ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್‌ಕೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರಫುಲ್ಲಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಗೌತಮಿ ನಾಯಕ್ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’ಬೆಳಕು – ಆಪ್ತ ಸಮಾಲೋಚನಾ ಕೇಂದ್ರ’ವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಉದ್ಘಾಟಿಸಲಾಯಿತು. ಪ್ರತಿಷಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಭೂಮಿಯಲ್ಲಿರುವ ಎಲ್ಲಾ ಜೀವಿಗಳ ಪೈಕಿ ಮನುಷ್ಯ ಅತ್ಯಂತ ವಿಶೇಷ. ತನ್ನ ಬುದ್ಧಿಶಕ್ತಿ, ಕಲ್ಪನೆ, ನೈತಿಕ ಮೌಲ್ಯಗಳು ಹಾಗೂ ಸಮಾಜವನ್ನು ರೂಪಿಸುವ ಸಾಮರ್ಥ್ಯವು ಮನುಷ್ಯನನ್ನು ಇತರ ಜೀವರಾಶಿಗಳಿಗಿಂತ ಭಿನ್ನಗೊಳಿಸಿದೆ. ಆದರೆ, ಈ ಅಸಾಧಾರಣ ಸಾಮರ್ಥ್ಯಗಳ ಜೊತೆಗೆ ಮನುಷ್ಯ ತನ್ನ ಭಾವನಾತ್ಮಕ ಅಸ್ಥಿರತೆಯ ಬಲೆಗೆ ಸುಲಭವಾಗಿ ಸಿಲುಕ ಬಲ್ಲ ಎಂದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯತ್ನ ಮಾಡುವ ಸಂದರ್ಭಗಳಲ್ಲಿ, ಸ್ಪರ್ಧೆ, ಅತಿಯಾದ ಆಕಾಂಕ್ಷೆ ಹಾಗೂ ಪೋಷಕರ ಒತ್ತಡದಿಂದಾಗಿ ನಿರೀಕ್ಷಿತ ಫಲಿತಾಂಶವನ್ನು ಸಾಧಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭಗಳು ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಈ ಸಮಯದಲ್ಲಿ ಆಪ್ತ ಸಮಾಲೋಚನೆಯ ಅಗತ್ಯತೆಯಿದೆ ಎಂದರು. ಸಮಸ್ಯೆಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶಿವಕುಮಾರ್ ಅವರು ಮಾತನಾಡಿ, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯ ನುಡಿ ಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನಲ್ಲಿ ಶನಿವಾರ ಪೋಷಕರ ಸಭೆ ಆಯೋಜಿಸಲಾಯಿತು. ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಕಲಿಕೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿರುವ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ವಾರ್ಷಿಕ ಯೋಜನೆಯ ಕುರಿತು ಹಾಗೂ ಕಾಲೇಜಿನ ನಿಯಮಗಳ ಕುರಿತು ಮಾತನಾಡಿದರು. ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೋಡಿ ಕನ್ಯಾಣ ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಸಮುದ್ರ ಪೂಜೆ ಇತ್ತೀಚಿಗೆ ನೆರವೆರಿತು. ಸಮುದ್ರ ಪೂಜಾ ವಿಧಿಗಳನ್ನು ವಿದ್ವಾನ್ ಸುಬ್ರಾಯ ಐತಾಳ್ ನೆರವೆರಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸಂತೋಷ್ ಖಾರ್ವಿ, ಉಪಾಧ್ಯಕ್ಷರಾದ ಸಂತೋಷ್ ಕುಂದರ್, ಉದಯ್ ಕಾಂಚನ್, ಕಾರ್ಯದರ್ಶಿ ಸುಧೀರ್ ಕುಂದರ್, ಜೊತೆ ಕಾರ್ಯದರ್ಶಿ ವೆಂಕಟೇಶ್ ಮೆಂಡನ್, ವಾಮನ ಸಾಲಿಯಾನ, ಪ್ರಭಾಕರ್ ಮೆಂಡನ್, ನಾರಾಯಣ ಬಂಗೇರ ,ಅಣ್ಣಪ್ಪ ಕುಂದರ್, ಸತೀಶ್ ಕುಂದರ್ ,ರಾಘವ ಕುಂದರ್, ಮಂಜುನಾಥ ಕುಂದರ್, ಗಣೇಶ್ ಕುಂದರ್, ಶ್ರೀರಾಮ ದೇಗುಲದ ಅಧ್ಯಕ್ಷರಾದ ರಾಘವೇಂದ್ರ ಕರ್ಕೇರ, ರಾಮಚಂದ್ರ ಖಾರ್ವಿ, ಆನಂದ ತಂಡೇಲ್ಕರ್, ನಾಗರಾಜ ಖಾರ್ವಿ, ಶ್ರೀನಿವಾಸ ಪೂಜಾರಿ, ವಿಜಯ ತಿಂಗಳಾಯ, ಮುತ್ತಪ್ಪ ಸಾಲಿಯಾನ್, ಸುಬ್ರಮಣ್ಯ ಖಾರ್ವಿ, ಜೀವನ ಖಾರ್ವಿ, ವಿಜಯ ಕರ್ಕೇರ, ಚಂದ್ರ ಕುಂದರ್, ಪ್ರಕಾಶ್ ಬಂಗೇರ, ಸಂತೋಷ್ ಸಾಲಿಯಾನ್, ಮೀನುಗಾರ ಮುಖಂಡರಾದ ಸಂತೋಷ್ ಕುಂದರ್, ಶಂಕರ್ ಸಿರಿಯಾನ್, ನರಸಿಂಹ ಕೋಟ್ಯಾನ್, ಜಯಂತ ಬೆನ್ನು ಉಪಸ್ಥಿರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಡ್ಲೂರು ಝಿಯಾ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಗಗನ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಅದೇ ಪಂದ್ಯಾಟದ 25 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಪ್ರೀತೇಶ್ 8ನೇ ತರಗತಿ ವಿದ್ಯಾರ್ಥಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದ 30 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಸುಧನ್ವ 8 ನೇ ತರಗತಿ ವಿದ್ಯಾರ್ಥಿ ತೃತೀಯ ಸ್ಥಾನಗಳಿಸಿರುತ್ತಾರೆ. ಅವರಿಗೆ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್, ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜರ್ಮನಿಯ ರಿಯಾನ್-ರೋಹೂರ್‌ನಲ್ಲಿ ನಡೆದ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2025 (ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025) ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಾಲಿನಿ 20ಕಿಮೀ ನಡಿಗೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡರು. ಈ ಬಾರಿಯ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025ದಲ್ಲಿ ಆಳ್ವಾಸ್‌ನ ಕ್ರೀಡಾ ದತ್ತು ಯೋಜನೆಯ 11 ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕ್ರೀಡಾಪಟುವಿನ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ವಲಯ ವಿಪ್ರ ಮಹಿಳಾ ತಂಡದಿಂದ ಶ್ರಾವಣ ಸಂಭ್ರಮ ಕಾರ್ಯಕ್ರಮ ಇತ್ತೀಚಿಗೆ ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ಜರಗಿತು. ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎಸ್. ಕಾರಂತ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ಶ್ರಾವಣ ಮಾಸದ ಶನಿವಾರಕ್ಕೆ ಧಾರ್ಮಿಕ ಮಹತ್ವವಿದ್ದು ವಿಪ್ರ ಮಹಿಳಾ ತಂಡದಿಂದ ಆಯೋಜಿಸಲಾದ ಶ್ರಾವಣ ಸಂಭ್ರಮವು ಈ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗುನೀಡಿದೆ ಹಾಗೂ ಮಹಿಳೆಯರನ್ನು ಒಗ್ಗೂಡಿಸುವಲ್ಲಿ ಸಹಾಯಕವಾಗಿದೆ ಎಂದರು. ವಿಪ್ರ ಮಹಿಳಾ ವಲಯ ಅಧ್ಯಕ್ಷೆ ವನಿತಾ ಉಪಾಧ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯ ಅನಂತಪದ್ಮನಾಭ ಐತಾಳ, ವಿಪ್ರ ಮಹಿಳಾ ತಂಡದ ಗೌರವಾಧ್ಯಕ್ಷೆ ಜಾಹ್ನವಿ ಹೇರ್ಳೆ, ಶ್ರೀ ಗುರುನರಸಿಂಹ ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಸುಜಾತ ಬಾಯರಿ, ಜೆಸಿಐ ಸಂಸ್ಥೆಯ ಅಕ್ಷತಾ ಗಿರೀಶ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವೃತ್ತ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ವಾಸುದೇವ ಕೃಪಾ ಆಂಗ್ಲ ಮಾಧ್ಯಮ ಶಾಲೆ ಬೈಲೂರು ಸಂಯೋಜನೆಯಲ್ಲಿ ಮಾಹೆ ಮಣಿಪಾಲ ಇಲ್ಲಿಯ ಎಂ.ಐ.ಟಿ ಈಜು ಕೊಳದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಈಜು ಸ್ಪರ್ದೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ದಿಗಂತ ಕೋಟತಟ್ಟು ಅವರು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬೆಸ್ಟ್ ಸ್ಟ್ರೋಕ್ ಹಾಗೂ 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಥಮ್ ಬಾರಿಕೆರೆ 50 ಮೀಟರ್ ಬ್ರೆಸ್ಟ್ರೋಕ್, 100 ಮೀಟರ್ ಬ್ರೆಸ್ಟ್ರೋಕ್, 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಈರ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶ್ರೀಧರ್ ಉಳಿತಾಯ ಹಾಗೂ ರಾಜರಾಮ ನಾವಡ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾಸಾಧನೆಯನ್ನು ಗೀತಾನಂದ ಪೌಂಢೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಅಧ್ಯಕ್ಷರು ಸರ್ವಸದಸ್ಯರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಮುಖ್ಯೋಪಾಧ್ಯಾಯರು, ಅಧ್ಯಕ್ಷರು ಮತ್ತು ಸರ್ವಸದಸ್ಯರು ಶಾಲಾ…
