ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ಸತತ 15ನೇ ಬಾರಿ ಸಿ.ಬಿ.ಎಸ್.ಸಿ. 10ನೇ ತರಗತಿ ಪರೀಕ್ಷೆಯಲ್ಲಿ ಶೇ100% ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಹಾಜರಾದ ಒಟ್ಟು 128 ವಿದ್ಯಾರ್ಥಿUಳಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ರಿತಿನ್ ಎಸ್. ಶೆಟ್ಟಿ 95.80%, ನಮಿಶ್ ಉದಯ ಬಿಲ್ಲವ 93.60%, ಅನ್ವೇಶ್ ಯು ಶೆಟ್ಟಿ 93.20%, ಧೃತಿ ಎಸ್. ಶೆಟ್ಟಿ 92.00%, ಎಸ್. ಎ. ಚೇತನ್ ಕುಮಾರ್ 91.80%, ರಿಶಾನ್ ಡಿ. ಅಲ್ಮೇಡ 91.80%, ಚಂದನಾ ಸಿ. ಕೆ. 91.40%, ತನಿಷ್ 91.20%, ಧನುಷ್ 89.80%, ತನ್ಮಯ್ ಹೆಬ್ಬಾರ್ 89.80%, ಸಮರ್ಥ ಎಸ್. ಶೆಟ್ಟಿ 89.60%, ಏಕಾಂಶ್ ಸಂತೋಷ ಶೇರಿ 89.60%, ಅಮೃತಾ ಡಿ. 89.20%, ಶ್ರೇಯಾ 89.20%, ವರ್ಣಿತಾ ಕೆ. ಆರ್ 88.80, ಕೆ. ಆರ್. ಕೀರ್ತನ 88.60%,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಭಾಗದ ಜನರಿಗೆ ನಳ್ಳಿ ನೀರಿನ ಸಂಪರ್ಕ ಒದಗಿಸುವ ಜಲ ಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು. ಕೆಲವೊಂದು ಭಾಗಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಭೂಮಿಯಲ್ಲಿ ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಒಪ್ಪಿಗೆಗಳನ್ನು ಶೀಘ್ರದಲ್ಲಿಯೇ ಪಡೆದು ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಅರಣ್ಯ ಇಲಾಖೆಯವರು ಸಹ ಈ ಕಾರ್ಯಗಳಿಗೆ ಸ್ಪಂದಿಸಬೇಕೆಂದು ಸೂಚನೆ ನೀಡಿದರು. ಕುಡಿಯುವ ನೀರಿನ ಕೆಲವು ಕಾಮಗಾರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಹಾಗೂ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in/sevasindhu/DepartmentServices ಅಥವಾ http://dom.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ : 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾರಂಪಳ್ಳಿ ನರಸಿಂಹ ಐತಾಳರು ಸಾಹಿತ್ಯ, ಸಂಗೀತ, ನೃತ್ಯ, ಸಂಘಟನೆ, ರಂಗಭೂಮಿ, ಶಿಕ್ಷಣ, ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದವರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಐತಾಳರ ಸಾಧನೆ ಅನನ್ಯ ಇಂದಿನ ಯುವ ಸಮೂಹಕ್ಕೆ ದಾರಿದೀಪ ಅಲ್ಲದೆ ಮಕ್ಕಳ ಸ್ನೇಹಿಯಾಗಿ ಅವರು ನೀಡಿರುವ ಚಟುವಟಿಕೆಗಳು ಅನನ್ಯ. ಸುಪ್ರಭಾತ ಐತಾಳರೆಂದೇ ಪ್ರಸಿದ್ಧರಾಗಿರುವ ಅವರ ಸಾಧನೆಗಳು ವಿಶ್ವಕ್ಕೆ ಪ್ರಚಲಿತಗೊಳ್ಳಲಿ ಎಂದು ಅಂಬಲಪಾಡಿ ದೇಗುಲದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಿತ್ರ ಮಂಡಳಿ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಹುಟ್ಟೂರು ಸಾಧಕ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಮಿತ್ರ ಮಂಡಳಿಯ ಗಿಳಿಯಾರು ಶ್ರೀನಿವಾಸ ಅಡಿಗ ಅಭಿನಂದನಾ ಭಾಷಣ ಮಾಡಿದರು. ಪಾರಂಪಳ್ಳಿ ನರಸಿಂಹ ಐತಾಳರ ಬದುಕು ಬರಹ ಕೃತಿಗಳ ಕುರಿತು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕವಯಿತ್ರಿ ಸುಮನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಸತತ 12 ನೇ ಬಾರಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಸ್ನೇಹ ಎಸ್. ಆಚಾರ್ಯ (455), ಕೀರ್ತನಾ ಶೆಟ್ಟಿ (453), ಆಯಿಷಾ ಸಮಾ (447), ಹಂಸವಿ ಕಾಂಚನ್ (444), ಸೈಯದ್ ಅನಾಸ್ (435), ಕೀರ್ತನಾ ಕೆ. ಶೆಟ್ಟಿ (426), ಹರ್ಷಿತಾ ಶೆಟ್ಟಿ (410), ದೀಪ್ತಿ (408), ತುಷಾರ ಜಿ. ಆಚಾರ್ಯ (401) ಅಂಕಗಳನ್ನು ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದು ಒಟ್ಟು 60 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲಿ, 12 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಶಾಲಾ ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡಾ ತಿಳಿಸಿದರು. ಉತ್ತಮ ಫಲಿತಾಂಶವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಗೆ ಹಾಗೂ ಸಹಕರಿಸಿದ ಪೋಷಕರಿಗೆ ಶಾಲಾ ಮ್ಯಾನೆಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬೋಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ 27 ಅಡಿ ಎತ್ತರದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಹಾಗೂ 21 ಅಡಿ ಎತ್ತರದ ಶ್ರೀ ರಾಮಚಂದ್ರ ದೇವರ ಏಕಶಿಲಾ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ಲೋಕಾರ್ಪಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು. ಆಚಾರ್ಯ ಶ್ರೀ ಗುಲಾಬ್ ಭೂಷಣ ಮುನಿಮಹಾರಾಜರ ಸಾನಿಧ್ಯ ಹಾಗೂ ಸ್ವಸ್ತೀಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮೀಜಿ ಹುಂಬುಚ, ಸೋಂದಾ ಶ್ರೀ ಕ್ಷೇತ್ರ ಜೈನ ಮಠದ ಜಗದ್ಗುರು ಅಕಲಂಕ ಕೇಸರಿ ಸ್ವಸ್ತಿ ಶ್ರೀ ಭಟ್ಟ ಕಲಂಕ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಪ್ರತಿಷ್ಠಾಪನಾ ಕಾರ್ಯ ನೆರವೇರಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ವಿರೇಂದ್ರ ಹೆಗ್ಡಡೆಯವರು ಶ್ರೀ ಕ್ಷೇತ್ರ ಬೋಳಂಬಳ್ಳಿಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಭಗವಾನ್ ಬಾಹುಬಲಿ ಮತ್ತು ಶ್ರೀ ರಾಮಚಂದ್ರ ಮೂರ್ತಿ ಅದನ್ನು ನಿರ್ಮಾಣ ಮಾಡಿರುವವರ ಮನಸ್ಸಿನ ಪ್ರತೀಕ ಎಂಬಂತೆ ಮೂಡಿಬಂದಿದೆ. ಈ ಪವಿತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ – 2025 ಕೈಗೊಂಡು ಎಲ್ಲಾ ವರ್ಗದವರಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಒದಗಿಸುವುದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಉದ್ದೇಶವಾಗಿದೆ. ಎಲ್ಲಾ ಕಾಲದಲ್ಲಿಯೂ ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿರುತ್ತದೆ. ಮೀಸಲಾತಿಯ ಪ್ರಯೋಜನವು ಎಲ್ಲಾ ಜಾತಿಗಳಿಗೆ ಸಮಾನವಾಗಿ ತಲುಪುವಂತೆ ಮಾಡಲು ಪರಿಶಿಷ್ಟ ಜಾತಿಗಳ ವರ್ಗಿಕರಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆಯಿರುತ್ತದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಭಾರತದ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರ ಅಡಿಯಲ್ಲಿ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿಗಳ ಒಳ ವರ್ಗಿಕರಣ ಮಾಡಬಹುದಾಗಿದೆ ಎಂದು State of Punjab and Others v/s Devinder Singh…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗುಂಡ್ಮಿ ಪೆಟ್ರೋಲ್ ಬಂಕ್ ಎದುರುಗಡೆ ಸಾಸ್ತಾನ ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಟಿ ವಾಹನ ಅಜಾಗರೂಕತೆಯಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ರವೀಂದ್ರ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಟಿಟಿ ವಾಹನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಬಗ್ಗೆ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಶ್ವ ಜೇನುನೊಣ ದಿನಾಚರಣೆಯ ಅಂಗವಾಗಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಪ್ರಾಣಿಶಾಸ್ತ್ರ ವಿಭಾಗದ ‘ಜೇನುನೊಣ ಕೃಷಿ’ ಸರ್ಟಿಫಿಕೇಟ್ ಕೋರ್ಸ್ನ ವಿದ್ಯಾರ್ಥಿಗಳು ಜೇನುಸಾಕಣೆಯ ಪ್ರಾಯೋಗಿಕ ತರಬೇತಿಗಾಗಿ ಸಂಪಿಗೆ ಬಳಿಯ ಜೇನುಸಾಕಣೆ ಘಟಕಕ್ಕೆ ಭೇಟಿ ನೀಡಿದರು. ಸಂಪಿಗೆಯ ರೋಶು’ಸ್ ಹನಿ ಫಾರ್ಮ್ನ, ಅನುಭವಿ ಜೇನುಸಾಕಣೆದಾರ ಮತ್ತು ತರಬೇತುದಾರ ರೋಶನ್ ಲಾರೆನ್ಸ್ ಫೆರ್ನಾಂಡಿಸ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಪ್ರಕೃತಿಯಲ್ಲಿ ಮನುಷ್ಯನಿಲ್ಲವಾದರೂ ಭೂಮಿ ಉಳಿದಿತು ಆದರೆ ಜೇನುನೊಣಗಳಿಲ್ಲದೆ ಭೂಮಿಯನ್ನು ಊಹಿಸಲು ಸಾಧ್ಯವಿಲ್ಲ. ಪ್ರಕೃತಿಯಲ್ಲಾಗುವ ಶೇಕಡಾ 80 ಪರಾಗಸ್ಪರ್ಶ ಜೇನುನೊಣಗಳಿಂದ ನಡೆಯುತ್ತದೆ. ಆದ್ದರಿಂದ ಭೂಮಿಯ ಮೇಲೆ ಜೇನು ಜಾತಿಯೇ ಶ್ರೇಷ್ಠ ಜಾತಿ ಎಂದರು.ಅವರು ಜೇನುನೊಣಗಳ ಸಾಕಣೆ, ಜೇನುನೊಣ ಘಟಕದ ಸ್ಥಾಪನೆ, ಗಂಡು ಮತ್ತು ಹೆಣ್ಣು ಜೇನುನೊಣಗಳ ನಡುವಿನ ವ್ಯತ್ಯಾಸ, ಅವುಗಳ ಜೀವಿತಾವಧಿ ಮತ್ತು ಜೇನುಸಾಕಣೆಯ ಅಗತ್ಯ ಅಂಶಗಳಾದ ಜೇನುಸಾಕಣೆ ಪೆಟ್ಟಿಗೆ, ಪ್ರವೇಶ ದ್ವಾರ ಕಡಿತಗೊಳಿಸುವ ಸಾಧನ ಇತ್ಯಾದಿಗಳ ಬಗ್ಗೆ ಆಳವಾದ ಒಳನೋಟಗಳನ್ನು ಒದಗಿಸಿದರು. ವಿದ್ಯಾರ್ಥಿಗಳು ಜೇನು ತೆಗೆಯುವ ಪ್ರಕ್ರಿಯೆಯನ್ನು ಕೈಯಿಂದ ತಯಾರಿಸಿದ ಜೇನುತುಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಓರ್ವ ಕಲಾವಿದನ ಬದುಕು ರಂಗಸ್ಥಳದಲ್ಲಿಯೇ ಗುರುತಿಸುವಂತಾಗಬೇಕು. ಕಲೆಯ ಮೇಲಿನ ಶೃದ್ಧೆ ಅವರ ಬದುಕಿಗೆ ದಾರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟ ಕಾರಂತ ಥೀಂ ಪಾರ್ಕ್ನಲ್ಲಿ ಯಕ್ಷಗಾನ ಕಲಾವಿದ ಮಾಧವ ನಾಗೂರು ಅಭಿನಂದನಾ ಸಮಿತಿ ವತಿಯಿಂದ ಮಾಧವ ನಾಗೂರು ಅವರ ಯಕ್ಷಯಾನದ ರಜತ ಸಂಭ್ರಮದ ಬೆಳ್ಳಿಪಥ ಅಭಿನಂದನೆ, ಗುರುವಂದನೆ, ನಿಧಿ ಸಮಪರ್ಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಕ್ಷಗಾನದಲ್ಲಿಬೆಳೆದು ಬರಲು, ಶಕ್ತಿ ತುಂಬಲು ಪ್ರೇರಣೆ, ಪ್ರೋತ್ಸಾಹಿಸುವುದರ ಜತೆಗೆ ಗುರುತಿಸುವ ಕೆಲಸ ಮಾಡುವುದು ಒಳ್ಳೆಯ ಕೆಲಸ. ಯಕ್ಷಗಾನ ಕಲಾವಿದರ ಬದುಕು ರೂಪಿಸುವ ಕೆಲಸವಾಗಬೇಕು. ಈ ಬಗ್ಗೆ ಸರ್ಕಾರದ ನೆಲೆಯಲ್ಲಿ ಹೆಚ್ಚಿನ ಕೆಲಸವಾಗಬೇಕು. ಓರ್ವ ಕಲಾವಿದನಿಗೆ ಸರ್ಕಾರ ನೀಡುವ ಪ್ರಶಸ್ತಿಗಳಿಗಿಂತಲೂ ಅಭಿಮಾನಿಗಳು ನೀಡುವ ಪ್ರಶಸ್ತಿಯೇ ದೊಡ್ಡದು ಎಂದು ಹೇಳಿದರು. ಇದಕ್ಕೂ ಮುನ್ನ ಹಿರಿಯ ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಧವ ನಾಗೂರು ಅಭಿನಂದನಾ ಸಮಿತಿಯ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆ…
