Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸುಳ್ಯದ ಎನ್‌ಎಂಸಿ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ-ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡಗಳು ಎರಡೂ ವಿಭಾಗಗಳಲ್ಲಿ ಸತತ 23ನೇ ಬಾರಿಗೆ ಸಮಗ್ರ ಚಾಂಪಿಯನ್‌ಶಿಪ್ ಪಡೆದುಕೊಂಡರು. ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ, ಒಟ್ಟು 10 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್‌ಶಿಪ್‌ನ್ನು ಕುರುಂಜಿ ವಿಶ್ವನಾಥ ಗೌಡ ಮೆಮೋರಿಯಲ್ ಟ್ರೋಪಿಯೊಂದಿಗೆ ತನ್ನದಾಗಿಸಿಕೊಂಡರು. ಪುರುಷರ ವಿಭಾಗದಲ್ಲಿ ಶೈಲೇಶ್ ಪ್ರಥಮ, ಸುನಿಲ್ ದ್ವಿತೀಯ ಹಾಗೂ ರೋಹಿತ್ ತೃತೀಯ ಸ್ಥಾನ ಪಡೆದರೆ, ಜುಗುನ್ನು ಕುಮಾರ್ ನಾಲ್ಕನೇ, ರೋಹನ್ ಕುಮಾರ್ ಐದನೇ ಹಾಗೂ ಅಜಯ್ ಕುಮಾರ್ ಪಾಟೀಲ್ ಆರನೇ ಸ್ಥಾನ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿಯೂ ಆಳ್ವಾಸ್ ತಂಡ 10 ಅಂಕಗಳೊAದಿಗೆ ಸಮಗ್ರ ಚಾಂಪಿಯನ್‌ಶಿಪ್ ಪಡೆದು ಕೈಕುರೆ ಶ್ರೀ ರಾಮಣ್ಣ ಗೌಡ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಭಾಗೀರಥಿ ಪ್ರಥಮ, ಯಾಶಿ ದ್ವಿತೀಯ ಹಾಗೂ ಆರತಿ ತೃತೀಯ ಸ್ಥಾನ ಪಡೆದರು. ಆರಾಧನಾ ನಾಲ್ಕನೇ, ಆರತಿ ಅರ್ಜುನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಬಾಕ್ಸಿಂಗ್  ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಬೇಟೆಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. *17ರ ವಯೋಮಾನದ ಬಾಲಕರ ವಿಭಾಗದಲ್ಲಿ ಅನ್ವೇಷಣ್, ಪ್ರದ್ವಿನ್, ನಿಹಾನ್ ಮತ್ತು ಡೆಲ್ವಿನ್ ಹಾಗೂ ಬಾಲಕಿಯರ ವಿಭಾಗದಲ್ಲಿ ಶರಣ್ಯ, ಕೀರ್ತನಾ, ಚಾರ್ವಿ, ಆಯುಷಿ, ಅನಿಷ್ಕಾ ಮತ್ತು ಸಾನಿಧ್ಯಾ ಪ್ರಥಮ ಸ್ಥಾನ ಗಳಿಸಿದರು. *14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಚಿದ್, ರಿತ್ವಿಕ್, ಪ್ರತಿಕ್, ಆಯುಷ್, ಯಶ್ವಿನ್ ಮತ್ತು ಸಾತ್ವಿಕ್ ಪ್ರಥಮ ಸ್ಥಾನ ಸಹಿತ ಚಿನ್ನದ ಪದಕದೊಂದಿಗೆ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಗೆ ಆಯ್ಕೆಗೊಂಡರು. ಜನತಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಯ ಉತ್ತೇಜನ, ಪ್ರತಿನಿತ್ಯದ ಕಟ್ಟುನಿಟ್ಟಿನ ತರಬೇತಿ ತರಗತಿಗಳು, ವಿದ್ಯಾರ್ಥಿಗಳು ಮತ್ತು ತರಬೇತುದಾರರ ನಿರಂತರ ಪರಿಶ್ರಮದಿಂದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಈಗಾಗಲೇ ಭರ್ಜರಿ ಜಯಭೇರಿ ಬಾರಿಸುತ್ತ ಹೊಸ ಹೊಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಂಜಿನಿಯರ್ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಭಾರತೀಯ ವೈಮಾನಿಕ ಕ್ಷೇತ್ರದ ಖ್ಯಾತ ವಿಜ್ಞಾನಿ ಹಾಗೂ ನಿವೃತ್ತ ಎಲೆಕ್ಟ್ರಾನಿಕ್ಸ್ ಇಂಜಿನಿಯರ್, ಕುಂದಾಪುರದ ಡಾ. ಕೆ. ಕರುಣಾಕರ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಕರುಣಾಕರ ಅವರು, ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯ (NAL) ಹಾಗೂ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ADA)ನಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ‘ತೇಜಸ್ʼ ಲಘು ಯುದ್ಧ ವಿಮಾನ ಹಾಗೂ ‘ಅಗ್ನಿʼ ಕ್ಷಿಪಣಿಯ ಅಭಿವೃದ್ಧಿ, ವಿನ್ಯಾಸ ಮತ್ತು ತಯಾರಿಕೆಯಲ್ಲಿ ತಾವು ಪಡೆದ ಅನುಭವಗಳನ್ನು ಹಂಚಿಕೊಂಡರು. ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿದರೆ ಅವಕಾಶಗಳು ತಾನಾಗಿಯೇ ಅರಸಿಕೊಂಡು ಬರುತ್ತವೆ ಎಂದು ಯುವ ಇಂಜಿನಿಯರ್‌ಗಳಿಗೆ ಕಿವಿಮಾತು ಹೇಳಿದರು. ಎಚ್. ಜಗದೀಶ್ ಪರಿಚಯಿಸಿ ಅಭಿನಂದಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ ಸ್ವಾಗತಿಸಿದರು. ಚಂದ್ರಶೇಖರ ಶೆಟ್ಟಿ ವಂದಿಸಿದರು. ಹೆರಿಯ ಮಾಸ್ಟರ್ ಪ್ರಾರ್ಥನೆ ನೆರವೇರಿಸಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಆಧಾರ್ ಕಾಡ್೯ ಕೆವೈಸಿ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಆಧಾರ್ ಅಭಿಯಾನ ಪೂರಕ ವಾತಾವರಣ ಕಲ್ಪಿಸುವುದರ ಜತೆಗೆ ಅದೊಂದು ಜನಸ್ನೇಹಿ ಕಾರ್ಯಕ್ರಮವಾಗಿ ರೂಪುಗೊಂಡಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾದ ಆಡಳಿತ ಮಂಡಳಿಯ ಅಧ್ಯಕ್ಷ ನರಿಕೊಂಬು ಪ್ರಕಾಶ್ ಕಾರಂತ್ ಹೇಳಿದರು. ಅವರು ಶನಿವಾರ ಸಾಲಿಗ್ರಾಮದ ಗಿರಿಜಾ ಸಭಾಂಗಣದಲ್ಲಿ ಭಾರತೀಯ ಅಂಚೆ ಇಲಾಖೆ ಮತ್ತು ಕಾರ್ಕಡ ಗೆಳೆಯರ ಬಳಗ ನೇತೃತ್ವದಲ್ಲಿ ಹಮ್ಮಿಕೊಂಡ ಆಧಾರ್ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘಸಂಸ್ಥೆಗಳು ಜನಪರ ಕಾರ್ಯಕ್ರಮಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ಮಾದರಿಯಾಗುವ ಕಾರ್ಯ ಎಸೆಗಬೇಕು ಈ ನಿಟ್ಟಿನಲ್ಲಿ ಗೆಳೆಯರ ಬಳಗ ಮನೆಮಾತಾಗಿ ಬೆಳೆದ ಸಂಸ್ಥೆಯಾಗಿ ರೂಪುಗೊಂಡಿದೆ ಎಂದರು. ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಅಧ್ಯಕ್ಷೆತೆಯನ್ನು ವಹಿಸಿ ಸ್ವಾಗತಿಸಿದರು. ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ದೇಗುಲದ ಟ್ರಸ್ಟಿ ಪ್ರಕಾಶ್ ಮಯ್ಯ, ಅಂಚೆ ಇಲಖೆ ಕುಂದಾಪುರ ವಿಭಾಗದ ಸಭಾ ರೆಡ್ಡಿ, ಕಾರ್ಕಡ ಅಂಚೆ ಕಛೇರಿಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಬಳಗದ ಉಪಾಧ್ಯಕ್ಷ ಶಶಿಧರ ಮಯ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ವ್ಯವಸ್ಥಿತವಾಗಿ ಶಿಸ್ತುಬದ್ಧವಾಗಿ ಮದ್ಯವರ್ಜನ ಶಿಬಿರಗಳನ್ನು ರೂಪಿಸಿದ್ದಾರೆ. ಹೆಗ್ಗಡೆ ಅವರ ದೂರದೃಷ್ಟಿತ್ವದ ಫಲವಾಗಿ ಕಳೆದ ಎರಡು ದಶಕಗಳಿಂದ ಅನೇಕ ಮನೆಗಳು ಬೆಳಗಿವೆ. ಇಡೀ ದೇಶಕ್ಕೆ ವಿಶ್ವಕ್ಕೆ ಮಾದರಿಯಾದ ಕಾರ್ಯಕ್ರಮಗಳನ್ನು ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡಿದ್ದಾರೆ. ಅವರು ಮಾಡಿದ ಸಾಧನೆಯನ್ನು ಯಾರೂ ಮಾಡಲು ಸಾಧ್ಯವಿಲ್ಲ ಎಂದು ಕುಂದಪ್ರಭ ಸಂಪಾದಕ ಯು.ಎಸ್. ಶೆಣೈ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಂದಾಪುರ- 1, ಕುಂದಾಪುರ- 2 ಮತ್ತು ಬೈಂದೂರು ತಾಲೂಕು ಮತ್ತು ಜನಜಾಗೃತಿ ವೇದಿಕೆ ಕುಂದಾಪುರ ಹಾಗೂ ಬೈಂದೂರು ತಾಲೂಕು ಇದರ ಜಂಟಿ ಆಶ್ರಯದಲ್ಲಿ ಕುಂದಾಪುರದ ನಾರಾಯಣ ಗುರು ಸಭಾಂಗಣದಲ್ಲಿ ಶನಿವಾರ ಜರಗಿದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ ಮತ್ತು ಜನಜಾಗೃತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ನಡೆಯಲಿರುವ ಪ್ರವರ್ತನಾ ದಿನಕ್ಕೆ ಭೇಟಿ ನೀಡಲು ಅಕ್ಟೋಬರ್ 18 ರಿಂದ 20 ರ ವರೆಗೆ ಕೆ.ಎಸ್.ಆರ್.ಟಿ.ಸಿ ಮತ್ತು ಇತರೆ ಸಾರಿಗೆ ಬಸ್ಸು ಹಾಗೂ ರೈಲಿನ ಮೂಲಕ ಯಾತ್ರೆಯನ್ನು ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swd.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 9 ಕೊನೆಯ ದಿನ. ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ಮಣಿಪಾಲ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2574892 ಅನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಸ್ವಚ್ಛತಾ ಹಿ  ಸೇವಾ – 2026 ಆಂದೋಲನದ ಪರವಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರು ಮಾತನಾಡಿ, ಮಕ್ಕಳಿಗೆ ಸ್ವಚ್ಛತಾ ವಿಷಯದ ಬಗ್ಗೆ ತಿಳಿ ಹೇಳಿ, ಮಕ್ಕಳಾಗಿ ತಮ್ಮ ಜವಾಬ್ದಾರಿ ಬಗ್ಗೆ ಎಚ್ಚರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಇ ಒ ವಿವಿರಾಜ್ ಹೆಗ್ಡೆ ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ವಿದ್ಯಾರ್ಥಿಗಳು, ಶಿಕ್ಷಕರು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬ್ಯಾರೀಸ್ ಪದವಿ ಪೂರ್ವ ಕಾಲೇಜು ಕೋಡಿ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ  ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ  ಬಾಲಕ – ಬಾಲಕಿಯರ ತಂಡವು ಅಮೋಘ ಆಟದ  ಪ್ರದರ್ಶನ ನೀಡಿ ಜಯಶಾಲಿಗಳಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ನಿರಂತರ ಪ್ರೋತ್ಸಾಹ ಹಾಗೂ ಸೂಕ್ತ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದಾರೆ. ಯಶಸ್ಸಿನ ಹೆಜ್ಜೆ ಇಟ್ಟಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಜಿಲ್ಲಾ ಮಟ್ಟದಲ್ಲಿಯೂ ಸಾಧನೆ ಮೆರೆಯುವಂತೆ ಶುಭ ಹಾರೈಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಯಜ್ಞ – ತಪಸ್ಸು – ವ್ರತಗಳನ್ನು ಮಾಡದೇ ಇದ್ದರೂ ಬಾಯಾರಿದವರಿಗೆ ನೀರನ್ನು ದಾನ ಮಾಡಿದವನು ಸ್ವರ್ಗವನ್ನು ಪಡೆಯುತ್ತಾನೆ. ಬಾಯಾರಿದವರಿಗೆ ನೀರು ನೀಡುವುದು ಮತ್ತೊಬ್ಬರ ಜಠರಾಗ್ನಿಗೆ ಜಲವನ್ನು ಆಹುತಿಯಾಗಿ ನೀಡುವ ಯಜ್ಞದಂತೆ. ಬೇಸಿಗೆಯಲ್ಲಿ ದಾರಿಹೋಕರಿಗೆ ನೀರನ್ನು ಒದಗಿಸುವುದು, ಬಾವಿ ಹಾಗೂ ಕೆರೆಗಳನ್ನು ನಿರ್ಮಿಸುವುದು ಶ್ರೇಷ್ಠ ಕಾರ್ಯ ಎಂದು ಧರ್ಮ ಶಾಸ್ತ್ರವನ್ನು ಆಧರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಜೀವನದಲ್ಲಿ ದೊರೆಯುವ ಅಪರೂಪದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದ ಶ್ರೀಗಳು, ಸ್ವಾತಿ ನಕ್ಷತ್ರದ ಮಳೆಯ ನೀರಿನ ಕುರಿತಾಗಿ ವಿವರಿಸುತ್ತಾ, ಇದು ಜೀರ್ಣಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ನೂತನ ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿ ಸಹಾಯಧನ / ಸಾಲ ಸೌಲಭ್ಯ ಪಡೆಯಲು ಅಲೆಮಾರಿ ಮತ್ತು ಅರೆ ಅಲೆಮಾರಿ ಹಾಗೂ ಅದರ ಉಪಜಾತಿಗಳಿಗೆ ಸೇರಿರುವ ಅರ್ಹ ಫಲಾಪೇಕ್ಷಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ನಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kaad.karnataka.gov.in , ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22374832, 22374833 ಅಥವಾ ಜಿಲ್ಲಾ ಕಚೇರಿ…

Read More