Author: ನ್ಯೂಸ್ ಬ್ಯೂರೋ

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಧಾರ್ಮಿಕ ಮತ್ತು ಸಾಮಾಜಿಕ ಸೌಹಾರ್ದತೆಯ ಪ್ರತೀಕವಾಗಿರುವ ಸಾರ್ವಜನಿಕ ಉತ್ಸವಗಳು ಜನಮನದಲ್ಲಿ ಭಕ್ತಿಭಾವದ ಜೊತೆಗೆ ಐಕ್ಯತೆಯನ್ನು ಮೂಡಿಸುತ್ತವೆ ಎಂದು ಯು. ಬಿ. ಶೆಟ್ಟಿ ಅಭಿಪ್ರಾಯಪಟ್ಟರು. ​ಅವರು ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ದೇವಸ್ಥಾನದ ಸನ್ನಿಧಿಯಲ್ಲಿ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಶಿಸ್ತಿನಿಂದ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂದೇಶ್ ಭಟ್, ಖ್ಯಾತ ಪ್ರಶ್ನಾ ಚಿಂತಕರು ಹಾಗೂ ದೈವಜ್ಞರಾದ ವಿಷ್ಣು ಪ್ರಸಾದ್ ನಂಬೂದರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾರಾಯಣ ಖಾರ್ವಿ, ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ನಾರಾಯಣ ಹೆಗ್ಡೆ, ದಿವಾಕರ ಶೆಟ್ಟಿ, ನಿತಿನ್ ಶೆಟ್ಟಿ, ಅನಿಲ್ ಡಿ., ಪುರುಷೋತ್ತಮದಾಸ್, ಓಂಕಾರ್, ಗೋಪಾಲ, ರಂಜಿತ್ ಶೆಟ್ಟಿ, ಪ್ರಭಾಕರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೆಸಿಐ ಕುಂದಾಪುರ ಸಿಟಿ ಆಯೋಜಿಸಿದ ಜೆಸಿಐ ಸಪ್ತಾಹದ ಉದ್ಘಾಟನೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ವಿದ್ಯಾದೀವಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕುಂದಾಪುರದ ಪೊಲೀಸ್ ವೃತ್ತನಿರೀಕ್ಷಕ ಜಯರಾಮ್ ಡಿ. ಗೌಡ, ಲಯನ್ ಜಿಲ್ಲೆ 317 ಸಿಯ ಪ್ರಥಮ ಉಪ ಗವರ್ನರ್ ಹರಿಪ್ರಸಾದ್ ರೈ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭ ಉಪ-ಪ್ರಾಂಶುಪಾಲ ಡಾ. ಚೇತನ್‌ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕ ರಕ್ಷಿತ್‌ ರಾವ್‌ ಗುಜ್ಜಾಡಿ, ಜೆಸಿಐ ಸಪ್ತಾಹದ ಸಂಚಾಲಕ ರಾಘವೇಂದ್ರ ಕುಲಾಲ್‌, ನಿಕಟಪೂರ್ವ ಅಧ್ಯಕ್ಷ ಯುಸೂಫ್ ಸಲೀಮ್‌, ಜೆಸಿಐನ ಪದಾಧಿಕಾರಿಗಳಾದ ನವೀನ್ ಸಂಭ್ರಮ್, ದೀಪಾ ಉಪಸ್ಥಿತರಿದ್ದರು. ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಕಿರಣ್ ದೇವಾಡಿಗ ಸ್ವಾಗತಿಸಿ, ಹುಸೇನ್‌ ಹೈಕಾಡಿ ಪ್ರಸ್ತಾವಿಸಿದರು. ಕಾಲೇಜಿನ ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ವಂದಿಸಿ, ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ), ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೌತಚಿಕಿತ್ಸೆಯ ದಿನದ ಅಂಗವಾಗಿ ಬ್ರಹ್ಮಾವರದ ರುಡ್ ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು DLO ಮತ್ತು KaBHI ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ. ಲತಾ ನಾಯಕ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಪಾರ್ಶ್ವವಾಯು ತಡೆಗಟ್ಟುವಿಕೆ, ಆರಂಭಿಕ ರೋಗನಿರ್ಣಯ ಮತ್ತು ಸಕಾಲಿಕ ಚಿಕಿತ್ಸೆಯ ಮಹತ್ವದ ಕುರಿತು ಮಾತನಾಡಿದರು. ಅಲ್ಲದೆ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಭೌತಚಿಕಿತ್ಸಕರ ಪಾತ್ರವನ್ನು ಶ್ಲಾಘಿಸಿದರು.ನಂತರ ಕಭೀ ಕಾರ್ಯಕ್ರಮ ದ ಕುರಿತು ಹಾಗೂ ಪಾರ್ಶ್ವವಾಯು (ಸ್ಟ್ರೋಕ್) ತಡೆಗಟ್ಟುವಿಕೆ ಮತ್ತು ಹೃದಯರಕ್ತನಾಳದ ಆರೋಗ್ಯದ ಕುರಿತು ಸಾರ್ವಜನಿಕ ಜಾಗೃತಿ ಅಧಿವೇಶನ ನಡೆಯಿತು. ಈ ಅಧಿವೇಶನದಲ್ಲಿ ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆ, ನಿರ್ವಹಣೆ ಮತ್ತು ಪುನರ್ವಸತಿಯಲ್ಲಿ ಭೌತಚಿಕಿತ್ಸಕರ ಮಹತ್ವದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲು ಸರಕಾರವು ಮಹತ್ವಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸುವುದರೊಂದಿಗೆ ಆ ಮೂಲಕ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು. ಅವರು ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಪ್ರಜಾಸೇವಾ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸೆಪ್ಟೆಂಬರ್ 5 ರಂದು ವಿಜಯನಗರ ಜಿಲ್ಲೆಯಲ್ಲಿ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ ನೀಡಿದ್ದು, ರಾಜ್ಯದಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮ ಆಯೋಜಿಸಲು ನಿರ್ಧಾರಿಸಲಾಗಿತ್ತು. ಆದರೆ ಉಡುಪಿಯಲ್ಲಿ ಆ ದಿನದಂದು ಜಿಲ್ಲೆಯ ಜನತೆಯ ಅತೀ ದೊಡ್ಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕರಾಟೆ ಸ್ಪರ್ಧೆಯು ಬುಧವಾರ ಕಾರ್ಕಳದ ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಅತ್ಯಂತ ಯಶಸ್ವಿಯಾಗಿ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಕಳದ ಟಿ.ಪಿ.ಇ.ಒ ಹಾಗೂ ಡಿ.ಪಿ.ಇ.ಒ ಆಗಿರುವ ರವಿಚಂದ್ರ ಕಾರಂತ, ಕಾರ್ಕಳದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವತ್‌ ಎಸ್. ಎಲ್‌, ತಹಶೀಲ್ದಾರರಾದ ಪ್ರದೀಪ್‌ ಕೆ. ಆರ್‌., ಕರ್ನಾಟಕ ರಾಜ್ಯ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಘಟಕದ ಅಧ್ಯಕ್ಷರಾದ ವಿಜಯಕುಮಾರ್‌ ಶೆಟ್ಟಿ, ಕುಸುಮಾಕರ್‌ ಶೆಟ್ಟಿ ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾದ ರೋಹಿತಾಕ್ಷ, ಉಡುಪಿ ಜಿಲ್ಲಾ ಕರಾಟೆ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಾಮನ್‌ ಪಾಲನ್‌ ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನ ಪ್ರಾಂಶುಪಾಲೆ ಅಕ್ಷತಾ ಶೆಣೈ ಉಪಸ್ಥಿತರಿದ್ದರು. ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿರುವ ಸುಮಾರು 200ಕ್ಕೂ ಹೆಚ್ಚು ಬಾಲಕ ಬಾಲಕಿಯರು ಕರಾಟೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ರಿಯೇಟಿವ್ ಕಾಲೇಜು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಕರಾಟೆ  ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ  ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡು ಇತಿಹಾಸ ಸೃಷ್ಟಿಸಿದ್ದಾರೆ. 17ರ ವಯೋಮಾನದ ಹುಡುಗರ -58ಕೆಜಿ ವಿಭಾಗದಲ್ಲಿ ಸಾಯಿನಾಥ್ ಆಚಾರ್ಯ, -78 ಕೆಜಿ ವಿಭಾಗದಲ್ಲಿ ಪ್ರೀತಮ್ ಹಾಗೂ 14ರ ವಯೋಮಾನದ ಬಾಲಕರ -60 ಕೆಜಿ ವಿಭಾಗದಲ್ಲಿ ಸಾಕ್ಷಿತ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿಕೊಂಡರು. 17ರ ವಯೋಮಾನದ ಹುಡುಗರ-54 ಕೆಜಿ ವಿಭಾಗದಲ್ಲಿ ರಜತ್ ಆರ್ ಮತ್ತು 14ರ ವಯೋಮಾನದ ಹುಡುಗರ +60ಕೆಜಿ ವಿಭಾಗದಲ್ಲಿ ಆಶೀಷ್ ಹಾಗೂ -35 ಕೆಜಿ ವಿಭಾಗದಲ್ಲಿ ಸರ್ಮಥ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕ ಪಡೆದರು. ಅನುಭವಿ ಮತ್ತು ಪ್ರಭಾವಿ ತರಬೇತುದಾರರ ಮೂಲಕ ನಿತ್ಯದ ತರಬೇತಿ ತರಗತಿಗಳು, ಕಟ್ಟುನಿಟ್ಟಿನ ಫಿಟ್ನೆಸ್ ತಂತ್ರಗಳು, ಸ್ಪರ್ಧಾಳುಗಳ ನಿಯಮಿತ ಮೌಲ್ಯಮಾಪನಗಳು, ಸತ್ವಯುತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾನೂನನ್ನು ದುರುಪಯೋಗ ಮಾಡಿಕೊಂಡು ಅಮಾಯಕ ಆಟೋ ಚಾಲಕರೋರ್ವನನ್ನು ಕೆಂಪು ಕಲ್ಲು ಕಳ್ಳತನದ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿದ್ದ ಗಂಗೊಳ್ಳಿ ಠಾಣೆ ಪೊಲೀಸರ ಅಮಾನವೀಯ ಕೃತ್ಯಕ್ಕೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದ್ದು, ಚಾಲಕನನ್ನು ಪ್ರಕರಣದಿಂದ ಸಂಪೂರ್ಣವಾಗಿ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಕುಂದಾಪುರದ ಆಲೂರು ಗ್ರಾಮದ ಆಟೋ ಚಾಲಕ ಶ್ರೀನಿವಾಸ ಪೂಜಾರಿ ಎಂಬವರು ಪೊಲೀಸರ ಅನ್ಯಾಯಕ್ಕೆ ಬಲಿಯಾಗಿ, ಇದೀಗ ನ್ಯಾಯಾಲಯದಿಂದ ನ್ಯಾಯ ಪಡೆದುಕೊಂಡ ವ್ಯಕ್ತಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಆಲೂರು ಗ್ರಾಮದ ನಿವಾಸಿ ಶ್ರೀನಿವಾಸ ಪೂಜಾರಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು. ಅದೇ ಗ್ರಾಮದ ಉದಯ ಶೆಟ್ಟಿ ಎಂಬಾತ ಶ್ರೀನಿವಾಸ ಅವರ ಆಟೋವನ್ನು ಬಾಡಿಗೆಗೆ ಗೊತ್ತುಮಾಡಿಕೊಂಡು ಗಂಗೊಳ್ಳಿ ಪೊಲೀಸ್ ಠಾಣೆಗೆ ತೆರಳಿದ್ದ. ಉದಯ ಶೆಟ್ಟಿ ಆಟೋ ಇಲ್ಲೆ ನಿಲ್ಲಿಸಿ ಸ್ವಲ್ಪ ಹೊತ್ತು ಹೋಗಿ ಬರುತ್ತೇನೆಂದು ಠಾಣೆಯ ಒಳಗೆ ಹೋದ ಬಳಿಕ, ಪೊಲೀಸರು ಹೊರಗಿದ್ದ ಶ್ರೀನಿವಾಸ ಪೂಜಾರಿ ಅವರನ್ನು ಒಳಗೆ ಕರೆದು ಉದಯ ಶೆಟ್ಟಿ ಪರಿಚಯವೆ ಎಂದು ವಿಚಾರಿಸಿದ್ದಾರೆ. ಪರಿಚಯಸ್ಥರು ಎಂದಿದ್ದನ್ನೇ ದುರುಪಯೋಗಪಡಿಸಿಕೊಂಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಕೊಠಡಿ ಕಾಯ್ದಿರಿಸುವುದಾಗಿ ಹೇಳಿ ಕೇರಳದ ಮೂಲದ ಭಕ್ತರಿಗೆ ಮೋಸ ಮಾಡಿದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಕೇರಳದ ಭಕ್ತರೋರ್ವರು ನಕಲಿ ವೆಬ್‌ಸೈಟ್ ನಂಬಿ ಆನ್‌ಲೈನ್‌ನಲ್ಲಿ ಮುಂಗಡ ಕೊಠಡಿ ಕಾಯ್ದುಕೊಳ್ಳಲು 1500 ರೂ. ನೀಡಿದ್ದರು. ಅದರಂತೆ ಸೆ.7 ರಂದು ಕೊಲ್ಲೂರಿಗೆ ಆಗಮಿಸಿದ್ದ ಅವರು ಆ ವಸತಿ ಗೃಹದ ಸಿಬ್ಬಂದಿಯನ್ನು ವಿಚಾರಿಸಿ ರಶೀದಿ ತೋರಿಸಿದಾಗ ಅದು ನಕಲಿ ವೆಬ್‌ಸೈಟ್ ಅನ್ನುವುದು ಬೆಳಕಿಗೆ ಬಂತು. ಮೋಸ ಹೋದ ಭಕ್ತರು ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ಸಂಪರ್ಕಿಸಿ ಕೊಲ್ಲೂರು ಠಾಣೆಗೆ ದೂರು ನೀಡಿದ್ದಾರೆ. ಈ ಹಿಂದೆ ಇದೇ ರೀತಿ ನಕಲಿ ವೆಬ್‌ಸೈಟ್ ಮೂಲಕ ಭಕ್ತರಿಗೆ ಮೋಸ ಮಾಡಿದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಕೊಲ್ಲೂರಿಗೆ ಆಗಮಿಸುವ ಭಕ್ತರು ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸಲುವಾಗಿ ದೇಗುಲದಿಂದ ಮಾಡಿರುವ ವ್ಯವಸ್ಥೆಯನ್ನು ಅನುಸರಿಸಬೇಕೆಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ವಿನಂತಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ಇವರ ವತಿಯಿಂದ ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿದ್ದರು. ಕೋಡಿ ಹಿಂದೂ ರುದ್ರಭೂಮಿ ಸ್ವಚ್ಛಗೊಳಿಸುವ ಮೂಲಕ ಕೃಷ್ಣ ಮಾಸ್ಟರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೋಡಿ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ್ ಮೆಂಡನ್, ಮಾಜಿ ಸದಸ್ಯರಾದ ಅಂಥೋನಿ ನಾಯಕ್, ಅಣ್ಣಪ್ಪ ಕುಂದರ್, ಸ್ಥಳೀಯರಾದ ವಾಮನ್ ಡಿ. ಸಾಲಿಯನ್, ಕೃಷ್ಣ ಪೂಜಾರಿ, ರಾಘವೇಂದ್ರ ಸುವರ್ಣ, ರಾಘವೇಂದ್ರ ಕರ್ಕೇರ, ಜಯಂತ್ ಅಮೀನ್, ವಿಜಯ್ ನಾಯಿರಿ, ಸಂತೋಷ್ ಖಾರ್ವಿ, ಅಶೋಕ್ ತಿಂಗಳಾಯ, ಸುರೇಶ್ ಖಾರ್ವಿ,ಗೀತಾ ಖಾರ್ವಿ, ಯಮುನ ಕುಂದರ್, ಸುದಿನ ಕೋಡಿ, ಸುರೇಶ್ ಖಾರ್ವಿ, ಸುರೇಶ್ ಖಾರ್ವಿ ಕೋಡಿ ತಲೆ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ, ನಾಟಕವಲ್ಲದೆ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಕರಾವಳಿಯ ಬಡಗಿನ ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕಾಳಿಂಗ ನಾವಡ ನೆನಪಿನಲ್ಲಿ ಪ್ರತಿ ವರ್ಷ ಯಕ್ಷಗಾನ ಕ್ಷೇತ್ರದಲ್ಲಿನ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತಿದ್ದು, ಇಪ್ಪತ್ತೈದು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಸಹಿತ ಪ್ರಶಸ್ತಿಯು ಒಳಗೊಂಡಿರುತ್ತದೆ. ಈ ಬಾರಿ 17ನೇ ವರ್ಷದ 2026ರ ಸಾಲಿನ ಕಲಾಕದಂಬ ಕಾಳಿಂಗ ನಾವಡ ಪ್ರಶಸ್ತಿಯನ್ನು ಹಲವಾರು ವರ್ಷಗಳಿಂದ ಯಕ್ಷಗಾನದ ಮದ್ದಲೆಗಾರರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಡಾ. ಶಿವರಾಮ ಕಾರಂತರ ಯಕ್ಷಗಾನ ಬ್ಯಾಲೆಯಲ್ಲಿ ಸತತ 19 ವರ್ಷಗಳ ಕಾಲ ಮದ್ದಲೆಗಾರರಾಗಿ ದೇಶ ವಿದೇಶಗಳಲ್ಲೂ ತಮ್ಮ ಪ್ರತಿಭೆಯನ್ನು ಮೆರೆದ ದೇವದಾಸ ರಾವ್ ಕೂಡಿದಿ ಅವರಿಗೆ ಇದೇ ಬರುವ ಅಕ್ಟೋಬರ್ ತಿಂಗಳ 11ನೇ ತಾರೀಖಿನ ಭಾನುವಾರ ಸಂಜೆ ಬೆಂಗಳೂರಿನ ಬಸವನಗುಡಿಯ ನರಸಿಂಹರಾಜ ಕಾಲೋನಿಯಲ್ಲಿರುವ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ಹಮ್ಮಿಕೊಂಡಿರುವ…

Read More