Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇದರ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ನೀಡಲಾಗುವ ದಿ. ಪ್ರೊ. ಎಂ. ರಾಮಚಂದ್ರ ಸ್ಮರಣೆಯ ಉಡುಪಿ ಜಿಲ್ಲಾ ವಿದ್ಯಾರ್ಥಿ ಯುವ ಸಾಹಿತ್ಯ ರತ್ನ ಪ್ರಶಸ್ತಿಗೆ ಕುಂದಾಪುರ ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ರಿಷಿಕಾ ದೇವಾಡಿಗ ಬೈಂದೂರು ಆಯ್ಕೆಯಾಗಿದ್ದಾರೆ. ರಿಷಿಕಾ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ 2025ರ ಸರ್ವಾಧ್ಯಕ್ಷೆಯಾಗಿದ್ದು, ಆ ಸಂದರ್ಭ ಅವರ ‘ಮೊದಲ ಹೆಜ್ಜೆ’ ಕಥಾ ಸಂಕಲನ ಪ್ರಕಟಗೊಂಡಿರುತ್ತದೆ. ಅವರು ರಾಜ್ಯ ಮಟ್ಟದ ಭಾಷಣ ಸ್ಪರ್ಧೆ, ದೇಶಭಕ್ತಿ ಗೀತೆ ಸ್ಪರ್ಧೆ, ಏಕಪಾತ್ರಾಭಿನಯ ಸಾಹಿತ್ಯ ಕೃತಿ ವಿಮರ್ಶೆ ಮೊದಲಾದವುಗಳಲ್ಲಿ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಅವರು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲ ರಾಮ ದೇವಾಡಿಗ ಮತ್ತು ಶಿಕ್ಷಕಿ ರೂಪ ದಂಪತಿಯ ಪುತ್ರಿ. ಯುವ ಸಾಹಿತ್ಯ ರತ್ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬದುಕಿನುದ್ದಕ್ಕೂ ಬರುವಂತಹ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಆತ್ಮವಿಶ್ವಾಸ ಮತ್ತು ಧೈರ್ಯ ಇವೆರಡೂ ಅಗತ್ಯವಾಗಿರುತ್ತದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಇದರ ಅಧ್ಯಕ್ಷರಾದ ಸದಾನಂದ ನಾವಡ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಟಿಸಿಹೆಚ್ಆರ್ ಆಪ್ ಬೆಂಗಳೂರು ಇವರು ಸಹಯೋಗದಲ್ಲಿ ನಡೆದ ಕುಂದಾಪುರ ಮತ್ತು ಬೈಂದೂರು ವಲಯ ಮಟ್ಟದ ಅಂತರ್ ಪ್ರೌಢಶಾಲೆಗಳ ಮಟ್ಟದ “ಜಾನಪದ ನೃತ್ಯ ವೈಭವ” ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಬದುಕಿನಲ್ಲಿ ಸವಾಲುಗಳನ್ನು ಸ್ವೀಕರಿಸಲು ಕೇವಲ ಪುಸ್ತಕದ ಓದು ಸಾಲದು. ನಿಮ್ಮ ವಿದ್ಯಾರ್ಥಿ ಜೀವನದ ಪಾಠೇತರ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಅದು ನಿಮ್ಮ ಬದುಕಿನಲ್ಲಿ ಸುಗಮ ರೀತಿಯಲ್ಲಿ ನಡೆಸಲು ಅನುಕೂಲವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಸಹನಾ ಅವರು ಮಾತನಾಡಿ, ಜೀವನದಲ್ಲಿ ಬರುವ ಸವಾಲುಗಳು ದೊಡ್ಡದಿರುತ್ತದೆ. ಈ ವಿದ್ಯಾರ್ಥಿ ಜೀವನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಮಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿ ತೆಕ್ಕಟ್ಟೆಯ ಅಬ್ದುಲ್ ಲತೀಫ್ ಮೊಹಿದ್ದೀನ್ ಹಾಗೂ ಅವರೊಂದಿಗಿದ್ದ ಮನೆಯವರಿಗೆ ಡಿ.10ರ ರಾತ್ರಿ ಹಲ್ಲೆಗೈದು, ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಐವರನ್ನು ಬಂಧಿಸಿದ್ದಾರೆ. ರಿಯಾಸುದ್ದೀನ್, ಸುಹೇಲ್ ಅಹಮ್ಮದ್, ಸರ್ಫರಾಜ್, ಮಹಮ್ಮದ್ ತನೂಫ್ ಹಾಗೂ ಸೌಹಾನ್ ಬಂಧಿತರು. ಅಬ್ದುಲ್ ಲತೀಫ್ ಮೊಹಿದ್ದೀನ್ (39) ಹಾಗೂ ಅವರ ಪತ್ನಿ ಮಂಗಳೂರು ಕಂಕನಾಡಿಯ ರೂಹಿ ಶಮಾ ನಡುವೆ ವೈಮನಸ್ಸು ಉಂಟಾಗಿ ಪ್ರತ್ಯೇಕವಾಗಿದ್ದರು. ಡಿ.10ರಂದು ರಾತ್ರಿ 7 ವರ್ಷದ ಪುತ್ರಿಯನ್ನು ಪತ್ನಿಗೆ ತೋರಿಸಲೆಂದು ಕರೆದುಕೊಂಡು ಬಂದಿದ್ದರು. ಈ ವೇಳೆ ಪತ್ನಿಯ ಜತೆ ಬಂದಿದ್ದಈ ಐವರು ಆರೋಪಿಗಳು ತನಗೆ ಹಲ್ಲೆ ಮಾಡಿರುವುದಲ್ಲದೆ, ಕೊಲೆ ಬೆದರಿಕೆ ಹಾಕಿದ್ದಾರೆ. ಜತೆಗೆ ಪುತ್ರಿಯನ್ನು ಬಲವಂತದಿಂದ ಎತ್ತಿಕೊಂಡು ಹೋಗಲು ಪ್ರಯತ್ನಿಸಿರುವುದಾಗಿ ಲತೀಫ್ ದೂರು ನೀಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಿಟ್ಟೆ ಎನ್‌. ಎಂ.ಎ.ಎಂ. ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿಯ ಸಹಾಯಕ ಪ್ರಾಧ್ಯಾಪಕ ಸವಿಧನ್ ಶೆಟ್ಟಿ ಸಿ.ಎಸ್. ಅವರಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸುರತ್ಕಲ್ ಡಾಕ್ಟರೇಟ್ ಪದವಿ ನೀಡಿದೆ. ಇತ್ತೀಚೆಗೆ ನಡೆದ 23ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಅವರು ಮಂಡಿಸಿದ ಎನ್. ಚಾನೆಲ್ ಮಾಡೆಲ್‌ಗಳು ಮತ್ತು ಕಾರ್ಯಕ್ರಮತೆಯ ವಿಶ್ಲೇಷಣೆಯ ವೈವಿಧ್ಯತೆಯ ಪ್ರಸಾರ ಮತ್ತು ದೋಷ ನಿಯಂತ್ರಣ ಕೋಡಿಂಗ್ ಯೋಜನೆಗಳು ನೀರಿನ ಅಡಿಯಲ್ಲಿ ಲಂಬವಾದ ವೈರ್‌ಲೆಸ್‌ ಅಪ್ಟಿಕಲ್‌ ಸಂವಹನ ಲಿಂಕ್‌ಗಳು” ಎಂಬ ವಿಷಯಕ್ಕೆ ಪ್ರೊ. ಯು. ಶ್ರೀಪತಿ ಅಚಾರ್ಯ ಅವರು ಮಾರ್ಗದರ್ಶನ ಪಡೆದು ಪ್ರಬ೦ಧ ಮಂಡಿಸಿದ್ದರು. ಸವಿಧನ್‌ ಶೆಟ್ಟಿ ಅವರು ಪಿಡಬ್ಲ್ಯೂಡಿ, ನಿವೃತ್ತ ಶೆಟ್ಟಿ ಎಕ್ಸಿಕ್ಯೂಟಿವ್‌ ಇಂಜೀನಿಯ‌ರ್ ಮೇಪು ಶಶಿಧರ ಶೆಟ್ಟಿ ಮತ್ತು ಹೊಳಗೆ ವಿಮಲಾ ಎಸ್. ಶೆಟ್ಟಿಯವರ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದ.ಕುಂದಾಪುರ: ಉಡುಪಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ಜಾನಪದ ಗೀತೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.   ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಕಾಳುಮೆಣಸು, ಗೇರು, ಅಂಗಾಂಶ ಬೆಳೆ, ಹೈಬ್ರಿಡ್ ತರಕಾರಿ ಹೊಸ ತೋಟಗಳ ಸ್ಥಾಪನೆಗೆ ಶೇ. 50 ರ ಸಹಾಯಧನ, ಪ್ಲಾಸ್ಟಿಕ್ ಹೊದಿಕೆ ಅಳವಡಿಸಲು ಶೇ. 50 ರ ಸಹಾಯಧನ, ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಗರಿಷ್ಠ 0.75 ಲಕ್ಷ ರೂ.ಗಳ ಸಹಾಯಧನ ಲಭ್ಯವಿದೆ. ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ರೈತರಿಗೆ ಶೇ. 90 ರಷ್ಟು ಸಹಾಯಧನ ಲಭ್ಯವಿದ್ದು, ಮೊದಲ 5 ಎಕರೆ ವರೆಗೂ ಶೇ.90 ರಷ್ಟು ಹಾಗೂ ನಂತರ 5 ಎಕರೆಯಿಂದ 12.50 ಎಕರೆ ವರೆಗೂ ಮಾರ್ಗಸೂಚಿಯನ್ವಯ ಶೇ. 45 ರಂತೆ ಸಹಾಯಧನ ನೀಡಲಾಗುವುದು. ಭವಿಷ್ಯದ ಬೆಳೆಯಾದ ತಾಳೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಸೇರಿದಂತೆ ಮತ್ತಿತರ ಸೌಲಭ್ಯಗಳು ವಿಳಂಬವಿಲ್ಲದೇ ಪ್ರತಿ ತಿಂಗಳು ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಲೋಡರ್, ಕ್ಲೀರ್ಸ್‌ ಹಾಗೂ ವಾಹನ ಚಾಲಕರುಗಳಿಗೆ ಪ್ರತಿ ಮಾಹೆಯ ವೇತನವನ್ನು ವಿಳಂಬವಿಲ್ಲದೇ ಕಾಲಕಾಲಕ್ಕೆ ಪಾವತಿಸಬೇಕು ಹಾಗೂ ಅವರುಗಳಿಗೆ ಪಿ.ಎಫ್ ಹಾಗೂ ಇ.ಎಸ್.ಐ ಕಟಾವಣೆ ಆಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಹೊರ ಗುತ್ತಿಗೆದಾರರಿಗೆ ಮಾಸಿಕ ಬಿಲ್‌ಗಳನ್ನು ಪಾವತಿಸಬೇಕೆಂದು ತಿಳಿಸಿದರು. ಸಫಾಯಿ ಕರ್ಮಚಾರಿ ಹಾಗೂ ಗುರುತಿಸಲ್ಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳು ಹಾಗೂ ಮೃತಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ 2025-26ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ್ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 19ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್.ವಿ.ಕಮಲೇಶ್ ರೋಲಿಂಗ್ ಟ್ರೋಫಿಯನ್ನು ಸತತ 16ನೇ ಬಾರಿ ಪಡೆದು ಅವಳಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 17-3 ಅಂಕಗಳ ಅಂತರದಿಂದ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜಿನ ವಿರುದ್ಧ 14 ಅಂಕ ಹಾಗೂ ಇನ್ನಿಂಗ್ಸ್ ನೊಂದಿಗೆ ಗೆಲುವು ಸಾಧಿಸಿದರೆ,  ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ 17-2 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿ.ಎಫ್.ಜಿ.ಸಿ ಕಾಲೇಜು ವಿರುದ್ಧ 15 ಅಂಕ ಹಾಗೂ ಇನ್ನಿಂಗ್ಸ್‌ನೊಂದಿಗೆ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ “ಸಮಗ್ರ ಪ್ರಶಸ್ತಿ”ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್ ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಮಹಿಳಾ ನಿಲಯವನ್ನು ಸ್ವಾಗತ ದ್ವಾರ, ಮದುವೆ ಚಪ್ಪರ, ಮಾವಿನ ತಳಿರು-ತೋರಣ, ಬಣ್ಣ-ಬಣ್ಣದ ರಂಗೋಲಿ ಚಿತ್ತಾರಗಳಿಂದ ಅಲಂಕರಿಸಲಾಗಿದ್ದು, ಯಾವುದೇ ಖಾಸಗಿ ಮದುವೆಗೆ ಕಡಿಮೆಯಿಲ್ಲ ಎಂಬಂತೆ ರಾಜ್ಯ ಮಹಿಳಾ ನಿಲಯದಲ್ಲಿ ನಡೆದ ವಿವಾಹ ಕಾರ್ಯಕ್ರಮವು ನೋಡುಗರನ್ನು ಆಕರ್ಷಿಸುತ್ತಿತ್ತು. ಮದುವೆಗೆ ಆಗಮಿಸಿದ ಗಣ್ಯರನ್ನು, ಅಧಿಕಾರಿಗಳನ್ನು ತಂಪು ಪಾನೀಯ ಹಾಗೂ ಗುಲಾಬಿ ಹೂವುಗಳನ್ನು ನೀಡಿ, ನಿಲಯದ ಸಿಬ್ಬಂದಿಗಳು ಆದರದಿಂದ ಬರಮಾಡಿಕೊಳ್ಳುತ್ತಿರುವ ದೃಶ್ಯ ಮದುವೆಗೆ ಮತ್ತಷ್ಟು ಮೆರುಗು ನೀಡಿತ್ತು. ಇವೆಲ್ಲವೂ ಕಂಡುಬಂದಿದ್ದು, ಇಂದು ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ನಡೆದ ನಿವಾಸಿನಿಯರೇ ವಿವಾಹ ಕಾರ್ಯಕ್ರಮದಲ್ಲಿ ಎನ್ನುವುದೇ ವಿಶೇಷ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೊಗದಲ್ಲಿ ಸಂಸ್ಥೆಯ ನಿವಾಸಿನಿಯರಾದ ಚಿ.ಸೌ ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ಇಲ್ಲಿನ ವಾಸಿ ಸತೀಶ್ ಪ್ರಭು ಅವರ ಪುತ್ರ ಚಿ.ಸಂಜಯ ಪ್ರಭು ಅವರೊಂದಿಗೆ ಹಾಗೂ ಇನ್ನೊರ್ವ ನಿವಾಸಿನಿಯಾದ ಚಿ.ಸೌ.ಸುಶೀಲ ಅವರ ವಿವಾಹವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಬಹುಮಾನ ವಿತರಣಾ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯು ಕೇವಲ ನಾಲ್ಕು ಗೋಡೆಗೆ ಸೀಮಿತವಾಗಿರದೆ, ಅವರಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ತೋರ್ಪಡಿಸಲು ಇದೊಂದು ವೇದಿಕೆಯಾಗಿದೆ. ಜೀವನದಲ್ಲಿ ಎದುರಾಗುವ ಸೋಲು ಗೆಲುವನ್ನು ಸಮದೂಗಿಸಿಕೊಂಡು ಹೋಗುವುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳಬೇಕು ಎಂದರು. ಈ ಸಮಾರಂಭವನ್ನು ಉಡುಪಿ ನೌಕರರ ಸಂಘದ ಅಧ್ಯಕ್ಷರಾದ ಬಸ್ರೂರಿನ ನಿವೇದಿತ ಪ್ರೌಢಶಾಲೆಯ ಶಿಕ್ಷಕರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ದೈಹಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳನ್ನು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವಲ್ಲಿ ಸದಾ ಈ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ…

Read More