ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ಇದರ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಬಂಟರೆ ಯಾನೆ ನಾಡವರ ಸಂಕೀರ್ಣದ ಆರ್ ಎನ್ ಶೆಟ್ಟಿ ಸಭಾಭವನದ ಎಸ್. ಎಸ್ ಹಾಲ್ ನಲ್ಲಿ ನಡೆಯಿತು. 317 ಸಿಯ ಮಾಜಿ ಜಿಲ್ಲಾ ಗವರ್ನರ್ ಎಂ.ಜೆ.ಎಫ್ ದಿವಾಕರ ಶೆಟ್ಟಿ ಭದ್ರಾವತಿ ಪದಗ್ರಹಣ ನೆರವೇರಿಸಿದರು. ಡಾ. ಅಂಪಾರು ನಿತ್ಯಾನಂದ ಶೆಟ್ಟಿ ನೂತನ ಅಧ್ಯಕ್ಷರಾಗಿ, ಭುಜಂಗ ಶೆಟ್ಟಿ ರಟ್ಟಾಡಿ ಕಾರ್ಯದರ್ಶಿಯಾಗಿ, ಅಣ್ಣಪ್ಪ ಶೆಟ್ಟಿ ಯರುಕೋಣೆ ಕೋಶಾಧಿಕಾರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಾಂತೀಯ ಅಧ್ಯಕ್ಷರಾದ ರಜತ್ ಹೆಗ್ಡೆ, ವಲಯ ಅಧ್ಯಕ್ಷರಾದ ವಸಂತರಾಜ್ ಶೆಟ್ಟಿ, ಎಕ್ಸ್ಟೆನ್ಷನ್ ಚಯರ್ ಪರ್ಸನ್ ಅರುಣ್ ಕುಮಾರ್ ಹೆಗ್ಡೆ, ಪ್ರಾಂತೀಯ ಕಾರ್ಯದರ್ಶಿ ಏಕನಾಥ್ ಬೋಳಾರ್, ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಸಂಸಾಡಿ ಶುಭಾಶಂಸನೆಗೈದರು. ನಮಿತಾ ಪ್ರಭಾಕರ ಶೆಟ್ಟಿ ಅವರ ಪ್ರಾರ್ಥನೆ ಮೂಲಕ ಸಮಯಕ್ಕೆ ಸರಿಯಾಗಿ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಸದಸ್ಯರಾದ ಪ್ರಶಾಂತ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಐರೋಡಿ ಗ್ರಾಮ ಪಂಚಾಯತ್ ಎದುರು 9/ 11 ಸಮಸ್ಯೆ , ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ , ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕಾಂಗ್ರೆಸ್ ಪಕ್ಷದಿಂದ ಜನತೆಗೆ ವಾಸ್ತವ ವಿಚಾರ ತಿಳಿಸುವ ಮತ್ತು ಬಿಜೆಪಿ ಸುಳ್ಳು ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಎ. ಕುಂದರ್ ಅವರು ಪ್ರಸ್ತಾವಿಕವಾಗಿ ಮಾತನಾ̧ಡಿ ಬಿಜೆಪಿಯವರು ಸುಳ್ಳುಗಳನ್ನು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳು ರದ್ದದಾದರೆ ಮುಂದೆ ನಾವು ಅಧಿಕಾರಕ್ಕೆ ಇರಬಹುದೆಂದು ಹಂಬಲಿಸುತ್ತಿದ್ದಾರೆ ಇವರ ಸುಳ್ಳುಗಳು ಇನ್ನೂ ಹೆಚ್ಚು ದಿನ ನಡೆಯಲ್ಲ ಎಂದು ಬಿಜೆಇ ಸುಳ್ಳಿನ ಪ್ರತಿಭಟನೆಯನ್ನು ಖಂಡಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ನಾಗೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗುರುವಾರದಂದು ಗುರುಪೂರ್ಣಿಮೆಯ ಪ್ರಯುಕ್ತ ವ್ಯಾಸಪೂಜೆಯು ಹಟ್ಟಿಅಂಗಡಿ ಶಾಂತಾರಾಮ ಸಭಾಂಗಣದಲ್ಲಿ ನಡೆಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾಶಿಕ್ಷಕವೃಂದದವರು ’ಕಲಿಸು ಗುರುವೆ ನೀ ಕಲಿಸು’ಎಂಬ ಗೀತೆಯನ್ನು ಸುಮಧುರವಾಗಿ ಹಾಡಿ ಮಕ್ಕಳಿಗೆ ಆನಂದವನ್ನು ಉಂಟುಮಾಡಿದರು. ಶಾಲೆಯ ಸಂಸ್ಕೃತ ಅಧ್ಯಾಪಕರಾದ ರಾಮಕೃಷ್ಣ ಉಡುಪರು ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸುತ್ತಾ ಎಲ್ಲಾ ಗುರುಗಳು ಅವರ ಗುರುಗಳನ್ನು ಸ್ಮರಿಸುವ ಈ ದಿನ ಜಗತ್ತಿಗೆ ಆದಿಗುರುವಾದ ವೇದವ್ಯಾಸರನ್ನು ಸ್ಮರಿಸುವ ಪುಣ್ಯದಿನ. ದೇಶದ ಎಲ್ಲಾ ವೇದಪರಂಪರೆಗಳಿಗೂ ಸನ್ಮಾರ್ಗವಿತ್ತು, ಎಲ್ಲಾ ದೇವ ದೇವತೆಯರನ್ನು ಆರಾಧಿಸುವ ಜನರ ಮನಸ್ಸಿನಲ್ಲಿ ದೇವರ ನಂಬಿಕೆ, ಜ್ಞಾನ ಮತ್ತು ದೃಢಭಕ್ತಿಯನ್ನು ಜನಿಸುವ ಹದಿನೆಂಟು ಪುರಾಣಗಳನ್ನು ಸಂರಚಿಸಿ, ಉಪನಿಷತ್ತಿನ ಸಾರವನ್ನು ಸರ್ವರಿಗೂ ಬೋಧಿಸಿದ ಗುರುವೆಂದರೆ ವೇದವ್ಯಾಸರು. ಭಗವದ್ಗೀತೆ, ವಿಷ್ಣುಸಹಸ್ರನಾಮವೇ ಮೊದಲಾದ ಪುಣ್ಯತಮವಾದ ವಿಚಾರಗಳನ್ನು ಸಮಾಜಕ್ಕೆ ಒದಗಿಸಿದ ಗುರು ವೇದವ್ಯಾಸರು. ಅಂತಹ ಗುರುಗಳನ್ನು ನಮ್ಮ ಶಿಕ್ಷಕರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಗ್ರಾಮ ಪಂಚಾಯತ್ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪಂಚವರ್ಣ ಸಂಘಟನೆ ಕೋಟ ಇವರ ಸಂಯೋಜನೆಯೊಂದಿಗೆ ಶಿಶುಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಹಾಗೂ ಎಸ್ಎಲ್ಆರ್ಎಂ ಘಟಕ ಕೋಡಿ ಇವರ ಸಹಕಾರದೊಂದಿಗೆ ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ ಅಧ್ಯಕ್ಷತೆಯಲ್ಲಿ ಮನೆಗೊಂದು ಗಿಡ ನೆಡುವ ಎರಡನೇ ವರ್ಷದ ಮೂರು ತಿಂಗಳ ಪರಿಸರ ಸ್ನೇಹಿ ಹಸಿರು ಜೀವ ಅಭಿಯಾನ ಜರಗಿತು. ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ಪೂಜಾರಿ ಪಿ, ಪ್ರಭಾಕರ್ ಮೆಂಡನ್, ಸತೀಶ್ ಜಿ. ಕುಂದರ್ ಕಾರ್ಯಕ್ರಮದ ಮುಂದಾಳತ್ವ ವಹಿಸಿದರು. ಭಾನುವಾರ ಹೊಸಬೆಂಗ್ರೆ ಅಂಗನವಾಡಿ ಬಾಲಾವಿಕಾಸ ಸಮಿತಿ ಅಧ್ಯಕ್ಷ ಸುಲೋಚನಾ ದಿವಾಕರ್ ಕುಂದರ್ ಮನೆಯಿಂದ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಜೀವಿನಿ ಅಧ್ಯಕ್ಷೆ ಪೂರ್ಣಿಮ, ಮಾಜಿ ಸಂಜೀವಿನಿ ಅಧ್ಯಕ್ಷೆ ದೀಪಾ ಆರ್ ಖಾರ್ವಿ, ಸ್ತ್ರೀ ಶಕ್ತಿ ಸಂಘದ ಸದಸ್ಯೆ ಶಾರದಾ, ಸುಜಾತ ಖಾರ್ವಿ, ಹಾಗೂ ಸ್ಥಳೀಯರು ಭಾರತಿ, ಸವಿತಾ ಪುಟಾಣಿಗಳು ಶ್ರೀಯಾ, ತೃಪ್ತಿ, ಸಂಭ್ರದ್ಧಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಯಡಾಡಿ-ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಕಾರ್ಯಕ್ರಮವು ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿ ಸಂಸತ್ತು ಪದಗ್ರಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಗೌರವಿಸಿದ ಹರಿರಾಮ್ ಶಂಕರ್ ಅವರು ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಕೂಡ ಒಂದೊಂದು ಪ್ರತಿಭೆ ಅಡಗಿರುತ್ತದೆ ಅಂತಹ ಪ್ರತಿಭೆಯನ್ನು ವಿದ್ಯಾರ್ಥಿ ವೇದಿಕೆಯ ಮೂಲಕ ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡು ಎಲ್ಲರನ್ನು ಸಮಾನರಾಗಿ ನೋಡಿಕೊಂಡು, ಇನ್ಸ್ಟಾಗ್ರಾಮ್, ವಾಟ್ಸಾಪ್, ಫೇಸ್ ಬುಕ್ ಅದುವೆ ಜೀವನ ಅಲ್ಲ ಎಂದು ತಿಳಿದು ಪಾಠ ಪ್ರವಚನದ ಮೂಲಕ ಹೆಚ್ಚು ಆಸಕ್ತರಾಗಿ ಮುಂದೆ ಸಾಗಿದಾಗ ಆದರ್ಶ ವಿದ್ಯಾರ್ಥಿಯಾಗಿ ಬೆಳೆಯಬಹುದು. ಸಮಾಜದಲ್ಲಿ ಭವಿಷ್ಯ ಹಾಳು ಮಾಡುವ ಉದ್ದೇಶದಿಂದ ಜಾಲತಾಣದ ಮೂಲಕ ಬ್ಲಾಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ 2025-26ನೇ ಸಾಲಿನ ಆತ್ಮಯೋಜನೆಯಡಿ ಇಲಾಖೆಯ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿ, ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವಿದೆ. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯಒಟ್ಟಾರೆ 10 ಮಂದಿ ರೈತರಿಗೆ (ತಲಾರೂ.25000/-) ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯ್ಕೆಯಾದ ಆಯಾ ತಾಲ್ಲೂಕಿನ ಒಟ್ಟಾರೆ 5 ಮಂದಿ ರೈತರಿಗೆ (ತಲಾ ರೂ.10000/-) ಜಿಲ್ಲಾ ಮಟ್ಟದಆಯ್ಕೆ ಸಮಿತಿಯಲ್ಲಿ ಮಂಡಿಸಿ ತೀರ್ಮಾನದಂತೆ ವಿತರಿಸಲಾಗುವುದು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರಿ ಕಛೇರಿಯಿಂದ ನಿಗದಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 15.08.2025 ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ತಡವಾಗಿ ಬಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಸರಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯು ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ ಕಾರ್ಯವನ್ನು ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದರು. ಮಾನ್ಯುಯಲ್ ಸ್ಕ್ಯಾವೆಂಜರ್ ನಿಷೇಧ ವಿರುವ ಹಿನ್ನೆಲೆ, ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮಲ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಎಫ್.ಎಸ್.ಎಂ.ಎಸ್ ಘಟಕಗಳಲ್ಲಿ ವಿಲೇವಾರಿ ಮಾಡಬೇಕು ಎಂದ ಅವರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಾಜದಲ್ಲಿ ನಮ್ಮಗೆ ಗುರು ದಕ್ಷಿಣೆ ನೀಡಿದ ಬಾಲ್ಯದ ಗುರುಗಳ ನೆನಪು ಅಜರಾಮರ ಆದರೆ ಅವರಿಗೆ ಗುರುವಂದನೆ ಸಲ್ಲಿಸಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರು ಪೂರ್ಣಿಮೆಯ ಅಂಗವಾಗಿ ತಾನು ಕಲಿತ ಶಾಂಭವೀ ಶಾಲೆಗ ಗುರುಗಳಾದ ಕೋಟ ಮಾಹಾಲಿಂಗ ದೇವಾಡಿಗ ಅವರಿಗೆ ಗುರುವಂದನೆ ಸಲ್ಲಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೋಟ ಗ್ರಾಮ ಪಂಚಾಯತ್ ಸದಸ್ಯರಾದ ಅಜಿತ್ ದೇವಾಡಿಗ, ಚಂದ್ರ ಪೂಜಾರಿ ಕದ್ರಿಕಟ್ಟು, ಸಂತೋಷ್ ಪ್ರಭು, ವನೀತಾ ಆಚಾರ್, ಮಾಜಿ ಪಂಚಾಯತ್ ಸದಸ್ಯ ಗೋಪಾಲ್ ಪೈ, ಮಾಜಿ ತಾ.ಪಂ ಸದಸ್ಯೆ ಲಲಿತಾ ಪೂಜಾರಿ, ಬಿಜೆಪಿ ಬೂತ್ ಅಧ್ಯಕ್ಷ ನಾಗರಾಜ ಮೈಯ್ಯ, ಗೋಪಾಲ್ ಮಡಿವಾಳ, ನಿವೃತ್ತ ಶಿಕ್ಷಕ ಮಹಾಲಿಂಗ ದೇವಾಡಿಗರ ಕುಟುಂಬಿಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಕ್ಲಾಡಿಯ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಅನೇಕ ರೀತಿಯ ನೆರವನಿತ್ತ ದಾನಿ ದಿ| ಭಾಸ್ಕರ್ ಶೆಟ್ಟಿ ಅವರ 66ನೇ ಜನ್ಮದಿನದ ಅಂಗವಾಗಿ ಬುಧವಾರ ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಫಾರೆಸ್ಟ್ ಎಸ್ಒಎಸ್ ಎನ್ಜಿಒ, ಭಾಸ್ಕರ ಶೆಟ್ಟರ ಅಭಿಮಾನಿ ಬಳಗ ಹಾಗೂ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವನಮಹೋತ್ಸವ – ‘ಮನೆಗೊಂದು ಸಸಿ’ ನೆಡುವ ಅಭಿಯಾನ ನಡೆಯಿತು. ಮನೆಗೊಂದು ಸಸಿ ಅಭಿಯಾನದಡಿಯಲ್ಲಿ ಸಾವಿರಕ್ಕೂ ಮಿಕ್ಕಿ ಸಸಿಗಳನ್ನು ವಿತರಣೆ ಮಾಡಲಾಯಿತು. ಗ್ರಾಮಸ್ಥರು ಉತ್ಸಾಹದಿಂದ ಈ ಅಭಿಯಾನಕ್ಕೆ ಕೈಜೋಡಿಸಿದರು. ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಣ್ಣಿನ ಆಟ ಮತ್ತು ವನ್ಯಜೀವಿ ಅರಿವು ಕಾರ್ಯಾಗಾರಗಳಲ್ಲಿ ಪಾಲ್ಗೊಂಡರು. ಬೆಂಗಳೂರಿನ ಗಣೇಶ್ ಶ್ರೀನಿವಾಸನ್ ಮತ್ತು ಬಂಡೀಪುರ ಅರಣ್ಯಾಧಿಕಾರಿ ಮೋಹನ್ ಕುಮಾರ್ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಅರಣ್ಯ ಇಲಾಖೆಯ ಅಧಿಕಾರಿಗಳು, ಊರ ಪ್ರಮುಖರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಭಾಸ್ಕರ ಶೆಟ್ಟರ ಅಭಿಮಾನಿ ಬಳಗದವರು, ಗ್ರಾಮಸ್ಥರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಷಾಢ ಹುಣ್ಣಿಮೆಯ ಪವಿತ್ರ ದಿನದಂದು ಆಚರಿಸಲ್ಪಡುವ ಗುರು ಪೂರ್ಣಮಾ ಕಾರ್ಯಕ್ರಮದಲ್ಲಿ ಆರ್. ಎನ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಆರತಿ ಬೆಳಗಿಸಿ ಕಾಲಿಗೆ ನಮಸ್ಕರಿಸುವ ಮೂಲಕ ಆಚರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರು ಭವಿಷ್ಯದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಗುರು ಸ್ಥಾನದಲ್ಲಿರಬೇಕಾದ ಅವಕಾಶ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಿ.ಬಿ. ಕೃಷ್ಣಮೂರ್ತಿ ಅವರು ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಅವರು ಕಾರ್ಯಕ್ರಮ ನಿರ್ವಹಿಸಿದರು.
