Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಂಘ-ಸಂಸ್ಥೆಗಳು ಸಮಾಜ ಸೇವಕರು ಈ ಸಮಾಜದ ಆಸ್ತಿಯಾಗಿ ಸಮರ್ಪಣಾ ಮನೋಭಾವದಿಂದ ಮಾಡಿದ ಸೇವಾ ಕಾರ್ಯವನ್ನು ಪ್ರತಿಯೊಬ್ಬರು ಗುರುತಿಸುವಂತ್ತಾಗಬೇಕು ಎಂದು ಸಾಲಿಗ್ರಾಮ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಬಂಟ್ವಾಳ ಪ್ರಕಾಶ್ ಕಾರಂತ್ ನುಡಿದರು. ಅವರು ಶನಿವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶನಿವಾರದ ಸಾಂಸ್ಕೃತಿಕ ವೇದಿಕೆಯಲ್ಲಿ ಸಂಘಸಂಸ್ಥೆಗಳಿಗೆ ಸಮಾಜಸೇವಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಮಾತನಾಡಿ ಭಗವಂತನ ಮೆಚ್ಚುವ ಕಾರ್ಯವೆಂದರೆ ಅದು ನಿಸ್ವಾರ್ಥ ಸೇವೆ ಸದಾ ಸಮಾಜಮುಖಿ ಕಾರ್ಯದ ಮೂಲಕ ಪಂಚವರ್ಣದಂತಹ ಸಂಘಟನೆಗಳು ಸಮಾಜಕ್ಕೆಮಾದರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಕೋಟದ ಪಂಚವರ್ಣ ಸಂಘಟನೆ ಪರಿಸರಸ್ನೇಹಿ ಸಾಮಾಜಿಕ ಕಾರ್ಯವನ್ನು ಗುರುತಿಸಿ ಗೌರವ ಸಂಮ್ಮಾನ ನೀಡಲಾಯಿತು. ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೆಂಕಟೇಶ ಉಡುಪ, ಹೊಸಬದುಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ, ಸಾಲಿಗ್ರಾಮದ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಮದಾಸ್ ನಾಯಕ್ ಇವರುಗಳನ್ನು ಅಭಿನಂದಿಸಿ ಪುರಸ್ಕರಿಸಲಾಯಿತು. ವೇದಿಕೆಯಲ್ಲಿ ದೇಗುಲದ ಆಡಳಿತ ಮಂಡಳಿಯ ಉಪಾಧ್ಯಕ್ಷ ಚಂದ್ರಶೇಖರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಯುಥ್ ರೆಡ್ ಕ್ರಾಸ್ ಘಟಕ ಮತ್ತು ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ‘ಜಿನೆವಾ ಒಪ್ಪಂದ ದಿನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಅತಿಥಿಗಳಾದ ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ದಿನೇಶ್ ಹೆಗ್ಡೆ ಮಾತನಾಡಿ, ಜಿನೆವಾ ಎಂಬ ಸ್ಥಳವಿರುವುದು ಸ್ವಿಟ್ಜರ್ಲ್ಯಾಂಡ್ ನಲ್ಲಿ . ಈ ದೇಶದ ಜಗತ್ತಿನಲ್ಲಿಯೇ ಅತ್ಯಂತ ಶಾಂತಿಯುತ ರಾಷ್ಟ್ರ. ಅಂತರರಾಷ್ಟ್ರೀಯ ಮಟ್ಟದ ವ್ಯವಹಾರದಲ್ಲಿ ಈ ದೇಶ ತಟಸ್ಥ ಧೋರಣೆಯನ್ನು ಪಾಲಿಸುವುದು. ಕಾರಣ ಇದು ಶಾಂತಿ, ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಸ್ವಭಾವವನ್ನು ಹೊಂದಿದೆ. ಜಗತ್ತಿನಲ್ಲಿ ಯುದ್ಧಗಳಾದಾಗ ಶಾಂತಿಯ ಸಂದೇಶ ಮತ್ತು ಯುದ್ಧದ ಸಂದರ್ಭದಲ್ಲಿ ಗಾಯಗೊಂಡವರು ಸೈನಿಕರು ಮತ್ತು ನೊಂದವರ ಚಿಕಿತ್ಸೆ ಮತ್ತು ಸಂತೈಸುವ ಮೂಲ ಉದ್ದೇಶವನ್ನು ರೆಡ್ ಕ್ರಾಸ್ ಸಂಸ್ಥೆ ಹೊಂದಿದೆ ಎಂದು ಹೇಳಿದರು. ಭಾರತೀಯ ರೆಡ್ ಕ್ರಾಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ಗ್ರಾಮದ ಶ್ರೀ ನಂದಿಕೇಶ್ವರ ದೇವಸ್ಥಾನದ ಘಂಟೆಯನ್ನು ಕಳವು ಮಾಡಿದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಘಂಟೆಯನ್ನು ಯಾರೋ ಕಳ್ಳರು ಕಳವು ಮಾಡಲು ಬಂದಾಗ ಆ ದೇವಸ್ಥಾನ ಸಮೀಪದ ಮನೆಯ ನಿವಾಸಿ ಗಣೇಶ್ ಅವರು ತಮ್ಮ ಶ್ರೇಯಸ್‌ ಹಾಗೂ ಧೀರಜ್ ಅವರೊಂದಿಗೆ ತೆರಳಿ ನೋಡಿದ್ದಾರೆ. ಆಗ ಒಬ್ಬ ವ್ಯಕ್ತಿ ಘಂಟೆಯನ್ನು ಹಿಡಿದುಕೊಂಡು ಓಡಿ ಹೋಗಿದ್ದಾನೆ. ಸ್ವಲ್ಪ ದೂರದಲ್ಲಿ ನಿಂತಿದ್ದ ಕಾರಿನ ಬಳಿ ಇವರೆಲ್ಲ ತೆರಳಿದಾಗ ಆ ಕಾರಿನಲ್ಲಿ ಕುಳಿತ ವ್ಯಕ್ತಿ ಕಾರನ್ನು ಇವರ ಮೇಲೆ ಹತ್ತಿಸಲು ಪ್ರಯತ್ನಿಸಿದ್ದ ಎನ್ನಲಾಗಿದೆ. ಅನಂತರ ಊರವರೆಲ್ಲ ಮಾಹಿತಿ ತಿಳಿದು, ಕಾರಿನ್ನ ಗುರುತು ಪತ್ತೆ ಹಚ್ಚಿದ್ದು, ಈ ವೇಳೆ ಕಾರಿನಲ್ಲಿದ್ದವ ಮುಜಾಹಿದ್ ಹಾಗೂ ಘಂಟೆ ಕದ್ದು ಓಡಿದವ ಸಫಾದ್ ಎಂದು ತಿಳಿದು ಬಂದಿದೆ. ಈ ಆರೋಪಿಗಳು ಘಂಟೆಯನ್ನು ಕಳ್ಳತನ ಮಾಡಿದ್ದಲ್ಲದೆ, ಹಿಡಿಯಲು ಬಂದವರ ಮೇಲೆ ಕಾರನ್ನು ಹಾಯಿಸಿ, ಸಾಯಿಸಲು ಪ್ರಯತ್ನಿಸಿದ್ದಾರೆ ಎಂದು ಗಣೇಶ್ ಬೀಜಾಡಿ ಅವರು ನೀಡಿದ ದೂರಿನಂತೆ ಕುಂದಾಪುರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ ಇವರ ಆಶ್ರಯದಲ್ಲಿ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರಿನಲ್ಲಿ 80ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ಶಾಲಾ ಮಕ್ಕಳ ಜೊತೆಗೆ ಆಚರಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯೋಧರಿಗೊಂದು ಸನ್ಮಾನ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಲ್ಯಾನ್ಸ್ ನಾಯಕ್ ಉಮೇಶ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ಘಟಕದ ಅಧ್ಯಕ್ಷರಾದ ಶರತ್ ಸೌಡ, ನಿಕಟಪೂರ್ವ ಅಧ್ಯಕ್ಷರಾದ ರಾಘವೇಂದ್ರ ಶಂಕರನಾರಾಯಣ, ಕಾರ್ಯದರ್ಶಿ ರಂಜಿತ್ ಬೈಲೂರು, ಸತೀಶ್ ನ್ಯಾಕ್ ಕೋಟೇಶ್ವರ, ಶಾಲಾ ಮುಖ್ಯೋಪಾಧ್ಯಾಯರಾದ ರವೀಂದ್ರ ದೇವಾಡಿಗ , ರಂಜಿತ್ ಸೌಡ, ನರಸಿಂಹ ಕೊಂಡಳ್ಳಿ, ಗಣೇಶ್ ನೆಲ್ಲಿಕಟ್ಟೆ, ಸಂದೀಪ ಮರ್ಜಿ, ಸುರೇಶ್ ಮೂಡುಬಗೆ, ವನಜ ಮೊಗವೀರ ಅಂಪಾರು, ನಂದಿನಿ ಅಂಪಾರು, ನೇತ್ರಾವತಿ ಮತ್ತು ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾಡಳಿತ ವತಿಯಿಂದ 30ಕ್ಕೂ ಮಿಕ್ಕಿ ವಿವಿಧ ಇಲಾಖೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಸರಕಾರಿ ನೌಕರರನ್ನು ಗುರುತಿಸಿ ನೀಡುವ ಸರ್ವೋತ್ತಮ ಪ್ರಶಸ್ತಿಗೆ ಕೋಡಿ ಹಾಗೂ ಕೋಟತಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ಉಡುಪಿ ಜಿಲ್ಲಾ ಆಡಳಿತದ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವಿವಿಧ ಜನಪ್ರತಿನಿಧಿಗಳು ಸಭೆಯ ಉಪಸ್ಥಿತಿಯಲ್ಲಿ ಗೌರವ ಸನ್ಮಾನ ನೀಡಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಹರ್ತಟ್ಟು ನವೋದಯ ಫ್ರೆಂಡ್ಸ್ ಇದರ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳ ಅನುಕೂಲಕ್ಕಾಗಿ ಸುಮಾರು ರೂ.50 ಸಾವಿರ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ತಂಗುದಾಣ ಲೋರ್ಕಾಣೆಗೊಳಿಸಲಾಯಿತು. ತಂಗುದಾಣವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ, ಮಾತನಾಡಿ, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಸ್ಥಳದಲ್ಲಿ ಮೂಲಸೌಕರ್ಯ ಕಲ್ಪಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಅಭಿನಂದನೀಯ. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಪರಸ್ಪರ ಸಹಕಾರ ಹಾಗೂ ಜವಾಬ್ದಾರಿಯ ಮನೋಭಾವವನ್ನು ಬೆಳೆಸುತ್ತವೆ ಎಂದರು. ಇದೇ ಸಂದರ್ಭದಲ್ಲಿ ಹರ್ತಟ್ಟು ಗ್ರಾಮವನ್ನು ಹಸಿರು ಗ್ರಾಮವನ್ನಾಗಿಸುವ ಉದ್ದೇಶದಿಂದ ಹಸಿರು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ಮಹಿಳಾ ಸದಸ್ಯರಿಗೆ ೧೫೦ ಸಸಿಗಳನ್ನು ವಿತರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಸಿ ನೆಟ್ಟು ಪೋಷಿಸುವಂತೆ ಕರೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಅಧ್ಯಯನ ಭೇಟಿಯ ಭಾಗವಾಗಿ ವಿದ್ಯಾರ್ಥಿಗಳು ಸ್ವರಾಜ್ಯ – 75 ತಂಡ ಮೂಡು ಗಿಳಿಯಾರಿನ ಜನ ಸೇವಾ ಟ್ರಸ್ಟ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕ, ಕೋಟದ ಹಸ್ತ ಚಿತ್ತ ಫೌಂಡೇಶನ್, ಉಸಿರು ಕೋಟ, ಜೈ ಕುಂದಾಪುರ ಸೇವಾ ಟ್ರಸ್ಟ್ ಹಾಗೂ ಅದಿಮ ಕಲಾ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ಆಯೋಜಿಸಿದ ಕೋಟೇಶ್ವರದ ಸರ್ಜನ್ ಆಸ್ಪತ್ರೆಯ ಆವರಣದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಹುಲಿಕಲ್ಲು ನಾಗಭೂಷಣ್ ರಾವ್ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ರಾಷ್ಟ್ರಧ್ವಜಕ್ಕೆ ಗೌರವಾರ್ಪಣೆ ಸಲ್ಲಿಸಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ದಿನಕರ್ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಭೂಸೇನಾ ಯೋಧ ಕರುಣಾಕರ ಗಾಣಿಗ ನಾಮಫಲಕ ಅನಾವರಣ ಮಾಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಕದ್ರಿಕಟ್ಟು ಅಮೃತ್ ಯುವಕ ಸಂಘದ ವತಿಯಿಂದ ಕದ್ರಿಕಟ್ಟು ಪರಿಸರದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನೂತನ ಬಸ್ ತಂಗುದಾಣವನ್ನು ನಿರ್ಮಿಸಿದ್ದು ಇದನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಅಮೃತ್ ಯುವಕ ಸಂಘದ ಅಧ್ಯಕ್ಷ ಜಗನಾಥ ಕಾಂಚನ್, ಪದಾಧಿಕಾರಿಗಳು, ಗಣ್ಯರಾದ ಕವಿತಾ ಸದಾನಂದ ಪೂಜಾರಿ, ಚಂದ್ರ ಆಚಾರ್, ಜಿ.ಎಸ್. ಆನಂದ್ ದೇವಾಡಿಗ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚಂದ್ರ ಪೂಜಾರಿ ಕದ್ರಿಕಟ್ಟು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸದ್ದಿ.ಕುಂದಾಪುರ: ಸುಜ್ಷಾನ ಎಜುಕೇಷನಲ್ ಟ್ರಸ್ಟ್ ಕುಂದಾಪುರ ಹಾಗೂ ಇವರ ಅಂಗಸಂಸ್ಥೆಗಳ ಸಹಭಾಗಿತ್ವದಲ್ಲಿ ಯಡಾಡಿ ಮತ್ಯಾಡಿಯ ವಿದ್ಯಾರಣ್ಯದ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು. ಧ್ವಜಾರೋಹಣ ಪೂರ್ಣಗೊಳಿಸಿದ ಮಾನ್ಯ ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರರಾದ ಕೆ. ದಿವಾಕರ್ ಮಾತನಾಡಿ ”ನಮ್ಮ ದೇಶದ ಇತಿಹಾಸವು ನೂರಾರು ವರ್ಷಗಳು ಊಟಿ, ಸಾಮೂಹಿಕ ಹತ್ಯೆ, ದಾಳಿ, ಹೊರಟಾಗಳೆಂದಲೇ ಕೂಡಿದರೂ ಕೂಡ ನಾವು ಇಂದು ಅಭಿವೃದ್ಧಿ ಪದದಲ್ಲಿ ಅತ್ಯಂತ ವೇಗವಾಗಿ ಸಾಗುತ್ತಿದ್ದೇವೆ. ಇಂದು ಇಲ್ಲಿನ ವಿದ್ಯಾರ್ಥಿಗಳ ಕಣ್ಣುಗಳಲ್ಲಿ ನಮ್ಮ ದೇಶದ ಉಜ್ವಲ ಭವಿಷ್ಯದ ಹೊಳವು ಎದ್ದು ಕಾಣುತ್ತಿದೆ ಎಂದು ಯುವ ಪೀಳೆಗೆಯ ಮೇಲಿನ ಭರವಸೆಯನ್ನು ವ್ಯಕ್ತಪಡಿಸಿದರು. ವಿಜೃಂಭಣೆಯಿಂದ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೇಸರಿ ಬಿಳಿ ಹಸಿರು ಬಣ್ಣದ ಉಡುವು ತೊಟ್ಟು ರಾಷ್ಟ್ರಧ್ವಜ ರೂಪಿಸಿರುವುದು ಎಲ್ಲ ಗಮನ ಸಳೆಯಿತು. ವಿದ್ಯಾರ್ಥಿಗಳ ಶಿಸ್ತಿನ ಸ್ವಾಗತದ ಜೊತೆಗೆ ನೆರೆದ ಎಲ್ಲರ ಕೈಯಲ್ಲಿ ರಾಷ್ಟ್ರಧ್ವಜ ಗೋಚರಿಸಿದವು. ಕಾರ್ಯಕ್ರಮದ ವಿಶೇಷ ಅಂಗವಾಗಿ ಖ್ಯಾತ ಗಾಯಕರಾಗಿರುವ ಜಗದೀಶ್ ಪುತ್ತೂರು ಇವರ ಸಾರಥ್ಯದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪಡಿಯಾರ್ ನರ್ಸಿಂಗ್ ಹೋಮ್ ಸ್ಥಾಪಕ, ಆರ್.ಎಸ್.ಎಸ್ ಪ್ರಮುಖರಾಗಿದ್ದ ಡಾ ಎಸ್. ಎನ್. ಪಡಿಯಾರ್ (84) ಅವರು ನಿಧನರಾಗಿದ್ದಾರೆ. ಕುಂದಾಪುರದಲ್ಲಿ ಪಡಿಯಾರ ನರ್ಸಿಂಗ್ ಹೋಮ್ ಹಾಗೂ ಆ್ಯಂಬುಲೆನ್ಸ್ ಸೇವೆ ಆರಂಭಿಸಿದ್ದರು. ಡಾ. ಪಡಿಯಾರ್ ಅವರು ವೈದ್ಯಕೀಯ ವೃತ್ತಿಯ ಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಲವು ಜವಾಬ್ದಾರಿ ನಿಭಾಯಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೇವಾ ಸಂಗಮ ಶಿಶುಮಂದಿರಗಳ ಸ್ಥಾಪನೆ, ವಿಷ್ಣು ಸಹಸ್ರನಾಮದ ವಿಶೇಷತೆಯನ್ನು ಸಾರುತ್ತಾ ಜನಸಾಮಾನ್ಯರತ್ತಾ ಕೊಂಡೊಯ್ದ ಹೆಗ್ಗಳಿಕೆ ಇವರದ್ದು. ಮೂಲತಃ ಉಪ್ಪುಂದದವರಾದ ಪಡಿಯಾರ್ ಅವರು ಕುಂದಾಪುರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡಿದ್ದರು. ಅವರು ಮಡದಿ ಹಾಗೂ ಇಬ್ಬರು ಪುತ್ರರು, ಬಂಧು ಬಳಗವನ್ನು ಅಗಲಿದ್ದಾರೆ.

Read More