗುವುದು ಖಂಡಿತ. ಈ ನಿಟ್ಟಿನಲ್ಲಿ ಒಂದು ತಿಂಗಳು ತಮ್ಮ ಇತರೆ ಕೆಲಸಗಳನ್ನು ಬದಿಗಿರಿಸಿ, ಸಂಸ್ಥೆಯು ನೀಡುವ ತರಬೇತಿಯನ್ನು ಉತ್ತಮ ರೀತಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ವಿಶ್ಚ ಕುಂದಾಪ್ರ ದಿನದ ಅಂಗವಾಗಿ ಆಸಾಡಿ ಒಡ್ರ್ ಕಾರ್ಯಕ್ರಮ ಇದೇ ಬರುವ ಅಗಸ್ಟ್ 9ರ ಭಾನುವಾರ ಮಣೂರು ರಾಜಲಕ್ಷ್ಮೀ ಸಭಾಂಗಣದಲ್ಲಿ ಜರಗಲಿಕ್ಕಿದ್ದು ಇದರ ಪೋಸ್ಟರ್ ಅನ್ನು ಸೋಮವಾರ ಕೋಟದ ಪಂಚವರ್ಣದ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಕುಂದಾಪ್ರ ಭಾಷೆ ಬದುಕಿನ ವಿಚಾರವನ್ನು ಮುಂದಿನ ತಲೆಮಾರಿಗೆ ಈ ಆಸಾಡಿ ಒಡ್ರ್ ಮೂಲಕ ಸಹಕಾರಿಯಾಗಲಿದೆ.ನಮ್ಮ ಕುಂದಾಪ್ರ ಭಾಷೆ ಮತ್ತು ಬದ್ಕ್ ತನ್ನದೆ ಆದ ವಿಶಿಷ್ಟತೆಯನ್ನು ವಿಶ್ವಮಟ್ಟದಲ್ಲಿ ಪಸರಿಸಿಕೊಂಡಿದೆ.ಪಂಚವರ್ಣ ಸಂಘಟನೆಯ ಈ ಗ್ರಾಮೀಣ ಹಬ್ಬವನ್ನು ಮನೆ ಮನಮುಟ್ಟುವಂತೆ ಆಯೋಜಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು. ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ ಟೆಕ್ನೋ ಡೆಂಟಲ್ ಲ್ಯಾಬ್ ಮುಖ್ಯಸ್ಥೆ ಭಾರತಿ ಪ್ರವೀಣ್ ಪೂಜಾರಿ ಸಾಸ್ತಾನ, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಮಾಜಿ ಅಧ್ಯಕ್ಷೆ ಲೀಲಾವತಿ ಗಂಗಾಧರ್, ಸಾಮಾಜಿಕ ಕಾರ್ಯಕರ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2026-27ರ ಸ್ಪರ್ಧೆಗಳ ಅಂಗವಾಗಿ ದಿನಾಂಕ ಸೋಮವಾರ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಲಯ ಮಟ್ಟದ ’ಸಮತ್ವ’ – ಕರಾಟೆ ಮತ್ತು ಯೋಗ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸ್ಪರ್ಧೆಗಳನ್ನು ಕಿರಣ ಕುಂದಾಪುರ ಉದ್ಘಾಟಿಸಿ, ಮಾತನಾಡಿ, ಶಾಲೆಯ ಪಠ್ಯದ ಜೊತೆಗೆ ಇಂತಹ ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಿದರಷ್ಟೇ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ. ಭಾಗವಹಿಸಿ ಸರ್ವವಿಧದ ಸಾಮರ್ಥ್ಯ ಬೆಳೆಸಿಕೊಳ್ಳುವುದು ಜೀವನಕ್ಕೆ ಅತ್ಯಗತ್ಯ. ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ, ಯೋಗ ಅಧ್ಯಾಪಕರು ಮತ್ತು ಅಂತಾರಾಷ್ಟ್ರೀಯ ತರಬೇತಿದಾರರಾದ ಕೆ. ನರೇಂದ್ರ ಕಾಮತ್ ಸ್ಪರ್ಧಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸ್ಪರ್ಧಾತ್ಮಕವಾದ ಈ ಜಗತ್ತಿನಲ್ಲಿ ಯೋಗವೂ ಸ್ಪರ್ಧೆಯ ವಿಷಯವಾಗಿ ಬಂದು ವಿದ್ಯಾರ್ಥಿಗಳನ್ನು ಯೋಗಾಭ್ಯಾಸದತ್ತ ಚಿತ್ತೈಸುವಂತೆ ಮಾಡಿರುವುದು ಸಂತಸದ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಭಾರತೀಯ ಪರಂಪರೆಯಲ್ಲಿ ಯೋಗವು ವಿಶಿಷ್ಟಸ್ಥಾನವನ್ನು ಪಡೆದುಕೊಂಡಿದೆ. ರಾಜಾಶ್ರಯದಲ್ಲೂ ಕರಾಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ಸ್ ನಡೆಸಿದ ಸಿ.ಎಂ.ಎ. ಯುಎಸ್ ಜೂನ್ 2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜಗದೀಶ್ ಮೊಗವೀರ ಹಾಗೂ ಜ್ಯೋತಿ ದಂಪತಿಯ ಪುತ್ರ ಸುಮಂತ್ ಅವರು ಸಿ.ಎಂ.ಎ. ಯುಎಸ್ ಪಾರ್ಟ್ 1 ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿ ಕಾಲೇಜಿಗೆ ಹೆಮ್ಮೆಯ ಕೀರ್ತಿಯನ್ನು ತಂದಿದ್ದಾರೆ. ಸಿಎಂಎ ಯುಎಸ್ ಪರೀಕ್ಷೆಯಲ್ಲಿ ಸಾಧನೆ ಮಾಡಿರುವುದು ವಿದ್ಯಾರ್ಥಿಯ ಪರಿಶ್ರಮ, ಶಿಸ್ತು ಹಾಗೂ ನಿರಂತರ ಅಧ್ಯಯನದ ಪ್ರತೀಕವಾಗಿದೆ. ಅವರ ಈ ಸಾಧನೆಯು ಕಾಲೇಜಿನ ಶೈಕ್ಷಣಿಕ ಪರಂಪರೆಗೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದ್ದು, ವೃತ್ತಿಪರ ಶಿಕ್ಷಣ ಕ್ಷೇತ್ರದಲ್ಲಿ ಕಾಲೇಜಿನ ಸಾಧನೆಗೆ ಹೊಸ ಮೆರುಗು ನೀಡಿದೆ. ಅಲ್ಲದೆ, ವಾಣಿಜ್ಯ ವಿಭಾಗದ ಇತರ ವಿದ್ಯಾರ್ಥಿಗಳಿಗೆ ಇದು ಸ್ಫೂರ್ತಿದಾಯಕವಾಗಿದೆ. ವಿದ್ಯಾರ್ಥಿಯ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಅಧ್ಯಕ್ಷರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ಮಂಗಳವಾರದಂದು ಉದ್ಯಮಿ ಸ್ವಪ್ನ ಸುರೇಶ್ ಪ್ರಭು ಇವರ ವತಿಯಿಂದ ದುರ್ಗಾ ಹೋಮವನ್ನು ಆಯೋಜಿಸಲಾಯಿತು. ಧಾರ್ಮಿಕ ವಿಧಿವಿಧಾನಗಳನ್ನು ವೇ.ಮೂ ಮಧುಸೂದನ್ ಬಾಯರಿ ನೆರವೆರಿಸಿದರು. ಪೂಜಾ ಕಾರ್ಯದಲ್ಲಿ ಸ್ವಪ್ನ ಸುರೇಶ್ ಪ್ರಭು ದಂಪತಿಗಳು ಭಾಗಿಯಾದರು. ಕುಟುಂಬದ ಪರವಾಗಿ ಸರೋಜನಿ ಬಾಲಕೃಷ್ಣ ಪ್ರಭು .ಸಹೋದರರಾದ ಉಮೇಶ್ ಪ್ರಭು, ವೆಂಕಟೇಶ ಪ್ರಭು, ಲತಾ ರಾಘವೇಂದ್ರ ಪೈ, ಕುಟುಂಬಿಕರಾದ ರಮೇಶ್ ಪ್ರಭು, ದೇಗುಲದ ಅಧ್ಯಕ್ಷರಾದ ಆನಂದ್ ಸಿ. ಕುಂದರ್, ಸದಸ್ಯರಾದ ಸುಧಾ ಎ. ಪೂಜಾರಿ, ಸುಬ್ರಾಯ ಜೋಗಿ, ಚಂದ್ರ ಆಚಾರ್, ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ ಕಾಂಚನ್, ಶಿವ ಪೂಜಾರಿ, ಜೀರ್ಣೋದ್ಧಾರ ಸಮಿತಿಯ ಮಾಜಿ ಸದಸ್ಯ ಭುಜಂಗ ಗುರಿಕಾರ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು. ಮಧ್ಯಾಹ್ನ ದೇವಿಗೆ ಮಹಾಪೂಜೆ, ಸಾರ್ವಜನಿಕ ಅನ್ನಪ್ರಸಾದ ವಿತರಣೆ ನಡೆಯಿತು.
