ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಅಂಗವಾಗಿ ಪ್ರತಿದಿನ ದುರ್ಗಾಹೋಮ ಕಾರ್ಯಕ್ರಮಗಳು ಜರಗುತ್ತಿದ್ದು ಭಾನುವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಹಲವು ಸೇವಾರ್ತಿಗಳಿಂದ ದುರ್ಗಾಹೋಮ ಕಾರ್ಯಕ್ರಮಗಳು ಜರಗಿದವು. ವೇ.ಮೂ.ಮಧುಸೂದನ್ ಬಾಯರಿ ನೇತೃತ್ವದಲ್ಲಿ ನಡೆದ ಹೋಮಾಧಿಕಾರ್ಯಕ್ರಮದಲ್ಲಿ ಸಂಸದ ಕೋಟ ಹಾಗೂ ಪತ್ನಿ ಶಾಂತ ಮತ್ತು ಮಕ್ಕಳು ಇತರ ಸೇವಾರ್ತಿಗಳಾದ ಲಕ್ಷ್ಮಿ ಮತ್ತು ನರಸಿಂಹ ಪೂಜಾರಿ ಹಾಗೂ ಕುಟುಂಬ ಅಪೂರ್ವ ನಿಲಯ ಹಾಡಿಕೆರೆ ಕೋಟ, ಸಜನಿ ಮತ್ತು ಆದಿತ್ಯ ಕೋಟ್ಯಾನ್ ಕುಟುಂಬದವರು, ನಡುಬೆಟ್ಟು ಮಣೂರು ಇವರು ಸೇವಾರ್ತಿಗಳಾಗಿ ಭಾಗಿಯಾದರು. ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಸೇವಾರ್ತಿಗಳಿಗೆ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಸುಭಾಷ್ ಶೆಟ್ಟಿ, ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಜ್ಯೋತಿ ಕಾಂಚನ್, ಸುಬ್ರಾಯ ಜೋಗಿ, ಚಂದ್ರ ಅಚಾರ್ಸಹಿತ ಹಲವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಇನ್ನಷ್ಟು ಪರಿಣಾಮಯಾಗಿ ರೈತಾಪಿ ವರ್ಗದವರಿಗೆ ತಲುಪಿಸಿ, ಅವರುಗಳನ್ನು ಸ್ವಾವಲಂಭಿಗಳನ್ನಾಗಿ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮಸ್ಥೆöÊರ್ಯ ದೊರಕುವಂತಾಗಬೇಕು. ನೇಗಿಲ ಯೋಗಿಯ ಶ್ರಮಕ್ಕೆ ಆಧುನಿಕ ತಂತ್ರಜ್ಞಾದ ಬೆಳಕು ಸಿಗಲಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಐ.ಸಿ.ಎ.ಆರ್- ಕೃಷಿ ವಿಜ್ಞಾನ ಕೇಂದ್ರ ಮತ್ತು ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ ಹಾಗೂ ಇತರೆ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ನಡೆದ ಕೃಷಿ ಮತ್ತು ತೋಟಗಾರಿಕೆ ಮೇಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಕುಂದು ಕೊರತೆಯ ಅಹವಾಲು ಹಾಗೂ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರಗಳನ್ನು ಕೈಗೊಂಡಲ್ಲಿ ಮಾತ್ರ ಸರಕಾರದ ಇಂತಹ ಕಾರ್ಯಕ್ರಮಗಳು ಯಶಸ್ಸು ಸಾಧಿಸುತ್ತವೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಪ್ರವೃತ್ತರಾಗೋಣ ಎಂದು ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಶನಿವಾರ ಉಪ್ಪೂರು ಗ್ರಾಮದ ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ನ ಸೌಹಾರ್ದ ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಬ್ರಹ್ಮಾವರ ಇವರ ಸಹಯೋಗದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರದ ನೂತನ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಯ ಮೂಲಕ ಜನರ ಬಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಅವರ ಸಮಸ್ಯೆಗಳಿಗೆ ಅವರಿರುವಲ್ಲಿಯೇ ಪರಿಹಾರ ನೀಡುವ ಕಾರ್ಯಕ್ರಮ ಇದಾಗಿದ್ದು, ಆಡಳಿತ ಯಂತ್ರಗಳಿಗೆ ಚುರುಕು ನೀಡಿ, ಜನರ ಸಮಸ್ಯೆಗಳಿಗೆ ತುರ್ತು ಸ್ಪಂದಿಸಿ, ಅವರುಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪ್ರತೀ ಶನಿವಾರಗಳಂದು ಪ್ರಜಾಸೇವಾ ಆಂದೋಲನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತರು ಕನ್ನಡ ಸಾಹಿತ್ಯ ಮಾತ್ರವಲ್ಲ ಭಾರತೀಯ ಸಾಹಿತ್ಯದಲ್ಲಿ ಮಹತ್ವದ ಹೆಸರು. ಸ್ವಾತಂತ್ರ್ಯ ಪೂರ್ವದಲ್ಲಿ ತಮ್ಮ ಕೃತಿಗಳ ಮೂಲಕ ಶೋಷಣೆ, ಕಂದಾಚಾರ, ಅಸಮಾನತೆ, ದಬ್ಬಾಳಿಕೆ ಇತ್ಯಾದಿಗಳನ್ನು ವಿಮರ್ಶಿಸಿದ್ದಾರೆ. ವೈಚಾರಿಕ ಮತ್ತು ವೈಜ್ಞಾನಿಕ ದೃಷ್ಟಿಕೋನ ಅವರ ಸಾಹಿತ್ಯದ ಮುಖ್ಯ ಲಕ್ಷಣವಾಗಿದೆ. ಈ ದೃಷ್ಟಿಯಿಂದ ರಾ?ಮಟ್ಟದಲ್ಲಿ ಡಾ. ಕಾರಂತರು ಕರಾವಳಿಯ ಬದುಕು ಮತ್ತು ಸಂಸ್ಕೃತಿಯನ್ನು ಬಿಂಬಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ದೃಷ್ಟಿಯಿಂದ ಅವರ ಬದುಕು-ಬರಹಗಳ ಬಗ್ಗೆ ಇಂದಿನ ಪೀಳಿಗೆಗೆ ಅರಿವು ಮೂಡಿಸುವುದು ಅತಿ ಅಗತ್ಯ ಇದಕ್ಕಾಗಿ ಕರ್ನಾಟಕ ಸರಕಾರವು 2002ರಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟನ್ನು ಸ್ಥಾಪಿಸಿದೆ. 2024 ಡಿಸೆಂಬರ್ನಲ್ಲಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರ ಅಧ್ಯಕ್ಷತೆಯಲ್ಲಿ ಹೊಸ ಸಮಿತಿ ಅಸ್ಥಿತ್ವಕ್ಕೆ ಬಂದಿದೆ. ಕಳೆದ ಒಂದೂವರೆ ವರ್ಷದಲ್ಲಿ ಸುಮಾರು 75 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಅರಿವಿನ ಬೆಳಕು, ಮಕ್ಕಳಿಗಾಗಿ ಕಾರಂತರು, ತರಬೇತಿ ಶಿಬಿರಗಳು, ರಾಷ್ಟ್ರೀಯ ವಿಚಾರ ಸಂಕಿರಣ, ರಂಗಪ್ರದರ್ಶನಗಳನ್ನು ನಡೆಸಲಾಗಿದೆ. ಕೇವಲ ಅವಿಭಜಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕುಂಭಾಶಿ ವಿಶ್ವಕರ್ಮ ಕರಕುಶಲ ಕೇಂದ್ರಕ್ಕೆ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರು ಭೇಟಿ ನೀಡಿ, ರಥ ನಿರ್ಮಾಣ ಕೇಂದ್ರವನ್ನು ವಿಕ್ಷೀಸಿದರು. ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ರಾಜ್ ಗೋಪಾಲ ಆಚಾರ್ಯ ಅವರ ಬಳಿ ರಥ ಶಿಲ್ಪ ಕಾರ್ಯದ ಬಗ್ಗೆ ಸಂವಹನ ನಡೆಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾಲ್ತೂರು ಕೊಕ್ಕೋಡಿಗೆ ಹೋಗುವ ದಾರಿಯ ಬಳಿ ಗೇರು ಹಾಡಿಯಲ್ಲಿ ಮೇಯುತ್ತಿದ್ದ ದನವನ್ನು ದುಷ್ಕರ್ಮಿಗಳು ಕಳವಿಗೆ ಯತ್ನಿಸಿ, ಕಾರು ಬಿಟ್ಟು ಪರಾರಿಯಾಗಿರುವ ಘಟನೆ ಅ.15ರಂದು ಮಧ್ಯಾಹ್ನ ವೇಳೆ ನಡೆದಿದೆ. ಕಾವ್ರಾಡಿ ಗ್ರಾಮದ ಪ್ರಕಾಶ್ ಎಂಬವರ ದನವನ್ನು ಆರೋಪಿಗಳಾದ ಇಮಿಯಾಝ್, ರಿಜ್ವಾನ್ ದಸ್ತಗೀರ್ ಮತ್ತು ಜಿಮಾಮ್ ಎಂಬವರು ಕಾರಿಗೆ ತುಂಬಿಸಲು ಎಳೆದುಕೊಂಡು ಹೋಗಿ ಕಳವಿಗೆ ಯತ್ನಿಸುತ್ತಿದ್ದು ಈ ವೇಳೆ ವ್ಯಕ್ತಿಯನ್ನು ನೋಡಿ ಆರೋಪಿಗಳು ದನವನ್ನು ಬಿಟ್ಟು ಕಾರು ಮತ್ತು ಸ್ಕೂಟರ್ನಲ್ಲಿ ಪರಾರಿಯಾದರು. ಬಳಿಕ ಸುಮಾರು 2ಕಿ.ಮೀ. ದೂರದ ಕಾವ್ರಾಡಿ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಕಾರು ರಸ್ತೆಯ ಬದಿಯಲ್ಲಿ ಬಿಟ್ಟು ಸ್ಕೂಟಿಯಲ್ಲಿ ಓಡಿ ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯುತ್ತಿರುವ ಕುಂದಾಪುರದ ಡಾ. ಬಿ. ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಶ್ರಮದಾನವನ್ನು ಪ್ರಗತಿಪರ ಕೃಷಿಕರಾದ ಶ್ರೀ ಕೆ. ಶಂಭುಶಂಕರ್ ರಾವ್ ಹೆಗ್ಗುಂಜೆ ಅವರು ಉದ್ಘಾಟಿಸಿ ಶುಭ ಹಾರೈಸಿದರು. ವಾರ್ಷಿಕ ವಿಶೇಷ ಶಿಬಿರದ ಶಿಬಿರಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್, ಪ್ರಾಧ್ಯಾಪಕ ಹರೀಶ್ ಕಾಂಚನ್ ಹಾಗೂ ಎನ್ಎಸ್ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ಎನ್ಎಸ್ಎಸ್ ಸ್ವಯಂಸೇವಕರಾದ ಸನ್ನಿಧಿ ಬಿ.ಎಸ್. ಸ್ವಾಗತಿಸಿ, ಮಣಿಕಂಠ ಅಥಿತಿಗಳನ್ನು ಪರಿಚಯಿಸಿ, ಕೃತಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ–2026ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾಪಟುಗಳು ಅಮೋಘ ಸಾಧನೆ ಮೆರೆದಿದ್ದಾರೆ. ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ವಿವಿಧ ತಂಡ ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿ, ಕ್ರೀಡಾಕೂಟದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ತಂಡ ಸ್ಪರ್ಧೆಗಳಲ್ಲಿ ಆಳ್ವಾಸ್ಗೆ ಮೇಲುಗೈ:ಪುರುಷರ ವಿಭಾಗದ ಕಬಡ್ಡಿ ಸ್ಪರ್ಧೆಯಲ್ಲಿ ಆಳ್ವಾಸ್ ತಂಡ ಪ್ರಥಮ ಸ್ಥಾನ ಗಳಿಸಿದರೆ, ಬಾಲ್ಬ್ಯಾಡ್ಮಿಂಟನ್ ಮತ್ತು ಖೋ ಖೋ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಹಿಳೆಯರ ವಿಭಾಗದಲ್ಲಿ ಕಬಡ್ಡಿ ಹಾಗೂ ಬಾಲ್ಬ್ಯಾಡ್ಮಿಂಟನ್ ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಆಳ್ವಾಸ್ ಕ್ರೀಡಾಪಟುಗಳು ಶ್ರೇಷ್ಠತೆ ಮೆರೆದಿದ್ದಾರೆ. ವೈಯಕ್ತಿಕ ಸ್ಪರ್ಧೆಗಳಲ್ಲೂ ಪದಕಗಳ ಬೇಟೆ:ಅಥ್ಲೆಟಿಕ್ಸ್ನಲ್ಲಿ ಆಳ್ವಾಸ್ ಕ್ರೀಡಾಪಟುಗಳು 4 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ವೇಟ್ಲಿಫ್ಟಿಂಗ್ನಲ್ಲಿ 6 ಚಿನ್ನ, 6 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಯೋಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೆಳಕಿನ ಹಬ್ಬವಾದ ದೀಪಾವಳಿ ಹಬ್ಬ ಆಚರಣೆಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯನ್ನು ಜಾಗೃತಿಯಿಂದ ಮಾಡುವುದರೊಂದಿಗೆ ಆಚರಣೆ ಮಾಡಬೇಕು. ಇವುಗಳ ಮಾರಾಟಕ್ಕೆ ಪರವಾನಿಗೆ ನೀಡುವಾಗ ಸುರಕ್ಷತಾ ದೃಷ್ಠಿಯಿಂದ ನಿಯಮಾನುಸಾರ ತಪ್ಪದೇ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದರು. ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಪಟಾಕಿ ಮಾರಾಟದ 10*10 ವಿಸ್ತೀರ್ಣದ ಜಿಂಕ್ ಶೀಟ್ ಅಥವಾ ಅಗ್ನಿ ನಿರೋಧಕ ವಸ್ತುಗಳಿಂದ ಮಳಿಗೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ನವೆಂಬರ್ 1ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ನ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು…
