ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೆಸ್ಕುತ್ತೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಕ್ರೀಡೆಯಲ್ಲಿ ಕಲೆ ಮತ್ತು ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಅಂಶಗಳು ಒಳಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಕ್ರೀಡೋತ್ಸವದಂದು ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ವಿವಿಧ ಆಟೋಟ ಹಾಗೂ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅತ್ಯುನ್ನತ ಅಂಕಗಳನ್ನು ಗಳಿಸಿ ಯಮುನಾ ತಂಡದ ವಿದ್ಯಾರ್ಥಿಗಳು 2026-27ನೇ ಸಾಲಿನ ಚಾಂಪಿಯನ್ ತಂಡವಾಗಿ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಗಂಗಾ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ ರನ್ನರ್ ಅಪ್ ಟ್ರೋಪಿಯನ್ನು ಪಡೆದರು. ಕಾರ್ಯಕ್ರಮದಲ್ಲಿ ಡ್ರಿಲ್, ಯೋಗ, ಲೇಜಿಮ್, ಡಂಬಲ್ಸ್, ಹೂಪ್ಸ್, ಕರಾಟೆ, ಪಿರಾಮಿಡ್ ಮೊದಲಾದ ಸಾಹಸ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ನೇಹಿತನ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ ಹಣದ ಬೇಡಿಕೆಯ ಸಂದೇಶ ಕಳುಹಿಸಿದ ಸೈಬರ್ ವಂಚಕರು, ವ್ಯಕ್ತಿಯೊಬ್ಬರಿಂದ 52,000 ರೂ. ಹಣವನ್ನು ವರ್ಗಾಯಿಸಿಕೊಂಡ ಘಟನೆ ನಡೆದಿದೆ. ಕೋಟದ ದಯಾನಂದ (64) ಅವರಿಗೆ ತೆಕ್ಕಟ್ಟೆಯ ಅನಂತ ಎಂಬುವವರು ಸ್ನೇಹಿತರಾಗಿದ್ದರು. ಸೆಪ್ಟೆಂಬರ್ 22ರಂದು ಅನಂತ ಅವರ ಹೆಸರಿನ ವಾಟ್ಸಾಪ್ ಖಾತೆಯಿಂದ ದಯಾನಂದ ಅವರಿಗೆ ಸಂದೇಶವೊಂದು ಬಂದಿತ್ತು. ತುರ್ತಾಗಿ ಹಣದ ಅಗತ್ಯವಿದ್ದು ಕಳುಹಿಸಿರುವ ಕ್ಯೂಆರ್ ಕೋಡ್‌ಗೆ 52,000 ರೂ. ವರ್ಗಾಯಿಸುವಂತೆ ಅದರಲ್ಲಿ ಮನವಿ ಮಾಡಲಾಗಿತ್ತು. ಸ್ನೇಹಿತನೇ ಹಣ ಕೇಳಿದ್ದಾರೆಂದು ನಂಬಿದ ದಯಾನಂದ ಅವರು, ಯಾವುದೇ ಅನುಮಾನವಿಲ್ಲದೆ ತಮ್ಮ ಬ್ಯಾಂಕ್ ಖಾತೆಯಿಂದ ಕ್ಯೂಆರ್ ಕೋಡ್ ಮೂಲಕ 52,000 ರೂ. ಹಣವನ್ನು ವರ್ಗಾಯಿಸಿದ್ದರು. ಬಳಿಕ ಅನಂತ ಅವರನ್ನು ಸಂಪರ್ಕಿಸಿ ವಿಚಾರಿಸಿದಾಗ, ಅವರ ಮೊಬೈಲ್ ಹ್ಯಾಕ್ ಆಗಿರುವುದು ತಿಳಿದು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಬ್ಬರ್ ಪ್ಲಾಂಟ್ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರದಲ್ಲಿ ಉಂಟಾದ ವೈಮನಸ್ಸು ಹಿಂಸಾತ್ಮಕ ಘಟನೆಗೆ ತಿರುಗಿದ್ದು, ವ್ಯಕ್ತಿಯೊಬ್ಬರ ಮೇಲೆ ಏರ್ ಗನ್‌ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಜಾನುವಾರುಕಟ್ಟೆ ಸಮೀಪ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕೇರಳ ಮೂಲದ, ಬಿಲ್ಲಾಡಿ ಗ್ರಾಮದ ನಿವಾಸಿ ಬಿಬಿನ್ ಮ್ಯಾಥ್ಯ ಎಂದು ಗುರುತಿಸಲಾಗಿದೆ. ಇವರು ಕಳೆದ ಸುಮಾರು 18 ವರ್ಷಗಳಿಂದ ಬಿಲ್ಲಾಡಿಯಲ್ಲಿ ವಾಸವಾಗಿದ್ದು, ರಬ್ಬರ್ ಪ್ಲಾಂಟ್ ವ್ಯವಹಾರ ನಡೆಸುತ್ತಿದ್ದಾರೆ. ಬಿಬಿನ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಜೋಸ್ ಮತ್ತು ಸುರೇಶ್ ಎಂಬವರು ಸರಿಯಾಗಿ ಕೆಲಸ ಮಾಡದೆ ಪದೇ ಪದೇ ಹಣ ಕೇಳುತ್ತಿದ್ದ ಕಾರಣ ಕೆಲಸ ಬಿಟ್ಟು, ಬಿಲ್ಲಾಡಿಯಲ್ಲಿ ರಬ್ಬರ್ ಪ್ಲಾಂಟ್ ಹೊಂದಿರುವ ಸಂತೋಷ್ ಎಂಬವರ ಬಳಿ ಕೆಲಸಕ್ಕೆ ಸೇರಿಕೊಂಡಿದ್ದರು. ಇದೇ ವಿಚಾರದಲ್ಲಿ ಆರೋಪಿಗಳ ನಡುವೆ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ನವೆಂಬರ್ 5ರಂದು ರಾತ್ರಿ ಸುಮಾರು 10.10ರ ವೇಳೆಗೆ ಬಿಬಿನ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಅಜಯ್ ಎಂಬಾತ ಕರೆ ಮಾಡಿ, ಜಾನುವಾರುಕಟ್ಟೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ರೋಶನಿ ಪಿ. ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ-ಮುಳ್ಳಿಕಟ್ಟೆ ಫ್ಲೈ ಓವರ್ ಮೇಲೆ ಮೀನು ಸಾಗಾಟದ ವಾಹನವೊಂದು ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ವಾಹನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ನೋಂದಣಿಯ ಈ ವಾಹನವು ಮುಂಬಯಿಯಿಂದ ಮಂಗಳೂರಿಗೆ ಮೀನು ಸಾಗಿಸುತ್ತಿತ್ತು. ಫ್ಲೈ ಓವರ್ ಮೇಲೆ ಚಲಿಸುತ್ತಿದ್ದಾಗ ವಾಹನದ ಒಂದು ಬದಿಯ ಆಕ್ಸಲ್ ತುಂಡಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಡಿವೈಡರ್ ಮೇಲೆ ಪಲ್ಟಿಯಾಗಿದೆ. ವಾಹನದಲ್ಲಿ ಚಾಲಕನೊಬ್ಬನೇ ಇದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ಆನಂದ ಹಾಗೂ ಸಿಬ್ಬಂದಿ ಮತ್ತು ಹೆದ್ದಾರಿ ಗಸ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಮೂಲಕ ಪಲ್ಟಿಯಾದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಪಾರ್ಟ್ ಟೈಮ್ ಉದ್ಯೋಗದ ಜಾಹೀರಾತು ನೋಡಿ ಕ್ಲಿಕ್ ಮಾಡಿದ ಮಹಿಳೆಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ 1,86,570 ರೂ. ಕಳೆದುಕೊಂಡ ಘಟನೆ ಸೌಕೂರು ಗುಲ್ವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸೌಕೂರಿನ ರೇಣುಕಾ ಗಣೇಶ ದೇವಾಡಿಗ ಹಣ ಕಳೆದುಕೊಂಡವರು. ಅವರು ಕಳೆದ ಅ.16ರಂದು ಮೊಬೈಲ್ ಪೋನ್‌ನಲ್ಲಿ ಮೀಶೋ ನೀಡ್ ಸ್ಟಾಫ್ (‘MEESHO NEED STAFF’) ಎಂಬ ಹೆಸರಿನಲ್ಲಿ ಪಾರ್ಟ್‌ಟೈಮ್ ಉದ್ಯೋಗವಿರುವ ಜಾಹೀರಾತನ್ನು ನೋಡಿ ಅದರ ಮೇಲೆ ಕ್ಷಿಕ್ ಮಾಡಿದಾಗ ಅವರಿಗೆ ಕೆಲವು ಟಾಸ್ಕ್‌ಗಳನ್ನು ನೀಡಲಾಗಿತ್ತು. ಮೊದಲ ಟಾಸ್ಕ್ ಪೂರ್ಣಗೊಳಿಸಿದ ಬಳಿಕ ಹಣ ನೀಡುವ ಆಮಿಷ ತೋರಿಸಿದ ವಂಚಕರು, ಹಂತ ಹಂತವಾಗಿ ಹೆಚ್ಚಿನ ಹಣ ಗಳಿಸುವ ಅವಕಾಶದ ಹೆಸರಿನಲ್ಲಿ ಮತ್ತಷ್ಟು ಟಾಸ್ಕ್‌ಗಳನ್ನು ನೀಡಿದ್ದಾರೆ. ಆರಂಭದಲ್ಲಿ ರೇಣುಕಾ ಅವರಿಗೆ 120 ರೂ., ನಂತರ 10,130 ರೂ. ಪಾವತಿಸಿ ವಿಶ್ವಾಸ ಮೂಡಿಸಿದ ವಂಚಕರು. ಬಳಿಕ ಹೆಚ್ಚಿನ ಹಣ ಪಡೆಯುವ ಆಮಿಷವೊಡ್ಡಿ ವಿವಿಧ ಹಂತಗಳಲ್ಲಿ ಹಣ ಹೂಡಿಕೆ ಮಾಡುವಂತೆ ಮಾಡಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸೆಪ್ಟೆಂಬರ್‌ನಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವೃತ್ತಿಪರ ವಾಣಿಜ್ಯ ವಿಭಾಗದ ಒಟ್ಟು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಷ್ಟ್ರೀಯ ಸರಾಸರಿ ಶೇಕಡಾ 18.93ರಷ್ಟಿದ್ದ ಈ ಪರೀಕ್ಷೆಯಲ್ಲಿ, ಆಳ್ವಾಸ್ ಸಂಸ್ಥೆ ಶೇಕಡಾ 31.75 ಫಲಿತಾಂಶ ದಾಖಲಿಸುವ ಮೂಲಕ ಶೈಕ್ಷಣಿಕ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಧಿತು ಪಡಿಸಿದೆ. ಸೆಪ್ಟೆಂಬರ್ 2026ರಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಯಾದ ಸುವಿತ್ ಭಂಡಾರಿ, ವಿಕಾಸ್ ಶೆಟ್ಟಿ, ಸೂರಜ್ ಮಾಹಂತೇಶ್, ಸುಪ್ರೀತಾ, ಸುದೀಕ್ಷಾ , ತನುಷ್ ಜಿ ಶೆಟ್ಟಿ, ನಂದನ್ ಪಿ. ನಾಯಕ್, ವೆಂಕಟೇಶ್ ಪ್ರಭು, ತನ್ವಿ ವಿಜಯ್ ಕೋಟ್ಯಾನ್, ವೆನಿಸ್ಸಾ, ಶ್ರೇಯಾ ಎಸ್. ಶೆಟ್ಟಿ, ವೈಷ್ಣವಿ, ಪ್ರಥಮ್ ನಾಯಕ್, ಶ್ರಾವ್ಯ, ಶಾಶ್ವತ್, ಪ್ರಗತಿ, ಪ್ರೀತಮ್, ಆಯೇಷಾ ಆನಮ್, ಸಾಹಿತ್ಯಾ ಕುಶಲ್ ಹಾಗೂ ವರುಣ್ ಕುಮಾರ್ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ವಾಣಿಜ್ಯ ವಿಭಾಗದ 41 ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದ್ರಿ: ಕೃಷಿ ವಲಯದ ಶ್ರಮಜೀವಿ ರೈತರನ್ನು ಗುರುತಿಸಿ ಸಮಾಜದಲ್ಲಿ ಅವರಿಗೆ ಸೂಕ್ತ ಗೌರವ ಹಾಗೂ ಮನ್ನಣೆ ಕಲ್ಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಎಸ್‌ಕೆಎಫ್ ಎಲಿಕ್ಸಿರ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಖ್ಯಾತ ಕೃಷಿ ಉದ್ಯಮಿ ಡಾ. ಜಿ. ರಾಮಕೃಷ್ಣ ಆಚಾರ್ ಸ್ಥಾಪಿಸಿರುವ ರೈತಪೀಠ ಪ್ರಶಸ್ತಿ 2027ರ ಅಧಿಕೃತ ಲೋಗೋ ಅನಾವರಣಗೊಂಡಿದೆ. ಇದೇ ಸಂದರ್ಭದಲ್ಲಿ ಪ್ರಶಸ್ತಿಗೆ ಅರ್ಹ ಹಾಗೂ ಸಾಧಕ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಶಸ್ತಿಯ ಆಶಯದ ಕುರಿತು ಮಾತನಾಡಿದ ಸಂಸ್ಥಾಪಕ ಡಾ. ಜಿ. ರಾಮಕೃಷ್ಣ ಆಚಾರ್, “ಆಸ್ಟ್ರೇಲಿಯಾದ ಸಿಡ್ನಿ ಸೇರಿದಂತೆ ವಿಶ್ವದ ಮುಂದುವರಿದ ರಾಷ್ಟ್ರಗಳಿಗೆ ಭೇಟಿ ನೀಡಿದಾಗ ಅಲ್ಲಿ ಕೃಷಿಕರಿಗೆ ಇರುವ ರಾಯಲ್ ಗೌರವವನ್ನು ಕಂಡು ಬೆರಗಾಗಿದ್ದೇನೆ. ಆದರೆ ನಮ್ಮ ದೇಶದಲ್ಲಿ ವಿಜ್ಞಾನಿ, ವೈದ್ಯರು, ಸೈನಿಕರು ಅಥವಾ ಐಟಿ ಉದ್ಯೋಗಿಗಳಿಗೆ ಸಿಗುವ ಗೌರವ ರೈತನಿಗೆ ಸಿಗುತ್ತಿಲ್ಲ. ಆತನನ್ನು ಕಡೆಗಣಿಸುವ ಮನಸ್ಥಿತಿ ಬೆಳೆದುಬಂದಿದೆ. ವಾಸ್ತವವಾಗಿ ಹೇಳಬೇಕೆಂದರೆ ‘ರೈತನೇ ಸುಪ್ರೀಂ, ಅವನೇ ರಾಜ’. ಕೃಷಿ ಕ್ಷೇತ್ರದಲ್ಲೂ ಕಾರ್ಪೊರೇಟ್ ಮಟ್ಟದ ಸಾಧನೆ ಸಾಧ್ಯವಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಪ್ರತಿಯೊಬ್ಬ್ಲರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟ, ಬಳಕೆ ಮತ್ತಿತರ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ಸಂಗ್ರಹಕ್ಕೆ ಅಭಿವೃದ್ಧಿಪಡಿಸಿರುವ ಕ್ಯೂಆರ್ ಕೋಡ್‌ನ ಮೂಲಕ ಮಾಹಿತಿ ಹಂಚಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center)ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ವಸ್ತುಗಳ ಬಳಕೆಯಿಂದ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಿ ಆರ್ಥಿಕ ನಷ್ಟದ ಜೊತೆಗೆ ಭವಿಷ್ಯದಲ್ಲಿ ಉತ್ತಮ ಜೀವನವನ್ನು ನಡೆಸಲು ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ. ಪ್ರತಿಯೊಬ್ಬರೂ ಇವುಗಳಿಂದ ದೂರವಿರಬೇಕು. ಯುವಜನರು ಇಂತಹ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಸಮಾಜದಲ್ಲಿ ಇಂತಹವುಗಳಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು. ಮಾದಕ ದ್ರವ್ಯ ಸೇವನೆಗೆ ಬಲಿಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಅನಾಮಧೇಯ ಮಾಹಿತಿ ನೀಡಲು ಆರಕ್ಷಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಸಂಘಟಕ ಗಜೇಂದ್ರ ಆಚಾರ್ ಕೋಣಿ ಸಂಯೋಜನೆಯ ಯಕ್ಷರಾತ್ರಿ ಈ ಬಾರಿ 12 ನೇ ವರ್ಷದ ಅದ್ಧೂರಿ ಕಾರ್ಯಕ್ರಮ ಕೋಣಿ ಮೂರೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಡಿಸೆಂಬರ್ 12 ಶನಿವಾರ ರಂದು ಶ್ರೀ ಪೆರ್ಡೂರು ಮೇಳದ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಯಕ್ಷರಾತ್ರಿ ಸಾಧಕ ಪುರಸ್ಕಾರವನ್ನು ಹಿರಿಯ ಪತ್ರಕರ್ತ, ಶಿವರಾಮ ಕಾರಂತ್ ವಿಶೇಷ ಪುರಸ್ಕಾರ ಪುರಸ್ಕೃತ ಜಾನ್ ಡಿ ಸೋಜ ಕೋಣಿ ಹಾಗೂ ಹಿರಿಯ ಕೃಷಿಕ, ನಾಟಿ ವೈದ್ಯ ಸಿದ್ದಯ್ಯ ಶೆಟ್ಟಿ ಕಟ್ಕೇರಿ ಅವರಿಗೆ ನೀಡಲಾಗುತ್ತಿದೆ. ಪ್ರತಿಭಾ ಪುರಸ್ಕಾರವಾಗಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2025ನೇ ಸಾಲಿನ ಅಂತಿಮ ಪದವಿ ಪರಿಕ್ಷೆಯಲ್ಲಿ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ 3ನೇ ರ್ಯಾಂಕ್ ಪಡೆದ ಸುಹಾನಿ (ಶಂಕರ ಮೊಗವೀರ ಹಾಗೂ ಶಾಂತ ದಂಪತಿಗಳ ಪುತ್ರಿ), ಹಾಗೂ 8ನೇ ರ್ಯಾಂಕ್ ಪಡೆದ ಶ್ರದ್ದಾ ( ರಮೇಶ ಮೊಗವೀರ ಹಾಗೂ ವನಜ ದಂಪತಿಗಳ ಪುತ್ರಿ), 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ…
