ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಬೈಂದೂರು, ಸಮೂಹ ಸಂಪನ್ಮೂಲ ಕೇಂದ್ರ ಪಡುಕೋಣೆ ಇವರ ಸಹಭಾಗಿತ್ವದಲ್ಲಿ ಆಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬುಧವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಶರತ್ ಪೂಜಾರಿ ವಹಿಸಿದ್ದರು. ಆಲೂರು ಹರ್ಕೂರು ವ್ಯವಸಾಯ ಸೇವಾ ಬ್ಯಾಂಕ್ ಅಧ್ಯಕ್ಷ ಮಂಜಯ್ಯ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಆಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೇಶ್ ಎನ್. ದೇವಾಡಿಗ, ಮಾಜಿ ಉಪಾಧ್ಯಕ್ಷೆ ಸಿಂಗಾರಿ, ಗ್ರಾಪಂ. ಮಾಜಿ ಸದಸ್ಯ ಸುಬ್ಬಣ್ಣ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ್ ದೇವಾಡಿಗ, ಪ್ರತಿಭಾ ಕಾರಂಜಿಯ ನೋಡೆಲ್ ಅಧಿಕಾರಿ ಸತ್ಯನಾ ಕೊಡೇರಿ, ಬಿಆರ್ಪಿ ಮಂಜುನಾಥ ದೇವಾಡಿಗ, ಆಲೂರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ರೋಶನಿ ಪಿ. ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಹಾಲಾಡಿಯಲ್ಲಿ ಜರುಗಿದ 14 ಮತ್ತು 17 ವರ್ಷ ವಯೋಮಾನದೊಳಗಿನ ವೃತ್ತಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಮೆರೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 17 ವರ್ಷ ವಯೋಮಿತಿಯೊಳಗಿನ ವಿಭಾಗದ ಹುಡುಗರ ಮತ್ತು ಹುಡುಗಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿವೆ. 14 ವರ್ಷ ವಯೋಮಿತಿಯೊಳಗಿನ ವಿಭಾಗದ ಹುಡುಗಿಯರ ಮತ್ತು ಹುಡುಗರ ತಂಡಗಳು ದ್ವಿತೀಯ ಸ್ಥಾನ ಪಡೆದುಕೊಂಡಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಸೂಕ್ತ ಮಾರ್ಗದರ್ಶನ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಬೈಂದೂರು ಸಿಟಿ ಘಟಕವು 2026ನೇ ಸಾಲಿನಲ್ಲಿ ಬರೋಬ್ಬರಿ ಹತ್ತು ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಗಮನಾರ್ಹ ಸಾಧನೆ ಮಾಡಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್ ಅಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ಜೆಸಿಐ ಬೈಂದೂರು ಸಿಟಿಯ ಅಧ್ಯಕ್ಷರಾದ ಜೆಎಫ್ಎಂ ಚೈತ್ರ ಸತೀಶ್ ಅವರ ನೇತೃತ್ವದ ತಂಡವು ಜೆಸಿಐ ವಲಯಾಧ್ಯಕ್ಷರಾದ ಜೆಎಪ್ಎಸ್ ಸಂತೋಷ್ ಶೆಟ್ಟಿ ಅವರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು. ಸಂಸ್ಥೆಯ ಸಮಾಜಮುಖಿ ಸೇವೆ, ಜನಪರ ಕಾಳಜಿ ಹಾಗೂ ಸಂಘಟನಾ ಸಾಮರ್ಥ್ಯಕ್ಕೆ ಈ ಪ್ರತಿಷ್ಠಿತ ಗೌರವ ಸಂದಿದೆ. ವಲಯದ ಅತ್ಯುತ್ತಮ ಸ್ಥಳೀಯ ಸಮುದಾಯ ಪರಿಣಾಮಕಾರಿ ಯೋಜನೆಯಲ್ಲಿ ಪ್ರಥಮ ವಿಜೇತ ಘಟಕವಾಗಿ ಮತ್ತು ವಲಯ ಮಟ್ಟದ ಅತ್ಯುತ್ತಮ ಸ್ಥಳೀಯ ಸಂಸ್ಥೆಯ ಪದಾಧಿಕಾರಿ – ರನ್ನರ್ ಪ್ರಶಸ್ತಿಯನ್ನು ನಿಕಟ ಪೂರ್ವ ಕಾರ್ಯದರ್ಶಿ ರಾಘವೇಂದ್ರ ಸೂರ್ಕುಂದ ಅವರು ಪಡೆದು ಕೊಳ್ಳುವ ಮೂಲಕ ವಲಯದ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮತ್ತು ಜೆಸಿಐ ವೀಕ್ ಪ್ರಥಮ ದಿನದ ಟಾಪ್ ಒನ್ ಪ್ರಶಸ್ತಿ, ವಲಯ ಅಧ್ಯಕ್ಷರ ಭೇಟಿಯ ಶಾಶ್ವತ ಯೋಜನೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆಯು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ನೆಟ್ ಬಾಲ್ ಪಂದ್ಯಾಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ವಿದ್ಯಾರ್ಥಿಗಳು ಅಮೋಘ ವಿಜಯದೊಂದಿಗೆ ಸಂಸ್ಥೆಗೆ ಕೀರ್ತಿ ತಂದರು. 14 ವರ್ಷ ವಯೋಮಾನದ ಬಾಲಕಿಯರ ತಂಡ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ತೇರ್ಗಡೆಗೊಂಡಿತು. 14 ವರ್ಷ ವಯೋಮಾನದ ಬಾಲಕರ ಹಾಗೂ 17 ವರ್ಷ ವಯೋಮಾನದ ಬಾಲಕ ಮತ್ತು ಬಾಲಕಿಯರ ತಂಡವು ವಿರೋಚಿತ ಹೋರಾಟದೊಂದಿಗೆ ದ್ವಿತೀಯ ಸ್ಥಾನ ಪಡೆಯಿತು. ಪಂದ್ಯಾಟದುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ಜನತಾ ಸಂಸ್ಥೆಯ 22 ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದರು. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಶಾಲೆಯ ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗಳಲ್ಲಿ ಇನ್ನಷ್ಟು ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ನಡೆಯುತ್ತಿರುವ 24ನೇ ವರ್ಷದ ಕಾರ್ತಿಕ ಮಾಸದ ನಿರಂತರ ಭಜನೆಗೆ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯರು ಉದ್ಘಾಟಿಸಿದರು. ನಂತರ ಮಾತನಾಡಿ, ಹಿಂದಿನ ದಿನಗಳಲ್ಲಿ ಮನೆ ಮನೆಗಳಲ್ಲಿ ಸಂಜೆ ನಡೆಯುತ್ತಿದ್ದ ಭಜನೆ ಇಂದು ಮರೆಯಾಗುತ್ತಿದೆ. ಈ ಕಾಲಘಟ್ಟದಲ್ಲಿ ಬ್ರಾಹ್ಮಣ ಮಹಾಸಭಾದ ಈ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀ ಗುರು ನರಸಿಂಹ ದೇವಸ್ಥಾನದ ಶ್ರೀ ರಾಮ ಮಂದಿರದಲ್ಲಿ ನಡೆದ ಈ ಸಮಾರಂಭದಲ್ಲಿ ದೇವಳದ ಆಡಳಿತ ಮಂಡಳಿಯ ಸದಸ್ಯ ಕೆ ತಾರಾನಾಥ ಹೊಳ್ಳ ಶುಭ ಹಾರೈಸಿದರು. ಸಭಾದ ಗೌರವಾಧ್ಯಕ್ಷ ಎಂ. ಶಿವರಾಮ ಉಡುಪ, ಅಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ, ಅರ್ಚಕ ರಾಮದಾಸ ಭಟ್ಟ, ಸಭಾದ ಪದಾಧಿಕಾರಿಗಳು, ವಿಪ್ರ ಮಹಿಳಾ ವಲಯದ ಅಧ್ಯಕ್ಷೆ ವನಿತಾ ಉಪಾಧ್ಯ, ಸಾಲಿಗ್ರಾಮ ಕೂಟ ಮಹಾ ಜಗತ್ತು ಮಹಿಳಾ ಅಧ್ಯಕ್ಷೆ ಯಶೋಧಾ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.ಶ್ರೀ ರಾಮ ಭಜನಾ ಸಂಘ ಸಾಲಿಗ್ರಾಮ, ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಗೋ ಪೂಜಾ ಕಾರ್ಯಕ್ರಮ ಬುಧವಾರ ನಡೆಯಿತು. ಗೋವಿನ ಪಾದ ತೊಳೆದು, ಅರಸಿನ ಕುಂಕುಮ ಹಚ್ಚಿ ಗೋಗ್ರಾಸ ನೀಡಿ ಆರತಿ ಬೆಳಗಿ ಗೋಪೂಜೆ ನೆರವೇರಿಸಲಾಯಿತು. ಶಿಶು ಮಂದಿರದ ಆಡಳಿತ ಮಂಡಳಿ ಸದಸ್ಯರು, ಮಕ್ಕಳ ಪಾಲಕರು ಹಾಗೂ ಪುಟಾಣಿಗಳು ಗೋವಿಗೆ ಗೋಗ್ರಾಸ ನೀಡಿ ನಮಸ್ಕರಿ ಆಶೀರ್ವಾದ ಪಡೆದರು. ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ, ಸಂಚಾಲಕ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಅಶ್ವಿತಾ ಜಿ.ಪೈ, ಸದಸ್ಯರಾದ ಉಷಾ ಪಿ. ಮಡಿವಾಳ, ಬಿ. ಲಕ್ಷ್ಮೀಕಾಂತ ಮಡಿವಾಳ, ವಿಜಯಶ್ರೀ ವಿ. ಆಚಾರ್ಯ, ವಸಂತಿ ಎನ್. ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಉದಯ ಗಾಣಿಗ, ಶಿಶು ಮಂದಿರದ ಹಿತೈಷಿಗಳು ಮತ್ತಿತರರು ಉಪಸ್ಥಿತರಿದ್ದರು. ಪೋಟೋ ಪೈಲ್ ನೇಮ್ : ೧೧ಜಿಎಎನ್೫-ಎನ್ಒವಿ (ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ದೀಪಾವಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸಹಕಾರ ಸಂಘ ನಿಯಮಿತದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಡಾ. ಎಂ. ಮೋಹನ್ ಆಳ್ವ ಹಾಗೂ ಉಪಾಧ್ಯಕ್ಷರಾಗಿ ಎ. ಮೋಹನ್ ಪಡಿವಾಳ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಜಯಶ್ರೀ ಎ. ಶೆಟ್ಟಿ, ಶ್ರೀಪತಿ ಭಟ್, ನಾರಾಯಣ ಪಿ.ಎಂ., ಜಯರಾಮ್ ಕೋಟ್ಯಾನ್, ವಿವೇಕ್ ಆಳ್ವ, ಪ್ರಣೀತ್ ಕುಮಾರ್, ಪ್ರಕಾಶಿನಿ ವಿ. ಹೆಗ್ಡೆ, ಡಾ. ಕುರಿಯನ್, ಎಸ್. ಸೀತಾರಾಮ ಶೆಟ್ಟಿ, ರಾಮಚಂದ್ರ ಮಿಜಾರು, ಮೊಹಮ್ಮದ್ ಷರೀಫ್, ಅಶ್ವಿನ್ ಜೊಸ್ಸಿ ಪಿರೇರಾ ಹಾಗೂ ಮೀನಾಕ್ಷಿ ಬಿ. ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಹಾಗೂ ಸಹಕಾರ ಸಂಘಗಳ ಚುನಾವಣಾ ರಿಟರ್ನಿಂಗ್ ಅಧಿಕಾರಿ ಎನ್.ಜೆ. ಗೋಪಾಲ್ ಆಯ್ಕೆಯಾದವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಚಿತ್ರಪಾಡಿಯ ಕಾರ್ತಟ್ಟು ಅಘೋರೇಶ್ವರ ಕಲಾರಂಗ ವತಿಯಿಂದ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಇದೇ ನವೆಂಬರ್ 29ರಂದು ಅಘೋರೇಶ್ವರ ದೇಗುಲದ ಸಭಾಂಗಣದಲ್ಲಿ ಜರಗಲಿದ್ದು ಈ ಬಾರಿಯ ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ರಾಜ್ಯದ ಪ್ರಸಿದ್ಧ ಸಾಹಿತಿ, ಶಿಕ್ಷಕ, ಸಂಪನ್ಮೂಲ ವ್ಯಕ್ತಿ ನರೇಂದ್ರ ಕುಮಾರ್ ಕೋಟ ಆಯ್ಕೆಯಾಗಿದ್ದಾರೆ. ವಿಶೇಷ ಪುರಸ್ಕಾರಕ್ಕೆ ಹಿರಿಯ ಪಾಕತಜ್ಞ ಕಾರ್ತಟ್ಟು ಸುಬ್ರಹ್ಮಣ್ಯ ಕಾರಂತ್, ಹಿರಿಯ ಕೃಷಿಕ ಸೀತಾರಾಮ ಭಟ್ ಹಂದಟ್ಟು, ಕರುನಾಡ ಬುಕ್ ಆಫ್ ರೇಕಾಡ್೯ ದರ್ಶನ್ ಜಿ.ಎನ್, ಕುಸ್ತಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೃಷ್ಠಿ ಆರ್. ಕೋಟ ಆಯ್ಕೆಯಾಗಿದ್ದಾರೆ.ಪೂರ್ವಾಹ್ನ 08.30ರಿಂದ ಆರಂಭಗೊಳ್ಳುವ ವಾಹನ ಜಾಥ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಂದೂ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸಂಘಟನಾತ್ಮಕ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದ ಪ್ರದೀಪ್ ಸಂಗಮ್ (44) ಅವರು ದೀರ್ಘಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬುಧವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಅವರು, ಹಗಲು-ರಾತ್ರಿ ಎನ್ನದೆ ಸಂಘಟನೆಯ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದರು. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಪ್ರದೀಪ್ ಸಂಗಮ್ ಅವರ ನಿಧನದಿಂದ ಕುಂದಾಪುರ ಭಾಗದ ಹಿಂದೂ ಸಂಘಟನೆಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಸಂಘಟನಾತ್ಮಕ ಬದ್ಧತೆ, ಕಾರ್ಯತತ್ಪರತೆ ಹಾಗೂ ಸಮಾಜಮುಖಿ ಸೇವೆಯನ್ನು ಸಹಪಾಠಿಗಳು ಮತ್ತು ಸಂಘಟನೆಯ ಕಾರ್ಯಕರ್ತರು ಸ್ಮರಿಸಿದ್ದಾರೆ.
