ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆನ್ಸ್ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಹಾಗೂ ಆಷಾಢ ಸಂಭ್ರಮ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಪದ್ಮಾ ರಾಘವೇಂದ್ರ ಭಾಗವಹಿಸಿ ಮಹಿಳೆಯರ ಸೇವಾ ಮನೋಭಾವ, ಸಂಘಟನಾ ಶಕ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳ ಮಹತ್ವದ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷ ಪ್ರಕಾಶ್ ಪೂಜಾರಿ ವಹಿಸಿ ಅವರು ನೂತನ ಅಧ್ಯಕ್ಷೆಯಾಗಿ ಆನ್. ಸಂಧ್ಯಾ ಪ್ರಕಾಶ್ ಹಾಗೂ ಕಾರ್ಯದರ್ಶಿಯಾಗಿ ಆನ್. ಪ್ರಮೀಳಾ ಶಿವರಾಜ್ ಅವರಿಗೆ ಪದಪ್ರದಾನ ಮಾಡಿ ಅಧಿಕಾರ ಹಸ್ತಾಂತರಿಸಿದರು. ಬಳಿಕ ನೂತನ ಅಧ್ಯಕ್ಷೆ ಆನ್. ಸಂಧ್ಯಾ ಪ್ರಕಾಶ್ ಸ್ವೀಕೃತಿ ಭಾಷಣ ಮಾಡಿ, ಸದಸ್ಯರ ಸಹಕಾರದೊಂದಿಗೆ ಸೇವಾ ಕಾರ್ಯಗಳನ್ನು ಮತ್ತಷ್ಟು ವಿಸ್ತರಿಸುವ ಸಂಕಲ್ಪ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ವಲಯ ಸೇನಾನಿ ದಯಾನಂದ ಆಚಾರ್, ಆನ್ಸ್ ಕ್ಲಬ್ ಚೇರ್ಮನ್ ಪ್ರಕಾಶ್ ಹಂದಟ್ಟು, ರೋಟರಿ ಕ್ಲಬ್ ಕೋಟ ಬ್ರಿಗೇಡ್ ಕಾರ್ಯದರ್ಶಿ ಶಿವರಾಜ್ ಉಪಸ್ಥಿತರಿದ್ದರು. ಮುಖ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ ಇದರ 16ನೇಯ ವಾರ್ಷಿಕ ಸಾಮಾನ್ಯ ಸಭೆಯು ಇತ್ತೀಚೆಗೆ ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆಯಲ್ಲಿ ಜರುಗಿತು. ಗತ ವರ್ಷದಲ್ಲಿ ಸದಸ್ಯರಿಂದ ರೂ. 18.೦೦ ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಿಸಿ ರೂ. 14.೦೦ ಕೋಟಿಗೂ ಅಧಿಕ ಸಾಲ ವಿತರಿಸಿದೆ. ಸದಸ್ಯರ ಮನ ಒಲಿಸೂವುದರ ಮೂಲಕ ಶೇ. 99.75 ರ ವಸೂಲಿ ಸಾಧಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಶಾಲಾವಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಸದಸ್ಯರ ಮಕ್ಕಳನ್ನು ಪುರಸ್ಕರಿಸಿ ಅಭಿನಂದಿಸಲಾಯಿತು. ಪಿ.ಯು.ಸಿ. ಅಂತಿಮ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಹಾಗೂ ಜಿಲ್ಲೆಗೆ 3ನೇ ರಾಂಕ್ ಗಳಿಸಿದ ಸಂಘದ ಸದಸ್ಯರೋರ್ವರ ಪುತ್ರಿ ವಿದ್ಯಾರ್ಥಿನಿ ಸಾತ್ವಿಕ ಶ್ರೀಯಾನ್ ಅವರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಇತ್ತೀಚಿಗೆ ನಿಧನರಾದ ಸಂಘದ ಸದಸ್ಯರೋರ್ವರು ಅವರ ಉತ್ತರಾಧಿಕಾರಿಗೆ ಸಂಘದಿಂದ ಲಭ್ಯವಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗರಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಮಾತ್ರವಲ್ಲ, ಕನಿಷ್ಠ ಅಂಕಗಳನ್ನು ಪಡೆಯುವ ಸಾಧಾರಣ ಬುದ್ಧಿಮತ್ತೆಯ ವಿದ್ಯಾರ್ಥಿಗಳಿಗೂ ಉತ್ಕ್ರಷ್ಟ ದರ್ಜೆಯಲ್ಲಿ ಪಾಸಾಗುವಂತೆ ಮಾಡುವ ಕಲಿಕಾ ವ್ಯವಸ್ಥೆ ಈ ವಿದ್ಯಾಸಂಸ್ಥೆಯಲ್ಲಿರುವುದು ಸಂತಸದ ವಿಚಾರ ಎಂದು ಕಂಬದಕೋಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ವಿಶ್ವನಾಥ ಶೆಟ್ಟಿ ಹೇಳಿದರು. ಅವರು ಇಲ್ಲಿನ ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ 2025-26ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ಕ್ರಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದಿಸುವ ‘ಪ್ರತಿಭಾ ಪುರಸ್ಕಾರ ‘ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜನ ನಾಯಕರ ಕೆಲವು ಮೌಲ್ಯಯುತ ಗುಣಗಳಿಂದ ಪ್ರೇರಣೆ ಪಡೆದು, ಜೀವನದಲ್ಲಿ ಬೇರೆಯವರ ಅಳುವಿಗೆ ಕಾರಣವಾಗದೇ, ಎಲ್ಲರ ನಗುವಿಗೆ ಕಾರಣವಾಗಿ ಸಮಾಜದ ಮುಖ್ಯವಾಹಿನಿಯಲ್ಲಿ ತಮ್ಮ ಅಸ್ತಿತ್ವವನ್ನು ಗುರುತಿಸಿಕೊಳ್ಳಿ ಎಂದರು. ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಐಬಿಎಂ ಸಾಫ್ಟ್ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಸ್ಥಾಪಿಸಲಾದ, ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ನ್ನು ಬುಧವಾರ ಉದ್ಘಾಟಿಸಲಾಯಿತು. ಉದ್ಯಮ–ಶೈಕ್ಷಣಿಕ ಸಹಯೋಗವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಕಲ್ಪಿಸಲು ಈ ಲ್ಯಾಬ್ ಸ್ಥಾಪಿಸಲಾಗಿದೆ. ಐಬಿಎಂ ವಾಟ್ಸನ್‌ಎಕ್ಸ್.ಎಐ, ವಾಟ್ಸನ್‌ಎಕ್ಸ್ ಆರ್ಕೆಸ್ಟ್ರೇಟ್ ಹಾಗೂ ಎಐ ಆಧಾರಿತ ಡೆವಲಪರ್ ಉಪಕರಣಗಳಿಂದ ಸಜ್ಜುಗೊಂಡಿರುವ ಈ ಲ್ಯಾಬ್, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಎಂಟರ್‌ಪ್ರೈಸ್ ಎಐ ವೇದಿಕೆಗಳು ಹಾಗೂ ನೈಜ ಕೈಗಾರಿಕಾ ಅನ್ವಯಿಕೆಗಳ ಕುರಿತು ನೇರ ಅನುಭವ ನೀಡಲಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಐಬಿಎಂ ಇಂಡಿಯಾದ ವಾಟ್ಸನ್‌ಎಕ್ಸ್ ಎಐ ವಿಭಾಗದ ಕಾರ್ಯಕ್ರಮ ನಿರ್ದೇಶಕ ಹಾಗೂ ಮುಖ್ಯಸ್ಥ ರತೀಶ್ ಮುರಳೀಧರನ್, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಸ್ಥಾಪಿಸಿದ ಎಂಜಿನಿಯರಿಂಗ್ ಕಾಲೇಜಾಗಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಎಐ ತಂತ್ರಜ್ಞಾನವು ಶಕ್ತಿಯುತ ಸಾಧನಗಳನ್ನು ಎಲ್ಲರಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಸಾಮಾಜಿಕ ಸೇವೆಗೆ ಹೆಸರು ವಾಸಿಯಾಗಿದೆ. ಗಂಗೊಳ್ಳಿ ರೋಟರಿ ಸಂಸ್ಥೆಯು ಗಂಗೊಳ್ಳಿ ಪರಿಸರದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಇನ್ನಷ್ಟು ಉತ್ತಮ ಯೋಜನೆಗಳನ್ನು ಹಮ್ಮಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರೋಟರಿಯ ಸೇವೆಗಳು ತಲುಪುವಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ರೋಟರಿ ಜಿಲ್ಲೆ 3182ರ ಮಾಜಿ ಗವರ್ನರ್ ಬಿ.ಸಿ. ಗೀತಾ ಹೇಳಿದರು. ಅವರು ಭಾನುವಾರ ತ್ರಾಸಿಯ ಪ್ರೆಸ್ಟೀಜ್ ಪ್ಯಾಲೇಸ್ ಆಡಿಟೋರಿಯಮ್‌ನಲ್ಲಿ ನಡೆದ ರೋಟರಿ ಕ್ಲಬ್ ಗಂಗೊಳ್ಳಿ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆವೇರಿಸಿ ಮಾತನಾಡಿದರು. ನೂತನ ಅಧ್ಯಕ್ಷರಾಗಿ ಮಾಲಾಶ್ರೀ ಖಾರ್ವಿ, ನೂತನ ಕಾರ್ಯದರ್ಶಿಯಾಗಿ ಗಿರೀಶ್ ಖಾರ್ವಿ ಮತ್ತು ಇನ್ನಿತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಸಹಾಯಕ ಗವರ್ನರ್ ಜೆ. ಶ್ರೀನಾಥ ರಾವ್ ಮತ್ತು ಜೋನಲ್ ಲೆಫ್ಟಿನೆಂಟ್ ಚಂದ್ರಕಲಾ ತಾಂಡೇಲ ಶುಭ ಹಾರೈಸಿದರು. ಈ ಸಂದರ್ಭ ಕಳೆದ ಸಾಲಿನ ಎಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ರ‍್ಯಾಂಕ್ ವಿಜೇತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ, ಆ ಮೂಲಕ ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ ಎಂದು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ದ್ವಿತೀಯ ಮತ್ತು ತೃತೀಯ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಅಭಿವಿನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಆಡಳಿತಾತ್ಮಕ ವಿಚಾರಗಳನ್ನು ತಿಳಿಸಿದರು. ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್. ಶೈಕ್ಷಣಿಕ ವಿಷಯಗಳನ್ನು ಚರ್ಚಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ರೇವತಿ ಡಿ. ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಶ್ಮಿತಾ ಶೆಟ್ಟಿ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC), ಮೂಡ್ಲಕಟ್ಟೆ ಇಲ್ಲಿ ‘ದೀಕ್ಷಾರಂಭ 2026-27’ ವಿದ್ಯಾರ್ಥಿ ಪರಿಚಯ ಕಾರ್ಯಕ್ರಮದ ಅಂಗವಾಗಿ ಮೊದಲ ವರ್ಷದ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ “ಮಕ್ಕಳ ಶೈಕ್ಷಣಿಕ ಪ್ರಯಾಣದಲ್ಲಿ ಪೋಷಕರ ಪಾತ್ರ” ಎಂಬ ವಿಶೇಷ ಅಧಿವೇಶನ ಕಾರ್ಯಕ್ರಮ ನಡೆಯಿತು.ಐಎಂಜೆ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಸಲಹೆಗಾರ್ತಿ ಸಪ್ನಾ ಗಣೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೈಯಕ್ತಿಕ ಬೆಳವಣಿಗೆಯಲ್ಲಿ ಪೋಷಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವುದೇ ಈ ಅಧಿವೇಶನದ ಮುಖ್ಯ ಉದ್ದೇಶವಾಗಿತ್ತು. ತದನಂತರ ಮಾತನಾಡಿದ ಅವರು, ಮಕ್ಕಳ ಶೈಕ್ಷಣಿಕ ಯಶಸ್ಸು ಮತ್ತು ಮಾನಸಿಕ ಆರೋಗ್ಯವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ನಿರ್ಣಾಯಕವಾಗಿದೆ ಎಂದು ಹೇಳಿದರು. “ಪೋಷಕರು ಮಕ್ಕಳೊಂದಿಗೆ ಮುಕ್ತವಾಗಿ ಸಂವಾದ ನಡೆಸಬೇಕು. ಅವರ ಮೇಲೆ ನಂಬಿಕೆ ಇಡಬೇಕು ಮತ್ತು ಸರಿಯಾದ ಮಾರ್ಗದರ್ಶನ ನೀಡಬೇಕು. ಅದೇ ಸಮಯದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯಲು ಅಗತ್ಯ ಸ್ವಾತಂತ್ರ್ಯವನ್ನೂ ನೀಡಬೇಕು” ಎಂದು ಅವರು ಸಲಹೆ ನೀಡಿದರು.ವಿದ್ಯಾರ್ಥಿಗಳಲ್ಲಿ ಕಂಡುಬರುವ ಒತ್ತಡದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪ್ಪುಂದದ ಪ್ರಧಾನ ಕಛೇರಿಗೆ ರಾಜ್ಯ ಹಾಗೂ ಹೊರ ರಾಜ್ಯಗಳ ನಬಾರ್ಡ್‌ನ ಅಧಿಕಾರಿಗಳ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ, ಸದಸ್ಯರಿಗೆ ನೀಡುತ್ತಿರುವ ಸೇವೆ ಹಾಗೂ ಸವಲತ್ತುಗಳ ಬಗ್ಗೆ, ಸದಸ್ಯರ ಠೇವಣಿ ಸದಸ್ಯರಿಗೆ ನೀಡಿದ ಸಾಲಗಳ ಬಗ್ಗೆ, ಸಂಘದ ಅಭಿವೃದ್ಧಿ ಹಾಗೂ ಸಂಘವು ಈಗಾಗಲೇ ಕೈಗೊಂಡಿರುವ ರೈತಸಿರಿ ಅಗ್ರಿಮಾಲ್ ಕಟ್ಟಡದ ಕಾಮಗಾರಿ ಇತ್ಯಾದಿಗಳ ಸವಿಸ್ತಾರವನ್ನ ಸಂಘದ ಉಪಾಧ್ಯಕ್ಷರಾದ ಮಂಜು ದೇವಾಡಿಗ ಅವರು ವಿವರಿಸಿದರು. ಕೇರಳ ನಬಾರ್ಡ್ ಅಧಿಕಾರಿ ಜ್ಲಾನು ಸೌಂದರಿ ಅವರನ್ನು ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಕರ್ನಾಟಕದ ಬೆಂಗಳೂರು, ದಕ್ಷಿಣ ಕನ್ನಡ, ತೆಲಂಗಾಣ, ಆಂದ್ರಪ್ರದೇಶ, ತಮಿಳುನಾಡು, ಕೇರಳ ರಾಜ್ಯದ ನಬಾರ್ಡ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸೇರಿ ಒಟ್ಟು 40 ಜನ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಬಾರ್ಡ್ ಅಧಿಕಾರಿಗಳಾದ ಶಕ್ತಿ ಪಿ. ಮೊಹೋಪತ್ರ, ಅಧಿಕಾರಿ ಶಿವರಾಜ್ , ಸಂಘದ ವಸೂಲಾತಿ ಅಧಿಕಾರಿ ಚಂದಯ್ಯ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ರೈತ ಸಂಘ ನಡೆಸುತ್ತಿರುವ ಪ್ರತಿಭಟನೆ ಮುನ್ನೂರು ದಿನ ಪೂರೈಸಿದೆ.ಇದುವರಗೆ ನ್ಯಾಯ ದೊರೆಯದ ಹಿನ್ನಲೆಯಲ್ಲಿ ರೈತರು ಅಣಕು ಶವಯಾತ್ರೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೈಂದೂರು ಪಟ್ಟಣ ಪಂಚಾಯತ್ ಎದುರು ಅಣಕು ಶವ ಇಟ್ಟು ಮೆರವಣಿಗೆ ಮೂಲಕ ತಾಲೂಕು ಆಡಳಿತ ಕಛೇರಿ ತರಲಾಯಿತು. ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಡಿ ಮಾತನಾಡಿ ಕಳೆದ ಮುನ್ನೂರು ದಿನಗಳಿಂದ ರೈತರು ಬದುಕುಗಾಗಿ ಊರಿನ ಕಾಳಜಿಗಾಗಿ ಕೆಲಸಕಾರ್ಯ ಬಿಟ್ಟು ಧರಣಿ ನಡೆಸುತ್ತಿದ್ದಾರೆ. ಸರಕಾರದ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಚಿವರು ಮನಸ್ಸು ಮಾಡಿದರೆ ಶೀಘ್ರ ನ್ಯಾಯ ನೀಡಬಹುದು ಆದರೆ ಬೈಂದೂರಿನಲ್ಲಿ ಜನಪ್ರತಿನಿಧಿಗಳು ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದ್ದಾರೆ. ರೈತರ ಹೋರಾಟ ನ್ಯಾಯಯುತವಾಗಿದೆ ಅ.3ರಿಂದ ಸಾವಿರಾರು ರೈತರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈ ಗೊಳ್ಳುತ್ತೇವೆ ಎಂದರು ಈ ಸಂಧರ್ಭದಲ್ಲಿ ಯುವ ರೈತರ ಘಟಕದ ಅಧ್ಯಕ್ಷರಾಗಿ ಆಕಾಶ ಪೂಜಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಾಜ್ಯ ಕಾಂಗ್ರೆಸ್ ಸರಕಾರ ಹಿಂದುಳಿದ ವರ್ಗಗಳ ಬಗ್ಗೆ ಬೊಗಳಿಕೆ ಭರವಸೆ ನೀಡಿದ್ದು ಬಿಟ್ಟರೆ ನಾರಾಯಣ ಗುರು ನಿಗಮಕ್ಕೆ ಅನುದಾನ ನೀಡುತ್ತಿಲ್ಲ. ಹಾಗಾಗಿ ಹಿಂದುಳಿದ ವರ್ಗಗಳ ಸಮುದಾಯದ ಅದರಲ್ಲೂ ಕರಾವಳಿ ಮತ್ತು ಮಲೆನಾಡಿನಲ್ಲಿ ಅಪಾರ ಸಂಖ್ಯೆಯಲ್ಲಿರುವ ಬಿಲ್ಲವರು, ಈಡಿಗರು, ನಾಮಧಾರಿಗಳು, ಕಾಂಗ್ರೆಸ್ ಪಕ್ಷದ ಭರವಸೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ ಹೇಳಿದರು. ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆ ಪತ್ರದಲ್ಲಿ ನಾರಾಯಣ ಗುರು ನಿಗಮಕ್ಕೆ ವಾರ್ಷಿಕ 500 ಕೋಟಿ ಕೊಡುವುದಾಗಿ ಘೋಷಿಸಿತ್ತು. ಅಲ್ಲದೇ, ಪ್ರತಿವರ್ಷ ಬಜೆಟ್ ನಲ್ಲಿ 500 ಕೋಟಿಯಂತೆ 5 ವರ್ಷದಲ್ಲಿ 2500 ಸಾವಿರ ಕೋಟಿ ನೀಡುವುದಾಗಿ ಪ್ರಕಟಿಸಿತ್ತು. ಆದರೆ, ಇಲ್ಲಿಯವರೆಗೆ ಭರವಸೆ ನೀಡಿದಂತೆ ಹಣ ನೀಡದೆ ಇರುವುದರಿಂದ ನಾರಾಯಣಗುರು ನಿಗಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೊಸದಾಗಿ ಅಧಿಕಾರ ಸ್ವೀಕರಿಸಿದ ಡಿಕೆಶಿಯವರು ಬಗ್ಗೆ…
