Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ರಷ್ಯಾದಕರೇಲಿಯಾ ಗಣರಾಜ್ಯದ ಪೆಟ್ರೋಜಾವೊಡ್ಸ್ಕ್‌ದಲ್ಲಿ ಸೆಪ್ಟೆಂಬರ್ 15 ರಿಂದ 17ರ ವರೆಗೆ ನಡೆಯಲಿರುವ ’ಬ್ರಿಕ್ಸ್ ರಾಷ್ಟ್ರಗಳ ಪ್ರಾದೇಶಿಕ ಸಹಕಾರದ ಮೂಲಕ ಪರಿಸರ ಮತ್ತು ಪ್ರಕೃತಿ ನಿರ್ವಹಣೆ’ಯ ಕುರಿತು ನಡೆಯಲಿರುವ ಮೂರನೇ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ. ”ಪಶ್ಚಿಮಘಟ್ಟಗಳ ಸಂರಕ್ಷಣೆ: ಜಾಗೃತಿಯಿಂದ ಸಮುದಾಯದ ಕಾರ್ಯದತ್ತ” ಕುರಿತ ವಿಶೇಷ ಅಧಿವೇಶನದಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಸಮುದಾಯಗಳು ಹಾಗೂ ಯುವಜನರ ಪಾತ್ರವನ್ನು ವಿವರಿಸಲಿದ್ದಾರೆ. ವಿಶೇಷವಾಗಿ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಆಳ್ವಾಸ್ ಶೈಕ್ಷಣಿಕ ಪ್ರತಿಷ್ಠಾನ ಕೈಗೊಂಡಿರುವ ವಿವಿಧ ಪರಿಸರ ಸಂರಕ್ಷಣಾ ಚಟುವಟಿಕೆಗಳನ್ನು ಅವರು ಸಮ್ಮೇಳನದಲ್ಲಿ ಪರಿಚಯಿಸಲಿದ್ದು, ಪರಿಸರ ಸಂರಕ್ಷಣೆ, ಕೇವಲ ಜಾಗೃತಿಗೆ ಮಾತ್ರ ಸೀಮಿತವಾಗದೆ, ಸಮುದಾಯದ ನೇತೃತ್ವದಲ್ಲಿ ಸಂರಕ್ಷಣಾ ಕಾರ್ಯಗಳು ನಡೆಯಬೇಕಾದ ಅಗತ್ಯವನ್ನು ಒತ್ತಿಹೇಳಲಿದ್ದಾರೆ. ರಷ್ಯಾದ ವಿಜ್ಞಾನ ಅಕಾಡೆಮಿಯ ಕರೇಲಿಯನ್ ಸಂಶೋಧನಾ ಕೇಂದ್ರವು ರಷ್ಯಾನ್ ಬ್ರಿಕ್ಸ್ ಸಂಶೋಧನಾ ರಾಷ್ಟ್ರೀಯ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ ಈ ಸಮ್ಮೇಳನದಲ್ಲಿ ಹವಾಮಾನ ಬದಲಾವಣೆ, ಜೀವವೈವಿಧ್ಯ ಸಂರಕ್ಷಣೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ಇದರ 9ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಕೆ. ವೆಂಕಟೇಶ್ ಕಿಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯು ವರದಿ ವರ್ಷದಲ್ಲಿ 24 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದ 74.64 ಲಕ್ಷ ಲಾಭ ಲಾಭ ಗಳಿಸಿದೆ. ಜಿಲ್ಲೆಯ ಸೌಹಾರ್ಧಗಳಲ್ಲಿ ಅತ್ಯುತ್ತಮ ಆರ್ಥಿಕ ವ್ಯವಹಾರದ ಮೂಲಕ ಪ್ರಗತಿ ಕಂಡಿದೆ ಹಾಗೂ ವರದಿ ವರ್ಷದಲ್ಲಿ ಸಂಘವು ಅಡಿಟ್ ವರ್ಗಿಕರಣದಲ್ಲಿ ಎ ಶ್ರೇಣಿ ಪಡೆದಿದೆ. ಈ ವರ್ಷದ ಲಾಭದಲ್ಲಿ ಸದಸ್ಯರಿಗೆ ಶೇ.14% ಡಿವಿಡೆಂಡ್ ನೀಡಲಾಗುವುದು ಎಂದರು. ಈ ಸಂಧರ್ಭದಲ್ಲಿ ಗೋರಕ್ಷಕರಾದ ಸಂಜೀವ ದೇವಾಡಿಗ ಅವರನ್ನು ಹಾಗೂ ಪಿ.ಯು.ಸಿ ವಿಭಾಗದಲ್ಲಿ ಸಾಧನೆಗೈದ ರಶ್ಮಿಅವರನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು. ಸಂಘದ ಎ ವರ್ಗದ ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಉಡುಪಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹೈಕೋರ್ಟ್ ಹಾಗೂ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಗಣಪತಿ ವಿಗ್ರಹ ತಯಾರಿ, ಮಾರಾಟ, ವಿಸರ್ಜನೆ ನಿಷೇಧಿಸಲಾಗಿದೆ. ಈ ರೀತಿಯ ಲೋಹ ಮಿಶ್ರಿತ, ರಾಸಾಯನಿಕ ಬಣ್ಣ ಬಳಸಿದ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜಿಸಿದರೆ ಜಲಜೀವಿಗಳಿಗೆ ಅಪಾಯದ ಜೊತೆಗೆ ಮಾನವನಿಗೆ ಕ್ಯಾನ್ಸರ್‌ನಂತಹ ಮಾರಕ ರೋಗಗಳು ಬರುವ ಸಾಧ್ಯತೆ ಇದೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್ ತಿಳಿಸಿದ್ದಾರೆ. ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಲಾದ ತಿಂಗಳ ಅಂಗಳ ಸಂವಾದ ಕಾರ್ಯಕ್ರಮದಲ್ಲಿ ಸನ್ಮತಿ ಪತ್ರಿಕೆಯ ಆಗಸ್ಟ್ ತಿಂಗಳ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಪಿಒಪಿ ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆಗೆ ಪರವಾನಗಿ ನೀಡುತ್ತಿಲ್ಲ. ಈ ಸಂಬಂಧ ನಿಷೇಧ ಆದೇಶವನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ನಗರ/ಗ್ರಾಮೀಣ ಸ್ಥಳೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ (ಐಎಂಜೆಐಎಸ್‌ಸಿ)ನ ವಾಣಿಜ್ಯ ಸಂಘದ ವತಿಯಿಂದ “ಹಣಕಾಸು ಜಾಗೃತಿ ಮತ್ತು ಮಾಹಿತಿಯುಕ್ತ ಹಣಕಾಸು ಮತ್ತು ನಿವೃತ್ತಿ ಯೋಜನೆಯನ್ನು ಉತ್ತೇಜಿಸುವುದು” ಎಂಬ ವಿಷಯದ ಕುರಿತು ವೆಬಿನಾರ್ ಆಯೋಜಿಸಲಾಗಿತ್ತು. ದ್ವಿತೀಯ ಮತ್ತು ತೃತೀಯ ಬಿ.ಕಾಂ ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಭಾಗವಹಿಸಿದ್ದರು. ಗುಜರಾತಿನ ಜಾಮ್‌ನಗರ ಜಿಲ್ಲೆಯ ಲಾಲ್‌ಪುರದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಭಾವಿಕ್ ಪಂಚಸಾರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅವರು ಹಣಕಾಸು ಸಾಕ್ಷರತೆ, ಬುದ್ಧಿವಂತ ಹೂಡಿಕೆ ಮತ್ತು ದೀರ್ಘಾವಧಿಯ ಹಣಕಾಸು ಯೋಜನೆ ಕುರಿತು ಮಾಹಿತಿ ನೀಡಿದರು. ಮ್ಯೂಚುವಲ್ ಫಂಡ್ ಹೂಡಿಕೆಗಳ ಪ್ರಯೋಜನಗಳು, ನಿಷ್ಕ್ರಿಯ ಆದಾಯ, ವ್ಯವಸ್ಥಿತ ಉಳಿತಾಯ ಮತ್ತು ಹೂಡಿಕೆ ಹಾಗೂ ನಿವೃತ್ತಿ ಯೋಜನೆಯ ಮಹತ್ವವನ್ನು ಅವರು ವಿವರಿಸಿದರು. ಅಲ್ಲದೆ, ಹಣಕಾಸು ವಂಚನೆಗಳ ಬಗ್ಗೆ ಜಾಗೃತಿ ಮೂಡಿಸಿ, ಸುರಕ್ಷಿತ ಹೂಡಿಕೆ ಪದ್ಧತಿಗಳ ಬಗ್ಗೆ ತಿಳಿಸಿದರು ಹಾಗೂ ಸೆಬಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಆರುಣ್ಯ 2026ರ ಸಮಾರೋಪ ಸಮಾರಂಭ ಕಾಲೇಜಿನಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಜಯಸೂರ್ಯ ಪೂಜಾರಿ ಮಾತನಾಡಿ, ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಹಂತವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಯಾವುದಾದರೂ ಒಂದು ವಿಶಿಷ್ಟ ಪ್ರತಿಭೆ, ಸಾಮರ್ಥ್ಯ ಮತ್ತು ಸೃಜನಶೀಲತೆ ಅಡಗಿರುತ್ತದೆ. ಆ ಪ್ರತಿಭೆ ಗುರುತಿಸಿ ಬೆಳೆಸಲು ಸೂಕ್ತವಾದ ಅವಕಾಶ ದೊರೆತಾಗ ಮಾತ್ರ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವನ್ನು ಬೆಳೆಸಿಕೊಂಡು, ಭವಿಷ್ಯದಲ್ಲಿ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಬಹುದು ಎಂದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಯಶಸ್ಸಾಗಿ ಪರಿವರ್ತಿಸಲು ಅವಕಾಶ, ಮಾರ್ಗದರ್ಶನ ಮತ್ತು ಪರಿಶ್ರಮ ಅಗತ್ಯ. ಆದ್ದರಿಂದ ಇಂದಿನ ಕಾರ್ಯಕ್ರಮ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾತುಗಳು ಸಂಸ್ಕ್ರತ ಭೂಯಿಷ್ಠವಾಗಿದ್ದರೆ ಸಭ್ಯ. ಯಾವುದೇ ಭಾಷೆಯ ಮೇಲೆ ಹಿಡಿತ ಬರಬೇಕಾದರೆ ಮೂಲಬೇರು ಸರಿಯಾಗಿರಬೇಕು. ಅಮೂಲ್ಯವಾದ ಜ್ಞಾನದಿಂದ ಪ್ರಯತ್ನಶಾಲಿಗಳಾಗಿ ಜಗತ್ತಿನ ಹಲವು ಸಂಗತಿಗಳನ್ನು ಪಡೆದುಕೊಳ್ಳಬಹುದು. ಮಾತೃಸ್ಥಾನದಲ್ಲಿ ಕಂಗೊಳಿಸುವ ಸಂಸ್ಕ್ರತದ ಅಭ್ಯಾಸವು ಪರಿಪೂರ್ಣ ಜ್ಞಾನ ಸಂಗ್ರಹಕ್ಕೆ ತುಂಬ ಸಹಕಾರಿಯಾಗುತ್ತದೆ  ಎಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಸಂಸ್ಕ್ರತ ಉಪನ್ಯಾಸಕರಾದ ಬಾಲಕೃಷ್ಣ ನಕ್ಷತ್ರಿ ಕರೆ ನೀಡಿದರು. ಅವರು ಇಲ್ಲಿನ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಸಂಸ್ಕ್ರತೋತ್ಸವ ‘ಶ್ರಾವಣಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ ಶೆಟ್ಟಿ ಅವರು ಮಾತನಾಡಿ, ‘ಉನ್ನತ ಬುದ್ಧಿಮತ್ತೆಯ ವಿದ್ಯಾರ್ಥಿಗಳು ಆಯ್ದುಕೊಳ್ಳುವ ಭಾಷೆಯೆಂದಿದ್ದ ಸಂಸ್ಕ್ರತವು ಅಭಿವ್ಯಕ್ತಿಯಲ್ಲಿ ಸರಳೀಕರಣಗೊಂಡು ಹೆಚ್ಚೆಚ್ಚು ವಿದ್ಯಾರ್ಥಿಗಳ ಆಯ್ಕೆಯ ವಿಷಯವಾಗುತ್ತಿರುವುದು ಸಂತಸ ‘ ಎಂದು ತಿಳಿಸಿದರು. ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಕ್ರತದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿನಿ ಅಕ್ಷಯಾ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡ ಮಾಡಲ್ಪಟ್ಟ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬಿಇಓ ಕಚೇರಿ ಅಧ್ಯಕ್ಷರಾದ ಮನೋರಾಜ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೈಂದೂರಿನ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೈಂದೂರು ತಾಲೂಕು ಗ್ಯಾರೆಂಟಿ ಯೋಜನೆಯ ಅಧ್ಯಕ್ಷರಾದ ಮೋಹನ್ ಪೂಜಾರಿ, ಪಟ್ಟಣ ಪಂಚಾಯಿತಿ ಬೈಂದೂರಿನ ಆರೋಗ್ಯ ನಿರೀಕ್ಷಕರಾದ ಸಂತೋಷ್, ಕಂಬದ ಕೋಣೆ ಸಂಯೋಜಕ ವೃತ್ತದ ECO ಸತ್ಯನಾ ಕೊಡೇರಿ, ಬೈಂದೂರು ಸಂಯೋಜಕ ಕೇಂದ್ರದ Eco ರಾಜೇಶ್, ಬೈಂದೂರು ಬಿ ಆರ್ ಪಿ ಮಂಜುನಾಥ ದೇವಾಡಿಗ, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾನ್ಯಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶ್ರವಣೋಪಕರಣ, ವೀಲ್ ಚೇರ್, ಎಂ ಆರ್ ಕಿಟ್ ಮುಂತಾದ ಸಾಧನ ಸಲಕರಣೆಗಳನ್ನುವಿತರಿಸಿದರು. ಸಿಆರ್‌ಪಿಗಳಾದ  ಗಣೇಶ್ ಪೂಜಾರಿ ರಾಮನಾಥ ಮೇಸ್ತ ಬಿಐಈಆರ್ ಟಿ ನಾಗೇಶ ಸಹಕರಿಸಿದರು. ಬಿಐಇಆರ್‌ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಧರ್ಮಶಾಸ್ತ್ರದಲ್ಲಿ ನೀರಿನ ಶುದ್ಧತೆಗೆ ವಿಶೇಷ ಒತ್ತನ್ನು ನೀಡಲಾಗಿದ್ದು, ನೀರಿಗೆ ಉಗುಳ ಬಾರದು ಎಂದು ಶಾಸ್ತ್ರ ಸೂಚಿಸುತ್ತದೆ. ಗಂಗೆಯಲ್ಲಿ ಆಚಮನ ಮಾಡಬಾರದು ಎಂಬ ನಿಯಮವೂ ಇದೆ. ನೀರನ್ನು ಮಲಿನ ಮಾಡುವವರಿಗೆ ನರಕಗಳನ್ನು ಹೇಳಲಾಗಿದೆ. ಧರ್ಮಶಾಸ್ತ್ರದ ಪಾಲನೆಯನ್ನು ದೇಶವು ಬಿಟ್ಟಿರುವುದರಿಂದ ದೇಶದ ಹಾಗೂ ನೀರಿನ ಪರಿಸ್ಥಿತಿ ದುಃಸ್ಥಿತಿಯನ್ನು ತಲುಪಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ 11.09.2026 ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಭರತನು ‘ನಾನು ರಾಮನಿಗೆ ವಂಚನೆ ಮಾಡಿದ್ದರೆ ನೀರನ್ನು ಮಲಿನ ಮಾಡಿದರೆ ಸಿಗುವ ನರಕವು ಸಿಗಲಿ’ ಎಂದು ರಾಮಾಯಣದಲ್ಲಿ ಶಪಥವನ್ನು ಮಾಡುತ್ತಾನೆ. ಇದು ಜಲ ಮೂಲಗಳ ಕುರಿತಾಗಿ ನಮ್ಮ ಪೂರ್ವಜರಿಗಿದ್ದ ಗೌರವವನ್ನು ಸೂಚಿಸುತ್ತದೆ ಎಂದು ಪ್ರಾಚೀನ ಭಾರತದಲ್ಲಿ ನೀರಿಗೆ ನೀಡಿದ್ದ ಮಹತ್ವವನ್ನು ವಿವರಿಸಿದರು. ಆಯುರ್ವೇದದಲ್ಲಿ ಚಂದ್ರಕಾಂತ ಮಣಿಯ ನೀರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳ ಸಮಾರೋಪವು ನಡೆಯಿತು. ಸಮಾರೋಪ ಸಮಾರಂಭದ ಘನಾಧ್ಯಕ್ಷರಾದ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಉಪಾಧ್ಯಕ್ಷರಾದ ವೇದಮೂರ್ತಿ ಹೆಚ್. ಬಾಲಚಂದ್ರ ಭಟ್ಟರು ದೇವಾಲಯದ ಸಹಯೋಗದ ಕಾರ್ಯಕ್ರಮವನ್ನು ಮಾತನಾಡಿ, ಸಿದ್ಧಿವಿನಾಯಕನ ತಾಣವಾದ ಇಲ್ಲಿ ಬಂದು ಭಾಗವಹಿಸಿ ಸ್ಪರ್ಧೆಗಳಲ್ಲಿ ನಿಮ್ಮ ಪ್ರಯತ್ನವನ್ನು ನಡೆಸಿರುವ ಸರ್ವರೂ ಸಿದ್ಧಿಯನ್ನು ಪಡೆವಂತವರಾಗಲಿ ಎಂದು ಹಾರೈಸಿದರು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣದ ಪ್ರಾಧ್ಯಾಪಕರಾದ ಶ್ರೀ ಪಾಂಡುರಂಗ ರವರು ಗೆದ್ದವರಿಗೆ ಅಭಿನಂದಿಸಿ ಮಾತಾಡುತ್ತಾ ಸೋತವರು ಕುಗ್ಗಲೇ ಬಾರದು. ಇರುವವರಲ್ಲಿ ಮೂವರನ್ನು ಆರಿಸುವಾಗ ನಿಮ್ಮಲ್ಲಿ ಕೆಲವು ಕೊರತೆಗಳನ್ನು ಕಂಡಿರಬಹುದು. ಅವುಗಳನ್ನು ತಿದ್ದಿ ಸಾಧಿಸಿ ಮುಂದಿನ ವರ್ಷಗಳಲ್ಲಿ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು. ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಪ್ಟೆಂಬರ್ 16ರಿಂದ 18ರವರೆಗೆ ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯುವ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ನ 22 ಕ್ರೀಡಾಪಟುಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.   ಭಾಗವಹಿಸುತ್ತಿರುವ ಕ್ರೀಡಾಪಟುಗಳ ಹೆಸರು :ಬಾಲಕರ ವಿಭಾಗದಲ್ಲಿ:ದಯಾನಂದ – (400ಮೀ), ನೋವಲ್ ಆರ್ ಪಿ- (ಉದ್ದ ಜಿಗಿತ), ನಿತಿನ್ ಎಲ್‌ಜಿ – (ಚಕ್ರ ಎಸೆತ), ರೂಪೇಶ್ – (ಪೋಲೋ ವಾಲ್ಟ್), ಅಬ್ದುಲ್ ರಜಕ್ ಶಿಗ್ಗಾನ – (ಹ್ಯಾಮರ್ ತ್ರೋ), ಸಾಹಿಲ್ – (100 ಮೀ), ಸಮರ್ಥ್ ಸಂಜೀವ್ ಕುಮಾರ್ – (1000ಮೀ), ಆಕಾಶ್ ಹುಕ್ಕೇರಿ – (110ಮೀ ಹರ್ಡಲ್ಸ್), ಜಸ್ವೀನ್ ಥೋಮಸ್ – (ಎತ್ತರ ಜಿಗಿತ), ದಿಶಾಂತ್– (ಉದ್ದ ಜಿಗಿತ), ಹೆಚ್ ಮೈಲಾರಿ – (ಚಕ್ರ ಎಸೆತ), ಆರಂಭಮ್ ರಾಜು – (60ಮೀ), (80ಮೀ ಹರ್ಡಲ್ಸ್), ಕೌಶಿಕ್ ಪಿ ಶೆಟ್ಟಿಗಾರ್ – (80 ಮೀ ಹರ್ಡಲ್ಸ್), ಹರ್ಷದ್ ಗೌಡ – (ಉದ್ದ ಜಿಗಿತ), ಮೋಕ್ಷಿತ್ ಆರ್ ಗೌಡ…

Read More