Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ,ಕುಂದಾಪುರ: ವಿಶ್ವ ಛಾಯಾಗ್ರಹಣ ಸಪ್ತಾಹದ ಅಂಗವಾಗಿ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (IMJISC) ಛಾಯಾಗ್ರಹಣ ಮತ್ತು ಡಿಜಿಟಲ್ ಕ್ಲಬ್ ವತಿಯಿಂದ ಡಿಜಿಟಲ್ ಮೀಡಿಯಾ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರವನ್ನು Eaeor Tech ಸಂಸ್ಥಾಪಕರಾದ ಅನೀಶ್ ಪುತ್ರನ್ ನಡೆಸಿಕೊಟ್ಟರು. ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಕಲಿಕೆಯನ್ನು ಒಳಗೊಂಡ ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಫೋಟೋಶಾಪ್, ಫೋಟೋ ಎಡಿಟಿಂಗ್ ಮತ್ತು ಡಿಜಿಟಲ್ ಕಂಟೆಂಟ್ ಕ್ರಿಯೇಷನ್‌ನ ಮೂಲ ಕೌಶಲ್ಯಗಳನ್ನು ಪರಿಚಯಿಸಲಾಯಿತು. ಇಂದಿನ ಸೃಜನಶೀಲ ಮತ್ತು ವೃತ್ತಿಪರ ಕ್ಷೇತ್ರಗಳಲ್ಲಿ ಡಿಜಿಟಲ್ ಮೀಡಿಯಾ ಕೌಶಲ್ಯಗಳ ಬೆಳೆಯುತ್ತಿರುವ ಮಹತ್ವವನ್ನು ಅವರು ಒತ್ತಿ ಹೇಳಿದರು. ಕಾರ್ಯಕ್ರಮವನ್ನು ಸಿಬ್ಬಂದಿ ಸಂಯೋಜಕರಾದ ಜಿತೇಶ್ ಕುಮಾರ್ ಎ.ಎಚ್. ಹಾಗೂ ವಿದ್ಯಾರ್ಥಿ ಸಂಯೋಜಕರಾದ ತೃತೀಯ ಬಿಸಿಎ ವಿದ್ಯಾರ್ಥಿ ರಾಹಿಲ್ ಮತ್ತು ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸಾನಿಯಾ ಆಯೋಜಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (ಐಎಂಜೆಐಎಸ್‍ಸಿ) ಮೂಡ್ಲಕಟ್ಟೆ ಸಂಸ್ಥೆಯಲ್ಲಿ ಅಂಗದಾನ ದಿನಾಚರಣೆಯನ್ನು ಆಚರಿಸಲಾಯಿತು. ಯೂತ್ ರೆಡ್ ಕ್ರಾಸ್ ಮತ್ತು ಸಮುದಾಯ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಡಿಜಿಟಲ್ ಪೋಸ್ಟರ್ ರಚನಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಒಟ್ಟು 30 ವಿದ್ಯಾರ್ಥಿಗಳು ಭಾಗವಹಿಸಿ, ಅಂಗದಾನದ ಮಹತ್ವ ಮತ್ತು ಜೀವ ಉಳಿಸುವಲ್ಲಿ ಅದರ ಪಾತ್ರವನ್ನು ಸಾರುವ ಸೃಜನಶೀಲ ಡಿಜಿಟಲ್ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ಕಲೆ ಮತ್ತು ಸೃಜನಶೀಲತೆಯ ಮೂಲಕ ಈ ಮಹತ್ಕಾರ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಪ್ರದರ್ಶನವು ವಿದ್ಯಾರ್ಥಿಗಳಿಗೆ ವೇದಿಕೆಯಾಯಿತು. ಕಾರ್ಯಕ್ರಮಕ್ಕೆ ಯೂತ್ ರೆಡ್ ಕ್ರಾಸ್ ಸಂಘದ ಉಪನ್ಯಾಸಕ ಸಂಯೋಜಕರಾದ ಭಾರತಿ ಮತ್ತು ರಕ್ಷಿತಾ ಹಾಗೂ ಸಮುದಾಯ ಸೇವಾ ಸಂಘದ ಉಪನ್ಯಾಸಕ ಸಂಯೋಜಕರಾದ ಚೈತನ್ಯ ಮತ್ತು ಶ್ವೇತಾ ಅವರು ಮಾರ್ಗದರ್ಶನ ನೀಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದವರಿAದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ, ವಿದೇಶಿ ವಿದ್ಯಾಭ್ಯಾಸ ಸಾಲ, ಸ್ವಾವಲಂಬಿ ಸಾರಥಿ, ವ್ಯಾಪಾರ ಉದ್ದಿಮೆಗಳಿಗೆ ನೇರಸಾಲ, ಸಾಂತ್ವನ ಯೋಜನೆ, ಸಿಖ್ಖ್ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಹಾಗೂ ಗಂಗಾ ಕಲ್ಯಾಣ  ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 55 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), “ಮೌಲಾನಾ ಆಝಾದ್ ಭವನ” ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಜಿಲ್ಲೆ, ಸಹಾಯವಾಣಿ ಸಂಖ್ಯೆ 8277799990 ಮತ್ತು ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0820-2574990 ಅಥವಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯಕುಮಾರ್ ಶೆಟ್ಟಿ, ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಸಂಸ್ಥೆಯ ಉಪಾಧ್ಯಕ್ಷರಾದ ಸುಜಾತ ಕಾಂತು ಬಾಬು ಕಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸ್ಥಾಪಕ ಸದಸ್ಯ ಗೋಪಾಲ ಚಂದನ್ ಮತ್ತು ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ ಸ್ವಾಗತಿಸಿದರು.  ಈ ಸಂದರ್ಭದಲ್ಲಿ ಖ್ಯಾತ ಪ್ರಾಚೀನ ವಸ್ತು ಸಂಗ್ರಹಕಾರ ಜಿ. ಭಾಸ್ಕರ್‌ಕಲೈಕಾರ್, ಗಣೇಶ್ ಮಡಿವಾಳ್ ಮೊದಲಾದವರು ಮತ್ತು ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ರೇವತಿ ಡಿ., ಸಹಾಯಕ ಪ್ರಾಧ್ಯಾಪಕಿ ಸರೋಜ ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ BLA-2 ಕಾರ್ಯಕರ್ತರಿಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭವು ಕೋಟೇಶ್ವರ ಶಾರದಾ ಕಲ್ಯಾಣ ಮಂಟಪದಲ್ಲಿ ಜರುಗಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, “ಪ್ರಜಾಪ್ರಭುತ್ವದ ಆಧಾರವೇ ಮತದಾರರ ಪಟ್ಟಿ. ಒಬ್ಬ ಅರ್ಹ ಮತದಾರನೂ ಹೊರಗುಳಿಯಬಾರದು. BLA-2 ಕಾರ್ಯಕರ್ತರು ಕೊನೆಯ ಹಂತ ಬಾಕಿ ಇರುವುದರಿಂದ ಮನೆ ಮನೆಗೆ ಭೇಟಿ ನೀಡಿ ಖಚಿತ ಮಾಹಿತಿ ಸಂಗ್ರಹಿಸಬೇಕು” ಎಂದರು. ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ BLA -2 ಹಾಗೂ ಘಟನಾಯಕ್ ರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಮಗ್ರ ಮತಪಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಹಾಗೂ ಬಾರಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿ-2026 ಗುರುವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾವಳಿಯನ್ನು ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಶಾಂತಾರಾಮ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, “ಶಿಕ್ಷಣದಷ್ಟೇ ಮಹತ್ವವನ್ನು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೀಡಬೇಕು. ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವವನ್ನು ಬೆಳೆಸಲು ಕ್ರೀಡೆ ಅತ್ಯಗತ್ಯ” ಎಂದರು. ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ “ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ, ಆಗಸ್ಟ್ 28: ರಕ್ಷಾ ಬಂಧನದ ಪ್ರಯುಕ್ತ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾ ವತಿಯಿಂದ ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರಿಗೆ ರಾಖಿ ಕಟ್ಟಿ ಶುಭ ಕೋರಲಾಯಿತು. ಮಹಿಳಾ ಮೋರ್ಚಾ ಪದಾಧಿಕಾರಿಗಳು ಶಾಸಕರ ಕಚೇರಿಯಲ್ಲಿ ಶಾಸಕರಿಗೆ ರಾಖಿ ಕಟ್ಟಿ, ಅವರ ದೀರ್ಘಾಯುಷ್ಯ ಮತ್ತು ಜನಸೇವೆಗೆ ಶಕ್ತಿ ನೀಡಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು “ರಕ್ಷಾ ಬಂಧನವು ಸಹೋದರ-ಸಹೋದರಿಯರ ಪವಿತ್ರ ಬಂಧದ ಸಂಕೇತ. ಸಹೋದರಿಯರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿ ಮಹಿಳಾ ಮೋರ್ಚಾ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸೌರಭಿ ಪೈ,, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಸಾಲಿಯನ್,, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ನೇತ್ರಾವತಿ ಮಡಿವಾಳ,, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಲತಾ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಪ್ರಮುಖರು, ಮಂಡಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ನೊಬ್ಬರ ಸೇವೆಯಲ್ಲಿ ನಾವು ಸುಖವನ್ನು ಕಾಣಬೇಕು. ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಂಡು ಮುಂದೆ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಅದಕ್ಕಾಗಿ ಇಂಟರ್ಯಾಕ್ಟ್ ಕ್ಲಬ್ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ನುಡಿದರು. ಅವರು ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಸಹಕಾರವನ್ನು ಸ್ಮರಿಸಿದರು. ಕಳೆದ ಸಾಲಿನಲ್ಲಿ ಎಸ್ಎಸ್ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಗೀತಾ ಮತ್ತು ಅನುದೀಪ ಇವರನ್ನು ನಗದು ಬಹಮಾನ ನೀಡಿ ಪುರಸ್ಕರಿಸಿದರು. ವಿಜಯ ಕರ್ನಾಟಕ ದಿನ ಪತ್ರಿಕೆಯವರು ಪ್ರಕಟಿಸುವ ಶೈಕ್ಷಣಿಕ ವಿದ್ಯಾರ್ಥಿ ಸಂಚಿಕೆಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಅಂಪಾರು, ಇಂಟರ್ಯಾಕ್ಟ್ ಚೇರ್ ಮನ್ ನಿರಂಜನ ಶೆಟ್ಟಿ, ನಿಕಟ ಪೂರ್ವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕನ್ನಡ ವಿಭಾಗ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ವಿಶ್ವ ಕುಂದಾಪುರ ದಿನಾಚರಣೆಯ ಪ್ರಯುಕ್ತ ಚೆನ್ನಿಮಣಿ- 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜರುಗಿತು.  ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಸಂಚಾಲಕರಾದ ಅನುಪಮಾ ಎಸ್. ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಭಾಷೆ ಸಂಸ್ಕೃತಿ ಮತ್ತು ಸಂಪ್ರದಾಯದ ಪ್ರತಿಬಿಂಬವಾಗಿದ್ದು, ಭಾಷೆಯು ಬೆಳೆಯಬೇಕಾದರೆ ಜನರಲ್ಲಿ ಒಗ್ಗಟ್ಟು ಮುಖ್ಯ ಮತ್ತು ಅದನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ಯಬೇಕಾದರೆ ನಾವೆಲ್ಲ ಆ ಭಾಷಯನ್ನು ಬಳಸಿದಾಗ ಮಾತ್ರ ಸಾಧ್ಯ ಹಾಗಾಗಿ ಕುಂದಾಪುರ ಭಾಷೆ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆ ವೆಶಿಷ್ಟ್ಯವನ್ನು ಹೊಂದಿದ್ದರಿಂದ ಇಂದು ನಾವು ವಿಶ್ವ ಕುಂದಾಪುರ ದಿನಾಚಣೆಯನ್ನು ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ಆದ್ದರಿಂದ ವಿದ್ಯಾರ್ಥಿಗಳು ಕುಂದಾಪುರ ಭಾಷೆಯನ್ನು ಉಳಿಸುವುದರೊಂದಿಗೆ ಮೂಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಥರ್ ತೆರೆಸಾ ಪದವಿ ಪೂರ್ವ ಕಾಲೇಜಿನ…

Read More