ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂರು ದಿನಗಳ ಕಾಲ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಇಲ್ಲಿನ ಬೋಧಕರುಗಳಾದ ಅಂಜಿದ ಪರ್ವೀನ್, ಡಾ. ಚೈತ್ರ ಎಚ್.ಸಿ ಮತ್ತು ದೀಪಾ ಓ. ಇವರುಗಳು ವಂಡ್ಸೆಯ ನಿರಾಮಯ ಸೊಸೈಟಿಯ ಮೂಲಕ ಅನುಷ್ಠಾನಗೊಳ್ಳುತ್ತಿರುವ ಸಮುದಾಯ ಉಪಶಮನ ಆರೈಕೆ ಕೇಂದ್ರವನ್ನು ಅಧ್ಯಯನ ಮಾಡಿ, ಕ್ಷೇತ್ರಕ್ಕೆ ಭೇಟಿ ನಡೆಸಿ, ಇದೇ ರೀತಿ ರಾಜ್ಯದ ಬೇರೆ ಗ್ರಾಮ ಪಂಚಾಯತ್‌ಗಳಲ್ಲಿ ಅನುಷ್ಠಾನ ಮಾಡಲು ಸರಕಾರ ಯೋಚಿಸಿರುವುದರಿಂದ ಸರಕಾರಕ್ಕೆ ವರದಿ ನೀಡಲು ನಿರಾಮಯ ಸೊಸೈಟಿಗೆ ಭೇಟಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ತು ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆಜಿ ಅವರೊಂದಿಗೂ ಸಹ ಈ ಬಗ್ಗೆ ಚರ್ಚಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದರಿಂದ ಒಂದಿಷ್ಟು ಜೀವ ಉಳಿಸಲು ಸಾಧ್ಯವಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ಮಾಂಗಲ್ಯ ಮಂದಿರ ಕೋಟದಲ್ಲಿ ಮೊಗವೀರ ಯುವ ಸಂಘಟನೆ ಕೋಟ ಘಟಕ ಹಾಗೂ ಮಹಿಳಾ ಸಂಘಟನೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ರಕ್ತನಿಧಿ ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ ಮತ್ತು ಜಿಲ್ಲಾಡಳಿತ ಉಡುಪಿ ಇವರುಗಳ ಜಂಟಿ ಆಶ್ರಯದಲ್ಲಿ ವಿವಿಧ ಸ್ಥಳೀಯ ಸಂಘಟನೆಗಳಾದ ಬಾರಿಕೆರೆ ಯುವಕ ಮಂಡಲ ಕೋಟ, ಅರಮನೆ ವಿಜಯ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಪಡುಕರೆ, ಬಾಳೆಬೆಟ್ಟು ಫ್ರೆಂಡ್ಸ್, ಹರ್ತಟ್ಟು ಯುವಕ ಮಂಡಲ ಕೋಟ ಹಾಗೂ ವಿನಾಯಕ ಫ್ರೆಂಡ್ಸ್ ಕೋಟತಟ್ಟು ಪಡುಕರೆ ಇವರುಗಳ ಸಹಯೋಗದೊಂದಿಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮೊಗವೀರ ಯುವ ಸಂಘಟನೆ ರಕ್ತದಾನದಂತ ಸಾಮಾಜಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ ಇಲ್ಲಿನ ವಿದ್ಯಾರ್ಥಿ ಸರಕಾರದ ಉದ್ಘಾಟನಾ ಸಮಾರಂಭವು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಕುಂದಾಪುರದ ಖ್ಯಾತ ವಕೀಲರು ಮತ್ತು ನೋಟರಿ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ ದೀಪ ಬೆಳಗಿಸುದರ ಮೂಲಕ ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಸರಕಾರದ ಚುನಾವಣೆಗಳು ಅತ್ಯಂತ ಅವಶ್ಯಕ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಚುನಾವಣೆಯಲ್ಲಿ ಅಭಾಗವಹಿಸುದರಿಂದ ಮುಂದಿನ ದಿನಗಳಲ್ಲಿ ಪ್ರಜ್ಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು. ಮುಖ್ಯೋಪಾಧ್ಯಾಯರಾದ ಬೇಬಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದುರ್ಗಾಪರಮೇಶ್ವರಿ ದೇವಸ್ಥಾನ ಸೌಕೂರ ಇಲ್ಲಿನ ವ್ಯವಸ್ಥಾನ ಮಂಡಳಿ ಸದಸ್ಯರಾದ ಜಾಡ್ಕಟು ಅಶೋಕ ಶೆಟ್ಟಿ ನೂತನ ಮಂತ್ರಿ ಮಂಡಲದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮನೋಹರ ದೇವಳದ ವತಿಯಿದ ಕೊಡಮಾಡಿದ ಪಠ್ಯ ಪುಸ್ತಕ ಮತ್ತು ನೋಟ್ಸ್ ಪುಸ್ತಕ ವಿತರಿಸಿದರು. ಶಿಕ್ಷಕಿಯರಾದ ಗೀತಾ ಹೆಚ್. ಕಾಂತಿ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಪ್ರಮೋದಾ ಶೆಟ್ಟಿ ವಿವಿಧ ಚಟುವಟಿಕೆಗಳನ್ನು ನಿರ್ವಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದ ಮಣೂರು ಮನೆ ಪ್ರದೇಶದಲ್ಲಿರುವ ಸರ್ಕಾರಿ ಹಾಡಿಯಲ್ಲಿ ಕೋಳಿ ಅಂಕ ಜುಗಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಿರಂಜನ್ ಗೌಡ ಬಿ.ಎಸ್. ಅವರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದ ಘಟನೆ ರವಿವಾರ ನಡೆದಿದೆ. ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ದಾಳಿ ನಡೆಸಿದ ಪೊಲೀಸರು, ಸ್ಥಳದಲ್ಲೇ ಕೋಳಿ ಅಂಕ ಜುಗಾರಿ ಆಡುತ್ತಿದ್ದ 1. ತಲ್ಲೂರಿನ ಮಂಜುನಾಥ್ (45) 2. ಮಣೂರು ಗ್ರಾಮದ ಸುಕ್ಷಯ್ (29) 3. ಬೇಳೂರು ಗ್ರಾಮದ ಶರಣ್ (27) 4. ಕೊರ್ಗಿ ಗ್ರಾಮದ ರಮೇಶ್ (32) 5. ಕೆದೂರು ಗ್ರಾಮದ ರಜತ್ (27) ಎಂಬುವರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಆರೋಪಿಗಳಿಂದ 1,600 ನಗದು, 2 ಜೀವಂತ ಕೋಳಿ ಹುಂಜಗಳು, ಒಂದು ಕೋಳಿ ಬಾಳು, ಕೋಳಿಗಳ ಕಾಲಿಗೆ ಕತ್ತಿ ಕಟ್ಟಲು ಬಳಸಿದ ಹಗ್ಗ, ಎರಡು ಬೀಣಿ ಕೈಚೀಲಗಳು ಸೇರಿದಂತೆ ಹೊಂಡಾ ಶೈನ್ ಬೈಕ್, ಕೆಂಪು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉತ್ತಮ ಕೆಲಸಗಳನ್ನು ಪ್ರೋತ್ಸಾಹಿಸುವ ಮನೋಭಾವ ನಮ್ಮಲ್ಲಿ ಹೆಚ್ಚಾಗಬೇಕು. ಆ ಮೂಲಕ ಒಂದು ಸಮಾಜದ ಅಭಿವೃದ್ಧಿಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಹೇಳಿದರು. ಅವರು ಇಲ್ಲಿನ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಿಲ್ಲವರ ಹಿತರಕ್ಷಣಾ ವೇದಿಕೆಯ ಆರನೇ ವರ್ಷದ ಬಿಲ್ಲವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿ ರಘುನಾಥ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಉಪಾಧ್ಯಕ್ಷೆ ಮಮತ ಪೂಜಾರಿ ಶುಭಸಂಶನೆ ಗೈದರು. ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಮುತ್ತ ಕುಂದರ್ ಹಾಗೂ ಮತ್ಸ್ಯ ಉದ್ಯಮಿಗಳಾದ ಲಕ್ಷ್ಮಣ ಬಿಲ್ಲವ ಮತ್ತು ಸಂಜೀವ ಬಿಲ್ಲವ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ 70ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಸಾಕ್ಷಿ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಪರಿಸರ ಕಾಳಜಿ ಕಾರ್ಯಕ್ರಮಕ್ಕೆ ಹಸಿರು ರಥವನ್ನು ಸಾಮಾಜಿಕ ಮುಖಂಡ ರಷಿರಾಜ್ ಸಾಸ್ತಾನ ತಾಯಿ ರತ್ನಾ ಜೆ. ರಾಜ್ ಮೂಲಕ ಕೊಡುಗೆಯಾಗಿ ನೀಡಿದ್ದು ಇದನ್ನು ಶನಿವಾರ ಕೀ ಅನ್ನು ಪಂಚವರ್ಣ ಸಂಘಟನೆ ಗೌರವ ಸಲಹೆಗಾರ ಆನಂದ್ ಸಿ. ಕುಂದರ್ ಅವರಿಗೆ ಹಸ್ತಾಂತರಿಸುವ ಮೂಲಕ ಸಂಘಟನೆಗೆ ಬಲ ತುಂಬಿದರು. ಈ ಸಂದರ್ಭದಲ್ಲಿ ಮಾತನಾಡಿದ ರಷಿರಾಜ್ ಸಾಸ್ತಾನ ಪರಿಸರಕ್ಕಾಗಿ ತಮ್ಮನ್ನು ಸಮರ್ಪಣಾ ಮನೋಭಾವದಿಂದ ಸಮರ್ಪಿಸಿಕೊಂಡ ಪಂಚವರ್ಣ ಸಂಘಟನೆ ಪ್ರಕೃತಿ ಪ್ರೇಮದ ಕಾಳಜಿ ಎಲ್ಲಾ ಕೊಡುಗೆಗಿಂತ ಮಿಗಿಲಾದದ್ದು ಇನ್ನಷ್ಟು ಸಮಾಜಮುಖಿ ಕಾರ್ಯಗಳು ನಡೆಯಲು ನಮ್ಮೆಲ್ಲರ ಸಹಕಾರ ಇರುತ್ತದೆ ಎಂದರು. ಈ ಸಂದರ್ಭದಲ್ಲಿ ಸಾಹಿತಿ ನರೇಂದ್ರ ಕುಮಾರ್ ಕೋಟ, ಸ್ನೇಹಕೂಟದ ವಿಜಯಲಕ್ಷ್ಮೀ ಭಟ್, ಪಂಚವರ್ಣ ಸಂಘಟನೆ ಪ್ರಮುಖರಾದ ಶೇವಧಿ ಸುರೇಶ್ ಗಾಣಿಗ, ಮನೋಹರ್ ಪೂಜಾರಿ, ಲಲಿತಾ ಪೂಜಾರಿ, ಸಂಚಾಲಕ ಅಮೃತ್ ಜೋಗಿ, ಅಜಿತ್ ಆಚಾರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಗ್ರಾಮದ ಶ್ರೀ ಕಾಳಿ ಭಜನಾ ಮಂಡಳಿಯ ಹತ್ತನೇ ತರಗತಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿವೇದಿತಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ದಿನಕರ್ ಆರ್ ಶೆಟ್ಟಿ ಹಾಗೂ ಶ್ರೀ ಕಾಳಿ ಭಜನಾ ಮಂಡಳಿ ಅವರ ಜಂಟಿ ಸಹಯೋಗದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕ್ರಮವನ್ನು ವಿದ್ವಾನ್ ಮಾಧವ ಅಡಿಗ ಅವರುಉದ್ಘಾಟನೆ ಮಾಡಿದರು. ಅಧ್ಯಕ್ಷತೆಯನ್ನು ದಿನಕರ್ ಆರ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಧಾಕೃಷ್ಣ ಶೆಟ್ಟಿ, ಶಿವರಾಮ ಪೂಜಾರಿ, ಬೇಬಿ ಶ್ರೀಕಾಂತ್ ಹಾಗೂ ಚಂದ್ರ ಪೂಜಾರಿ ಉಪಸ್ಥಿತರಿದ್ದರು. ಕೆ. ವಿಕಾಸ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವೈದ್ಯಕೀಯ ವೃತ್ತಿಯಲ್ಲಿ ರೋಗಿಯ ಸುರಕ್ಷತೆ, ನೈತಿಕತೆ ಹಾಗೂ ಸೇವಾ ಮನೋಭಾವವೇ ಅತ್ಯಂತ ಪ್ರಮುಖ ಮೌಲ್ಯಗಳಾಗಿದ್ದು, ವೈದ್ಯ-ರೋಗಿ ಸಂಬಂಧವು ಪರಸ್ಪರ ನಂಬಿಕೆ ಮತ್ತು ಜವಾಬ್ದಾರಿಯ ಆಧಾರದ ಮೇಲೆ ನಿರ್ಮಾಣವಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.ಅವರು ಮೂಡುಬಿದಿರೆಯ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಮೂಡುಬಿದಿರೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವೈದ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವೈದ್ಯ ವೃತ್ತಿಯು ಕೇವಲ ಉದ್ಯೋಗವಲ್ಲ, ಅದು ಸಮಾಜದ ಸೇವೆಯ ಪವಿತ್ರ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಸಿಗುವಷ್ಟು ಆತ್ಮತೃಪ್ತಿ ಮತ್ತು ಗೌರವ ಬೇರೆ ಯಾವುದೇ ವೃತ್ತಿಯಲ್ಲಿ ಸಿಗುವುದಿಲ್ಲ. ಕಾಲಾನಂತರದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ವೈದ್ಯರು ಹೊಸ ತಂತ್ರಜ್ಞಾನ ಹಾಗೂ ಜ್ಞಾನಕ್ಕೆ ಹೊಂದಿಕೊಳ್ಳಬೇಕು ಎಂದು ಅವರು ಹೇಳಿದರು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಹಲವು ಅವಕಾಶಗಳಿದ್ದು, ಮೂಡುಬಿದಿರೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒಂದು ಭಾಷೆ ಮತ್ತು ಬದುಕು ಊರುಕೇರಿಗಳನ್ನು ಗುರುತಿಸಬಲ್ಲದು. ಅದೇ ರೀತಿ ಕುಂದಾಪ್ರ ಜನತೆಯನ್ನು ಭಾಷೆಯ ಜೊತೆ ಬದುಕಿನ ಪರಿ ವಿಶ್ವದೆಲ್ಲೆಡೆ ಗುರುತಿಸಿಕೊಂಡಿದೆ ಎಂದು ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಶನಿವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಇದೇ ಬರುವ ಅಗಸ್ಟ 9ರಂದು ಮಣೂರು ಪರಿಸರದಲ್ಲಿ ನಡೆಯಲಿರುವ ಆಸಾಡಿ ಒಡ್ರ್ ಊರ್ ಕೇರಿ ಬದ್ಕಿನ ಹಬ್ಬ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪಂಚವರ್ಣ ಸಂಘಟನೆ ಸಾಮಾಜಿಕ, ಪರಿಸರದ ಜೊತೆಗೆ ಕುಂದಾಪ್ರ ಕನ್ನಡದ ಬಗೆಗಿನ ಕಾರ್ಯಕ್ರಮ ಶ್ಲಾಘನೀಯ ಎಂದರು. ಸಾಹಿತಿ ಶಿಕ್ಷಕ ನರೇಂದ್ರ ಕುಮಾರ್ ಕೋಟ ಆಸಾಡಿ ಒಡ್ರ್ ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು. ಮುಖ್ಯ ಅಭ್ಯಾಗತರಾಗಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕಾರ್ಯದರ್ಶಿ ರಷಿರಾಜ್ ಸಾಸ್ತಾನ,ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ,ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಹೇರಂಜಾಲು ಗ್ರಾಮದ ಯುವಕನೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಮೂರಾರ್ಜಿ ದೇಸಾಯಿ ವಸತಿ ಶಾಲೆ ಜು.5 ರಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಜು.12 ರಂದು ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕ ಹೇರಂಜಾಲು ಗ್ರಾಮದ ಹರೀಶ ದೇವಾಡಿಗ (32) ಎಂದು ಗುರುತಿಸಲಾಗಿದೆ. ಅವರು ರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು. ಅವರನ್ನು ಚಿಕಿತ್ಸೆಯ ಬಗ್ಗೆ ಪಕ್ಕದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರಗೆ ಒಳರೋಗಿಯಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜು.12ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
