Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ತೆಕ್ಕಟ್ಟೆ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಜಾಗೃತಿ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ರಾಘವೇಂದ್ರ ಹೆಬ್ಬಾರ್ ಹಾಗೂ ಸಿಡಿಪಿಒ ಉಮೇಶ್ ಅವರು ಪೋಷಣ್ ಅಭಿಯಾನದ ಮಹತ್ವ ಮತ್ತು ಮಕ್ಕಳ ಆರೋಗ್ಯಕರ ಬೆಳವಣಿಗೆಯಲ್ಲಿ ಪೌಷ್ಟಿಕಾಂಶದ ಪಾತ್ರದ ಕುರಿತು ಮಾಹಿತಿ ನೀಡಿದರು. ಸುಮಾರು 25 ರಿಂದ 30 ಮಹಿಳೆಯರು, ಮುಖ್ಯವಾಗಿ ಮಕ್ಕಳ ತಾಯಂದಿರು, ಅಂಗನವಾಡಿ ಹಾಗೂ ಪಿಎಚ್‌ಸಿ ಸಿಬ್ಬಂದಿಗಳು, ರೋಟರಿ ಸದಸ್ಯರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೊನೆಯಲ್ಲಿ ರೋಟೇರಿಯನ್ ಚಂದ್ರಶೇಖರ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820-2574978, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬ್ರಹ್ಮಾವರ: 0820-2562244, ಕಾರ್ಕಳ: 0858-230992, ಕುಂದಾಪುರ: 08254-230807 ಹಾಗೂ ಉಡುಪಿ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಆತ್ಮ ಸಾಕ್ಷಾತ್ಕಾರಕ್ಕೂ ಶರೀರ ಅಗತ್ಯ. ಧರ್ಮಾರ್ಥ ಕಾಮ ಮೋಕ್ಷಗಳು ಶರೀರದಿಂದಲೇ ಸಾಧ್ಯವಾಗುವಂತದ್ದು. ಮನುಷ್ಯ ಶರೀರ ಇರುವುದೇ ಮೋಕ್ಷ ಸಾಧನೆಗೆ. ಹಾಗಾಗಿ ಶರೀರವನ್ನು ಉಳಿಸಿಕೊಂಡು, ಮೋಕ್ಷವನ್ನು ಪಡೆಯಲು ಆಹಾರ ಅಗತ್ಯವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಮಂಗಳವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಶಿವ ಪಾರ್ವತಿಯರ ಮಧ್ಯೆ ವಾದ ನಡೆದ ಸಂಧರ್ಭವನ್ನು ಉದಾಹರಿಸಿ, ಶಿವನು ಭೌತಿಕ ಜಗತ್ತು ಮಿಥ್ಯೆ, ಶರೀರ ಮಾಯೆ, ಆಹಾರ ಸುಳ್ಳು, ಶುದ್ಧ ಚೈತನ್ಯ ಮಾತ್ರ ಸತ್ಯ ಎಂಬುದಾಗಿ ಹೇಳಿದ, ಆದರಿಂದ ಕುಪಿತಳಾದ ಪಾರ್ವತಿಯು, ಕಾಶಿಯಲ್ಲಿ ಅನ್ನಪೂರ್ಣೇಶ್ವರಿಯಾಗಿ ಅವತರಿಸಿದಳು. ಆನಂತರ ಶಿವನು ಭಿಕ್ಷುಕನ ರೂಪದಲ್ಲಿ ‘ಭವತಿ ಭಿಕ್ಷಾಂ ದೇಹಿ’ ಎಂದು ಕೇಳಿದ ಎಂಬ ಕಥೆಯನ್ನು ಉಲ್ಲೇಖಿಸಿ, ಇದು ಅನ್ನದ ಮಹತ್ವವನ್ನು ಲೋಕಕ್ಕೆ ಸಾರಲು ಆದಿದಂಪತಿಗಳು ಆಡಿದ ನಾಟಕ ಎಂದು ವಿವರಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ನೆನಪಿನಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ ಪಂದ್ಯಾಟಕ್ಕೆ ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಚಾಲನೆ ನೀಡಿ ಮಾತಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕಾಗಿರುವುದು ವರ್ತಮಾನದ ತುರ್ತು. ಕ್ರೀಡೆ ದೈಹಿಕ ಕ್ಷಮೆತೆಗೆ ಮಾತ್ರವಲ್ಲ; ಮಾನಸಿಕ ಸದೃಢತೆಗೆ ಸಹಕಾರಿ ಎಂದರು. ಈ ಸಂದರ್ಭ ಸಂಸ್ಥೆಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಂಜಿತ್ ಟಿ.ಎನ್, ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್., ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು, ವಿಲ್ಮಾ ಶೆರಲ್ ಕಾರ್ನೆಲಿಯೊ, ಶ್ರೀಜೇಶ್ ಜಿ. ನಾಯ್ಕ್, ಕ್ರೀಡಾ ಕಾರ್ಯದರ್ಶಿ ನಿಶಾಂತ್ ಡಿಸೋಜ, ಜೊತೆ ಕಾರ್ಯದರ್ಶಿ ಕೀರ್ತೇಶ್ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ವಿಕಾಸ್ ಹಾಗೂ ಕ್ರೀಡಾ ಸಂಘದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿರೀಕ್ಷಾ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಇಲ್ಲಿ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಸಿ ಎಸ್ ಆರ್ ನಿಧಿಯಿಂದ ಶಾಲಾ ಸಭಾಂಗಣದ ಇಂಟರ್ಲಾಕ್ ಅಳವಡಿಕೆಗೆ ಭೂಮಿ ಪೂಜೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಸ್ಮಾರ್ಟ್ ಕ್ಲಾಸ್ ಇಂಟರ್ ಆಕ್ಟಿವ್ ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಗುರುರಾಜ್ ಗಂಟಿಹೊಳೆ ಮಾನ್ಯ ಶಾಸಕರು ಬೈಂದೂರು ಇವರು ಶಾಲಾ ಅಭಿವೃದ್ಧಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು ಊರ ವಿದ್ಯಾಭಿಮಾನಿಗಳು ತೊಡಗಿಸಿಕೊಂಡರೆ ಮಾತ್ರ ಉತ್ತಮ ಶಾಲಾ ಪರಿಸರ ಮತ್ತು ಶಾಲಾ ಶೈಕ್ಷಣಿಕ ವ್ಯವಸ್ಥೆ ನಿರ್ಮಾಣವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಾಂತೇರಿ ಕಾಮಾಕ್ಷಿ ಎಂಟರ್ಪ್ರೈಸಸ್ ವತಿಯಿಂದ ಶಾಲಾ ಸುರಕ್ಷತಾ ದೃಷ್ಟಿಯಿಂದ ಬೆಂಕಿ ಶಮನ ಚೆಂಡು ಇದರ ಪ್ರಾತ್ಯಕ್ಷಿತೆ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಸಿಎಸ್ಆರ್ ಅನುದಾನ ತರಲು ಸಹಕರಿಸಿದ ಚರಣ್ ಬೈಂದೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಾಲಾಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಹುಡುಗ ಹುಡುಗಿಯರ ತಂಡವು ಭಾಗವಹಿಸಿ ತಾಲೂಕು ಮಟ್ಟದಲ್ಲಿ ರನ್ನರ್ ಅಪ್ ಆಗಿ ನಾಲ್ಕು ಹುಡುಗರು ಮತ್ತು ನಾಲ್ಕು ಹುಡುಗಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಕ್ರೀಡಾ ಸಂಚಾಲಕಿಯಾದ ಪೂರ್ಣಿಮಾ ಪಿ. ನಾಯಕ್ ಮತ್ತು ಎಲ್ಲಾ ಉಪನ್ಯಾಸಕರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆಯ ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳ ಕಾರ್ಯವೈಖರಿ ಹಾಗೂ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೈಗಾರಿಕಾ ಘಟಕಕ್ಕೆ ಭೇಟಿಯನ್ನು ಆಯೋಜಿಸಲಾಗಿತ್ತು. ಶಾಲಾ ಕಾಲೇಜಿನ ಶಿಕ್ಷಕರು ಮತ್ತು ಉಪನ್ಯಾಸಕರ ನೇತೃತ್ವದಲ್ಲಿ ವಿದ್ಯಾರ್ಥಿಗಳು “ನವದುರ್ಗ ಆಹಾರ ಉತ್ಪನ್ನಗಳ ಖಾಸಗಿ ನಿಯಮಿತ ಸಂಸ್ಥೆ “ಪಡುಬಿದ್ರಿ, ಇಲ್ಲಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕೆಯಲ್ಲಿ ನಡೆಯುವ ವಿವಿಧ ಹಂತಗಳ ಉತ್ಪಾದನಾ ಪ್ರಕ್ರಿಯೆ, ಯಂತ್ರೋಪಕರಣಗಳ ಬಳಕೆ, ಕಾರ್ಮಿಕರ ಕಾರ್ಯವಿಧಾನ, ಸುರಕ್ಷತಾ ಕ್ರಮಗಳು ಹಾಗೂ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಯ ಕುರಿತು ಅಧಿಕಾರಿಗಳು ವಿವರಿಸಿದರು. ವಿದ್ಯಾರ್ಥಿಗಳು ವಿವಿಧ ಯಂತ್ರೋಪಕರಣಗಳ ಕಾರ್ಯನಿರ್ವಹಣೆಯನ್ನು ವೀಕ್ಷಿಸಿ, ತಮ್ಮಲ್ಲಿದ್ದ ಸಂದೇಹಗಳನ್ನು ಕೇಳಿ ಪರಿಹರಿಸಿಕೊಂಡರು. ಈ ಭೇಟಿಯು ವಿದ್ಯಾರ್ಥಿಗಳಿಗೆ ಪಠ್ಯ ಜ್ಞಾನದ ಜೊತೆಗೆ ಪ್ರಾಯೋಗಿಕ ಅನುಭವವನ್ನು ನೀಡಿತು. ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ವಿಶ್ವವಿನಾಯಕ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕ ಹರೀಶ್ ಮರವಂತೆ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಓಣಂ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲಾಯಿತು. “ಸಂಸ್ಕೃತಿ ಮತ್ತು ಸಂಪ್ರದಾಯಗಳ ಸಂಗಮ” ಎಂಬ ಆಶಯದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮವು ಕೇರಳದ ಸುಸಂಸ್ಕೃತ ಪರಂಪರೆ ಹಾಗೂ ಭಾರತೀಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಕಣ್ಣಿಗೆ ಕಟ್ಟುವಂತೆ ಅನಾವರಣಗೊಳಿಸಿತು. ಹೂವುಗಳಿಂದ ಸುಂದರವಾಗಿ ಅಲಂಕರಿಸಲಾಗಿದ್ದ ಹೂವಿನ ರಂಗೋಲಿ ಮುಂದೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಹಬ್ಬಗಳು ಕೇವಲ ಸಂಭ್ರಮದ ಕ್ಷಣಗಳಷ್ಟೇ ಅಲ್ಲ; ಅವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುವ ಸೇತುವೆಗಳು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಇಂತಹ ಆಚರಣೆಗಳು ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸುತ್ತವೆ” ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳ ಸಾಂಸ್ಕೃತಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೆಂಚಿನ ಕಾರ್ಖಾನೆ ಕಾರ್ಮಿಕರೊಬ್ಬರು ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಗುಲ್ವಾಡಿ ಶಾಲೆಯ ಬಳಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ. ಮೃತಪಟ್ಟವರು. ಕೋಣಿ ಗ್ರಾಮದ ನಿವಾಸಿ ಉಮೇಶ ಪೂಜಾರಿ (58) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಗುಲ್ವಾಡಿ ಶಾಲೆಯ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಆರೋಪ ಮಾಡಿ ಗುಜರಿ ವ್ಯಾಪಾರಿಯೊಬ್ಬರಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಂಡ್ಮಿ ನಿವಾಸಿ ಗುಜರಿ ವ್ಯಾಪಾರಿ ಜಿ. ಮೊಹಮ್ಮದ್ ದೂರುದಾರರು. ಅವರಿಗೆ ಸಚಿನ್ ಕರೆ ಮಾಡಿ, ಎರಡು ಚೀಲ ಅಕ್ಕಿಯನ್ನು ನಿಮ್ಮ ಮನೆ ಅಂಗಳದಲ್ಲಿ ಇರಿಸಿರುವುದಾಗಿ ತಿಳಿಸಿದ್ದ. ಬಳಿಕ ಮೊಹಮ್ಮದ್ ಅವರು ಮನೆಗೆ ಆಗಮಿಸಿದಾಗ ಸಚಿನ್ ರಿಕ್ಷಾದಲ್ಲಿ ಹಾಗೂ ನಾಗೇಂದ್ರ ಪುತ್ರನ್ ಮತ್ತು ಪ್ರದೀಪ್ ಬೈಕ್‌ನಲ್ಲಿ ಅಲ್ಲಿಗೆ ಬಂದಿದ್ದರು. ಈ ಸಂದರ್ಭ ನಾಗೇಂದ್ರ ಪುತ್ರನ್ ತಾನು ಸಾಮಾಜಿಕ ಕಾರ್ಯಕರ್ತನೆಂದು ಪರಿಚಯಿಸಿಕೊಂಡು ಮನೆಯ ಅಂಗಳದಲ್ಲಿದ್ದ ಅಕ್ಕಿ ಚೀಲಗಳ ದೃಶ್ಯವನ್ನು ಚಿತ್ರೀಕರಿಸಿರುವುದಾಗಿ ಹೇಳಿದ್ದಾನೆ. ಸರಕಾರಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ದೂರು ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಪ್ರಕರಣದಿಂದ ತಪ್ಪಿಸಿಕೊಳ್ಳಬೇಕಾದರೆ 2 ಲಕ್ಷರೂ. ನೀಡುವಂತೆ ಬೇಡಿಕೆ ಇಟ್ಟಿದ್ದು, ಹಣ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದಾಗ ಅವಾಚ್ಯ…

Read More