ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ತಾಲೂಕಿನ ಅಂಪಾರು ಮೂಡುಬಗೆಯ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಶಾಲಾಬ್ಯಾಗ್, ಕೊಡೆ ಮತ್ತು ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸ್ವಯಂಸ್ಫೂರ್ತಿ ಫೌಂಡೇಶನ್ ತಂಡವು ಮಕ್ಕಳಿಗೆ ಶಿಕ್ಷಣಕ್ಕೆ ಅಗತ್ಯವಿರುವ ವಸ್ತುಗಳನ್ನು ನೀಡಿ ಸಹಕರಿಸಿದ್ದಾರೆ ಇವರ ಸೇವೆ ಅಮೂಲ್ಯವಾದದು ಎಂದರು. ಸ್ವಯಂಸ್ಫೂರ್ತಿ ಫೌಂಡೇಶನ್ ಪ್ರವರ್ತಕ ನಾಗರಾಜ ಶೆಟ್ಟಿ ಜಡ್ಕಲ್, ಶಾಲೆಯ ಮುಖ್ಯೋಪಧ್ಯಾಯ ರವೀಂದ್ರ ದೇವಾಡಿಗ, ಶಾಲಾ ಶಿಕ್ಷಕರು ಹಾಗೂ ಸ್ವಯಂಸ್ಪೂರ್ತಿ ತಂಡದ ಸದಸ್ಯರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.21: ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರನ್ನಾಗಿ ಅನಿತಾ ಆರ್.ಕೆ. ಅವರನ್ನು ಆಯ್ಕೆಮಾಡಲಾಗಿದೆ. ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ತಕ್ಷಣವೇ ಅನಿತಾ ಆರ್.ಕೆ. ಅವರನ್ನು ನೇಮಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಬಗ್ಗೆ ಬಿಜೆಪಿ ಸಂಘಟನಾ ಪರ್ವದ ಜಿಲ್ಲಾ ಚುಣಾವಣಾಧಿಕಾರಿ ರವಿಶಂಕರ್ ಮಿಜಾರು ಪ್ರಕಟಣೆ ಹೊರಟಿಸಿದ್ದಾರೆ. ಅನಿತಾ ಅವರ ಈ ಹಿಂದೆ ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಮರವಂತೆ ಪಂಚಾಯತ್ ಅಧ್ಯಕ್ಷರಾಗಿಯೂ ಒಂದು ಅವಧಿಗೆ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ► ಬೈಂದೂರು ಮಂಡಲ ಬಿಜೆಪಿ ಹಾಲಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ರಾಜೀನಾಮೆ – https://kundapraa.com/?p=86500 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ವಿಜಯ ಕರ್ನಾಟಕ ಮತ್ತು ಟೈಮ್ಸ ಆಫ್ ಇಂಡಿಯಾ ಪತ್ರಿಕೆಗಳ ಸಹಯೋಗದೊಂದಿಗೆ ಶನಿವಾರ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್. ಆರ್. ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೋಗವೆಂದರೆ ಕೇವಲ ಆಸನಗಳಲ್ಲ. ಅಷ್ಟಾಂಗಗಳನ್ನು ಹೊಂದಿದೆ. ನಾವು ಏಕಾಗ್ರತೆಗೆ ತಲುಪಿದರೆ ಮಾತ್ರ ಯೋಗ ಫಲ ನೀಡುವುದು. ಯೋಗಾಸನಗಳ ಅಭ್ಯಾಸ ಮಾಡುವುದು ದೇಹದ ಅಂಗಾಂಗಗಳಿಗೂ ಪುಷ್ಟಿದಾಯಕ. ಗುರಿಯನ್ನಿಟ್ಟುಕೊಂಡು ಸಾಧನೆ ಮಾಡಿ ಎಂದರು. ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಬರಹಗಾರರಾದ ಜಾನ್ ಡಿಸೋಜಾ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ದಿವಂಗತ ವೇದಮೂರ್ತಿ ರಾಮಚಂದ್ರ ಭಟ್ಟರ ಕನಸಿನ ಕೂಸಾದ ಈ ಶಾಲೆ ಭವ್ಯ ಭಾರತದ ಭವಿಷ್ಯ ನಿರ್ಮಿಸಬೇಕಾದ ಮಕ್ಕಳಿಗೆ ತಾಯಿಯ ಗರ್ಭಗೃಹದಂತೆ ಅಗತ್ಯತೆಗಳನ್ನು ಪೂರೈಸುತ್ತಿದೆ. ಮರಗಿಡಬಳ್ಳಿಗಳ ಮಧ್ಯದಲ್ಲಿ ಶುದ್ಧವಾದ ವಾತಾವರಣದಲ್ಲಿದ್ದು, ಮಕ್ಕಳಿಗೆ ಯೋಗಗಳ ಪೂರ್ಣಪ್ರಯೋಜನ ಪಡೆಯಲು ಸಹಕಾರಿಯಾಗಿದೆ. ಯುವ ಜನರಲ್ಲಿ ಜಾಗೃತಿಮೂಡಿಸಲು ನಾವು ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.21: ಬೈಂದೂರು ಮಂಡಲ ಬಿಜೆಪಿ ಹಾಲಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಅವರು ಸಲ್ಲಿಸಲಾಗಿದ್ದ ರಾಜೀನಾಮೆ ಪತ್ರವನ್ನು ಜಿಲ್ಲಾಧ್ಯಕ್ಷರು ಶನಿವಾರ ಅಂಗೀಕರಿಸಿದ್ದಾರೆ. ಕಳೆದ 5 ವರ್ಷಗಳಿಂದ ಮಂಡಲ ಅಧ್ಯಕ್ಷ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಿದ್ದೇನೆ. ಸಂಘಟನಾ ಪರ್ವ ನಡೆಯುತ್ತಿರುವ ಈ ಸಂದರ್ಭದಲ್ಲಿ ಪಕ್ಷದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಬೇಕಾಗಿರುವುದರಿಂದ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಹೊಸ ನಾಯಕತ್ವಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ದೀಪಕ್ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸಿ, ನೂತನ ಅಧ್ಯಕ್ಷರನ್ನು ಶೀಘ್ರವಾಗಿ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ. ದೀಪಕ್ ಕುಮಾರ್ ಶೆಟ್ಟಿ ಅವರು ಬೈಂದೂರು ಮಂಡಲ ಬಿಜೆಪಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಮುಂದುವರಿದಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಅಂಗವಾಗಿ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ನಡೆಯುವ ಲಗೋರಿ – ಗ್ರಾಮೀಣ ಕ್ರೀಡಾಕೂಟದ ಪೂರ್ವಭಾವಿ ತಯಾರಿ ಸಭೆಯನ್ನು ಕಲಾಕ್ಷೇತ್ರ ಕಛೇರಿಯ ಪ್ರಕಾಶಾಂಗಣದಲ್ಲಿ ಕರೆಯಲಾಗಿತ್ತು. ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸುವ ಕುರಿತು ದೈಹಿಕ ಶಿಕ್ಷಕರಾದ ಅರುಣ್ ಶೆಟ್ಟಿ, ಚಂದ್ರಶೇಖರ ಬೀಜಾಡಿ, ರಾಜಕೀಯ ಮುಂದಾಳು ವಿಕಾಸ್ ಹೆಗ್ಡೆ, ಸಾಹಿತ್ಯ ಪರಿಷತ್ತಿನ ಸುಬ್ರಹ್ಮಣ್ಯ ಶೆಟ್ಟಿ, ಲಯನ್ಸ್ ಪ್ರಮುಖರಾದ ರಾಜೀವ ಕೋಟ್ಯಾನ್, ರಮಾನಂದ ಗಾಣಿಗ ಮತ್ತು ಕ್ರೀಡಾ ಪಟು ಪ್ರದೀಪ್ಚಂದ್ರ ಶೆಟ್ಟಿ ತಮ್ಮ ಅಭಿಪ್ರಾಯವನ್ನು ಹಂಚಿಕೊoಡರು. ಜುಲೈ 20 ರಂದು ಕುಂದಾಪುರ ಬೋರ್ಡ್ ಹೈಸ್ಕೂಲಿನ ಮೈದಾನದಲ್ಲಿ ಬೆಳಿಗ್ಗೆ 9.೦೦ ಗಂಟೆಯಿಂದ ಈ ಕ್ರೀಡಾಕೂಟವು ಆರಂಭವಾಗಲಿದೆ. ಕಳೆದ ವರ್ಷ ನಡೆದಿದ್ದ ಈ ಕಾರ್ಯಕ್ರಮವು ಅತ್ಯಂತ ಯಶಸ್ಸನ್ನು ಕಂಡ ಹಿನ್ನೆಲೆಯಲ್ಲಿ ಈ ಬಾರಿ ಮತ್ತೊಮ್ಮೆ ಆಯೋಜಿಸಬೇಕು ಎನ್ನುವುದು ಸಂಸ್ಥೆಯ ಬಯಕೆಯಾಗಿದೆ. ಸದರಿ ಕ್ರೀಡಾಕೂಟವು ಯಾವ ಕ್ರೀಡೆಗಳನ್ನು ಒಳಗೊಂಡಿದೆ ಹಾಗೂ ಅದರ ವಿವಿರಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಅಧ್ಯಕ್ಷ ಕಿಶೋರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಜಿ ಸಭಾಪತಿ ಕೆ ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪ್ರತಾಪಚಂದ್ರ ಶೆಟ್ಟಿಯವರಿಂದ ಮಾಹಿತಿ ಪಡೆದರು. ಜಿಲ್ಲೆಯ ಸಮಸ್ಯೆ ಕುರಿತು ಮತ್ತು ರಾಜಕೀಯ ಸಲಹೆ ಮಾರ್ಗದರ್ಶನ ನೀಡಬೇಕೆಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ , ಮುನಿಯಾಲು ಉದಯ ಶೆಟ್ಟಿ , ಬೆಳ್ಟೆ ಸತೀಶ ಕಿಣಿ, ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ..ಬೈಂದೂರು: ಯೋಗ ಮನಸ್ಸು ಮತ್ತು ದೇಹವನ್ನು ಆರೋಗ್ಯವನ್ನಾಗಿಸುತ್ತದೆ. ಕೇವಲ ಯೋಗ ದಿನಾಚರಣೆಯಂದು ಯೋಗಾಸನಗಳನ್ನು ಮಾಡದೆ ನಮ್ಮ ನಿತ್ಯದ ಜೀವನದಲ್ಲಿಯೂ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ರಕ್ಷಣಾ ಸಮಿತಿ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಹೇಳಿದರು. ಅವರು ಜಿಲ್ಲಾಡಳಿತ, ಜಿ.ಪಂ ಉಡುಪಿ ,ಆಯುಷ್ ಇಲಾಖೆ ಉಡುಪಿ,ಗ್ರಾಮ ಪಂಚಾಯತ್ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೊಡು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ 11ನೇ ಅಂತಾರಾಷ್ಟ್ರಿಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿದಿನ ಬೆಳಿಗ್ಗೆ ಆರರಿಂದ ಏಳು ಗಂಟೆಯವರೆಗೆ ಸದ್ರಿ ಚಿಕಿತ್ಸಾಲಯದಲ್ಲಿ ನಡೆಯುವ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು. ಚಿಕ್ಕಯ್ಯಶೆಟ್ಟಿ ಅವರು ಮಾತನಾಡಿ, ಔಷಧವನ್ನು ಸೇವಿಸಿ ನಮ್ಮ ಕಾಯಿಲೆಯನ್ನು ಗುಣಪಡಿಸಿಕೊಳ್ಳುವುದಕ್ಕಿಂತ ನಿತ್ಯವೂ ಯೋಗಾಸನವನ್ನು ಮಾಡಿ ರೋಗ ಬಾರದಂತೆ ನೋಡಿಕೊಳ್ಳುವುದು ಉತ್ತಮ. ಹಾಗಾಗಿ ಪ್ರತಿಯೊಬ್ಬರೂ ನಿತ್ಯವೂ ಯೋಗ ಮಾಡಿ ನಿರೋಗಿಯಾಗಿ ಎಂದು ನುಡಿದರು. ಯೋಗದಲ್ಲಿ ಪರಿಣಿತ ಪಡೆದಿರುವ ಮಾತ್ರವಲ್ಲದೆ ಹಲವಾರು ಮಕ್ಕಳನ್ನು ರಾಜ್ಯ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ. ಅಧಿಕಾರದಲ್ಲಿದ್ದವರಿಗೆ ಕಾರ್ಯಕರ್ತರ ಬಗ್ಗೆ ಕಾಳಜಿ ಇದ್ದೇ ಇರುತ್ತದೆ. ಈ ಬಗ್ಗೆ ಭಿನ್ನಾಭಿಪ್ರಾಯಗಳು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ಎಂದು ಹೇಳಿದರು. ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ. ಗಾಂಧಿ ಕುಟುಂಬದಿಂದ ಪ್ರಧಾನಿಯಾದ ಮೂವರಲ್ಲಿ ಇಬ್ಬರು ಈ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಮನಸ್ಸು ಮಾಡಿದ್ದರೆ 2004ರಲ್ಲೆ ಅಧಿಕಾರ ಹಿಡಿಯಬಹುದಿತ್ತು. ಜವಹರಲಾಲ್ ನೆಹರು ಅವರು ಅಗರ್ಭ ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ, ಕುಂದಾಪುರದ ಪತಂಜಲಿ ಯೋಗಧಾಮ, ಮತ್ತು ಲಯನ್ಸ್ ಕ್ಲಬ್ ಕ್ರೌನ್ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ಯುಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಶನಿವಾರ ನಡೆಯಿತು. ಅಂತಾರಾಷ್ಟ್ರೀಯ ಕರಾಟೆ ಪಟು ಕಿರಣ್ ಆಚಾರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಉತ್ತಮ ಆರೋಗ್ಯಕ್ಕಾಗಿ ಯೋಗವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಪತಂಜಲಿ ಆರೋಗ್ಯಧಾಮ, ಕಡ್ಗಿರಸ್ತೆ, ಕುಂದಾಪುರ ಇಲ್ಲಿನ ಯೋಗ ಪ್ರಕೃತಿ ಚಿಕಿತ್ಸಾ ತಜ್ಞರು ಡಾ. ಸಾತಪ್ಪ ಹೂವಿನಹಳ್ಳಿ ಮಾತನಾಡಿ, ಯೋಗವು ಇಂದಿನ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಯೋಗಾಭ್ಯಾಸ ಮಾಡಿದಾಗ ನಿತ್ಯ ಜೀವನದಲ್ಲಿ ಉತ್ತಮ ಆರೋಗ್ಯವಂತ ದೇಹ, ಉಸಿರು ಮತ್ತು ಮನಸ್ಸು ನಿಮ್ಮದಾಗುತ್ತದೆ. ಯೋಗ, ಪ್ರಾಣಾಯಾಮಗಳು ಬದುಕಿಗೆ ಹೊಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.21: ಇಲ್ಲಿನ ಪಟ್ಟಣ ಪಂಚಾಯತ್ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ನೂತನ ಇಂದಿರಾ ಕ್ಯಾಂಟಿನ್ ಸೇವೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಬಳಿಕ ರೋಟರಿ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನಲ್ಲಿ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕುಂದಾಪುರ ತಹಶಿಲ್ದಾರ್ ಪ್ರದೀಪ್ ಕುರುಡೇಕರ್, ಬೈಂದೂರು ತಹಶೀಲ್ದಾರ್ ಎಚ್. ರಾಮಚಂದ್ರಪ್ಪ, ಬೈಂದೂರು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ…
