ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪವರ್ಲಿಫ್ಟರ್ ವಿಶ್ವನಾಥ ಭಾಸ್ಕರ ಗಾಣಿಗ ಅವರು ಹೊಸ ದಾಖಲೆಯೊಂದಿಗೆ ಮತ್ತೆ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಉತ್ತರಪ್ರದೇಶದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಇಕ್ವಿಪ್ಡ್ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್ಷಿಪ್ನಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಈ ಸಾಧನೆ ಮಾಡಿದ್ದಾರೆ. ವಿಶ್ವನಾಥ ಭಾಸ್ಕರ ಗಾಣಿಗ ಅವರು 105 ಕೆ.ಜಿ. ವಿಭಾಗದಲ್ಲಿ ಬೆಂಚ್ಪ್ರೆಸ್ನಲ್ಲಿ 222.5 ಕೆ.ಜಿ. ಭಾರ ಎತ್ತಿ ಕಂಚಿನ ಪದಕ, ಡೆಡ್ಲಿಫ್ಟ್ನಲ್ಲಿ 337.5 ಕೆ.ಜಿ. ಭಾರ ಎತ್ತಿ ನೂತನ ರಾಷ್ಟ್ರೀಯ ದಾಖಲೆ ಮಾಡುವುದರ ಜೊತೆಗೆ, ಚಿನ್ನದ ಪದಕ ಪಡೆದು 105 ಕೆ.ಜಿ. ವಿಭಾಗದಲ್ಲಿ ಒಟ್ಟು 885 ಕೆ.ಜಿ. ಭಾರ ಎತ್ತಿ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಉತ್ತರಪ್ರದೇಶದ ಗಾಜಿಪುರ್ನಲ್ಲಿ ಆಗಸ್ಟ್ 29ರಿಂದ ಸೆಪ್ಟೆಂಬರ್ 3ರ ವರೆಗೆ ಈ ಚಾಂಪಿಯನ್ಷಿಪ್ ನಡೆದಿದೆ. ಇದರೊಂದಿಗೆ ವಿಶ್ವನಾಥ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ 6 ಹಾಗೂ ರಾಷ್ಟ್ರೀಯ ಮಟ್ಟದಲ್ಲಿ 26 ಸೇರಿದಂತೆ ಒಟ್ಟು 32 ಚಿನ್ನದ ಪದಕಗಳನ್ನು ಗಳಿಸಿದಂತಾಗಿದೆ. ಇದರೊಂದಿಗೆ ಅವರು ಎರಡು ರಾಷ್ಟ್ರೀಯ ಮಟ್ಟದ ದಾಖಲೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿಯಿರುವ ಪಿ & ಒ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Bachelor of Prosthetic and Orthotics(BPO) Diploma in Prosthetic and Orthotics(DPO)ವಿದ್ಯಾರ್ಹತೆಯೊಂದಿಗೆ ಸದ್ರಿ ಕ್ಷೇತ್ರದಲ್ಲಿ 2 ರಿಂದ 5 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 17ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್ ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂ.ಸಂ: 0820-2533372, 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವು ಹೆಸ್ಕುತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಟಿ. ರಾಜೀವ್ ಶೆಟ್ಟಿ ಅವರು ಸಂಚಾರ ನಿಯಮ ಪಾಲನೆಯ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿ ನಿವೃತ್ತ ಎಆರ್‌ಟಿಒ ವಿಶ್ವನಾಥ ನಾಯಕ್ ಅವರು ವೀಡಿಯೊ ಪ್ರದರ್ಶನದ ಮೂಲಕ ರಸ್ತೆ ಸುರಕ್ಷತಾ ನಿಯಮಗಳು ಮತ್ತು ಜವಾಬ್ದಾರಿಯುತ ಚಾಲನೆಯ ಕುರಿತು ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ಅಬ್ದುಲ್ ರವೂಫ್ ಸ್ವಾಗತಿಸಿದರು. ಶಿಕ್ಷಕ ರಾಘವೇಂದ್ರ ದೇವಾಡಿಗ ನಿರೂಪಿಸಿದರು. ಸುಮಾರು 125 ವಿದ್ಯಾರ್ಥಿಗಳು ಭಾಗವಹಿಸಿದರು. ಜಗದೀಶ್ ಎಚ್., ವಿಠ್ಠಲ್ ರಾವ್, ಟಿ. ಸುಧಾಕರ್ ಶೆಟ್ಟಿ, ಸಹಾಯಕ ಗವರ್ನರ್ ಚಂದ್ರಶೇಖರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ನಿತ್ಯಾನಂದ ಕೋಟಾರಿ ಹಾಗೂ ಕಲಿಕಾ ಸಹಾಯಕ ಸುರೇಶ್ ಬೇಳೂರು ಉಪಸ್ಥಿತರಿದ್ದರು. ಶಿಕ್ಷಕ ಗೋಪಾಲ್ ಸೋಮಯಾಜಿ ವಂದಿಸಿದರು. ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಜ್ಞಾನವನ್ನು ಪಠ್ಯಪುಸ್ತಕದ ಕಲಿಕೆಗೆ ಸೀಮಿತಗೊಳಿಸದೆ, ಪ್ರಯೋಗ, ಅನುಭವ ಮತ್ತು ಸಂಶೋಧನೆಯ ಮೂಲಕ ಅರ್ಥೈಸುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಉದ್ದೇಶದಿಂದ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗವು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಎರಡನೇ ಆವೃತ್ತಿಯ ‘ಅಭಿಜ್ಞ’ ವಿಜ್ಞಾನ ಕಾರ್ಯಾಗಾರವನ್ನು ಗುರುವಾರ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರು, ವಿಜ್ಞಾನವು ಕುತೂಹಲದಿಂದ ಕಲಿಯಬಹುದಾದ, ಪ್ರಯೋಗದ ಮೂಲಕ ಅರ್ಥಮಾಡಿಕೊಳ್ಳಬಹುದಾದ ಮತ್ತು ನೈಜ ಜೀವನದೊಂದಿಗೆ ಸಂಪರ್ಕ ಹೊಂದಿರುವ ಕ್ಷೇತ್ರವಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ವಿಭಾಗಗಳತ್ತ ಬರಬೇಕು. ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆ ಬಲಗೊಂಡಾಗ ದೇಶದ ಪ್ರಗತಿಗೂ ವೇಗ ದೊರೆಯುತ್ತದೆ. ವಿಜ್ಞಾನ ಬೆಳೆಯಬೇಕು, ದೇಶವೂ ಬೆಳೆಯಬೇಕು ಎಂದರು. ವಿಜ್ಞಾನ ಸೇರಿದಂತೆ ಯಾವುದೇ ಕ್ಷೇತ್ರವನ್ನು ಒತ್ತಾಯ ಅಥವಾ ಸಾಮಾಜಿಕ ಒತ್ತಡದಿಂದ ಆಯ್ಕೆ ಮಾಡಬಾರದು. ಆಸಕ್ತಿ ಮತ್ತು ಉತ್ಸಾಹ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಹೊಸತನವನ್ನು ಹುಡುಕಬಹುದು. ಸ್ಥಾಪಿತ ಮಾದರಿಯನ್ನೇ ಅನುಸರಿಸುತ್ತಾ ಹೋಗಬೇಡಿ. ನಿಮ್ಮದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಕಾರಿ ಸ್ಥಳದಲ್ಲಿ ಮನೆ ನಿರ್ಮಾಣ ಮಾಡಿಕೊಂಡು ವಾಸ್ತವ್ಯವಿದ್ದು ಇಲ್ಲಿಯ ತನಕ ಗ್ರಾಮ ಪಂಚಾಯತುಗಳಿಗೆ ಅರ್ಜಿ ಸಲ್ಲಿಸಿ 11ಬಿ ಪಡೆಯದೆ ಇರುವವರ ಮಾಹಿತಿಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಕಚೇರಿಯಿಂದ ಪ್ರತಿ ಗ್ರಾಮ ಪಂಚಾಯತ್‌ಗಳಿಗೆ ಕಳುಹಿಸಿಸುವಂತೆ ಆದೇಶಿಸಿದ್ದಾರೆ ಎನ್ನುವ ಮಾಹಿತಿ ದೊರೆತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಂಯೋಜಕರಾದ ಕೆ. ವಿಕಾಸ್ ಹೆಗ್ಡೆ ಪತ್ರಿಕೆ ಹೇಳಿಕೆ ಮೂಲಕ ತಿಳಿಸಿರುತ್ತಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳು ಕೇವಲ ಮಾಹಿತಿ ಕೇಳಿದರೆ ತೊಂದರೆಯಿಲ್ಲಾ ಆದರೆ ಗ್ರಾಮ ಪಂಚಾಯತ್ ಗಳ ಮೂಲಕ ಮಾಹಿತಿ ಪಡೆದು 11ಬಿ ಪಡೆಯದೆ ಇರುವ ಕುಟುಂಬಗಳ ಮನೆ ಸಂಖ್ಯೆ, ವಿದ್ಯುತ್ ಸಂಪರ್ಕ, ಪಡಿತರ ಚೀಟಿ ಇತ್ಯಾದಿಗಳನ್ನು ಹಿಂಪಡೆಯಲು ಹಾಗೂ ಹೊಸದಾಗಿ ನೀಡಬಾರದು ಎಂದು ಆದೇಶ ಮಾಡಲು ಹೊರಟರೆ ಇದರಿಂದ ಸರ್ಕಾರಿ ಸ್ಥಳದಲ್ಲಿ ವಾಸ್ತವ್ಯವಿರುವ ಅದೆಷ್ಟೋ ಕುಟುಂಬಗಳು ಬೀದಿಗೆ ಬರುವ ಸಾಧ್ಯತೆಯಿದೆ. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳೂ ಸಹ ಸರ್ಕಾರಿ ಸ್ಥಳದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ ಯಾವುದಾದರೊಂದು ಸನ್ನಿವೇಶವನ್ನು ಕಲಾತ್ಮಕವಾಗಿ ಚಿತ್ರಿಸುತ್ತವೆ. ಅವುಗಳಲ್ಲಿ ಮನುಷ್ಯನನ್ನು ಬದುಕಿನ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಮಾಡಬಲ್ಲ ಮೌಲ್ಯ ಸಂದೇಶಗಳಿದ್ದರೆ ಕಥೆಗಳ ಘನತೆ ಇನ್ನೂ ಹೆಚ್ಚಾಗುತ್ತದೆ. ಪಾರ್ವತಿ ಐತಾಳರ ಕಥೆಗಳು ನೋಟಕ್ಕೆ ಸರಳವಾಗಿ ಕಂಡರೂ ಅವುಗಳಲ್ಲಿ ಬದುಕಿನ ಬಗೆಗಿನ ಗಂಭೀರ ಹಾಗೂ ಸೂಕ್ಷ್ಮ ಒಳನೋಟಗಳಿರುವ ಸತ್ಯವನ್ನು ಅಲ್ಲಗಳೆಯುವ ಹಾಗಿಲ್ಲ’ ಎಂದು ಲೇಖಕ-ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಹೇಳಿದರು. ಅವರು ಇಲ್ಲಿನ ಜನಪ್ರತಿನಿಧಿ ಪತ್ರಿಕಾ ಕಚೇರಿಯಲ್ಲಿ ನಡೆದ ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ‘ಘಾತ’ ಕಥಾಸಂಕಲನದ ಕುರಿತು ಅವರು ಮಾತನಾಡಿದರು. ಲೇಖಕಿ-ಉಪನ್ಯಾಸಕಿ ಸುಮತಿ ಶೆಣೈ ಅವರು ಪಾರ್ವತಿ ಐತಾಳರ ‘ಮಲೆಯಾಳ ಸಾಹಿತ್ಯದ ಆರಂಭ ಕಾಲ’ ಎಂಬ ಇನ್ನೊಂದು ಕೃತಿಯ ಬಗ್ಗೆ ಮಾತನಾಡಿ ‘ ಯಾವುದೇ ಸಾಹಿತ್ಯದ ಬೆಳವಣಿಗೆಗೆ ಓದುಗರು ಇತರ ಭಾಷೆಯ ಕೃತಿಗಳನ್ನು ಓದುವುದು ಮಾತ್ರವಲ್ಲದೆ ಆ ಭಾಷೆಯ ಸಾಹಿತ್ಯವು ನಡೆದು ಬಂದ ದಾರಿ ಹಾಗೂ ಅದರ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಈ ದೃಷ್ಟಿಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದ ಬಾಲಕರ ವಿಭಾಗ ಮತ್ತು ಬಾಲಕಿಯರ ವಿಭಾಗದ ಎರಡೂ ವಿಭಾಗಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದ ಬಾಲಕರ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಗಳಿಸಿವೆ. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ, ಬ್ಯಾರಿಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಇದರ ದೈಹಿಕ ಶಿಕ್ಷಣ ಶಿಕ್ಷಕರಾದ ಮೊಹಮದ್ ಇಲಿಯಾಸ್ ಅವರು ಅತಿಥಿಗಳಾಗಿದ್ದರು. ಉಪನ್ಯಾಸಕರದ ಶ್ರೀಲಕ್ಷ್ಮಿ ಕೆ.ಎಸ್. ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕರಾದ ವೀರಭದ್ರಪ್ಪ ದಾವಣಗೆರೆ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿಯಾದ ಸಾವಿತ್ರಿ ಎಸ್. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಕ್ಕು ಪತ್ರ ಹೋರಾಟ ಸಮಿತಿ ಶಿರೂರು ಇದರ ವತಿಯಿಂದ ಕಳೆದ ಮೂರು ತಲೆಮಾರುಗಳಿಂದ ಶಿರೂರು ಗ್ರಾಮದಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಹಕ್ಕು ಪತ್ರ ಮಂಜೂರು ಮಾಡಬೇಕು ಮತ್ತು ಸಂತ್ರಸ್ಥರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಶನಿವಾರ ಶಿರೂರು ಗ್ರಾಮ ಪಂಚಾಯತ್ ಎದುರಗಡೆ ದರಣಿ ನಡೆಸಿ ಮನವಿ ನೀಡಿದರು. ಶಿರೂರು ಕಾಲೇಜಿನ ಮೈದಾನದಿಂದ ಕಾಲ್ನಡಿಗೆಯ ಮೂಲಕ ಶಿರೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತ್ರತ್ವ ವಹಿಸಿ ಮಾತನಾಡಿದ ಶಿರೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಾಪ್ಸಿ ನೂರ್ ಮಹ್ಮದ್, ಕಳೆದ ಎಂಬತ್ತು ವರ್ಷಗಳಿಂದ ಸರಕಾರಿ ಸ್ಥಳದಲ್ಲಿ ವಾಸವಾಗಿತ್ತು.ಪ್ರತಿ ವರ್ಷ ತೆರಿಗೆ ಪಾವತಿಸುತ್ತಿದ್ದು ಈಗಾಗಲೆ ಹಲವು ಬಾರಿ ಮನವಿ ನೀಡಿದರು ಜಿಲ್ಲಾಡಳಿತ ಸ್ಪಂಧಿಸಿಲ್ಲ.ಒಂದೊಮ್ಮೆ ನಮಗೆ ನ್ಯಾಯ ಸಿಗದಿದ್ದಲ್ಲಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಬ್ರಹತ್ ಪ್ರತಿಭಟನೆ ನಡೆಸಲಾಗುವುದು.ಹೀಗಾಗಿ ಶಿರೂರು ಜನತೆಗೆ ಆದಷ್ಟು ಬೇಗ ನ್ಯಾಯ ನೀಡಬೆಕೆಂದು ಆಗ್ರಹಿಸಿದರು . ಹೋರಾಟ ಸಮಿತಿ ಸದಸ್ಯ ಮನೋಜ್ ಶಿರೂರು ಮಾತನಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಮಾನವರ ಮೂಲವನ್ನು ಕುರಿತು ಭಾರತೀಯರ ದೃಷ್ಟಿಗೂ ಮತ್ತು ಆಧುನಿಕರ ದೃಷ್ಟಿಗೂ ತುಂಬಾ ವ್ಯತ್ಯಾಸಗಳಿವೆ. ಅಧುನಿಕರ ಪ್ರಕಾರ ಸೃಷ್ಟಿಯ ಆದಿಯಲ್ಲಿ ಮಾನವ ಸಂಸ್ಕೃತಿ ಹೀನನಾಗಿದ್ದು, ಕಾಡು ಮನುಷ್ಯನಂತಿದ್ದ ಎಂಬ ಕಲ್ಪನೆಗಳನ್ನು ನೀಡಲಾಗಿದೆ ಹಾಗೂ ಮಂಗನಿಂದ ಮಾನವ ಎಂಬ ಸಿದ್ಧಾಂತಗಳೂ ಇವೆ. ಇವು ನಮ್ಮ ಪೂರ್ವಜರ ಕುರಿತಾಗಿ ಜುಗುಪ್ಸೆ ಹುಟ್ಟಿಸುವಂತಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಭಾರತೀಯ ಪರಂಪರೆ ಹೇಳುವಂತೆ ಕೃತಯುಗದಲ್ಲಿ ದೇವರು ಜಗತ್ತನ್ನು ತುಂಬಾ ಸುಂದರವಾಗಿ ಸೃಷ್ಟಿಸಿದ್ದ. ಅದು ದೇವರು ಸೃಷ್ಟಿಸಿದಂತೆಯೇ ಇದ್ದ ಕಾಲ. ಕೃತಯುಗ ಒಳಿತಿನ ಒಳಿತಾದರೆ ಈಗಿನ ಕಲಿಯುಗ ಕೆಡುಕಿನ ಕೆಡುಕು ಎನ್ನಬಹುದು. ಅಂದು ಜನರು ಪರಿಪೂರ್ಣ ಆರೋಗ್ಯವನ್ನು ಹೊಂದಿದ್ದರು. ಕೃತಯುಗದ ವರ್ಣನೆಯನ್ನು ಕೇಳುವಾಗ ಅದು ಅತಿಶಯೋಕ್ತಿ ಎನಿಸಬಹುದು. ಏಕೆಂದರೆ ನಾವು ಅಂತಹಾ ವಾತಾವರಣವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಿರಿಮಂಜೇಶ್ವರದ ಜನತಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ವತಿಯಿಂದ ‘ಜನತಾ ರಸಬುಗ್ಗೆ 3.0’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 06ರಂದು ಬೆಳಗ್ಗೆ 8.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಡ್ರಾಮ ಜ್ಯುನಿಯರ್ ಖ್ಯಾತಿಯ ಅಸ್ಮಿತ್ ಎ.ಜೆ. ಭಾಗವಹಿಸಲಿದ್ದಾರೆ. ‘ಮುದ್ದು ಕೃಷ್ಣ–ಮುದ್ದು ರಾಧೆ’ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಮಕ್ಕಳಿಗಾಗಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯಲ್ಲಿ 1 ವರ್ಷದಿಂದ 3 ವರ್ಷದೊಳಗಿನ ಮಕ್ಕಳಿಗೆ ಹಾಗೂ 3 ವರ್ಷ ಮೇಲ್ಪಟ್ಟು 6 ವರ್ಷದೊಳಗಿನ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಆಕರ್ಷಕ ಬಹುಮಾನಗಳಿದ್ದು, ಪ್ರಥಮ ಬಹುಮಾನ ₹15,999, ದ್ವಿತೀಯ ₹13,999, ತೃತೀಯ ₹12,999,ಒಟ್ಟು 10 ನಗದು ಬಹುಮಾನಗಳು.ಹಾಗೂ 25 ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತದೆ.ಹಾಗೂ ಮಕ್ಕಳ ಪೋಷಕರಿಗೆ ಅದೃಷ್ಟ ಕೂಪನ್, ಚಿನ್ನ ಮತ್ತು ಬೆಳ್ಳಿಯ ನಾಣ್ಯ, 25 ಸಮಾಧಾನಕರ ಬಹುಮಾನಗಳು ಹಾಗೂ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೂ ಪದಕ ಹಾಗೂ ಪ್ರಮಾಣ…
