Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕೆ ಮುಗಿಸಿ ವಾಪಾಸು ಬರುತ್ತಿದ್ದ ಸಂದರ್ಭ ಆಯತಪ್ಪಿ ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮರವಂತೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಮರವಂತೆ ಕುಪ್ಪನಮನೆ ನಿವಾಸಿ ಪರಮಜ್ಯೋತಿ (43) ಮೃತಪಟ್ಟ ಮೀನುಗಾರರು. ಮರವಂತೆಯ ಪ್ರದೀಪ್ ಖಾರ್ವಿ ಎಂಬುವರ ಧರ್ಮದೇವತೆ ದೋಣಿಯಲ್ಲಿ ಮೀನುಗಾರಿಕೆಗೆ ಹೋಗಿದ್ದ ಪರಮಜ್ಯೋತಿ ಅವರು ಮೀನುಗಾರಿಕೆ ಮುಗಿಸಿ ವಾಪಸ್ಸು ಮರವಂತೆ ಬಂದರಿಗೆ ಬರುವಾಗ ಅರಬಿ ಸಮುದ್ರದಲ್ಲಿ ಒಮ್ಮೆಲೇ ಜೋರಾಗಿ ಗಾಳಿ ಬೀಸಿದ ಕಾರಣ ದೋಣಿಯು ನೀರಿನಲ್ಲಿ ತೇಲಾಡಿದ ಪರಿಣಾಮ ಪರಮಜ್ಯೋತಿ ಆಯತಪ್ಪಿ ದೋಣಿಯಿಂದ ಸಮುದ್ರಕ್ಕೆ ಬಿದ್ದಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿದ್ದ ಕೆಲಸಗಾರರು ನೀರಿನಿಂದ ಮೇಲಕ್ಕೆ ಎತ್ತಿ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ವೈದ್ಯರು ಪರೀಕ್ಷಿಸಿ ಅದಾಗಲೇ ಪರಮಜ್ಯೋತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿಯಾಗಿ, ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾ.ಹೆ. 66ರ ತಾಲೂಕಿನ ಹೆಮ್ಮಾಡಿ ಸಮೀಪದ ಕನ್ನಡಕುದ್ರು ಕ್ರಾಸ್ ಬಳಿ ಸಂಭವಿಸಿದೆ. ಹೆಮ್ಮಾಡಿ ಸಂತೋಷನಗರ ನಿವಾಸಿ ನರಸಿಂಹ ಆಚಾರ್ (60) ಸಾವನ್ನಪ್ಪಿದವರು. ಅವರು ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಹಾಗೂ ಅಜಾಗರೂಕತೆಯಿಂದ ದೀಪಕ್ ಕುಮಾರ್ ಕಾರು ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿರುವುದಾಗಿದೆ. ಪರಿಣಾಮ ಬೈಕ್‌ ಸಹಿತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ನರಸಿಂಹ ಆಚಾರ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರೊಳಗೆ ಸಾವನ್ನಪ್ಪಿರುವುದಾಗಿದೆ. ಸಂಚಾರ ಠಾಣಾ ಪಿಎಸ್ ಐ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೀನು ಹಿಡಿಯಲೆಂದು ಹೋದ ಯುವಕ ಬಲೆ ಸಮೇತ ಕೆರೆಗೆ ಬಿದ್ದು, ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆನಗಳ್ಳಿ ಗ್ರಾಮದ ಆಗರಕಟ್ಟು ಎಂಬಲ್ಲಿನ ಕೆರೆಯಲ್ಲಿ ಗುರುವಾರ ಸಂಭವಿಸಿದೆ. ಆನಗಳ್ಳಿ ಗ್ರಾಮದ ಗಾಣಿಗರಬೆಟ್ಟು ನಿವಾಸಿ ಉದಯ (30) ಮೃತರು. ಅವರು ಬೆಳಗ್ಗೆ ಮನೆಯಿಂದ ಬಲೆ ತೆಗೆದುಕೊಂಡು ಮೀನು ಹಿಡಿಯಲು ಹೋಗಿದ್ದು, ಆಗರಕಟ್ಟೆಯ ಕೆರೆಗೆ ಮೀನು ಹಿಡಿಯಲು ಬಲೆ ಹಾಕಿದ ಸಮಯ ಆಕಸ್ಮಿಕವಾಗಿ ಬಲೆ ಸಮೇತ ಕೆರೆಗೆ ಬಿದ್ದಿರುವುದಾಗಿ, ಅವರ ಸಹೋದರ ಮನೋಜ್ ನೀಡಿದ ದೂರಿನಂತೆ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಜೂನ್‌ನಲ್ಲಿ ನಡೆದ ಕಂಪನಿ ಸೆಕ್ರೆಟರೀಸ್ (ಸಿ.ಎಸ್.) ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಂಪನಿ ಸೆಕ್ರೆಟರಿ ವೃತ್ತಿಪರ ಅರ್ಹತೆಯ ಅಂತಿಮ ಹಂತದ ಪರೀಕ್ಷೆಯಾದ ಸಿ.ಎಸ್. ಪ್ರೊಫೆಷನಲ್‌ನ ಗ್ರೂಪ್–1 ಮತ್ತು ಗ್ರೂಪ್–2 ಪರೀಕ್ಷೆಗಳಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಅನನ್ಯ ಕೆ.ಎ. (382 ಅಂಕ), ಪ್ರತೀಕ್ಷಾ (373) ಹಾಗೂ ನಾಗನಾಥ್ (353 ಅಂಕ) ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಇವರಲ್ಲಿ ಅನನ್ಯ ಹಾಗೂ ನಾಗನಾಥ್ ಮೊದಲ ಪ್ರಯತ್ನದಲ್ಲೆ ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಮೂವರು ಕಂಪನಿ ಸೆಕ್ರೆಟರಿ ವೃತ್ತಿಗೆ ಅಗತ್ಯವಾದ ವೃತ್ತಿಪರ ಅರ್ಹತೆಯನ್ನು ಗಳಿಸಿದ್ದಾರೆ. ಸಿ.ಎಸ್. ಪ್ರೊಫೆಷನಲ್‌ನ – ಗ್ರೂಪ್–1 ಪರೀಕ್ಷೆಯಲ್ಲಿ ಬಿ. ಸುಹಾಸ್ ರಾವ್ (248), ನಿಶಿತಾ ಸಿ. ಶೆಟ್ಟಿ (200) ಹಾಗೂ ತಸ್ಮಯ್ ಎಂ. ಬಪ್ಪಣವರ್ (200) ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಸಿ.ಎಸ್. ಎಕ್ಸಿಕ್ಯೂಟಿವ್‌ನಲ್ಲೂ ಸಾಧನೆ:ಕಂಪನಿ ಸೆಕ್ರೆಟರಿ ವೃತ್ತಿಪರ ಪಯಣದ ಎರಡನೇ ಹಂತವಾದ ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿಯೂ ಆಳ್ವಾಸ್ ವಿದ್ಯಾರ್ಥಿಗಳು ಉತ್ತಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ದಾಖಲಾದ ಪ್ರಮುಖ ಪ್ರಕರಣಗಳಿಗೆ (ಕೊಲೆ, ಅತ್ಯಾಚಾರ, ಪೋಕ್ಸೋ, ಕೊಲೆ ಪ್ರಯತ್ನ, ತೀವ್ರ ಗಾಯ ಹಾಗೂ 7 ವರ್ಷಗಳಿಗೂ ಮೇಲ್ಪಟ್ಟು ಶಿಕ್ಷೆ ಇರುವ ಪ್ರಕರಣಗಳು) ಸಂಬಂಧಿಸಿದಂತೆ ಪ.ಜಾತಿ/ ಪ.ಪಂಗಡಗಳ (ದೌರ್ಜನ್ಯ ತಡೆ) ನಿಯಮಗಳು – 1995 ರಲ್ಲಿನ ನಿಯಮ-4ರ ಅನ್ವಯ ಘನ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಲು ನುರಿತ ಹಾಗೂ ಅನುಭವಿ ನ್ಯಾಯವಾದಿಗಳನ್ನು ವಿಶೇಷ ಸಾರ್ವಜನಿಕ ಅಭಿಯೋಜಕರನ್ನಾಗಿ ನಿಯಮಾನುಸಾರ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿ ಹಾಗೂ ಇತರೆ ವಿವರಗಳನ್ನೊಳಗೊಂಡ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 7ರ ಒಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, 2ನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ ಉಡುಪಿ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ. 

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ. ಶಾಲೆಯ ಸ್ಕೌಟ್ಸ್ ತಂಡದ ಅಹಮದ್ ರುಹೈಲ್, ಆದಿಶೇಷ, ಶೋನ್ ರೋಡ್ರಿಗಸ್, ಆರ್ಯನ್ ಪೂಜಾರಿ, ಪ್ರಯಾಗ್ ಎಸ್., ಸಾದ್ವಿನ್ ಎಸ್., ಲಕ್ಷ್ಮೀಶ ಬಿ. ಹಾಗೂ ಉತ್ಕರ್ಷ್ ಅವರು ದೇಶಭಕ್ತಿಯ ಭಾವನೆಗಳನ್ನು ಮೂಡಿಸುವ ಗೀತೆಗಳನ್ನು ಅತ್ಯಂತ ಸುಂದರವಾಗಿ ಹಾಗೂ ಲಯಬದ್ಧವಾಗಿ ಪ್ರಸ್ತುತಪಡಿಸಿದರು. ಇವರ ಮನೋಜ್ಞ ಗಾಯನಕ್ಕೆ ತೀರ್ಪುಗಾರರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಥಮ ಸ್ಥಾನವನ್ನು ಘೋಷಿಸಿದರು. ತಾಲೂಕು ಮಟ್ಟದಲ್ಲಿ ದೊರೆತ ಈ ಯಶಸ್ಸಿನೊಂದಿಗೆ ವಿದ್ಯಾರ್ಥಿಗಳು ಇದೀಗ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆ ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ವಿದ್ಯಾರ್ಥಿಗಳ ಪ್ರತಿಭೆ, ಶಿಸ್ತು, ಪರಿಶ್ರಮ ಹಾಗೂ ತಂಡದ ಮನೋಭಾವವನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಎಲ್ಲಾ ಬೆಳೆಗಳಿಗೆ ಬೆಲೆ ಏರಿಕೆ ಆಗುತ್ತದೆ ಆದರೆ ಭತ್ತದ ಬೆಳೆ ಅಥವಾ ಈ ಕರಾವಳಿಯಲ್ಲಿ ಬೆಳೆಯುವ ಶೇಂಗಾ ಬೆಳೆಗೆ ಬೆಲೆ ಇಲ್ಲದಂತೆ ಖರೀದಿ ನಡೆಯುತ್ತದೆ. ರಾತ್ರಿ ಬೆಳಗಾಗುವುದರೊಳಗೆ ಬೆಲೆ ಪಾತಾಳಕ್ಕೆ ಕುಸಿಯಲ್ಪಡುತ್ತದೆ. ಈ ಬಗ್ಗೆ  ಆಕ್ರೋಶ ವ್ಯಕ್ತಪಡಿಸಿ ಕೋಟ ರೈತಧ್ವನಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಭತ್ತದ ಬೆಳೆಗೆ ಈಗಲೇ ಬೆಂಬಲ ಬೆಲೆ ನಿಗದಿಪಡಿಸಿ, ರೈತ ಕಷ್ಟಪಟ್ಟು ಬೆಳೆದ ಬೆಳೆಗೆ ನ್ಯಾಯ ನೀಡುವ ದರ ನಿಗದಿಪಡಿಸಿ ಎಂದು ಆಗ್ರಹಿಸಿದರು ಅವರು ಬುಧವಾರ ಗುಂಡ್ಮಿ ಪ್ರಗತಿಪರ ಕೃಷಿಕ ಶೇಖರ್ ಪೂಜಾರಿ ಇವರ ಮನೆಗಯಂಗಳದಿ ಕೋಟದ ಪಂಚವರ್ಣ ಯುವಕ ಮಂಡಲ ಪವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೈತಧ್ವನಿ ಸಂಘ ಕೋಟ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸಂಯೋಜನೆಯೊಂದಿಗೆ 56ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಹಿರಿಯ ಶಿಕ್ಷಕಿ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ವಿಲಾಸಿನಿ ಶೆಟ್ಟಿ ಉದ್ಘಾಟಿಸಿದರು. ಶಿಕ್ಷಕರು ಸಾಂಪ್ರದಾಯಿಕ ಉಡುಪಿನಲ್ಲಿ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಕಾರ್ಯಕ್ರಮದ ಅಂಗವಾಗಿ ಸುಂದರವಾದ ಹೂವಿನ ರಂಗೋಲಿ ರಚಿಸಲಾಯಿತು. ವಿದ್ಯಾರ್ಥಿಗಳಿಗೆ ಓಣಂ ಹಬ್ಬದ ಮಹತ್ವ ಹಾಗೂ ಕೇರಳದ ಸಂಸ್ಕೃತಿ ಮತ್ತು ಪರಂಪರೆಯ ಕುರಿತು ಮಾಹಿತಿ ನೀಡುವುದರ ಜೊತೆಗೆ ವಿವಿಧ ಸಂಸ್ಕೃತಿಗಳ ಬಗ್ಗೆ ಗೌರವ ಮತ್ತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಸಂದೀಪ್ ಪುತ್ರನ್, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಕರಾವಳಿ, ಪ್ರಕೃತಿ ಹಾಗೂ ಜಲ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಜಿಲ್ಲೆಯ ಇತರೆ ಪ್ರವಾಸಿ ತಾಣಗಳನ್ನೂ ಅಭಿವೃದ್ಧಿಪಡಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ರಾಮ್‌ ಪ್ರಸಾತ್‌ ಮನೋಹರ್‌, ಐಎಎಸ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್‌ ಅವರ ನಿರ್ದೇಶನದಂತೆ ಅಧಿಕಾರಿಗಳ ತಂಡದೊಂದಿಗೆ ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಪ್ರವಾಸಿಗರು ಜಿಲ್ಲೆಯಲ್ಲಿ ಹೆಚ್ಚಿನ ದಿನಗಳ ಕಾಲ ತಂಗುವಂತೆ ಹೊಸ ಪ್ರವಾಸಿ ಆಕರ್ಷಣೆಗಳು ಮತ್ತು ಪೂರಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವ ಲಕ್ಷಾಂತರ ಭಕ್ತರು ಹಾಗೂ ಪ್ರವಾಸಿಗರನ್ನು ಜಿಲ್ಲೆಯ ಕರಾವಳಿ ಮತ್ತು ನೈಸರ್ಗಿಕ ತಾಣಗಳತ್ತ ಸೆಳೆಯುವ ರೀತಿಯಲ್ಲಿ ಯೋಜನೆ ರೂಪಿಸುವಂತೆ ಸೂಚಿಸಿದರು. ತ್ರಾಸಿ–ಮರವಂತೆ ಅಭಿವೃದ್ಧಿಗೆ ವೇಗ:ತ್ರಾಸಿ–ಮರವಂತೆ ಬೀಚ್‌ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿಯ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರಿಗೋಸ್ಕರ ಯುವ ಮನಸ್ಸು ಮತ್ತು ಡಿಜಿಟಲ್ ಪ್ರಪಂಚ ಎಂಬ ವಿಶೇಷ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಎವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಪ್ತ ಸಮಾಲೋಚಕಿ  ವಿದ್ಯಾಶ್ರೀ ಅವರು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ, ಹದಿಹರೆಯವು ವಿದ್ಯಾರ್ಥಿಗಳ ಜೀವನದಲ್ಲಿ ಅತೀ ಸೂಕ್ಷ್ಮಹಾಗೂ ಪರಿವರ್ತನೆಯ ಕಾಲವಾಗಿದೆ. ಆಧುನಿಕ ಕಾಲಘಟ್ಟದಲ್ಲಿ, ಶಿಕ್ಷಣದತ್ತ, ಸಮಾಜದತ್ತ ಮುಖ ಮಾಡುವ ಹೆಣ್ಣು ಜಾಗ್ರತಾವಸ್ಥೆಯಲ್ಲಿ ಇಂದು ಹೆಜ್ಜೆ ಹಾಕಬೇಕಾಗಿದೆ. ಭೌತಿಕವಾಗಿ, ಮಾನಸಿಕವಾಗಿ ಬೆಳೆಯುವ ಈ ಹಂತದಲ್ಲಿ ಬಾಹ್ಯ ಆಕರ್ಷಣೆಗಳಿಗೆ ಒಳಗಾಗದೆ ವಿಚಾರ ವಿಮರ್ಶೆಗಳ ಮೂಲಕ ತನ್ನ ಸ್ಥಾನವನ್ನು ಕಾಯ್ದುಕೊಳ್ಳಬೇಕಾಗಿದೆ. ತಮ್ಮೆದುರಿಗಿರುವ ತಂತ್ರಜ್ಞಾನವನ್ನು ಸದ್ಭಳಕೆ ಮಾಡಿಕೊಂಡು ಶಿಕ್ಷಕರ ಮತ್ತು ಪೋಷಕರ ಮಾರ್ಗದರ್ಶನದೊಂದಿಗೆ ಉತ್ತಮ ಸಾಧನೆ ಮಾಡುತ್ತಾ ಸಮಾಜದಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕೆಂದರು. ವಿದ್ಯಾರ್ಥಿನಿಯರೊಂದಿಗೆ ಆಸ್ತ ಸಮಾಲೋಚನೆ ನಡೆಸಿ ಮಕ್ಕಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರೂಪಾ ಶೆಣೈ ಅವರು ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾಲೇಜು ಪ್ರಾಂಶುಪಾಲರಾದ ಸಂದೀಪ್ ನಾಯಕ್…

Read More