ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುನ್ನಡೆಯುವುದರ ಜೊತೆಗೆ ಸಂವೇದನಾಶೀಲತೆಯನ್ನು ಬೆಳೆಸಿಕೊಳ್ಳಬೇಕು. ಆತ್ಮಾವಲೋಕನದ ಮೂಲಕ ತಮ್ಮ ಸಾಮರ್ಥ್ಯ ಹಾಗೂ ಕೌಶಲ್ಯಗಳನ್ನು ಗುರುತಿಸಿಕೊಂಡು, ಕಲೆ ಮತ್ತು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ವಿಮರ್ಶಾತ್ಮಕ ಚಿಂತನೆಯೊಂದಿಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಭವಿಷ್ಯದ ಬದುಕು ಅರ್ಥಪೂರ್ಣವಾಗಲು ಸಾಧ್ಯ ಎಂದು ಬ್ರಹ್ಮಾವರದ ಎಸ್ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಅಭಿಲಾಷ ಎಸ್. ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ್ದ ‘ಜೀವನ ಮೌಲ್ಯ’ ಸರಣಿ ಉಪನ್ಯಾಸ ಮಾಲಿಕೆ-3ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವರಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿದರು. ಸಿಂಚನಾ ಮತ್ತು ನಿರೀಕ್ಷಾ ಪ್ರಾರ್ಥಿಸಿದರು. ಪ್ರಮಿತಾ ಸ್ವಾಗತಿಸಿ, ನವ್ಯ ಕಾರ್ಯಕ್ರಮ ನಿರೂಪಿಸಿ, ಧನ್ಯಶ್ರೀ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2023ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅಕ್ಟೋಬರ್ 12 ರಿಂದ 14 ರವರೆಗೆ ಬೆಂಗಳೂರಿನ ಎಂ.ಸಿ. ಬಡಾವಣೆಯಲ್ಲಿರುವ ಡಾ. ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪುಸ್ತಕಗಳ ಪಟ್ಟಿಯನ್ನು ಉಡುಪಿ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯಗಳ ಸೂಚನಾ ಫಲಕಗಳಲ್ಲಿ ಹಾಗೂ ಇಲಾಖೆಯ ವೆಬ್ ಸೈಟ್ http://dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಲೇಖಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ತಮ್ಮ ಲಿಖಿತ ಮನವಿಗಳನ್ನು ಅಕ್ಟೋಬರ್ 22 ರೊಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಇಲ್ಲಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿಐಕ್ಯೂಎಸಿ ಮತ್ತು ವಾಣಿಜ್ಯ ವಿಭಾಗ ಆಶ್ರಯದಲ್ಲಿ ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸ್ಟೀವನ್ ರಾಬರ್ಟ್ ಟೆಲ್ಲಿಸ್ ಅವರು ಹಣಕಾಸು ನಿರ್ವಹಣೆ, ಹೂಡಿಕೆ ಹಾಗೂ ಹೂಡಿಕೆದಾರರ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಹಣಕಾಸು ಯೋಜನೆ ರೂಪಿಸುವುದು, ಉಳಿತಾಯ ಮಹತ್ವ, ಸೂಕ್ತ ಹೂಡಿಕೆ ವಿಧಾನಗಳ ಆಯ್ಕೆ ಮತ್ತು ಆರ್ಥಿಕ ಭವಿಷ್ಯವನ್ನು ಸುರಕ್ಷತೆಗೊಳಿಸಿರುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ನಿರ್ವಹಿಸಿದರು. ಕಾರ್ಯಕ್ರಮ ಸಂಯೋಜಕರಾದ ಡಾ. ರವಿಚಂದ್ರ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ದೀಪಕ್ ಕುಮಾರ್ ಶೆಟ್ಟಿ ಧನ್ಯವಾದಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಂದೆಂದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಇಂದು ಸಿ.ಎ, ಸಿಎಸ್ ಅಥವಾಸಿ.ಎಮ್.ಎ ವ್ಯಾಸಂಗ ಕೈಗೊಂಡು ಸಫಲರಾಗುತ್ತಿದ್ದಾರೆ. ದೇಶದ ಪ್ರಸಕ್ತ ಆರ್ಥಿಕ ಬೆಳವಣಿಗೆಯ ಪ್ರಮಾಣಕ್ಕೆ ಇನ್ನೂ ಹೆಚ್ಚೆಚ್ಚು ಸಿ.ಎ, ಸಿ.ಎಸ್ ಪದವೀಧರರ ಅಗತ್ಯವಿದ್ದು, ವ್ಯಾಪಾರೋದ್ಯಮಗಳನ್ನು ನಡೆಸಲು ಬೇಕಾದ ಕೌಶಲ್ಯವನ್ನೂ ಇಂಥ ತರಬೇತಿಗಳಿಂದ ಸಿದ್ಧಿಸುವುದನ್ನು ಈಗಿನ ವಾಣಿಜ್ಯ ಪ್ರಪಂಚದಲ್ಲಿ ಕಾಣುತ್ತಿದ್ದೇವೆ ಎಂದು ಉಡುಪಿಯ ವೀ ರೀಚ್ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎಸ್. ಸಂತೋಷ್ ಪ್ರಭು ಹೇಳಿದರು. ಅವರು ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿ ರೀಚ್ ಅಕಾಡೆಮಿಯ ಆಡಳಿತಾಧಿಕಾರಿ ನಾಗೇಶ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಷ್ಮಾ ಶೆಣೈ ಅವರು ಧನ್ಯವಾದ ಸಲ್ಲಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಅರುಣಾ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅವೈಜ್ಞಾನಿಕವಾಗಿರುವ ಬೈಂದೂರು ಪಟ್ಟಣ ಪಂಚಾಯತ್ ಗ್ರಾಮೀಣ ಭಾಗಗಳನ್ನು ಕೈಬಿಟ್ಟು, ವೈಜ್ಞಾನಿಕವಾಗಿ ಉಳಿದ ಭಾಗಗಳನ್ನು ಮುಂದುವರಿಸುವ ಬಗ್ಗೆ ಶೀಘ್ರ ಕ್ಯಾಬಿನೆಟ್ ಅನುಮೋದನೆ ಪಡೆದು ಮುಂದಿನ 2-3 ತಿಂಗಳೊಳಗೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೌರಾಡಳಿತ ಖಾತೆ ಸಚಿವ ಎಚ್.ಸಿ. ಬಾಲಕೃಷ್ಣ ಹೇಳಿದರು. ಅವರು ಬೈಂದೂರು ರೈತ ಸಂಘದ ನೇತೃತ್ವದಲ್ಲಿ ಬೈಂದೂರು ಪಟ್ಟಣ ಪಂಚಾಯಿತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವ ಬಗ್ಗೆ 432 ದಿನಗಳಿಂದ ಅನಿರ್ದಿಷ್ಟಾವಧಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಸರಕಾರ ಇರುವುದು ಜನಸಾಮಾನ್ಯರ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದಕ್ಕೆ. ಸಣ್ಣ ವಿಷಯಕ್ಕಾಗಿ ಈ ಭಾಗದ ರೈತರು ಕಳೆದ 432 ದಿನಗಳಿಂದ ಹೋರಾಟ ನಡೆಸುತ್ತಿರುವುದು ಆಡಳಿತ ವ್ಯವಸ್ಥೆಗೆ ಅವಮಾನ. ಈ ಬಗ್ಗೆ ವಿಷಾದ ವ್ಯಕ್ತಪಡಿಸುವೆ. ಈ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ತಗ್ಗರ್ಸೆ, ಗಂಗನಾಡು, ಆಲಂದೂರು, ಮದ್ದೋಡಿ ಹಾಗೂ ವಸ್ರೆ ವಾರ್ಡ್ಗಳನ್ನು ಕೈಬಿಡಲಾಗುವುದು ಎಂದು ಘೋಷಿಸಿದ ಅವರು, ಈ ಬಗ್ಗೆ ಶೀಘ್ರ ಕ್ಯಾಬಿನೆಟ್ ಅನುಮೋದನೆ ಪಡೆಯಲಾಗುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೃಷಿಯನ್ನು ಲಾಭದಾಯಕ ಹಾಗೂ ನವೀನ ಉದ್ಯಮವಾಗಿ ರೂಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಯುವಜನರು ಮುಂದಾಗಬೇಕು. ಕೃಷಿ ಮತ್ತು ಆಹಾರ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯಮಶೀಲತೆಗೆ ವಿಪುಲ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹಾಗೂ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ಅಶೋಕ್ ದಳವಾಯಿ ಹೇಳಿದರು. ಅವರು ಮಿಜಾರ್ನ ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದ ಪ್ರಥಮ ವರ್ಷದ ಬಿ.ಎಸ್ಸಿ. (ಆನರ್ಸ್) ಕೃಷಿ ಹಾಗೂ ಬಿ.ಟೆಕ್. ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳ ಆಗಮನ ಕರ್ಯಕ್ರಮ ‘ದೀಕ್ಷಾರಂಭ 2026–27’ರಲ್ಲಿ ಮಾತನಾಡಿದರು. ವಿದ್ಯಾರ್ಥಿ ಜೀವನದ ಈ ಹಂತ ಮಹತ್ವದ್ದಾಗಿದ್ದು, ಚಂಚಲ ಮನಸ್ಸನ್ನು ನಿಯಂತ್ರಿಸಿಕೊಂಡು ಏಕಾಗ್ರತೆ, ಶಿಸ್ತು ಹಾಗೂ ಬದ್ಧತೆಯಿಂದ ಅಧ್ಯಯನ ಮಾಡಬೇಕು. ಸ್ಪಷ್ಟ ಗುರಿಗಳನ್ನು ರೂಪಿಸಿಕೊಂಡು ಅವುಗಳ ಸಾಧನೆಗೆ ನಿರಂತರ ಪರಿಶ್ರಮ ಪಡಬೇಕು ಎಂದರು. ಕೃಷಿ ವಿಜ್ಞಾನಿ ನಾರ್ಮನ್ ಬೋರ್ಲಾಗ್, ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ದಂಪತಿಗಳ ಸಹಿತ ಭೇಟಿ ನೀಡಿದರು. ಶರನ್ನವರಾತ್ರಿ ಉತ್ಸವದ ಸಡಗರದ ನಡುವೆ ಜಿಲ್ಲಾ ಪೈಕಿ ವರಿಷ್ಠಾಧಿಕಾರಿಯವರು ದೇಗುಲದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ವೈಭವವನ್ನು ವೀಕ್ಷಿಸಿದರು.ಅಲ್ಲದೆ ದೇಗುಲದಲ್ಲಿ ಪೂಜೆ ಸಲ್ಲಿಸಿದರು.ಈ ವೇಳೆ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ಹೊದಿಸಿ ಪ್ರಸಾದ ವಿತರಿಸಿದರು. ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ, ಗಣೇಶ ನೆಲ್ಲಿಬೆಟ್ಟು, ಚಂದ್ರ ಆಚಾರ್ ಸೇರಿದಂತೆ ಅನೇಕರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯದ ಟಾಪ್ 10 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ 7ನೇ ಸ್ಥಾನ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಸೈ ಪವನ್ ನಾಯಕ್ ಹಾಗೂ ಸಿಬ್ಬಂದಿ ವರ್ಗದವರನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಕರ್ತವ್ಯ ನಿಷ್ಠೆ, ದಕ್ಷತೆ ಹಾಗೂ ಜನಸ್ನೇಹಿ ಪೊಲೀಸ್ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಒಕ್ಕೂಟದ ಪದಾಧಿಕಾರಿಗಳು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎಸ್. ದಸ್ತಗೀರ್ ಕಂಡ್ಲೂರು, ಕಾರ್ಯದರ್ಶಿ ರಿಯಾಝ್ ಕೋಡಿ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಿಲ್ಲಾ ಉಪಾಧ್ಯಕ್ಷ ಶಾಬಾನ್ ಹಂಗಳೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೌಲಾನ ಝಮೀರ್ ಅಹ್ಮದ್ ರಶಾದಿ, ಜಿಲ್ಲಾ ಸಮಿತಿ ಸದಸ್ಯರಾದ ಅಬು ಮುಹಮ್ಮದ್ ಕುಂದಾಪುರ, ರೆಹಾನ್ ತ್ರಾಸಿ, ಮುನಾಫ್ ಕಂಡ್ಲೂರು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ: 0820-2574596, ಕುಂದಾಪುರ: 08254-23070, ಕಾರ್ಕಳ: 08258-231101 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿಯ ಅಪೂರ್ಣತೆಯಿಂದಾಗಿ ಸಾರ್ವಜನಿಕರಿಗೆ ಅನವಶ್ಯಕ ತೊಂದರೆ ಉಂಟಾಗುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಪೌರಾಡಳಿತ ಸಚಿವರಾದ ಹೆಚ್.ಸಿ. ಬಾಲಕೃಷ್ಣ ಹೇಳಿದರು. ಅವರು ಮಂಗಳವಾರ ಕುಂದಾಪುರ ಪುರಸಭೆಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ ಹಾಗೂ ಪುರಸಭೆ ಕುಂದಾಪುರ ಇವರ ಸಹಭಾಗೀತ್ವದಲ್ಲಿ ಪೌರಾಡಳಿತ ಇಲಾಖೆ ಕುಂದಾಪುರ ಪುರಸಭೆಯ ಯುಜಿಡಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 56.54 ಕೋಟಿ ರು ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಕೈಗೊಳ್ಳಲು ಸರಕಾರದಿಂದ ಅನುಮೋದನೆ ದೊರಕಿದ್ದು, ಸುಮಾರು 11 ವರ್ಷಗಳು ಕಳೆದರೂ ಅನುದಾನದ ಕೊರತೆ, ಭೂಸ್ವಾಧೀನ ಸೇರಿದಂತೆ ಮತ್ತಿತರ ಕಾರಣಗಳಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಸಹಾಯಕ ಕಮಿಷನರ್ ಅವರು ಸಂಬಂಧಪಟ್ಟ ಅಧಿಕಾರಿಗಳು, ಅಭಿಯಂತರುಗಳೊಂದಿಗೆ ಸ್ಥಳ ಭೇಟಿ ಮಾಡಿ, ಕಾಮಗಾರಿ ವಿಳಂಬಕ್ಕೆ ಕಾರಣರಾದವರ…
