Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಸಂಸ್ಕೃತ ಎಲ್ಲಿರುತ್ತದೆಯೋ ಅಲ್ಲಿ ಸಂಸ್ಕೃತಿ ಇರುತ್ತದೆ. ಸಂಸ್ಕೃತ ಜೀವನದ ಮೌಲ್ಯಗಳನ್ನು ಕಲಿಸಿ, ನರನನ್ನು ನಾರಾಯಣನನ್ನಾಗಿ ಹಾಗೂ ಮಾನವನನ್ನು ಮಾಧವನನ್ನಾಗಿ ಮಾರ್ಪಡಿಸುವ ದಿವ್ಯ ಭಾಷೆಯಾಗಿದೆ. ನಮ್ಮ ಬದುಕಿನ ಪರಿಷ್ಕಾರಕ್ಕೆ ಸಂಸ್ಕೃತ ಅತ್ಯಗತ್ಯ” ಎಂದು ಧರ್ಮಭಾರತಿ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯದರ್ಶಿಗಳಾದ ಆದರ್ಶ ಗೋಖಲೆ ಹೇಳಿದರು. ಅವರು ಸುಜ್ಞಾನ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. “ಸಂಸ್ಕೃತ ನಮ್ಮನ್ನೆಲ್ಲ ಒಗ್ಗೂಡಿಸುವ ಭಾಷೆ. ಇಡೀ ಮನುಕುಲದ ಏಳಿಗೆಯನ್ನು ಬಯಸುವ ಉನ್ನತ ಚಿಂತನೆಗಳು ಹಾಗೂ ಬದುಕಿಗೆ ಬೇಕಾದ ಆಚಾರ-ವಿಚಾರಗಳು ಈ ಭಾಷೆಯಲ್ಲಿ ಅಡಗಿವೆ. ವಿದ್ಯಾರ್ಥಿಗಳು ಸಂಸ್ಕೃತವನ್ನು ಕೇವಲ ಅಂಕ ಗಳಿಸುವ ಸುಲಭ ಮಾಧ್ಯಮವೆಂದು ಪರಿಗಣಿಸದೇ, ತಮ್ಮ ಜೀವನದ ಸರ್ವಾಂಗೀಣ ಏಳಿಗೆಗಾಗಿ ಕಲಿಯಬೇಕು. ಈ ಕಾಲೇಜಿನಲ್ಲಿ ಸಂಸ್ಕೃತ ಭಾಷೆಗೆ ನೀಡಲಾಗುತ್ತಿರುವ ಮನ್ನಣೆ ಮತ್ತು ಪ್ರೋತ್ಸಾಹ ಕಂಡು ನಿಜಕ್ಕೂ ಸಂತಸವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ದೇಶದಲ್ಲಿ ಜನ್ ಜೀ ಹೆಸರಿನ ಮೂಲಕ ವಿದ್ಯಾರ್ಥಿ ಜೀವನ ಅತಂತ್ರವಾಗುತ್ತಿದೆ, ತಾವೇನು ಮಾಡುತ್ತಿದ್ದೇವೆ ಎಂಬ ಅರಿವೆ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ ಇದಕ್ಕೆ ಕಾರಣ ನಮ್ಮ ಶಿಕ್ಷಣ ನೀತಿ ಇದರ ಬದಲಾವಣೆ ಅಗತ್ಯವಾಗಿದೆ ಎಂದು ಶಿಕ್ಷಣ ತಜ್ಞ, ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು. ಅವರು ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೋಟತಟ್ಟು ಪರಿಸರದ ನಿವೃತ್ತ ಪ್ರಾಂಶುಪಾಲ ಸೀತಾರಾಮ ಮಧ್ಯಸ್ಥ ಇವರಿಗೆ ಪಂಚವರ್ಣ ಗುರುವಂದನೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಜೀವಲನದ ಮೌಲ್ಯಗಳನ್ನು ಕಲಿಸುವ ಮೌಲ್ಯಾಧಾರಿತ ಶಿಕ್ಷಣದ ಕೊರತೆ ಇಂದು ಎದ್ದು ಕಾಣುತ್ತಿದೆ ಮಕ್ಕಳಲ್ಲಿ ಕೌಶಲ್ಯ ಇಲ್ಲದಿರುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಈ ಹಿನ್ನಲೆಯಲ್ಲಿ ಸರಕಾರ ಅಥವಾ ಇಲಾಖೆ ಗಮನ ಹರಿಸಿದರೆ ಮುಂದಿನ ದಿನಗಳಲ್ಲಿ ನೈಜ ವಿದ್ಯಾಸಂಪತ್ತನ್ನು ಸೃಷ್ಠಿಸಲು ಸಾಧ್ಯ ಎಂದರಲ್ಲದೆ ಪಂಚವರ್ಣ ಪ್ರತಿ ಸಾಮಾಜಿಕ ಹೆಜ್ಜೆ ಇಡೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಸಮೀಪ ರಾ.ಹೆ.66ರಲ್ಲಿ ಲಾರಿಯೊಂದು ರಸ್ತೆ ಬದಿಗೆ ಮಗುಚಿ ಬಿದ್ದಿದ್ದು, ಹೆದ್ದಾರಿ ಬದಿಯಲ್ಲಿ ವಾಸಿಸುತ್ತಿದ್ದ ವಲಸೆ ಕೂಲಿ ಕಾರ್ಮಿಕರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ಶನಿವಾರ ಸಂಭವಿಸಿದೆ. ಬೈಂದೂರಿನಿಂದ ಕುಂದಾಪುರ ಕಡೆಗೆ ಮೀನು ತುಂಬಿಸಿ ಸಾಗುತ್ತಿದ್ದ ಲಾರಿಯೊಂದು ಮುಳ್ಳಿಕಟ್ಟೆ ಜಂಕ್ಷನ್ ಸಮೀಪ ಅದೇ ಮಾರ್ಗದಲ್ಲಿ ಮುಂದೆ ಹೋಗುತ್ತಿದ್ದ ಇನ್ನೊಂದು ಲಾರಿಗೆ ಢಿಕ್ಕಿ ಹೊಡೆದು ವಲಸೆ ಕಾರ್ಮಿಕರು ವಾಸಿಸುತ್ತಿರುವ ಟೆಂಟ್ ಸಮೀಪದಲ್ಲೇ ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದಿದೆ. ಚರಂಡಿ ಇಲ್ಲದಿದ್ದರೆ ಲಾರಿ ನೇರವಾಗಿ ರಾ.ಹೆದ್ದಾರಿ ಸಮೀಪ ಕೂಲಿ ಕಾರ್ಮಿಕರು ವಾಸಿಸುತ್ತಿದ್ದ ಟೆಂಟ್‌ಗಳ ಮೇಲೆ ಬಿದ್ದು, ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಇತ್ತು. ಅಪಘಾತ ನಡೆಯುವ ಕೆಲವೇ ಕ್ಷಣದ ಮುಂಚೆ ರಾ.ಹೆ. ಗುತ್ತಿಗೆ ಪಡೆದುಕೊಂಡಿರುವ ಸಂಸ್ಥೆಯವರು ವಾಹನದಲ್ಲಿ ಇದೇ ಸ್ಥಳದಲ್ಲಿ ಕೂಲಿ ಕಾರ್ಮಿಕರನ್ನು ಇಳಿಸಿ ಹೋಗಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ಕೂಟಿಯೊಂದು ಬಸ್‌ನ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಸಹಸವಾರ ಪುತ್ರ ಗಂಭೀರ ಗಾಯಗೊಂಡ ಘಟನೆ ಶನಿವಾರ ಮಾಬುಕಳ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ಸ್ಕೂಟಿ ಸವಾರ ರವಿರಾಜ್ (49) ಮೃತ ಪಟ್ಟ ವ್ಯಕ್ತಿ. ಸಹಸವಾರನಾಗಿದ್ದ ಅವರ ಪುತ್ರ ಅನಿಲ್ ಗಂಭೀರವಾಗಿ ಗಾಯಗೊಂಡಿದ್ದು ಬ್ರಹ್ಮಾವರದ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿರಾಜ್ ಅವರು ಮೂಲತಃ ಕಿರಿಮಂಜೇಶ್ವರ ನಿವಾಸಿಯಾಗಿದ್ದು ಪ್ರಸ್ತುತ ಮಟಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಪುತ್ರ ಕೋಟದ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿದ್ದು ಶಾಲೆಗೆ ಹೊರಡುವುದು ತಡವಾದ ಕಾರಣ ಸ್ಕೂಟಿಯಲ್ಲಿ ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬ್ರಹ್ಮಾವರದಿಂದ ಕುಂದಾಪುರ ಕಡೆಗೆ ಚಲಾಯಿಸುತ್ತಿದ್ದ ಬಸ್ಸು ಮಾಬುಕಳ ಬಸ್ ನಿಲ್ದಾಣದ ಬಳಿ ಮತ್ತೊಂದು ವಾಹನವನ್ನು ಹಿಂದಿಕ್ಕಿ ಬಳಿಕ ಮುನ್ಸೂಚನೆ ನೀಡದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ನಿಲ್ಲಿಸಿದೆ ಎನ್ನಲಾಗಿದೆ. ಈ ವೇಳೆ ರವಿರಾಜ್ ಅವರು ಚಲಾಯಿಸುತ್ತಿದ್ದ ಸ್ಕೂಟಿ ಬಸ್‌ನ ಹಿಂಭಾಗದ ಬಲಬದಿಗೆ ಢಿಕ್ಕಿ ಹೊಡೆದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಳೆದ ಹದಿನೇಳು ವರ್ಷಗಳಿಂದ ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯುತ್ತಾ ಬ೦ದಿದೆ. ಹಿರಿಯರ ಮಾರ್ಗದರ್ಶನ, ಪ್ರೇರಣೆಯಿಂದ ಸಂಸ್ಥೆಯು ದಿನದಿಂದ ದಿನಕ್ಕೆ ಅಭಿವೃದ್ಧಿ ಪಥದತ್ತ ಸಾಗಿ ಲಾಭ ಗಳಿಸುತ್ತಾ ಬಂದಿದೆ. ಈ ವರ್ಷ 300 ಕೋಟಿ ವ್ಯವಹಾರವನ್ನು ಮಾಡಿ 80 ಲಕ್ಷಕ್ಕೂ ಮಿಕ್ಕಿಲಾಭ ಗಳಿಸಿದೆ ಎ೦ದು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಎಸ್‌. ರಾಜು ಪೂಜಾರಿ ಹೇಳಿದರು. ಅವರು ಭಾನುವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ  ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯು ಸದೃಢವಾಗಿ ನಿಂತಿದೆ. ಸಂಸ್ಥೆಯು 57 ಕೋಟಿ ಠೇವಣಿಯನ್ನು ಹೊಂದಿದೆ. 49 ಕೋಟಿ ಸಾಲ ನೀಡಲಾಗಿದೆ. 1 ಕೋಟಿ 16 ಲಕ್ಷ ಪಾಲು ಬಂಡವಾಳ ಹೊಂದಿದೆ. ವಿವಿಧ ಆರ್ಥಿಕ ಸಂಸ್ಥೆಗಳಲ್ಲಿ 14 ಕೋಟಿ 57 ಲಕ್ಷ ಹೂಡಿಕೆ ಮಾಡಲಾಗಿದೆ. ಸಂಸ್ಥೆಯು 4 ಕೋಟಿಗೂ ಮಿಕ್ಕಿ ನಿಧಿಗಳನ್ನು ಹೊಂದಿದೆ ಎಂದು ತಿಳಿಸಿದ ಎಸ್‌.ರಾಜು ಪೂಜಾರಿಯವರು ಇದೇ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪೋಷಕರ ನಡವಳಿಕೆಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ತಂದೆ ತಾಯಿಯನ್ನು ನೋಡಿ ನಮ್ಮ ಆಚಾರ ವಿಚಾರ, ಸಂಸ್ಕಾರಗಳನ್ನು ಮಗು ಕಲಿಯುತ್ತದೆ. ಹೀಗಾಗಿ ಉತ್ತಮ ಸಂಸ್ಕಾರವನ್ನು ಮಕ್ಕಳಿಗೆ ನೀಡಬೇಕು. ಶಿಶು ಮಂದಿರಗಳು ಮಕ್ಕಳಿಗೆ ಉತ್ತಮ ಸಂಸ್ಕಾರಭರಿತ ಶಿಕ್ಷಣವನ್ನು ನೀಡುವ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಹೇಳಿದರು. ಅವರು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಶನಿವಾರ ಜರಗಿದ 40ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥ ಕಾರ್ಯದರ್ಶಿ ಚಂದ್ರಿಕಾ ಧನ್ಯ ಬೌದ್ಧಿಕ್ ನೀಡಿದರು. ಮುಖ್ಯ ಅತಿಥಿಯಾಗಿದ್ದ ಮಂಗಳಾ ಗಣೇಶ ನಾಯಕ್ ಬಹುಮಾನ ವಿತರಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಶುಭ ಹಾರೈಸಿದರು. ಶಿಶು ಮಂದಿರದ ಸದಸ್ಯರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಗಿ ದೀಪ ಬೆಳಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರ ಮಹತ್ವ ಅವರ ಸೇವೆ ಮತ್ತು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರದ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕೆಲವು ವಿದ್ಯಾರ್ಥಿಗಳು ಶಿಕ್ಷಕರ ಪಾತ್ರವನ್ನು ನಿರ್ವಹಿಸಿ ತರಗತಿಗಳನ್ನು ನಡೆಸುವ ಮೂಲಕ ವಿಶೇಷ ಅನುಭವ ಪಡೆದರು. ಶಿಕ್ಷಕರಿಗಾಗಿ ವಿವಿಧ ಆಟಗಳು ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋದಿಸುವವರಲ್ಲಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮಾರ್ಗದರ್ಶಕರು ಎಂದು ಹೇಳಿದರು.  ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಕಾಲೇಜಿನ ಪ್ರಾಂಶುಪಾಲರಾದ ಮನೋಜ್ ಕುಮಾರ್ ಆಡಳಿತ ನಿರ್ದೇಶಕರಾದ ಹರೀಶ್ ಮರವಂತೆ, ವಿದ್ಯಾರ್ಥಿಗಳು, ಪೋಷಕರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತಮ್ಮಲ್ಲಿರುವ ಸಂಪನ್ಮೂಲಗಳನ್ನು ಈ ಸಮಾಜಕ್ಕೆ ಧಾರೆ ಎರೆದು ಸಮರ್ಪಿಸಿಕೊಳ್ಳುವ ಸಂಪತ್ ಕುಮಾರ್‌ರಂತಹ ವ್ಯಕ್ತಿಗಳು ಈ ಸಮಾಜದ ಆಸ್ತಿಗಳಾಗಿ ಹೊರೆಹೊಮ್ಮುತಾರೆ. ಇದು ವಿ. ಶೈನ್ ಕೊಚಿಂಗ್ ಸೆಂಟರ್‌ಗಳ ಮೂಲಕ ಒಂದಿಷ್ಟು ಯುವ ಮನಸ್ಸುಗಳಿಗೆ ಉದ್ಯೋಗ ಸೃಷ್ಠಿಯ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಶ್ರೀ ಕೃಷ್ಣ ಪ್ರಸಾದ್ ಪೌಂಡೇಶನ್‌ನ ಪ್ರಾಯೋಜಕತ್ವದಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ನೇತೃತ್ವದಲ್ಲಿ ರಾಜ್ಯ ಸರ್ಕಾರದಿಂದ ಸರಿಸುಮಾರು 15,000 ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕ, ದೈಹಿಕ ಶಿಕ್ಷಕ ಮತ್ತು ಕಂಪ್ಯೂಟರ್ ಶಿಕ್ಷಕರ ಹುದ್ದೆಗಳನ್ನು ಆಹ್ವಾನಿಸಿದ್ದು , ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಪೂರ್ವಭಾವಿಯಾಗಿ ಉಚಿತ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ ಸರಕಾರಿ ಇಲಾಖೆಯಲ್ಲಿ ಅತಿ ಹೆಚ್ಚು ಉತ್ತರ ಕರ್ನಾಟಕದ ಜನ ಆಯ್ಕೆಗೊಳ್ಳುವ ಇಂದಿನ ಕಾಲಘಟ್ಟದಲ್ಲಿ ನಮ್ಮ ಅವಿಭಜಿತ ಜಿಲ್ಲೆಗಳ ಉದ್ಯೋಗಾಂಶಿಗಳಿಗೆ ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಅವರು ಭಾಗವಹಿಸಿದ್ದರು. ಕಡುಬಡತನದಲ್ಲಿ ಹುಟ್ಟಿ ತಾನು ಅಕ್ಷರವನ್ನು ಕಲಿಯದಿದ್ದರೂ ತನ್ನೂರಿನ ಮಕ್ಕಳು ಅದರಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ತನ್ನೂರಿನಲ್ಲಿ ಒಂದು ಶಾಲೆಯನ್ನು ತೆರೆದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಹರೇಕಳ ಹಾಜಬ್ಬರವರನ್ನು ಗುರುದೇವೋಭವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾನು ಆ ಸಂದರ್ಭದಲ್ಲಿ ಎದುರಿಸಿದ ಕಷ್ಟಗಳು ಹಾಗೂ ತನ್ನೂರಿನ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪಡುತ್ತಿದ್ದ ಕಷ್ಟವನ್ನು ನೋಡಲಾರದೆ ನಾನು ವಿದ್ಯಾ ಸಂಸ್ಥೆಯನ್ನು ತೆರೆದಿರುವುದಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ತನಗೆ ಸಹಾಯ ಹಸ್ತವನ್ನು ಚಾಚಿದ ಎಲ್ಲರನ್ನು ಸ್ಮರಿಸಿಕೊಂಡರು. ಹಾಗೂ ಇಂದು ಇಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಿಂದ ಗೌರವಿಸಲ್ಪಡುತ್ತಿರುವುದು ನನ್ನ ಸೌಭಾಗ್ಯವೆಂದು ತಿಳಿಸಿದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದ ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಶಿಕ್ಷಣಕ್ಕಾಗಿ ತನ್ನ ಜೀವನವನ್ನೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ. ಸಮಾಜದಲ್ಲಿ ಉತ್ತಮ ವಾತಾವರಣ ಸೃಷ್ಠಿಸಲು ಶಿಕ್ಷಕರು ವಹಿಸುವ ಪಾತ್ರ ಅತ್ಯಮುಲ್ಯವಾದದ್ದು. ತಮ್ಮ ಜೀವನದುದ್ದಕ್ಕೂ ಪ್ರತಿಯೊಬ್ಬರಿಗೂ ಶಿಕ್ಷಣದ ಅರಿವನ್ನು ಮೂಡಿಸಿ ಜ್ಞಾನಾರ್ಜನೆಯನ್ನು ಎರಕ ಹೊಯ್ಯುವ ಶಿಕ್ಷಕರುಗಳು ಮಕ್ಕಳ ಪಾಲಿಗೆ ಆ ದೇವರು ಕೊಟ್ಟ ವರ. ಇಂತಹ ಶಿಕ್ಷಕರಿಗೆ ಗೌರವ ಸೂಚಿಸಲು ಶಿಕ್ಷಕರ ದಿನವನ್ನು ಆಚರಿಸಲಾಗುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ, ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಹಾಗೂ ಗೀತಾನಂದ ಫೌಂಡೇಶನ್ ರಿ. ಕೋಟ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ,…

Read More