Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ ಸಹಯೋಗದಲ್ಲಿ ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಮಕ್ಕಳಿಗೆ ಆಟಿಕೆ ಹಾಗೂ ಕಲಿಕಾ ಸಾಮಗ್ರಿಯನ್ನು ವಿತರಿಸಲಾಯಿತು. ಬೈಂದೂರು ರೋಟರಿ ಕ್ಲಬ್‌ ಅಧ್ಯಕ್ಷ ಅರುಣ್ ಕುಮಾ‌ರ್ ಶಿರೂರು ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್‌ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿದರು. ಮಾಜಿ ಸಹಾಯಕ ಗವರ್ನರ್ ಐ. ನಾರಾಯಣ ಕಾರ್ಯದರ್ಶಿ ಮಣಿಕಂಠ ಬೈಂದೂರು, ಸದಸ್ಯನಾರಾಯಣ ದೇವಾಡಿಗ, ಬೈಂದೂರು ಸೇವಾ ಸಂಗಮದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಸೇವಾ ಸಂಗಮದ ಕಾರ್ಯದರ್ಶಿ ರಾಜೇಶ್ ಐತಾಳ್, ರವೀಂದ್ರು ಶ್ಯಾನುಭಾಗ್‌ ಹಾಗೂ ಸೇವಾ ಸಂಗಮದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಂಗನವಾಡಿ ಕೇಂದ್ರಗಳು ಮಗುವಿನ ಮನೋವಿಕಾಸದ ಕೇಂದ್ರಗಳಾಗಬೇಕು ಆಗ ಮಾತ್ರ ಅಂಗನವಾಡಿ ಕೇಂದ್ರಗಳು ಭವಿಷ್ಯಕ್ಕೆ ಮುನ್ನುಡಿ ಬರೆಯಲು ಸಾಧ್ಯ. ಈ ದಿಸೆಯಲ್ಲಿ ಕಲ್ಮಾಡಿ ಅಂಗನವಾಡಿ ಕೇಂದ್ರ ಅಭಿವೃದ್ಧಿಯತ್ತ ದಾಪುಗಾಲು ಇರಿಸಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕಾರಂತ ಥೀಂ ಪಾಕ್೯ನಲ್ಲಿರುವ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರ ಎಲ್ ಕೆಜಿ, ಯುಕೆಜಿ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದರು. ಪ್ರಾಥಮಿಕ ಹಂತದಲ್ಲಿ ಮಗುವಿಗೆ ನೈಜ ಸಂಸ್ಕಾರಭರಿತ ಶಿಕ್ಷಣ ನೀಡುವ ಜೊತೆಗೆ   ಶಿಕ್ಷಕಿಯ ನಡುವೆ ತಾಯ್ತನದ ಸಂಬಂಧವನ್ನು ಗಟ್ಟಿಗೊಳಿಸುತ್ತದೆ. ಅದೇ ರೀತಿ ಕಾರಂತ ಥೀಮ್ ಪಾಕ್೯ನಲ್ಲಿರುವ ಕಲ್ಮಾಡಿ ಅಂಗನವಾಡಿ ಕೇಂದ್ರ ಪ್ರಸಿದ್ಧ ಪಡೆದು ಸಾಕಷ್ಟು ಮಕ್ಕಳನ್ನು ತನ್ನತ್ತ ಆಕರ್ಷಿಸಿ ಮೇಲ್ದರ್ಜೆಯ ಕೇಂದ್ರವಾಗಿಸಿಕೊಂಡಿದೆ ಇದು ಶ್ಲಾಘನೀಯ ಕಾರ್ಯ ಎಂದರು. ಎಲ್ ಕೆಜಿ ,ಯುಕೆಜಿ ಕೇಂದ್ರವನ್ನು ಕಾರಂತ ಪ್ರತಿಷ್ಠಾನದ ಸದಸ್ಯ ಎಂ. ಸುಬ್ರಾಯ ಆಚಾರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು NEET–2026 ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಒಂದೇ ಕ್ಯಾಂಪಸ್‌ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ ವ್ಯಾಸಂಗ ಮಾಡಿದ 21 ವಿದ್ಯಾರ್ಥಿಗಳು 99 ಪರ್ಸಂಟೈಲ್‌ಗಿಂತ ಅಧಿಕ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿತಂದಿದ್ದಾರೆ. ಆಳ್ವಾಸ್‌ನ ಸೂರ್ಯಕಾಂತ್ ಪಾಟೀಲ್ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 97ನೇ ರ‍್ಯಾಂಕ್, ಚೇತನ್ ಯರನಾಳ್ 239ನೇ ರ‍್ಯಾಂಕ್, ಕ್ಲಾರೆನ್ಸ್ ಡಿ’ಸೋಜಾ 724 ರ‍್ಯಾಂಕ್ ಹಾಗೂ ದೀಕ್ಷಿತಾ ಕೆ.ಎಸ್ 951 ರ‍್ಯಾಂಕ್‌ಗಳಿಸಿ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್‌ನ 10 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕಗಳನ್ನು, 161 ವಿದ್ಯಾರ್ಥಿಗಳು 500ಕ್ಕೂ ಅಧಿಕ ಅಂಕಗಳನ್ನು ಪಡೆದಿದ್ದಾರೆ. ಒಟ್ಟು 467 ವಿದ್ಯಾರ್ಥಿಗಳು 450ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು, ಈ ಪೈಕಿ 450ಕ್ಕೂ ಅಧಿಕ ವಿದ್ಯಾರ್ಥಿಗಳು ಸರಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆಯುವ ಸಾಧ್ಯತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-2026) ಫಲಿತಾಂಶ ಪ್ರಕಟಗೊಂಡಿದ್ದು ಗ್ರಾಮೀಣ ಭಾಗದ ಹೆಮ್ಮಾಡಿಯ ಜನತಾ ಪಿಯು ಕಾಲೇಜ್ ವಿದ್ಯಾರ್ಥಿಗಳು ಅತ್ಯುತ್ತಮ ಅಂಕ ಪಡೆದು ವಿಶಿಷ್ಟ ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳಾದ ಸಾನಿಕ ಎಸ್ ದೇವಾಡಿಗ 576 (98.98)ಪರ್ಸೆಂಟೈಲ್, ಮನೀತ್ 539 (97. 64) ಪರ್ಸೆಂಟೈಲ್,ಧೀರಜ್ ಜಿ.ಡಿ 527(97.05)ಪರ್ಸೆಂಟೈಲ್, ಹಾಗೂ ಪ್ರೀತಿಕಾ ಮತ್ತು ಇಂಚರ 500ಕ್ಕೂ ಅಧಿಕ ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಭೋಧಕ ಭೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಪ್ರಕಟಗೊಂಡ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-2026) ಫಲಿತಾಂಶದಲ್ಲಿ ಕುಂದಾಪುರದ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಅಭೂತಪೂರ್ವ ಕೀರ್ತಿ ತಂದಿದ್ದಾರೆ. ಕೇವಲ 8 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ತನ್ನ ಮೊದಲ ಪ್ರಯತ್ನದಲ್ಲೇ ಕುಂದಾಪುರ, ಬೈಂದೂರು, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕುಗಳ ಎಲ್ಲಾ ಪಿಯು ಕಾಲೇಜುಗಳಿಗಿಂತ ಅತ್ಯುತ್ತಮವಾದ ಫಲಿತಾಂಶ ಪಡೆದು ಅಗ್ರಸ್ಥಾನದಲ್ಲಿದೆ. ಈ ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಯಾದ ಸಮ್ಮೇದ ಪಾರೀಸ ಬೋಜ 720ಕ್ಕೆ 579 ಅಂಕ (ALL INDIA RANK 2135*) ಪಡೆದು ಶ್ರೇಷ್ಠ ಸಾಧನೆ ಮಾಡಿದ್ದಾರೆ. ಗ್ರಾಮೀಣ ಪ್ರತಿಭೆ ಸಮ್ಮೇದ ಪಾರೀಸ ಬೋಜ ALL INDIA RANK ಸಾಧನೆ:ಕಾಲೇಜಿನ ವಿದ್ಯಾರ್ಥಿಯಾದ ಸಮ್ಮೇದ ಪಾರೀಸ ಬೋಜ ಒಟ್ಟು 720 ಅಂಕಗಳಿಗೆ 579 ಅಂಕ ಪಡೆದು ALL INDIA RANK ಪಡೆಯುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಅತ್ಯಂತ ಗ್ರಾಮೀಣ ಹಿನ್ನೆಲೆಯಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ನೂತನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ ಶೆಟ್ಟಿ ಅವರು ವಿದ್ಯಾರ್ಥಿ ನಾಯಕರುಗಳನ್ನುದ್ದೇಶಿಸಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಪ್ರಾಢಶಾಲೆಯ ಹಂತದಲ್ಲೇ ನಾಯಕತ್ವದ ಜವಾಬ್ದಾರಿಯನ್ನು ವಹಿಸುವ ಮೂಲಕ ಅವರಲ್ಲಿ ವಿವಿಧ ಕೌಶಲ್ಯಗಳನ್ನು ಉತ್ತೇಜಿಸಲು ಅನುಕೂಲವಾಗುತ್ತದೆ. ಶಿಸ್ತು, ಸಹಕಾರ, ತಾಳ್ಮೆ, ಪರೋಪಕಾರದ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲು ಇದು ಅತ್ಯುತ್ತಮ ಅವಕಾಶವಾಗಿದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿರುವುದರಿಂದ ಅವರಿಗೆ ಕಲಿಕೆಯ ಹೆಚ್ಚಿನ ಅವಕಾಶಗಳನ್ನು ಶಾಲೆ ಒದಗಿಸಬೇಕು” ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ “ನಮ್ಮ ದೇಶವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು ನಮ್ಮ ಧ್ಯೇಯವಾಗಿದೆ. ಚುನಾವಣಾ ವಿಧಾನದ ಮೂಲಕ ವಿದ್ಯಾರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗಿದೆ. ವೃದ್ಧರು, ವಿಶೇಷ ಚೇತನರು, ಗರ್ಭಿಣಿಯರು, ಅಶಕ್ತರು ಒಂದು ಫ್ಲಾಟ್ ಫಾರಂನಿಂದ ಮತ್ತೊಂದು ಫ್ಲಾಟ್ ಫಾರಂಗೆ ಸುಲಭವಾಗಿ ಸಂಚರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕೊಂಕಣ ರೈಲ್ವೆ ವತಿಯಿಂದ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಸುಮಾರು 2.26 ಕೋಟಿ ರೂ. ವೆಚ್ಚದಲ್ಲಿ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದ 1 ಮತ್ತು 2ನೇ ಫ್ಲಾಟ್ ಫಾರಂನಲ್ಲಿ ಹೊಸದಾಗಿ ಅಳವಡಿಸಲಾದ ಲಿಫ್ಟ್ ಗಳನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿರುವ ಉಡುಪಿಗೆ ಹೊರರಾಜ್ಯ, ಜಿಲ್ಲೆಗಳಿಂದ ಶಿಕ್ಷಣ, ವೈದ್ಯಕೀಯ ಸೌಲಭ್ಯ, ಪ್ರವಾಸ ಸೇರಿದಂತೆ ಮತ್ತಿತರ ಕಾರ್ಯಗಳಿಗಾಗಿ ಜನರು ಆಗಮಿಸುತ್ತಾರೆ ಹಾಗೂ ಅನ್ಯಕಾರ್ಯಗಳ ನಿಮಿತ್ತ ಬೇರೆಡೆಗೆ ತೆರಳಲು ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ರೈಲು ಸೇವೆಯನ್ನು ಬಳಸುತ್ತಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮವು ಗುರುವಾರ ನಡೆಯಿತು. ನಾಯಕತ್ವ ಗುಣವನ್ನು ಬೆಳೆಸಿಕೊಂಡು ಸುಸ್ಥಿರ ಸಮಾಜದ ರಚನೆಗೆ ಪ್ರೇರಣೆ ನೀಡುವ ಈ ಕಾರ್ಯಕ್ರಮವನ್ನು ಕುಂದಾಪುರ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಅನೂಪ್ ನಾಯಕ್ ಅವರು ಉದ್ಘಾಟಿಸಿ ಮಾತನಾಡಿ, ಜನಸೇವೆಯೇ ಜನಾರ್ದನ ಸೇವೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಶಿಸ್ತು ಮತ್ತು ಸಂಯಮವನ್ನ ಪಾಲಿಸಿ, ಕಾನೂನು ವ್ಯವಸ್ಥೆ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ವಿದ್ಯಾರ್ಥಿ ಸಂಸತ್ತಿನಲ್ಲಿ ಕಲಿತ ಪಾಠ ಮುಂದೆ ಜೀವನದಲ್ಲಿಯೂ ಅಮೂಲ್ಯ ಪಾತ್ರವನ್ನು ವಹಿಸಬೇಕು. ಕಾನೂನು ವ್ಯವಸ್ಥೆಯನ್ನು ಕಾಪಾಡುವಲ್ಲಿ ಸಾಮಾನ್ಯರಿಗೆ ಪೊಲೀಸ್ ಅಂದರೆ ಭಯವಿರದೆ ಭರವಸೆ ಎಂಬ ಭಾವವಿರಬೇಕೆಂದರು. ಸಭಾಧ್ಯಕ್ಷತೆ ವಹಿಸಿದ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಅವರು ಮಾತನಾಡಿ, ನಾವು ರೂಢಿಸಿಕೊಂಡ ಶಿಸ್ತು ನಮ್ಮ ಜೀವನವನ್ನು ಪಾವನವಾಗಿಸುತ್ತದೆ. ವಿದ್ಯಾರ್ಥಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತರೆ ಉತ್ತಮವಾಗಿ ಬದುಕಲು ಸಾಧ್ಯ. ವಿದ್ಯಾರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಡೆಸಿದ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ಹೆಗ್ಡೆ ಹೆಚ್.ಡಿ 99.8900442 ಪರ್ಸಂಟೈಲ್‌ ನೊಂದಿಗೆ 641 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 772 ನೇ ರ‍್ಯಾಂಕ್‌, ತೇಜಸ್ ಆರ್ .ಬಿ 99.7945892 ಪರ್ಸಂಟೈಲ್‌ನೊಂದಿಗೆ 626 ಅಂಕಗಳನ್ನು ಗಳಿಸಿ, ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 103ನೇ ರ‍್ಯಾಂಕ್‌, ಧ್ರುವ ವಿ. ಬಿ. 99.6808332 ಪರ್ಸಂಟೈಲ್‌ ನೊಂದಿಗೆ 614 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 668ನೇ ರ‍್ಯಾಂಕ್‌, ಲೇಖನ್ ಕಾರಿಯಪ್ಪ ಎಂ ಡಿ 99.6687826 ಪರ್ಸೆಂಟೇಲ್ ನೊಂದಿಗೆ 613 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 678 ರ‍್ಯಾಂಕ್‌, ಆರ್ಯ ವಿ 99.5818322 ಪರ್ಸಂಟೈಲ್ ನೊಂದಿಗೆ 606 ಅಂಕ, ಮೋಕ್ಷಾ ಬಿ. ಎಂ 99.5671273 ಪರ್ಸಂಟೈಲ್ ನೊಂದಿಗೆ 605 ಅಂಕಗಳಿಸಿ ಅಭೂತಪೂರ್ವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಮೂರ್ತೆದಾರರ ಸಹಕಾರಿ ಸಂಘದ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಅವರಿಗೆ ಪ್ರಾಜೆಕ್ಟರ್ ಕೊಡುಗೆಯನ್ನು ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀ ನಾರಾಯಣ, ಮುಖ್ಯ ಶಿಕ್ಷಕಿ ಗ್ರೇಸಿ ಬಾಂಜಿ, ಕೋಟ ಮೂರ್ತೆದಾರರ ಸಹಕಾರಿ ಸಂಘದ ಸಿಇಓ ಜಗದೀಶ್ ಕೆಮ್ಮಣ್ಣು, ಶಾಖಾ ವ್ಯವಸ್ಥಾಪಕರಾದ ಉದಯ ಪೂಜಾರಿ, ನಿರ್ದೇಶಕರಾದ ಪ್ರಭಾವತಿ ಡಿ ಬಿಲ್ಲವ, ಶಾಲಾ ಹಿತರಕ್ಷಣಾ ಸಮಿತಿಯ ನಂದಕಿಶೋರ್, ನಾಗರಾಜ್ ಶೆಟ್ಟಿ, ತಾರನಾಥ ಪೂಜಾರಿ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಅಧ್ಯಕ್ಷ ಸುಶೀಲ್ ಬೋಳಾರ್, ಕಾರ್ಯದರ್ಶಿ ಟಿ ಆರ್ ದೊಡ್ಡಮನಿ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ನೇಜಾರ್ ಲೀಜನ್‌ನ ಅಧ್ಯಕ್ಷರಾದ ಮಿತ್ರಕುಮಾರ್ ಉಪಸ್ಥಿತರಿದ್ದರು.

Read More