ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪ್ರತಿಷ್ಟಿತ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಪ್ರಧಾನ ಕಚೇರಿ ವಠಾರದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಮಾನ್ಯ ಅಧ್ಯಕ್ಷರಾದ ಎಸ್. ಶೀನ ಪೂಜಾರಿ ಅವರು ವಹಿಸಿ, ಮಾತನಾಡಿ, ಸಂಘದಿಂದ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿಯನ್ನು ನೀಡುವುದರೊಂದಿಗೆ 2025-26ನೇ ಸಾಲಿನಲ್ಲಿ ಸಂಘವು 105.23 ಕೋಟಿಯಷ್ಟು ಸಾಲ ನೀಡಿ ಸಂಘವು ಗಳಿಸಿದ ಲಾಭ ರೂ.2.53 ಕೋಟಿಯಲ್ಲಿ ವಿವಿಧ ಖಾತೆಗಳಿಗೆ ಹಂಚಿಕೆ ಮಾಡಿದ ಮೇಲೆ ಪಾಲುದಾರ ಸದಸ್ಯರಿಗೆ ಶೇ.17 ಡಿವಿಡೆಂಡನ್ನು ಘೋಷಿಸಿದರು. ಸಂಘವು ವರದಿ ಸಾಲಿನಲ್ಲಿ ಸುಮಾರು 502 ಕೋಟಿಗೂ ಮಿಕ್ಕಿದ ವ್ಯವಹಾರವನ್ನು ನಡೆಸಿದ್ದು ಲಾಭವನ್ನು ಗಳಿಸಲು ಸಂಘದ ನೌಕರರ ಸಾಧ್ಯವಾಗಿರುವುದಕ್ಕೆ ಮತ್ತು ಸದಸ್ಯರ ಸಹಕಾರದಿಂದ ಗಮನಾರ್ಹವಾದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು. ಸುಧಾ ಸಿ. ಶೆಟ್ಟಿ , ಸಂಧ್ಯಾರಾಣಿ ಶೆಟ್ಟಿ ಮತ್ತು ಸುಷ್ಮಿತಾ ಇವರ ಪ್ರಾರ್ಥನೆಯೊಂದಿಗೆ ಸಭೆಯ ಕಲಾಪಗಳು ಪ್ರಾರಂಭವಾಯಿತು. ಮಹಾಸಭೆಯ ನಡವಳಿಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಹಾಗೂ ಸಂಘದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಸ್ತುತ ಆಧುನಿಕ ಕಾಲದ ಆಹಾರ ಕ್ರಮಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಅನಾರೋಗ್ಯಕ್ಕಿಡಾಗುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಹೇಳಿದರು. ಅವರು ಕೋಟ ಗ್ರಾಮಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ತಾಲೂಕು ಪಂಚಾಯತ್ ಬ್ರಹ್ಮಾವರ, ಸಮುದಾಯ ಆರೋಗ್ಯ ಕೇಂದ್ರ ಕೋಟ ಹಾಗೂ ಗ್ರಾಮ ಪಂಚಾಯತ್ ಕೋಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಂಕ್ ಫುಡ್ ಸೇವನೆ ಮನುಕುಲವನ್ನು ಕಂಗೆಡಿಸಿದ್ದು ಇದರಿಂದ ದೇಹದ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಅನುಭವಿಸುತ್ತಾ ಇದ್ದೇವೆ,ಆಗಿನ ಕಾಲದ ಆಹಾರ ಕ್ರಮಗಳು ಮನುಷ್ಯನ ಆರೋಗ್ಯವನ್ನು ಸಮೃದ್ಧಗೊಳಿಸಿದ್ದು ಇಂದಿನ ಪೋಷಣ್ ಮಾಸಾಚರಣೆಯಲ್ಲಿ ಕಂಡುಬರುವ ಸೊಪ್ಪು ತರಕಾರಿಗಳು ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಭಾಗವಾಗಿದೆ ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಪೋಷಣ್ ಮಾಸಾಚರಣೆ ಅರ್ಥಪೂರ್ಣವಾಗಿದೆ ಎಂದರು. ಈ ಸಂದರ್ಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಸಹಭಾಗಿತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕರನಾರಾಯಣದಲ್ಲಿ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ನೆರವೇರಿತು. ರೋಟರಿ ವಲಯ 1ರ ಸಹಾಯಕ ಗವರ್ನರ್ ಜೆ. ಶ್ರೀನಾಥ್ ರಾವ್ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ನ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ತಾಲೂಕು ವೈದ್ಯಾಧಿಕಾರಿ ಡಾ . ಪ್ರೇಮಾನಂದ, ರೋಟರಿ ವಲಯ 1ರ ಮೆಟರ್ನಲ್ ಅಂಡ್ ಚೈಲ್ಡ್ ಹೆಲ್ತ್ ಕೋ ಆರ್ಡಿನೇಟರ್ ಶೇಖರ್ ಎನ್. ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಕಮ್ಯುನಿಟಿ ಸರ್ವಿಸ್ ಚೇರ್ಮನ್ ಶಶಿಧರ ಶೆಟ್ಟಿ ಎಚ್., ಕಾರ್ಯಕ್ರಮದ ಸಂಯೋಜಕರಾದ ಶಂಕರ ಶೆಟ್ಟಿ ಯು., ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಡಾ. ವಿದ್ಯಾ ಅಶೋಕ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ನ ಸದಸ್ಯರಾದ ಸದಾನಂದ ಶೆಟ್ಟಿ ಎನ್., ನಿರಂಜನ್ ಶೆಟ್ಟಿ, ಸುಕುಮಾರ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೇರಳದ ಶ್ರೀಮಂತ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಜೀವನಶೈಲಿಯನ್ನು ಕರ್ನಾಟಕದ ನೆಲದಲ್ಲಿ ಅನಾವರಣಗೊಳಿಸುವ ‘ಆಳ್ವಾಸ್ ಕೇರಳೀಯಂ–2026’ ಕಾರ್ಯಕ್ರಮ ಆಳ್ವಾಸ್ ವಿದ್ಯಾಸಂಸ್ಥೆಯ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಗುರುವಾರ ವೈಭವದಿಂದ ನಡೆಯಿತು. ಕೇರಳದ ಸಾಂಸ್ಕೃತಿಕ ಪರಂಪರೆಯ ವೈವಿಧ್ಯವನ್ನು ಒಂದೇ ವೇದಿಕೆಯಲ್ಲಿ ಕಟ್ಟಿಕೊಟ್ಟ ಭವ್ಯ ಮೆರವಣಿಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು. ಕೇರಳದ ಸಾಂಪ್ರದಾಯಿಕ ವೇಷಭೂಷಣ, ಜನಪದ ಕಲೆ, ಶಾಸ್ತ್ರೀಯ ನೃತ್ಯ, ವಾದ್ಯ ಸಂಗೀತ ಹಾಗೂ ಆಚರಣೆಗಳ ಸೊಬಗನ್ನು ಮೆರವಣಿಗೆಯಲ್ಲಿ ಪ್ರಸ್ತುತಪಡಿಸಲಾಯಿತು. ಮೆರವಣಿಗೆಯಲ್ಲಿ ಕಥಕಳಿ, ಮೋಹಿನಿಯಾಟ್ಟಂ ಮತ್ತು ಮಾವೇಲಿ ಪಾತ್ರಗಳ ಸಂಯೋಜಿತ ಪ್ರದರ್ಶನ ಗಮನ ಸೆಳೆಯಿತು. ಕೇರಳದ ಸಾಂಪ್ರದಾಯಿಕ ವಾದ್ಯ ಪರಂಪರೆಯನ್ನು ಪ್ರತಿಬಿಂಬಿಸುವ ಪಂಚವಾದ್ಯ ಮೆರವಣಿಗೆಗೆ ವಿಶಿಷ್ಟ ಮೆರುಗು ನೀಡಿತು. ಅದರೊಂದಿಗೆ ತಾಲಪೊಲಿ, ಪುಲಿಕಳಿ, ಚೆಂಡೆ, ಬಾಲಕ–ಬಾಲಕಿಯರ ಸಾಂಸ್ಕೃತಿಕ ಸಂಯೋಜಿತ ಪ್ರದರ್ಶನ, ಕಾವಡಿ, ಒಪ್ಪನ, ಕೋಲ್ಕಳಿ, ಕಲರಿ ಮೊದಲಾದ ಕಲಾ ಪ್ರಕಾರಗಳು ಮೆರವಣಿಗೆಯಲ್ಲಿ ಮೂಡಿಬಂದವು. ಕೇರಳದ ಉತ್ತರ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ತೆಯ್ಯಂ ವಿವಿಧ ರೂಪಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ಭಾಷೆಯಲ್ಲಿ ಮಾತನಾಡಿದರು ಅದು ಹೃದಯ ಗೆಲ್ಲುವಂತಿರಬೇಕು. ಮನಸುಗಳನ್ನು ಕಟ್ಟುವಂತಿರಬೇಕು. ಆ ಮುಖೇನ ಮನೆ, ಸಮಾಜ, ದೇಶ ಸ್ವಸ್ಥವಾಗಲು ಭಾಷೆ ಕಾರಣವಾಗುತ್ತದೆ. ಅಂತಹ ಭಾಷೆಯ ಮೂಲಕ ಸಂಸ್ಕೃತಿಯನ್ನು ತಿಳಿಯುವಂತಾಗಬೇಕು ಎಂದು ಸಿದ್ದಾಪುರದ ಜ್ಞಾನಸರಸ್ವತಿ ಪದವಿ-ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಸುಜನ್ ಕುಮಾರ್ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘ ಲಿಂಗ ಕಲ್ಪವೃಕ್ಷ ಇದರ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಆಲಿಸುವಿಕೆ, ಓದುಗಾರಿಕೆ, ಮಾತುಗಾರಿಕೆ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳುವ ಮೂಲಕ ಎಲ್ಲಾ ಭಾಷೆಗಳನ್ನು ಕಲಿತು ಬಳಸಿರಿ ಎಂದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮ ಸಂಯೋಜಕರಾದ ಸ್ವಾತಿ ಜಿ. ರಾವ್, ಪ್ರವೀಣಾ ಎಮ್. ಪೂಜಾರಿ, ಮೇಘಾ ಎಸ್. ಭಟ್, ಸರೋಜಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಿಶಿಕಾ ಅತಿಥಿಗಳನ್ನು ಪರಿಚಯಿಸಿದರು. ಸೈಮಾ ಶೇಖ್ ಸ್ವಾಗತಿಸಿ, ಸಿರಿ ನಿರೂಪಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವಪೀಳಿಗೆಗೆ ಪ್ರಾಚೀನ ಪಾರಂಪರಿಕ ಆಯುರ್ವೇದ ಪದ್ಧತಿ ಹಾಗೂ ನೈಸರ್ಗಿಕ ಗ್ರಾಮ ಜೀವನಶೈಲಿಯನ್ನು ಪರಿಚಯಿಸುವ ಮಹತ್ತರ ಉದ್ದೇಶದೊಂದಿಗೆ, ಕರಾವಳಿ ಕರ್ನಾಟಕದಲ್ಲೇ ಇದೇ ಮೊದಲ ಬಾರಿಗೆ ಚಿತ್ರಕೂಟ ಆಯುರ್ವೇದ ಹಬ್ಬ 2026ರ ಅಕ್ಟೋಬರ್ 4ರ ಭಾನುವಾರ ಆಯೋಜಿಸಲಾಗಿದೆ. ಕುಂದಾಪುರ ತಾಲೂಕಿನ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಈ ಮಹತ್ವದ ಹಬ್ಬದ ಅಧಿಕೃತ ಲೋಗೋ ಅನಾವರಣ ಹಾಗೂ ದಿನಾಂಕ ಘೋಷಣೆ ನೆರವೇರಿತು. ಕಾರ್ಯಕ್ರಮದ ಲೋಗೋ ಅನಾವರಣಗೊಳಿಸಿ ಮಾತನಾಡಿದ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಮುಖ್ಯಸ್ಥ ಡಾ. ರಾಜೇಶ್ ಬಾಯರಿ ಅವರು, “ಕಣ್ಣಿಗೆ ಮೊಬೈಲ್ ಪರದೆಯ ಕೃತಕ ಬೆಳಕು, ನಾಲಿಗೆಗೆ ಜಂಕ್ ಆಹಾರ, ಮನಸ್ಸಿಗೆ ಯಾಂತ್ರಿಕ ಬದುಕಿನ ಒತ್ತಡ- ಇಂದಿನ ಯುವಜನತೆಯನ್ನು ಆತಂಕ, ನಿದ್ರಾಹೀನತೆ ಮತ್ತು ಉದರ ಸಮಸ್ಯೆಗಳು ಸೇರಿದಂತೆ ಸಾಕಷ್ಟು ಜೀವನಶೈಲಿ ಸಮಸ್ಯೆಗಳಿಂದ ಹಿಂಡಿ ಹಿಪ್ಪೆ ಮಾಡುತ್ತಿವೆ. ಈ ಸಂಕಷ್ಟಗಳಿಗೆ ಕೇವಲ ಇಂಗ್ಲಿಷ್ ಹೆಸರುಗಳನ್ನು ಹುಡುಕಿ ಕಂಗಾಲಾಗುವ ಬದಲು, ನಮ್ಮ ನೆಲದ ಆಯುರ್ವೇದ ಜ್ಞಾನ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಹಣವಂತರಿಗಿಂತ ಶುದ್ಧ ನೀರನ್ನು ಸೇವಿಸುವವನೇ ನಿಜವಾದ ಯೋಗವಂತ. ಶುದ್ಧ ಗಾಳಿ ಹಾಗೂ ಶುದ್ಧ ನೀರು ಮನುಷ್ಯನ ಮೂಲಭೂತ ಅವಶ್ಯಕತೆ. ಹಾಗಾಗಿ ಅವು ಸಿಗುವಲ್ಲಿಯೇ ವಾಸ ಮಾಡಬೇಕು. ದುಡ್ಡಿಗಿಂತ ಶುದ್ಧ ನೀರು ಅಗತ್ಯ ಎಂಬುದನ್ನು ಸಮಾಜ ಆಲೋಚಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಕುಡಿಯಲು ಯೋಗ್ಯವಾಗಿರದ ನೀರು ಸಿಗದಿರುವುದು ನಗರ ಜೀವನದ ದೊಡ್ಡ ಅನರ್ಥವಾಗಿದ್ದು, ಯೋಜನಾ ರಹಿತವಾದ ನಗರ ನಿರ್ಮಾಣದಿಂದಾಗಿ ನಗರಗಳು ಕೇವಲ ಮನುಷ್ಯರು ಗುಂಪುಗುಂಪಾಗಿ ಇರುವಂತೆ ಮಾಡಿರುವ ವ್ಯವಸ್ಥೆಗಳಷ್ಟೇ ಆಗಿ ಮಾರ್ಪಟ್ಟಿದೆ. ಹಣದ ಆಸೆಗೆ ನದಿ, ಕೆರೆಗಳನ್ನು ಮುಚ್ಚಿ ನಗರದ ನಿರ್ಮಾಣವನ್ನು ಮಾಡಲಾಗಿದ್ದು, ನಗರಗಳಲ್ಲಿ ಮನುಷ್ಯನ ಮಾಲಿನ್ಯದ ಹರಿವು ಹಾಗೂ ಕಾರ್ಖಾನೆಗಳ ತ್ಯಾಜ್ಯಗಳ ನದಿ ನಿರ್ಮಾಣವಾಗಿದೆ. ಈ ತ್ಯಾಜ್ಯಗಳೆಲ್ಲವೂ ನದಿಯನ್ನು ಸೇರುತ್ತಿದ್ದು, ನೀರಿನ ಪಾತ್ರಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯ ವತಿಯಿಂದ ನಬಾರ್ಡ್ನ ಸಹಯೋಗದಲ್ಲಿ ಗ್ರಾಹಕರಿಗಾಗಿ ಆರ್ಥಿಕ ಅರಿವು ಕಾರ್ಯಕ್ರಮವು ಉಪ್ಪುಂದ ನಾಡದೋಣಿ ಸಭಾಭವನದಲ್ಲಿ ಗುರವಾರ ನಡೆಯಿತು. ಹಿರಿಯ ಕೃಷಿಕರು ಹಾಗೂ ಹೊಸ್ಕೋಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟೇಶ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯು ಈ ಭಾಗದ ರೈತಾಪಿ ಜನರಿಗೆ ನೀಡುತ್ತಿರುವ ಸೇವೆಗಳನ್ನು ಶ್ಲಾಘಿಸಿದರು. ಬ್ಯಾಂಕಿನ ಹಿರಿಯ ಗ್ರಾಹಕರಾದ ಡಾ. ಯು. ವಿಶ್ವೇಶ್ವರ ಮಯ್ಯ ಅವರನ್ನು ಸನ್ಮಾನಿಸಲಾಯಿತು. ಇತ್ತೀಚಿಗಷ್ಟೇ ಅಪಘಾತದಲ್ಲಿ ಮೃತರಾದ ಶ್ರೀನಿಧಿ ನವೋದಯ ಸ್ವಸಹಾಯ ಗುಂಪಿನ ಸದಸ್ಯ ಹರಿಶ್ಚಂದ್ರ ಖಾರ್ವಿ ಅವರ ಕುಟುಂಬಕ್ಕೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ರೂ. ಒಂದು ಲಕ್ಷ ಚೈತನ್ಯ ವಿಮಾ ಪರಿಹಾರ ಮೊತ್ತವನ್ನು ನೀಡಲಾಯಿತು. ಕೆನರಾ ಬ್ಯಾಂಕಿನ ಆರ್ಥಿಕ ಸಾಕ್ಷರತಾ ಕೇಂದ್ರ ಸಿಬ್ಬಂದಿ ಆಶಾಲತಾ ಮಾತನಾಡಿ, ಅನ್ಲೈನ್ ಬ್ಯಾಂಕಿಂಗ್ನಲ್ಲಿ ನಡೆಯುವ ವಂಚನೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ಆರುಣ್ಯ 2026ರ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಬಂಟರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಆವರ್ಸೆ ಸುಧಾಕರ ಶೆಟ್ಟಿ ಕಾರ್ಯಕ್ರಮವನುದ್ದೇಶಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ ನಾಯಕತ್ವ, ಸೃಜನಶೀಲತೆ, ಸಾಮಾಜಿಕ ಜವಾಬ್ದಾರಿ ಮತ್ತು ಆತ್ಮವಿಶ್ವಾಸ ಬೆಳೆಸುವಂತಾಗಲಿ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕರಾದ ಹೆಚ್ ಜಗದೀಶ್ ಕಾರ್ಯಕ್ರಮ ಕುರಿತು ಕಾಲೇಜಿನಲ್ಲಿ ನಡೆಯುತ್ತಿರುವ ಮ್ಯಾನೇಜ್ಮೆಂಟ್ ಫೆಸ್ಟ್ನಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲು ಉತ್ತಮ ಅವಕಾಶ ದೊರೆಯುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಇದನ್ನು ಕೇವಲ ಮನರಂಜನಾ ಕಾರ್ಯಕ್ರಮ ಅಂತ ತಿಳಿಯುದೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂವಹನ, ನಿರ್ಧಾರ ಕೈಗೊಳ್ಳುವಿಕೆ, ತಂಡದ ಕೆಲಸ ಮತ್ತು ಉದ್ಯಮಶೀಲತೆ ಬೆಳೆಸುವ ಪ್ರಮುಖ ಶೈಕ್ಷಣಿಕ ವೇದಿಕೆಯಾಗಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಹಾಗೂ ಶಿಕ್ಷಣತಜ್ಞರ ಪಾತ್ರವನ್ನು ಸ್ಮರಿಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕತಾರ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಹಾಗೂ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಸಂಯೋಜಿತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ ಈ ಕಾರ್ಯಕ್ರಮವನ್ನು ಅಶೋಕ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಆರಂಭದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಕರ್ನಾಟಕ ಸಂಘ ಕತಾರ್ನ ಮಕ್ಕಳಿಂದ ಸಾಂಪ್ರದಾಯಿಕ ಸ್ವಾಗತ ನೃತ್ಯ ಪ್ರದರ್ಶನಗೊಂಡಿತು. ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಪರಿಚಯಿಸಿದ ಈ ನೃತ್ಯ ಕಾರ್ಯಕ್ರಮ ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು. ಕರ್ನಾಟಕ ಸಂಘ ಕತಾರ್ನ ಪ್ರಧಾನ ಕಾರ್ಯದರ್ಶಿ ಸುಜಿತ್ ಕುಮಾರ್ ಹೊಸದುರ್ಗ ಅವರು ಗಣ್ಯರು, ಮುಖ್ಯ ಅತಿಥಿಗಳು, ಶಿಕ್ಷಕರು ಹಾಗೂ ಸಮುದಾಯದ ಸದಸ್ಯರನ್ನು ಸ್ವಾಗತಿಸಿದರು. ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಅಧ್ಯಕ್ಷೀಯ ಭಾಷಣ ಮಾಡಿ, ಸಂಸ್ಥೆಯ…
