Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಶ್ರೀ ನಾರಾಯಣ ಗುರುಗಳು ಕೊಟ್ಟಿರುವ ಸಂದೇಶ ಜನಸಾಮಾನ್ಯರ ಬದುಕಿನಲ್ಲಿ ಹೊಸಶಕ್ತಿಯನ್ನು ನೀಡಿದ್ದು ಈ ನಿಟ್ಟಿನಲ್ಲಿ ನಾರಾಯಣ ಗುರುಗಳ 172ನೇ ಜನ್ಮ ದಿನದ ಆಂಗವಾಗಿ ಸಾಸ್ತಾನದಿಂದ ಅರಂಭವಾದ ಈ ಪರಿವರ್ತನಾ ಜಾಥಾ ಎಲ್ಲಾ ಪ್ರದೇಶದಲ್ಲೂ ಮೇಳೈಸಲಿ ಅಲ್ಲದೆ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಬಿತ್ತರಿಸಲು ಶಕ್ತಿಯನ್ನು ಪಡೆಯಲಿ ಇದರಿಂದ ಒಂದು ಸುಂದರ ಸಮಾಜ ನಿರ್ಮಾಣವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಸಾಸ್ತಾನ ಪೇಟೆಯಲ್ಲಿ ಶ್ರೀ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ, ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಕೋಟ ಇವರ ಸಹಭಾಗಿತ್ವದಲ್ಲಿ ಶ್ರೀ ನಾರಾಯಣಗುರುಗಳ 172ನೇ ಜನ್ಮ ದಿನಾಚರಣೆಯ ಅಂಗವಾಗಿ ಶ್ರೀ ನಾರಾಯಣಗುರು ಪರಿವರ್ತನಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಾಹಿತಿ ನರೇಂದ್ರ ಕುಮಾರ್ ಕೋಟ, ಸಮುದಾಯದ ಪ್ರಮುಖರಾದ ವಿಠ್ಠಲ ಪೂಜಾರಿ ಪಾಂಡೇಶ್ವರ, ಐರೋಡಿ ವಿಠ್ಠಲ ಪೂಜಾರಿ, ಎಂಸಿ.ಚಂದ್ರಶೇಖರ್, ಸದಾನಂದ ಪೂಜಾರಿ, ಪ್ರಸಾದ್ ಬಿಲ್ಲವ, ರತ್ನಾ ಜೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು  ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ  ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪಿಯು ಕಾಲೇಜಿನ  ಬಾಲಕ  – ಬಾಲಕಿಯರ ಉಭಯ ತಂಡಗಳು ದಿಗ್ವಿಜಯ ಸಾಧಿಸಿ ಚಾಂಪಿಯನ್ ಪಟ್ಟವನ್ನು ಮೂಡಿಗೇರಿಕೊಂಡು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಉಪಸ್ಥಿತರಿದ್ದಾರೆ. ಕ್ರೀಡಾಪಟುಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಶ್ಲಾಘಿಸಿ, ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಅನ್ನ ಹಾಗೂ ಅಮ್ಮ ಎರಡಕ್ಕೂ ಹೆಚ್ಚು ವ್ಯತ್ಯಾಸವಿಲ್ಲ. ತಂದೆ ತಾಯಿಗಳಿಗಿಂತ ಹೆಚ್ಚಿನದನ್ನು ಅನ್ನ ನಮಗೆ ಮಾಡುತ್ತದೆ. ತಂದೆ ತಾಯಿ ಹೊರಗಿನಿಂದ ಪೋಷಿಸಬಹುದು. ಆದರೆ ದೇಹದ ಒಳಗೂ ಹೋಗಿ ನಮ್ಮನ್ನು ಪೋಷಿಸುವ ಶಕ್ತಿ ಆಹಾರಕ್ಕೆ ಮಾತ್ರವಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಗಂಗೆಯನ್ನು ವೈಜ್ಞಾನಿಕ ದೃಷ್ಟಿಯಿಂದ ನೋಡಿದಾಗ ಅದು ಕೇವಲ ಹೆಚ್.ಟು.ಓ (H2O) ಅನಿಸುತ್ತದೆ. ಅದಕ್ಕೂ ಬೇರೆ ನೀರಿಗೂ ವ್ಯತ್ಯಾಸವಿಲ್ಲ ಎನಿಸಬಹುದು. ಆದರೆ ಗಂಗೆ ಕೇವಲ ಅಷ್ಟೇ ಅಲ್ಲಾ. ಸೂಕ್ಷ್ಮ ದೃಷ್ಟಿಗೆ ಗಂಗಾ ನದಿಯು ಗಂಗಾ ಮಾತೆಯಾಗಿ ಕಾಣುತ್ತಾಳೆ. ರಾಮನು ಮನುಷ್ಯನಾಗಿದ್ದ. ಆದರೆ ರಾಮ ಮನುಷ್ಯ ಮಾತ್ರವೇ ಆಗಿರಲಿಲ್ಲ ಎಂಬುದನ್ನು ನಾವು ಗಮನಿಸಬಹುದು. ಹಾಗೆಯೇ ಸ್ಥೂಲ ದೃಷ್ಟಿಯಲ್ಲಿ ಆಹಾರವು ಕೇವಲ ಹೊಟ್ಟೆ ತುಂಬಿಸುವ ಊಟವಾದರೆ, ಸೂಕ್ಷ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೂತನ ಶೈಕ್ಷಣಿಕ ಅಧ್ಯಾಯಕ್ಕೆ ಸಾಕ್ಷಿಯಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ನ (ಎಐಎಂಎಸ್‌ಆರ್‌ಸಿ) ಮೊದಲ ಎಂಬಿಬಿಎಸ್ ಪ್ರವೇಶದ ಹೆಗ್ಗಳಿಕೆಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ಪಾತ್ರರಾಗಿದ್ದಾರೆ. ಸರ್ಕಾರಿ ಕೋಟದಡಿ ಎಂಬಿಬಿಎಸ್ ಪ್ರವೇಶ ಪಡೆದಿರುವ ಸ್ನೇಹಾ, ಸೀಮಿತ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದು ಶೈಕ್ಷಣಿಕ ಪರಿಶ್ರಮ, ಅವಕಾಶ ಹಾಗೂ ಸೂಕ್ತ ಮಾರ್ಗದರ್ಶನದ ಮೂಲಕ ವೈದ್ಯಕೀಯ ಶಿಕ್ಷಣದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಕಾರ್ಕಳದ ಕುಂಟಲ್ಪಾಡಿಯ ನಿವಾಸಿಯಾಗಿರುವ ಸ್ನೇಹಾ, ತನ್ನ ಎಸ್‌ಎಸ್‌ಎಲ್‌ಸಿಯನ್ನು ಜೆಸೀಸ್ ಹೈಸ್ಕೂಲ್‌ನಲ್ಲಿ 590 ಅಂಕಗಳೊಂದಿಗೆ ಪೂರ್ಣಗೊಳಿಸಿದ್ದರು. ಬಳಿಕ ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಸೇರಿ, ಆಳ್ವಾಸ್‌ನ ಮೆರಿಟ್ ಅಡಾಪ್ಷನ್ ಸ್ಕೀಮ್ (ದತ್ತು ಯೋಜನೆ) ಅಡಿಯಲ್ಲಿ ಶಿಕ್ಷಣ ಮುಂದುವರಿಸಿದ್ದರು. ಆಳ್ವಾಸ್‌ನಲ್ಲಿ ಪಡೆದ ಶೈಕ್ಷಣಿಕ ತರಬೇತಿ, ನಿರಂತರ ಪರಿಶ್ರಮ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯ ಫಲವಾಗಿ ಸ್ನೇಹಾ ನೀಟ್‌ನಲ್ಲಿ 720ಕ್ಕೆ 506 ಅಂಕಗಳನ್ನು ಗಳಿಸಿ, ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಕಸ್ತೂರಿ ರಂಗನ್ ವರದಿ ಕುರಿತ ಏಳನೇ ಕರಡು ಪ್ರತಿ ಬಿಡುಗಡೆಗೊಳಿಸಿದೆ. ಹಾಗೂ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಮಿತಿ ನಿಗದಿ ಪಡಿಸಿದೆ ಹಾಗೂ ಇದು ಪ್ರಥಮ ಭಾರಿಯಲ್ಲ ಈಗಾಗಲೇ ಆರು ಭಾರಿ ಕರಡು ಜಾರಿಯಾದರೂ ಸಹ ಇಲ್ಲಿಯ ತನಕ ರೈತರ ಹಾಗೂ ಪಶ್ಚಿಮ ಘಟ್ಟವಾಸಿಗಳ ಬೇಡಿಕೆಯಾದ ಭೌತಿಕ ಸರ್ವೇ ಕಾರ್ಯ ಇಲ್ಲಿಯ ತನಕ ನಡೆಯಲೇ ಇಲ್ಲಾ. ಸಂಸದರು ಹಾಗೂ ಶಾಸಕರುಗಳು ಕೇವಲ ಕಾಟಾಚಾರಕ್ಕೆ ಅಧಿಕಾರಿಗಳನ್ನು ಕೂರಿಸಿಕೊಂಡು ಸಭೆ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಅಧಿಕಾರಿಗಳು ಸಭೆಯಲ್ಲಿ ನೀಡಿದ ಹಾರಿಕೆಯ ಉತ್ತರಗಳಿಗೆ ಸಮ್ಮತಿ ನೀಡದೆ ಕೂಡಲೇ ರಾಜ್ಯ ಸರ್ಕಾರದ ಆಕ್ಷೇಪಣೆಯ ಪ್ರತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕು. ಇಲ್ಲದೇ ಇದ್ದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಡ್ಡರ್ಸೆ ಶಕ್ತಿ ಕೇಂದ್ರ ವ್ಯಾಪ್ತಿಯ ಕಾರ್ಯಕರ್ತರ ಸಮ್ಮುಖದಲ್ಲಿ ವಂದೇ ಮಾತರಂ ಕಾಲ್ನಡಿಗೆ ಜಾಥಾದ ಪೂರ್ವಭಾವಿ ಸಭೆಯನ್ನು ಶಕ್ತಿ ಕೇಂದ್ರದ ಅಧ್ಯಕ್ಷ ಮಾನಂಬಳ್ಳಿ ಗುಂಡು ಶೆಟ್ಟಿ ನಿವಾಸದಲ್ಲಿ ಜರಗಿತು. ಸೆ.07 ಸೋಮವಾರದಂದು ಕುಂದಾಪುರ ಬಸ್ ನಿಲ್ದಾಣದಿಂದ ಸಾಸ್ತಾನದವರೆಗಿನ ವಂದೇ ಮಾತರಂ ಕಾಲ್ನಡಿಗೆ ಜಾಥಾ ಕಾರ್ಯಕ್ರಮದ ಕುರಿತು  ಉಡುಪಿ ಚಿಕ್ಕ ಮಂಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾ ಅವರು ಭಾಗವಹಿಸಿ ಜಾಥಾದ ಸಂಪೂರ್ಣ ಮಾಹಿತಿಯನ್ನು ತಿಳಿಸಿದರು. ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಗುಂಡು ಶೆಟ್ಟಿ, ಕಾರ್ಯದರ್ಶಿ ದಯಾನಂದ ಆಚಾರ ,ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ವಿಠಲ ಪೂಜಾರಿ ,ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಸಾದ ಬಿಲ್ಲವ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ ಮಾನಂಬಳ್ಳಿ, ಕಿರಣ ಪೂಜಾರಿ ಅಚ್ಲಾಡಿ,ಪ್ರಕಾಶ ಆಚಾರ್ ಮಧುವನ, ರಾಜು ಶ್ರೀಯಾನ ವಡ್ಡರ್ಸೆ, ಬಿಜೆಪಿ ಮುಖಂಡರಾದ ಪ್ರದೀಪ ಶಾಂತಿ ನಗರ, ಅಶೋಕ ಶೆಟ್ಟಿ ಕಾವಡಿ,ಶರತ್ ಶೆಟ್ಟಿ ಕಾವಡಿ, ರಾಘವ ಶೆಟ್ಟಿ ಮಾನಂಬಳ್ಳಿ, ರಾಘವೇಂದ್ರ ಕಾಮತ್, ರೂಪೇಶ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾವು ಎಲ್ಲೇ ಹೋದರೂ ನಮ್ಮ ಮಾತೃಭಾಷೆಯ ಸೊಗಡನ್ನು ಬಿಡಬಾರದು. ನಮ್ಮ ಹಿರಿಯರು ಉಳಿಸಿಕೊಂಡು ಬಂದ ಅಸ್ಮಿತೆಯನ್ನು ಮಕ್ಕಳಾದ ನೀವು ಮುಂದುವರೆಸಿಕೊಂಡು ಹೋಗಬೇಕು ಎಂದು ಪೂರ್ಣ ಪ್ರಜ್ಞಾ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್ ಸಿದ್ದಾಪುರ ಅಭಿಪ್ರಾಯಪಟ್ಟರು. ಅವರು ಸೋಮವಾರ ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಕನ್ನಡ ವಿಭಾಗವು ಆಯೋಜಿಸಿದ್ದ” ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ”ಯ ಅಂಗವಾಗಿ ಹಮ್ಮಿಕೊಂಡ “ಕುಂದಗನ್ನಡದ ವೈಶಿಷ್ಟ್ಯತೆ” ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ನಾವು ಬಳಸುವ ಎಷ್ಟೋ ಪದಗಳ ಅರ್ಥವನ್ನು ನಾವೇ ಅರಿತಿರುವುದಿಲ್ಲ. ಈ ಪದಗಳು ಇಂದು ನಿನ್ನೆಯದಲ್ಲ ಪಂಪಭಾರತ, ಗದಾಯುದ್ಧ, ಕುಮಾರವ್ಯಾಸ ಭಾರತಗಳಂತಹ ಮೇರು ಕೃತಿಗಳಲ್ಲಿ ಇವುಗಳ ಉಲ್ಲೇಖ ದೊರೆಯುತ್ತದೆ. ವಿದ್ಯಾರ್ಥಿಗಳು ಗುಂಡ್ಮಿ ಚಂದ್ರಶೇಖರ ಐತಾಳ್, ರಾಜಗೋಪಾಲ ಆಚಾರ್ಯರು ಕುಂದಗನ್ನಡದ ಬಗ್ಗೆ ಬರೆದ ಪುಸ್ತಕಗಳನ್ನು ಓದುವ ಅವಶ್ಯಕತೆ ಇದೆ. ಇದರೊಂದಿಗೆ ಮಕ್ಕಳು ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು. ಭಂಡಾರ್ಕಾರ್ಸ್ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೃಷಿ ಚಟುವಟಿಕೆ ನಡೆಸುವಾಗ ವಿಷಕಾರಿ ಹಾವು ಕಚ್ಚಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಯಡ್ತರೆಯಲ್ಲಿ ಸಂಭವಿಸಿದೆ. ಯಡ್ತರೆ ಗ್ರಾಮದ ತೂದಳ್ಳಿ ನಿವಾಸಿ ವಿಜಯ ಆಚಾರಿ (70) ಮೃತಪಟ್ಟ ವ್ಯಕ್ತಿ. ಆ.29 ರಂದು ಸಂಜೆ ತೂದಳ್ಳಿ ಎಂಬಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವಾಗ ಯಾವುದೋ ಒಂದು ವಿಷಕಾರಿ ಹಾವು ಬಲ ಕಾಲಿಗೆ ಕಚ್ಚಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಬೈಂದೂರು ಸರಕಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಳಿಕ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆ.31ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಹಾವೇರಿಯ ಹಟ್ಟಿಮತ್ತೂರು ಗ್ರಾಮದ ರೈತನ ಮಗಳೊಬ್ಬಳ ಪ್ರತಿಭೆ ಇದೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಮಾಹಿತಿ ವಿಜ್ಞಾನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೃಷ್ಟಿ ಮಂಜುನಾಥ ಉಳ್ಳಾಗಡ್ಡಿ, ಜಾಗತಿಕ ಪಾವತಿ ತಂತ್ರಜ್ಞಾನ ಸಂಸ್ಥೆ ವೀಸಾದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಆಯ್ಕೆಯಾಗಿದ್ದು, ವೇತನ ಹಾಗೂ ಇನ್ನಿತರ ಸೌಲಭ್ಯಗಳನ್ನು ಒಳಗೊಂಡಂತೆ ₹46.33 ಲಕ್ಷದ ವಾರ್ಷಿಕ ವೇತನವನ್ನು ಪಡೆದುಕೊಂಡಿದ್ದಾರೆ. ಆರನೇ ಸೆಮಿಸ್ಟರ್‌ನ ಸಂದರ್ಶನದಿಂದ ವೀಸಾ ಉದ್ಯೋಗ:ಸೃಷ್ಟಿಯ ವೃತ್ತಿಜೀವನಕ್ಕೆ ವೀಸಾದಲ್ಲಿನ ಇಂಟರ್ನ್ಶಿಪ್ ಮಹತ್ವದ ತಿರುವು ನೀಡಿತು. ಆಳ್ವಾಸ್‌ನಲ್ಲಿ ವಿದ್ಯಾರ್ಥಿಗಳ ವೃತ್ತಿಪರ ಕೌಶಲ್ಯ ವೃದ್ಧಿಗೆ ಗುಣಮಟ್ಟದ ಇಂಟರ್ನ್ಶಿಪ್‌ಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಅದರ ಭಾಗವಾಗಿ ಆರನೇ ಸೆಮಿಸ್ಟರ್‌ನಲ್ಲಿ ವೀಸಾದಲ್ಲಿ ಇಂಟರ್ನ್ಶಿಪ್ ಮಾಡಲು ಅವಕಾಶ ಪಡೆದರು. 10 ವಾರಗಳ ಇಂಟರ್ನ್ಶಿಪ್ ಅವಧಿಯಲ್ಲಿ ₹90,000 ಸ್ಟೈಪೆಂಡ್‌ನೊಂದಿಗೆ ಕಾರ್ಯನಿರ್ವಹಿಸಿದ ಅವರು, ಸಂಸ್ಥೆಯ ವಾತಾವರಣದಲ್ಲಿ ತಮ್ಮ ತಾಂತ್ರಿಕ ಜ್ಞಾನ ಹಾಗೂ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದರು. ಅವರ ಇಂಟರ್ನ್ಶಿಪ್ ಸಾಧನೆಯಿಂದ ಮೆಚ್ಚಿದ ವೀಸಾ ಸಂಸ್ಥೆ, ಬಳಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಶ್ವಿ ಸ್ಕೂಲ್‌ನ ವಿದ್ಯಾರ್ಥಿನಿ ಆರಾಧ್ಯ ಎಸ್. ಶೆಟ್ಟಿ ಅವರು ಮತ್ತೊಮ್ಮೆ ಅತ್ಯುತ್ತಮ ಸಾಧನೆ ಮಾಡಿದ್ದು, ಕರ್ನಾಟಕ ರಾಜ್ಯ ಅಂಡರ್-15 FIDE ರೇಟೆಡ್ ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಇದರೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶವನ್ನು ಮೂರನೇ ಬಾರಿ ಪಡೆದುಕೊಂಡಿದ್ದಾರೆ. 2025 – ಕರ್ನಾಟಕ ರಾಜ್ಯ ಶಾಲಾ ಅಂಡರ್-17 ಚೆಸ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತೆ ಹಾಗೂ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ. 2025 – ಅಸ್ಸಾಂ ರಾಷ್ಟ್ರೀಯ ಶಾಲಾ ಚೆಸ್ ಚಾಂಪಿಯನ್‌ಶಿಪ್ ಅತ್ಯುತ್ತಮ ಪ್ರದರ್ಶನದೊಂದಿಗೆ ಬೆಳ್ಳಿ ಪದಕ. 2026 – ಕರ್ನಾಟಕ ರಾಜ್ಯ ಅಂಡರ್-17 ಚೆಸ್ ಚಾಂಪಿಯನ್‌ಶಿಪ್, ಶಿವಮೊಗ್ಗ ಬೆಳ್ಳಿ ಪದಕ ವಿಜೇತೆ ಹಾಗೂ ಮತ್ತೊಮ್ಮೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ಅರ್ಹತೆ. 2026 – ಕರ್ನಾಟಕ ರಾಜ್ಯ ಅಂಡರ್-15 FIDE ರೇಟೆಡ್ ಚೆಸ್ ಚಾಂಪಿಯನ್‌ಶಿಪ್, ಹಾಸನ ಅತ್ಯುತ್ತಮ ಪ್ರದರ್ಶನ ನೀಡಿ ಮತ್ತೊಮ್ಮೆ ಅಂಡರ್-15 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ. ಅಕ್ಟೋಬರ್ 2026ರಲ್ಲಿ ಹೈದರಾಬಾದ್‌ನಲ್ಲಿ…

Read More