ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ಹೆಗ್ಡೆ ಹೆಚ್.ಡಿ 99.8900442 ಪರ್ಸಂಟೈಲ್ ನೊಂದಿಗೆ 641 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 772 ನೇ ರ‍್ಯಾಂಕ್, ತೇಜಸ್ ಆರ್ .ಬಿ 99.7945892 ಪರ್ಸಂಟೈಲ್‌ನೊಂದಿಗೆ 626 ಅಂಕಗಳನ್ನು ಗಳಿಸಿ, ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 103ನೇ ರ‍್ಯಾಂಕ್, ಧ್ರುವ ವಿ. ಬಿ. 99.6808332 ಪರ್ಸಂಟೈಲ್ ನೊಂದಿಗೆ 614 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 668ನೇ ರ‍್ಯಾಂಕ್, ಲೇಖನ್ ಕಾರಿಯಪ್ಪ ಎಂ ಡಿ 99.6687826 ಪರ್ಸೆಂಟೇಲ್ ನೊಂದಿಗೆ 613 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 678 ರ‍್ಯಾಂಕ್, ಆರ್ಯ ವಿ 99.5818322 ಪರ್ಸಂಟೈಲ್ ನೊಂದಿಗೆ 606 ಅಂಕ, ಮೋಕ್ಷಾ ಬಿ. ಎಂ 99.5671273 ಪರ್ಸಂಟೈಲ್ ನೊಂದಿಗೆ 605 ಅಂಕಗಳಿಸಿ ಅಭೂತಪೂರ್ವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಮೂರ್ತೆದಾರರ ಸಹಕಾರಿ ಸಂಘದ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಅವರಿಗೆ ಪ್ರಾಜೆಕ್ಟರ್ ಕೊಡುಗೆಯನ್ನು ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀ ನಾರಾಯಣ, ಮುಖ್ಯ ಶಿಕ್ಷಕಿ ಗ್ರೇಸಿ ಬಾಂಜಿ, ಕೋಟ ಮೂರ್ತೆದಾರರ ಸಹಕಾರಿ ಸಂಘದ ಸಿಇಓ ಜಗದೀಶ್ ಕೆಮ್ಮಣ್ಣು, ಶಾಖಾ ವ್ಯವಸ್ಥಾಪಕರಾದ ಉದಯ ಪೂಜಾರಿ, ನಿರ್ದೇಶಕರಾದ ಪ್ರಭಾವತಿ ಡಿ ಬಿಲ್ಲವ, ಶಾಲಾ ಹಿತರಕ್ಷಣಾ ಸಮಿತಿಯ ನಂದಕಿಶೋರ್, ನಾಗರಾಜ್ ಶೆಟ್ಟಿ, ತಾರನಾಥ ಪೂಜಾರಿ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಅಧ್ಯಕ್ಷ ಸುಶೀಲ್ ಬೋಳಾರ್, ಕಾರ್ಯದರ್ಶಿ ಟಿ ಆರ್ ದೊಡ್ಡಮನಿ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ನೇಜಾರ್ ಲೀಜನ್‌ನ ಅಧ್ಯಕ್ಷರಾದ ಮಿತ್ರಕುಮಾರ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಶಸ್ವಿ ವಿದ್ಯಾರ್ಥಿಯಾಗಲು ಕೇವಲ ಉತ್ತಮ ಅಂಕಗಳನ್ನು ಗಳಿಸುವುದು ಮಾತ್ರ ಸಾಕಾಗುವುದಿಲ್ಲ. ಸಮಯಪಾಲನೆ, ಶಿಸ್ತು, ಪ್ರಾಮಾಣಿಕತೆ, ಪರಿಶ್ರಮ, ಆತ್ಮವಿಶ್ವಾಸ ಹಾಗೂ ನಿರಂತರ ಕಲಿಯುವ ಮನೋಭಾವ ಇವುಗಳೂ ಅಷ್ಟೇ ಮುಖ್ಯ. ವೈಫಲ್ಯವನ್ನು ಎಂದಿಗೂ ಸೋಲು ಎಂದು ಭಾವಿಸಬೇಡಿ. ಪ್ರತಿಯೊಂದು ವೈಫಲ್ಯವೂ ಹೊಸ ಪಾಠವನ್ನು ಕಲಿಸುತ್ತದೆ. ಆತ್ಮವಿಶ್ವಾಸ, ಧೈರ್ಯ ಮತ್ತು ನಿರಂತರ ಪ್ರಯತ್ನ ಇದ್ದರೆ ಯಶಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು ಕೋಟ ವಿವೇಕ ಪ್ರೌಢ ಶಾಲೆಯ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಯಶಸ್ವಿ ವಿದ್ಯಾರ್ಥಿ ಜೀವನ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ದೀಪಿಕಾ ಜಿ., ಐಕ್ಯೂಎಸಿ ಸಹ ಸಂಯೋಜಕರಾದ ರಕ್ಷಿತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರವನ್ನು ರೂಡಿಸಿಕೊಳ್ಳಬೇಕು ಎಂದು ವಿಜಯ ಕರ್ನಾಟಕ ಪತ್ರಿಕೆಯ ಪತ್ರಕರ್ತ ಜಾನ್ ಡಿಸೋಜ ಹೇಳಿದರು ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಲಲಿತಾ ಕಲಾ ಸಂಘ ಉದ್ಘಾಟನೆ ಮತ್ತು “ಕಲಾ ಕೌಸ್ತುಭ” ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ನುಡಿಗಳನ್ನಾಡಿದರು. ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಅತಿಯಾಗಿ ಮೊಬೈಲ್ ಬಳಕೆಯ ಪರಿಣಾಮವಾಗಿ ಅವರು ಸಮಯವನ್ನು ಅಲ್ಲೇ ವ್ಯಯ ಮಾಡುತ್ತಾರೆ. ಆದರೆ ನಿಮ್ಮ ಒಳ್ಳೆಯ ವಿಚಾರಗಳಿಗೆ ಮಾತ್ರ ಮೊಬೈಲ್ ಬಳಕೆ ಇರಲಿ. ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವವಿರುವ ವ್ಯಕ್ತಿಗಳಾಗಿ ಎಂದು ಕರೆ ನೀಡಿದರು. ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ನಿವೇದಿತಾ ಪ್ರೌಢಶಾಲೆ ಬಸ್ರೂರು ಇಲ್ಲಿನ ಸಹ ಶಿಕ್ಷಕರಾದ ಪ್ರದೀಪ್ ಶೆಟ್ಟಿ ಆಗಮಿಸಿದ್ದರು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶುಭಕರ ಆಚಾರಿ ಗೌರವ ಉಪಸ್ಥಿತರಾಗಿದ್ದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸರೋಜಾ ಎಂ. ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡ್ತಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜನ ಸಂಪರ್ಕ ಸಭೆ ನಡೆಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಜನಸಂಪರ್ಕ ಎನ್ನುವುದು ಕೇವಲ ಸಭೆಯಲ್ಲ ಅದು ಜನರ ನೋವನ್ನು ಆಲಿಸುವ ವೇದಿಕೆ. ಅದು ಜನರ ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳುವ ಸಂಕಲ್ಪ ಅದು ಪ್ರತಿಯೊಬ್ಬ ನಾಗರಿಕನ ಧ್ವನಿಗೆ ಬೆಲೆ ಕೊಡುವ ಪ್ರಜಾಪ್ರಭುತ್ವದ ಸಂವಾದ ಎಂದರು. ನಂತರ ನಡೆದ ಸಾರ್ವಜನಿಕ ಕುಂದುಕೊರತೆ ಆಲಿಕೆಯಲ್ಲಿ ಗ್ರಾಮಸ್ಥರು ರಸ್ತೆ, ಕುಡಿಯುವ ನೀರಿನ ಸಮಸ್ಯೆ, ವಸತಿ ಯೋಜನೆ, ಮೂಲಸೌಕರ್ಯ ಮತ್ತು ಕಂದಾಯಕ್ಕೆ ಸಂಬಂಧಿಸಿದ ಮನವಿಗಳನ್ನು ಸಲ್ಲಿಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಬ್ರಹ್ಮಾವರ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ರಾಮದಾಸ್, ವಡ್ಡರ್ಸೆ ಗ್ರಾ.ಪಂ ಆಡಳಿತಾಧಿಕಾರಿ ಸುರೇಶ್ ಬಂಗೇರ, ಗ್ಯಾರಂಟಿ ಸಮಿತಿ ಸದಸ್ಯರಾದ ಡಾ. ಸುನೀತ್…
ಕುಂದಾಪ್ರ ಡಾಟ್ ಕಾಂಸ ಉದ್ದಿ.ಕುಂದಾಪುರ: ಲೋಕಸಭಾ ಚುನಾವಣೆ ಹಾಗೂ ಇತ್ತೀಚಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸಾಧಿಸಿದ ಗೆಲುವು ಕಾರ್ಯಕರ್ತರಲ್ಲಿ ಹೊಸ ಚೇತನ ಮತ್ತು ಚೈತನ್ಯವನ್ನು ತಂದುಕೊಟ್ಟಿದೆ. ಅದೇ ನೆಲೆಗಟ್ಟಿನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ನ ಗೆಲುವಿನ ಸುವರ್ಣ ಯುಗ ಹಾಗೂ ವಿಜಯಯಾತ್ರೆ ಆರಂಭವಾಗಬೇಕು ಎಂದು ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಗುರುವಾರ ಬೆಳಿಗ್ಗೆ ಕೋಟೇಶ್ವರದ ಸಹನಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೆ. ಸದಾನಂದ ಶೆಟ್ಟಿ ಅವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅತ್ಯಂತ ಸುಸೂತ್ರವಾಗಿ ಜವಾಬ್ದಾರಿಗಳನ್ನು ಹಂಚಿಕೊಂಡು ಕೆಲಸ ಮಾಡುತ್ತಿದ್ದಾರೆ. ಇದು ನಮಗೆ ಆದರ್ಶಪ್ರಾಯ. ಕೇವಲ ನಾಯಕರೇ ಬಂದು ಎಲ್ಲವನ್ನೂ ಮಾಡುತ್ತಾರೆ ಎಂದು ಕಾರ್ಯಕರ್ತರು ಸುಮ್ಮನೆ ಕೂರಬಾರದು ಎಂದರು. ಇದೇ ವೇಳೆ ಅವರು ಸಂಘಟನೆಗೆ ಮೂರು ಪ್ರಮುಖ ಸಲಹೆ ನೀಡಿದರು. ಸಣ್ಣಪುಟ್ಟ ಗೊಂದಲಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಸ್‌ಐಆರ್ ವಿಚಾರದಲ್ಲಿ ಗ್ರಾಮ ಆಡಳಿತ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗುಲ್ವಾಡಿ ನಿವಾಸಿಗಳಾದ ಪಳ್ಳಿ ಸುಲೇಮಾನ್ ಮತ್ತು ಆತನ ಮಗ ಶಫಿ ಬಂಧಿತ ಆರೋಪಿಗಳು. ಜು.15ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮ ಪಂಚಾಯತ್ ಆವರಣದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಕಛೇರಿಯಲ್ಲಿ ಅಧಿಕಾರಿ ಪ್ರಕಾಶ ನಾಯ್ಕ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಛೇರಿಗೆ ಬಂದ ಆರೋಪಿಗಳಾದ ಪಳ್ಳಿ ಸುಲೇಮಾನ್ ಹಾಗೂ ಶಫಿ, ಎಸ್‌ಐಆರ್ ಫಾರ್ಮ್ ನೀಡುವ ವಿಚಾರವಾಗಿ ಅಧಿಕಾರಿಯೊಂದಿಗೆ ತಗಾದೆ ತೆಗೆದಿದ್ದಾರೆ. ಫಾರ್ಮ್‌ನ್ನು ತಮಗೆ ನೀಡುವಂತೆ ಅಧಿಕಾರಿ ಹೇಳಿದಾಗ ಆಕ್ರೋಶಗೊಂಡ ಆರೋಪಿಗಳಿಬ್ಬರು, ಅಧಿಕಾರಿಗೆ ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು, ಕುಂದಾಪುರ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ ಬ್ರಹ್ಮಾವರ ವತಿಯಿಂದ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನಾ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹರೀಶ್ ಜಿ. ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಯುವಜನತೆಗೆ ಉದ್ಯೋಗ ಮತ್ತು ಸ್ವಾವಲಂಬಿ ಬದುಕಿಗೆ ಅಗತ್ಯವಾದ ಕೌಶಲ್ಯಗಳನ್ನು ತರಬೇತಿಯ ಮೂಲಕ ನೀಡುವುದು ವಿಶ್ವ ಕೌಶಲ್ಯ ದಿನದ ಪ್ರಮುಖ ಉದ್ದೇಶವಾಗಿದೆ. ಪ್ರತಿ ವರ್ಷ ಜುಲೈ 15ರಂದು ಆಚರಿಸುವ ಈ ದಿನವು ಯುವಕರಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು. ದೇಶದಲ್ಲಿ ಬಡತನ ನಿರ್ಮೂಲನೆಗೆ ಆರ್ಥಿಕ ಸ್ವಾವಲಂಬನೆ ಅಗತ್ಯವಾಗಿದ್ದು, ಯುವಕರು ಉದ್ಯೋಗ ಅಥವಾ ಸ್ವಂತ ಉದ್ಯಮದಲ್ಲಿ ತೊಡಗಿಸಿಕೊಂಡಾಗ ಮಾತ್ರ ಅದು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರುಡ್‌ಸೆಟ್ ಸಂಸ್ಥೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಿ ಯುವಕರನ್ನು ಸ್ವ ಉದ್ಯೋಗದತ್ತ ಪ್ರೇರೇಪಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಹೇಳಿದರು. ತರಬೇತಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಕತಾರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಆಕಾಂಕ್ಷೆಗಳಿಗೆ ದೊಡ್ಡ ಮಟ್ಟದ ಉತ್ತೇಜನ ಸಿಕ್ಕಂತಾಗಿದೆ. ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿಗಳಾದ (ಶಿಕ್ಷಣ ಮತ್ತು ಸಾಂಸ್ಕೃತಿಕ) ಮಾನ್ಯ ಹರೀಶ್ ಪಾಂಡೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಭಾಷಾ ತರಗತಿಗಳ ಆರಂಭಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ಭರವಸೆ ಲಭಿಸಿದೆ. ಸಂಘದ ಅಧ್ಯಕ್ಷರಾದ ಮಾನ್ಯ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ, 2026-28ನೇ ಸಾಲಿನ ನೂತನ ಸಮಿತಿಯು ತನ್ನ ಪದಾಧಿಕಾರಿಗಳನ್ನು ಪರಿಚಯಿಸಿತಲ್ಲದೆ, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಕೈಗೊಳ್ಳಲಿರುವ ಶೈಕ್ಷಣಿಕ ಯೋಜನೆಗಳು, ವಿದ್ಯಾರ್ಥಿ ಒಕ್ಕೂಟ ಹಾಗೂ ಕನ್ನಡ ಭಾಷಾ ತರಗತಿಗಳ ಚೌಕಟ್ಟಿನ ಕುರಿತು ವಿವರವಾದ ಸುದೀರ್ಘ ಚರ್ಚೆ ನಡೆಸಿತು. ಈ ಸಭೆಯು ಕನ್ನಡಿಗರಿಗೆ ಅತ್ಯಂತ ಸಕಾರಾತ್ಮಕ ಫಲಿತಾಂಶವನ್ನು ನೀಡಿದ್ದು, ಮುಂದಿನ ಪೀಳಿಗೆಯ ಮಕ್ಕಳಲ್ಲಿ ಸಾಂಸ್ಕೃತಿಕ ಬೇರುಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಂತಾರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ಸಮಾಜಕ್ಕೆ ತನ್ನದೆ ಆದ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಾ ಬಂದಿದೆ ಈ ದಿಸೆಯಲ್ಲಿ ಹಂಗಾರಕಟ್ಟೆ ರೋಟರಿ ಕ್ಲಬ್ ಆರೋಗ್ಯ, ಶಿಕ್ಷಣ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಇದು ಶ್ಲಾಘನೀಯ ಕಾರ್ಯ ಎಂದು ರೋಟರಿ ಕ್ಲಬ್ ನಿಕಟಪೂರ್ವ ಗವರ್ನರ್ ಸಿ.ಎ. ದೇವ್ ಆನಂದ್ ಅಭಿಪ್ರಾಯಪಟ್ಟರು. ಅವರು ಬುಧವಾರ ಬ್ರಹ್ಮಾವರ ಹೋಟೆಲ್ ಅಶ್ರಯದಲ್ಲಿ ನಡೆದ ಹಂಗಾರಕಟ್ಟೆ – ಸಾಸ್ತಾನ ರೋಟರಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ಇದೇ ವೇಳೆ ಹಂಗಾರಕಟ್ಟೆ- ಸಾಸ್ತಾನ ರೋಟರಿಯ ನೂತನ ಅಧ್ಯಕ್ಷರಾಗಿ ಕುಸುಮಾ ಮನೋಜ್ ಹಾಗೂ ಕಾರ್ಯದರ್ಶಿಯಾಗಿ ಕೆ. ರಾಜಾರಾಮ್ ಐತಾಳ್ ಅಧಿಕಾರ ಸ್ವೀಕರಿಸಿದರು. ಮುಖ್ಯ ಅತಿಥಿಗಳಾಗಿ 2026-27ನೇ ಸಾಲಿನ ಸಹಾಯಕ ಗವರ್ನರ್ ವಿಜಯ ಕುಮಾರ್ ಶೆಟ್ಟಿ, 2026-27ನೇ ಸಾಲಿನ ವಲಯ ಪ್ರತಿನಿಧಿ ಸೀತಾರಾಮ ಎಸ್. ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ ಸ್ವಾಗತಿಸಿದರು. ನಿಕಟಪೂರ್ವ ಕಾರ್ಯದರ್ಶಿ ಮುರಳಿಧರ ನಾಯರಿ ವರದಿ ಮಂಡಿಸಿದರು.…
