Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸ್ಫೂರ್ತಿ ಮಾತು ಕಾರ್ಯಕ್ರಮದ 18ನೇ ಸರಣಿಯಲ್ಲಿ “ಜೆನ್ ಜಿ: ಹೊಸ ಭಾರತದ ನವಶಕ್ತಿ” ಎಂಬ ವಿಷಯದ ಮೇಲೆ ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಅವರು ಭಾಗವಹಿಸಿ ಮಾತನಾಡಿದರು. ‘ಇಂದಿನ ಯುವಜನತೆ ಭಾರತೀಯ ಇತಿಹಾಸ ಮತ್ತು ಪರಂಪರೆಯನ್ನು ಮನೋಜ್ಞವಾಗಿ ಅರ್ಥೈಸಿಕೊಳ್ಳಬೇಕು. ಭಾರತೀಯ ನೆಲಮೂಲ ಸಂಸ್ಕೃತಿಯನ್ನು ಜಗತ್ತಿನೆಲ್ಲೆಡೆ ಪಸರಿಸುವ ಕಾರ್ಯಕ್ಕೆ ಮುಂದಾಗಬೇಕು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿಯೆ ತೊಡಗಿ ತಮ್ಮ ಅನನ್ಯ ಭವಿಷ್ಯ ಹಾಳು ಮಾಡಿಕೊಳ್ಳುವ ಬದಲು ಹೊಸ ಹೊಸ ಆವಿಷ್ಕಾರಗಳತ್ತ ಮುಖ ಮಾಡಬೇಕೆಂದು ತಿಳಿಸಿದರು. ಭಾರತದ ಅಸ್ತಿತ್ವ ಮತ್ತು ಅಸ್ಮಿತೆ ಉಳಿಯಬೇಕಾದರೆ ಜೆನ್-ಜಿ ಗಳ ಕೊಡುಗೆ ಅಮೂಲ್ಯ ಎನಿಸಿಕೊಳ್ಳುತ್ತದೆ. ಇಂದಿನ ಜಿನ್-ಜಿ ಗಳು ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ತಾತ್ವಿಕ ಚಿಂತನೆಗಳನ್ನು ಬದುಕಿಗೆ ಅಳವಡಿಸಿಕೊಳ್ಳುವುದರ ಮುಖೇನ ದೇಶದ ಹಿತ ಕಾಪಾಡಬೇಕು. ಭಾರತ ವಿರೋಧಿ ಕಾರ್ಯಗಳಿಂದ ದೂರವಿದ್ದು ದೇಶಕ್ಕೆ ಪೂರಕವಾದ ಕೆಲಸಗಳಲ್ಲಿ ತೊಡಗಬೇಕು. ಈಗಾಗಲೇ ತ್ಯಾಗ, ಬಲಿದಾನಗಳಿಂದ ಸುಭದ್ರವಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಬಡ್ಡಿಯಲ್ಲಿ  ಅಂತಾರಾಷ್ಟ್ರೀಯ ಮಟ್ಟಕ್ಕೆರಿದ ಮಮತಾ ಪೂಜಾರಿಯವರ ಸಾಧನೆಯ ದಾರಿಯನ್ನು ನೀವುಗಳು ಪ್ರೇರಣೆಯಾಗಿ ಪಡೆದು ಸಾಧನೆಯ ಮಜಲುಗಳನ್ನು ಏರಿ ಎಂದು ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಡುಪಿ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹೇಳಿದರು. ಅವರು ಗುರುವಾರ ಕೆ.ಪಿ.ಎಸ್ ಮಣೂರು ಪಡುಕರೆ ಶಾಲಾ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆ.ಪಿ.ಎಸ್) ಮಣೂರು ಪಡುಕರೆ ಸಾರಥ್ಯದಲ್ಲಿ 14 ಮತ್ತು 17 ರ ವಯೋಮಾನದ ಬಾಲಕ-ಬಾಲಕಿಯರಿಗಾಗಿ ಹಮ್ಮಿಕೊಳ್ಳಲಾದ ಬ್ರಹ್ಮಾವರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕಬಡ್ಡಿಯಲ್ಲಿ ನಿರಂತರ ತರಬೇತಿ ಪರಿಶ್ರಮ ಅಗತ್ಯ ,ಅರ್ಹತೆ ಪ್ರತಿಯೊರ್ವರಲ್ಲೂ ಇರುತ್ತದೆ ಆದರೆ ಅದನ್ನು ಸದ್ಭಳಕೆ ಮಾಡಿಕೊಳ್ಳುವ ವಿಧಾನವನ್ನು ನೀವುಗಳು ತರಬೇತುದಾರರ ಮೂಲಕ ಅನುಷ್ಠಾನಗೊಳಿಸಿಕೊಳ್ಳಿ ಎಂದರು. ಕೋಟ ಮಣೂರು ​ಗೀತಾನಂದ ಫೌಂಡೇಶನ್ ನಿರ್ದೇಶಕಿ ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್ ಅವರು ದೀಪ ಬೆಳಗಿಸಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಇದೇ ವೇಳೆ ಕ್ರೀಡಾಸ್ಪೂರ್ತಿ ಪಾರಿವಾಳವನ್ನು ಹಾರಿಬಿಡುವ ಮೂಲಕ ಅಧೀಕೃತವಾಗಿ ಚಾಲನೆ ನೀಡದ ರಾಜೇಂದ್ರ ಸುವರ್ಣ ಕ್ರೀಡಾಳುಗಳ ಕೈಕುಲುಕಿ ಶುಭಹಾರೈಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಮತ್ತು ಹಳೆ ವಿದ್ಯಾರ್ಥಿ ಸಂಘ ಗುಜ್ಜಾಡಿ ಇವರ ಆಶ್ರಯದಲ್ಲಿ “ಶ್ರೀ ಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ಪೂರ್ವ ಪ್ರಾಥಮಿಕ ಮಕ್ಕಳಿಗಾಗಿ “ಮುದ್ದು ಕೃಷ್ಣ ಮುದ್ದು ರಾಧೆ” ಸ್ಪರ್ಧೆ ಶಾಲೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ನಾರಾಯಣ ಆಚಾರ್ಯ ಗುಜ್ಜಾಡಿ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಶಾಲಾ ಮುಖ್ಯೋಪಾಧ್ಯಾಯ ಗಂಗಾಧರ ಬಂಟ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಎ.ಆರ್.ವಲಿವುಲ್ಲಾ. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಘವೇಂದ್ರ ಡಿ., ಎಸ್.ಡಿ.ಎಂ.ಸಿ ಸದಸ್ಯೆ ಕವಿತಾ ಸೀತಾರಾಮ ಗಾಣಿಗ ಉಪಸ್ಥಿತರಿದ್ದರು. ನಯನ ಮೇಸ್ತ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಸಂಸ್ಥಾಪಕರಾದ ಡಾ. ಎ. ಎಸ್. ಭಂಡಾರ್ಕರ್ ಅವರ ಪುತ್ರಿ ಮಹಾಮಾಯಾ ಭಂಡಾರ್ಕರ್ ಅವರು ತಮ್ಮ ತಾಯಿ ದಿವಂಗತ ಸುಲೋಚನಾಬಾಯಿ ಭಂಡಾರ್ಕರ್ ಅವರ ಜನ್ಮದಿನದ ಸ್ಮರಣಾರ್ಥ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಾಗಿ ವಿಶೇಷ ಭೋಜನ ಕೂಟವನ್ನು ಆಯೋಜಿಸಿದರು. ಸುಲೋಚನಾಬಾಯಿ ಭಂಡಾರ್ಕರ್ ಅವರ ಸ್ಮರಣೆ ಹಾಗೂ ಗೌರವಾರ್ಥವಾಗಿ ಆಯೋಜಿಸಲಾದ ಈ ಭೋಜನ ಕೂಟವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಈ ಆತ್ಮೀಯ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ಮಹಾಮಾಯಾ ಭಂಡಾರ್ಕರ್ ಅವರ ಉದಾರ ಮನೋಭಾವ ಹಾಗೂ ಸಂಸ್ಥೆಯ ಮೇಲಿನ ನಿರಂತರ ಕಾಳಜಿ ಮತ್ತು ಬೆಂಬಲಕ್ಕೆ ಭಂಡಾರ್ಕಾರ್ಸ್ ಕಾಲೇಜು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕದ ಯುವಜನರಿಗೆ ಉದ್ಯೋಗ ಮತ್ತು ವೃತ್ತಿ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಡೆಯುತ್ತಿರುವ ಪ್ರಾದೇಶಿಕ ಪ್ರಮುಖ ಕಾರ್ಯಕ್ರಮವಾದ ಜಾಬ್ಸ್ ಎಕ್ಸ್ಪ್ರೆಸ್ 2026, ಸೆಪ್ಟೆಂಬರ್ 17 ಮತ್ತು 18, 2026ರಂದು ಕುಂದಾಪುರದ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)ಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 35ಕ್ಕೂ ಅಧಿಕ ಪ್ರಮುಖ ಕಂಪನಿಗಳು ಭಾಗವಹಿಸಲಿದ್ದು, 5,000ಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಇದರ ಮೂಲಕ ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು, ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಿ ವೃತ್ತಿ ಅವಕಾಶಗಳನ್ನು ಪಡೆಯಲು ವೇದಿಕೆ ಕಲ್ಪಿಸಲಾಗುತ್ತಿದೆ. ನುವಿನ್ ಗ್ಲೋಬಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ (Nuhvin Global Services Pvt. Ltd.), 24/7.ai, ಟಾಟಾ ವಿಸ್ಟ್ರಾನ್ (TATA Wistron), ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (Tata Electronics Pvt. Ltd.), ವಿಪ್ರೋ ಕವಾಸಕಿ ಪ್ರಿಸಿಷನ್ ಮೆಕ್ ಲಿಮಿಟೆಡ್ (Wipro Kawasaki Precision Mech Ltd.), ವಿನ್‌ಮ್ಯಾನ್ ಸಾಫ್ಟ್‌ವೇರ್ (Winman Software), ಎಮ್ಮ್ವೀ (EMMVEE), ಫ್ಲಿಪ್‌ಕಾರ್ಟ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು ಹೊಂದುತ್ತದೆ. ಹಾಗಾಗಿ ಸೂರ್ಯ, ಚಂದ್ರ ಮತ್ತು ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಬುಧವಾರ ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನದಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಇಂದು ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಪರ್ಕ ಇಲ್ಲದ ನೀರನ್ನೇ ನಾವು ಬಳಸುತ್ತಿದ್ದೇವೆ. ಸೂರ್ಯನ ಬೆಳಕು ಬೀಳದಂತೆ ಸಿಮೆಂಟು ಅಥವಾ ಪ್ಲಾಸ್ಟಿಕ್ ಟ್ಯಾಂಕುಗಳಲ್ಲಿ ನೀರನ್ನು ಸಂಗ್ರಹಿಸಿ, ಪ್ಲಾಸ್ಟಿಕ್ ಪೈಪುಗಳಲ್ಲಿ ತಂದು ನೀರನ್ನು ಬಳಸುತ್ತಿದ್ದೇವೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.10: ತಾಲೂಕಿನ ಶಿರೂರು ಕೆಳಪೇಟೆ ಸಮೀಪ ಜರುಗಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಶಿರೂರು ನಿವಾಸಿ ನಾಗೇಂದ್ರ ಮಹಾಲೆ (45) ಮೃತ ದುರ್ದೈವಿ. ಸರಣಿ ಅಪಘಾತದಲ್ಲಿ ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂಗೊಂಡಿದೆ. ಶಿರೂರು ಗ್ರೀನ್ ವ್ಯಾಲಿ ಶಾಲೆಯ ಸಮೀಪದ ಬೆಳಿಗ್ಗೆ ಅಪಘಾತಗೊಂಡು ನಿಂತಿದ್ದ ವಾಹನವನ್ನು ಮೇಲೆತ್ತುವ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಬೈಂದೂರು ಕಡೆಯಿಂದ ಶಿರೂರು ಕಡೆಗೆ ತೆರಳುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಮುಂದೆಯೇ ಇದ್ದ ಬೈಕ್, ಹೈವೆ ಪೆಟ್ರೋಲ್‌ ವಾಹನ ಸೇರಿದಂತೆ ಒಟ್ಟು ನಾಲ್ಕು ಬೈಕುಗಳಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಓರ್ವ ಬೈಕ್ ಸವಾರ ನಾಗೇಂದ್ರ ಮಹಾಲೆ ಅವರ ತಲೆ ಭಾಗಕ್ಕೆ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನಿತರ ಬೈಕ್ ಸವಾರರು ಹಾಗೂ ಹೈವೆ ಪಟ್ರೋಲ್ ವಾಹನದಲ್ಲಿದ್ದ ಪೊಲೀಸರು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ…

Read More

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಧಾರ್ಮಿಕ ಮತ್ತು ಸಾಮಾಜಿಕ ಸೌಹಾರ್ದತೆಯ ಪ್ರತೀಕವಾಗಿರುವ ಸಾರ್ವಜನಿಕ ಉತ್ಸವಗಳು ಜನಮನದಲ್ಲಿ ಭಕ್ತಿಭಾವದ ಜೊತೆಗೆ ಐಕ್ಯತೆಯನ್ನು ಮೂಡಿಸುತ್ತವೆ ಎಂದು ಯು. ಬಿ. ಶೆಟ್ಟಿ ಅಭಿಪ್ರಾಯಪಟ್ಟರು. ​ಅವರು ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ದೇವಸ್ಥಾನದ ಸನ್ನಿಧಿಯಲ್ಲಿ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಶಿಸ್ತಿನಿಂದ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂದೇಶ್ ಭಟ್, ಖ್ಯಾತ ಪ್ರಶ್ನಾ ಚಿಂತಕರು ಹಾಗೂ ದೈವಜ್ಞರಾದ ವಿಷ್ಣು ಪ್ರಸಾದ್ ನಂಬೂದರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾರಾಯಣ ಖಾರ್ವಿ, ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ನಾರಾಯಣ ಹೆಗ್ಡೆ, ದಿವಾಕರ ಶೆಟ್ಟಿ, ನಿತಿನ್ ಶೆಟ್ಟಿ, ಅನಿಲ್ ಡಿ., ಪುರುಷೋತ್ತಮದಾಸ್, ಓಂಕಾರ್, ಗೋಪಾಲ, ರಂಜಿತ್ ಶೆಟ್ಟಿ, ಪ್ರಭಾಕರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೆಸಿಐ ಕುಂದಾಪುರ ಸಿಟಿ ಆಯೋಜಿಸಿದ ಜೆಸಿಐ ಸಪ್ತಾಹದ ಉದ್ಘಾಟನೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ವಿದ್ಯಾದೀವಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕುಂದಾಪುರದ ಪೊಲೀಸ್ ವೃತ್ತನಿರೀಕ್ಷಕ ಜಯರಾಮ್ ಡಿ. ಗೌಡ, ಲಯನ್ ಜಿಲ್ಲೆ 317 ಸಿಯ ಪ್ರಥಮ ಉಪ ಗವರ್ನರ್ ಹರಿಪ್ರಸಾದ್ ರೈ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭ ಉಪ-ಪ್ರಾಂಶುಪಾಲ ಡಾ. ಚೇತನ್‌ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕ ರಕ್ಷಿತ್‌ ರಾವ್‌ ಗುಜ್ಜಾಡಿ, ಜೆಸಿಐ ಸಪ್ತಾಹದ ಸಂಚಾಲಕ ರಾಘವೇಂದ್ರ ಕುಲಾಲ್‌, ನಿಕಟಪೂರ್ವ ಅಧ್ಯಕ್ಷ ಯುಸೂಫ್ ಸಲೀಮ್‌, ಜೆಸಿಐನ ಪದಾಧಿಕಾರಿಗಳಾದ ನವೀನ್ ಸಂಭ್ರಮ್, ದೀಪಾ ಉಪಸ್ಥಿತರಿದ್ದರು. ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಕಿರಣ್ ದೇವಾಡಿಗ ಸ್ವಾಗತಿಸಿ, ಹುಸೇನ್‌ ಹೈಕಾಡಿ ಪ್ರಸ್ತಾವಿಸಿದರು. ಕಾಲೇಜಿನ ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ವಂದಿಸಿ, ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ), ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೌತಚಿಕಿತ್ಸೆಯ ದಿನದ ಅಂಗವಾಗಿ ಬ್ರಹ್ಮಾವರದ ರುಡ್ ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು DLO ಮತ್ತು KaBHI ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ. ಲತಾ ನಾಯಕ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಪಾರ್ಶ್ವವಾಯು ತಡೆಗಟ್ಟುವಿಕೆ, ಆರಂಭಿಕ ರೋಗನಿರ್ಣಯ ಮತ್ತು ಸಕಾಲಿಕ ಚಿಕಿತ್ಸೆಯ ಮಹತ್ವದ ಕುರಿತು ಮಾತನಾಡಿದರು. ಅಲ್ಲದೆ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಭೌತಚಿಕಿತ್ಸಕರ ಪಾತ್ರವನ್ನು ಶ್ಲಾಘಿಸಿದರು.ನಂತರ ಕಭೀ ಕಾರ್ಯಕ್ರಮ ದ ಕುರಿತು ಹಾಗೂ ಪಾರ್ಶ್ವವಾಯು (ಸ್ಟ್ರೋಕ್) ತಡೆಗಟ್ಟುವಿಕೆ ಮತ್ತು ಹೃದಯರಕ್ತನಾಳದ ಆರೋಗ್ಯದ ಕುರಿತು ಸಾರ್ವಜನಿಕ ಜಾಗೃತಿ ಅಧಿವೇಶನ ನಡೆಯಿತು. ಈ ಅಧಿವೇಶನದಲ್ಲಿ ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆ, ನಿರ್ವಹಣೆ ಮತ್ತು ಪುನರ್ವಸತಿಯಲ್ಲಿ ಭೌತಚಿಕಿತ್ಸಕರ ಮಹತ್ವದ…

Read More