ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಅವರುಗಳಿಗೆ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳು, ಸಲಹೆಗಳನ್ನು ನೀಡಿ, ಉದ್ಯೋಗ ಅವಕಾಶಗಳು ಹೆಚ್ಚಿಸುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುವಿನಲ್ಲಿ 38.75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು 101.19 ಎಕ್ರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಭೂ ಸ್ವಾಧೀನ ಸೇರಿದಂತೆ ಮತ್ತಿತರ ಪ್ರಕ್ರಿಯೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ನಿವೇಶನ ಹಂಚಿಕೆಯನ್ನು ಮಾಡಿದ್ದರೂ ಸಹ ಕಳೆದ ಸಭೆಯಲ್ಲಿ 17…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ವತಿಯಿಂದ 2026–27ನೇ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಕುಂದಾಪುರ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು ಬಸ್ರೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ಕ್ನಲ್ಲಿ ನಡೆಯಿತು. ಈ ವಿಚಾರಗೋಷ್ಠಿಯಲ್ಲಿ ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನ 9ನೇ ತರಗತಿಯ ವಿದ್ಯಾರ್ಥಿನಿ ಸಮನ್ವಿ ಶೆಟ್ಟಿ ಅವರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು, ವಿಜ್ಞಾನ ವಿಷಯದ ಕುರಿತು ಆಸಕ್ತಿ ಮೂಡಿಸುವುದು ಹಾಗೂ ಸಂಶೋಧನಾ ಚಿಂತನೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು. “ಭಾರತದ ಇಂಧನದ ವಿವಿಧ ರೀತಿಯ ಮಿಶ್ರಣ 2047: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಸಮನ್ವಿ ಶೆಟ್ಟಿ ಅವರು ಪರಿಣಾಮಕಾರಿಯಾಗಿ ವಿಚಾರ ಮಂಡಿಸಿ ಪ್ರಥಮ ಸ್ಥಾನ ಗಳಿಸಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಸಾಧನೆಗೆ ಪ್ರೌಢಶಾಲಾ ವಿಭಾಗದ ವಿಜ್ಞಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಮನ್ವಿ , ಸನ್ನಿಧಿ ಹಾಗೂ ನಿಸರ್ಗ ದೇವಾಡಿಗ ಅವರು ಜಿಲ್ಲಾ ಮಟ್ಟದ ಯುವ ಸಂಸತ್–2026 ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಮಾದರಿಯ ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂಸದೀಯ ಕಾರ್ಯವೈಖರಿ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಪಡೆದಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕೆ.ಎಸ್.ಆರ್.ಟಿ.ಸಿ ನಿಲ್ದಾಣ ಆರಂಭಗೊಂಡು ಒಂದು ವರ್ಷ ಕಳೆಯುತ್ತಾ ಬಂದರೂ ಸಂಪೂರ್ಣ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಹಾಗೂ ನಿಲ್ದಾಣ ಮೂಲಕವೇ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚರಿಸುವಂತೆ ಮಾಡುವಲ್ಲಿ ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಲಾಭಿಗೆ ಮಣಿದು ಸರ್ಕಾರಿ ಬಸ್ ನಿಲ್ದಾಣವನ್ನು ಮುಚ್ಚುವ ವ್ಯವಸ್ಥಿತ ಹುನ್ನಾರ ಇದರ ಹಿಂದಿದೆ ಎಂದು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಆರೋಪಿಸಿದ್ದಾರೆ. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನ ಯಡ್ತರೆಯಲ್ಲಿ ಸುಸಜ್ಜಿತವಾದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಆಗಿದ್ದರೂ ಸರ್ವಿಸ್ ರಸ್ತೆ ಆಗದ ಸಮಸ್ಯೆಯಾಗುತ್ತಿದೆ. ರಾತ್ರಿಯಾಗುತ್ತಿದ್ದಂತೆ ನಿಲ್ದಾಣದ ಲೈಟ್ಗಳನ್ನು ಬಂದ್ ಮಾಡಿ ಸಾರ್ವಜನಿಕರು ಸಂಚರಿಸದಂತೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಸೇವೆ ಒದಗಿಸುವಂತೆ ಹಾಗೂ ದೂರದ ಎಲ್ಲಾ ಬಸ್ಸುಗಳು ಬೈಂದೂರು ಕೆ.ಎಸ್.ಆರ್.ಟಿ.ಸಿ ನಿಲ್ದಾಣ ಮೂಲಕವೇ ತೆರಳುವಂತೆ ತಿಳಿಸಲಾಗಿದ್ದರೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದುಡಿಮೆಯ ಒಂದು ಭಾಗವನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ಶಿಕ್ಷಣ, ಆರೋಗ್ಯ, ಕಲೆ, ಸಾಹಿತ್ಯ, ಕ್ರೀಡೆ, ಧಾರ್ಮಿಕತೆಗಳಿಗೆ ನೀಡುತ್ತಿರುವ ನಾಡೋಜ ಜಿ. ಶಂಕರ್ ರವರ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ವಿಧಾನ ಪರಿಷತ್ ನಾಮನಿರ್ದೇಶನ ಸದಸ್ಯರನ್ನಾಗಿ ಸರ್ಕಾರ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ. ಮೊಗವೀರ ಯುವ ಸಂಘಟನೆ ಮೂಲಕ ರಕ್ತದಾನದ ಕ್ರಾಂತಿಯನ್ನು ಮಾಡುವುದರ ಮೂಲಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮೂಲಕ ಮಣಿಪಾಲ ಆರೋಗ್ಯ ಕಾರ್ಡ್ ಮೂಲಕ ಆರ್ಥಿಕ ಅಶಕ್ತರಿಗೆ ಆರೋಗ್ಯ ಸಮಸ್ಯೆಗೆ ಸಹಾಯ, ಉಚ್ಚಿಲ ದಸರಾ ಮೂಲಕ ಧಾರ್ಮಿಕ ಕಾರ್ಯಕ್ರಮ, ಮೊಗವೀರ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ, ಮೀನುಗಾರಿಕ ಜಟ್ಟಿ, ಬಂದರುಗಳ ಅಭಿವೃದ್ಧಿ, ಧರ್ಮ, ಜಾತಿ ಯಾವುದನ್ನೂ ನೋಡದೆ ಎಲ್ಲಾ ಆರ್ಥಿಕ ಅಶಕ್ತರಿಗೆ ಆರ್ಥಿಕ ಸಹಾಯ, ದೈಹಿಕ ವಿಕಲಾಂಗರಿಗೆ ಸಹಾಯ, ಕರಾವಳಿಯ ಸರ್ವ ಜಾತಿ, ಸರ್ವ ಸಮುದಾಯದ ದೇವಸ್ಥಾನ, ದೈವಸ್ಥಾನಗಳ ಅಭಿವೃದ್ಧಿಗೆ ಸಹಾಯ ಇಂತಹ ಅದೆಷ್ಟೋ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಧಾನಸಭೆ ಮಾದರಿಯ ಯುವ ಸಂಸತ್ತು – 2026ರ ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚರ್ಚಾ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿಗಳು:* ಮಯಸ್ಕರ್ ಭಟ್ – ದ್ವಿತೀಯ ವಾಣಿಜ್ಯ ವಿಭಾಗ* ವರಪ್ರಸಾದ್ – ದ್ವಿತೀಯ ವಿಜ್ಞಾನ ವಿಭಾಗ* ಮನ್ವಿತಾ – ದ್ವಿತೀಯ ವಿಜ್ಞಾನ ವಿಭಾಗ ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಶ್ರೀ ವೆಂಕಟರಮಣ ಪಿಯು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಶುಭಕೋರಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ವಿಶ್ವನಾಥ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ನಾವುಂದದ ಸ್ವಸ್ತಿಕ್ ಪೂಜಾರಿ ಅವರು ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ. ಅವರು ರಾಮ ಪೂಜಾರಿ ಹಾಗೂ ಶಾರದಾ ಪೂಜಾರಿ ಅವರ ದಂಪತಿಯ ಪುತ್ರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ವಿಶ್ವನಾಥ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಕುಂದಾಪುರ ಇಲ್ಲಿಯ ವಿದ್ಯಾರ್ಥಿಗಳಾದ ಪ್ರಣೀತ್ ರೈ ಕಂಚಿನ ಪದಕ ಮತ್ತು ಹರ್ಷಿಣಿ ಬೆಳ್ಳಿಯ ಪದಕ ಗಳಿಸುತ್ತಾರೆ. ಇವರಿಗೆ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣ ರೈಲ್ವೆ ನಿಗಮದಲ್ಲಿ ಅನುದಾನದ ಕೊರತೆಯಿದೆ. ಇದರೊಂದಿಗೆ ಆದಾಯವೂ ಇಲ್ಲದಿರುವುದರಿಂದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯವಾಗಿದೆ. ಆದ್ದರಿಂದ ರಾಜ್ಯ ಕೇಂದ್ರ ಸರಕಾರಗಳಿಂದ ನಿಲ್ದಾಣದ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಗುರುವಾರ ಇಲ್ಲಿನ ಮೂಡ್ಲಕಟ್ಟೆ ರೈಲು ನಿಲ್ದಾಣದಲ್ಲಿ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ರೈಲು ನಿಲ್ದಾಣದ ಮೂಲಭೂತ ಸೌಕರ್ಯದ ನಿಟ್ಟಿನಲ್ಲಿ ಈ ತಂಗುದಾಣ ಅಗತ್ಯ ವಿತ್ತು. ಈ ಹಿಂದೆ ಲಯನ್ಸ್ನವರು ಕೂಡ ಕೊಡುಗೆ ನೀಡಿದ್ದರು. ಮುಂದಿನ ದಿನಗಳಲ್ಲಿ ಇಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಆಗಲಿ. ಇದರೊಂದಿಗೆ ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಪ್ರಯತ್ನ ನಡೆಯುತ್ತಿದೆ. ರಾಜ್ಯ- ಕೇಂದ್ರ ಸರಕಾರದ ಸಹಕಾರದಿಂದ ಇದು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕುಂದಾಪುರ ರೈಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ನಗರದ ನಯನ ಸಭಾಂಗಣದಲ್ಲಿ ಮಹಾತ್ಮಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ, ನಾಟ್ಯ ರಾಣಿ ಶಾಂತಲೆ ಸ್ವರ್ಣ ಪ್ರಶಸ್ತಿ, ಸ್ವರ್ಣಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಉತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕರಾಟೆ ಪಟು, ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಡಾ. ಶಿಹಾನ್ ಸುಬ್ರಹ್ಮಣ್ಯ ಪಿ. ಅವರನ್ನು ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿ ಆಧ್ಯಾತ್ಮಿಕ ಕೇಂದ್ರದ ಪರಮಪೂಜ್ಯ ಸದ್ಗುರು ಶ್ರೀ ಬಸವಯೋಗಿ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯವಿತ್ತು. ಮುಖ್ಯ ಅತಿಥಿಗಳಾಗಿ ವೀಣಾ ಕಾಶಪ್ಪನವರ್, ಜೂನಿಯರ್ ವಿಷ್ಣುವರ್ಧನ್ ಎಂದೇ ಖ್ಯಾತರಾದ ಮೊಹಮ್ಮದ್ ಅಲಿ ಹಾಗೂ ಖ್ಯಾತ ನಿರೂಪಕ, ಸಾಹಿತಿ ಮತ್ತು ಸಾಮಾಜಿಕ ಚಿಂತಕ ಡಾ. ವೆಂಕಟೇಶ್ ಆರ್. ಚೌಧಾಯಿ ಉಪಸ್ಥಿತರಿದ್ದರು. ನಾಟ್ಯ ಮಯೂರಿ ನೃತ್ಯ ಟ್ರಸ್ಟ್ನ ಪುಷ್ಪಲತಾ ಶಿವಪ್ಪ, ಸ್ಥಾಪಕ ಅಧ್ಯಕ್ಷರಾದ ಬಾಬಾ ಶಂಕರ್ ಹಾಗೂ…
