Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರ, ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ, ನೂಜಾಡಿ ಆಂಗ್ಲ ಮಾಧ್ಯಮ ಶಾಲೆ ಸಹಭಾಗಿತ್ವದಲ್ಲಿ ಮಕ್ಕಳಿಗೆ “ಬಚ್ಪನ್ ಸುರಕ್ಷಾ ಅಭಿಯಾನದಡಿ, ಕಾನೂನು ಅರಿವು ಕಾರ್ಯಕ್ರಮವು ಬುಧವಾರ ನಡೆಯಿತು. ಮುಖ್ಯ ಸಂಪನ್ಮೂಲ ಅಥಿತಿಯಾಗಿ ಭಾಗವಹಿಸಿದ್ದ ಉಡುಪಿ ನ್ಯಾಯಾವಾದಿ ಮತ್ತು ಕಾನೂನು ನೆರವು ಅಭಿರಕ್ಷಕರಾದ ರಾಘವೇಂದ್ರ ಎಸ್., ಅವರು ಮಕ್ಕಳಿಗೆ ಮಕ್ಕಳ ರಕ್ಷಣಾ ನೀತಿ 2016, ತಿದ್ದುಪಡಿ ನಿಯಮ 2023, ಕಡ್ಡಾಯ ಅನುಷ್ಠಾನ, ಮಕ್ಕಳ ಸುರಕ್ಷತೆ ಕ್ರಮ, ಅಗತ್ಯ ಜಾಗೃತಿ, ಸಂಕ್ಷಿಪ್ತವಾಗಿ ವಿವರಿಸುತ್ತಾ, ಮಕ್ಕಳಿಗೆ ಪೋಕ್ಸೋ ಕಾಯ್ದೆ, ಮಾಧಕ ದ್ರವ್ಯ ನಿರ್ಮೂಲನ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ, ಸಂಚಾರಿ ನಿಯಮ ಜಾಗೃತಿ ಮತ್ತು ಪಾಲನೆ ಬಗ್ಗೆ ಸಂಸ್ಷಿಪ್ತಾವಾಗಿ ಅರಿವು ಮತ್ತು ಜಾಗೃತಿ ಮೂಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯರುಯಾದ ಶೈಲಜಾ ವಿ. ಶೆಟ್ಟಿ ಸ್ವಾಗತ ಭಾಷಣ ನಿರ್ವಹಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಕೂಡ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆದೂರು ಗ್ರಾಮದ ಹೊಸಮಠ ಧರ್ಮಗೋಳಿ ಹಳೆಯಮ್ಮ ದೈವಸ್ಥಾನದ ಅಡುಗೆ ಕೋಣೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಸುಮಾರು 99 ಸಾವಿರ ರೂ. ಮೌಲ್ಯದ ತಾಮ್ರದ ಪಾತ್ರೆಗಳನ್ನು ಕಳವು ಮಾಡಿಕೊಂಡು ಹೋದ ಘಟನೆ ಬೆಳಕಿಗೆ ಬಂದಿದೆ. ದೈವಸ್ಥಾನದ ಆಡಳಿತ ಮಂಡಳಿಯ ಮೊತ್ತೇಸರರಾದ ಅವಿನಾಶ್ ಅವರು ನ.7ರಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ದೈವಸ್ಥಾನದ ಕಾರ್ಯಕ್ರಮವೊಂದಕ್ಕೆ ಅಗತ್ಯವಿದ್ದ ಪಾತ್ರೆಗಳನ್ನು ತರಲು ಸಭಾಭವನದ ಸಮೀಪವಿರುವ ಅಡುಗೆ ಕೋಣೆಗೆ ತೆರಳಿದ್ದರು. ಈ ವೇಳೆ ಅಡುಗೆ ಕೋಣೆಯ ಬೀಗ ಒಡೆದಿರುವುದು ಕಂಡುಬಂದಿದೆ. ಪರಿಶೀಲಿಸಿದಾಗ ಅಡುಗೆ ಕೋಣೆಯಲ್ಲಿದ್ದ ತಲಾ ದೊಡ್ಡ ಗಾತ್ರದ ಆರು ತಾಮ್ರದ ಜೋಡು ಕೊಳಗಗಳು (ಹಂಡೆಗಳು) ಹಾಗೂ ಒಂದು ದೊಡ್ಡ ತಾಮ್ರದ ಬಾಣಲೆ ಕಳವಾಗಿರುವುದು ಬೆಳಕಿಗೆ ಬಂದಿದೆ. ಅ.18ರ ಸಂಜೆ 7 ಗಂಟೆಯಿಂದ ನ.7ರ ಬೆಳಿಗ್ಗೆ 6 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಅಡುಗೆ ಕೋಣೆಯ ಬೀಗ ಮುರಿದು ಒಳನುಗ್ಗಿ ಈ ಕೃತ್ಯ ಎಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಕಳವಾದ ಸೊತ್ತುಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೈಲಿನಲ್ಲಿ ಪ್ರಯಾಣಿಕರ ಮೊಬೈಲ್‌ಗಳನ್ನು ಕಳವು ಮಾಡಿ, ಅದರ ಮೂಲಕ ಯುಪಿಐ ಬಳಸಿ ಹಣ ವರ್ಗಾವಣೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ. ಕಳೆದ ಆ.2ರಂದು ರುಬೆನ್ ಫೆರ್ನಾಂಡಿಸ್‌ ಎಂಬವರು ಮಂಗಳೂರಿನಿಂದ ಮಡಗಾಂವ್‌ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಬೆಳಗಿನ ಜಾವ ಸುಮಾರು 2 ಗಂಟೆಗೆ ಬೈಂದೂರು ರೈಲು ನಿಲ್ದಾಣದ ಸಮೀಪ ಅವರ ಬಳಿಯಿದ್ದ ಸುಮಾರು 17 ಸಾವಿರ ರೂ. ಮೌಲ್ಯದ ಮೊಬೈಲ್‌ನ್ನು ಅಪರಿಚಿತ ವ್ಯಕ್ತಿಯೊಬ್ಬ ಕಳವು ಮಾಡಿದ್ದ ಬಳಿಕ ಕಳವು ಮಾಡಿದ ಮೊಬೈಲ್ ಮೂಲಕ ಯುಪಿಐ ಬಳಸಿ 19,847 ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಕೌಶಲ್ಯಾಭಿವೃದ್ಧಿ ಇಮ್ಮಡಿಗೊಳಿಸಲು ಪ್ರತಿಭಾ ಕಾರಂಜಿ ವೇದಿಕೆ ಕಲ್ಪಿಸಲಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಭಾಗಿಯಾಗಬೇಕು ಎಂದು ಶಿಕ್ಷಣ ತಜ್ಞ ಗಣೇಶ್ ಜಿ ಹೇಳಿದರು. ಅವರು ಬುಧವಾರ‌ ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇಲ್ಲಿ ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬ್ರಹ್ಮಾವರ ವಲಯದ ಸಹಯೋಗದೊಂದಿಗೆ ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇವರ ಸಹಭಾಗಿತ್ವದಲ್ಲಿ ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳ‌ಮನೋವಿಕಾಸ ಬಲಗೊಳ್ಳಲು ಸಹಕಾರಿ ಎಂದರಲ್ಲದೆ ಒಂದು ಶಿಕ್ಷಣ ಸಂಸ್ಥೆ ಸಮರ್ಪಕವಾಗಿ ನಡೆಯಬೇಕಾದರೆ ಅಲ್ಲಿನ ಆಡಳಿತ ವ್ಯವಸ್ಥೆ ಅಷ್ಟು ಬಹುಮುಖ್ಯ ಪಾತ್ರ ವಹಿಸಲಿದೆ ಈ ನಿಟ್ಟಿನಲ್ಲಿ ಚೇತನಾ ಪ್ರೌಢಶಾಲೆ ಸಾಮಾಜಿಕ ,ಸಾಂಸ್ಕೃತಿಕ ,ಶೈಕ್ಷಣಿಕವಾಗಿ ಮುಂಚೂಣಿಗೆ ನಿಂತಿದೆ ಎಂದರು. ಕಾರ್ಯಕ್ರಮವನ್ನು ಫಾರ್ಚುನ ಅಕಾಡೆಮಿಯ ಮುಖ್ಯಸ್ಥ ತಾರಾನಾಥ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್.ಸಿ ನರ್ಸಿಂಗ್ ಮತ್ತು ಜಿ.ಎನ್.ಎಮ್ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್  https://sevaone.karnataka.gov.in/service ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂ: 0820-2574596 ಅಥವಾ ಜಿಲ್ಲಾ / ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಸ್ಪರ್ಧೆಗಳ ಜೊತೆ ಅಸೂಯೆ ಜೊತೆಯಾಗಬಾರದು. ಸ್ಪರ್ಧೆಯು ಕ್ರೀಡಾ ಮನೋಭಾವ ಹಾಗೂ ಸಂಭ್ರಮಿಸುವ ಮನಸ್ಥಿತಿಯನ್ನು ಕಲಿಸಿಕೊಡಬೇಕು. ನಮ್ಮ ಪ್ರತಿಬಿಂಬ ಕಾರ್ಯಕ್ರಮದಲ್ಲಿ ಅಸೂಯೆ ಇಲ್ಲದ ಸ್ಪರ್ಧಾ ಮನೋಭಾವ ಹಾಗೂ ಪ್ರತಿಭೆಗಳನ್ನು ಸಂಭ್ರಮಿಸುವ ಸಹಜತೆ ಇದೆ ಎಂಬುದು ನಮ್ಮ‌ ಸಮಾಜದ ಹೆಮ್ಮೆ ಎಂದು ಡಾ. ಗಿರಿಧರ ಕಜೆ ಹೇಳಿದರು. ಅವರು ಬೆಂಗಳೂರಿನ ಮಲ್ಲೇಶ್ವರದ ಹವ್ಯಕ ಭವನದಲ್ಲಿ ನಡೆದ ‘ಪ್ರತಿಬಿಂಬ ಗ್ರ್ಯಾಂಡ್ ಫಿನಾಲೆ’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ, ಪ್ರತಿಬಿಂಬ ಸ್ಪರ್ಧಾ ಸೌರಭವನ್ನು 31 ವರ್ಷಗಳ ಹಿಂದೆ ಆರಂಭಿಸಲಾಯಿತು. ಇದು ಅಂದಿನಿಂದ ಇಂದಿನವರೆಗೂ ಸಮಾಜದ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿಕೊಂಡು ಬಂದಿದೆ. ಈ ವರ್ಷ ವಿಶೇಷವಾಗಿ ರಾಜ್ಯ ಹೊರ ರಾಜ್ಯಗಳ 13 ಪ್ರಾಂತ್ಯಗಳಲ್ಲಿ ಪ್ರತಿಬಿಂಬವನ್ನು ನಡೆಸಲಾಗಿದ್ದು, ಸಮಾಜದಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು. ಡಿಸೆಂಬರ್ 20ಕ್ಕೆ ಬೃಹತ್ ಮಾತೃಸಂಗಮ:ಮಹಿಳೆಯರಿಗೆ ಗೌರವ ಸಲ್ಲಿಸಿ ಸಂಭ್ರಮಿಸುವ ಕಾರ್ಯಕ್ರಮ ಮಾತೃಸಂಗಮವಾಗಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಕ್ಕಳ ಮೇಲಾಗುವ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಯಲು ಜಾರಿಗೊಳಿಸಲಾದ ಮಕ್ಕಳ ರಕ್ಷಣಾ ನೀತಿ-ನಿಯಮಗಳನ್ನು ಅನುಷ್ಠಾನಗೊಳಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರುಗಳ ಸಹಯೋಗದಲ್ಲಿ, ಮಕ್ಕಳ ರಕ್ಷಣೆಯ ಕುರಿತು ಹಾಗೂ ಮಕ್ಕಳ ರಕ್ಷಣಾ ನೀತಿ -2016 ರ ಕುರಿತು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಆಯೋಜಿಸಲಾದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುತ್ತಿದ್ದ ನಾವುಗಳು ಪ್ರಸ್ತುತ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬುದನ್ನು ಅರಿತುಕೊಳ್ಳಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪಶ್ಚಿಮ ಘಟ್ಟಗಳು ಜಾಗತಿಕ ಮಟ್ಟದಲ್ಲಿ ಅತ್ಯಂತ ಸೂಕ್ಷ್ಮ ಪರಿಸರ ವ್ಯವಸ್ಥೆ ಹೊಂದಿರುವ ಪ್ರದೇಶವಾಗಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ಅಲ್ಲಿನ ನೈಸರ್ಗಿಕ ಸಂಪನ್ಮೂಲಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಪರಿಸರ ಸಂರಕ್ಷಣೆ, ಜನರ ಜೀವನೋಪಾಯ ಹಾಗೂ ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸುವುದು ಇಂದಿನ ಅಗತ್ಯವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಬೆಂಗಳೂರು ಚಾಣಕ್ಯ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಎಂಜಿನಿಯರಿಂಗ್ ಆಯೋಜಿಸಿದ್ದ ‘ಲೇಕ್ ಕಾನ್ಫರೆನ್ಸ್–2026’ರಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪಶ್ಚಿಮ ಘಟ್ಟಗಳ ಜೀವವೈವಿಧ್ಯ, ಜಲಮೂಲಗಳ ಸಂರಕ್ಷಣೆ ಮತ್ತು ಪರಿಸರ ಸ್ನೇಹಿ ಅಭಿವೃದ್ಧಿಯ ಅಗತ್ಯವನ್ನು ವಿವರಿಸಿದರು. ಬಹುತೇಕ ದೇಶಗಳಲ್ಲಿ ಕೇವಲ 30ರಿಂದ 40 ಸಸ್ಯ ಮತ್ತು ಪ್ರಾಣಿ ಪ್ರಭೇದಗಳು ಕಂಡುಬರುವ ಪ್ರದೇಶಗಳಿದ್ದರೆ, ಪಶ್ಚಿಮ ಘಟ್ಟಗಳಲ್ಲಿ ಸುಮಾರು 6,800 ಪ್ರಭೇದಗಳ ಜೀವವೈವಿಧ್ಯವಿದೆ. ಇದರಲ್ಲಿ ನಮ್ಮ ಭಾಗದ ಪಶ್ಚಿಮ ಘಟ್ಟಗಳಲ್ಲಿಯೇ ಸುಮಾರು 3,500 ಪ್ರಭೇದಗಳಿವೆ. ಒಂದು ಬದಿಯಲ್ಲಿ ಪಶ್ಚಿಮ ಘಟ್ಟಗಳು, ಮತ್ತೊಂದು ಬದಿಯಲ್ಲಿ ಅರಬ್ಬಿ ಸಮುದ್ರ ಹೊಂದಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕನ್ನಡ ಭಾಷೆಯ ಉಳಿವಿನ ಬಗ್ಗೆ ಮಾತನಾಡುವುದರ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೂ ಸಮಾಜ ಕಾಳಜಿ ವಹಿಸಬೇಕು. ಆಂಗ್ಲ ಮಾಧ್ಯಮದ ಮೇಲಿನ ಹೆಚ್ಚುತ್ತಿರುವ ಒಲವಿನಿಂದ ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದ್ದು, ಅವುಗಳ ಉಳಿವಿಗೆ ಪೋಷಕರು, ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಅಗತ್ಯ ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸುಧಾರಾಣಿ ಹೇಳಿದರು. ಅವರು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ‘ಕನ್ನಡ ನುಡಿ ಹಬ್ಬ ಸಂಭ್ರಮ–2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆ ಕೇವಲ ಸಂವಹನದ ಸಾಧನವಲ್ಲ. ಅದು ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬ. ಆಧುನಿಕ ಜಗತ್ತಿನಲ್ಲಿ ಇತರ ಭಾಷೆಗಳನ್ನು ಕಲಿಯುವುದು ಅಗತ್ಯವಾದರೂ ಮಾತೃಭಾಷೆಯನ್ನು ಮರೆಯಬಾರದು. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಓದುವ, ಕನ್ನಡದಲ್ಲಿ ಮಾತನಾಡುವ ಹಾಗೂ ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡದ ಮೇಲಿನ ಅಭಿಮಾನ ಘೋಷಣೆಗಳಿಗೆ ಸೀಮಿತವಾಗದೆ ದೈನಂದಿನ ಬದುಕಿನಲ್ಲೂ ವ್ಯಕ್ತವಾಗಬೇಕು ಎಂದರು. ಆಳ್ವಾಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಶ್ರೀ ವೇಣುಗೋಪಾಲ ಕೃಷ್ಣ ಎಜುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಗೀತಾನಂದ ಫೌಂಢೇಶನ್ ಮಣೂರು ಪಡುಕರೆ, ಉಸಿರು ಕೋಟ, ಶ್ರೀ ಚಂದು ಪೂಜಾರಿ ದತ್ತಿನಿಧಿ ಸಾಸ್ತಾನ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಇವರ ಆಸರೆಯಲ್ಲಿ ನಡೆಯುವ 6ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ವಿವೇಕ ಬಾಲಕಿಯರ ಫ್ರೌಢಶಾಲೆ ಕೋಟದ ಐಶ್ವರ್ಯ ಜೆ ನಾರಿ ಆಯ್ಕೆಯಾಗಿದ್ದಾರೆ. ಬರಹಗಾರ್ತಿಯಾಗಿ ಗುರುತಿಸಿಕೊಂಡು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಹಲವಾರು ಪ್ರಬಂಧ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿರುವ ಅವರು ಜನಾರ್ಧನ ಹಾಗೂ ಸುಜಾತ ಅವರ ಪುತ್ರಿಯಾಗಿರುತ್ತಾರೆ. ಬಹುಮುಖ ಪ್ರತಿಭೆಯಾಗಿರುವ ಇವರು ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯೆಕ್ಷೆಯಾಗಿ ಆಯ್ಕೆಯಾಗಿರುತ್ತಾರೆ ಎಂದು ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಆನಂದ ಸಿ ಕುಂದರ್, ಕಾರ್ಯದರ್ಶಿ ನರೇಂದ್ರಕುಮಾರ್ ಕೋಟ, ಪಿಡಿಓ ರವೀಂದ್ರ ರಾವ್ ಪ್ರಕಟಣೆಯಲ್ಲಿ…

Read More