ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಂದ, ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 204, ಒಂದನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮದಲ್ಲಿ ಡಿ.23, ಸಂಜೆ 5-30ಕ್ಕೆ ವೀರ ಸಾವರ್ಕರ್ ಪ್ರೇಮಿಗಳ ಬಳಗದವರು “ನಿಜ ಮಹಾತ್ಮ ಅಂಬೇಡ್ಕರ್ ” ಶೀರ್ಷಿಕೆಯಡಿ ಮುಚ್ಚಿಟ್ಟ ಸತ್ಯವನ್ನು ತಿಳಿಯೋಣ ಇತರರಿಗೆ ತಿಳಿಸೋಣ ಎನ್ನುವ ಉಪ ಶೀರ್ಷಿಕೆ ನೀಡಿ ಆಯೋಜನೆ ಮಾಡಿರುವ ಅಂಬೇಡ್ಕರ್ ಕುರಿತಾದ ನಾಟಕದಲ್ಲಿ ಅಂಬೇಡ್ಕರ್ ಬಗೆಗೆ ಕಪ್ಪು ಕಲ್ಪಿತ ವಿಷಯಗಳನ್ನು ಪ್ರಸ್ತಾವನೆ ಮಾಡಿ ಸಮಾಜದಲ್ಲಿ ಗೊಂದಲ ಉಂಟು ಮಾಡುವ ಉದ್ದೇಶ ಇರುವುದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಿ. ಉಡುಪಿ ಜಿಲ್ಲಾ ಸಮಿತಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿಯವರಿಗೆ ಆಕ್ಷೇಪಣಾ ಪತ್ರ ನೀಡಿದ್ದಾರೆ. ಈ ಸಂದರ್ಭದಲ್ಲಿ ಯಥಾಪ್ರತಿಗಳನ್ನು ಕುಂದಾಪುರ ಡಿವೈಎಸ್ಪಿ ಮೂಲಕ ಉಡುಪಿ ಎಸ್.ಪಿ. ಅವರಿಗೆ, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕುಂದಾಪುರ ಅವರಿಗೆ, ಕುಂದಾಪುರ ತಹಶೀಲ್ದಾರ್ ಅವರಿಗೆ ಹಾಗೂ ಗಂಗೊಳ್ಳಿ ಗ್ರಾಮ ಪಂಚಾಯತ್ ಪಿಡಿಓ ಅವರಿಗೆ ನೀಡಿದರು. ಈ ವೇಳೆ ಭೀಮಘರ್ಜನೆ ಉಡುಪಿ ಜಿಲ್ಲಾ ಸಂಚಾಲಕರಾದ ಚಂದ್ರ ಅಲ್ತಾರ್, ಸಂಘಟನಾ ಸಂಚಾಲಕರುಗಳಾದ ರಾಘು ಶಿರೂರು, ಶಶಿ ಬಳ್ಕೂರು ಕುಂದಾಪುರ ತಾಲೂಕು ಸಂಚಾಲಕರಾದ ಮಂಜುನಾಥ್ ಗುಡ್ಡೆ ಅಂಗಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿಎಸ್ ಫೌಂಡೇಶನ್ ನವೆಂಬರ್ 2025ರ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ದೀಕ್ಷಿತ್, ತೃಪ್ತಿ ಶಿವರಾಮ ಪೂಜಾರಿ, ವೈಷ್ಣವಿ ವಿ. ಪೂಜಾರಿ, ಸಾಂಗ್ವಿ, ರಕ್ಷಿತಾ, ದರ್ಶನ್, ಸುಜಿತ್ ಕುಮಾರ್, ದರ್ಶನ್ ಕುಮಾರ್, ಧನುಷ್ ಜೆ. ಶೆಟ್ಟಿ, ಅರ್ಪಿತಾ, ಧನುಶ್ರೀ, ಪುಷ್ಪ ಕುಲಾಲ್, ಮನೋಹರ್ ರಚನಾ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವವು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ., ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿ ಡಾ. ಪಾರ್ವತಿ ಜಿ. ಐತಾಳ್ ಇಂಗ್ಲೀಷ್ ಪ್ರಾಧ್ಯಾಪಕರು ಹಾಗೂ ಬರಹಗಾರರು ಕುಂದಾಪುರ ಅವರು ಹೆತ್ತವರು ತಮ್ಮ ಮಗುವಿಗೆ ಸ್ವಲ್ಪ ಸಮಯವನ್ನು ಮೀಸಲಿಟ್ಟು ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸಬೇಕು ಎಂದು ಹೇಳಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ – ಪ್ರಾಥಮಿಕ, ಮುಖ್ಯೋಪಾಧ್ಯಾಯಿನಿ ರೇಶ್ಮಾ ಡಿಸೋಜ ಉಪಸ್ಥಿತರಿದ್ದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ. ಸೋಜಾ ಅವರು ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಅಮೂಲ್ಯ ನಾಯಕ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಯುವಿಕಾ ಬಂಗರ ಸಂಬಂಗರ ಸರ್ವರನ್ನು ಸರ್ವರನ್ನು ಸ್ವಾಗತಿಸಿದರು. ಆಕ್ಷರಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ ಹಾಗೂ ಚೇತನಾ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಹಾಗೂ ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗಳಡಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಅರ್ಜಿಗಳನ್ನು ನಿಗದಿಪಡಿಸಿದ ಅವಧಿಯೊಳಗೆ, ಅಗತ್ಯ ದಾಖಲಾತಿಗಳೊಂದಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಗೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಡಿಸೆಂಬರ್ 15 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ವಿವೇಚನಾ ಕೋಟಾ ಹಾಗೂ ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಸಚಿವರು/ಶಾಸಕರು, ಕರ್ನಾಟಕ ಸರ್ಕಾರ/ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯ ಎಂಬಿಎ ವಿಭಾಗದ ವತಿಯಿಂದ ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಎಂಬ ವಿಷಯದ ಬಗ್ಗೆ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸೇಲ್ಸ್ ಸ್ಟ್ರೈಟೆಜಿಕ್ ಕನ್ಸಲ್ಟೆಂಟ್ ಅಂಡ್ ಮೆಂಟರ್ ಟು ಸ್ಟಾರ್ಟ್ ಅಪ್‌ನ ರಮಣಿ ವೆಂಕಟ್, ಆಗಮಿಸಿ ಎಲ್ಲಾ ವಿದ್ಯಾರ್ಥಿಗಳಲ್ಲಿಯೂ ಒಬ್ಬೊಬ್ಬ ಸೂಪರ್ ಹೀರೋ ಇರುತ್ತಾನೆ. ಆದರೆ ಅದು ವಿದ್ಯಾರ್ಥಿಗಳಿಗೆ ತಿಳಿಯದೆ ನಾವು ಯಾರಿಗೂ ಸಮರಲ್ಲ ಎಂಬ ಋಣಾತ್ಮಕ ಆಲೋಚನೆಯಲ್ಲಿ ವಿದ್ಯಾರ್ಥಿಗಳು ಇರುತ್ತಾರೆ. ಇವರು ವಿದ್ಯಾರ್ಥಿಗಳಿಗೆ ವಿವಿಧ ನೈಜ ಅನುಭವಗಳನ್ನು ನೀಡುವುದರ ಮೂಲಕ ಅದಕ್ಕೆ ಹೇಗೆ ಪ್ರತಿಕ್ರಿಸುತ್ತಾರೆ ಮತ್ತು ವಿದ್ಯಾರ್ಥಿಗಳು ಮಾಡುವ ತಪ್ಪುಗಳೇನು ಮತ್ತು ಅದನ್ನು ಹೇಗೆ ಸರಿಪಡಿಸಿಕೊಳ್ಳಬೇಕೆಂದು ತಿಳಿಸಿದರು. ಈ ಕಾರ್ಯಗಾರವನ್ನು ಕಾಲೇಜಿನ ಡೈರೆಕ್ಟರ್ ಅಕಾಡೆಮಿಕ್ಸ್ ಡಾಕ್ಟರ್ ಎಸ್. ಎನ್. ಭಟ್ ಅವರು ಉದ್ಘಾಟಿಸಿ ಈ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಈ ಕಾರ್ಯಗಾರದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಪಿ.ಯು. ಕಾಲೇಜಿನಲ್ಲಿ “ಅಭ್ಯುದಯ – 2025” ವಾರ್ಷಿಕ ಮಹೋತ್ಸವವು ಸಂತೋಷ ಮತ್ತು ಸಡಗರದಿಂದ ಇತ್ತೀಚಿಗೆ ನಡೆಯಿತು. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದರು. ಅತಿಥಿಗಳನ್ನು ಚೆಂಡೆಯ ನಾದ ಮತ್ತು ಮಾಲಾರ್ಪಣೆ ಮೂಲಕ ಹಾರ್ದಿಕವಾಗಿ ಬರಮಾಡಿಕೊಳ್ಳಲಾಯಿತು. ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಜೈಸನ್ ಲೂಯಿಸ್, ಉಪಪ್ರಾಂಶುಪಾಲರಾದ ಗೀತಾ, ಕಾಲೇಜು ನಾಯಕಿ ವರ್ಷಿಣಿ ಹಾಗೂ ನಾಯಕ ಪವನ್ ವೇದಿಕೆಯಲ್ಲಿ ಇದ್ದರು. ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ಸ್ವಾಗತ ನೃತ್ಯದಿಂದ ಕಾರ್ಯಕ್ರಮಕ್ಕೆ ಶುಭಾರಂಭವಾಯಿತು. ನಂತರ ದೀಪಪ್ರಜ್ವಲನ ನಡೆಯಿತು. ವಿದ್ಯಾರ್ಥಿ ಪರಿಷತ್ ಸದಸ್ಯರು ಸಾಂಸ್ಕೃತಿಕ ಮತ್ತು ಕ್ರೀಡಾ ವರದಿಯನ್ನು ನೀಡಿದರು. ಪ್ರಾಂಶುಪಾಲರು ಕಾಲೇಜಿನ ವಾರ್ಷಿಕ ವರದಿಯನ್ನು ಸರಳವಾಗಿ ಮಂಡಿಸಿದರು. ಈ ವರ್ಷ ಕ್ರೀಡೆ, ಸಾಂಸ್ಕೃತಿಕ ಮತ್ತು ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಕಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಖಾಲಿಯಿರುವ ವಲಯ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು, ಸ್ಥಳೀಯ ಭಾಷೆಯಲ್ಲಿ (ಸಂವಹನ ಹಾಗೂ ಬರವಣಿಗೆ) ಯಲ್ಲಿ ಪ್ರಾವಿಣ್ಯತೆ ಹೊಂದಿರುವ, ಟೆಕ್ನಾಲಜಿ ಹಾಗೂ ಸಾಫ್ಟ್ವೇರ್ ಅಪ್ಲಿಕೇಷನ್‌ನಲ್ಲಿ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಹೊಂದಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒಂದನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಗುರು ಅಬಾಕಸ್ ಮತ್ತು ವೇದಿಕ್ ಮ್ಯಾಥ್ ಸೆಂಟರ್ ಪುಣೆ, ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಪರೀಕ್ಷೆಯಲ್ಲಿ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿನಿಯರಾದ ದಶಮಿ ಡಿ. (4ನೇ ತರಗತಿ) ಹಾಗೂ ಸಮೀಕ್ಷಾ ದಿನೇಶ್ ಶೆಟ್ಟಿ (3ನೇ ತರಗತಿ) ಅವರು ಚಾಂಪಿಯನ್‌ಶಿಪ್ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ವಿದ್ಯಾರ್ಥಿನಿಯರ ಯಶಸ್ಸಿಗೆ ಶಾಲಾ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಗೆಲುವಿನ ಭವಿಷ್ಯ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರದ ಕೊಡಿ ಹಬ್ಬಕ್ಕೆ ಹೋದ ಮಹಿಳೆ ಕಾಣೆಯಾಗಿದ್ದಾರೆ. ಅವರು ಕೋಟೇಶ್ವರದ ಹೊದ್ರೋಳಿಯ ದಿ. ಸಂಜೀವ ಪೂಜಾರಿ ಅವರ ಪುತ್ರಿ ರೇಷ್ಮಾ (25). ಅವರು ಪತಿ ಮನೆ ತರಿಕೆರೆ ತಾಲೂಕಿನ ಎರಂಗಾಪುರ ಗ್ರಾಮದಿಂದ ಪತಿಯ ಜತೆ ಆಗಮಿಸಿದ್ದರು. ಡಿ. 6ರಂದು ಜಾತ್ರೆಗೆ ಹೋದವರು ಕುಂದಾಪುರ ಶಾಸ್ತ್ರಿ ಸರ್ಕಲ್ ವರೆಗೆ ಬಂದಿದ್ದು ಬಳಿಕ ಕಾಣೆಯಾಗಿದ್ದಾರೆ. 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವಾಗ ನೇರಳೆ ಬಣ್ಣದ ಸ್ಟೀವ್‌ಲೆಸ್ ಟಾಪ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಕರಿಮಣಿ ಸರ ಹಾಗೂ 2 ಚಿನ್ನದ ಉಂಗುರ ಧರಿಸಿದ್ದರು. ಅವರ ಪತಿ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
