Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾವು ಎಲ್ಲೇ ಹೋದರೂ ನಮ್ಮ ಮಾತೃಭಾಷೆಯ ಸೊಗಡನ್ನು ಬಿಡಬಾರದು. ನಮ್ಮ ಹಿರಿಯರು ಉಳಿಸಿಕೊಂಡು ಬಂದ ಅಸ್ಮಿತೆಯನ್ನು ಮಕ್ಕಳಾದ ನೀವು ಮುಂದುವರೆಸಿಕೊಂಡು ಹೋಗಬೇಕು ಎಂದು ಪೂರ್ಣ ಪ್ರಜ್ಞಾ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್ ಸಿದ್ದಾಪುರ ಅಭಿಪ್ರಾಯಪಟ್ಟರು. ಅವರು ಸೋಮವಾರ ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಕನ್ನಡ ವಿಭಾಗವು ಆಯೋಜಿಸಿದ್ದ” ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ”ಯ ಅಂಗವಾಗಿ ಹಮ್ಮಿಕೊಂಡ “ಕುಂದಗನ್ನಡದ ವೈಶಿಷ್ಟ್ಯತೆ” ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ನಾವು ಬಳಸುವ ಎಷ್ಟೋ ಪದಗಳ ಅರ್ಥವನ್ನು ನಾವೇ ಅರಿತಿರುವುದಿಲ್ಲ. ಈ ಪದಗಳು ಇಂದು ನಿನ್ನೆಯದಲ್ಲ ಪಂಪಭಾರತ, ಗದಾಯುದ್ಧ, ಕುಮಾರವ್ಯಾಸ ಭಾರತಗಳಂತಹ ಮೇರು ಕೃತಿಗಳಲ್ಲಿ ಇವುಗಳ ಉಲ್ಲೇಖ ದೊರೆಯುತ್ತದೆ. ವಿದ್ಯಾರ್ಥಿಗಳು ಗುಂಡ್ಮಿ ಚಂದ್ರಶೇಖರ ಐತಾಳ್, ರಾಜಗೋಪಾಲ ಆಚಾರ್ಯರು ಕುಂದಗನ್ನಡದ ಬಗ್ಗೆ ಬರೆದ ಪುಸ್ತಕಗಳನ್ನು ಓದುವ ಅವಶ್ಯಕತೆ ಇದೆ. ಇದರೊಂದಿಗೆ ಮಕ್ಕಳು ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು. ಭಂಡಾರ್ಕಾರ್ಸ್ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೃಷಿ ಚಟುವಟಿಕೆ ನಡೆಸುವಾಗ ವಿಷಕಾರಿ ಹಾವು ಕಚ್ಚಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಯಡ್ತರೆಯಲ್ಲಿ ಸಂಭವಿಸಿದೆ. ಯಡ್ತರೆ ಗ್ರಾಮದ ತೂದಳ್ಳಿ ನಿವಾಸಿ ವಿಜಯ ಆಚಾರಿ (70) ಮೃತಪಟ್ಟ ವ್ಯಕ್ತಿ. ಆ.29 ರಂದು ಸಂಜೆ ತೂದಳ್ಳಿ ಎಂಬಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವಾಗ ಯಾವುದೋ ಒಂದು ವಿಷಕಾರಿ ಹಾವು ಬಲ ಕಾಲಿಗೆ ಕಚ್ಚಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಬೈಂದೂರು ಸರಕಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಳಿಕ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆ.31ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಹಾವೇರಿಯ ಹಟ್ಟಿಮತ್ತೂರು ಗ್ರಾಮದ ರೈತನ ಮಗಳೊಬ್ಬಳ ಪ್ರತಿಭೆ ಇದೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಮಾಹಿತಿ ವಿಜ್ಞಾನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೃಷ್ಟಿ ಮಂಜುನಾಥ ಉಳ್ಳಾಗಡ್ಡಿ, ಜಾಗತಿಕ ಪಾವತಿ ತಂತ್ರಜ್ಞಾನ ಸಂಸ್ಥೆ ವೀಸಾದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಆಯ್ಕೆಯಾಗಿದ್ದು, ವೇತನ ಹಾಗೂ ಇನ್ನಿತರ ಸೌಲಭ್ಯಗಳನ್ನು ಒಳಗೊಂಡಂತೆ ₹46.33 ಲಕ್ಷದ ವಾರ್ಷಿಕ ವೇತನವನ್ನು ಪಡೆದುಕೊಂಡಿದ್ದಾರೆ. ಆರನೇ ಸೆಮಿಸ್ಟರ್‌ನ ಸಂದರ್ಶನದಿಂದ ವೀಸಾ ಉದ್ಯೋಗ:ಸೃಷ್ಟಿಯ ವೃತ್ತಿಜೀವನಕ್ಕೆ ವೀಸಾದಲ್ಲಿನ ಇಂಟರ್ನ್ಶಿಪ್ ಮಹತ್ವದ ತಿರುವು ನೀಡಿತು. ಆಳ್ವಾಸ್‌ನಲ್ಲಿ ವಿದ್ಯಾರ್ಥಿಗಳ ವೃತ್ತಿಪರ ಕೌಶಲ್ಯ ವೃದ್ಧಿಗೆ ಗುಣಮಟ್ಟದ ಇಂಟರ್ನ್ಶಿಪ್‌ಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಅದರ ಭಾಗವಾಗಿ ಆರನೇ ಸೆಮಿಸ್ಟರ್‌ನಲ್ಲಿ ವೀಸಾದಲ್ಲಿ ಇಂಟರ್ನ್ಶಿಪ್ ಮಾಡಲು ಅವಕಾಶ ಪಡೆದರು. 10 ವಾರಗಳ ಇಂಟರ್ನ್ಶಿಪ್ ಅವಧಿಯಲ್ಲಿ ₹90,000 ಸ್ಟೈಪೆಂಡ್‌ನೊಂದಿಗೆ ಕಾರ್ಯನಿರ್ವಹಿಸಿದ ಅವರು, ಸಂಸ್ಥೆಯ ವಾತಾವರಣದಲ್ಲಿ ತಮ್ಮ ತಾಂತ್ರಿಕ ಜ್ಞಾನ ಹಾಗೂ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದರು. ಅವರ ಇಂಟರ್ನ್ಶಿಪ್ ಸಾಧನೆಯಿಂದ ಮೆಚ್ಚಿದ ವೀಸಾ ಸಂಸ್ಥೆ, ಬಳಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಶ್ವಿ ಸ್ಕೂಲ್‌ನ ವಿದ್ಯಾರ್ಥಿನಿ ಆರಾಧ್ಯ ಎಸ್. ಶೆಟ್ಟಿ ಅವರು ಮತ್ತೊಮ್ಮೆ ಅತ್ಯುತ್ತಮ ಸಾಧನೆ ಮಾಡಿದ್ದು, ಕರ್ನಾಟಕ ರಾಜ್ಯ ಅಂಡರ್-15 FIDE ರೇಟೆಡ್ ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಇದರೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶವನ್ನು ಮೂರನೇ ಬಾರಿ ಪಡೆದುಕೊಂಡಿದ್ದಾರೆ. 2025 – ಕರ್ನಾಟಕ ರಾಜ್ಯ ಶಾಲಾ ಅಂಡರ್-17 ಚೆಸ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತೆ ಹಾಗೂ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ. 2025 – ಅಸ್ಸಾಂ ರಾಷ್ಟ್ರೀಯ ಶಾಲಾ ಚೆಸ್ ಚಾಂಪಿಯನ್‌ಶಿಪ್ ಅತ್ಯುತ್ತಮ ಪ್ರದರ್ಶನದೊಂದಿಗೆ ಬೆಳ್ಳಿ ಪದಕ. 2026 – ಕರ್ನಾಟಕ ರಾಜ್ಯ ಅಂಡರ್-17 ಚೆಸ್ ಚಾಂಪಿಯನ್‌ಶಿಪ್, ಶಿವಮೊಗ್ಗ ಬೆಳ್ಳಿ ಪದಕ ವಿಜೇತೆ ಹಾಗೂ ಮತ್ತೊಮ್ಮೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ಅರ್ಹತೆ. 2026 – ಕರ್ನಾಟಕ ರಾಜ್ಯ ಅಂಡರ್-15 FIDE ರೇಟೆಡ್ ಚೆಸ್ ಚಾಂಪಿಯನ್‌ಶಿಪ್, ಹಾಸನ ಅತ್ಯುತ್ತಮ ಪ್ರದರ್ಶನ ನೀಡಿ ಮತ್ತೊಮ್ಮೆ ಅಂಡರ್-15 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ. ಅಕ್ಟೋಬರ್ 2026ರಲ್ಲಿ ಹೈದರಾಬಾದ್‌ನಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಜಿಲ್ಲೆ 3182ರ ವತಿಯಿಂದ ಹಾಸನದಲ್ಲಿ ನಡೆದ ಸದಸ್ಯತ್ವ ಅಭಿವೃದ್ಧಿ, ಸಾರ್ವಜನಿಕ ಚಿತ್ರಣ ಮತ್ತು ಜಿಲ್ಲಾ ಪ್ರಶಸ್ತಿ ಸಮ್ಮೇಳನ 2025-26  ವಿಚಾರ ಸಂಕಿರಣದಲ್ಲಿ ವಲಯ 2ರ ರೋಟರಿ ಕೋಟ ಸಿಟಿಯು 16 ಜಿಲ್ಲಾ ಪ್ರಶಸ್ತಿಗಳನ್ನು ವಿವಿಧ ವಿಭಾಗದಲ್ಲಿ ಮಾಡಿದ ಸಮಾಜ ಮುಖಿ ಕಾರ್ಯಕ್ರಮ ಕ್ಕೆ ಗುರುತಿಸಿ  ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಬಿ. ಎಮ್. ಭಟ್ ವಹಿಸಿದ್ದರು. ಪಿ ಡಿ ಜಿ. ಅಭಿನಂದನ್ ಶೆಟ್ಟಿ, ಪಿಡಿಜಿ ಸಿಎ ದೇವಾನಂದ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪ್ರಶಸ್ತಿಯನ್ನು ರೋಟರಿ ಕೋಟ ಸಿಟಿಯ ಅಧ್ಯಕ್ಷ ರಾಧಾಕೃಷ್ಣ ಬ್ರಹ್ಮಾವರ್ ಸ್ವೀಕರಿಸಿದರು. ರೋಟರಿ ಕೋಟ ಸಿಟಿಯ ಮಾಜಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಶೆಟ್ಟಿ, ಶ್ಯಾಮ್ ಸುಂದರ್ ನಾಯರಿ, ಕಾರ್ಯದರ್ಶಿ ಉಮೇಶ್ ನಾಯರಿ, ಸದಸ್ಯರಾದ ನಿತ್ಯಾನಂದ ನಾಯರಿ, ಶಿವಾನಂದ ನಾಯರಿ, ವಿಜಯ್ ದೇವಾಡಿಗ, ರವಿ ಬೇಳೂರು, ರಾಘವೇಂದ್ರ ನಾಯರಿ, ರವಿ ಕುಮಾರ್ ಶೆಟ್ಟಿ ನಡೂರ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕುಂದಾಪುರ: ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಹೆಚ್ಚಿಸುವ ನಿಟ್ಟಿನಲ್ಲಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC), ಮೂಡ್ಲಕಟ್ಟೆ ಇದರ ತರಬೇತಿ ಮತ್ತು ಉದ್ಯೋಗ ಘಟಕವು ಪ್ರತಿಷ್ಠಿತ ಸ್ಕಿಲ್ ಆರ್ಬಿಟ್ ಸಂಸ್ಥೆಯೊಂದಿಗೆ ಒಡಂಬಡಿಕೆ (MoU) ಮಾಡಿಕೊಂಡಿದೆ. ಒಡಂಬಡಿಕೆಯ ಅಂಗವಾಗಿ ಕಾಲೇಜಿನಲ್ಲಿ ಉದ್ಯಮಾಧಾರಿತ ಆಡ್-ಆನ್ ಕೋರ್ಸ್‌ಗಳ ಕುರಿತು ವಿಶೇಷ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (AIML), ಸೈಬರ್ ಸೆಕ್ಯುರಿಟಿ, ಹಣಕಾಸು ಮತ್ತು ಷೇರುಪೇಟೆ, ಡಿಜಿಟಲ್ ಹಾಗೂ ಸಾಮಾಜಿಕ ಮಾಧ್ಯಮ ಮಾರ್ಕೆಟಿಂಗ್ ಮತ್ತು ಮಾನವ ಸಂಪನ್ಮೂಲ ನಿರ್ವಹಣೆ (HRM) ಕ್ಷೇತ್ರಗಳ ಕೋರ್ಸ್‌ಗಳ ಕುರಿತು ವಿಸ್ತೃತ ಮಾಹಿತಿ ನೀಡಲಾಯಿತು. ಆಕ್ಸೆಂಚರ್ ಸಂಸ್ಥೆಯ ಬ್ಯಾಕೆಂಡ್ ಎಐ ಇಂಜಿನಿಯರ್ ಹಾಗೂ ಸ್ಕಿಲ್ ಆರ್ಬಿಟ್‌ನ ಎಐಎಂಎಲ್ ಮಾರ್ಗದರ್ಶಕಿ ಗಂಟಾ ಶ್ರುತಿ, ಎಚ್‌ಆರ್ ಮ್ಯಾನೇಜರ್ ಪವನ್ ಕೊಡುರಿ ಹಾಗೂ ಪ್ರಾಡಕ್ಟ್ ಮ್ಯಾನೇಜರ್ ಮನೋಜ್ ಚಿಂತಡ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉದ್ಯಮದ ಪ್ರಸ್ತುತ ಬೇಡಿಕೆಗಳು ಮತ್ತು ಕೌಶಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಬಿಸಿಎ, ಬಿ.ಕಾಂ…

Read More

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು ವತಿಯಿಂದ ಇಲ್ಲಿನ ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆಯುವ ‘ಅಕ್ಷರ ಬೆಳಕು’ ಕಾರ್ಯಕ್ರಮವು ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ದ.ಸಂ.ಸಮಿತಿ ಸಂಘಟನಾ ಸಂಚಾಲಕರಾದ ಮಂಜುನಾಥ ನಾಗೂರು ಉದ್ಘಾಟಿಸಿ, ಮಾತನಾಡಿ, ಸಂಘವು ಸತತ ನಾಲ್ಕು ವರ್ಷಗಳಿಂದ ಪ್ರತಿವರ್ಷ ನಾಲ್ವರು ಅರ್ಹ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು, ಅವರ ಶಿಕ್ಷಣ ಮುಂದುವರಿಸಲು ಅಗತ್ಯವಿರುವ ಸಂಪೂರ್ಣ ಆರ್ಥಿಕ ನೆರವು ಹಾಗೂ ಪ್ರೋತ್ಸಾಹವನ್ನು ನೀಡುತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು . ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ದಲಿತ ಸಂಘರ್ಷ ಸಮಿತಿ (ದ.ಸಂ.ಸ) ಮಹಿಳಾ ಒಕ್ಕೂಟದ ಅಧ್ಯಕ್ಷರಾದ ವಿನಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಕಾಶ್ ಎಂ. ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರದೀಪ್ ಕುಮಾರ್ ಜಿ.ಎಂ. ಅವರು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಕಲಿಕೆ, ಕೌಶಲ್ಯ ಹಾಗೂ ವ್ಯಾಕರಣದ ಮಹತ್ವದ ಕುರಿತು ಉಪಯುಕ್ತ ಮಾಹಿತಿ ಮತ್ತು ಮಾರ್ಗದರ್ಶನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯ ಅನ್ವಯ ಸಾಧಕ ಬಾಧಕಗಳನ್ನು ಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರಕಾರಕ್ಕೆ ಪತ್ರ ಬರೆಯಲಾಗುವುದಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಸರ ಸೂಕ್ಷ್ಮ ಪ್ರದೇಶ (ಕಸ್ತೂರಿ ರಂಗನ್ ವರದಿ ಆಧಾರಿತ)ಕ್ಕೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರದ ಅರಣ್ಯ ಕಾಯಿದೆಗಳು ಅರಣ್ಯ ಇಲಾಖೆಯ ನೀತಿ ನಿಯಮಗಳಿಂದ ನಿರಂತರ ತೊಂದರೆಗೊಳಗಾಗುತ್ತಿರುವ ಕಾಡಂಚಿನ ಭಾಗದ ಜನರಿಗೆ ಇನ್ನೂ ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗಿರುವುದು ಈ ಭಾಗದ ಜನರ ಜೀವನ ಹಾಗೂ ಜೀವನೋಪಾಯಕ್ಕೆ ತೊಂದರೆ ಉಂಟಾಗುತ್ತಿದೆ ಎಂಬ ಆತಂಕ ಹಾಗೂ ಮತ್ತಿತರ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕುತ್ತು ಉಂಟಾಗುವ ಸಾಧ್ಯತೆ ಇದೆ ಎಂದು ಗೊಂದಲಗಳಿವೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ 2025–2026ರ ರೋಟರಿ ವರ್ಷದಲ್ಲಿ ಅತ್ಯುತ್ತಮ ಸಾಧನೆಗಾಗಿ ಪ್ರತಿಷ್ಠಿತ ಎಕ್ಸಲೆನ್ಸ್ ಕ್ಲಬ್ ಪ್ರಶಸ್ತಿಯನ್ನು ಪ್ರಥಮ ಬಾರಿಗೆ ಪಡೆದು ಹೆಮ್ಮೆಯ ಸಾಧನೆ ಮಾಡಿದೆ. ಇದರೊಂದಿಗೆ ಕ್ಲಬ್‌ಗೆ ವಿವಿಧ ವಿಭಾಗಗಳಲ್ಲಿ ಇನ್ನೂ 12 ಪ್ರಶಸ್ತಿಗಳು ಲಭಿಸಿವೆ. ವರ್ಷಪೂರ್ತಿ ಕೈಗೊಂಡ ಸಮಾಜಸೇವಾ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ತೋರಿದ ಅತ್ಯುತ್ತಮ ಸಾಧನೆಗೆ ಈ ಪ್ರಶಸ್ತಿಗಳು ದೊರೆತಿವೆ. ಈ ಸಾಧನೆಯು ಕ್ಲಬ್‌ನ ಸದಸ್ಯರ ಸಾಮೂಹಿಕ ಪ್ರಯತ್ನ, ಬದ್ಧತೆ, ಸಕ್ರಿಯ ಭಾಗವಹಿಸುವಿಕೆ ಮತ್ತು ನಿಸ್ವಾರ್ಥ ಸೇವೆಗೆ ದೊರೆತ ಮಾನ್ಯತೆಯಾಗಿದೆ. 2025–2026ರ ರೋಟರಿ ವರ್ಷದ ಅಧ್ಯಕ್ಷ ರೋಟೇರಿಯನ್ ಸುಧೀರ್ ಮಲ್ಯಾಡಿ ಅವರ ಸಮರ್ಥ ನಾಯಕತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ. ಈ ಸಂದರ್ಭದಲ್ಲಿ ಅಧ್ಯಕ್ಷ ರೋಟೇರಿಯನ್ ಸುಧೀರ್ ಮಲ್ಯಾಡಿ ಹಾಗೂ ಕಾರ್ಯದರ್ಶಿ ರೋಟೇರಿಯನ್ ಟಿ. ರಾಜೀವ್ ಶೆಟ್ಟಿ ಅವರು ಕ್ಲಬ್‌ನ ಎಲ್ಲಾ ಸದಸ್ಯರ ಸಹಕಾರ ಮತ್ತು ಸಮರ್ಪಣೆಯನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಪ್ರಶಸ್ತಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹ ಮತ್ತು ಬದ್ಧತೆಯೊಂದಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಜಯನಗರದ BGS ಮೈದಾನದಲ್ಲಿ ‘ಟೀಮ್ ಕುಂದಾಪುರಿಯನ್ಸ್’ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕುಂದಾಪ್ರ ಕನ್ನಡ ಉತ್ಸವ 2026 ಅತ್ಯಂತ ವಿಜೃಂಭಣೆ ಮತ್ತು ಸಂಭ್ರಮದಿಂದ ನೆರವೇರಿತು. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೈದಾನದಾದ್ಯಂತ ಕೇವಲ ಕುಂದಾಪ್ರ ಕನ್ನಡದ ಸೊಗಡು, ಕರಾವಳಿಯ ಆಚಾರ-ವಿಚಾರ ಮತ್ತು ಸಂಸ್ಕೃತಿಯ ಹಬ್ಬವೇ ಮನೆಮಾಡಿತ್ತು. ಕಾರ್ಯಕ್ರಮದ ಆರಂಭದಲ್ಲಿ ಜಾನಪದ ಕಲಾತಂಡಗಳೊಂದಿಗೆ ಕುಂದಾಪ್ರದ ಪಾರಂಪರಿಕ ವಸ್ತುಗಳ ಮೆರವಣಿಗೆ ಎಲ್ಲರ ಗಮನ ಸೆಳೆಯಿತು. ರಂಗೇರಿದ ನೃತ್ಯ ವೈಭವ, ಯುವ ಸಂಗಮ, ಡಿಜೆ ಕುಂದಾಪುರ ಮತ್ತು ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ನೋಡುಗರನ್ನು ಮಂತ್ರಮುಗ್ಧಗೊಳಿಸಿತು. ಇನ್ನು ಹಳೆಯ ಕಾಲದಲ್ಲಿ ಬಳಸುತ್ತಿದ್ದ ವಸ್ತುಗಳ ಪ್ರದರ್ಶನದ ಮೂಲಕ ಇವುಗಳನ್ನು ಯುವ ಜನರಿಗೆ ಪರಿಚಯಿಸಲಾಯಿತು ಬೈಗಿ, ಬಂಗುಡೆ ಸೇರಿ ಕರಾವಳಿಯ ವಿವಿಧ ಬಗೆಯ ಮೀನುಗಳ ಪ್ರದರ್ಶನ​ ನೋಡಲು ವಿಭಿನ್ನವಾಗಿತ್ತು. ಕುಂದಾಪುರ ಆಟೋಟ ಸ್ಪರ್ಧೆಗಳು ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ‘ಕುಂದಾಪುರ ಸಂವಾದ’ ಕಾರ್ಯಕ್ರಮದಲ್ಲಿ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಯ ಕುರಿತು ಅರ್ಥಪೂರ್ಣ ಚರ್ಚೆಗಳು…

Read More