ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶದ ಐಕ್ಯತೆ, ಸಮಗ್ರತೆ ಮತ್ತು ರಾಷ್ಟ್ರೀಯತೆಯ ಜಾಗೃತಿಗಾಗಿ ಬೈಂದೂರಿನಲ್ಲಿ “ಹಿಂದು ಜಾಗರಣ ವೇದಿಕೆ”ವತಿಯಿಂದ ಆಯೋಜಿಸಲಾಗಿದ್ದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆದ ಬೃಹತ್ ಪಂಜಿನ ಮೆರವಣಿಗೆ ಹಾಗೂ ದೇಶಭಕ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಹಿಂದೂ ಸಂಘಟನೆಗಳ ಪ್ರಮುಖರು, ದೇಶಪ್ರೇಮಿ ಯುವಕರು ಹಾಗೂ ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು ರಾಷ್ಟ್ರೀಯತೆಯ ಸಂದೇಶ ಸಾರಿದ್ದು ಅತ್ಯಂತ ಹೆಮ್ಮೆಯ ವಿಷಯ. ದೇಶದ ಅಖಂಡತೆ ಮತ್ತು ಸ್ವಾಭಿಮಾನವನ್ನು ಎತ್ತಿಹಿಡಿಯಲು ಯುವಜನತೆ ಸದಾ ಮುಂಚೂಣಿಯಲ್ಲಿರಬೇಕು. ಈ ನಿಟ್ಟಿನಲ್ಲಿ ಆಯೋಜಿತವಾದ ಈ ಕಾರ್ಯಕ್ರಮವು ಯುವ ಮನಸ್ಸುಗಳಲ್ಲಿ ದೇಶಭಕ್ತಿಯ ಕಿಚ್ಚನ್ನು ಹೆಚ್ಚಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’ದ ಪ್ರಯುಕ್ತ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವ ಹಾಗೂ ಸಮಾಜದಲ್ಲಿ ರಾಷ್ಟ್ರೀಯತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಭವ್ಯವಾದ ಪಂಜಿನ ಮೆರವಣಿಗೆ ಹಾಗೂ ವಿಶೇಷ ಸಭಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಅಖಂಡ ಭಾರತ ಸಂಕಲ್ಪದ ಮುಖ್ಯ ಉದ್ದೇಶ ವಿಭಜನೆಯ ಕಹಿ ನೆನಪುಗಳನ್ನು ಮೆಲುಕು ಹಾಕುತ್ತಾ, ದೇಶದ ಐಕ್ಯತೆ, ಸಮಗ್ರತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವುದು ಅಖಂಡ ಭಾರತ ಸಂಕಲ್ಪ ದಿನದ ಮುಖ್ಯ ಉದ್ದೇಶವಾಗಿದೆ. ಭವಿಷ್ಯದ ಯುವಪೀಳಿಗೆಗೆ ದೇಶದ ಇತಿಹಾಸ, ದೇಶಕ್ಕಾಗಿ ತ್ಯಾಗ-ಬಲಿದಾನಗೈದ ಮಹಾನ್ ವೀರರ ಆದರ್ಶಗಳನ್ನು ತಲುಪಿಸುವುದು ಹಾಗೂ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸುವುದು ಇದರ ಪ್ರಮುಖ ಆಶಯವಾಗಿದೆ ಎಂದು ಕೇಶವ್ ಬಂಗೇರ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಆಗಮಿಸಿದ್ದ ಶ್ರೀ ಕೇಶವ್ ಬಂಗೇರ ಅವರು ಮಾತನಾಡಿ, ಇಂದಿನ ಜೆನ್-ಜಿ (Gen Z) ಮತ್ತು ಜೆನ್-ಆಲ್ಫಾ (Gen Alpha) ಯುವಪೀಳಿಗೆಯು ಕೆಲವೊಮ್ಮೆ ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ 2ನೇ ಶ್ರಾವಣ ಮಾಸದ ಶನಿವಾರದ ಅಂಗವಾಗಿ ವಿವಿಧ ಸಾಂಸ್ಕೃತಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಧಾರ್ಮಿಕ, ಸಮಾಜ ಸೇವೆಯಲ್ಲಿ ಸಮಾಜ ಸೇವಕ ಪಾರಂಪಳ್ಳಿ ಸದಾಶಿವ ಮಧ್ಯಸ್ಥ, ಶೈಕ್ಷಣಿಕ ಹಾಗೂ ಶ್ರೀ ಗುರುರಸಿಂಹ ದೇವಳದಲ್ಲಿ ನಿತ್ಯ ಪೂಜಾ ವಿಧಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಚಿತ್ರಪಾಡಿ ಜಗದೀಶ ಉಪಾಧ್ಯಾಯ, ಆಂಜನೇಯ ದೇವಳದಲ್ಲಿ 20 ವರ್ಷಗಳಿಗಿಂತಲೂ ಹೆಚ್ಚು ಸ್ವಚ್ಛತಾ ಸೇವೆಗೈದ ರಾಮಚಂದ್ರ ಆಚಾರ್, ಪಾರಂಪಳ್ಳಿ ರಾಧಾ, ಕರ್ಣ, ಶ್ರೀದೇವಳದಲ್ಲಿ ಅಡಿಪು ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ದೇವಾಡಿಗ ಅವರುಗಳನ್ನು ಸನ್ಮಾನಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಕಾರಂತ ಅವರುಗಳನ್ನು ಅಭಿನಂದಿಸಿ ಸೇವೆಯನ್ನು ಶ್ಲಾಘಿಸಿ ದೇವಸ್ಥಾನವಿರಲಿ ಯಾವುದೇ ಸಂಘ ಸಂಸ್ಥೆಗಳಿರಲಿ ಪ್ರತಿಯೊಬ್ಬರ ಸೇವಾ ಕಾರ್ಯ ಬಹಳ ಮುಖ್ಯವಾಗಿದೆ ಹಾಗೂ ಅವರ ಸೇವಕಾರ್ಯವನ್ನು ಗುರುತಿಸಿ ಗೌರವಿಸಿದಾಗ ಉಳಿದವರಿಗೂ ಕೂಡ ಪ್ರೇರಣಾದಾಯಕವಾಗಿರುತ್ತದೆ ಎಂದು ತಿಳಿಸಿದರು. ದೇಗುಲ ರಾಜ್ಯಾಂಗಣದಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾದ ಚಂದ್ರಶೇಖರ ಉಪಾಧ್ಯಾಯರು ಕಾರ್ಯದರ್ಶಿ ಪರಶುರಾಮ ಭಟ್ಟ, ಕೋಶಾಧಿಕಾರಿ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಫ್ರೀಡಾ ಮೆನೆಜಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಸಾಂಪ್ರದಾಯಿಕ ತಿರುವಾತಿರಂ ನೃತ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ನಂತರ ವಿವಿಧ ಮನರಂಜನಾತ್ಮಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಅನುಮೋಲ್, ಆಸಿಫ್ ಹಾಗೂ ಹೀನಾ ಅವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿದರು. ಪವಿತ್ರಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಆಯಿಷಾ ರಫೀದಾ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಊಟವು ಯಜ್ಞ ಸ್ವರೂಪವಾಗಿದ್ದು, ಊಟವನ್ನು ಮಾಡುವಾಗ ಒಮ್ಮೆ ಬಾಳೆಗೆ ಬಡಿಸಿದ ನಂತರ ಅದು ಅಗ್ನಿಯ ಸಂಪರ್ಕಕ್ಕೆ ಬಂದಂತಾಗುತ್ತದೆ. ಜಠರಾಗ್ನಿಯು ಅವರವರ ಕರ್ಮಕ್ಕೆ ಅನುಗುಣವಾಗಿ ಭಿನ್ನವಾಗಿದ್ದು, ಒಬ್ಬರು ಇನ್ನೊಬ್ಬರ ಎಂಜಲನ್ನು ಅಥವಾ ಇನ್ನೊಬ್ಬರ ಬಾಳೆಯಿಂದ ತೆಗೆದುಕೊಂಡು ತಿನ್ನುವುದು ವ್ಯತಿರಿಕ್ತಪರಿಣಾಮವನ್ನು ಉಂಟುಮಾಡುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಅನ್ನಬ್ರಹ್ಮ ಚಾತುರ್ಮಾಸ್ಯದ ಧರ್ಮಸಭೆಯಲ್ಲಿ ಅಗ್ನಿಜಯದ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಒಬ್ಬರ ಎಂಜಲನ್ನು ಇನ್ನೊಬ್ಬರು ತಿನ್ನಬಾರದು ಎಂಬ ನಿಯಮವಿದ್ದು, ಇದು ಆರೋಗ್ಯ ಹಾಗೂ ಆಧ್ಯಾತ್ಮದ ದೃಷ್ಟಿಯಿಂದ ಅನುಸರಣೀಯವಾಗಿದೆ ಎಂದ ಶ್ರೀಗಳು, ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ದಂಪತಿಗಳಿಗೆ ಈ ನಿಯಮದಿಂದ ವಿನಾಯಿತಿ ಇದ್ದು, ಸತಿಪತಿಗಳು ಅರ್ಧನಾರೀಶ್ವರ ತತ್ತ್ವದ ಪ್ರತೀಕ. ದಂಪತಿಗಳು ಎನ್ನುವಾಗ ಅದ್ವೈತವಿರುವುದರಿಂದ ಎಂಜಲನ್ನು ತಿನ್ನಬಾರದು ಎಂಬ ನಿಯಮಕ್ಕೆ ವಿನಾಯಿತಿ ಇದೆ ವಿವರಿಸಿದರು. ಹನುಮಂತನ ಬಾಲಕ್ಕೆ ಲಂಕೆಯಲ್ಲಿ ಬೆಂಕಿ ಹಚ್ಚಿದ ರಾಮಾಯಣದ ಸಂದರ್ಭವನ್ನು ವಿವರಿಸಿದ ಶ್ರೀಗಳು, ಇದನ್ನು ಅರಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆ ಭಾಷೆಯ ಮೂಲಕವೇ ವ್ಯಕ್ತವಾಗುತ್ತದೆ. ನಮ್ಮ ಹಿರಿಯರ ಬಳಸುತ್ತಿದ್ದ ಭಾಷೆಯ ಬಗ್ಗೆ ಹೆಮ್ಮೆ ಹೊಂದಿರುವ ಜೊತೆಗೆ ಅದನ್ನು ಹೆಚ್ಚು ಬಳಸುವ ಹೊಂದಿಕೊಳ್ಳುವುದು ತಪ್ಪಲ್ಲ ಆದರೆ ನಮ್ಮತನವನ್ನು ಮರೆಯಬಾರದು. ಸುಮಾರು ಎರಡು ಸಾವಿರ ಕೇವಲ ಒಂದು ಭಾಷೆಯಲ್ಲ ಅದೊಂದು ಬದುಕು ಎಂದು ಮೂಡುಬಿದಿರೆ ಆಳ್ವಾನ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಅವರು ಕುಂದಾಪುರ ಕನ್ನಡ ಪ್ರತಿಷ್ಠಾನ ಬೈಂದೂರು ವತಿಯಿಂದ ಯಡ್ತರೆ ಜೆ.ಎನ್.ಆರ್. ಹಾಲ್ ಸಭಾಭವನದಲ್ಲಿ ಆದಿತ್ಯವಾರ ʼಕೆಸ್ರಲೊಂದಿನ ಗಮ್ಮತ್ತ್ʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾಜಿ ಸಚಿವ ಕುಂದ ಅಧ್ಯಯನ ಪೀಠದ ಸದಸ್ಯ ಕೆ. ಜಯಪ್ರಕಾಶ ಶೆಟ್ಟಿ ಮಾತನಾಡಿ, ಕುಂದಾಪ್ರ ಕನ್ನಡ ಭಾಷೆಗೆ ಅದರದ್ದು ವೈಶಿಷ್ಟ್ಯತೆ ಇದೆ. ಹಾಗಯೇ ಪ್ರದೇಶವಾರು, ಸಮುದಾಯವಾರು ಭಿನ್ನತೆಯೂ ನಮ್ಮ ಭಾಷೆಯ ಬಗ್ಗೆ ತಮ್ಮ ಇದ್ದರಷ್ಟೇ ಸಾಲದು. ಅದು ಇನ್ನಷ್ಟು ವಿಸ್ತಾರಗೊಳ್ಳಬೇಕು ಎಂದರು. ಪ್ರತಿಷ್ಠಾನದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಿಯ ಭಕ್ತರ ಅನುಕೂಲಕ್ಕಾಗಿ ಕೈಗೊಂಡಿರುವ ಪ್ರಮುಖ ಕಾರ್ಯಗಳು ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿದರು. ನಿಲ್ದಾಣದ ಮೇಲ್ದರ್ಜೆ: ಈ ಹಿಂದೆ ಕೇವಲ ಹಾಲ್ಟ್ ಸ್ಟೇಷನ್ ಆಗಿದ್ದ ಬೈಂದೂರು ರೈಲ್ವೇ ನಿಲ್ದಾಣವನ್ನು ₹2.64 ಕೋಟಿ ವೆಚ್ಚದಲ್ಲಿ ನೂತನ ನಿಲ್ದಾಣ, ಗಣಕೀಕೃತ ಟಿಕೆಟ್ ಕಾದಿರಿಸುವಿಕೆ (PRS) ಮತ್ತು ಪ್ಲಾಟ್‌ಫಾರ್ಮ್ ವಿಸ್ತರಣೆಯೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ. 50ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ: ಒಂದೂ ಎಕ್ಸ್‌ಪ್ರೆಸ್ ರೈಲು ನಿಲ್ಲದ ನಿಲ್ದಾಣದಲ್ಲಿ ಇಂದು 50ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳು ನಿಲುಗಡೆಯಾಗುತ್ತಿದ್ದು, ನೂರಾರು ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಉದ್ಯೋಗಾವಕಾಶ ದೊರೆತಿದೆ. ಕೊಲ್ಲೂರು ಕ್ಷೇತ್ರದ ಅಧಿಕೃತ ರೈಲು ನಿಲ್ದಾಣ: ಕೊಲ್ಲೂರು ದೇವಸ್ಥಾನದಿಂದ ಕೇವಲ 27 ಕಿ.ಮೀ. ದೂರದಲ್ಲಿರುವ ಈ ನಿಲ್ದಾಣಕ್ಕೆ ರಾ.ಹೆ-766ಸಿ ಮೂಲಕ ನೇರ ರಸ್ತೆ ಸಂಪರ್ಕವಿದೆ. ಕರ್ನಾಟಕ, ಕೇರಳ, ತಮಿಳುನಾಡು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ (25) ಹತ್ಯೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ರಾತ್ರಿ ತಂದೆ-ತಾಯಿಯೊಂದಿಗೆ ಯಾವುದೋ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಸಿಟ್ಟಿಗೆದ್ದ ಶಾಹಿದ್ ಅಲಿ ಸುತ್ತಿಗೆಯಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ದಂಪತಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಶಾಹಿದ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹತ್ಯೆಗೆ ನಿಖರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆತಿಥ್ಯದಲ್ಲಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3182ರ ಝೋನ್ 1 ವತಿಯಿಂದ “Rotary Youth Leadership Award 2026-27 – YUVA JANA MANA” ಎಂಬ ವಿಶೇಷ ವಲಯಮಟ್ಟದ ರೈಲಾ ಕಾರ್ಯಕ್ರಮವು ಗಿಳಿಯಾರು ಕುಶಾಲ ಹೆಗ್ಡೆ ರೋಟರಿ ಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ARPIC ಝೋನ್ 7 PDG ಅಭಿನಂದನ್ ಎ. ಶೆಟ್ಟಿ ಅವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಯುವಜನರಲ್ಲಿ ನಾಯಕತ್ವ ಗುಣ, ಸಕಾರಾತ್ಮಕ ಚಿಂತನೆ, ಆತ್ಮವಿಶ್ವಾಸ ಹಾಗೂ ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ರೈಲಾದಂತಹ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ರ‍್ಯಾಲಿ RI ಡಿಸ್ಟ್ರಿಕ್ಟ್ 3182 ಚೇರ್ಮನ್ ಕೆ. ಎಸ್. ಜೈವಿಠಲ್, ಸಹಾಯಕ ಗವರ್ನರ್ ಝೋನ್ 1 ಶ್ರೀನಾಥ್ ಜೆ. ರಾವ್, ವಲಯ ತರಬೇತುದಾರ ಝೋನ್ 1 ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ವಲಯ ಲೆಫ್ಟಿನೆಂಟ್ ಸತ್ಯನಾರಾಯಣ ಪುರಾಣಿಕ್, ಪ್ರಶಾಂತ್ ಹವಾಲ್ದಾರ್ ಹಾಗೂ ಚಂದ್ರಕಲಾ ತಾಂಡೆಲ್ ಉಪಸ್ಥಿತರಿದ್ದರು. ಕಾರ್ಯಕ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘ ನಿ. ಇದರ ಸರ್ವ ಸದಸ್ಯರ ಐದನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಸಂಸ್ಥೆಗೆ ಸಹಕರಿಸಿದ ಮಹನೀಯರಿಗೆ ಅಭಿನಂದನಾ ಕಾರ್ಯಕ್ರಮವು ಇಲ್ಲಿನ ವೈಶಾಲಿ ಕಾಂಪ್ಲೆಕ್ಸ್ ಮಿನಿ ಹಾಲ್‌ನಲ್ಲಿ ಭಾನುವಾರ ನಡೆಯಿತು . ಈ ಸಂದರ್ಭದಲ್ಲಿ ಚಿಲ್ಡ್ರನ್ ಫ್ಯಾಶನ್ ಮಾಲೀಕರಾದ ಆನಂದ್ ರಾವ್ ಕೆ., ವೈಶಾಲಿ ಕಾಂಪ್ಲೆಕ್ಸ್ ಮಾಲೀಕರಾದ ಹಂಸರಾಜ ಶೆಟ್ಟಿ, ಶ್ರೀದೇವಿ ಮೆಡಿಕಲ್ಸ್ ನ ಗಣೇಶ್ ಬೆಟ್ಟಿನ್, ಕೊತ್ವಾಲ್ ಟ್ರೇಡರ್ ನ ಅರವಿಂದ ಕೊತ್ವಾಲ್, ಬಿಲ್ಲವ ಮಹಿಳಾ ಘಟಕದ ಮಾಜಿ ಅಧ್ಯಕ್ಷ ಸುಶೀಲಾ ಶಂಕರ್ ಪೂಜಾರಿ ಕೋಡಿ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷ ಯಕ್ಷಗಾನ ಪ್ರಸಂಗ ಕರ್ತೆ ಶಾಂತ ವಾಸುದೇವ ಪೂಜಾರಿ ಅವರನ್ನು ಸಂಸ್ಥೆಯ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ಕೆ. ರಮೇಶ್ ಪ್ರಭು, ರಾಘವೇಂದ್ರ ಲೋಕೇಶ್ ಪೂಜಾರಿ, ಗುರುರಾಜ್ ಕಾವೇರಿ, ಮಂಜುನಾಥ್ ನರಸಿಬೆಟ್ಟು ಕೋಡಿ, ಗಂಗಾಧರ್ ಪೂಜಾರಿ, ಸುರೇಶ್ ಪೂಜಾರಿ ಕಲಾಗಾರ, ಭಾರತಿ ಉಮೇಶ್ ಪೂಜಾರಿ, ಕಿರಣ್ ನೆರಂಬಳ್ಳಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ…
