ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಿನದಿಂದ ದಿನಕ್ಕೆ ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಿನ ಯುವಜನತೆ ಮೊಬೈಲ್ ಚಟಕ್ಕೆ ಬಿದ್ದು ತಮ್ಮ ಬದುಕಿನ ಅಮೂಲ್ಯ ಕ್ಷಣಗಳನ್ನು ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿ. ಸೋಶಿಯಲ್ ಮೀಡಿಯಾಗಳ ಹುಸಿ ಆಕರ್ಷಣೆಗೆ ಒಳಗಾಗಿ ಬಲಿಬೀಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಆನ್ಲೈನ್ ಜಗತ್ತಿನ ಅಪಾಯಗಳ ಬಗ್ಗೆ ಸದಾ ಎಚ್ಚರದಿಂದಿರಬೇಕು ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಪವನ್ ಕುಮಾರ್ ಎಂ. ಹೇಳಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆ ಇವುಗಳ ಜಂಟಿ ಸಹಯೋಗದೊಂದಿಗೆ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಇತ್ತೀಚಿನ ಸೈಬರ್ ಅಪರಾಧಗಳ ಪ್ರವೃತ್ತಿಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳು”ಎಂಬ ಸೈಬರ್ ಜಾಗೃತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು. ಸೈಬರ್ ಅಪರಾಧಗಳ ಜಾಲ ಮತ್ತು ಅದರಿಂದ ಪಾರಾಗುವ ಮಾರ್ಗಗಳ ಕುರಿತು ವಿದ್ಯಾರ್ಥಿಗಳಿಗೆ ಕೂಲಂಕುಷ ಮಾಹಿತಿ ನೀಡಿದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICMAI) ನಡೆಸಿದ ಸಿಎಂಎ ಇಂಟರ್ಮೀಡಿಯಟ್ ಜೂನ್–2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ದಾಖಲಿಸಿ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಎತ್ತಿ ಹಿಡಿದಿದ್ದಾರೆ. 2024-25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಕಾಂ. ಪದವಿಯಲ್ಲಿ ಎರಡನೇ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದುಕೊಟ್ಟ ಮುದೂರಿನ ಶೀನ ಪೂಜಾರಿ ಅವರ ಪುತ್ರಿ ಶ್ರೇಯಾ ಅವರು ಸಿಎಂಎ ಇಂಟರ್ಮಿಡಿಯೇಟ್ ಗ್ರೂಪ್–1 ಹಾಗೂ ಗ್ರೂಪ್ -2 ಎರಡೂ ಪರೀಕ್ಷೆಗಳಲ್ಲಿ ಮೊದಲ ಪ್ರಯತ್ನದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಲ್ಲದೆ ಅಖಿಲ ಭಾರತ ಮಟ್ಟದಲ್ಲಿ 28ನೇ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ರಾಷ್ಟçಮಟ್ಟದ ಹೆಮ್ಮೆ ತಂದುಕೊಟ್ಟಿದ್ದಾರೆ. ಪ್ರಾಕ್ತನ ವಿದ್ಯಾರ್ಥಿಗಳಾದ ಸಾಗರದ ಪಾಂಡುರಂಗ ಪೈಯವರ ಪುತ್ರಿ ಪವಿತ್ರ ಪೈ ಹಾಗೂ ಸಾಗರದ ದಿ. ಮಂಜುನಾಥ ಕೆ.ವಿ. ಅವರ ಪುತ್ರ ಮದನ್ ಎಂ.ವಿ., ಈರ್ವರು ಸಿಎಂಎ ಇಂಟರ್ಮೀಡಿಯಟ್ ಗ್ರೂಪ್ –…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕುಂದಾಪುರದ ವಿ. ಕೆ. ಆರ್. ಮೆಮೋರಿಯಲ್ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಕುಂದಾಪುರದಲ್ಲಿ ನಡೆದ ಕುಂದಾಪುರ ಬ್ಲಾಕ್ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಶಾಲೆಯ ಆರ್ಯನ್ ವಿ.ಕೆ., ಆರ್ಯನ್ ಎಸ್. ಹಾಗೂ ವೃಷಭ್ ಶೆಣೈ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅಭಿಷೇಕ್ ಶೆಣೈ, ಹವ್ಯಾಸ್ ಹಾಗೂ ಸನ್ನಿತ್ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅನನ್ಯಾ ಪೂಜಾರಿ, ಶ್ರಾವ್ಯಾ ಖಾರ್ವಿ ಹಾಗೂ ಶ್ರೀಯಾ ಆಚಾರ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಅನನ್ಯಾ ಪೂಜಾರಿ ಹಾಗೂ ಶ್ರಾವ್ಯಾ ಖಾರ್ವಿ ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿ ಮಾನಹಾನಿ ಎಸಗಿದ ಆರೋಪದಡಿ ಯುವಕನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕೊಲ್ಲೂರು ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಸನತ್ ಕುಂದಾಪುರ ಎಂಬಾತನಾಗಿದ್ದಾರೆ. ಘಟನೆಗೆ ಸಂಬಂಧಿಸಿ ಆರೋಪಿ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರು ರಾಮ ಕುಮಾರ್ ಮತ್ತು ನಂದೀಶ್ ಕುಮಾರ್ ಎಂಬವರಾಗಿದ್ದಾರೆ. ಆಗಸ್ಟ್ 6ರಂದು ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿ ನೊಂದ ಮಹಿಳೆ ಠಾಣೆಗೆ ನೀಡಿದ ದೂರಿನ ಮೇರೆಗೆ, ಸನತ್ ಮಹಿಳೆಯ ಮನೆಯ ಸಮೀಪ ಬಂದು ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಇದೇ ವೇಳೆ, ಘಟನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ರೂರು ಕೋಳ್ಕೆರೆ ಮನೆ ರವಿರಾಜ್ ಶೆಟ್ಟಿ ಅವರ ಸ್ಮರಣಾರ್ಥ ಸುಮಾರು ಎರಡುವರೆ ಲಕ್ಷ ಬೆಲೆಬಾಳುವ ಆಮ್ಲಜನಕ ಪೂರೈಕೆ ಯಂತ್ರ, ರಿಕ್ಲೈನರ್ ಹಾಸಿಗೆ ಹಾಗೂ ಗಾಲಿ ಕುರ್ಚಿಯನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಅವರ ಮಗ ಡಾ. ಅರ್ಜುನ್ ಶೆಟ್ಟಿ ಅವರು ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ. ಪ್ರೇಮಾನಂದ ಅವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹಳ್ನಾಡು ದೇವಾನಂದ ಶೆಟ್ಟಿ, ಮಾಜಿ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಕೆ. ವಿಕಾಸ್ ಹೆಗ್ಡೆ, ಮಾಜಿ ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟಕ್ಕೆ ಸರ್ಕಾರದಿಂದ ಬಂದಿದ್ದ ಲಕ್ಷಾಂತರ ರೂಪಾಯಿ ಅನುದಾನವನ್ನು ನಕಲಿ ಸಹಿ ಹಾಗೂ ಸೀಲು ಬಳಸಿ ಸ್ವಂತಕ್ಕೆ ಉಪಯೋಗಿಸಿಕೊಂಡು ಸುಮಾರು 33.50 ಲಕ್ಷ ರೂ. ವಂಚನೆ ಎಸಗಿದ ಆರೋಪದಡಿ ಮಹಿಳೆಯೊಬ್ಬರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಅಶ್ವಿನಿ (33)ಈ ಪ್ರಕರಣದ ಆರೋಪಿಯಾಗಿದ್ದಾರೆ. ಅವರು 2022 ರಿಂದ ‘ಸಮೃದ್ಧಿ ಸಂಜೀವಿನಿ’ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಮುಖ್ಯ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಒಕ್ಕೂಟದ ವ್ಯಾಪ್ತಿಯಲ್ಲಿ ಒಟ್ಟು 54 ಸ್ವಸಹಾಯ ಸಂಘಗಳು ಒಳಪಟ್ಟಿದ್ದವು. ಸರಕಾರದಿಂದ 2022 ರಿಂದ ಈ ಒಕ್ಕೂಟದ ಕೆನರಾ ಬ್ಯಾಂಕ್ ಬಿಡ್ಕಲ್ಕಟ್ಟೆ ಶಾಖೆಯ ಖಾತೆಗೆ ಒಟ್ಟು 752,50,000 ಅನುದಾನ ಬಿಡುಗಡೆಯಾಗಿತ್ತು. ಈ ಹಣವನ್ನು ಅಗತ್ಯಕ್ಕೆ ತಕ್ಕಂತೆ ವಿವಿಧ ಸ್ವಸಹಾಯ ಸಂಘಗಳಿಗೆ ನಿಯಮಾನುಸಾರ ಹಂಚಿಕೆ ಮಾಡುವ ಜವಾಬ್ದಾರಿ ಆರೋಪಿ ಅಶ್ವಿನಿ ಅವರದ್ದಾಗಿತ್ತು. ಆದರೆ, ಆರೋಪಿತೆಯು ಸರಕಾರದ ಹಣವನ್ನು ಸ್ವಸಹಾಯ ಸಂಘಗಳಿಗೆ ಸರಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜು ವಿದ್ಯಾರ್ಥಿಗಳಿಗೆ ಉದಯೋನ್ಮುಖ ವೃತ್ತಿ ಅವಕಾಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC), ಮೂಡ್ಲಕಟ್ಟೆ ಇಲ್ಲಿ ‘ದೀಕ್ಷಾರಂಭ 2026-27’ ಕಾರ್ಯಕ್ರಮದ ಅಂಗವಾಗಿ “ವಿಂಗ್ಸ್ ಆಫ್ ಆಪರ್ಚುನಿಟಿ – ವಿಮಾನಯಾನ ವೃತ್ತಿ ಮಾರ್ಗದರ್ಶನ” ಎಂಬ ವಿಶೇಷ ಅಧಿವೇಶನ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಥ್ರಸ್ಟ್ ಅಕಾಡೆಮಿಯ ಸಂಸ್ಥಾಪಕರಾದ ಕಾರ್ತಿಕ್ ಆಳ್ವ ಅವರು ವಿಮಾನಯಾನ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ವಿಮಾನಯಾನ ಕ್ಷೇತ್ರದಲ್ಲಿ ವೃತ್ತಿ ಆಯ್ಕೆ ಮಾಡಿಕೊಳ್ಳಲು ಬೇಕಾದ ಅರ್ಹತೆಗಳು, ಅಗತ್ಯ ಕೌಶಲ್ಯಗಳು, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ ಮತ್ತು ಸೇವಾ ಕ್ಷೇತ್ರದಲ್ಲಿ ವೃತ್ತಿಪರತೆಯ ಮಹತ್ವದ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಜೊತೆಗೆ ಈ ಕ್ಷೇತ್ರದಲ್ಲಿ ಬೆಳೆಯಲು ಇರುವ ಅವಕಾಶಗಳು ಮತ್ತು ಸವಾಲುಗಳ ಬಗ್ಗೆಯೂ ಚರ್ಚಿಸಿದರು. ಬಿ.ಕಾಂ, ಬಿಬಿಎ ಮತ್ತು ಬಿಸಿಎ ವಿಭಾಗಗಳ ಎಲ್ಲಾ ವರ್ಷದ ಆಸಕ್ತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಹಾಗೂ ಮಹಿಳಾ ಸಬಲೀಕರಣ ಘಟಕ ಜಂಟಿ ಆಶ್ರಯದಲ್ಲಿ “ವಿದ್ಯಾರ್ಥಿನಿಯರಿಗಾಗಿ ಜಾಗೃತಿ ಕಾರ್ಯಕ್ರಮ”ವನ್ನು ಆಯೋಜಿಸಲಾಯಿತು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು, ವಿದ್ಯಾರ್ಥಿನಿಯರ ಸರ್ವಾಂಗೀಣ ವಿಕಾಸಕ್ಕೆ ದೈಹಿಕ, ಮಾನಸಿಕ ಆರೋಗ್ಯ ಮತ್ತು ನೈರ್ಮಲ್ಯವೇ ಬುನಾದಿ. ಶುದ್ಧ ಆಹಾರ ಹಾಗೂ ವ್ಯಾಯಾಮವನ್ನು ಮೈಗೂಡಿಸಿಕೊಂಡು, ಮೊಬೈಲ್ ದಾಸ್ಯ ಮತ್ತು ನಿದ್ರಾಹೀನತೆಯಿಂದ ದೂರವಿದ್ದು ಸ್ವಾವಲಂಬಿಗಳಾಗಬೇಕು. ಕೀಳರಿಮೆ, ಖಿನ್ನತೆಯಂತಹ ಭಾವನೆಗಳನ್ನು ತೊರೆದು ಅಧ್ಯಯನ ಹಾಗೂ ಕೌಶಲ್ಯಾಭಿವೃದ್ಧಿಯತ್ತ ಗಮನಹರಿಸಿ, ಮನಸ್ಸು ಮತ್ತು ದೇಹ ಪರಸ್ಪರ ಪೂರಕವಾಗಿದ್ದು, ಧನಾತ್ಮಕ ಚಿಂತನೆಗಳೊAದಿಗೆ ಮುನ್ನಡೆಯಿರಿ,” ಎಂದು ಪ್ರೇರೇಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಸ್ವಾಗತಿಸಿದರು. ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ವೀಣಾ ವಿ. ಭಟ್ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಗಿಳಿಯಾರು ಹಿರಿಯ ನಾಗರಿಕರ ಸಭೆ ಮೂಡುಗಿಳಿಯಾರಿನ ಅಲ್ಸೆಕೆರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು. ಸಭೆಯ ಅಧ್ಯಕ್ಷತೆಯನ್ನು ವೇದಿಕೆ ಅಧ್ಯಕ್ಷ ಹಂದಕುಂದ ಸೋಮಶೇಖರ ಶೆಟ್ಟಿ ಗಿಳಿಯಾರು ವಹಿಸಿದ್ದರು. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾದ ರೋಟರಿ ಕೋಟ-ಸಾಲಿಗ್ರಾಮ ಮಾಜಿ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಸಮಾಜ ಸೇವಾ ಸಂಘಟನೆಗಳಿಂದ ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ ಸಿಗುವ ಸೇವೆ, ಸೌಲಭ್ಯ ಹಾಗೂ ಪ್ರಯೋಜನ ಮತ್ತು ವ್ಯಕ್ತಿತ್ವ ವಿಕಸನ ಆಗುವ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಪನ್ಮೂಲ ವ್ಯಕ್ತಿ ಜಿ. ತಿಮ್ಮ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಚರ್ಚಾಕೂಟದಲ್ಲಿ ವನಮಹೋತ್ಸವ, ಸ್ವಚ್ಛತಾ ಕಾರ್ಯ, ಸ್ವಾತಂತ್ರ್ಯೋತ್ಸವ, ಧ್ವಜಕಟ್ಟೆ ನಿರ್ಮಾಣ, ಶಿಕ್ಷಕರ ದಿನಾಚರಣೆ, ರಾಜ್ಯೋತ್ಸವ, ಸಂಪನ್ಮೂಲ ಕ್ರೋಢಿಕರಣ, ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ 60-65 ವರ್ಷ ಮೇಲ್ಪಟ್ಟು ಹಿರಿಯ ನಾಗರಿಕರಿಗೆ ಸಾರ್ವಜನಿಕ ಹಾಗೂ ಸರಕಾರದಿಂದ ಸಿಗುವ ಸೌಲಭ್ಯ ಪ್ರಯೋಜನಗಳ ಬಗ್ಗೆ, ಹಿರಿಯ ನಾಗರಿಕರ ಗುರುತು ಚೀಟಿ ಮಾಡುವ ಬಗ್ಗೆ, ವಾರ್ಷಿಕ ಪ್ರವಾಸಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಬಟ್ಟೆ ಜೋಡಿಸುವ ವಿಚಾರವಾಗಿ ಸಹೋದರಿಯೊಂದಿಗೆ ಗಲಾಟೆ ಮಾಡಿಕೊಂಡು, ತಾಯಿ ಬೈದರೆಂಬ ಕಾರಣಕ್ಕೆ ಸಿಟ್ಟಾದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಾಲ ಗ್ರಾಮದಲ್ಲಿ ನಡೆದಿದೆ. ಬೆಳ್ಳಾಲ ಗ್ರಾಮದ ಗಂಗಮಾತಾ ನಿವಾಸಿ ಚಂದ್ರಾವತಿ ಹಾಗೂ ಪ್ರಭಾಕರ ನಾಯಕ್ ದಂಪತಿಯ 18 ವರ್ಷದ ಪುತ್ರಿ ಪ್ರಮಿತಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಗುರುವಾರದಂದು ಬೆಳಗ್ಗಿನ ಜಾವ ರೂಮಿನಲ್ಲಿ ಬಟ್ಟೆಗಳನ್ನು ಇಡುವ ವಿಚಾರವಾಗಿ ಪ್ರಮಿತಾ ಮತ್ತು ಆಕೆಯ ತಂಗಿಯ ನಡುವೆ ಮಾತುಕತೆ ನಡೆದು ಗಲಾಟೆಯಾಗಿತ್ತು. ಇದನ್ನು ಗಮನಿಸಿದ ತಾಯಿ ಚಂದ್ರಾವತಿ ಇಬ್ಬರಿಗೂ ಬೈದು ಗಲಾಟೆಯನ್ನು ಬಿಡಿಸಿದ್ದರು. ಇದರಿಂದ ಕೋಪಗೊಂಡ ಸಿಡುಕು ಸ್ವಭಾವದ ಪ್ರಮಿತಾ, ಕೊಠಡಿಗೆ ತೆರಳಿ ಒಳಗಿನಿಂದ ಬಾಗಿಲ ಚಿಲಕ ಹಾಕಿಕೊಂಡಿದ್ದಳು. ತಾಯಿ ಕೆಲಸಕ್ಕೆ ತೆರಳಿದ ಬಳಿಕ, ಬೆಳಿಗ್ಗೆ 08:30ರ ಸುಮಾರಿಗೆ ಪ್ರಮಿತಾಳ ಸಹೋದರ ತಾಯಿಗೆ ಕರೆ ಮಾಡಿ, ಅಕ್ಕ ಬಾಗಿಲು…
