Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿವಿಧ ಸಾರ್ವಜನಿಕ ಸಂಸ್ಥೆಗಳಲ್ಲಿ ದುಡಿಯುವ ಬಡ ಕಾರ್ಮಿಕರಿಗೆ ಸಿಗುವ ಇಎಸ್‌ಐ ಸೌಲಭ್ಯಕ್ಕೆ ವೇತನದ ಮಿತಿಯನ್ನು 35,000 ರೂ.ಗಳಿಗೆ ಹೆಚ್ಚಿಸುವಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಲೋಕಸಭೆಯಲ್ಲಿ ಆಗ್ರಹಿಸಿದರು. ನಿಯಮ 377ರಡಿ ಲೋಕಸಭೆಯಲ್ಲಿ ವಿಷಯ ಮಂಡಿಸಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಇಎಸ್‌ಐಗೆ ವೇತನ ಮಿತಿಯನ್ನು ಕನಿಷ್ಠ 35,000ರೂ.ಗೆ ಹೆಚ್ಚಿಸುವಂತೆ ಒತ್ತಾಯಿಸಿದರು. ಸಾರ್ವಜನಿಕ ಸಂಸ್ಥೆಗಳಲ್ಲಿ ದುಡಿಯುವ ಬಡ ಕಾರ್ಮಿಕರಿಗೆ ಇಎಸ್‌ಐ ಉತ್ತಮವಾದ ಆರೋಗ್ಯ ವಿಮೆಯಾಗಿದ್ದು, ಇಎಸ್‌ಐನಿಂದ ಅನೇಕ ಕುಟುಂಬಗಳು ಆರೋಗ್ಯ ಸೇವೆ ಪಡೆದು ನೆಮ್ಮದಿಯಿಂದಿವೆ. ಆದರೆ ಇಎಸ್‌ಐ ಯೋಜನೆಯ ಆದಾಯ ಮಿತಿ ಮಾಸಿಕ 21,000ಕ್ಕೆ ಸೀಮಿತವಾಗಿದೆ ಎಂದು ಹೇಳಿದರು. ಇತ್ತೀಚಿಗೆ ಸರಕಾರ ಮತ್ತು ಸರಕಾರೇತರ ಸಂಸ್ಥೆಗಳ ಕನಿಷ್ಠ ವೇತನ ಹೆಚ್ಚಾದ ಹಿನ್ನೆಲೆಯಲ್ಲಿ 21,000ಕ್ಕಿಂತ ಹೆಚ್ಚು ವೇತನ ಪಡೆಯುವ ಕಾರ್ಮಿಕರು ಇಎಸ್‌ಐಯಿಂದ ವಂಚಿತರಾಗುತ್ತಿದ್ದಾರೆ. ಈ ಆರೋಗ್ಯ ವಿಮೆ ಯೋಜನೆ ನೌಕರರು ಮತ್ತು ಉದ್ಯೋಗ ನೀಡುವ ಸಂಸ್ಥೆಗಳು ಒಟ್ಟಾಗಿ ಪ್ರೀಮಿಯಂ ಪಾವತಿಸುವ ಮೂಲಕ ಒದಗುವ ಯೋಜನೆಯಾದ್ದರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ “ ವಸ್ತ್ರಭಾರತಿ 2026 – ಅಂತರ್ ತರಗತಿ ದೇಶಭಕ್ತಿ ಫ್ಯಾಷನ್ ಪೆರೇಡ್” ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ತಂಡ ಭಾವನೆ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ತರಗತಿಗಳ 23 ತಂಡಗಳು ಉತ್ಸಾಹದಿಂದ ಭಾಗವಹಿಸಿದವು. ವಿದ್ಯಾರ್ಥಿಗಳ ಉತ್ಸಾಹಭರಿತ ಪ್ರದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು, ಉಡುಪುಗಳ ಮೂಲಕ ಕೇವಲ ಫ್ಯಾಷನ್ ಪ್ರದರ್ಶನವನ್ನಷ್ಟೇ ಮಾಡದೆ, ಭಾರತದ ವೈವಿಧ್ಯತೆ, ಸಂಸ್ಕೃತಿ, ಪರಂಪರೆ ಮತ್ತು ದೇಶಭಕ್ತಿಯ ಸಂದೇಶವನ್ನು ಪರಿಣಾಮಕಾರಿಯಾಗಿ ಸಾರಿದರು. ಅಲ್ಲದೆ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪುಗಳು, ಸ್ವಾತಂತ್ರ್ಯ ಹೋರಾಟಗಾರರ ಪ್ರತಿರೂಪಗಳು, ತ್ರಿವರ್ಣ ಧ್ವಜದ ಸ್ಫೂರ್ತಿಯ ವಿನ್ಯಾಸಗಳು ಹಾಗೂ ಪರಿಸರ ಸ್ನೇಹಿ ದೇಶಭಕ್ತಿ ಸಂದೇಶ ಸಾರುವ ಉಡುಪುಗಳ ಮೂಲಕ ತಮ್ಮ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಬಿ-ಜಿ ರಾಮ್ ಜಿ ಯೋಜನೆಯಲ್ಲಿ ಕೃಷಿ, ತೋಟಗಾರಿಕೆ, ಪಶು ಇಲಾಖೆ, ಅರಣ್ಯ ಇಲಾಖೆಗಳ ಕಾಮಗಾರಿಗಳು ಸೇರಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದ್ದು, ಇಲಾಖೆಗೆ ಲಾಗಿನ್ ಅಧಿಕಾರ ನೀಡಲಾಗಿಲ್ಲ. ಅದನ್ನು ಪಂಚಾಯತ್‌ ಮೂಲಕ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ. ಯೋಜನೆ ಆರಂಭಿಕ ಹಂತದಲ್ಲಿ ಇರುವುದರಿಂದ ಸ್ವಲ್ಪ ಗೊಂದಲ ಇದ್ದು, ನಿಧಾನವಾಗಿ ಸರಿಯಾಗುತ್ತದೆ. ಪಾವತಿ ಮಾಡುವ ವಿಧಾನವನ್ನು ಸರಳೀಕರಣಗೊಳಿಸದರೆ ಉತ್ತಮ ಎಂದು ಜಿಪಂ ಸಹಾಯಕ ನಿರ್ದೇಶಕ ವಿಜಯ ಶ್ಯಾಮ್ ಹೇಳಿದ್ದಾರೆ. ಅವರು ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ನಮ್ಮ ಜಿಲ್ಲೆಗೆ ಲಾಭವಾಗುವ ಅನೇಕ ಕಾಮಗಾರಿಗಳು ಈ ಯೋಜನೆಯಲ್ಲಿ ಸೇರಿಕೊಂಡಿದೆ. ಶಾಲಾ ಕಟ್ಟಡ, ವಾಚನಾಲಯ, ಅಂಗನವಾಡಿ ಕಟ್ಟಡಗಳನ್ನು ಕೂಡ ನಿರ್ಮಿಸಬಹುದು. 60:40 ಅನುಪಾತವನ್ನು ಪಾಲಿಸುವುದು ಸ್ವಲ್ಪ ಕಷ್ಟವಾಗುತ್ತಿದೆ. ಕೆಲವು ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಇಟ್ಟಿದ್ದರೆ, ಕೆಲವು ಕಾಮಗಾರಿಗಳಿಗೆ ಕಡಿಮೆ ಮಾಡಲಾಗಿದೆ. ವೈಯಕ್ತಿಕ ಕಾಮಗಾರಿಗಳಿಗೆ ಎನ್‌ಎನ್‌ಎಂಎಸ್ ಆ್ಯಪ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಗೂಡ್ಸ್ ವಾಹನ ಢಿಕ್ಕಿಯಾಗಿ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಕೋಟೇಶ್ವರ ನಿವಾಸಿ ಮಧುಕರ್ ಶೇರಿಗಾರ್ ಗಾಯಗೊಂಡವರು. ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಫಾರ್ಚೂನ್ ಕಾಲೇಜ್ ಆಫ್‌ ಪ್ಯಾರಾಮೆಡಿಕಲ್ ಸೈನ್ಸಸ್ ಇವರ ನೇತೃತ್ವದಲ್ಲಿ ಹಾಗೂ ಭಾರತೀಯ ರೆಡ್‌ ಕ್ರಾಸ್ ಸೊಸೈಟಿ ರಕ್ತದಾನ ಕೇಂದ್ರ, ಕುಂದಾಪುರ ಲಯನ್ಸ್ ಕ್ಲಬ್ ಬೃಹ್ಮಗಿರಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮೂಡಹಡು, ಪಾಂಡೇಶ್ವರ ಸಾಮ್ರಾಜ್ಜಿ ಆಟೋ ಚಾಲಕರ ಸಂಘ ಮಾಬುಕಳ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಕಾಲೇಜಿನ ಅಡಿಟೋರಿಯಂನಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಕ್ತ ಕೇಂದ್ರದ ಅಧ್ಯಕ್ಷ ಕುಂದಾಪುರ ಎಸ್. ಜಯಕರ ಶೆಟ್ಟಿ ಅವರು ಕಾರ್ಯ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನಕ್ಕಿಂತ ಶ್ರೇಷ್ಠದಾನ ಇನ್ನೊಂದಿಲ್ಲ. ಇನ್ನೊಬ್ಬರ ಜೀವ ಉಳಿಸುವ ಸಲುವಾಗಿ ತನ್ನ ರಕ್ತವನ್ನು ಸ್ವಯಂ ಪ್ರೇರಣೆಯಿಂದ ಯಾವುದೇ ಪ್ರತಿಫಲಪೇಕ್ಷೆ ಇಲ್ಲದೆ ಇದೊಂದು ಪವಿತ್ರ ದಾನವಾಗಿದೆ. ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ ಈ ಕಾರಣಕ್ಕೆ ರಕ್ತವನ್ನು ಪರ್ಯಾಯವಾದ ವಸ್ತು ಇನ್ನೊಂದು ಇಲ್ಲ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜ್ಞಾನ ಎಂಬುದು ಒಂದು ಶಕ್ತಿ, ಪುಸ್ತಕಗಳನ್ನು ಓದುವುದರಿಂದ ನಾವು ಜ್ಞಾನ ಸಂಪಾದನೆ ಮಾಡಬಹುದು. ಓದುವಿಕೆ ನಮ್ಮ ಭಾಷಾ ಕೌಶಲ್ಯ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುತ್ತದೆ. ಎಲ್ಲರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ಹೇಳಿದರು. ಅವರು ಬುಧವಾರ ಅಜ್ಜರಕಾಡು ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯ ನಿಮಿತ್ತ ನಡೆದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಪುಸ್ತಕಗಳು ಮತ್ತು ಲೇಖನಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ. ಮಹಾನ್ ಕ್ರಾಂತಿಕಾರಿಗಳ ಲೇಖನಗಳನ್ನು ಓದಿ ಪ್ರಭಾವಿತರಾಗಿ ಅದೆಷ್ಟೋ ಮಂದಿ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ್ದಾರೆ. ಪುಸ್ತಕಗಳು ಸಮಾಜ ಪರಿವರ್ತನೆಯಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಕೂಡ ಗ್ರಂಥಗಳನ್ನು ಬರೆಯಬೇಕು ಅವುಗಳನ್ನು ವಿದ್ಯಾರ್ಥಿಗಳು ಓದುವಂತಾಗಬೇಕು ಎಂದರು. ಪುಸ್ತಕಗಳು ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಪುಸ್ತಕಗಳನ್ನು ಓದುವಾಗ ನಾವು ಅದರ ಲೇಖಕನ ಜೊತೆ ಒಂದು ಸಂಬಂಧವನ್ನು ಬೆಳೆಸಿಕೊಳ್ಳುತ್ತೇವೆ. ನಮ್ಮ ಹೆತ್ತವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಮೆಸ್ಕಾಂ ಉಪ ವಿಭಾಗದ ಜನಸಂಪರ್ಕ ಸಭೆ ಬುಧವಾರ ಕೋಟ ಮೆಸ್ಕಾಂ ಉಪವಿಭಾಗದ ಸಭಾಂಗಣದಲ್ಲಿ ಜರಗಿತು. ಕೋಟ ಹೋಬಳಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಹಲವು ಸಮಸ್ಯೆಗಳಿಗೆ ಮೆಸ್ಕಾಂ ಜಿಲ್ಲಾ ಅಧೀಕ್ಷಕ ಇಂಜಿನಿಯರ್ ಬಿ. ರಾಕೇಶ್ ಅಧಿಕಾರಾವಧಿಯಲ್ಲಿ ಪರಿಹಾರ ಕಂಡುಕೊಂಡ ಬಗ್ಗೆ ಸಾಮಾಜಿಕ ಕಾರ್ಯಕರ್ತರು ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮೆಸ್ಕಾಂ ಅಧೀಕ್ಷಕ ಬಿ. ರಾಕೇಶ್ ಗ್ರಾಮೀಣ ಭಾಗದಿಂದ ಪಟ್ಟಣ ವ್ಯಾಪ್ತಿಯನ್ನು ಹೊಂದಿರುವ ಈ ಕೋಟ ಮೆಸ್ಕಾಂನ ವ್ಯಾಪ್ತಿಯ ಯಾವುದೇ ಸಮಸ್ಯೆಗಳಿಗೆ ನಮ್ಮ ಮೆಸ್ಕಾಂ ಪರಿಹಾರ ಕಂಡಕೊಳ್ಳಲಿದೆ ಜನಸಂಪರ್ಕ ಸಭೆಗಳು ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸುವ ಸಭೆಗಳಾಗಿ ರೂಪುಗೊಂಡಿದೆ ಇದರಿಂದ ಇಲ್ಲಿ ಪ್ರತಿಹಂತದಲ್ಲೂ ಸಮಸ್ಯೆಗಳಿಂದ ಮುಕ್ತಿಗಾಣುವ ಸಭೆಗಳಾಗಿ ರೂಪುಗೊಂಡಿದೆ ಎಂದರಲ್ಲದೆ ರಾಜ್ಯ ಸರಕಾರದ ಯೋಜನೆಯಾದ ಗೃಹಜ್ಯೋತಿ ಪುನರ್ ನವೀಕರಣ ಶೇಕಡಾ 90ರಷ್ಟು ಪೂರ್ಣಗೊಂಡಿದ್ದು ಬಾಕಿ ಇರಿಸಿಕೊಂಡವರು ಕೂಡಲೇ ತಮ್ಮ ಮೆಸ್ಕಾಂ ಮೂಲಕ ಗೃಹಜ್ಯೋತಿಯ ಫಲಾಭನುಭವಿಗಳಾಗಿ ಎಂದು ಕರೆ ನೀಡಿದರು. ಸಾಮಾಜಿಕ ಕಾರ್ಯಕರ್ತರಾದ ಪ್ರತಾಪ್ ಶೆಟ್ಟಿ ಸಾಸ್ತಾನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಲ್ಯಾಣಪುರದ ಮಿಲಾಗ್ರಿಸ್‌ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಇಲ್ಲಿನ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆ:ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮಹಮ್ಮದ್‌ ಫೈಜ್‌ ಸಾದಿಕ್‌ ಬಾಲಕರ 74 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಹಮ್ಮದ್‌ ಇಬ್ರಾಹಿಂ ಸಾದಿಕ್‌ ಹಾಗೂ ಯಸೀರಾ ಸಾದಿಕ್‌ ದಂಪತಿಯ ಪುತ್ರ. ಹಾಗೇ, 68 ಕೆಜಿ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ಧನ್ವಿ ದ್ವಿತೀಯ ಸ್ಥಾನ, 54 ಕೆಜಿ ವಿಭಾಗದಲ್ಲಿ ಹರ್ಷಿತ್‌ ತೋಳಾರ್ ದ್ವಿತೀಯ ಸ್ಥಾನ, 78 ಕೆಜಿ ವಿಭಾಗದಲ್ಲಿಅನೂಪ್‌ ಡಿ. ಗಾಣಿಗ ದ್ವಿತೀಯ ಸ್ಥಾನ, 62ಕೆಜಿ ವಿಭಾಗದಲ್ಲಿ ಮಿಥೇಶ್‌ ದ್ವಿತೀಯ ಸ್ಥಾನ ಪಡೆದಿದ್ದಾರೆ ಹಾಗೂ 60 ಕೆಜಿ ವಿಭಾಗದಲ್ಲಿ ಪ್ರಥಮ ಪಿಯುಸಿಯ ವೈಷ್ಣವಿ ಶೆಟ್ಟಿ ದ್ವಿತೀಯ ಸ್ಥಾನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಫಾನ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರಾದ ವೃಷ್ಟಿ ಮತ್ತು ಸನ್ನಿಧಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮರವಂತೆಯ ನದಿ-ಕಡಲು ನಡುವಿನ, ಹೆದ್ದಾರಿ ಅಂಚಿನ ಮಾರಸ್ವಾಮಿಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು. ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಅಭಿಷೇಕ, ಪೂಜೆ, ಅರ್ಪಣೆ ಸಲ್ಲಿಸಿದರು. ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಒಂದೆಡೆ ಸಮುದ್ರ, ಇನ್ನೊಂದೆಡೆ ನದಿ, ನಡುವೆ ಹಾದು ಹೋಗುವ ಹೆದ್ದಾರಿ ಕಾರಣದಿಂದ ತೀರ ಕಿರಿದಾದ ಭೂಪ್ರದೇಶದ ಇಲ್ಲಿ ಅಮಾವಾಸ್ಯೆಯ ಪರ್ವದಲ್ಲಿ ಪಾಲ್ಗೊಳ್ಳಲು ಬರುವ ಸಹಸ್ರಾರು ಭಕ್ತರ ಸುರಕ್ಷತೆಗಾಗಿ ಮತ್ತು ಹೆದ್ದಾರಿಯಲ್ಲಿ ಎಡೆಬಿಡದೆ ಸಂಚರಿಸುವ ವಾಹನಗಳ ಜತೆಗೆ ಜಾತ್ರೆಗೆ ಬರುವ ಅಸಂಖ್ಯ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಜನದಟ್ಟಣೆಯ ನಿಯಂತ್ರಣ, ಸಮುದ್ರ ಮತ್ತು ನದಿಸ್ನಾನ ಮಾಡುವವರ ಬಗೆಗೆ ವಹಿಸಬೇಕಾದ ಎಚ್ಚರದ ಕುರಿತು ಗಂಗೊಳ್ಳಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು, ಕುಂದಾಪುರ ಸಂಚಾರಿ…

Read More