ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಮತ್ತಿತರ ಪ್ರಕರಣಗಳನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ರಸ್ತೆ ಕಾಮಗಾರಿ ವಿಳಂಬದಿಂದಾಗಿ ರಸ್ತೆ ಇಕ್ಕಟ್ಟಿನಿಂದಾಗಿ ಕಳೆದ ಎರಡು ವರ್ಷಗಳಿಂದ ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸಿ, ಮರಣ ಹೊಂದಿರುತ್ತಾರೆ. ಇದಕ್ಕೆಲ್ಲಾ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರಣವಾಗಿದ್ದು, ರಸ್ತೆ ಅಪಘಾತ ಸಂಬಂಧ ಕಾರಣಕರ್ತರಾದ ರೈಲ್ವೆ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಹಾಗೂ ಗುತ್ತಿಗೆದಾರರುಗಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ : 0820-2574596 ಅಥವಾ ಕಾರ್ಕಳ ದೂರವಾಣಿ : 08258-231101 ಹಾಗೂ ಕುಂದಾಪುರ ದೂರವಾಣಿ :…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಢೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೇಸಿಐ ಕುಂದಾಪುರ ಸಿಟಿ ಮತ್ತು ಕಿಯೋನಿಕ್ಸ್, ಚರ್ಚ್ ರಸ್ತೆ ಕುಂದಾಪುರ ಇವರ ಸಹಕಾರದೊಂದಿಗೆ ಚೌಡೇಶ್ವರಿ ಟೈಗರ್ಸ್ ಟಿ.ಟಿ. ರಸ್ತೆ ಕುಂದಾಪುರ ಇವರಿಂದ ಹುಲಿವೇಷ ಕುಣಿತ ಪ್ರದರ್ಶನವು ಗುರುವಾರದಂದು ನಡೆಯಿತು. ಕಾಲೇಜಿನ ಪ್ರಾಚಾರ್ಯರಾದ ಕೆ. ಉಮೇಶ್ ಶೆಟ್ಟಿ, ಜೇಸಿಐ ಸಿಟಿ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಕಾರ್ಯಕ್ರಮ ಪ್ರಾಯೋಜಕರಾದ ಹರ್ಷವರ್ಧನ್ ಶೆಟ್ಟಿ, ಮಾಲಕರು ಕಿಯೋನಿಕ್ಸ್, ಚರ್ಚ್ ರಸ್ತೆ ಕುಂದಾಪುರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ| ಸೋನಿ, ಜೇಸಿ ವಿಜಯ ಭಂಡಾರಿ, ಜೇಸಿ ರಾಜು ಪೂಜಾರಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮವನ್ನು ಸಂಘಟಿಸಿದ ಲಲಿತಾಕಲಾ ಸಂಘದ ಸಂಯೋಜಕಿ ದೀಪಿಕಾ. ಜಿ. ರವಿನಾ ಸಿ, ಪೂಜಾರಿ, ನಿರ್ಮಲಾ ಬಿ. ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೂರ್ಯ ಫೌಂಡೇಶನ್ ಬೆಂಗಳೂರು, ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಮತ್ತು ಸ್ಪಾರ್ಕ್ ಅಕಾಡೆಮಿ ಬೆಂಗಳೂರು ವತಿಯಿಂದ ನಿರೂಪಕರಿಗೆ ನೀಡಲಾಗುವ ರಾಜ್ಯ ಮಟ್ಟದ “ಅಪರ್ಣಾ ನಿರೂಪಣಾ ರತ್ನ” ಪ್ರಶಸ್ತಿಗೆ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಅ.15ರಂದು ಬೆಂಗಳೂರಿನ ಇಂಡೋ ಗ್ಲೋಬೋ ಕಾಲೇಜ್, ಹೆಸರಘಟ್ಟದಲ್ಲಿ ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮಳನ ಈ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸೂರ್ಯ ಫೌಂಡೇಶನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗ್ಗಿ, ಗ್ರಾಮ ಪಂಚಾಯತ್ ಕಾಳಾವರ, ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇವರ ಸಹಯೋಗದೊಂದಿಗೆ, ಉಪಕೇಂದ್ರ ವಕ್ವಾಡಿ ಇಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಶಿಬಿರಗಳನ್ನು ಆಯೋಜಿಸಲಾಯಿತು. ಹಲವಾರು ಮಂದಿ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶೇಖರ್ ಏನ್ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗ್ಗಿ ವೈದ್ಯಾಧಿಕಾರಿ ಡಾ। ರೋಶನಿ ಶೆಟ್ಟಿ, ನೇತ್ರತಜ್ಞೆ ಡಾ. ರಶ್ಶಿ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ರಮೇಶ್ ಶೆಟ್ಟಿ, ಶಂಕರ್ ಶೆಟ್ಟಿ, ರಂಜಿತ್ ಕುಮಾರ್ ಶೆಟ್ಟಿ, ಪಿ.ಎಚ್.ಎಫ್ ರವಿರಾಜ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಸತೀಶ್ ಶೆಟ್ಟಿ, ಉದಯ್ ಶೆಟ್ಟಿ ಆಜ್ರಿ ಹಾಗೂ ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಧರ್ಮದ ಆಚರಣೆಯಲ್ಲಿ ವೈವಿಧ್ಯತೆ, ವ್ಯತ್ಯಾಸ ಇದ್ದರೂ ಧರ್ಮ ಎಂದೂ ಒಂದೇ. ಧರ್ಮದ ಆಚರಣೆ ಮಾಡದಿದ್ದವರು ನಾಸ್ತಿಕರು. ಜಗತ್ತಿನ ಸಾಮರಸ್ಯಕ್ಕೆ ಧರ್ಮ ಅವಶ್ಯಕ. ಧರ್ಮದ ಆಧಾರದಲ್ಲಿ ಇರುವುದರಿಂದಲೇ ಜಗತ್ತಿನಲ್ಲಿ ಸಹಬಾಳ್ವೆ, ವಿಶೇಷ ಬಾಂಧವ್ಯ, ಅಹಿಂಸೆ ನೋಡಬಹುದು. ಧರ್ಮದ ಅಡಿಯಲ್ಲಿ ನಡೆದಾಗ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ. ಹೀಗಾಗಿ ಧರ್ಮದ ಜಾಗೃತಿ ಆಗಬೇಕು, ಚಿಂತನೆಗಳು ನಡೆಯಬೇಕಿದೆ. ಧರ್ಮದ ಅರಿವು ಆಗಬೇಕು, ಹಿಂದು ಧರ್ಮದ ಪರಂಪರೆ, ಸಂಸ್ಕೃತಿಯನ್ನು ಬೆಳೆಸುವ ಕೈಂಕರ್ಯ ಆಗಬೇಕು. ಎಲ್ಲರೂ ಧರ್ಮದ ಆಚರಣೆ ಮಾಡುತ್ತಿರಬೇಕು ಎಂದು ಉಡುಪಿ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಸ್ವಾಮಿಗಳು ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ-2024ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಬುಧವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ವಿದ್ಯಾದೇವತೆಯಾಗಿರುವ ಶ್ರೀ ಶಾರದಾ ಮಾತೆಯ ವಿಶೇಷ ಉಪಾಸನೆಯನ್ನು ನವರಾತ್ರಿಯ ಪರ್ವಕಾಲದಲ್ಲಿ ಮಾಡುತ್ತಿರಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ ಮಕ್ಕಳು ಮೀನು ಹೆಕ್ಕುವ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಈ ಹಿಂದೆ ದಾಳಿ ನಡೆಸಿದರೂ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಕಾರ್ಯಪಡೆಯ ಸದಸ್ಯರುಗಳು ಆಗಿಂದಾಗ್ಗೆ ನಿರಂತರ ಅನಿರೀಕ್ಷಿತ ದಾಳಿ ಹಾಗೂ ಭೇಟಿಗಳನ್ನು ಮಾಡುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಸೂಚನೆ ನೀಡಿದರು. ಬಾಲ ಕಾರ್ಮಿಕತೆ ಮಕ್ಕಳ ಬಾಲ್ಯ, ಅವರ ಸಾಮರ್ಥ್ಯ, ಘನತೆ ಕಸಿದುಕೊಳ್ಳುವ ಹಾಗೂ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೈತಿಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಮಂಡಲ ಬಿಜೆಪಿ ಪಕ್ಷದ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯಚಟುವಟಿಕೆಗಳ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಎಂಎಲ್ಸಿ ಅಭರ್ಥಿ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ, ಸುಧೀರ್ ಕೆ. ಎಸ್, ಮಂಡಲ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ಶ್ರೀ ಲಲಿತ ಕೃಷ್ಣ ಕಲಾ ಮಂದಿರದ ಸಭಾಂಗಣದಲ್ಲಿ ಬೈಂದೂರು ಮಂಡಲ ಬಿಜೆಪಿ ಪಕ್ಷದ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯಚಟುವಟಿಕೆಗಳ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಬಿಜೆಪಿ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ಜಿಲ್ಲೆಯ ಕಾರ್ಯದರ್ಶಿಗಳಾದ ರಾಘವೇಂದ್ರ ಹಾಗೂ ಪ್ರಿಯದರ್ಶಿನಿ, ಬಿಜೆಪಿ ಉಡುಪಿ ಜಿಲ್ಲೆಯ ಪ್ರಭಾರಿಯಾದ ರಾಜೇಶ್ ಕಾವೇರಿ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಶೆಟ್ಟಿ ಕಲ್ಗದ್ದೆ, ಬೈಂದೂರು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಮಹೇಂದ್ರ ಪೂಜಾರಿ, ಬೈಂದೂರು ಬಿಜೆಪಿ ಮಂಡಲ ಹಾಗೂ ಪಕ್ಷದ ಹಿರಿಯರು ಹಾಗೂ ಮುಖಂಡರು ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ಫಾರ್ಮಸಿ ಪದವಿ ಕಾಲೇಜನ್ನು ಈ ವರ್ಷವೇ ನೂತನವಾಗಿ ಪ್ರಾರಂಭಿಸುತ್ತಿದೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು ಈ ವರ್ಷದಿಂದಲೇ ಅಂದರೆ, 2024-25ನೇ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲು ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಅನುಮತಿ ನೀಡಿದ್ದು, ಇದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರಿನಿಂದ ಸಂಯೋಜಿಸಲ್ಪಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸುವ ಈ ಕೋರ್ಸ್ಗಾಗಿ ಈಗಾಗಲೇ ವಿಶೇಷ ಮುತುವರ್ಜಿವಹಿಸಿದ್ದು ಅನುಭವಿ ಶಿಕ್ಷಕರು, ವಿಶೇಷ ತರಗತಿ ಕೊಠಡಿಗಳು, ಆಧುನಿಕ ಪ್ರಯೋಗಾಲಯ, ನವೀನ ಗ್ರಂಥಾಲಯ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ವಿಶೇಷ ಸವಲತ್ತುಗಳುಳ್ಳ ವಸತಿ ನಿಲಯಗಳನ್ನು ರೂಪಿಸಲಾಗಿದೆ ಎಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ನಮ್ಮ ಜೀವನದಲ್ಲಿ ಔಷಧಿ ಕ್ಷೇತ್ರವು ಅತ್ಯಂತ ಮಹತ್ವದ್ದಾಗಿದ್ದು…
