Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ರಕ್ಷಕ – ಶಿಕ್ಷಕರ ಸಂಘದ ಸಭೆಯು ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ್ ಪ್ರಭು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಸೌಲಭ್ಯಗಳಿವೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡು ಅವರು ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವಂತಾಗಲಿ. ನಾವೆಲ್ಲರೂ ಸೇರಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸೋಣ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದಲ್ಲಯೇ ಅತ್ಯುತ್ತಮ ಸಂಸ್ಥೆಯಾಗಿದೆ. ಎಲ್ಲಾ ರೀತಿಯ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಇಲ್ಲಿ ಅವಕಾಶವಿದೆ. ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವಲ್ಲಿ ಭಂಡಾರ್ಕಾರ್ಸ್ ಕಾಲೇಜು ಮುಂದಿರುತ್ತದೆ. ಅಲ್ಲದೇ ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಒಳ್ಳೆಯ ಆಸಕ್ತಿದಾಯಕ ಕ್ಷೇತ್ರದಲ್ಲಿ ಅವರನ್ನು ಮುಂದುವರಿಯಲು ಅವು ಮಾಡಿಕೊಡಬೇಕು. ಅವರು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತಂದು ಅವರನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುತ್ತಿರುವ ಸೇವಾ ಸಂಗಮ ಶಿಶು ಮಂದಿರಗಳು, ವಿವಿಧ ಶಿಬಿರಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ. ದಸರಾ ಶಿಬಿರಗಳ ಮೂಲಕ ಮಕ್ಕಳ ಮಾನಸಿಕ, ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆ ಸಾಧ್ಯವಿದ್ದು, ಮಕ್ಕಳು ಇಂತಹ ಶಿಬಿರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ದಸರಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ನಿಶ್ಮಿತಾ ಖಾರ್ವಿ, ನರ್ಮದಾ ಪ್ರಭು, ಶಿಶು ಮಂದಿರದ ಸದಸ್ಯರಾದ ವಿಜಯಶ್ರೀ ವಿ.ಆಚಾರ್ಯ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ ಉಪಸ್ಥಿತರಿದ್ದರು. ಸಂಚಾಲಕ ಡಾ. ಕಾಶೀನಾಥ ಪೈ ಪ್ರಾಸ್ತಾವಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ವ್ಯಕ್ತಿ, ಸಂಸ್ಥೆಯಾಗಿದ್ದರೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೇ ಧೀರ್ಘಾವಧಿಯಲ್ಲಿ ಗಟ್ಟಿಯಾಗಿ ನಿಲ್ಲುತ್ತದೆ. ಸ್ವಾಭಿಮಾನ ಹಾಗೂ ಬದ್ಧತೆಯೊಂದಿಗೆ ಮುನ್ನಡೆಯುವುದು ಕಷ್ಟಸಾಧ್ಯವಾದರೂ, ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು, ಕುಂದಾಪ್ರ ಡಾಟ್ ಕಾಂ – ಅಂತರ್ಜಾಲ ಸುದ್ದಿತಾಣ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರ ಆಯೋಜನೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದ ವಿಶೇಷ ಯಕ್ಷಗಾನ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿ, ಮಳೆಗಾದಲ್ಲಿ ಯಕ್ಷಗಾನ ಕಲಾವಿದರಿಗೆ ನೆರವಾಗು ಉದ್ದೇಶದಿಂದ ಕೆಲವು ವರ್ಷಗಳಿಂದ ಬೈಂದೂರು ಭಾಗದಲ್ಲಿ ಒಂದು ಪ್ರದರ್ಶನ ಆಯೋಜಿಸುತ್ತಿರುವುದು ಶ್ಲಾಘನಾರ್ಹ ಎಂದರು. ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಬೈಂದೂರಿನಲ್ಲಿ ಕಲಾವಿದರು ಹಾಗೂ ಕಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ಯಾಥೊಲಿಕ್ ಸಭಾ ಉಡುಪಿ ಪ್ರದೇಶ, ಬಸ್ರೂರು ಘಟಕ್‌ ಐಸಿವೈಎಂ (ICYM) ಮತ್ತು ವೈಸಿಎಸ್ (YCS) ಬಸ್ರೂರು ಹಾಗೂ ಪರಿಸರ ಆಯೋಗ್‌ ಇವರ ಆಶ್ರಯದಲ್ಲಿ ‘ಸ್ವಚ್ಛತಾ ಹೀ ಸೇವಾ 2026’ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನವು ಕುಂದಾಪುರ ರೈಲು ನಿಲ್ದಾಣದಲ್ಲಿ  ಯಶಸ್ವಿಯಾಗಿ ನಡೆಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಐದನೆಯ ಸಾಹಿತ್ಯ ಸಮ್ಮೇಳನವು ಅಕ್ಟೋಬರ್ 4ರಂದು ಸಾಸ್ತಾನದ ಶಿವಕೃಪಾ ಸಭಾ ಭವನದಲ್ಲಿ ನಡೆಯಲಿದ್ದು ಅಕ್ಟೊಬರ್ 2ಭಾನುವಾರ ಸಮ್ಮೇಳನದ ಆಶಯ ಗೀತೆ ಬಿಡುಗಡೆ ಕಾರ್ಯಕ್ರಮ ಸಾಸ್ತಾನದ ಶಿವಕೃಪಾ ಸಭಾ ಭವನದಲ್ಲಿ ನಡೆಯಿತು. ಆಶಯ ಗೀತೆ ಬಿಡುಗಡೆ ಮಾಡಿದ ಸಮ್ಮೇಳನದ ಗೌರವಾಧ್ಯಕ್ಷ ಆನಂದ ಸಿ ಕುಂದರ್ ಮಾತನಾಡಿ ಸಮ್ಮೇಳನದ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆಯಾಗಿರುವುದು ಸಮ್ಮೇಳನಕ್ಕೆ ಮೆರಗು ತಂದಿದೆ. ನರೇಂದ್ರ ಕುಮಾರ್ ಸಾಹಿತ್ಯಕ್ಕೆ ಹೊಸ ಹೊಸ ಪ್ರತಿಭೆಗಳನ್ನು ವೇದಿಕೆ ತಂದು ಬೆಳೆಸಿದವರು ಖಂಡಿತ ಕಾರ್ಯಕ್ರಮ ಯಶಸ್ಸು ಕಾಣುತ್ತದೆ ಎಂದರು. ಧಾರ್ಮಿಕ ಚಿಂತಕರಾದ ಡಾ. ವಿಜಯ ಮಂಜರವರು ಮಾತನಾಡಿ, ಕಾರ್ಯಕ್ರಮ ಯಶಸ್ಸಿಗೆ ನಾವೆಲ್ಲಾ ಕೈ ಜೋಡಿಸುತ್ತೇವೆ. ನರೇಂದ್ರ ಕುಮಾರ್ ಸಮ್ಮೇಳನ ಅಧ್ಯಕ್ಷರಾಗಿರುವುದು ನನಗೆ ವೈಯಕ್ತಿಕವಾಗಿ ಸಂತೋಷವಾಗಿದೆ. ನಮ್ಮ ಭಾಗದ ಅನೇಕರಿಗೆ ನರೇಂದ್ರ ರವರು ಎಲ್ಲ ರೀತಿಯಲ್ಲೂ ಗುರುವಾಗಿ ಗುರಿ ತೋರಿದವರು ಎಂದರು. ಜಿಲ್ಲಾ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ಮಾತನಾಡಿ, ನರೇಂದ್ರ ಕುಮಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಭಾಕಂಪನವಿಲ್ಲದೆ ಆತ್ಮವಿಶ್ವಾಸದೊಂದಿಗೆ ವೇದಿಕೆಯನ್ನು ಬಳಸಿಕೊಂಡು ನಿರೂಪಣೆ ಮಾಡುವ ಸಂದರ್ಭದಲ್ಲಿ ವಿಷಯ ಸಂಗ್ರಹಣೆ, ಸ್ಪಷ್ಟ ಉಚ್ಛಾರ ಮತ್ತು ನಿರರ್ಗಳತೆಯಿಂದ ಪ್ರೇಕ್ಷಕರನ್ನು ಸೆಳೆಯುವಂತಹ ಪದಬಳಕೆ ಮಾಡುವ ಮೂಲಕ ಉತ್ತಮ ನಿರೂಪಣೆ ಮಾಡಲು ಸಾಧ್ಯ ಎಂದು ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘ ಆಯೋಜಿಸಿದ ʼನಿರೂಪಣೆ ಕುರಿತಾದ ಕಾರ್ಯಾಗಾರʼದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಭಾಷಾ ಸಂಘದ ಸಂಯೋಜಕರಾದ ಸ್ವಾತಿ ಜಿ. ರಾವ್‌ ಸ್ವಾಗತಿಸಿ, ಪ್ರವೀಣಾ ಎಮ್.‌ ಪೂಜಾರಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಸರೋಜಾ ವಂದಿಸಿ, ಮೇಘಾ ಎಸ್.‌ ಭಟ್‌ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್‌.ಎಲ್., ಡಾ. ಗಣನಾಥ್ ಶೆಟ್ಟಿ ಬಿ., ಗಣಪತಿ ಭಟ್ ಕೆ. ಎಸ್. ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ಅವರು “ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಚ್ಛತೆಯ ತತ್ವಗಳು ಇಂದಿಗೂ ಪ್ರಸ್ತುತ. ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಚಳುವಳಿಗೆ ಹೊಸ ಅರ್ಥವನ್ನು ತಂದುಕೊಟ್ಟಿದ್ದರು. ಎಲ್ಲರೂ ಗೌರವಿಸುವ ಮತ್ತು ಪ್ರೀತಿಸುವ ಮಹಾಚೇತನ. ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಸರಳತೆ ಮತ್ತು ಆಡಳಿತ ವೈಖರಿ ಎಲ್ಲ ಕಾಲಕ್ಕೂ ಅನುಕರಣೀಯ.” ಎಂದು ಹೇಳಿದರು ಕಾರ್ಯಕ್ರಮದಲ್ಲಿ ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ, ಕಾಲೇಜಿನ ವಿದ್ಯಾರ್ಥಿಗಳು, ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಕ್ಯಾಂಪಸ್‌ನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸ್ವಚ್ಛತಾ ಅಭಿಯಾನದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಸರಳತೆ, ಸತ್ಯ, ಅಹಿಂಸೆ ಹಾಗೂ ಶಿಸ್ತಿನಂತಹ ಮಹೋನ್ನತ ಜೀವನ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು. ಅತಿಥಿಗಳಾಗಿ ಆಗಮಿಸಿದ್ದ ಯಡಾಡಿ-ಮತ್ಯಾಡಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮಧುಸೂದನ್ ಪ್ರಸಾದ್ ಅವರು ಮಾತನಾಡಿ, “ದಿನಾಚರಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು. ಸ್ವಚ್ಛ ಪರಿಸರವನ್ನು ನಿರ್ಮಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದ್ದು, ಸ್ವಚ್ಛತೆಯನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳಬೇಕು,” ಎಂದು ಸಂದೇಶ ನೀಡಿದರು. ಸಮಾಜ ವಿಜ್ಞಾನ ಶಿಕ್ಷಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಯುವಕರಲ್ಲಿರುವ ಶಕ್ತಿ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸಾಂಸ್ಕೃತಿಕ ವಿನಿಮಯ ವಿಭಾಗದ ರಾಷ್ಟ್ರೀಯ ಉಪ ಆಯುಕ್ತ ವಿವೇಕ ಆಳ್ವ ಹೇಳಿದರು. ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಅ.2ರಿಂದ 6ರವರೆಗೆ ಆಯೋಜಿಸಿರುವ ಎರಡನೇ ವರ್ಷದ ರಾಷ್ಟ್ರೀಯ ಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ (ಎಐ), ಯುವ ಉದ್ಯಮಶೀಲತೆ ಹಾಗೂ ಸ್ಟೆಮ್ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಇಂದಿಗೂ ಜಗತ್ತಿನಾದ್ಯಂತ ಗೌರವಿಸಲ್ಪಡುತ್ತವೆ. ಅಂತಹ ಮಹನೀಯರನ್ನು ಸ್ಮರಿಸುವ ದಿನದಂದೇ ಯುವಕರಿಗಾಗಿ ಇಂತಹ ಕಾರ್ಯಾಗಾರ ಆರಂಭವಾಗುತ್ತಿರುವುದು ಅರ್ಥಪೂರ್ಣವಾಗಿದೆ. ಯುವಜನತೆಯಲ್ಲಿ ಅಪಾರ ಶಕ್ತಿ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆ ಇದೆ. ಆದರೆ ಅದಕ್ಕೆ ಸರಿಯಾದ  ನಿರ್ದೇಶನ ದೊರೆಯಬೇಕು. ಸ್ಕೌಟಿಂಗ್ ಜೀವನದಲ್ಲಿ ಉತ್ತಮ ಮೌಲ್ಯಗಳು ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಸಾಮರ್ಥ್ಯ ಹೊಂದಿದೆ. ನಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ‘ಸ್ವಚ್ಛತಾ ಹೀ ಸೇವಾ – 2026’ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.   ಸೆ. 17 ರಿಂದ ಅಕ್ಟೋಬರ್ 02, 2025 (ಗಾಂಧಿ ಜಯಂತಿ) ವರೆಗೆ ನಡೆದ ಈ ಅಭಿಯಾನದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ Cleanliness Target Units (CTU) ಮತ್ತು ಸಾರ್ವಜನಿಕ ಸ್ಥಳಗಳಲ್ಲಿದ್ದ ‘ಬ್ಲಾಕ್ ಸ್ಪಾಟ್’ಗಳನ್ನು ಗುರುತಿಸಿ, ಅವುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸುಂದರ ಉದ್ಯಾನ ಸೃಷ್ಠಿಸಿ ಅನಾವರಣಗೊಳಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು. ​ಈ ಅಭಿಯಾನದ ಭಾಗವಾಗಿ ಕಸ ಬಿದ್ದ ಹಾಗೂ ಅಶುಚಿಯಾಗಿದ್ದ ಸ್ಥಳಗಳನ್ನು ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ಸುಂದರ ಉದ್ಯಾನ ಸೃಷ್ಠಿಸಿ ಅದರಲ್ಲಿ ವಿಶೇಷವಾಗಿ ಜಾಗೃತಿ ಫಲಕವನ್ನು ಇರಿಸಲಾಗಿದೆ. ಪರಿಶುದ್ಧ ಹಾಗೂ ಸ್ವಚ್ಛ ಸಾಲಿಗ್ರಾಮ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ ,ಸ್ವಚ್ಛತೆ ನಮ್ಮೆಲ್ಲರ ಹೊಣೆಗಾರಿಕೆ ಕಂಡಕಂಡಲ್ಲಿ ತ್ಯಾಜ್ಯ ಎಸೆದು ಮನುಕುಲಕ್ಕೆ ಸಂಕಷ್ಟ…

Read More