Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಉಡುಪಿ ವಲಯ ಇವರ ಸಹಯೋಗದಲ್ಲಿ ಇತ್ತೀಚೆಗೆ ಹಿರಿಯಡ್ಕದಲ್ಲಿ ನಡೆದ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಗಾರ 2025 ರಲ್ಲಿ ಗಂಗೊಳ್ಳಿಯ ಸಾಕ್ಸೋಫೋನ್ ಮತ್ತು ಚಿತ್ರಕಲಾ ಬಾಲ ಪ್ರತಿಭೆ ಸಂಜಿತ್ ಎಮ್. ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಮ್ಮು-ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಪ್ರಸಾದ್, ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮಂಜುನಾಥ ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಲೋಕೇಶ್ ಸಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ ಕೃಷಿ ಅರ್ಥಶಾಸ್ತ್ರಜ್ಞರಾದ ಎನ್. ಎಸ್. ಶೆಟ್ಟಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಯೋಗ ನರಸಿಂಹ ಸ್ವಾಮಿ ಕೆ. ಎಂ., ಶಾಲಾ ಶಿಕ್ಷಣ ಇಲಾಖೆಯ ನಾಗರಾಜ್, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಬಿಎಲ್ ವಿಶ್ವಾಸ ಭಟ್, ಉಪ ಪ್ರಾಂಶುಪಾಲ ಪ್ರಕಾಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂ, ಎಂ.ಲಿಬ್ ಐ.ಎಸ್.ಸ್ಸಿ ಮತ್ತು ಎಲ್ಲಾ ಎಂಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿಗಳು ನಡೆಯುತ್ತಿದ್ದು, ಆಸಕ್ತರು ಪ್ರಾದೇಶಿಕ ಕೆಂದ್ರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ, ಭೌದ್ದ, ಸಿಖ್ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಿತಿ ಇರುವವರು ಅಗತ್ಯ ದಾಖಾಲಾತಿ ಒದಗಿಸಿದಲ್ಲಿ ಉಚಿತ ಪ್ರವೇಶಾತಿಗೆ ಅವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ಅನ್ನು ವೀಕ್ಷಿಸಬಹುದಾಗಿದೆ ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಚಿತ್ರಸಿರಿ” ಚಿತ್ರಕಲಾ ಸ್ಪರ್ಧೆ ಮತ್ತು ಸಾಸ್ತಾನ ಮಠದ ತೋಟದ ಕುಟುಂಬಿಕರಿಂದ ನಡೆದ 233ನೇ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಸ್ಕೂಲ್ ಲೀಡರ್ ಚಲನಚಿತ್ರ ಕಲಾವಿದರನ್ನು ಆದಿತ್ಯವಾರದಂದು ಗೌರವಿಸಲಾಯಿತು. “ಚಿತ್ರಸಿರಿ” ಸ್ಪರ್ಧೆಯಲ್ಲಿ ಐದನೇ ತರಗತಿಯೊಳಗಿನ ನಿನಾದ್, ಆಶ್ಲೇಶ್, ದಿಕ್ಷೀತ್ 6 ರಿಂದ 10 ನೇ ತರಗತಿಯೊಳಗಿನ ಸಿಂಚನಾ, ನಮ್ರತಾ, ವಿಮರ್ಶ್ ಪಿಯುಸಿಯಿಂದ ಪದವಿವರೆಗಿನ ಸ್ಪರ್ಧೆಯಲ್ಲಿ ಪ್ರಜ್ಞಾ, ಮೇಘನಾ, ಪ್ರಜ್ವಲ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ನಿರ್ಣಾಯಕರಾಗಿ ಡಾ. ಜಯರಾಮ್ ಶೆಟ್ಟಿಗಾರ್, ಶಂಕರನಾರಾಯಣ ಶೆಟ್ಟಿಗಾರ್ ಕಾರ್ಕಡ, ವಿಠಲ ಶೆಟ್ಟಿಗಾರ್ ಸಗ್ರಿ ಭಾಗವಹಿಸಿದ್ದರು. ನೀಲಾವರ ಕುಟುಂಬಿಕರು ಬಹುಮಾನದ ಪ್ರಾಯೋಜಕರಾಗಿದ್ದರು. ಇದೇ ಸಂದರ್ಭದಲ್ಲಿ ಸ್ಕೂಲ್ ಲೀಡರ್ ಚಲನಚಿತ್ರದ ನಟರಾದ ಅಶ್ವಿನಿ, ಶ್ರೀಜಯ್, ರಿತ್ವಿಕ್ ಮತ್ತು ಶಿಲ್ಪ ಕಲಾ ಸಾಧಕ ಯೊಗೀಂದ್ರ ಶ್ರೀವತ್ಸ ಅವರನ್ನು ಸನ್ಮಾನಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಹೆಚ್.ಎ. ಗೋಪಾಲ್ ಅವರು ಸಾಧಕರಿಗೆ ತನ್ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬ್ಯಾಗಗಳ ಬಳಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಅದರಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳನ್ನು ಜನರಿಗೆ ತಿಳಿಸಿ ಆದಷ್ಟು ಬಟ್ಟೆ ಬ್ಯಾಗ್ ಗಳನ್ನು ಉಪಯೋಗಿಸಿ ಪರಿಸರದ ಮೇಲಾಗುವ ಹಾನಿಯನ್ನು ಕಡಿಮೆ ಮಾಡಿ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಎಲ್ಲರೂ ಕೈಜೋಡಿಸಬೇಕೆನ್ನುವ ಉದ್ದೇಶದಿಂದ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಉಚಿತವಾಗಿ ಬಟ್ಟೆಯಿಂದ ತಯಾರಿಸಿದಬ್ಯಾಗ್ ಗಳನ್ನು ವಿತರಿಸಿ ಜನ ಜಾಗೃತಿಯನ್ನು ಮೂಡಿಸಿದರು. ಈ ಕಾರ್ಯಕ್ರಮದ ಉಸ್ತುವಾರಿಯನ್ನು ನಾಗವೇಣಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂ.ಬಿ.ಎ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಫಲಿತಾಂಶದಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಪೂರ್ಣ ಭಟ್ ಕೆ.ಎಲ್ (264), ಸೃಜನ್ ಎಸ್. ಭಟ್ (249), ಅಫ್ಸರ್ ಫಾಹಿಮ್ (238), ಬಸವ ಪ್ರಸಾದ್ ಕಾಜಿ (238), ಪ್ರಭವ್ ಗೋಪಾಲ್ ಶೆಟ್ಟಿ (233), ಸೌರವ್ ರವಿ ಶೇಟ್ (225), ಆರ್ಯ ಬಿ.ವಿ. (212), ಹೆಗ್ಡೆ ಪ್ರತ್ವಿಕ್ (212), ಶ್ರದ್ಧಾ ಪ್ರಕಾಶ್ ಅಂಗಡಿ (210), ರೇಷ್ಮ ಜಿ.ಕೆ. (204), ಶ್ರೀಕಾರ್ ದುಬೀರ (202) ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ಪರೀಕ್ಷೆ ಬರೆದಿರುವ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ ಅರ್ಹತೆಯನ್ನು ಗಳಿಸಿರುತ್ತಾರೆ. ರಾಷ್ಟ್ರೀಯ ಮಟ್ಟದ ಒಟ್ಟು ಫಲಿತಾಂಶದಲ್ಲಿ 15% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ ಕ್ರಿಯೇಟಿವ್ ವಿದ್ಯಾ ಸಂಸ್ಥೆಯಲ್ಲಿ ಪರೀಕ್ಷೆ ತೆಗೆದುಕೊಂಡ ಒಟ್ಟು ವಿದ್ಯಾರ್ಥಿಗಳಲ್ಲಿ 55% ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದು ಗಮನಾರ್ಹವಾಗಿದೆ. ವಿದ್ಯಾರ್ಥಿಗಳ ಸಾಧನೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ವಕೀಲ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬAಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರ ರೂಪಿಸುವ ಎಲ್ಲಾ ಕಾರ್ಯಕ್ರಮಗಳು ಜನಸಾಮಾನ್ಯರ ಬಾಳಿಗೆ ಬೆಳಕ ಚಲ್ಲುವ ಯೋಜನೆಗಳಾಗಿ ರೂಪುಗೊಂಡಿವೆ. ಇದಕ್ಕೆ ಪುಷ್ಠಿ ನೀಡುವಂತೆ ನಮ್ಮ ಕ್ಲಿನಿಕ್ ಜನರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಕಾರ್ಯಕ್ರಮಗಳಾಗಿದೆ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಆಶ್ರಯದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆಯಲ್ಲಿ ನಿರ್ಮಾಣಗೊಂಡ ನಮ್ಮ ಕ್ಲಿನಿಕ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸ್ಥಳೀಯ ವ್ಯಾಪ್ತಿಗಳಿಗೆ ಬೇಕಾದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಜನಸಾಮಾನ್ಯರ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾಲಿಗ್ರಾಮದ ಪಾರಂಪಳ್ಳಿ ಪರಿಸರಕ್ಕೆ ಈ ಯೋಜನೆ ಸಮರ್ಪವಾಗಿ ಅನುಷ್ಠಾನಗೊಳ್ಳಲಿ ಎಂದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ದೀಪ ಬೆಳಗಿಸಿ ಶುಭಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಜಿಲ್ಲಾಆರೋಗ್ಯ ಅಧಿಕಾರಿ ಡಾ. ಬಸವರಾಜ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಹೋಟೆಲ್ ಕಾರ್ಮಿಕ ಸಂಘ ಬೆಂಗಳೂರು ಹೋಟೆಲ್ ಕಾರ್ಮಿಕರ ರಾಜ್ಯ ಸಂಘಟನೆ ಪ್ರತಿಭಾ ಪುರಸ್ಕಾರ ಹಾಗೂ ಸರ್ಕಾರದ ಅಂಬೇಡ್ಕರ್ ಸಹಾಯ ಯೋಜನೆಯ ನೋಂದಣಿ ಮತ್ತು ವಿತರಣಾ ಕಾರ್ಯಕ್ರಮ ಜುಲೈ 17ರಂದು ಕೊಲ್ಯಮಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಶಿವಯೋಗಿ ದುರ್ಗಾ ನಂದ ಸ್ವಾಮೀಜಿ ಅವರು ಶಿವಗಿರಿ ಮಠ ಕೊಂಡಣ ಅಮೃತ ಹಸ್ತದಿಂದ ಬಿಡುಗಡೆ ಮಾಡಿ ಕಾರ್ಯಕ್ರಮವನ್ನು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಈ ವೇಳೆ ಚಂದ್ರಶೇಖರ್ ಉಚ್ಚಿಲ ಆಡಳಿತ ಮುಖ್ಯಸ್ಥರು ಗೆಜ್ಜೆ ಗಿರಿ ತಾರಾನಾಥ ಆಳ್ವ, ಸಾಮಾಜಿಕ ಕಾರ್ಯಕರ್ತರು ಮೋಹನ್ ಟಿ. ಹೆಚ್., ಕರ್ನಾಟಕ ಹೋಟೆಲ್ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಜಯನಂದ್ ಭಂಡಾರಿ, ಚೆನ್ನಯ್ಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಂಗಾಧರ್ ಶೆಟ್ಟಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮತ್ತು ಶೈಲೇಶ್ ಜಿಲ್ಲಾ ನಿರ್ದೇಶಕರು ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹೋಟೆಲ್ ಕಾರ್ಮಿಕರು ಭಾಗವಹಿಸಿ ಇದರ ಸದುಪಯೋಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆ‌ಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಸಭೆ ಇತ್ತೀಚಿಗೆ ಜರುಗಿತು. ಈ‌ ಸಂದರ್ಭದಲ್ಲಿ ಶಾಲಾ ಆಡಳಿತ ಚುಕ್ಕಾಣಿ ಹಿಡಿದ ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅವಿರತ ಶ್ರಮಕ್ಕೆ ನೈತಿಕ ಹಾಗೂ ಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹಿಸಿದ, ಶಾಲಾ ವಾಹನವನ್ನು ಪಡೆಯಲು ಸಹಕರಿಸಿದ ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವ ಸಮರ್ಪಣೆ‌ ಸ್ವೀಕರಿಸಿ ಮಾತನಾಡಿ, ತಮ್ಮ ಊರಿನ ಸಮೀಪದ ಶಾಲೆಗೆ ನೆರವು ನೀಡಿರುವುದು ತಮಗೆ ಸಂತೋಷದ ವಿಷಯ ಎಂದು ತಿಳಿಸಿ, ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯವನ್ನು ಶ್ಲಾಘಿಸಿದರು ಮತ್ತು ಪೋಷಕರು, ಗ್ರಾಮಸ್ಥರು ಶಾಲಾ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಕರೆ ನೀಡಿದರು.‌ ಸಂಜಯಗಾಂಧಿ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಶಾಸ್ತ್ರೀ ಅವರು ಈ ಗೌರವ ಸಮರ್ಪಣೆ ಕಾರ್ಯಕ್ರಮ ನೆರವೇರಿಸಿ, ಶಾಲೆಗೆ ನೆರವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ 36ನೇ ರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸುಧಾಕರ್ ತಗ್ಗರ್ಸೆ ಮೊಗವೀರ ಹಾಗೂ ಕಾರ್ಯದರ್ಶಿಯಾಗಿ ಸುಧೀರ್ ಶೆಟ್ಟಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ.

Read More