ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶಿರೂರು ಗಾಂಧಿ ಮೈದಾನದಲ್ಲಿ ಪಟಾಕಿ ಅಂಗಡಿ ನಡೆಸುತ್ತಿದ್ದ ಯುವಕ ಹಾಗೂ ಆತನ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ 11 ಮಂದಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 10ರಂದು ಸಂಜೆ ಸುಮಾರು 4.30ರ ವೇಳೆಗೆ ಶಿರೂರು ಗಾಂಧಿ ಮೈದಾನದಲ್ಲಿ ನಡೆದಿದೆ. ಹಡವಿನಕೋಣೆ ಶಿರೂರು ನಿವಾಸಿ ಸಾಯಿರಾಮ್ (22) ಎಂಬವರು ಗಾಂಧಿ ಮೈದಾನದಲ್ಲಿ ಪಟಾಕಿ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಗಳಾದ ಶಶಿಕುಮಾರ್ ಮೇಸ್ತ ತಿಮ್ಮಪ್ಪ ಮೇಸ್ತ ಸೌಮ್ಯ ತಿಮ್ಮಪ್ಪ ಮೇಸ್ತ್ರ ದೀಕ್ಷಿತ ಮೇಸ್ತ ನಿತೇಶ್ ತಿಮ್ಮಪ್ಪ ಮೇಸ್ತ ದರ್ಶನ ನಾಗರಾಜ ಮೇಸ್ತ ದೀಪಕ್ ಬಾಲಕೃಷ್ಣ ಮೇಸ್ತ್ರ ಧನುಷ್ ಬಾಲಕೃಷ್ಣ ಮೇಸ್ತ ಆಶಿಶ್ ಮೇಸ್ತ ಮಂಜುನಾಥ ನಾಗೇಶ್ ಮೇಸ್ತ ಹಾಗೂ ಶ್ರೀಧರ್ ಜಿ ಎಂಬವರು ಅಲ್ಲಿಗೆ ಬಂದಿದ್ದಾರೆ ಎನ್ನಲಾಗಿದೆ. ಆರೋಪಿ ಶಶಿಕುಮಾರ್ ತನ್ನ ತಂದೆ ತಿಮ್ಮಪ್ಪ ಮೇಸ್ತ ಹಾಗೂ ತಾಯಿ ಸೌಮ್ಯ ಅವರೊಂದಿಗೆ ಸ್ಥಳಕ್ಕೆ ಆಗಮಿಸಿ, ಸಾಯಿರಾಮ್ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ. ಸಾಕಷ್ಟು ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸ್ವರ್ಣಲೇಪಿತ ಆಂಜನೇಯ ಕವಚ ಸಮರ್ಪಿಸಿದ ಬೆಂಗಳೂರಿನ ಯಜ್ಞನಾರಾಯಣ ಹೇರ್ಳೆ ಹೇಳಿದರು. ಅವರು ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತಕ್ಕೊಳಪಟ್ಟ ಶ್ರೀ ಆಂಜನೇಯ ದೇವರಿಗೆ ಸರ್ಣಲೇಪಿತ ಕವಚ ಹಸ್ತಾಂತರ ಧಾರ್ಮಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ದೇಗುಲದ ಅಭಿವೃದ್ಧಿಯಾಗಬೇಕಾದರೆ ಅರ್ಚಕ ಧಾರ್ಮಿಕ ಶ್ರದ್ಧೆ ಅಷ್ಟೆ ಶ್ರೇಷ್ಠತೆಯನ್ನು ಪಡೆದುಕೊಳ್ಳುತ್ತದೆ ಅದೇ ರೀತಿ ಸಾಲಿಗ್ರಾಮ ದೇಗುಲದ ಅರ್ಚಕರ,ಆಡಳಿತ ಮಂಡಳಿಯ ಪಾತ್ರ ಗಣನೀಯವಾದದ್ದು ಎಂದರಲ್ಲದೆ ಯುವ ಜನಾಂಗ ಧಾರ್ಮಿಕ ಸಂಸ್ಕಾರಯುತ ಜೀವನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಬಂಟ್ವಾಳ ಪ್ರಕಾಶ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ದೇಗುಲದ ಮಾಜಿ ಅಧ್ಯಕ್ಷರಾದ ಜಗದೀಶ್ ಕಾರಂತ,ಡಾ.ಕೆ.ಎಸ್ ಕಾರಂತ,ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷ ಸತೀಶ್ ಹಂದೆ,ಅಂಗಸಂಸ್ಥೆಯ ಅಧ್ಯಕ್ಷ ಬಿ.ಸಿ ಹೊಳ್ಳ,ದೇಗುಲದ ಟ್ರಸ್ಟಿಗಳಾದ ಪ್ರಸನ್ನ ತುಂಗ,ಲಕ್ಷ್ಮೀನಾರಾಯಣ ಹೊಳ್ಳ,ತಾರಾನಾಥ ಹೊಳ್ಳ,ಮಾಜಿ ಉಪಾಧ್ಯಕ್ಷ ರಘುನಾಥ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರ ಬೀಜಾಡಿಯ ವಿಷ್ಣುಮೂರ್ತಿ ದೇಗುಲದ ಬಳಿಯ ಒಳ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಆ ಮಾರ್ಗವಾಗಿ ಸಾಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಹೆದರಿಸಿ ಆಕೆಯ ಕೈಯಲ್ಲಿದ್ದ ಚಿನ್ನದ ಬಳೆಯನ್ನು ಎಳೆದು ಎಗರಿಸಿ, ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಅಗಲ ಕಿರಿದಾದ ಹೆಬ್ಬಾರ್‌ಬೆಟ್ಟು ರಸ್ತೆಯ ಬಳಿಯ ಈ ಮಾರ್ಗದಲ್ಲಿ ಅಲ್ಲಿನ ನಿವಾಸಿ ಮಹಿಳೆಯೋರ್ವರು ಒಂಟಿಯಾಗಿ ಸಂಜೆ ಸಾಗುತ್ತಿದ್ದ ಸಂದರ್ಭ ದಿಢೀರಾಗಿ ಪ್ರತ್ಯಕ್ಷವಾದ ಬರ್ಮುಡ ಧರಿಸಿದ್ದ ವ್ಯಕ್ತಿಯೋರ್ವ ಆಕೆ ಸಾಗುವ ಹಾದಿಯ ಮಧ್ಯೆ ಕುಂಟನಂತೆ ನಟಿಸಿ ಸಂಚಾರಕ್ಕೆ ಅಡ್ಡಿಪಡಿಸುತ್ತಾ ಸಮೀಪಿಸುತ್ತಿದ್ದಂತೆ ಅಪಾಯದ ಅರಿವಾದ ಮಹಿಳೆ ಸಹಾಯಕ್ಕಾಗಿ ಕೂಗುವ ಮೊದಲೇ ಆತ ಆಕೆಗೆ ಚೂರಿತೋರಿಸಿ, ಕೈಯಲ್ಲಿದ್ದ ಬಳೆಯನ್ನು ಬಲತ್ಕಾರವಾಗಿ ಎಗರಿಸಿ ಸನಿಹ ದಟ್ಟ ಕಾಡು ಮಾರ್ಗವಾಗಿ ಪಲಾಯನಗೈದಿದ್ದಾನೆ. ಎಕಾಏಕಿಯಾಗಿ ದಾಳಿ ಮಾಡಿದ ಸಂದರ್ಭದಲ್ಲಿ ಹೊಡೆಯಲಾಗದೇ ದಿಗ್ಗಮಗೊಂಡ ಮಹಿಳೆ ಸುಧಾರಿಸಿ, ಆಸುಪಾಸಿನ ಮನೆಯವರಿಗೆ ಘಟನೆಯ ಬಗ್ಗೆ, ವಿವರಿಸಿದರು. ಸ್ಥಳೀಯರು ಹುಡುಕಾಟ ನಡೆಸಿದರೂ ಅಷ್ಟರಲ್ಲಿ ಆತ ಪರಾರಿಯಾಗಿದ್ದನು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಧನಾತ್ಮಕ ಸ್ಪರ್ಧಾ ಮನೋಭಾವವನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಎಳವೆಯಲ್ಲಿಯೇ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಶಿಕ್ಷಣದ ನಿಜವಾದ ಅರ್ಥವನ್ನು ಅರಿತುಕೊಳ್ಳಬೇಕು ಎಂದು ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ವತಿಯಿಂದ ಪದವಿ-ಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ವಿಕಾಸ್ ಶೆಟ್ಟಿ, ಖುಷಿ ಶೆಟ್ಟಿ, ಅಭಿಷೇಕ್ ಕುಲಾಲ್ ಹಾಗೂ ನಿಶಾಂತ್ ಡಿಸೋಜ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸತೀಶ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ನಿಟ್ಟೂರಿನ ಆಭರಣ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇಲ್ಲಿ ನವೆಂಬರ್ 17 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ; 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದಿ. ದಿನಕರ ಶೆಟ್ಟಿ ನಿಡೂಟಿ ಹಿತೈಷಿ ಮತ್ತು ಅಭಿಮಾನಿ ಬಳಗ, ಸ್ಪೂರ್ತಿ ಯುವ ವೇದಿಕೆ ಹೊಸೂರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಜಡ್ಕಲ್ ಕಾನ್ಕಿ, ಲಯನ್ಸ್ ಕ್ಲಬ್ ಹಂಗಳೂರು ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ ಹೊಸೂರು ಹರ್ಲಾಡಿಕೆರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ಇತ್ತೀಚಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಅಧ್ಯಕ್ಷರಾದ ಸತೀಶ್ ಸಾಲ್ಯಾನ್ ಮಣಿಪಾಲ್, ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಹಂಸರಾಜ್ ಶೆಟ್ಟಿ, ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಿ. ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ರಕ್ತದಾನಿ ವಿಜಯ್ ಪೂಜಾರಿ ಕುಂದಾಪುರ, ಹರ್ಲಾಡಿಕೆರೆ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ, ಬಾಸ್ಕರ್ ಶೆಟ್ಟಿ, ಜಯರಾಮ್ ಶೆಟ್ಟಿ, ನಾರಾಯಣ ಶೆಟ್ಟಿ, ಶಾಲಿಕಾ ಶೆಟ್ಟಿ, ಸುಂದರ ಶೆಟ್ಟಿ, ಪ್ರವೀಣ್ ಶೆಟ್ಟಿ ಮೇಲ್ ಹೊಸೂರು ಹಾಗೂ ಪ್ರಶಾಂತ್ ತಲ್ಲೂರು, ಸುಧಾಕರ್ ಶೆಟ್ಟಿ, ಶರತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಮುಖ ಧಾರ್ಮಿಕ ಕ್ಷೇತ್ರಗಳನ್ನು ಸಂಪರ್ಕಿಸುವ ದೇವಸ್ಥಾನ ಪ್ರವಾಸೋದ್ಯಮ ಕಾರಿಡಾರ್ ಅಭಿವೃದ್ಧಿ ಉದ್ದೇಶದ ಖಾಸಗಿ ವಿಧೇಯಕವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ವಿಧಾನಸಭೆಯಲ್ಲಿ ಮಂಡಿಸಲು ಮುಂದಾಗಿದ್ದು, ಈ ಕುರಿತು ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಕರ್ನಾಟಕ ವಿಧಾನಸಭೆಯ ಮಾನ್ಯ ಉಪಸಭಾಪತಿಗಳು ಹಾಗೂ ಖಾಸಗಿ ವಿಧೇಯಕ ಸಮಿತಿಯ ಅಧ್ಯಕ್ಷರಾದ ಮಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಹಣಕಾಸು ಇಲಾಖೆ ಕಾರ್ಯದರ್ಶಿಗಳು, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳು, ಮುಜರಾಯಿ ಇಲಾಖೆಯ ಆಯುಕ್ತರು, ಖಾಸಗಿ ವಿಧೇಯಕ ಸಮಿತಿಯ ಕಾರ್ಯದರ್ಶಿಗಳು ಹಾಗೂ ಸಮಿತಿಯ ಸದಸ್ಯರು ಮತ್ತು ವಿಧಾನಸಭಾ ಸದಸ್ಯರು ಉಪಸ್ಥಿತರಿದ್ದರು. ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸದರಿ ಖಾಸಗಿ ವಿಧೇಯಕವನ್ನು ಮಂಡಿಸುವ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. ಈ ಹಿಂದೆ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೌಹೀದ್ ಶಾಲೆ ಶಿರೂರಿನಲ್ಲಿ ನಡೆದಿರುವ ಬೈಂದೂರು ಶೈಕ್ಷಣಿಕ ತಾಲೂಕು ಥ್ರೋಬಾಲ್ ಪಂದ್ಯಾಟದಲ್ಲಿ ಆಲೂರು ಸರಕಾರಿ ಪ್ರೌಢಶಾಲೆಯ ಮೂರು ವಿಭಾಗದ ತಂಡದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ ಬಾಲಕಿಯರ ತಂಡ, 17ರ ವಯೋಮಾನದ ಬಾಲಕರ ತಂಡ, 17ರ ವಯೋಮಾನದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಶಾಲೆಗೆ ಹಾಗೂ ಊರಿಗೆ ಕೀರ್ತಿ ತಂದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂದಿನ ಡಿಜಿಟಲ್ ಯುಗದಲ್ಲಿ ಸಾಕ್ಷರತೆ ಎಂದರೆ ಕೇವಲ ಓದು ಮತ್ತು ಬರವಣಿಗೆಯ ಜ್ಞಾನಕ್ಕೆ ಸೀಮಿತವಾಗಿಲ್ಲ. ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಬಳಸುವ ಜ್ಞಾನವೂ ಅಷ್ಟೇ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಗುರುವಾರ ಕಾಲೇಜಿನ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ಆಯೋಜಿಸಿದ್ದ ‘ಡಿಜಿಟಲ್ ಸಾಕ್ಷಾರತೆ ಮತ್ತು ಸೈಬರ್ ಸುರಕ್ಷತೆ’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಡಿಜಿಟಲ್ ತಂತ್ರಜ್ಞಾನದ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳ ವ್ಯಾಪ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಅಪರಾಧ, ಆನ್‌ಲೈನ್ ವಂಚನೆ, ವೈಯಕ್ತಿಕ ಮಾಹಿತಿಯ ಕಳವು ಹಾಗೂ ನಕಲಿ ಸುದ್ದಿಗಳಂತಹ ಸವಾಲುಗಳೂ ಹೆಚ್ಚುತ್ತಿವೆ. ಇಂತಹ ಸಮಸ್ಯೆಗಳಿಂದ ಸುರಕ್ಷಿತವಾಗಿರಲು ಡಿಜಿಟಲ್ ಮಾಧ್ಯಮಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರು ನೀಡಿರುವ ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಅಧಿಕಾರಿಗಳು ನಿಗಧಿತ ಕಾಲಾವಧಿಯಲ್ಲಿ ಸ್ಪಂದಿಸಿ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳ ವಿಲೇವಾರಿಯ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರ ಅಹವಾಲುಗಳನ್ನು ಅವರುಗಳಿದ್ದಲ್ಲಿಯೇ ಹೋಗಿ ಬಗೆಹರಿಸುವ ಉದ್ದೇಶದಿಂದ ಸರಕಾರ ಪ್ರಜಾಸೇವಾ ಆಂದೋಲನವನ್ನು ನಡೆಸುತ್ತಿದೆ. ಈ ಆಂದೋಲನದಲ್ಲಿ ಜನರು ನೀಡಿದ ಅಹವಾಲುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ನಿಯಮಾನುಸಾರ ಸಮಸ್ಯೆಗಳನ್ನು ಕಡ್ಡಾಯವಾಗಿ ಅನಗತ್ಯ ವಿಳಂಬ ಮಾಡದೇ ಪ್ರಾಮಾಣಿಕವಾಗಿ ಬಗೆಹರಿಸಿ ಹಿಂಬರಹವನ್ನು ನೀಡಬೇಕು ಎಂದರು. ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳು ಬಂದಾಗ ವಿಷಯಾಧಾರಿತವಾಗಿ ಯಾವ ಇಲಾಖೆ ಬರುತ್ತದೆ ಎಂದು ಮನಗಂಡು ಅವುಗಳನ್ನು ವಿಲೇವಾರಿಗೆ ಮುಂದಾಗಬೇಕು. ಒಂದೊಮ್ಮೆ ಅವು ತಮ್ಮ ವ್ಯಾಪ್ತಿಯ ಇಲಾಖೆಗೆ ಬರುವುದಿಲ್ಲ ಅಥವಾ ಇತರೆ ತಾಲೂಕಿಗೆ ಬರುತ್ತದೆ ಎಂದು ಕಂಡುಬಂದಲ್ಲಿ ತಕ್ಷಣವೇ…
