ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾರಾಹಿ ಯೋಜನೆ ವಿಳಂಬದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎನ್ನುವ ಸಂಸದ ಬಿ. ವೈ. ರಾಘವೇಂದ್ರರವರ ಹೇಳಿಕೆ ಸತ್ಯಕ್ಕೆ ದೂರವಾದ ಮಾತು ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿರುತ್ತಾರೆ. 1979 ರಂದು ಅಂದಿನ ಮುಖ್ಯಮಂತ್ರಿ ದಿವಂಗತ ಗುಂಡೂರಾವ್ ರವರು ವರಾಹಿ ಮೂಲ ಯೋಜನೆಗೆ ಶಂಖುಸ್ಥಾಪನೆ ಮಾಡಿದರು. ಇದು ಅಂದಿನ ಅಂದಾಜು ಮೊತ್ತ ಒಂಬತ್ತು ಕೋಟಿ ಅದರಲ್ಲಿ ಬಲ ದಂಡೆ, ಎಡ ದಂಡೆ ಮತ್ತು ಏತ ನೀರಾವರಿ ಕಾಲುವೆ ಮುಖಾಂತರ ಕುಂದಾಪುರ ತಾಲ್ಲೂಕು ಮತ್ತು ಅಂದಿನ ಉಡುಪಿ ತಾಲ್ಲೂಕಿನ ಬ್ರಹ್ಮಾವರದ ತನಕ ಸುಮಾರು ಹದಿನೆಂಟು ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರು ಹಾಯಿಸುವ ಯೋಜನೆ. ಆದರೆ ಸಂಸದರು ಹೇಳುವಂತೆ ಈ ಯೋಜನೆ ವಿಳಂಬಕ್ಕೆ ಯಾವುದೇ ಖಾಸಗಿ ವಿದ್ಯುತ್ ಉತ್ಪಾದಕರಾಗಲಿ ಇಲ್ಲಾ ರಾಜಕೀಯ ಹಿತಾಸಕ್ತಿಗಳಾಗಲಿ ಕಾರಣವಲ್ಲಾ. ಜನಪ್ರತಿನಿದಿನಗಳ ಇಚ್ಚಾಶಕ್ತಿಯ ಕೊರತೆ …
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ,.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕೊಲ್ಲೂರಿಗೆ ತಾಲೂಕು ಕೇಂದ್ರದಿಂದ ಸರ್ಕಾರಿ ಬಸ್ ಸೌಲಭ್ಯ ಒದಗಿಸಲು ಈವರೆಗೆ ಸಾಧ್ಯವಾಗಿಲ್ಲ. ನಿರಂತರ ಮನವಿಯ ಹೊರತಾಗಿಯೂ ಅಧಿಕಾರಿಗಳು ತೆಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಕೊಲ್ಲೂರು, ಹಳ್ಳಿಹೊಳೆ ಸೇರಿದಂತೆ ಗ್ರಾಮೀಣ ಭಾಗಗಳಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರಿ ಬಸ್ ಸೇವೆ ಅಗತ್ಯವಿದ್ದ ತುರ್ತು ಕ್ರಮಕ್ಕಾಗಿ ಆಗ್ರಹಿಸಲಾಗುವುದು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯರಾದ ಪ್ರಭಾಕರ ನಾಯ್ಕ್ ಹಾಗೂ ರಾಘವೇಂದ್ರ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದರ ಅವರು, ಹಲವು ಮಾರ್ಗಗಳಲ್ಲಿ ಪರ್ಮಿಟ್ ಹೊಂದಿದ್ದರೂ ಕೆಎಸ್ಆರ್ ಟಿಸಿ ಬಸ್ ಸೇವೆಯನ್ನು ಸ್ಥಗೀತಗೊಳಿಸಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿಯೇ ಎರಡೆರಡು ಭಾರಿ ಸಭೆ ನಡೆದರೂ ಯಾವುದೇ ಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು–ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ದಿನಗಳ ಹಿಂದೆ ಸಂಪರ್ಕ ಕಡಿತಗೊಂಡು, ತದನಂತರ ತ್ವರಿತ ಕ್ರಮದಿಂದ ದುರಸ್ತಿಗೊಂಡು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದ್ದ ಸೂಕ್ಷ್ಮ ಪ್ರದೇಶಗಳಿಗೆ ಇಂದು ಸಂಸದ ಬಿ.ವೈ. ರಾಘವೇಂದ್ರ ಅವರು, ಶಾಸಕ ಗುರುರಾಜ ಗಂಟಿಹೊಳೆ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಂದೂರಿನಿಂದ ಕೊಲ್ಲೂರುವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸೂಕ್ಷ್ಮ ಜಾಗಗಳನ್ನು ವೀಕ್ಷಿಸಿ, ಮುಂಬರುವ ದಿನಗಳಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಶಾಶ್ವತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ಗಳು ಹಾಗೂ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ವೇಳೆ ಇಲಾಖಾ ಅಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಅಂಪಾರು ಸುಖಾನಂದ ಶೆಟ್ಟಿ ಅವರಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಡೀಮ್ಡ್ ಯೂನಿವರ್ಸಿಟಿ)ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ. ಅವರು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಡೀಮ್ಡ್ ಯೂನಿವರ್ಸಿಟಿ)ವಿಶ್ವ ವಿದ್ಯಾಲಯದ ಪ್ರಾದೇಶಿಕ ಜಾನಪದ ರಂಗ ಕಲೆಗಳ ಅಧ್ಯಯನ ಕೇಂದ್ರದ ಮೂಲಕ ಲೇಖಕಿ ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ರೇಖಾ ಬನ್ನಾಡಿಯವರ ಮಾರ್ಗದರ್ಶನದಲ್ಲಿ ಸಲ್ಲಿಸಿದ “ಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ (A cultural Study in Kolluru)” ಎಂಬ ಮಹಾಪ್ರಬಂಧಕ್ಕಾಗಿ ಅಧ್ಯಯನ ನಡೆಸಿದ್ದರು. ಅವರ ಈ ಸಾಧನೆಗೆ ಕಾಲೇಜಿನ ವಿಶ್ವಸ್ಥ ಮಂಡಳಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ಹಂತದಲ್ಲಿ ಬೋಧನೆಯ ಜೊತೆಗೆ ವಿದ್ಯಾರ್ಥಿಗಳ ಸಮಗ್ರ ಮೌಲ್ಯಮಾಪನ ಮತ್ತು ಪ್ರಗತಿಪತ್ರಿಕೆಯು ಮಹತ್ವದ್ದಾಗಿರುತ್ತದೆ. ಕಲಿಕಾ ಫಲಿತಾಂಶಗಳನ್ನು ಪರಿಣಾಮಕಾರಿಯಾಗಿ ಸಾಧಿಸುವುದಕ್ಕೆ ನವೀನ ರೀತಿಯ ಬೋಧನಾ ತಂತ್ರಗಳನ್ನು ನಾವು ಹೆಚ್ಚು ಹೆಚ್ಚು ಬಳಸಿಕೊಂಡು ಚಟುವಟಿಕೆ ಆಧಾರಿತ ಪಾಠ ಕ್ರಮದ ಮೂಲಕ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಶಿಕ್ಷಕರು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಎಂವಿಜೆ ಇಂಟರ್ನ್ಯಾಷನಲ್ ಸ್ಕೂಲ್ನ ಪ್ರಾಂಶುಪಾಲೆ, ಶಿಕ್ಷಣ ತಜ್ಞೆ ಹಾಗೂ ಸಿಬಿಎಸ್ಸಿ ಮಾಸ್ಟರ್ ಟ್ರೈನರ್ ವಂಶಿಪ್ರಿಯ ಅಮರ್ ಹೇಳಿದರು. ಅವರು ಗುರುವಾರ ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ನಲ್ಲಿ ಶಿಕ್ಷಕರಿಗಾಗಿ “ಸಮಗ್ರ ಪ್ರಗತಿ ಪತ್ರಿಕೆಯ ಮೂಲ ಹಾಗೂ ಕಲಿಕಾ ಫಲಿತಾಂಶ ಮತ್ತು ಬೋಧನಾ ವಿಧಾನಗಳು “ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಅವರು ವಹಿಸಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳನ್ನು ರೂಪಿಸಲು ಅಧ್ಯಯನ ಮತ್ತು ಅನುಭವಾತ್ಮಕ ವಿಚಾರಗಳನ್ನು ಹೆಚ್ಚು ಬಳಸಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರವನ್ನು ಶುಕ್ರವಾರದಂದು ಯಶಸ್ವಿಯಾಗಿ ಆಯೋಜಿಸಿದರು. ಈ ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರ ಕಚೇರಿ, ದೋಹಾದ ಪ್ರಥಮ ಕಾರ್ಯದರ್ಶಿ ಈಶ್ ಸಿಂಘಾಲ್ ಹಾಗೂ ಹಮದ್ ಮೆಡಿಕಲ್ ಕಾರ್ಪೊರೇಷನ್ನ ವೈದ್ಯಕೀಯ ವ್ಯವಸ್ಥಾಪಕಿ ಮತ್ತು ಡೋನರ್ ರಿಕ್ರೂಟ್ಮೆಂಟ್ ಮುಖ್ಯಸ್ಥೆ ಸಾದಿಕಾ ಅಲ್ ಮಹ್ಮೂದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮವು ಕರ್ನಾಟಕ ಸಂಘ ಕತಾರ್ನ ಪ್ರಧಾನ ಕಾರ್ಯದರ್ಶಿ ಸುಜಿತ್ ಕುಮಾರ್ ಅವರ ಸ್ವಾಗತ ಭಾಷಣದೊಂದಿಗೆ ಆರಂಭವಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಈಶ್ ಸಿಂಘಾಲ್ ಅವರು, ರಕ್ತದಾನವು ಜೀವ ಉಳಿಸುವ ಮಹತ್ತರ ಮಾನವೀಯ ಕಾರ್ಯವಾಗಿದ್ದು, ಸಮುದಾಯದ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಾನದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಾಜಸೇವೆಗೈಯಲು ಹಲವು ದಾರಿಗಳಿವೆ. ಅದರಲ್ಲಿ ವಿವಿಧ ಸಂಘ-ಸಂಸ್ಥೆಗಳ ಮೂಲಕ ಕೊರಗ ಸಮುದಾಯದ ಮನೆಗಳಿಗೆ ಗೋದ್ರೇಜ್ ಕೊಡುಗೆ ನೀಡಲು ಪ್ರೇರಣೆದಾಯಕರಾಗಿರುವ ಸಮಾಜಸೇವಕ ಶ್ರೀಕಾಂತ್ ಶೆಣೈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಕೋಟತಟ್ಟು ಚಿಟ್ಟಿಬೆಟ್ಟು ಕೊರಗ ಕಾಲೋನಿಯ ಏಳು ಮನೆಗಳಿಗೆ ಸಮಾಜಸೇವಕ ಶ್ರೀಕಾಂತ್ ಶೆಣೈ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಗೋದ್ರೇಜ್ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರಗ ಸಮುದಾಯವನ್ನು ಕೀಳಾಗಿ ಕಾಣುವ ಕಾಲಘಟ್ಟ ಇದಲ್ಲ ಅವರು ನಮ್ಮಂತೆ ಈ ಸಮಾಜದಲ್ಲಿ ಸಮಾನರಾಗಿ ಗುರುತಿಸಿಕೊಂಡಿದ್ದಾರೆ ಎಂದರು. ಸಭೆಯಲ್ಲಿ ಗೋದ್ರೇಜ್ ನಿರ್ಮಿಸಿ ಅತಿ ಕಡಿಮೆ ಬೆಲೆಯಲ್ಲಿ ಒದಗಿಸಿದ ಪ್ರವೀಣ್ ಮಣೂರು ಇವರಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು. ಸಭೆಯಲ್ಲಿ ಟ್ರಾವೆಲಿಂಕ್ಸ್ ಫ್ರೆಂಡ್ಸ್ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಗೌರವಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ-ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ ಇವರ ಸಹಭಾಗಿತ್ವದಲ್ಲಿ ಜೂನ್ 2ರಂದು ಮಂಗಳವಾರ ಬೆಳಿಗ್ಗೆ 9:00 ರಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಬಹು ರಾಷ್ಟ್ರೀಯ ಕಂಪನಿಗಳು ಮತ್ತು ಸ್ಥಳೀಯ ಕಂಪನಿಗಳು ಆಗಮಿಸುತ್ತಿದ್ದು, SSLC, PUC, NTC, D.Ed, BPEd, B.Ed, BA, B.com, BSW, MSW, MA, M.com, MSc, MBA, BBA, BCA, BTech, MTech ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಪ್ರಸ್ತುತ ಅಂತಿಮ ಪದವಿಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಲು ಇದೊಂದು ಸುವರ್ಣಾವಕಾಶ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ರೆಸ್ಯುಮ್, ಅಂಕಪಟ್ಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ಗಳ ಮೂಲ ಪ್ರತಿಯೊಂದಿಗೆ ಹಾಜರಾಗುವುದು. ಈ ಉದ್ಯೋಗ ಮೇಳದ ಪ್ರಯೋಜನವನ್ನು ರಾಜ್ಯದ ಎಲ್ಲಾ ಉದ್ಯೋಗಾಕಾಂಕ್ಷಿಗಳು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿರುತ್ತಾರೆ.
