Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗೋಳಿಹೊಳೆಯ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜಿ ಸ್ವಾಮೀಜಿ ಅವರ ಚಾತುರ್ಮಾಸ ವ್ರತಾಚರಣೆ – ಬೈಂದೂರು ಚಾತುರ್ಮಾಸಕ್ಕೆ ಬುಧವಾರ ಚಾಲನೆ ದೊರೆಯಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಧರ್ಮ ಸಭೆಯನ್ನು ಉದ್ಘಾಟಿಸಿದರು. ವ್ರತಾಚರಣೆ ಸಮಿತಿಯ ಗೌರವಾಧ್ಯಕ್ಷ ಗೋಪಾಲ ಪೂಜಾರಿ, ಅಧ್ಯಕ್ಷ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವರಾದ ಮಂಕಾಳ ಎಸ್. ವೈದ್ಯ, ಶಿವಾನಂದ ನಾಯ್ಕ್‌, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎ. ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಡಾ. ವೈ. ಭರತ್ ಕುಮಾ‌ರ್ ಶೆಟ್ಟಿ‌, ಹರೀಶ್ ಪೂಂಜಾ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕರಾದ ಸುನಿಲ್ ನಾಯ್ಕ್‌ ಭಟ್ಕಳ, ಸಂಜೀವ ಮಠಂದೂರು, ವೃತಚರಣೆ ಸಮಿತಿ ಸಂಚಾಲಕ ಶಿವರಾಜ್‌ ಪೂಜಾರಿ ಗೋಳಿಹೊಳೆ, ಪ್ರಮುಖರಾದ ಎಸ್. ರಾಜು ಪೂಜಾರಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ದಿನೇಶ ಅಮಿನ್ ಕುಂದಾಪುರ, ಉದ್ಯಮಿ ದಯಾನಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ವಸಂತ್ ಕುಂಜ್‌ನಲ್ಲಿರುವ ಶ್ರೀ ವೇದವ್ಯಾಸ ಗುರುಕುಲ ಹಾಗೂ ಶ್ರೀ ಕೃಷ್ಣಧಾಮದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ತಮ್ಮ 39ನೇ ಚಾತುರ್ಮಾಸ್ಯ ವ್ರತವನ್ನು ಬುಧವಾರ ಸಂಕಲ್ಪಿಸಿದ್ದರು. ಚಾತುರ್ಮಾಸ್ಯ ವ್ರತದ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು. ನಿನ್ನೆ ಗುರುಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಿದ ಪೂಜ್ಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ಶ್ರೀಗಳಿಗೆ ವಿಶೇಷ ಪ್ರಣಾಮ, ಗೌರವಗಳನ್ನು ಸಲ್ಲಿಸಿ, ಆಶೀರ್ವಾದ ಪಡೆದರು. ಶ್ರೀಗಳ ದೆಹಲಿ ಚಾತುರ್ಮಾಸ್ಯ ಅತ್ಯಂತ ಯಶಸ್ವಿಯಾಗಲಿ ಎಂದು ಇದೇ ಸಂದರ್ಭದಲ್ಲಿ ಸಂಸದರು ಭಕ್ತಿಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ದೆಹಲಿಯಲ್ಲಿ ತಮ್ಮ 39ನೇ ಚಾತುರ್ಮಾಸ್ಯ ವ್ರತದ ಸಂಕಲ್ಪ ಮಾಡಿರುವ ಪೇಜಾವರ ಶ್ರೀಗಳ ಗೌರವಾರ್ಥ ನಡೆದ ಸ್ವಾಗತ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಖಿಲ ಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ವಾರ್ಷಿಕ ಸಮಾವೇಶ ತಮಿಳುನಾಡಿನ ಶ್ರೀರಂಗಂನಲ್ಲಿ ನಡೆದ ಸಮಾರಂಭದಲ್ಲಿ ಅಖಿಲ ಕರ್ನಾಟಕ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಅಧ್ಯಕ್ಷರಾದ ವಾಸ್ತುತಜ್ಞ, ಜ್ಯೋತಿಷಿ, ಸಾಹಿತಿ ಡಾ. ಬಸವರಾಜ್ ಶೆಟ್ಟಿಗಾರ್‌ರವರಿಗೆ ಅಖಿಲ ಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಮಾಜಿ ರಾಷ್ಟ್ರಾಧ್ಯಕ್ಷರಾದ ಬ್ರಹ್ಮರ್ಷಿ ಬೊಜ್ಜನ್ನ ಪಂತುಲುರವರು ಅಕ್ಷರ ಪದ್ಮ ನಿಧಿ ಬಿರುದನ್ನು ರಾಷ್ಟ್ರೀಯ ಮಟ್ಟದಲ್ಲಿ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಪ್ರಣವ ಪೀಠದ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಡಾ. ಮಾತೇ ಮುಕ್ತಾಂಭಿಕಾದೇವಿ, ಪದ್ಮಭೂಷಣ ಕುಪ್ಪುಸ್ವಾಮಿ ಚೆಟ್ಟಿಯ್ಯಾರ್ ಚೆನೈ, ಶ್ರೀ ಗುರು ಮಾರ್ಕಾಂಡೇಯ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಪ್ರಭುಲಿಂಗ ಸ್ವಾಮಿ, ಅಖಿಲಭಾರತ ಪದ್ಮಶಾಲಿ ಸಂಘ ಹೈದರಾಬ್ ಇದರ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ, ಬ್ರಹ್ಮರ್ಷಿ ಪುಂಡಲಿಕಾನಂದ ಕಾಟಿಪಾಮುಲು ಪಂತುಲು, ರಾಷ್ಟ್ರಾಧ್ಯಕ್ಷರಾದ ನೀಲಾ ರಾಧ, ತಮಿಳುನಾಡು ರಾಜ್ಯಾಧ್ಯಕ್ಷರಾದ ವೀರಮಲ್ಲ ರವಿಚಂದ್ರನ್, ಹೈದರಾಬಾದ್ ತೆಲಂಗಾಣದ ರಮೇಶ್ ಋಷಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಅಖಿಲಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಅಧ್ಯಕ್ಷರಾದ ಬ್ರಹ್ಮರ್ಷಿ ಮಾರ್ಚಾಲು ಕೇಶವಮೂರ್ತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ‘ಪ್ರತಿ ವ್ಯಕ್ತಿಯ ಯಶಸ್ಸಿಗೆ ಗುರು ಮತ್ತು ಗುರಿ ಮುಖ್ಯ. ಬದುಕಿನಲ್ಲಿ ಹಿರಿಯರ ಮೌಲ್ಯಗಳೇ ಗುರು. ಯುವ ಸಮುದಾಯದ ಅಭ್ಯುದಯವೇ ಗುರಿ. ಆ ಮೂಲಕ ಸಮಾಜದ ‘ಪ್ರಗತಿ’ಯೇ ಆಳ್ವಾಸ್ ಆಶಯ. ಅದರ ಯಶಸ್ಸಿಗೆ ಸಮುದಾಯಗಳ ಸಹಭಾಗಿತ್ವ ಅತ್ಯಗತ್ಯ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯಲ್ಲಿ ಆಗಸ್ಟ್ 7 ಮತ್ತು 8 ರಂದು ನಡೆಯಲಿರುವ ಬೃಹತ್ ಉಚಿತ ಉದ್ಯೋಗ ಮೇಳ `ಆಳ್ವಾಸ್ ಪ್ರಗತಿ- 2026’ರ ಪೂರ್ವಭಾವಿಯಾಗಿ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡ ‘ನಾಯಕತ್ವಸಮ್ಮಿಲನ’ವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿವಿಧ ಸಮುದಾಯ, ಧಾರ್ಮಿಕ, ರಾಜಕೀಯ ಸೇರಿದಂತೆ ಹಲವಾರು ಸಂಘಟನೆಗಳ ಪ್ರಮುಖರ ಜೊತೆ ಮಾತನಾಡಿದ ಅವರು, ‘ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಔದ್ಯೋಗಿಕ ಅವಕಾಶ ಕಲ್ಪಿಸುವ ಮೂಲಕ ಅವರನ್ನು ಸಾಮಾಜಿಕ, ಆರ್ಥಿಕವಾಗಿ ಸಶಕ್ತೀಕರಣಗೊಳಿಸಲು ‘ಆಳ್ವಾಸ್ ಪ್ರಗತಿ’ಯು 19 ವರ್ಷಗಳ ಹಿಂದೆ ಕೇವಲ 38…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 121ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಗೊಂಬೆ ಮನೆಯಲ್ಲಿ ಜರುಗಿತು. ನಿವೃತ್ತ ಅಧ್ಯಾಪಕ ಸುಬ್ರಾಯ ಮಯ್ಯ, ಪ್ರಸಂಗಕರ್ತ ಡಾ. ಶಿವಕುಮಾರ ಅಳಗೋಡು, ಶಿಕ್ಷಕಿ ಹಾಗೂ ಯಕ್ಷಗಾನ ಕಲಾವಿದೆ ನಾಗರತ್ನ ಹೇರ್ಳೆ ಗಿಳಿಯಾರು, ಉಪ್ಪಿನಕುದ್ರು ಗೊಂಬೆಯಾಟದ ಅರ್ಥಧಾರಿ ರಾಮ ಬಳೆಗಾರ್ ಹೆರೂರು, ತಲ್ಲೂರು ನಾರಾಯಣ ವಿಕಲ ಚೇತನ ಶಾಲೆಯ ಮುಖ್ಯಸ್ಥ ತಲ್ಲೂರು ಸುರೇಶ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಕಾಡೆಮಿಯ ವತಿಯಿಂದ ನಾಗರತ್ನ ಹೇರ್ಳೆ ಅವರನ್ನು ಸಮ್ಮಾನಿಸಲಾಯಿತು. ಚಂದ್ರ ದೇವಾಡಿಗ ಉಪ್ಪಿನಕುದ್ರು ಅವರಿಗೆ ಅಕಾಡೆಮಿಯ ವತಿಯಿಂದ ವೈದ್ಯಕೀಯ ನೆರವು ನೀಡಲಾಯಿತು. ಕಾರ್ಯಕ್ರಮದ ಕೊನೆಗೆ ಜಾಬಾಲಿ ನಂದಿನಿ ಯಕ್ಷಗಾನ ತಾಳಮದ್ದಲೆ ನೆರೆದ ಪ್ರೇಕ್ಷಕರನ್ನು ರಂಜಿಸಿದರು. ದೇವಕಿ ಸುರೇಶ್ ಪ್ರಭು ಪ್ರಾರ್ಥಿಸಿದರು. ನಿವೃತ್ತ ಶಿಕ್ಷಕ ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೇವೆಯಲ್ಲಿ ಪ್ರಾಮಾಣಿಕತೆ, ನಿಷ್ಠೆ ಸಂಘದ ಅಭಿವೃದ್ಧಿಗೆ ನಿರಂತರ ಪರಿಶ್ರಮ ಜನಮಾನಸದಲ್ಲಿ ಸರಳತೆಯ ಸಾಕಾರಮೂರ್ತಿಯಾಗಿ ಗುರುತಿಸಿಕೊಂಡವರು ಎಚ್. ನಾಗರಾಜ್ ಹಂದೆ. ಇಂತಹ ವ್ಯಕ್ತಿತ್ವ ಬೆರಳೆಣಿಕೆಯಷ್ಟು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು. ಅವರು ಕೋಟ ಸಹಕಾರಿ ವ್ಯವಸಾಯಕ ಸಂಘ ಇದರ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಇತ್ತೀಚಿಗೆ ನಿಧನರಾದ ಸಂಘದ ಉಪಾಧ್ಯಕ್ಷ ಎಚ್. ನಾಗರಾಜ್ ಹಂದೆ ಅವರಿಗೆ ಸಂಘದ ವತಿಯಿಂದ ಸಲ್ಲಿಸಿದ ನುಡಿನಮನ ಕಾರ್ಯಕ್ರಮದಲ್ಲಿ ಪುಷ್ಭನಮನ ಸಲ್ಲಿಸಿ ಮಾತನಾಡಿದರು. ಸಮಾಜದ ಬಗ್ಗೆ ಅವರಿಗಿರುವ ತುಡಿತ ಕಾಳಜಿ ನಮ್ಮೆಲ್ಲರಿಗೂ ಸ್ಪೂರ್ತಿದಾಯಕ ಇಂತಹ ಶಕ್ತಿಗಳು ನಮ್ಮನ್ನಗಲಿದ್ದು ಸಂಸ್ಥೆಗೆ ತುಂಬಲಾರದ ನಷ್ಟ ಎಂದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಗಣ್ಯರು ಎಚ್ ನಾಗರಾಜ್ ಹಂದೆಯವರ ಭಾವಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕೋಟ ಸಹಕಾರಿ ವ್ಯವಸಾಯಕ ಸಂಘದ ಉಪಾಧ್ಯಕ್ಷ ರವೀಂದ್ರ ಕಾಮತ್, ನಿರ್ದೇಶಕರಾದ ಜಿ. ತಿಮ್ಮ ಪೂಜಾರಿ, ಟಿ. ಮಂಜುನಾಥ ಗಿಳಿಯಾರು, ಉದಯ ಕುಮಾರ್ ಶೆಟ್ಟಿ, ಶೇಖರ್ ಮರಕಾಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ರವರು, ಅಂದಿನ ಕಾಲದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಶರಣರಾಗಿದ್ದರು. ಅವರ ವಚನಗಳು ಹಾಗೂ ಚಿಂತನೆಗಳು ಇಂದಿಗೂ ಮನುಕುಲದ ಉದ್ಧಾರಕ್ಕೆ ದಾರಿದೀಪವಾಗಿದೆ ಎಂದು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕಾಲಕಾಲಕ್ಕೆ ಹಲವಾರು ನಾಯಕರು, ಸಂತರು, ದಾಸರು, ದಾರ್ಶನಿಕರು ಜನ್ಮತಾಳಿ ಸಮಾಜದ ಸುಧಾರಣೆಗಾಗಿ ಹೆಜ್ಜೆ ಇಟ್ಟಿದ್ದಾರೆ. ಅದೇ ರೀತಿ 12 ನೇ ಶತಮಾನದಲ್ಲಿ ಬಸವಣ್ಣನವರು ಅಂದಿನ ಕಾಲಘಟ್ಟದಲ್ಲಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಉಡುಪಿ ಜಿಲ್ಲಾ ಯುವ ವಿಭಾಗದ ನೂತನ ಜಿಲ್ಲಾಧ್ಯಕ್ಷರಾಗಿ ಮೀನುಗಾರರ ಸಮುದಾಯದ ಪ್ರಮುಖ ಯುವ ಮುಖಂಡರಾದ ಸುಬ್ರಹ್ಮಣ್ಯ ಮೊಗವೀರ ಅವರನ್ನು ನೇಮಕ ಮಾಡಿ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ರವಿ ಶೆಟ್ಟಿ ಬೈಂದೂರು ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುಬ್ರಹ್ಮಣ್ಯ ಮೊಗವೀರ ಅವರು ಮೀನುಗಾರರ ಸಮುದಾಯದಲ್ಲಿ ಅತ್ಯಂತ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯುವ ಮುಖಂಡರಾಗಿದ್ದು, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನಲ್ಲಿ ಈಗಾಗಲೇ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಜವಾಬ್ದಾರಿಯುತ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಇವರ ಸುದೀರ್ಘ ಸೇವೆ ಹಾಗೂ ಸಂಘಟನಾ ಚತುರತೆಯನ್ನು ಗುರುತಿಸಿ, ಸಂಸ್ಥೆಯ ವೈಸ್ ಚೇರ್ಮನ್ ಹಾಗೂ ಮಹಿಳಾ ರಾಜ್ಯಾಧ್ಯಕ್ಷರಾದ ಪೂಜಾ ಶೆಟ್ಟಿ ಮತ್ತು ರಾಜ್ಯ ಸಮಿತಿಯ ಪ್ರಮುಖರು ಅವರ ಹೆಸರನ್ನು ಶಿಫಾರಸು ಮಾಡಿದ್ದರು. ರಾಜ್ಯ ಸಮಿತಿಯ ಸೂಚನೆಯನ್ನು ಪರಿಗಣಿಸಿದ ರಾಜ್ಯಾಧ್ಯಕ್ಷರಾದ ಡಾ. ರವಿ ಶೆಟ್ಟಿ ಬೈಂದೂರು ಅವರು ಸುಬ್ರಹ್ಮಣ್ಯ ಮೊಗವೀರ ಅವರ ನೇಮಕಾತಿಗೆ ಅಂತಿಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ಹಾಗೂ ಪತಂಜಲಿ ಯೋಗ ಸಮಿತಿ ಅನೆಗುಡ್ಡೆ–ಕುಂಭಾಶಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಅನೆಗುಡ್ಡೆಯ ಶ್ರೀ ವಿನಾಯಕ ಸಭಾಭವನದಲ್ಲಿ ಯೋಗ ಹಾಗೂ ಗುರುವಂದನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವು ಬೆಳಿಗ್ಗೆ 5.30 ಗಂಟೆಗೆ ಯೋಗಗುರು ಶ್ರೀ ಗಣೇಶ್ ಹೆಮ್ಮಾಡಿ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸದೊಂದಿಗೆ ಆರಂಭವಾಯಿತು. ಯೋಗಾಭ್ಯಾಸದಲ್ಲಿ ಅನೇಕ ಸದಸ್ಯರು ಹಾಗೂ ಯೋಗಾಸಕ್ತರು ಭಾಗವಹಿಸಿದರು. ಗುರು ವಂದನಾ ಕಾರ್ಯಕ್ರಮದಲ್ಲಿ ಶ್ರೀ ರವಿರಾಜ ಉಪಾಧ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ಕ್ಲಬ್ ತೆಕ್ಕಟ್ಟೆಯ ಅಧ್ಯಕ್ಷ ರೋಟೇರಿಯನ್ ಟಿ. ರಾಜೀವ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಯೋಗದ ಮಹತ್ವ ಹಾಗೂ ಆರೋಗ್ಯದ ದೃಷ್ಟಿಯಿಂದ ಅದರ ಉಪಯೋಗಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಯೋಗ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಯೋಗಗುರು ಗಣೇಶ್ ಹೆಮ್ಮಾಡಿ ಅವರನ್ನು ಸನ್ಮಾನಿಸಲಾಯಿತು. ರೋಟರಿ ವಲಯ–2ರ ಸಹಾಯಕ ಗವರ್ನರ್ ರೋಟೇರಿಯನ್ ಟಿ. ಸುಧಾಕರ ಶೆಟ್ಟಿ ಅವರು ಮಾತನಾಡಿ, ಉತ್ತಮ ಶಿಕ್ಷಕರ ಮಾರ್ಗದರ್ಶನದಲ್ಲಿ ಯೋಗ ತರಗತಿಗಳು ಅತ್ಯುತ್ತಮವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನೂರಾರು ವರ್ಷಗಳ ಇತಿಹಾಸವಿರುವ ಯಕ್ಷಗಾನದ ಶ್ರೀಮಂತ ಪ್ರಕಾರವಾಗಿರುವ ಗೊಂಬೆಯಾಟವನ್ನು ಕಲಾ ಪ್ರೋತ್ಸಾಹಕರು ಪ್ರೇಕ್ಷಕರು ಜೊತೆಗೂಡಿ ಉಳಿಸಬೇಕಾಗಿದೆ. ಯಕ್ಷಗಾನ ವಿವಿಧ ಪ್ರಕಾರಗಳಿಗೆ ವಿಪುಲವಾದ ಅವಕಾಶಗಳಿದ್ದರೂ ಪಡುವಲಪಾಯ ಎಂದು ಕರೆಸಿಕೊಳ್ಳುವ ಈ ಜನಪದ ಕಲೆಯಲ್ಲಿ ಇಂದು ಎರಡೇ ಗೊಂಬೆಯಾಟ ತಂಡಗಳು ಉಳಿದುಕೊಂಡಿವೆ. ಯಕ್ಷಗಾನ ವಾಲ್ಮೀಕಿ ಎಂದು ಕರೆಸಿಕೊಂಡಿರುವ ಪಾರ್ತಿಸುಬ್ಬನ ವಂಶದವರಿಂದ ಪ್ರಾರಂಭವಾದ ಕಾಸರಗೋಡು ಗೋಪಾಲಕೃ? ಯಕ್ಷಗಾನ ಗೊಂಬೆಯಾಟ ತಂಡ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಕೋಟ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಬೆಂಗಳೂರಿನ ಯಕ್ಷದೇಗುಲ ಸಂಸ್ಥೆಯ ಸಂಯೋಜನೆಯಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಆಯೋಜಿಸಲಾದ ಯಕ್ಷಗಾನ ಗೊಂಬೆಯಾಟ ಉತ್ಸವವನ್ನು ಗೊಂಬೆಯ ಮೂಲಕ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾರಂತ ಪ್ರತಿಷ್ಠಾನ ಕೋಟ ಇದರ ಅಧ್ಯಕ್ಷರಾದ ಆನಂದ ಸಿ. ಕುಂದರ್, ಉಡುಪಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನೀಲಾವರ…

Read More