ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಸಹಕಾರ ವ್ಯವಸ್ಥೆಯಲ್ಲಿ ಮಾದರಿ ಸಂಸ್ಥೆಯಾಗಿ ರೂಪುಗೊಂಡು ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವುದು ಸಂತಸದ ಸಂಗತಿಯಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಹೇಳಿದರು. ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇದರ ಸುವರ್ಣ ಸಂಭ್ರಮಕ್ಕೆ ಚಾಲನೆ ಹಾಗೂ ಸಂಸ್ಥಾಪಕರ ದಿನಾಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ರಂಗದಲ್ಲಿ ಪ್ರಕಾಶ್ಚಂದ್ರ ಶೆಟ್ಟಿ ಅವರು ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಮರೆತು ಗುರುತಿಸುವ ವ್ಯಕ್ತಿತ್ವದವರಾಗಿದ್ದಾರೆ. ಖಂಬದಕೋಣೆ ಸಹಕಾರಿಯ ಬಲವರ್ಧನೆಯಲ್ಲಿ ಅವರ ಕೊಡುಗೆ ದೊಡ್ಡದಿದೆ ಎಂದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಷ್ಟದಲ್ಲಿದ್ದ ಸಂಸ್ಥೆಯನ್ನು ಸದಸ್ಯರು, ಸಿಬ್ಬಂದಿಗಳ ನಿರಂತರ ಸಹಕಾರ ಮೂಲಕ ಲಾಭದಾಯಕ ಸಂಸ್ಥೆಯನ್ನಾಗಿ ಮಾಡಲಾಗಿದೆ. ಸಹಕಾರ ವ್ಯವಸ್ಥೆಯಲ್ಲಿ ಸಂಸ್ಥೆಯನ್ನು ಗಟ್ಟಿಗೊಳಿಸುವಲ್ಲಿ ನಿರಂತರವಾಗಿ ಶ್ರಮಿಸಲಾಗಿದೆ. ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆ ರೈತ ಸಿರಿ ಅಗ್ರಿ ಮಾಲ್ ಯೋಜನೆಯನ್ನು ಇನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಸ್ಪರ್ಧೆಗಳು ನಡೆಯಿತು. ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಶಾಲಾ ಆಡಳಿತ ನಿರ್ದೇಶಕರಾದ ಹರೀಶ್ ಮರವಂತೆ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಶ್ರೀ ಕೃಷ್ಣ, ರಾಧೆಯ ವೇಷಭೂಷಣ ಧರಿಸಿ ನೃತ್ಯ ಮಾಡುವುದರ ಮೂಲಕ ಎಲ್ಲರ ಗಮನ ಸೆಳೆದರು. ಪುಟ್ಟ ಮಕ್ಕಳು ಕೃಷ್ಣನ ಬಾಲಲೀಲೆಗಳನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ಹಾಗೆಯೇ ಪ್ರಾಥಮಿಕ, ಪ್ರೌಢ, ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ ಹಗ್ಗ ಜಗ್ಗಾಟ ಸರ್ಧೆಯನ್ನು ಆಯೋಜಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಹಾಗೂ ಶಿಕ್ಟಕರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ನೆರವೇರಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವಸ್ಥಾನ ಗಂಗೊಳ್ಳಿ ಇದರ ನೂತನ ಶಿಲಾಮಯ ದೇವಾಲಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ಸಂಪನ್ನಗೊಂಡಿತು. ನೂತನ ಶಿಲಾಮಯ ದೇಗುಲ ನಿರ್ಮಾಣದ ಅಂಗವಾಗಿ ಮನೆ ಮನೆಯಲ್ಲಿ ಭಕ್ತಿಪೂರ್ವಕವಾಗಿ ಪೂಜಿಸಿದ ಅಡಿಗಲ್ಲಿನ ಶಿಲೆಯನ್ನು ಗಂಗೊಳ್ಳಿಯ ಶ್ರೀ ವೀರ ವಿಠಲ ದೇವಸ್ಥಾನದ ಬಳಿಯಿಂದ ಶ್ರೀ ವೀರೇಶ್ವರ ದೇವಾಲಯದ ತನಕ ಮರವಣಿಗೆಯಲ್ಲಿ ತಂದು ಶಿಲಾನ್ಯಾಸ ಮಾಡಲಾಯಿತು. ತಂತ್ರಿಗಳಾದ ಪ್ರೀತಮ್ ಪುತ್ತೂರಾಯ ನೇತೃತ್ವದಲ್ಲಿ ಪುರೋಹಿತರಿಂದ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಶ್ರೀ ಕ್ಷೇತ್ರ ಶೃಂಗೇರಿ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ ಅಡಿಗ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ದೇವಸ್ಥಾನದ ಪ್ರಧಾನ ಅರ್ಚಕ ಜಿ.ಲಕ್ಷ್ಮೀನಾರಾಯಣ ಭಟ್, ಜಿ.ರವೀಶ್ ಭಟ್, ದೀಪಕ ಕುಮಾರ್ ಶೆಟ್ಟಿ, ಪ್ರಣಯ್ ಕುಮಾರ್ ಶೆಟ್ಟಿ, ಉದ್ಯಮಿ ಜಿ. ಕೇಶವ ಶೇರುಗಾರ್, ದುರ್ಗರಾಜ್ ಪೂಜಾರಿ, ಶಿಲ್ಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಮನುಷ್ಯ ಸತ್ವಗುಣದ ಸೃಷ್ಟಿ, ಹುಲಿ ಭೇಟೆಯಾಡುವುದನ್ನು ಬಿಟ್ಟು ತಪ್ಪಸ್ಸನ್ನು ಮಾಡಿದರೆ ಅದು ವಿಚಿತ್ರ ಎನಿಸುತ್ತದೆ. ಹಾಗೆಯೇ ಮನುಷ್ಯನು ಪ್ರಾಣಿಗಳಂತೆ ಬದುಕಬಾರದು, ಗಿಡಮರಗಳಂತೆ ನಿತ್ಯ ಜಾಢ್ಯದಿಂದ ನಿದ್ರೆಯಲ್ಲೂ ಕಳೆಯಬಾರದು. ಮನುಷ್ಯ ಅರಿವು – ಆನಂದ – ದಯೆ – ಕರುಣೆಗಳಿಂದ ಕೂಡಿದ ಬದುಕನ್ನು ಬಾಳಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಗುರುವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಆಹಾರದ ಚರಾಚರರೂಪಗಳ ಬಗ್ಗೆ ಪ್ರವಚನ ಅನುಗ್ರಹಿಸಿದ ಶ್ರೀಗಳು, ಆಹಾರ ಪ್ರಪಂಚವನ್ನು ಹತ್ತಾರು ಬಗೆಯಲ್ಲಿ ಎರಡು ಗುಂಪುಗಳಾಗಿ ವಿಂಗಡಿಸಬಹುದು. ಆಯುರ್ವೇದದ ಆಚಾರ್ಯರು ಆಹಾರವನ್ನು ಪ್ರಮುಖವಾಗಿ ಎರಡು ವಿಧವಾಗಿ ವಿಂಗಡಿಸಿ ಸ್ಥಾವರ ಹಾಗೂ ಜಂಗಮ ಎಂದು ಕರೆದಿದ್ದಾರೆ. ಸ್ಥಾವರ ವಿಭಾಗವನ್ನು ಸಸ್ಯಜನ್ಯ ಹಾಗೂ ಜಂಗಮ ವಿಭಾಗವನ್ನು ಪ್ರಾಣಿಜನ್ಯ ಎನ್ನಬಹುದಾಗಿದೆ. ಸ್ಥಾವರವನ್ನು ಮತ್ತೆ ನಾಲ್ಕು ಬಗೆಯಲ್ಲಿ ವಿಭಾಗಿಸಿದ್ದು, ಹೂವಿಲ್ಲದೇ ಹಣ್ಣು ಬಿಡುವ ವನಸ್ಪತಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾದ ನಿವೃತ್ತ ಕನ್ನಡ ಶಿಕ್ಷಕ ಕರುಣಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಅಷ್ಟಾಂಗ ಯೋಗದ ಬಗ್ಗೆ ವಿವರಿಸಿ, ಪ್ರಾತ್ಯಕ್ಷಿಕೆಯೊಂದಿಗೆ ಯೋಗದ ಮಹತ್ವ ಮತ್ತು ವಿವಿಧ ಆಸನಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕರಾದ ಚಂದ್ರಶೇಖರ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಘಟಕ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಂಚಾಲಕರಾದ ರಾಜೇಶ್ ಹೆಬ್ಬಾರ್ ಉಪನ್ಯಾಸಕರು, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹ ಕಾರ್ಯಕ್ರಮ ಅಧಿಕಾರಿ ಸುಕೇಶ್ ಚಂದ್ರಶೇಖರ್, ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಆಸ್ತಿಕ್ ಆರ್ ಗಾಣಿಗ ಮತ್ತು ಕಾರ್ಯದರ್ಶಿ ವೈಷ್ಣವಿ ಬಿಲ್ಲವ, ಬಾಯ್, ಭಾರತೀಯ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು, ಎನ್ಎಸ್ಎಸ್ ಸ್ವಯಂಸೇವಕರು, ರೇಂಜರ್ಸ್ ಮತ್ತು ಲವರ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ ಬೆಳೆಯಲ್ಲಿ ಕಂಡು ಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೊಟಗಾರಿಕೆ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲುತುತ್ತು ಮತ್ತು ಎಲೆಚುಕ್ಕೆ ರೋಗಕ್ಕೆ ಶಿಫಾರಸ್ಸು ಮಾಡಿರುವ ಸಸ್ಯಸಂರಕ್ಷಣಾ ಔಷಧಿ ಖರೀದಿಗೆ ಪ್ರತಿ ಹೆಕ್ಟೇರಿಗೆ ರೂ. 3000(ಕೇಂದ್ರದ ಪಾಲು ರೂ.1500 ಹಾಗೂ ರಾಜ್ಯದ ಪಾಲು ರೂ.1500) ಹಾಗೂ ಗರಿಷ್ಠ 2 ಹೆಕ್ಟೇರ್‌ಗಳಿಗೆ ರೂ.6000 ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು, ಆಸಕ್ತ ರೈತರು ತಾವು ಖರೀದಿಸಿರುವ ಅಧಿಕೃತ ಬಿಲ್ಲಿನೊಂದಿಗೆ ಆರ್.ಟಿ.ಸಿ., ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ ಕಚೇರಿಯನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಬೈಂದೂರಿನ ಸೈಂಟ್ ಥಾಮಸ್ ಶಾಲೆಯಲ್ಲಿ ‘ಮುದ್ದು ಕೃಷ್ಣ–ಮುದ್ದು ರಾಧೆ’ವೇಷಭೂಷಣ ಸ್ಪರ್ಧೆಯನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವು ಮಕ್ಕಳ ಸೃಜನಶೀಲತೆ, ಪ್ರತಿಭೆ ಹಾಗೂ ಭಾರತೀಯ ಸಂಸ್ಕೃತಿಯ ಸೊಬಗನ್ನು ಅನಾವರಣಗೊಳಿಸಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದಯವಾಣಿ ಪತ್ರಿಕೆಯ ವರದಿಗಾರರು, ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ಘಟಕದ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್ ಬೈಂದೂರಿನ ಅಧ್ಯಕ್ಷರಾದ ಅರುಣ್ ಕುಮಾರ್ ಉಪಸ್ಥಿತರಿದ್ದರು. ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನರ್ಸರಿಯಿಂದ ಪ್ರೀ-ಪ್ರೈಮರಿ, 1ನೇ ಮತ್ತು 2ನೇ ತರಗತಿ ಹಾಗೂ 3ನೇಯಿಂದ 5ನೇ ತರಗತಿಯವರೆಗೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಕೃಷ್ಣ ಮತ್ತು ರಾಧೆಯ ವೇಷದಲ್ಲಿ ಕಂಗೊಳಿಸಿದರು. ಮುದ್ದಾದ ಕೃಷ್ಣನ ವೇಷದಲ್ಲಿ ಕೊಳಲು ಹಿಡಿದು ಬಂದ ಪುಟಾಣಿ ಮಕ್ಕಳು ಹಾಗೂ ರಾಧೆಯ ವೇಷದಲ್ಲಿ ಮಿಂಚಿದ ಬಾಲಕಿಯರು ಎಲ್ಲರ ಗಮನ ಸೆಳೆದರು. ಮಕ್ಕಳ ಅಭಿನಯ, ವೇಷಭೂಷಣ ಮತ್ತು ಆತ್ಮವಿಶ್ವಾಸಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು. “ಮಕ್ಕಳ ಪ್ರತಿಭೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರೈತರು ಕೃಷಿ ಸೇರಿದಂತೆ ಹೈನುಗಾರಿಕೆ ಚಟುವಟಿಕೆ ಕೈಗೊಳ್ಳಲು ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಅರ್ಹರಿಗೆ ಸಮರ್ಪಕವಾಗಿ ಒದಗಿಸಿ, ಅವರು ಆರ್ಥಿಕವಾಗಿ ಸ್ವಾವಲಂಭಿಗಳಾಗಲು ಪ್ರೋತ್ಸಾಹಿಸುವ ಕಾರ್ಯವನ್ನು ಬ್ಯಾಂಕುಗಳು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದ್ದಾರೆ. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರದ ವಿವಿಧ ಯೋಜನೆಗಳಡಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ನೆರವು ಕೋರಿ ಬ್ಯಾಂಕುಗಳಿಗೆ ಬರುವ ರೈತರು, ಸಾರ್ವಜನಿಕರು ಹಾಗೂ ಮಹಿಳಾ ಫಲಾನುಭವಿಗಳೊಂದಿಗೆ ಸೌಹಾರ್ದತವಾಗಿ ನಡೆದು ಕೊಳ್ಳುವುದರೊಂದಿಗೆ ಅವರುಗಳು ನೆರವು ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದರು. ಸೈಬರ್ ವಂಚನೆ ಬಗ್ಗೆ ಅರಿವು:ಹಣಕಾಸಿನ ವಂಚನೆಯನ್ನು ತಡೆಗಟ್ಟಲು ವಹಿವಾಟು ಉದ್ದೇಶಗಳಿಗಾಗಿ 1600 ಫೋನ್ ಸಂಖ್ಯೆ ಸರಣಿಯನ್ನು ಮಾತ್ರ ಬಳಸುವಂತೆ ಬ್ಯಾಂಕುಗಳಿಗೆ ಆರ್‌ಬಿಐ ನಿರ್ದೇಶನ ನೀಡಿದೆ. ಎಲ್ಲಾ ಬ್ಯಾಂಕುಗಳು ವಹಿವಾಟು-ಸಂಬಂಧಿತ ಕರೆಗಳಿಗೆ 1600ರಿಂದ ಪ್ರಾರಂಭವಾಗುವ ಫೋನ್ ಸಂಖ್ಯೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾಗಿರುವ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಆಗಿರುವ ಸಾಹಿತಿ ಬರಹಗಾರ ವಾಗ್ಮಿ ಬಹುರೂಪಿ ನರೇಂದ್ರ ಕುಮಾರ್ ಕೋಟ ಅವರಿಗೆ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ ಗುರುಭ್ಯೋ ನಮಃ, ಪುರಸ್ಕಾರ 2026 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವನ್ನು ಇದೆ ಸೆಪ್ಟೆಂಬರ್ 06ರಂದು ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳದಲ್ಲಿ ವಿತರಿಸಲಾಗುವುದೆಂದು ಪರಿಷತ್ತಿನ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರಣಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವೇದ, ಉಪನಿಷತ್ತು, ದರ್ಶನ, ಸಾಹಿತ್ಯ ಹಾಗೂ ಭಾರತೀಯ ಜ್ಞಾನ ಪರಂಪರೆಯ ಅಪಾರ ಸಂಪತ್ತನ್ನು ತನ್ನೊಳಗೆ ಅಡಕಗೊಳಿಸಿರುವ ಸಂಸ್ಕೃತವು ಕೇವಲ ಒಂದು ಪ್ರಾಚೀನ ಭಾಷೆಯಲ್ಲ, ಜಗತ್ತಿಗೆ ಜ್ಞಾನ ಮತ್ತು ಚಿಂತನೆಯ ಬೆಳಕು ನೀಡಿದ ಸಮೃದ್ಧ ಭಾಷೆಯಾಗಿದೆ ಎಂದು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಜಯಶಂಕರ್ ಕಂಗಣ್ಣಾರು ನುಡಿದರು. ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ವತಿಯಿಂದ ಬುಧವಾರ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ‘ಸಂಸ್ಕೃತದ ವಿಶ್ವ ವೈಭವ’ ಕುರಿತು ಮಾತನಾಡಿದ ಅವರು, ಸಂಸ್ಕೃತದ ಮಹತ್ವವನ್ನು ಭಾರತೀಯ ಜ್ಞಾನ ಪರಂಪರೆಯ ಹಿನ್ನೆಲೆಯಲ್ಲಿ ವಿವರಿಸಿದರು. ಸಂಸ್ಕೃತವು ವೇದಗಳ ಮೂಲಕ ಭಾರತೀಯ ಸಾಂಸ್ಕೃತಿಕ ಜಗತ್ತಿಗೆ ಶಾಂತಿ, ಸಹಬಾಳ್ವೆ ಮತ್ತು ಲೋಕಕಲ್ಯಾಣದ ಸಂದೇಶವನ್ನು ನೀಡಿದೆ. ‘ಸರ್ವೇ ಜನಾಃ ಸುಖಿನೋ ಭವಂತು’ ಎಂಬ ಆಶಯವು ಸಮಸ್ತ ಮಾನವಕುಲದ ಒಳಿತನ್ನು ಬಯಸುವ ಭಾರತೀಯ ಚಿಂತನೆಯ ಪ್ರತೀಕವಾಗಿದೆ. ಸಂಸ್ಕೃತ ಸಾಹಿತ್ಯ ಮತ್ತು ಜ್ಞಾನ ಪರಂಪರೆಯಲ್ಲಿ ವ್ಯಕ್ತಿಯ ಒಳಿತಿನೊಂದಿಗೆ ಜಗತ್ತಿನ ಕಲ್ಯಾಣಕ್ಕೂ ಮಹತ್ವ ನೀಡಲಾಗಿದೆ. ಸಂಸ್ಕೃತದಲ್ಲಿ…
