Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೂಡಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್  ಇಲ್ಲಿ ಪ್ರಸಕ್ತ ಸಾಲಿನ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್” ಪ್ರವೇಶಾತಿಗಾಗಿ ಹತ್ತನೇ ತರಗತಿ ಉತ್ತೀರ್ಣರಾದ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08258-236561, 7022429440, 8971361396 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಸಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನಿರ್ಮಿಸಿರುವ ನೂತನ ಬಾಲಕಿಯರ ಹೈಟೆಕ್ ಶೌಚಾಲಯದ ಉದ್ಘಾಟನೆ ಹಾಗೂ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನೀಡಿದ ನೂತನ ಶಾಲಾ ಬಸ್ ಇದರ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಇದರ ಜೊತೆಗೆ ಜಿಲ್ಲಾ ಪಂಚಾಯತ್ ಅನುದಾನ 2025-26 ವತಿಯಿಂದ ಶಾಲೆಯಲ್ಲಿ ನಿರ್ಮಿಸಿದ ಬಾಲವನ ಹಾಗೂ ದ್ವಿಭಾಷ (ಕನ್ನಡ /ಇಂಗ್ಲಿಷ್ ) ಮಾಧ್ಯಮ ಇದರ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕಗಳನ್ನು ಶಾಸಕರು ವಿತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ. ಇವರ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ಶಾಸಕರು ಚಾಲನೆ ನೀಡಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರ ಒಗ್ಗಟ್ಟು ಇಂತಹ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಸಿಎಂ ವಿಜಯ ಅವರನ್ನು ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ಪ್ರದಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಶಕ್ತಿ ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ದೇವರ ದರ್ಶನ ಪಡೆದ ಬಳಿಕ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ವೇಳೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ದೇವಳದ ಸಮಿತಿ ಸದಸ್ಯರುಗಳಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ, ಲ್ಯಾಟರಲ್ ಎಂಟ್ರಿ ಮೂಲಕ 2 ನೇ ವರ್ಷ / 3ನೇ ಸೆಮಿಸ್ಟರ್ ಪ್ರವೇಶಾತಿಗೆ, ಐ.ಟಿ.ಐ / ದ್ವಿತೀಯ ಪಿ.ಯು.ಸಿ (ವಿಜ್ಞಾನ / ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಮೊ.ನಂ: 9482492778, 9480320935 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ, ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದೆ. ಇದರಿಂದ ಸಾಕಷ್ಟು ಸಮಸ್ಯೆಗಳನ್ನು ಈಗಾಲೇ ಎದುರಿಸುತ್ತಿದ್ದೇವೆ. ಈ ದಿಸೆಯಲ್ಲಿ ಪಂಚವರ್ಣ ಈ ಹಸಿರು ಹೆಜ್ಜೆ ಗ್ರಾಮೀಣ ಭಾಗಗಳಲ್ಲಿ ಮೇಳೈಸಿಕೊಂಡಿದೆ ಎಂದು ಕೋಡಿ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಕೋಡಿ ಗ್ರಾಮಪಂಚಾಯತ್ ನೇತೃತ್ವದಲ್ಲಿ ಕೋಟದ ಪಂಚವರ್ಣ ಸಂಘಟನೆ,ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ,ಸಂಜೀವಿನಿ ಒಕ್ಕೂಟ ಕೋಡಿ ಪಂಚಾಯತ್ ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರ ಸಹಯೋಗದೊಂದಿಗೆ ಮೂರನೇ ವರ್ಷದ ಹಸಿರು ಹೆಜ್ಜೆ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾತಾವರಣದ ವ್ಯತ್ಯಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇದರ ಪರಿಣಾಮದಿಂದ ಬಿಸಿ ಗಾಳಿ,ಮಳೆಯ ಪ್ರಮಾಣ ಕಡಿತಗೊಂಡಿದೆ ಹೀಗಿರುವಾಗ ಪ್ರತಿ ಗ್ರಾಮ ವ್ಯಾಪ್ತಿಯಲ್ಲಿ ಹಸಿರು ಅಭಿಯಾನ ಕೈಗೊಂಡರೆ ಪರಿಸರ ಮತ್ತೆ ಸಮತೋಲನ ಕಾಣಲಿದೆ ಇದರಿಂದ ಮುಂದಿನ ಜನಾಂಗಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎಂದು ಕೋಡಿ ಪಂಚಾಯತ್ ಹಸಿರು ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಸಿರು ಹೆಜ್ಜೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇತ್ತೀಚಿಗೆ ಮಣಿಪಾಲದಲ್ಲಿ ನಡೆದ ಜಿಲ್ಲಾ ರೋಟರಿ ಇಂಟರ್ನ್ಯಾಷನಲ್‌ 3182, ವಲಯ – 4ರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪರಿಸರ ರಕ್ಷಕರನ್ನು ಸನ್ಮಾನಿಸುವ ’ನಿಸರ್ಗ ನಮನ-2026’ಕಾರ್ಯಕ್ರಮದಲ್ಲಿ ಕೋಟದ ಪರಿಸರಸ್ನೇಹಿ ಸಂಘಟನೆಯಾದ ಪಂಚವರ್ಣ ಯುವಕ ಮಂಡಲಕ್ಕೆ ವಿಶ್ವ ಪರಿಸರ ದಿನದ ನಿಸರ್ಗ ನಮನ-ಜಿಲ್ಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಕಳೆದ 29 ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನ, ಹಸಿರು ಅಭಿಯಾನಗಳ ಮೂಲಕ ಗುರುತಿಸಿಕೊಂಡಿದೆ.ರಾಜ್ಯ ಸರಕಾರ ಇಂದಿರಾಪ್ರಿಯದರ್ಶಿನಿ ಪ್ರಶಸ್ತಿ ಸಹಿತ ಹಲವು ಸಂಘಸಂಸ್ಥೆಗಳು ಗುರುತಿಸಿ ಗೌರವಿಸಿದೆ. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಪ್ರಮುಖರಾದ ಡಾ. ಭರತೇಶ್ ಆದಿರಾಜ್, ಅಮಿತ್ ಅರವಿಂದ್, ಡಾ. ಗಣೇಶ ಎ., ಜನಾರ್ದನ ಭಟ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಲೇಖನ.ಉಡುಪಿ: ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಹಾಗೂ ಕಾಳುಮೆಣಸು ವಿಪರೀತ ಮಳೆಯಿಂದಾಗಿ ವಿವಿಧ ರೋಗ ಬಾಧೆಗೆ ತುತ್ತಾಗುವ ಸಾಧ್ಯತೆ ಇದ್ದು, ಅಸಮರ್ಪಕ ನಿರ್ವಹಣೆಯಿಂದಾಗಿ ಇಳುವರಿ ನಷ್ಟ, ರೋಗಬಾಧೆ ಉಲ್ಬಣವಾಗಿ ಮರಗಳು ಸಂಪೂರ್ಣ ನಾಶವಾಗುವ ಸಾಧ್ಯತೆ ಹೆಚ್ಚು. ಅಡಿಕೆ ಬೆಳೆಗೆ ರೋಗಬಾಧೆಗಳು ಉಲ್ಬಣಿಸುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ. ಜಿಲ್ಲೆಯು ವಾರ್ಷಿಕ 4500 ಮಿ.ಮೀ. ಗಿಂತಲೂ ಹೆಚ್ಚು ಮಳೆಯಾಗುವ ಪ್ರದೇಶವಾಗಿದೆ. ಮಳೆಗಾಲದಲ್ಲಿ ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳ ಕೊಚ್ಚಣೆ ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದಾಗಿ ಅಡಿಕೆ ಕೊಳೆ ರೋಗ, ಕಾಳುಮೆಣಸು ಸೊರಗು ರೋಗ ಹಾಗೂ ತೆಂಗಿನಲ್ಲಿ ಸುಳಿಕೊಳೆ ರೋಗ ಉಲ್ಬಣಿಸುವ ಸಾಧ್ಯತೆ ಇರುತ್ತದೆ. ಅಡಿಕೆ ಮತ್ತು ತೆಂಗಿನಲ್ಲಿ ಮಳೆಗಾಲದಲ್ಲಿ ಕೊಳೆರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳದೆ ಇದ್ದಲ್ಲಿ, ಅಕ್ಟೋಬರ್ ತಿಂಗಳಿನಿಂದ ಫೆಬ್ರವರಿವರೆವಿಗೂ ಹೆಚ್ಚಾಗುವ ಮಂಜಿನ ಹನಿಗಳು ರೋಗಾಣುಗಳು ಅಭಿವೃದ್ದಿಗೆ ಅನುಕೂಲಕರವಾಗಿದ್ದು, ಕೊಳೆ ರೋಗಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು ವಿದ್ಯಾರ್ಥಿಗಳಿಂದ ಮಾತ್ರ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೇ.75 ಅಲ್ಪಸಂಖ್ಯಾತರು ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಪ್ರಸ್ತುತ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರಬೇಕು. ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ/ಆದಾಯ ಪ್ರಮಾಣ ಪತ್ರ, ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್‌ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠ ಮತ್ತು ಆನೆಗುಂದಿ ಗುರು ಸೇವಾ ಪರಿಷತ್ ಕೇಂದ್ರ ಸಮಿತಿ ಕಟಪಾಡಿ ಪಡುಕುತ್ಯಾರು, ಆನೆಗುಂದಿ ಗುರು ಸೇವಾ ಪರಿಷತ್ ಕೋಟ ಮಂಡಲದ ಪದ ಪ್ರದಾನ ಸಮಾರಂಭ ಇತ್ತೀಚಿಗೆ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಪ್ರವೀಣ್ ಆಚಾರ್ಯ ಗುರು ಜ್ಞಾನದ ದೀಪ, ಗುರುಗಳಿಗೆ ಗೌರವ ಸಲ್ಲಿಸುವುದು, ನಮ್ಮ ಸಂಸ್ಕೃತಿ, ನಮ್ಮ ಕರ್ತವ್ಯ ಎಂದರು. ಸಭೆಯ ಅಧ್ಯಕ್ಷತೆಯನ್ನು ಆನೆಗುಂದಿ ಗುರು ಸೇವಾ ಪರಿಷತ್ ಕೋಟ ಮಂಡಲದ ಅಧ್ಯಕ್ಷ ಎಸ್. ಬಿ. ರಾಘವೇಂದ್ರ ಆಚಾರ್ಯ ದೇವಿ ಪಾತ್ರಿಗಳು ಸಾಲಿಗ್ರಾಮ ವಹಿಸಿದ್ದರು. ಪದ ಪ್ರದಾನವನ್ನು ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಸುಬ್ರಾಯ ಆಚಾರ್ಯ ನೆರವೇರಿಸಿಕೊಟ್ಟರು. ಶುಭಾಶಂಶನೆಯನ್ನು ವೇದಮೂರ್ತಿ ಲಕ್ಷ್ಮೀಕಾಂತ ಶರ್ಮ ಚೇಂಪಿ ಗೈದರು. ನಿತ್ಯ ಜೀವನದಲ್ಲಿ ವಿಜ್ಞಾನ ಎನ್ನುವ ವಿಷಯದ ಕುರಿತು ಮಾಹಿತಿಯನ್ನು ರೇಖಿ ತಜ್ಞ ಕಾರ್ಕಡ ನಾರಾಯಣ ಆಚಾರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 2026-27ನೇ ವರ್ಷದಲ್ಲಿ ದಾಖಲಾತಿ ಪಡೆದುಕೊಂಡು ಅಧ್ಯಯನಕ್ಕೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಸುಪ್ತವಾದ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಮನೆಯನ್ನು ತೊರೆದು ಪಾಠಶಾಲೆಗೆ ಸೇರಿದ ದಿನಗಳಲ್ಲಿ ಮನೆಯ ನೆನಪಿನಲ್ಲಿರುತ್ತಾರೆ. ತಮಗೆ ಅವಕಾಶಗಳನ್ನು ಅರಸುತ್ತಿರುತ್ತಾರೆ. ತಮ್ಮನ್ನು ಗುರುತಿಸಿಕೊಳ್ಳಲು ಹಾತೊರೆಯುತ್ತಿರುತ್ತಾರೆ. ಅವರಿಗೆ ಸೂಕ್ತ ವೇದಿಕೆಯನ್ನು ಒದಗಿಸಬೇಕಾದ ಸಹಪಾಠಿ-ಶಿಕ್ಷಕವೃಂದವೂ ಅವರ ಸುಪ್ತಪ್ರತಿಭೆಗಳ ಅನಾವರಣವನ್ನು ಬಯಸುತ್ತಿರುತ್ತಾರೆ. ಇದೆಲ್ಲವನ್ನು ಪರಿಗಣಿಸಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರು ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮಕ್ಕಳನ್ನು ಲವಲವಿಕೆಯಿಂದ ಕೂಡುವಂತೆ ಮಾಡಲು ಈ  ಕಾರ್ಯಕ್ರಮ ಬಹಳ ಸಹಕಾರಿಯಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಕಾರ್ಯಕ್ರಮವನ್ನು ಆಮೂಲಾಗ್ರವಾಗಿ ಗಮನಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ, ಪ್ರೋತ್ಸಾಹಿಸಿದರು. ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರೂ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗಾಂಧಾರಿ ವಿದ್ಯೆ, ಅಬಾಕಸ್, ಸಂಗೀತ, ನೃತ್ಯ, ಶ್ಲೋಕಪಠಣ, ಯೋಗ, ಭಜನೆ, ಏಕಪಾತ್ರಾಭಿನಯ, ಸಮೂಹಗಾಯನ,…

Read More