Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು. ದೀಪ ಪ್ರಜ್ವಲನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಸದಾಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯು. ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಅಮಿತಾ ಶೆಟ್ಟಿ ಮಾತನಾಡಿ, ಪ್ರತಿಭೆಗೆ ವೇದಿಕೆ ಸಿಕ್ಕಾಗ ಆತ್ಮ ವಿಶ್ವಾಸ ಅರಳುತ್ತದೆ.ಅನ್ವೇಷಣೆ, ಅಭಿವ್ಯಕ್ತಿ, ಧೈರ್ಯ ಈ ಮೂರು ಒಂದಾಗಿ ಸೇರಿದಾಗ ಸಾಧನೆಯಾಗಿ ರೂಪುಗೊಳ್ಳುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕಲೆ, ಸಂಸ್ಕೃತಿ ಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ. ಕೆ. ರಾಧಾಕೃಷ್ಣ ಶೆಣೈಯವರುವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ರಸಾಯನಶಾಸ್ತ್ರ ಉಪನ್ಯಾಸಕರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಇತಿಹಾಸ ಪ್ರಸಿದ್ಧ ದೇಗುಲವಾದ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ಅಭಿವೃದ್ಧಿ ಕಾರ್ಯದ ನಿಮಿತ್ತ ಸಭಾಭವನ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗಾಗಿ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಇವರ ಬಳಿ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಮನವಿ ನೀಡಿದರು. ಈ ವೇಳೆ ಮಾತನಾಡಿದ ಕುಂದರ್ ರಾಜ್ಯ ಸರಕಾರದ ಧಾರ್ಮಿಕದತ್ತಿ ಇಲಾಖೆಗೆ ಸಂಬಂಧಿಸಿದ ದಾಖಲೆಯನ್ನು ಒದಗಿಸಿದ್ದು ಶೀಘ್ರದಲ್ಲೇ ಸರಕಾರದ ಗಮನ‌ ಸೆಳೆದು ಅನುದಾನ ಬಿಡುಗಡೆಯಾಗುವಲ್ಲಿ ಸಹಕರಿಸಲು ಮನವಿ ನೀಡಿದರು. ಈ ವೇಳೆ ಮಾತನಾಡಿದ ಡಾ‌.ಆರತಿ ಕೃಷ್ಣ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿ. ತಿಮ್ಮ ಪೂಜಾರಿ, ದೇಗುಲದ ಟ್ರಸ್ಟಿಗಳಾದ ಸುಭಾಶ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ರತನ್ ಐತಾಳ್, ಶಿವ ಪೂಜಾರಿ, ಜ್ಯೋತಿ ಡಿ. ಕಾಂಚನ್ ಸೇರಿದಂತೆ ಅನೇಕರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಸದಸ್ಯರು ವಿವೇಕ ಪದವಿಪೂರ್ವ ಕಾಲೇಜಿನ ವಿಶ್ರಾಂತ ಹಿಂದಿ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಅವರ ಪಾರಂಪಳ್ಳಿ ಗೆಂಡೆ ಕೆರೆಯ ಮನೆಗೆ ತೆರಳಿ ಗೌರವ ಸಮರ್ಪಣೆ ನಡೆಸಿದರು. ರೋಟರಿ ಅಧ್ಯಕ್ಷೆ ಕುಸುಮಾ ಮನೋಜ್, ರೋಟರಿ ಸದಸ್ಯರುಗಳಾದ ಸಿ. ಚಂದ್ರ ನಾಯರಿ, ಮುರಳೀಧರ ನಾಯರಿ, ಬಾಲಕೃಷ್ಣ ಪೂಜಾರಿ, ಲೀಲಾವತಿ ಗಂಗಾಧರ, ಜಿ ಗಣೇಶ್, ಸಿ. ವೆಂಕಟೇಶ್ ಭಟ್, ಮನೋಜ್ ಕುಮಾರ್, ಕೆ. ಸುನಿಲ್, ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಜಿಲ್ಲೆ 3182ರಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅತ್ಯುತ್ತಮ ತಂಡಗಳಲ್ಲಿ ಒಂದಾಗಿ ಮೂಡಿಬಂದಿದ್ದು, ಉತ್ತಮ ಕ್ಲಬ್ ಪ್ರಶಸ್ತಿ ಸಹಿತ ಒಟ್ಟು 23 ಪ್ರಶಸ್ತಿಗಳನ್ನು ತನ್ನ ಬಗಲಿಗೆ ಹಾಕಿಕೊಂಡಿದೆ. ಹಾಸನದಲ್ಲಿ ನಡೆದ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3182ರ ಜಿಲ್ಲಾ ಸಮ್ಮೇಳನದಲ್ಲಿ 2025-26ನೇ ಸಾಲಿನ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಅವರು 2025-26ನೇ ಸಾಲಿನ ಗಂಗೊಳ್ಳಿ ರೋಟರಿ ಅಧ್ಯಕ್ಷ ಕೃಷ್ಣ ಪೂಜಾರಿ ಅವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. 2026-27ನೇ ಸಾಲಿನ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ, ಮಾಜಿ ಅಧ್ಯಕ್ಷರಾದ ಜನಾರ್ದನ ಪೂಜಾರಿ ಪೆರಾಜೆ ಮತ್ತು ಎಂ. ನಾಗೇಂದ್ರ ಪೈ, ರೋಟರಿ ಜಿಲ್ಲೆ 3182ರ ಪದಾಧಿಕಾರಿ, ವಿವಿಧ ವಲಯಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಲಯ-1ರ ಸಣ್ಣ ಕ್ಲಬ್ ವರ್ಗದಲ್ಲಿ ಸಮುದಾಯ ಸೇವೆ, ಸಹಭಾಗಿತ್ವ, ನೀರು, ನೈರ್ಮಲ್ಯ ಮತ್ತು ಸ್ವಚ್ಛತೆ, ತಾಯಿ ಮತ್ತು ಮಕ್ಕಳ ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಯುವಜನ ಕಲ್ಯಾಣ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೊಗವೀರ ಯುವ ಸಂಘಟನೆ ರಿ. ಹಾಲಾಡಿ ಶಂಕರನಾರಾಯಣ ಘಟಕ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿ ಇವರ ನೇತೃತ್ವದಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರನ್ನು ಅಭಿನಂದಿಸುವ ಕಾರ್ಯಕ್ರಮ ಆಯೋಜಿಸಲಾಯಿತು.  ಸುಮಾರು 24  ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಂಕರನಾರಾಯಣ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಾಗರಾಜ್ ಪುತ್ರನ್ ಹದ್ದೂರು ಮತ್ತು ಜ್ಯೋತಿ ಎನ್. ಪುತ್ರನ್ ಅವರನ್ನು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ರಾಗಿರುವ ಶರತ್ ಸೌಡ, ಕಾರ್ಯದರ್ಶಿ ರಂಜಿತ್ ಬೈಲೂರು, ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ರಾಘವೇಂದ್ರ ಶಂಕರನಾರಾಯಣ, ಜಿಲ್ಲಾ ಸಂಘಟನೆಯ ಮಾಜಿ ಅಧ್ಯಕ್ಷರು ಗಣೇಶ್ ಕಾಂಚನ್, ಜಿಲ್ಲಾ ಸಂಘಟನೆಯ ಕಾರ್ಯದರ್ಶಿ ಶೇಖರ್ ತೋಳಾರ್, ಬಿ. ಕೆ. ಶ್ರೀನಿವಾಸ್ ಸೌಡ, ರಂಜಿತ್ ಸೌಡ, ಜಗದೀಶ್ ಬಿದ್ಕಲ್ ಕಟ್ಟೆ, ನರಸಿಂಹ ಮೊಗವೀರ ಕೊಂಡಳ್ಳಿ, ಸಂತೋಷ್ ಮೊಗವೀರ ಎಣ್ಣೆಮಕ್ಕಿ, ಸಂದೀಪ್ ಮೊಗವೀರ ಮರ್ಜಿ, ಸುರೇಂದ್ರ ಮೊಗವೀರ ಬೈಲೂರು, ಆನಂದ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ ಮತ್ತು ಶಾಲಾ ಶಿಕ್ಷಣ ಇಲಾಖೆ ಬೈಂದೂರು ಇವರ ಆಶ್ರಯದಲ್ಲಿ  ವಂಡ್ಸೆ ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ 14 ಮತ್ತು 17ರ ವಯೋಮಿತಿ ಬಾಲಕ, ಬಾಲಕಿಯರ  ಕಬ್ಬಡಿ ಪಂದ್ಯಾಟ ಮೂಕಾಂಬಿಕಾ ಕ್ರೀಡಾಂಗಣ ಮಾವಿನಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಂಡ್ಲೂರು ಠಾಣಾಧಿಕಾರಿಗಳಾದ ನಿರಂಜನ್ ಗೌಡ ದೀಪ ಬೆಳಗಿಸುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ನಾಯಕ ನೇರಳಕಟ್ಟೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀಶ ಶೆಟ್ಟಿ, ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಾಡ್ಕಟು ಅಶೋಕ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಕುಶಲ ಶೆಟ್ಟಿ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಇಂಟರ್ಯಕ್ಟ್ ಕ್ಲಬ್ ಚೇರಮಾನ್ ಶೇಖರ ಎನ್. ಶೆಟ್ಟಿ, ಪ್ರಭಾರ ದೈಹಿಕ ಶಿಕ್ಷಣ ಅಧಿಕಾರ ಅರುಣ ಕುಮಾರ್ ಶೆಟ್ಟಿ, ರೋಟರಿ ಮಿಡ್ ಟೌನ್ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ,ದೈಹಿಕ ಶಿಕ್ಷಣ ಶಿಕ್ಷಕ ಸತೀಶ ಕುಮಾರ್ ಶೆಟ್ಟಿ ಉಪಸ್ಥಿತಿತರಿದರು. ಮುಖ್ಯೋಪಾಧ್ಯಾಯಿನಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆದರ್ಶ ಆಸ್ಪತ್ರೆ ಉಡುಪಿ ಮತ್ತು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾI ಎಸ್. ರಾಧಾಕೃಷ್ಣನ್‌ರ ಜನ್ಮ ಜಯಂತಿಯ ಅಂಗವಾಗಿ ನೀಡುವ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಕುಮಾರ್ ಅವರು ಭಾಜನರಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಮಗುವಿಗೆ ಹಿತವಲ್ಲದ ಆಹಾರವನ್ನು ತಾಯಿ ಅಡುಗೇ ಮನೆಯಲ್ಲಿ ಕಾಣದಂತೆ ಅಡಗಿಸಿಡುವಂತೆ, ಪ್ರಕೃತಿಯು ಜೀವಿಗೆ ಹಿತವಲ್ಲದ ಆಹಾರಗಳನ್ನು ನಮ್ಮಿಂದ ಆದಷ್ಟು ದೂರವಿಟ್ಟಿರುತ್ತದೆ. ನಮಗೆ ಹಿತವಾದದ್ದು ರಮಣೀಯವಾದರೆ, ಪ್ರಿಯ ಆಹಾರವನ್ನು ಮರಣೀಯ ಎನ್ನಬಹುದಾಗಿದೆ. ಹಾಗಾಗಿ ಪ್ರಿಯ ಹಾಗೂ ಹಿತ ಆಹಾರಗಳ ವ್ಯತ್ಯಾಸವನ್ನು ಗಮನಿಸಿ ಸ್ವೀಕರಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಔಷಧದ ಅಂಗಡಿಯಲ್ಲಿ ಅನೇಕ ಔಷಧಗಳಿರುತ್ತವೆ. ಆದರೆ ಎಲ್ಲವೂ ನಾವು ಸೇವಿಸಲು ಇರುವುದಲ್ಲ. ಹಾಗೆಯೇ ಸೃಷ್ಟಿಯಲ್ಲಿ ಅನೇಕ ಬಗೆಯ ಆಹಾರವಿದೆ. ಆದರೆ ಎಲ್ಲವೂ ನಮಗೆ ಸೂಕ್ತವಲ್ಲ. ನಮಗೆ ಸೂಕ್ತವಾದ ಆಹಾರವನ್ನು ಆಯುರ್ವೇದದಲ್ಲಿ ಹಿತಾಹಾರ ಎನ್ನಲಾಗಿದ್ದು, ಪ್ರಕೃತಿ ನಮಗಾಗಿ ಕೊಟ್ಟಿರುವುದನ್ನು ನಿಹಿತ ಎಂದರೆ, ಶಾಸ್ತ್ರಗಳು ಸೂಚಿಸಿರುವುದನ್ನು ವಿಹಿತ ಎಂದು ಕರೆಯಲಾಗಿದೆ ಎಂದು ಹಿತ – ಅಹಿತ ಆಹಾರಗಳ ಕುರಿತಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಕ್ತದಾನವು ಕೇವಲ ಸಾಮಾಜಿಕ ಸೇವೆಯಲ್ಲ. ಜೀವವೊಂದನ್ನು ಉಳಿಸುವ ಮಹತ್ವದ ಮಾನವೀಯ ಕಾರ್ಯವಾಗಿದೆ. ಯುವಜನರು ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕುಂದಾಪುರದ ಇಂಡಿಯನ್ ರೆಡ್‌ಕ್ರಾಸ್‌ ಸೊಸೈಟಿಯ ಅಧ್ಯಕ್ಷ ಜಯಕ‌ರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಬಿಹೈವ್ ಕನ್ವೆನ್ನನ್ ಹಾಲ್‌ನಲ್ಲಿ ಗುರುವಾರ ನಡೆದ ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯವು ಇಂಡಿಯನ್ ರೆಡ್ ಕ್ರಾಸ್‌ ಸೊಸೈಟಿ ಕುಂದಾಪುರದ ಸಹಯೋಗದಲ್ಲಿ ಯುವ ರೆಡ್‌ಕ್ರಾಸ್ ಘಟಕಗಳ ವತಿಯಿಂದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಯುವ ರೆಡ್‌ಕ್ರಾಸ್‌ ಘಟಕದ ಪಾತ್ರ ಮಹತ್ವದ್ದಾಗಿದೆ ಎಂದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯ ಆಸೀಫ್‌ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಬಗ್ಗೆ ಮಾತ್ರ ಯೋಚಿಸದೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಾವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಶೋಕ್‌ ತೆಕ್ಕಟ್ಟೆ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ದೊರಕಿದೆ. ಬೆಂಗಳೂರಿನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಶೋಕ್‌ ತೆಕ್ಕಟ್ಟೆ ಅವರು ಕಳೆದ 24 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿ, ಸಾಂಸ್ಕತಿಕ ವಿಕಸನ, ಕಲಿಕೆಯಲ್ಲಿ ನಾವಿನ್ಯತೆಯ ಶೋಧ, ಹೊಸ ಹೊಸ ಪ್ರಯೋಗಗಳ ಅನುಷ್ಠಾನದ ಮೂಲಕ ಶಾಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಮೂಡಿಸುವಲ್ಲಿ ಶ್ರಮಿಸಿದ್ದಾರೆ. ಇಂಗ್ಲೀಷ್ ಭಾಷೆಯ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳು ಮಾತ್ರವಲ್ಲದೆ ಬೇರೆ ಬೇರೆ ಶಾಲಾ ಶಿಕ್ಷಕರಿಗೂ ತರಬೇತಿ ನೀಡುತ್ತಿದ್ದಾರೆ. ರಾಜ್ಯದಲ್ಲೇ ಮೊದಲ ಬಾರಿಗೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಲ್ಯಾಂಗ್‌ಜ್ ಲ್ಯಾಬ್ ಸ್ಥಾಪನೆ, ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆ, ಪ್ರತಿ ದಿನದ ಬೆಳಿಗ್ಗೆ ಸ್ಪೋಕನ್ ಇಂಗ್ಲಿಷ್ ತರಗತಿ, 2015 ರಿಂದ ಪ್ರತಿ ದಿನ…

Read More