Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 37ನೇ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ಧ್ವಜಾರೋಹಣ ಗೈದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಬೋಧಕ  ಬೋಧಕೇತರ ವರ್ಗದವರು  ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅವನಿಕಾ ಜಿ. ನಿರೂಪಿಸಿ, ಅಮೋಘ ಪೈ ಸ್ವಾಗತಿಸಿ, ಹರಿದಾಸ್ ಆರ್. ಮಲ್ಯ  ವಂದನಾರ್ಪಣೆ ಗೈದರು.  ಈ ಕಾರ್ಯಕ್ರಮದ ನಂತರ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಐಸ್ ಕ್ರಿಂ ವಿತರಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಬ್ಯಾಂಕ್ ಮಿತ್ರ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಉಡುಪಿ ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕರಾದ ಪೂರ್ಣಾನಂದ ಅವರು ಭಾರತದ ಒಟ್ಟಾರೆ ಆರ್ಥಿಕತೆಯು ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಯನ್ನು ಅವಲಂಬಿಸಿದೆ. ಇದು ಸಾಧ್ಯವಾಗಬೇಕಾದರೆ, ಆರ್ಥಿಕ ಚಟುವಟಿಕೆಗಳಿಂದ ಹೊರಗುಳಿದವರ ಸೇರ್ಪಡೆ ಅನಿವಾರ್ಯ. ಹಾಗಾಗಿ ಕೊನೆಯ ಹಂತದ ಸಂಪರ್ಕವನ್ನು ಪ್ರಯತ್ನಿಸುವ ಬ್ಯಾಂಕ್‌ನ ಪ್ರತಿನಿಧಿಯಾಗಿ ಸೇವೆಯನ್ನು ನೀಡುವ ವ್ಯವಸ್ಥೆ ಇದಾಗಿದೆ. ಈಗಾಗಲೇ ಬ್ಯಾಂಕ್ ಮಿತ್ರ ಯೋಜನೆಯು ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದಿದೆ. ಬ್ಯಾಂಕ್ ಮಿತ್ರ ಅಭ್ಯರ್ಥಿಗಳು ಕಮಿಷನ್‌ಗಾಗಿ ಕೆಲಸವನ್ನು ಮಾಡಬೇಡಿ, ಇದನ್ನು ಸೇವೆಯೆಂದು ಮನಗಂಡು ಕೆಲಸವನ್ನು ಮಾಡಿದಲ್ಲಿ ಖಂಡಿತವಾಗಿ ನಿಮಗೆ ಸಮಾಜದಲ್ಲಿ ಹೆಚ್ಚಿನ ಸ್ತಾನಮಾನಗಳು ದೊರೆಯುತ್ತದೆ. ಬ್ಯಾಂಕ್‌ಗೆ ಪೂರಕವಾಗಿ ಕಾರ್ಯವನ್ನು ಮಾಡುವುದು ಆದ್ಯ ಕರ್ತವ್ಯವಾಗಿದೆ ಎಂದು ಹೇಳಿ ಶಿಬಿರಾರ್ಥಿಗಳಿಗೆ ಪುಸ್ತಕವನ್ನು ವಿತರಿಸಿ, ಶುಭ ಹಾರೈಸಿದರು. ಲೀಡ್ ಬ್ಯಾಂಕ್‌ನ ಮ್ಯಾನೇಜರ್ ಹರೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಇವರು ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆಸಿದ ವಿಭಾಗಿಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶರಧಿ ಅವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ . ಅವರಿಗೆ ಕೋಟ ವಿದ್ಯಾ ಸಂಘದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಲ್ಫ್: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ಯುಎಇ ಕುಂದಗನ್ನಡಿಗರ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆಗಳು ಯಶಸ್ವಿಯಾಗಿ ಜರುಗಿದವು. ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಅರಬ್ಬ ನಾಡಿನಲ್ಲಿ ನೆಲೆಸಿರುವ ಕುಂದಗನ್ನಡಿಗರು ಭಾಗವಹಿಸಿದ್ದರು. ಆಟೋಟ ಸ್ಫರ್ಧೆಗಳಿಗೆ ಐದು ತಂಡಗಳಾಗಿ ಮಾಡಲಾಗಿದ್ದು ಪ್ರತೀ ತಂಡಗಳಿಗೆ ಕುಂದಾಪುರದ ವಿಶೇಷತೆಗಳಲ್ಲಿ ಒಂದಾದ ಪಂಚಗಂಗಾವಳಿ ನದಿಗಳಾದ ಸೌರ್ಪಣಿಕ, ವರಾಹಿ, ಖೇಟಾ, ಕುಬ್ಜಾ ಮತ್ತು ಚಕ್ರಾ ಎಂದು ಕುಂದಾಪುರದಲ್ಲಿ ಸಂಗವಿಸುವ ಐದು ನದಿಗಳ ಹೆಸರು ನೀಡಲಾಯಿತು. ಟೀಮ್ ಗ್ರಾಮೀಣ ಆಟೋಟ ಸ್ಫರ್ಧೆಗಳ ಜೊತೆಗೆ ವ್ಯಯಕ್ತಿಕ ಆಟೋಟ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು. ಅದೇ ರೀತಿ ಚಾಂಪಿಯನ್ ಮಂಜುನಾಥ ನಾಯಕತ್ವದ ಕುಬ್ಜಾ ತಂಡ ಹೊರಹೊಮ್ಮಿದರದೆ ರನ್ನರ್ಸ ಸಂತೋಷ ನಾಯಕತ್ವದ ಸೌಪರ್ಣಿಕ ತಂಡ ಹೊರಹೊಮ್ಮಿತು. ಕಾರ್ಯಕ್ರಮವನ್ನು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇದರ ಸ್ಥಾಪಕ ಅಧ್ಯಕ್ಷರಾಗಿರುವ ಸದಾನ್‌ದಾಸ್ ಉಧ್ಘಾಟಿಸಿದರು.  ಮುಖ್ಯ ಅತಿಥಿಗಳಾಗಿ ಸುರೇಶ್ ಡಿ ಹೆಚ್ ಎಲ್ ಮತ್ತು ಬಿ.ಎಂ ಗ್ರೂಫ್ ಚೇರ್ಮೇನ್ ಡಾ. ಕನಕರಾಜ್ ಪ್ರವೀಣ್ ಆಚಾರ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಜನತಾ ಸಮೂಹ ಸಂಸ್ಥೆಯ ಆವರಣದಲ್ಲಿ ಕೋಟ ಅಮ್ರತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದ ದಶವತಾರ ಮೇಳದಿಂದ ರಂಗನಾಯಕಿ ಎನ್ನುವ ಯಕ್ಷಗಾನ ಪ್ರದರ್ಶನ ಹಾಗೂ ಅಭಿನಂದನಾ ಸಮಾರಂಭ ಜರಗಿತು. ಮೇಳದ ವ್ಯವಸ್ಥಾಪಕ ಹಾಗೂ ಪ್ರಧಾನ ಕಲಾವಿದರಾದ ಇತ್ತೀಚಿಗೆ ಕರ್ನಾಟಕ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ ಬಂಗೇರ ಅವರನ್ನು ಅಭಿನಂದಿಸಲಾಯಿತು. ಅಭಿನಂದಿಸಿ ಮಾತನಾಡಿದ ಅಮೃತೇಶ್ವರಿ ದೇವಳದ ಧರ್ಮದರ್ಶಿ ಹಾಗೂ ಮೇಳದ ಯಜಮಾನರಾದ ಆನಂದ ಸಿ. ಕುಂದರ್ ಯಕ್ಷಗಾನ ಪರಂಪರೆ ಸಾಂಪ್ರದಾಯಕ ಶೈಲಿಯನ್ನು ನಡುತಿಟ್ಟಿಗೆ ಕೊಡುಗೆ ನೀಡುವಲ್ಲಿ ಸುರೇಶ್ ಬಂಗೇರರ ಪಾತ್ರ ಗಣನೀಯವಾದದ್ದು ಇಂತಹ ಕಲಾವಿದರು ಯಕ್ಷಗಾನ ಕ್ಷೇತ್ರದಲ್ಲಿ ಇನ್ನಷ್ಟು ಕಲಾವಿದರನ್ನು ಸೃಷ್ಠಿಸುವಂತ್ತಾಗಲಿ ಎಂದು ಹಾರೈಸಿದರು. ಜನತಾ ಸಂಸ್ಥೆಯ ನಿರ್ದೇಶಕರಾದ ರಕ್ಷಿತ್ ಎ.ಕುಂದರ್ ಮತ್ತು ವೈಷ್ಣವಿ ಆರ್. ಕುಂದರ್ ದಂಪತಿಗಳನ್ನು ಸೇವೆ ನೀಡಿದ ಪ್ರಯುಕ್ತ ಅಮೃತೇಶ್ವರಿ ದೇವಳದ ಮೇಳದ ಯಜಮಾನರಾದ ಆನಂದ ಸಿ ಕುಂದರ್ ಮತ್ತು ಅವರ ಪತ್ನಿ ಗೀತಾ ಎ ಕುಂದರ್, ವ್ಯವಸ್ಥಾಪನ ಸಮಿತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ನಲ್ಲಿ ಉಡುಪಿ ಜಿಲ್ಲಾ ಮಟ್ಟದ ಶಿಶಿಕ್ಷ ಮೇಳವನ್ನು ಡಿಸೆಂಬರ್ 15 ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ. ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ವೆಬ್‌ಸೈಟ್ https://www.apprenticeshipindia.gov.in/candidate-login ಲಿಂಕ್ ಮೂಲಕ ಹಾಗೂ ಅಭ್ಯರ್ಥಿಗಳಿಗೆ ಶಿಶಿಕ್ಷ ತರಬೇತಿ ನೀಡಲು ಇಚ್ಛಿಸುವ ಕಂಪನಿಗಳು ಹಾಗೂ ಕೈಗಾರಿಕೆಗಳು ಮೇಳದಲ್ಲಿ ಭಾಗವಹಿಸಲು https://www.apprenticeshipindia.gov.in/establishment-registration ಲಿಂಕ್ ಮೂಲಕ ಅಥವಾ ಶಿಶಿಕ್ಷ ಮೇಳ ನಡೆಯುವ ದಿನದಂದು ಸಂಸ್ಥೆಯಲ್ಲಿಯೇ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 9980305173 ಮತ್ತು 9900329668 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ 2025-26ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮವು ಬುಧವಾರದಂದು ಕಾಲೇಜಿನ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಆಗಮಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸುಕೇಶ್ ಶೆಟ್ಟಿ ಕ್ರೀಡಾ ದ್ವಜಾರೋಹಣಗೈದು ಶುಭ ಹಾರೈಸಿ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಬೆಳವಣಿಗೆ ಉತ್ತೇಜಿಸುವುದಲ್ಲದೇ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಕ್ರೀಡಾಕೂಟದಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ ಸೋತವರು ಮುಂದೆ ಕಠಿಣ ಪರಿಶ್ರಮದೊಂದಿಗೆ ವಿಜಯಿಯಾಗಲು ಪ್ರಯತ್ನ ಪಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಶಾರದಾ ವಿದ್ಯಾಸಂಸ್ಥೆಯು ಪ್ರಾರಂಭವಾದ ದಿನದಿಂದ ಕ್ರೀಡೆಗೆ ಉತ್ತೇಜನ ನೀಡುತ್ತಾ ಬಂದಿರುವುದರಿಂದ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿದ್ದು ಕಠಿಣ ಪರಿಶ್ರಮವೇ ಕ್ರೀಡಾಸ್ಪೂರ್ತಿಗೆ ದಾರಿ ಮಾಡಿಕೊಡುತ್ತದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹ್ಯೂಮನ್ ವ್ಯಾಲ್ಯೂಸ್ & ಪ್ರೊಫೆಷನಲ್ ಎಥಿಕ್ಸ್ ಘಟಕ ಹಾಗೂ ಮಾನವ ಹಕ್ಕುಗಳ ಘಟಕದ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ  ಬುಧವಾರ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಅವರು ಮಾತನಾಡಿ, ಮಾನವ ಹಕ್ಕುಗಳ ಅರಿವು ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕ. ವ್ಯಕ್ತಿ ಗೌರವ, ಹಕ್ಕುಗಳು, ಸ್ವಾತಂತ್ರ್ಯ, ಮಾನವೀಯ ಮೌಲ್ಯಗಳು ಮಾನವ ಹಕ್ಕುಗಳ ಪರಿಕಲ್ಪನೆಯಲ್ಲಿ ಅಡಕವಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಮಾನವ ಹಕ್ಕುಗಳ ಕುರಿತು ತಿಳಿದು ಬದುಕಬೇಕಾಗಿದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಇನ್ನೋರ್ವ ಸಂಯೋಜಕರು ಹಾಗೂ ಡೀನ್ ಅಕಾಡೆಮಿಕ್ ಗಿರಿರಾಜ ಭಟ್, ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಸುಧೀರ್ ಕುಮಾರ್ ಹಾಗೂ ಶ್ವೇತಾ ಭಂಡಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಜಯ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ದೊಂಬೆ ಕೂಲಿಮನೆ ನಿವಾಸಿ ನರಸಿಂಹ ಪೂಜಾರಿ (62) ಅವರು ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿ.7ರಂದು ಶಿರಸಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ ಬಂದಿರಲಿಲ್ಲ. ಹುಡುಕಾಡುವಾಗ ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಮೃತರ ಪುತ್ರ ಹರೀಶ್ ಪೂಜಾರಿ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More