Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವಿಜ್ಞಾನವನ್ನು ಘನ, ದ್ರವ ಮತ್ತು ಅನಿಲ ಎಂಬ ಮೂರು ಸ್ಥಿತಿಗಳಿಗೆ ಮಾತ್ರ ಸೀಮಿತಗೊಳಿಸದೆ, ನಾಲ್ಕನೇ ಸ್ಥಿತಿಯಾದ ಪ್ಲಾಸ್ಮಾ ಕುರಿತು ವಿದ್ಯಾರ್ಥಿಗಳು ಆಸಕ್ತಿ ಮತ್ತು ಅರಿವು ಬೆಳೆಸಿಕೊಳ್ಳಬೇಕು ಎಂದು ಗಾಂಧಿನಗರದ ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್)ನ ವೈಜ್ಞಾನಿಕ ಅಧಿಕಾರಿ ಹಾಗೂ ಔಟ್‌ರೀಚ್ ವಿಭಾಗದ ಮುಖ್ಯಸ್ಥ ಡಾ. ಎನ್. ರಾಮಸುಬ್ರಮಣ್ಯನ್ ಹೇಳಿದರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯವು ಭಾರತದ ಅಣುಶಕ್ತಿ ಇಲಾಖೆಯ (ಡಿಎಇ) ಅಧೀನದ ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ನ (ಐಪಿಆರ್), ಸಹಯೋಗದಲ್ಲಿ ಎಐಇಟಿ ಎಂಬಿಎ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 5 ದಿನಗಳ 4ನೇ ರಾಜ್ಯ ಮಟ್ಟದ ಪ್ಲಾಸ್ಮಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದು. ಪ್ಲಾಸ್ಮಾ ವಿಜ್ಞಾನದಲ್ಲಿ ಹೆಚ್ಚಿನ ಸಂಶೋಧಕರು ಮತ್ತು ಪರಿಣಿತರ ಅಗತ್ಯವಿದೆ. ವಿದ್ಯಾರ್ಥಿಗಳು ಭೌತಶಾಸ್ತ್ರ, ಗಣಿತ ಹಾಗೂ ಎಂಜಿನಿಯರಿಂಗ್ ವಿಷಯಗಳಲ್ಲಿ ಆಸಕ್ತಿ ಬೆಳೆಸಿ ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ದೇಶದ ವೈಜ್ಞಾನಿಕ ಅಭಿವೃದ್ಧಿಗೆ ಅಮೂಲ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕೆಂಪು ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ರವಿವಾರ ಕಾಲ್ತೋಡು ಬೊಳ್ಳಂಬಳ್ಳಿಯಲ್ಲಿ ಸಂಭವಿಸಿದೆ. ಹೇರಂಜಾಲು ಗ್ರಾಮದ ಶಿವಾನಂದ ದೇವಾಡಿಗ (49) ಮೃತಪಟ್ಟ ದುರ್ದೈವಿ. ಶಿವಾನಂದ ಅವರು ಜು.26 ರಂದು ಬೆಳಿಗ್ಗೆ ಕಾಲ್ತೋಡು ಬೊಳ್ಳಂಬಳ್ಳಿಯಲ್ಲಿರುವ ಕೆಂಪು ಕಲ್ಲು ಕ್ವಾರೆ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ಸಮಯದಲ್ಲಿ ಅವರಿಗೆ ದಿಢೀ‌ರ್ ತಲೆತಿರುಗಿ ಬಿದ್ದಿದ್ದರಿಂದ ಗಾಯಗೊಂಡಿದ್ದರು ಎನ್ನಲಾಗಿದೆ. ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು. ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಪತ್ನಿ, ಮೃತರ ತಲೆಯ ಭಾಗದಲ್ಲಿದ್ದ ಗಾಯವನ್ನು ಕಂಡು ಪತಿಯ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ನೀಡಿದ ದೂರಿನನ್ವಯ ಬೈಂದೂರು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಬಿ.ಎಸ್ಸಿ ‘ಕೃಷಿ ಮತ್ತು ಪಶುವೈದ್ಯಕೀಯ ವಿಜ್ಞಾನʼ ಕೋರ್ಸ್‌ಗಳ ಭವಿಷ್ಯ ಹಾಗೂ ಉದ್ಯೋಗಾವಕಾಶಗಳ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಹೆಸರಾಂತ ಕೃಷಿ ಶಿಕ್ಷಣ ತಜ್ಞ ರಾಜು ಬೆಳ್ಳುಂಡಗಿ ಅವರು ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಪ್ರಾಣಿ ವಿಜ್ಞಾನ (Farm Science) ಕ್ಷೇತ್ರದ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು. “ಹಿಂದಿನ ದಿನಗಳಲ್ಲಿ ಬಿ.ಎಸ್ಸಿ ಕೃಷಿ ಅಥವಾ ಪಶುವೈದ್ಯಕೀಯ ಶಿಕ್ಷಣದ ಕಡೆಗೆ ಹೆಚ್ಚಿನ ವಿದ್ಯಾರ್ಥಿಗಳು ಗಮನ ಹರಿಸುತ್ತಿರಲಿಲ್ಲ ಹಾಗೂ ಸ್ಪರ್ಧೆಯೂ ಕಡಿಮೆಯಿತ್ತು. ಆದರೆ, ಇಂದಿನ ಬದಲಾದ ಯುಗದಲ್ಲಿ ಈ ‘ಫಾರ್ಮ್ ಸೈನ್ಸ್’ ಕ್ಷೇತ್ರವು ಅತ್ಯಂತ ಶರವೇಗದಲ್ಲಿ ಬೆಳೆಯುತ್ತಿದೆ. ವೈಜ್ಞಾನಿಕ ಕೃಷಿ, ಆಹಾರ ಸಂಸ್ಕರಣೆ, ಪಶುಸಂಗೋಪನೆ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳು ಬಂದಿರುವುದರಿಂದ ಕೋರ್ಸ್ ಮುಗಿಸಿದ ತಕ್ಷಣ ಹೇರಳ ಉದ್ಯೋಗಾವಕಾಶಗಳು ಲಭ್ಯವಿವೆ. ನಿರಂತರ ಆಸಕ್ತಿ ಮತ್ತು ಶ್ರದ್ಧೆಯಿಂದ ಅಧ್ಯಯನ ನಡೆಸಿದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕ ಹಾಗೂ ಮಹಿಳಾ ಸಂಘಟನೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ -ಉಡುಪಿ ಇವರ ನೇತೃತ್ವದಲ್ಲಿ ಕರಾವಳಿ ಮೊಗವೀರ ಮಹಾಜನ ಸಂಘ ಕೋಟ, ಎಚ್ ಕೆ. ಫ್ರೆಂಡ್ಸ್‌ಹೊಳೆಕೆರೆ -ಚಿತ್ರಪಾಡಿ, ಗಾಣಿಗ ಯುವ ಸಂಘಟನೆ ಕೋಟ, ಪಾಂಚಜನ್ಯ ಸಂಘ ಅಂಬಾಗಿಲುಕೆರೆ ಸಾಲಿಗ್ರಾಮ ರಕ್ತನಿಧಿ ಕೆ. ಎಮ್. ಸಿ. ಮಣಿಪಾಲ, ಜಿಲ್ಲಾಡಳಿತ ಉಡುಪಿ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಕರಾವಳಿ ಮೊಗವೀರ ಸಭಾಭವನ ಗುಂಡ್ಮಿ -ಸಾಲಿಗ್ರಾಮದಲ್ಲಿ ಭಾನುವಾರ  ಜರುಗಿತು. ಕಾರ್ಯಕ್ರಮದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಪ್ರವರ್ತಕರಾದ ನಾಡೋಜ ಡಾ.ಜಿ ಶಂಕರ್ ಶುಭ ಹಾರೈಸಿದರು. ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದ ಅಧ್ಯಕ್ಷರಾದ ಕಿರಣ್ ಕುಂದರ್ ಸಭಾಧ್ಯಕ್ಷತೆ ವಹಿಸಿದ್ದರು. ಕರಾವಳಿ ಮೊಗವೀರ ಮಹಾಜನ ಸಂಘದ ಡಾ.ಕೃಷ್ಣ ಕಾಂಚನ್, ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊ.ಯು. ಸಂಘಟನೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಜಯಂತ ಅಮೀನ್, ಮಾಜಿ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ, ಮೂಡ್ಲಕಟ್ಟೆಯ ತರಬೇತಿ ಮತ್ತು ಪ್ಲೇಸ್‌ಮೆಂಟ್ ಸೆಲ್, ಮಂಗಳೂರಿನ ಕೋಡ್‌ಲ್ಯಾಬ್ ಸಿಸ್ಟಮ್ಸ್ ಸಹಯೋಗದೊಂದಿಗೆ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ಆರು ದಿನಗಳ “ರಿಯಾಕ್ಟ್ ಜೆಎಸ್ ಮೂಲಕ ವೆಬ್ ಅಪ್ಲಿಕೇಶನ್ ಅಭಿವೃದ್ಧಿ” ಪ್ರಮಾಣೀಕೃತ ಪ್ರಾಯೋಗಿಕ ಕಾರ್ಯಾಗಾರವು ನಡೆಯಿತು. ತರಬೇತಿದಾರರಾದ ಕಾರ್ತಿಕ್, ಸುಜಾದ್ ಶೇಖ್ ಅಲಿ, ಮೊಹಮ್ಮದ್ ಜಝೀಲ್ ಮತ್ತು ಸ್ವಸ್ತಿಕ್ ಅವರು ಕಾರ್ಯಾಗಾರವನ್ನು ನಿರ್ವಹಿಸಿದರು. ಕಾರ್ಯಾಗಾರದಲ್ಲಿ ಅವರು ರಿಯಾಕ್ಟ್ ಜೆಎಸ್ ಮತ್ತು ಆಧುನಿಕ ವೆಬ್ ಅಪ್ಲಿಕೇಶನ್ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಆಳವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರ ಮಾರ್ಗದರ್ಶನದಲ್ಲಿ, ಪ್ಲೇಸ್‌ಮೆಂಟ್ ಅಧಿಕಾರಿ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಮುಖ್ಯಸ್ಥರಾದ ಸ್ವರ್ಣ ರಾಣಿ ಯು.ಪಿ. ಯವರ ಬೆಂಬಲದೊಂದಿಗೆ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಐಎಂಜೆಐಎಸ್‌ಸಿ ಯಲ್ಲಿ ನಡೆಯುತ್ತಿರುವ ನಿರಂತರ ಪ್ಲೇಸ್‌ಮೆಂಟ್ ಸಿದ್ಧತಾ ಉಪಕ್ರಮದ ಭಾಗವಾಗಿ ತರಬೇತಿ ಮತ್ತು ಪ್ಲೇಸ್‌ಮೆಂಟ್ ಸೆಲ್, ಶೈಕ್ಷಣಿಕ ವರ್ಷದ ಆರಂಭದಿಂದಲೇ ಉದ್ಯಮ-ಆಧಾರಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಿ.ಇ.ಟಿ, ಜೆ.ಇ.ಇ., ನೀಟ್, ಪಿ.ಜಿ.ಸಿ.ಇ.ಟಿ, ಸಿ.ಎಲ್.ಎ.ಟಿ ಹಾಗೂ ಐ.ಸಿ.ಎ.ಆರ್ ಮೂಲಕ ಆಯ್ಕೆಯಾಗುವ ಅಥವಾ ನ್ಯಾಕ್ ‘ಎ’ ಗ್ರೇಡ್ ಅಥವಾ ಅದಕ್ಕಿಂತ ಹೆಚ್ಚಿನ ಮಾನ್ಯತೆ ಹೊಂದಿರುವ ಅಥವಾ ಎನ್.ಐ.ಆರ್.ಎಫ್ ಶ್ರೇಯಾಂಕದ ಅಗ್ರ 100 ಸ್ಥಾನಗಳಲ್ಲಿರುವ ಕಾಲೇಜು, ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳು ನಡೆಸುವ ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆಯಾಗುವ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್, ಬಿ.ಇ, ಬಿ.ಟೆಕ್, ಎಂ.ಇ., ಎಂ.ಟೆಕ್, ಬಿ.ಡಿ.ಎಸ್, ಎಂ.ಡಿ.ಎಸ್, ಬಿ.ಆಯುಷ್, ಎಂ.ಆಯುಷ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಆರ್ಚ್, ಎಂ.ಆರ್ಚ್, ಬಿ.ಎಸ್ಸಿ ಅಗ್ರಿಕಲ್ಚರ್, ಅಗ್ರಿ ಕಲ್ಚರ್ ಎಂಜಿನಿಯರಿಂಗ್, ಹಾರ್ಟಿಕಲ್ಚರ್, ಡೈರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರ್ನರಿ & ಅನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್ / ಕಮ್ಯುನಿಟಿ ಸೈನ್ಸಸ್, ಫುಡ್, ನ್ಯೂಟ್ರಿಷನ್ & ಡಯಟಿಟಿಕ್ಸ್, ಅಗ್ರಿಕಲ್ಚರ್ ಇಂಜಿನಿಯರಿಂಗ್, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ ಡಿ, ಡಿ ಫಾರ್ಮಾ, ಐ.ಟಿ.ಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ಪಿಎಚ್‌ಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜೋಗಿ ಸಮಾಜ ಸೇವಾ ಸಂಘ ಬೈಂದೂರು ತಾಲೂಕು ಇದರ ನಾಲ್ಕನೇ ವರ್ಷದ ಮಹಾಸಭೆಯ ಕಾರ್ಯಕ್ರಮ ಭಾನುವಾರದಂದು ನಾವುಂದ ಸ್ಕಂದ ಸಭಾಭವನದ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮದೊಂದಿಗೆ ಆಚರಣೆಗೊಂಡಿದೆ. ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಮಾತನಾಡಿ, ಸಮುದಾಯದ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುವಂತೆ ಕರೆಕೊಟ್ಟು, ಸಾಧಕರನ್ನು ಸನ್ಮಾನಿಸಿ ಎಲ್ಲರಿಗೂ ಶುಭವನ್ನು ಹಾರೈಸಿದರು. ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರು ಮಾತನಾಡಿ, ಸಂಘದ ಆದರ್ಶಗಳನ್ನು ಕೊಂಡಾಡಿ, ಸಮಾಜವು ಶ್ರಮಿಸುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಸಮಾಜದ ಹಿರಿಯ ವ್ಯಕ್ತಿಗಳನ್ನು ಗೌರವಿಸಿ ಬಹುಮಾನ ವಿತರಿಸಿದರು. ಚಂದ್ರ ಬಳೆಗಾರ ಕೊಲ್ಲೂರು ಅವರು ಮುಂದಿನ ಎರಡು ವರ್ಷಗಳವರೆಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿವೇತನ, ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವ, ಬಹುಮಾನ ವಿತರಣೆ ಮತ್ತು ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ವೇದಿಕೆಯಲ್ಲಿ ದಯಾನಂದ ಜೋಗಿ ನಾವುಂದ, ದೇವರಾಜ ಜೋಗಿ ಬೈಂದೂರು, ಗಣೇಶ ಜೋಗಿ ಕುಂದಾಪುರ, ಟಿ.ಎಸ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ನಡೆದ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳು ಅತ್ಯಂತ ದುರದೃಷ್ಟಕರ ಮತ್ತು ಯಾರೂ ಸಹಿಸಲಾಗದ್ದು. ಲಕ್ಷಾಂತರ ಶ್ರಮಜೀವಿ ವಿದ್ಯಾರ್ಥಿಗಳು ಈ ಲೋಪಗಳಿಂದಾಗಿ ಸಂಕಟ ಅನುಭವಿಸಿದ ಬಗ್ಗೆ ನಮಗೆ ತೀವ್ರ ನೋವು ಹಾಗೂ ಸಂವೇದನೆ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತ ಸರ್ಕಾರವು ಈಗಾಗಲೇ ಪಾರದರ್ಶಕತೆ ತರಲು ಕಠಿಣ ಕಾನೂನುಗಳು ಹಾಗೂ ಸಮಗ್ರ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಹೀಗಿರುವಾಗ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಅವರ ಹೇಳಿಕೆಯು ಕೇವಲ ಅಗ್ಗದ ಪ್ರಚಾರ ಹಾಗೂ ರಾಜಕೀಯ ಅವಕಾಶವಾದಿತನವಾಗಿದೆ ಎಂದು ಕರ್ನಾಟಕ ಬಿಜೆಪಿಯ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಹಾಗೂ ಮಾಧ್ಯಮ ವಕ್ತಾರ ರತನ್ ರಮೇಶ್ ಪೂಜಾರಿ ಟೀಕಿಸಿದ್ದಾರೆ. ಕೇಂದ್ರ ಸರಕಾರ ನಾವು ವಿದ್ಯಾರ್ಥಿಗಳ ಪರವಾಗಿ ದೃಢವಾಗಿ ನಿಲ್ಲುತ್ತೇವೆ ಮತ್ತು ಈ ಕೃತ್ಯಕ್ಕೆ ಕಾರಣರಾದವರು ಕಾನೂನಿನ ಸಂಪೂರ್ಣ ಶಿಕ್ಷೆಯನ್ನು ಎದುರಿಸಲೇಬೇಕು.ಸೋರಿಕೆಯಲ್ಲಿ ಭಾಗಿಯಾದ ತಪ್ಪಿತಸ್ಥರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಉಪ್ಪುಂದ ಗ್ರಾಮದ ಹೊಳೆಬಾಗಿಲು ಬೈಲುಮನೆಯ ಮಾಚ ದೇವಾಡಿಗ ಎಂಬುವವರು ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ತೀರಾ ಎಡಕ್ಕೆ ಚಲಾಯಿಸಿದ್ದರಿಂದ ರಸ್ತೆ ಬದಿಯ ಪುಟ್‌ಪಾತಿಗೆಗೆ ಡಿಕ್ಕಿಯಾಗಿ, ನಂತರ ಅಲ್ಲೇ ಮುಂದೆ ರಸ್ತೆ ದಾಟಲು ನಿಂತಿದ್ದ ಮಾಚ ದೇವಾಡಿಗರಿಗೆ ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯ ರಭಸಕ್ಕೆ ಮಾಚ ಅವರು ಸ್ವಲ್ಪ ದೂರಕ್ಕೆ ರಸ್ತೆಗೆ ಎಸೆಯಲ್ಪಟ್ಟು ರಸ್ತೆಯ ಮೇಲೆ ಕವಚಿ ಬಿದ್ದಿದ್ದು, ಪರಿಣಾಮ ಅವರ ಮುಖಕ್ಕೆ ಹಾಗೂ ದೇಹದ ಇತರ ಭಾಗಗಳಿಗೆ ಗಂಬೀರ ಗಾಯವಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾಚ ದೇವಾಡಿಗ ಅವರು ಸ್ವಸಹಾಯ ಸಂಘದ ಹಣವನ್ನು ಕಟ್ಟಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ತಕ್ಷಣದ ಸ್ಪಂದಿಸಿ ಮೃತದೇಹವನ್ನು ಸಾಗಿಸುವ ವ್ಯವಸ್ಥೆ ಮಾಡಿದರು. ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಆಫಘಾತದ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ವತಿಯಿಂದ ಗಮ್ಮತ್ತಿನ ಆಷಾಢ’ ಆಡಿ ಚುರ್ಕಾಪ ನೆನ್ಪ್ ಹೊತ್ಕಾಹೋಪ ಎಂಬ ಕಾರ್ಯಕ್ರಮವನ್ನು ಭಾನುವಾರ ಅನಘಾಮೃತ ಗೃಹದಲ್ಲಿ ಆಯೋಜಿಸಲಾಗಿದೆ. ಈ ವಿಶೇಷ ಸೌಹಾರ್ದ ಕೂಟವು ಕುಂದಾಪ್ರ ಭಾಷಿ ಬದ್ಕಿನ್ ಹೆಂಗ್ಸ್ರಿದ್ದಲ್ಲ್ ಮಾತ್, ಮಾತಿದ್ದಲ್ಲ್ ಖುಷಿ, ಖುಷಿಯಿದ್ದಲ್ಲ ಆರೋಗ್ಯ ಆರೋಗ್ಯಯಿದ್ದಲ್ಲ್ ನೆಮ್ಮದಿ ಎಂಬ ಗೆಡ್ಜ್, ಗೌಜ್, ಗಮ್ಮತ್ ಅಲ್ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕೊಚ್ಚಕ್ಕಿ ಕೂಳ್ ಹುರುಳಿ ಸಾರ್’ ಮುಂತಾದ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಸವಿಯೊಂದಿಗೆ, ಹೊಟ್ಟೆ ತುಂಬಾ ಉಣ್ಣುವಾ, ಬಾಯಿ ತುಂಬಾ ನಗಾಡ್ವಾ” ಎಂಬ ಸಂದೇಶದೊಂದಿಗೆ ಸಮುದಾಯವನ್ನು ಒಗ್ಗೂಡಿಸುವ ವೇದಿಕೆ ಕಲ್ಪಿಸಿತು. ಕಾರ್ಯಕ್ರಮದಲ್ಲಿ ಕ.ಸಾ.ಪ ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಆಷಾಢಿ ತಿಂಗಳ್ ಅದರ ಆಚಾರ ವಿಚಾರಗಳ ಬಗ್ಗೆ ಒಂದಷ್ಟು ವಿಪ್ರ ಮಹಿಳೆಯರನ್ನು ರಸವತ್ತಾಗಿ ಉಣಬಡಿಸಿದರು. ಗ್ರಾಮೀಣ ಕ್ರೀಡೆಗಳು,ತಿಂಡಿ ತಿನಿಸುಗಳು ವಿಶೇಷವಾಗಿ ಗಮನ ಸೆಳೆದವು. ಕ್ರೀಡೆಯಲ್ಲಿ ವಿಜೇತರಾದರಿಗೆ ಬಹುಮಾನವನ್ನು ವಿತರಿಸಲಾಯಿತು.ಸಾಂಸ್ಕೃತಿಕ ಕಾರ್ಯಕ್ರಮ ಗ್ರಾಮ್ಯ ಪ್ರಹಸನಗಳು, ಹಿಂದಿನ ಕಾಲದ ಪರಂಪರೆಗಳನ್ನು ವಿಪ್ರ ಮಹಿಳೆಯರಿಂದ…

Read More