ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ 57 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾಳೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕುಸ್ತಿ ಪಟು ಆಗಿರುವ ಕೃಷ್ಣ ವಿದ್ಯಾರ್ಥಿನಿಗೆ ತರಬೇತಿ ನೀಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೂ ಶುಭ ಹಾರೈಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬಾಳ್ಕುದ್ರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಚಿತ್ತಾರಿ ಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ಸಂಘದ ಅಧ್ಯಕ್ಷ ಶ್ರೀಪತಿ ಅಧಿಕಾರಿ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಜರುಗಿತು. ವರದಿ ಸಾಲಿನ ಲಾಭಾಂಶ ವಿಂಗಡನೆಯಲ್ಲಿ ಸಂಘದ ಹಾಲು ಉತ್ಪಾದಕ ಸದಸ್ಯರಿಗೆ ಶೇಕಡಾ 65 ಪರ್ಸೆಂಟ್ ಬೋನಸ್ ವಿತರಿಸಲಾಯಿತು. ಸದಸ್ಯರ ಷೇರಿಗೆ ಶೇಕಡಾ 25 ಶೇ. ಡೆವಿಡೆಂಟ್ ಘೋಷಿಸಲಾಯಿತು. ಸಂಘಕ್ಕೆ ವಾರ್ಷಿಕವಾಗಿ ಅತಿಹೆಚ್ಚು ಹಾಲು ನೀಡಿದ ಸದಸ್ಯೆ ಸಾವಿತ್ರಿ ಹಾಗೂ ಹಿರಿಯ ಹಾಲು ಉತ್ಪಾದಕ ಸದಸ್ಯೆ ಲಲಿತಾ ಇವರುಗಳನ್ನು ಗೌರವಿಸಲಾಯಿತು. ಒಕ್ಕೂಟದ ವಿಸ್ತರಣಾಧಿಕಾರಿ ಉಮೇಶ ಕುಂದರ್ ಹಸು ಸಾಕಾಣಿಕೆ ಹಾಗೂ ಪಶುಗಳ ಆರೋಗ್ಯದ ಬಗ್ಗೆ ಹಾಲು ಉತ್ಪಾದಕರಿಗೆ ವಿವರವಾಗಿ ತಿಳಿಸಿದರು. ಸಂಘದ ನಿರ್ದೇಶಕರುಗಳಾದ ಬಾಬು ರಾಜೇಂದ್ರ ಐತಾಳ, ಅನಂತಯ್ಯ ನಾಯಕ್, ಸೈಮನ್ ಡಿ ಆಲ್ಮೇಡ, ವಲೇರಿಯನ್ ಡಿಸೋಜ, ಸಾವಿತ್ರಿ , ಗೋಪಾಲ ಗಾಣಿಗ, ರೇಖಾ ಭಂಡಾರಿ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ನಾಗರತ್ನ ಗಾಣಿಗ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ನಾಗರತ್ನ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕ ಜಯರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ವಚ್ಛತೆಯ ಬಗ್ಗೆ ಜಿಲ್ಲಾಡಳಿತವೇ ಕಠಿಣ ಕ್ರಮಗಳನ್ನು ಕೈಗೊಂಡರೆ ಎಸೆಯುವ ಹಾಗೂ ಮಲಿನಗೊಳಿಸುವ ಕೈಗೆ ಮುಕ್ತಿಗಾಣಿಸಬಹುದು ಎಂದು ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ ಹೇಳಿದರು. ಅವರು ಭಾನುವಾರ ಕೋಟದಿಂದ ಕೋಡಿಯವರೆಗೆ ವಿವಿಧ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿರ್ದೇಶನದ ಮೇರೆಗೆ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ರೋಟರಿ ಸಮುದಾಯದಳ ಮೂಡುಗಿಳಿಯಾರು, ಗೀತಾನಂದ ಫೌಂಡೇಶನ್ ಮಣೂರು ಸೇರಿದಂತೆ ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಕೋಟತಟ್ಟು, ಕೋಡಿ ಗ್ರಾಮಪಂಚಾಯತ್, ಸಾಲಿಗ್ರಾಮ ಪಟ್ಟಣಪಂಚಾಯತ್ ಸಂಯೋಜನೆಯೊಂದಿಗೆ ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ಅಭಿಯಾನದಲ್ಲಿ ಮಾತನಾಡಿದರು. ಪರಿಸರಕ್ಕೆ ಹಾನಿಕರ ಆಗುವ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯತೆ,ಸ್ಥಳೀಯ ಮನೆಗಳ ಹಾಗೂ ಅಲ್ಲಿನ ಮಕ್ಕಳಿಗೆ ಕಸ ಎಸೆಯದಂತೆ ಗ್ರಾಮ ಆಡಳಿತ ಖಡಕ್ ಸೂಚನೆ ನೀಡಬೇಕು,ಪರಿಸರ ಮಲಿನಗೊಂಡರೆ ಮನುಕುಲಕ್ಕೆ ಸಂಕಷ್ಟ ತಪ್ಪಿದಲ್ಲ ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಜಿ ರಾಮದಾಸ್ ಅಭಿಯಾನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕಾನೂನು ಪದವೀಧರರಾಗಿ ಸಹಕಾರಿ ಕ್ಷೇತ್ರದಲ್ಲಿ ಜನಸಾಮಾನ್ಯರ ನ್ಯಾಯವಾದಿಗಳಾಗಿ ಕಾನೂನು ವೃತ್ತಿಯ ಜತೆಗೆ ಸಹಕಾರಿ ಕ್ಷೇತ್ರದಲ್ಲಿ ವಿವಿಧ ಕೃಷಿ, ಸಹಕಾರಿ, ಸೊಸೈಟಿ, ಬ್ಯಾಂಕುಗಳಲ್ಲೂ ಉನ್ನತ ಸ್ಥಾನಗಳ ಜವಾಬ್ದಾರಿಯನ್ನು ಹೊಂದಿದ್ದು ಕರ್ನಾಟಕ ರಾಜ್ಯದಾದ್ಯಂತ ಸಹಕಾರಿ ಸಂಘಟನಾ ಕ್ಷೇತ್ರಗಳಲ್ಲಿ ವಿದ್ವತ್ ಭಾಷಣಗಾರರಾಗಿ ಗುರುತಿಸಿಕೊಂಡಿರುವ ನ್ಯಾಯವಾದಿ ಶ್ರೀಧರ ಪಿ. ಎಸ್. ಅವರು ಮೂಲತಃ ಸಾಸ್ತಾನದವರು. ತನ್ನ ಹುಟ್ಟೂರು ಸಾಸ್ತಾನದಿಂದ ಬೆಳೆದು ಬಂದು ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕವಾಗಿ ತೊಡಗಿಸಿಕೊಂಡು ಹಂತ ಹಂತವಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯದಾದ್ಯಂತ ತನ್ನ ಆಸಕ್ತಿಯ ಸಹಕಾರಿ ಕ್ಷೇತ್ರದ ಜತೆಗೆ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಕ ಹಾಗೂ ಕಾನೂನು ಕ್ಷೇತ್ರಗಳ ಚಟುವಟಿಕೆಗಳಲ್ಲಿ ಸದಾ ಸಕ್ರಿಯವಾಗಿರುವ ಶ್ರೀಧರ ಪಿ. ಎಸ್. ಅವರು ವಿಶ್ವ ರಾಮಕ್ಷತ್ರಿಯ ಮಹಾಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಕುಂದಾಪುರದ ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಸಾಸ್ತಾನದ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ತನ್ನ ವೃತ್ತಿಯಾದ ಕಾನೂನು ಕ್ಷೇತ್ರದ ನ್ಯಾಯವಾದಿಯಾಗಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ಸಾಧಕರನ್ನು ಅಭಿನಂದಿಸುವ ಮೂಲಕ ಸಮಾಜದಲ್ಲಿ ಸ್ಫೂರ್ತಿ ಮತ್ತು ಪ್ರೇರಪಣೆ ನೀಡಿದಂತಾಗುತ್ತದೆ. ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುಗಳನ್ನು ಗೌರವಿಸುವುದು ಅತ್ಯಂತ ಯೋಗ್ಯವಾದುದು. ಧಾರ್ಮಿಕ ವೇದಿಕೆಯಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಕ್ರೀಡಾ ಕ್ಷೇತ್ರಗಳಿಗೂ ಅವಕಾಶ ದೊರೆತಾಗ ಅರ್ಥಪೂರ್ಣವಾಗುತ್ತದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ವಂಡ್ಸೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 24ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಯಿತು. ಈ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಶೈಲಜಾ ಶೆಟ್ಟಿ ವಂಡ್ರೆ, ಹಾಗೂ ಆದರ್ಶ ಆಸ್ಪತ್ರೆಯ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುಪ್ಪಯ್ಯ ಮರಾಠಿ ವಂಡ್ಡೆ ಹಾಗೂ ವಂತ್ಸೆ ಅಂಗನವಾಡಿಯಲ್ಲಿ ಸುದೀರ್ಘ 42 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಮೂಕಾಂಬು ಅವರನ್ನು ಸನ್ಮಾನಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮೊಗವೀರ ಯುವ ಸಂಘಟನೆ ರಿ. ಹಾಲಾಡಿ – ಶಂಕರನಾರಾಯಣ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ, ರಕ್ತನಿಧಿ ವಿಭಾಗ ಕೆ.ಎಮ್.ಸಿ. ಮಣಿಪಾಲ ಮತ್ತು ಜಿಲ್ಲಾಡಳಿತ ಉಡುಪಿ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಹಾಲಾಡಿ – ಬಿದ್ಕಲ್‌ಕಟ್ಟೆ, ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ –ಹುಣ್ಸೆಮಕ್ಕಿ, ನಾಗಲಕ್ಷ್ಮೀ ಭಜನಾ ಮಂಡಳಿ ಬಿದ್ಕಲ್‌ಕಟ್ಟೆ, ಹಳೆ ವಿದ್ಯಾರ್ಥಿಗಳ ಸಂಘ KPS ಬಿದ್ಕಲ್‌ಕಟ್ಟೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೊಳಹಳ್ಳಿ ಮತ್ತು ಬಿದ್ಕಲ್‌ಕಟ್ಟೆ, ರಿಕ್ಷಾ ಮತ್ತು ಟ್ಯಾಕ್ಸಿ ಮಾಲಕರು ಹಾಗೂ ಚಾಲಕರು ಬಿದ್ಕಲ್‌ಕಟ್ಟೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆದಿತ್ಯವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಹಾಲಾಡಿ ಶಂಕರನಾರಾಯಣ ಘಟಕದ ಅಧ್ಯಕ್ಷರು ಶರತ್ ಸೌಡ, ಜಿಲ್ಲಾ ಸಂಘಟನೆಯ ಉಪಾಧ್ಯಕ್ಷರಾದ ಅಶೋಕ್ ತೆಕ್ಕಟ್ಟೆ, ಲಯನ್ಸ್ ಕ್ಲಬ್ ಹಾಲಾಡಿ-ಬಿದ್ಕಲ್‌ಕಟ್ಟೆ ಅಧ್ಯಕ್ಷರಾದ ಗೌತಮ್ ಶೆಟ್ಟಿ, ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ -ಹುಣ್ಸೆಮಕ್ಕಿ ಅಧ್ಯಕ್ಷರಾದ ಕರುಣಾಕರ ಶೆಟ್ಟಿ, …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಮುಂದುವರಿದಿದ್ದಾರೆ. ಮಕ್ಕಳ ಈ ಬುದ್ಧಿಮತ್ತೆಗೆ ತಕ್ಕ ಹಾಗೆ ಶಿಕ್ಷಕರು ಕೂಡ ತಮ್ಮ ಬೋಧನಾ ಶೈಲಿಯನ್ನು ಹಾಗೂ ಆಲೋಚನೆಗಳನ್ನು ನಿರಂತರವಾಗಿ ಪರಿಷ್ಕರಿಸಿಕೊಳ್ಳಬೇಕು” ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ವಿದ್ಯಾರಣ್ಯ ಶಾಲೆಯಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಲಯನ್ಸ್ ಕ್ಲಬ್ ತಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಲಯನ್ಸ್ ಕ್ವೆಸ್ಟ್ ಟೀಚರ್ ಟ್ರೈನಿಂಗ್ ಕಾರ್ಯಾಗಾರ’ದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಲಯನ್ಸ್ ಸಂಸ್ಥೆಯು ಹಮ್ಮಿಕೊಳ್ಳುವ ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅತ್ಯಂತ ಸಹಾಯಕವಾಗಿವೆ. ಇಂದಿನ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಅತ್ಯಂತ ಮುಂದುವರಿದಿದ್ದಾರೆ ಹಾಗಾಗಿ ಮಕ್ಕಳಿಗೆ ತಕ್ಕ ಹಾಗೇ ಶಿಕ್ಷಕರು ಕೂಡ ತಮ್ಮ ಬೋಧನಾ ಶೈಲಿಯನ್ನು ಹಾಗೂ ಆಲೋಚನೆಗಳನ್ನು ಅಪ್‌ಡೇಟ್ ಮಾಡಿಕೊಳ್ಳಬೇಕು. ಆಗ ಮಾತ್ರ ವಿದ್ಯಾರ್ಥಿಗಳ ಮನಸ್ಸನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ: 307, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೊ-ಆಪರೇಟಿವ್ ಸೊಸ್ಶೆಟಿಯ 106ನೇ ವಾರ್ಷಿಕ ಸಾಮಾನ್ಯ ಸಭೆಯು ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಭಾನುವಾರ ಜರುಗಿತು. ಸಹಕಾರಿಯ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯ ಗಂಗೊಳ್ಳಿ ಟೌನ್ ಸೌಹಾರ್ದ ಕೊ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2025-26ನೇ ಸಾಲಿನಲ್ಲಿ 1.42 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.17 ಡಿವಿಡೆಂಡ್ ಘೋಷಿಸಿದರು. ವರದಿ ಸಾಲಿನ ಅಂತ್ಯದಲ್ಲಿ ಸಂಘವು 4,114 ಸದಸ್ಯರು, 104.30 ಕೋಟಿ ಠೇವಣಿ, 89.44 ಕೋಟಿ ರೂ. ಸದಸ್ಯರ ಸಾಲ, 30.92 ಕೋಟಿ ಹೂಡಿಕೆ, 6.55 ಕೋಟಿ ವಿವಿಧ ನಿಧಿಗಳನ್ನು ಹೊಂದಿದ್ದು, ಸೌಹಾರ್ದ ಕಾಯಿದೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಸೌಹಾರ್ದ ಸಹಕಾರಿ ಸಂಘಗಳಲ್ಲಿ ಮಂಚೂಣಿಯಲ್ಲಿದೆ. ಕಳೆದ ನವಂಬರ್‌ನಲ್ಲಿ ಮಂಗಳೂರಿನಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಯೂ ಲಭಿಸಿದೆ ಎಂದು ಹೇಳಿದರು. ಉಡುಪಿ ಜಿಲ್ಲೆಯ ಮರವಂತೆ, ಸಿದ್ದಾಪುರ ಹಾಗೂ ಸಾಸ್ತಾನದಲ್ಲಿ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಯುವ ಜನೋತ್ಸವ-2026’ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಜಿತಾ ನಿಧಿ ಮತ್ತು ಪ್ರತೀಕ್ ಜಿ.ಎಂ. ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ವಿಜೇತರಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
