Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಒಂದು ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು, ವಿಶ್ವದಾದ್ಯಂತ ಸೇವೆ ಸಲ್ಲಿಸುತ್ತಿವೆ ಮತ್ತು ಸಮಾಜಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡುತ್ತಿವೆ. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವುದು ಹಾಗೂ ಸ್ಥಳೀಯ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವುದು ಮತ್ತು ಜೀವನವನ್ನು ಸುಧಾರಿಸುವುದು ರೋಟರಿ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ರೋಟರಿ ಜಿಲ್ಲೆ 3182 ವಲಯ-9ರ ಮಾಜಿ ಅಸಿಸ್ಟೆಂಟ್ ಗವರ್ನರ್ ನವೀನ್ ಅಮೀನ್ ಶಂಕರಪುರ ಹೇಳಿದರು. ಅವರು ಬಸ್ರೂರು ಆನಗಳ್ಳಿಯ ಆದಿತ್ಯ ಶೋರ್ ರೆಸಾರ್ಟ್‌ನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿಯ 2025-26ನೇ ಸಾಲಿನ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರೋಟರಿ ಜಿಲ್ಲೆ 3182 ವಲಯ-1ರ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಶುಭ ಹಾರೈಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಅವರು ನೂತನ ಅಧ್ಯಕ್ಷ ಕೃಷ್ಣ ಪೂಜಾರಿ ಅವರಿಗೆ ಹಾಗೂ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ಅವರು ನೂತನ ಕಾರ್ಯದರ್ಶಿ ರಾಮನಾಥ ಚಿತ್ತಾಲ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು  ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಪ್ರೇಕ್ಷಿತ ಶೆಟ್ಟಿ, ಪನ್ನಗ, ಯಶಸ್ ಅವರು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ, ಶಾಂತಿ, ಸಹನಾ ಹಾಗೂ ಸುವಿಧ ಆಚಾರ್ಯ ಅವರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ  ಪಡೆದು ವಿದ್ಯಾರ್ಥಿಗಳು ಈ  ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು 2025 ಮೇ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ ಸಿ.ಎ ಎನ್‌. ಶಾಂತಾರಾಮ ನಾಯಕ್ & ಕೋ, ಲೆಕ್ಕ ಪರಿಶೋಧಕರ ಸಂಸ್ಥೆ ಇದರ ವಿದ್ಯಾರ್ಥಿನಿ ಅಮೃತಾ ಅವರು ಉತ್ತೀರ್ಣರಾಗಿರುತ್ತಾರೆ. ಅವರು ಕೋಟೇಶ್ವರದ ಹಳೆಅಳಿವೆ ಕುಂಬ್ರಿ ನಿವಾಸಿ ಬೇಬಿ ಮತ್ತು ಚಂದ್ರ ದೇವಾಡಿಗರ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ವತಿಯಿಂದ ಕಾರ್ಯಾಚರಿಸುತ್ತಿರುವ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 50 (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://nber-rehabcouncil.gov.in/ ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ. ತರಬೇತಿ ಕಾರ್ಯಕ್ರಮಗಳು:D.Ed.Spl.Ed(VI)- Helen Keller Govt. Teachers Training Centre for Visually Handicapped – KK016.. D.Ed.Spl.Ed(HI)–Govt. Teachers Training Centre for Hearing Handicapped -KK015 ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ತರಬೇತಿ) ರವರ ಕಛೇರಿ, ಅಂಧ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಳ್ಳಿಹೊಳೆ ಗ್ರಾಮದ ಸುಳ್ಳೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ  ಕುಬೇರಪ್ಪ (49) ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವಾಗ ಕಮಲಶಿಲೆ ಎಂಬಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಅವರು ಚಿತ್ರದುರ್ಗದ ನಿವಾಸಿಯಾಗಿದ್ದು, ಹೊಸಂಗಡಿ ಕೆಪಿಸಿ ಕಾಲನಿಯ ಸರಕಾರಿ ಕ್ವಾರ್ಟಸ್‌ನಲ್ಲಿ ವಾಸವಾಗಿದ್ದರು. ಸೋಮವಾರ ತಮ್ಮ ಬೈಕ್‌ನಲ್ಲಿ ಸುಳ್ಳೋಡು ಶಾಲೆಗೆ ಹೊರಟಿದ್ದ ಅವರು ಕಮಲಶಿಲೆಯ ಪಾರೆ ಬಳಿ ಬೈಕನ್ನು ರಸ್ತೆಯ ಬದಿಯಲ್ಲಿಟ್ಟು ರೈನ್ ಕೋಟ್ ಸಮೇತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 22 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 4 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಮುಂಭಡ್ತಿ ಹೊಂದಿ ಸುಳ್ಳೋಡು ಶಾಲೆಗೆ ವರ್ಗಾವಣೆಗೊಂಡಿದ್ದರು. ಕುಬೇರಪ್ಪ ಅವರು ಹೊಸಂಗಡಿಯ ಕೆಪಿಸಿ ಕಾಲನಿಯಲ್ಲಿ ಹಿಟ್ಟಿನ ಗಿರಣಿ ಮಾಡಿಕೊಂಡಿದ್ದರು. ಅವರು ಸಂಬಂಧಿಕರ ಮದುವೆಗೆ ಮತ್ತು ಇನ್ನಿತರ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಹಲವು ಸಾಲಗಾರರಿಗೆ ಜಾಮೀನು ಹಾಕಿದ್ದರು. ಸಾಂಸಾರಿಕ ಜೀವನಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನದಡಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಜರಗಿತು. ಇದೇ ವೇಳೆ ಅಂಗನವಾಡಿ ಪುಟಾಣಿಗಳಿಗೆ ಶಿಶುಅಭಿವೃದ್ಧಿ ಯೋಜನೆ ಬ್ರಹ್ಮಾವರ ಇಲಾಖೆಯಿಂದ ನೀಡಿರುವ ಪುಸ್ತಕ, ಕ್ರೇಯನ್ಸ್, ಸ್ತ್ರಿಶಕ್ತಿ ಸಂಘದವರು ನೀಡಿರುವ ಬ್ಯಾಗ್, ಸ್ಥಳೀಯರು ದೀಪಾ ಆರ್. ಖಾರ್ವಿ ಹಾಗೂ ವಸಂತಿ ಅಂಗನವಾಡಿ ಕೇಂದ್ರಕ್ಕೆ ಶಾಲಾಪೂರ್ವ ಶಿಕ್ಷಣಕ್ಕೆ ಬೇಕಾಗುವ ಸಾಮಗ್ರಿ, ಗಡಿಯಾರವನ್ನು ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾಖಾರ್ವಿ ಅಧ್ಯಕ್ಷತೆಯಲ್ಲಿ ಹಸ್ತಾಂತರಿಸಿಕೊಂಡಿತು. ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ಪೂಜಾರಿ ಪಿ., ಹಾಗೂ ಸತೀಶ್ ಜಿ. ಕುಂದರ್, ಬಾಲಾವಿಕಾಸ ಸಮಿತಿಯ ಅಧ್ಯಕ್ಷೆ ಸುಲೋಚನಾ, ಸದಸ್ಯರಾದ ನಿರ್ಮಲ, ಆಶಾ ಕಾರ್ಯಕರ್ತೆ ಜ್ಯೋತಿ, ಆರೋಗ್ಯ ಕೇಂದ್ರದ ಪರಸಪ್ಪ, ಸಂಜೀವಿನಿ ಅಧ್ಯಕ್ಷೆ ಪೂರ್ಣಿಮ, ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್,ಸ್ತ್ರೀ ಶಕ್ತಿ ಸಂಘದವರು, ತಾಯಂದಿರು, ಪೋಷಕರು ಉಪಸ್ಥಿತರಿದ್ದರು. ಇದೇ ವೇಳೆ ಆರೋಗ್ಯ ತಪಾಸಣೆಯಲ್ಲಿ ಮಹಿಳೆಯರ ಬಿ.ಪಿ ಶುಗರ್ ತಪಾಸಣೆ ಮಾಡಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಒಪ್ಟಮ್ (Optimizing Training and Mentoring) ತರಬೇತಿ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಒಟ್ಟು 65 ವಿದ್ಯಾರ್ಥಿಗಳು ಈ 45 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿಗೆ ಸೇರಿದ್ದು, ಪ್ರಸಿದ್ಧ ತರಬೇತುದಾರರಾದ ಶ್ರೀಮತಿ ವಿನಯಾ ಗೌಡ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗುತ್ತಿದೆ. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಶುಭಕರಾಚಾರಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಾಶಯಗಳೊಂದಿಗೆ ತರಬೇತಿಯ ಮಹತ್ವವನ್ನು ವಿವರಿಸಿದರು. ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ಈ ತರಬೇತಿಯು ಹೇಗೆ ಪರಿಣಾಮಕಾರಿ ಎಂದು ವಿವರಿಸುತ್ತಾ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಈ ತರಬೇತಿ ಕಾರ್ಯಕ್ರಮ ಕಳೆದ ವರ್ಷದ ಭರ್ಜರಿ ಯಶಸ್ಸಿನ ಹಿನ್ನೆಲೆ ಹೊಂದಿದೆ. ಆ ಸಮಯದಲ್ಲಿ ಭಂಡಾರ್ಕರ್ಸ್ ಕಾಲೇಜಿನಿಂದ ಭಾಗವಹಿಸಿದ ಎಲ್ಲ 34 ವಿದ್ಯಾರ್ಥಿಗಳಿಗೂ ಉದ್ಯೋಗದ ಅವಕಾಶ ಲಭ್ಯವಾಗಿದ್ದು, ಈ ಯಶಸ್ಸಿಗೆ ಶಿಕ್ಷಕ ಜಯರಾಜ್ ಹಾಗೂ ಸ್ಥಾನಾಭಿವೃದ್ಧಿ ಅಧಿಕಾರಿ ರಾಜೇಂದ್ರ ಹೊಬ್ಳಿದಾರ್ ಅವರ ಸಹಕಾರ ಪ್ರಮುಖವಾಗಿದೆ. ಇದೇ ಆದರ್ಶದೊಂದಿಗೆ ಪ್ರಾರಂಭವಾಗಿರುವ ಈ ತರಬೇತಿ ಕಾರ್ಯಕ್ರಮವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತು ಬಾಯಿ ಜನತಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವನ್ನು ವಿತರಿಸಲಾಯಿತು. ಸಮವಸ್ತ್ರದ ದಾನಿಗಳಾದ ರಾಮ್ ದಾಸ್ ಗುಡೆ ಮನೆ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜು ಎಸ್. ಪೂಜಾರಿ, ಮುಖ್ಯ ಅದ್ಯಾಪಕರಾದ ಆನಂದ್ ಮದ್ದೋಡಿ, ಪೋಷಕ ಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ಧರು. ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯಾದ ಚೈತ್ರಾ ಯಡ್ತರೆ ಸ್ವಾಗತಿಸಿ, ಗುರುರಾಜ್ ಎಸ್. ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರಕೃತಿಯಲ್ಲಿ ಅಸಮತೋಲನ ಇದು ಮನುಕುಲದ ಮೇಲೆ ಸಾಕಷ್ಟು ಪರಿಣಾಮ ಬೀರುವಂತೆ ಮಾಡಿದೆ ಇದಕ್ಕೆ ನಾವುಗಳೇ ಕಾರಣ. ಅದಕ್ಕೆ ಹೆಚ್ಚು ಹೆಚ್ಚು ಗಿಡ ನೆಟ್ಟು ಪೋಷಿಸುವ ಕೆಲಸ ಆಗಲಿ ಎಂದು ಉಡುಪಿ ಅರಣ್ಯ ಇಲಾಖೆಯ ಅಧಿಕಾರಿ ವಾರಿಜಾಕ್ಷಿ ಹೇಳಿದರು. ಅವರು ಮಣೂರು ಪಡುಕರೆ ವ್ಯಾಪ್ತಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರ ಸಹಭಾಗಿತ್ವದಡಿ 267ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ವಿಶಿಷ್ಟ ರೀತಿಯ ಮಹಿಳಾ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಂಚವರ್ಣ ಸಂಘಟನೆ ಪರಿಸರಕ್ಕೆ ಪೂರಕವಾಗಿ ವಿನೂತನ ಮಾದರಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇದು ಪ್ರೇರಣೆ ನೀಡುವ ಕಾರ್ಯಕ್ರಮವಾಗಿದೆ ಇಂತಹ ಕಾರ್ಯಕ್ರಮ ಎಲ್ಲೆಡೆ ಪಸರಿಸಬೇಕು ಎಂದು ಆಶಿಸಿದರು. ವಿಶೇಷವಾಗಿ ಮಹಿಳಾ ಮಂಡಲದ ಪದಾಧಿಕಾರಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶಿಕ್ಷಕ-ರಕ್ಷಕ ಸಮಿತಿಯ 2025-26ನೇ ಸಾಲಿನ ಪ್ರಥಮ ಸಭೆ ಗಂಗೊಳ್ಳಿ ಎಸ್.ವಿ. ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ ಶಾಲಾ ನಿಯಮಗಳ ಮಾಹಿತಿ ನೀಡಿದರು. ಈ ವೇಳೆ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಕೆಜಿ ವಿಭಾಗದ ಉಸ್ತುವಾರಿ ಶಿಕ್ಷಕಿ ದಿವ್ಯಶ್ರೀ ಸ್ವಾಗತಿಸಿದರು. ಶಿಕ್ಷಕಿ ಗೀತಾ. ಸಹಶಿಕ್ಷಕಿ ಉಷಾ ಕಾರ್ಯಕ್ರಮ ನಿರ್ವಹಿಸಿದರು.

Read More