Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸಕ್ಷಮಾ–ಆಳ್ವಾಸ್ ಮಹಿಳಾ ಸಂಘ ಹಾಗೂ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ 15 ದಿನಗಳ ‘ಆರಿ ಲಹರಿ’– ಸ್ವಾವಲಂಬನೆಯತ್ತ ಮೊದಲ ಹೆಜ್ಜೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ಮಿಜಾರ್‌ನ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಉಜಿರೆಯ ರುಡ್‌ಸೆಟಿ ಅಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಾವು ಕಲಿಯುವ ಪ್ರತಿಯೊಂದು ಕೌಶಲ್ಯವೂ ಬದುಕಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ. ಕಲಿತ ಕೌಶಲ್ಯವನ್ನು ಕೇವಲ ಪ್ರಮಾಣಪತ್ರಕ್ಕೆ ಸೀಮಿತಗೊಳಿಸದೆ, ಅದನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಿಕೊಳ್ಳಬೇಕು. ನಿರಂತರ ಅಭ್ಯಾಸ, ಆತ್ಮವಿಶ್ವಾಸ ಹಾಗೂ ಪರಿಶ್ರಮದ ಮೂಲಕ ಮಹಿಳೆಯರು ತಮ್ಮದೇ ಆದ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದು ಎಂದರು. ಭಾರತ್ ಇನ್‌ಫ್ರಾಟೆಕ್‌ನ ಆಡಳಿತ ನಿರ್ದೇಶಕ ಮೊಹಮ್ಮದ್ ಮುಸ್ತಫಾ ಮಾತನಾಡಿ, ಕೌಶಲ್ಯ ತರಬೇತಿ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಸ್ವಾವಲಂಬನೆಯ ದಾರಿಯನ್ನು ತೆರೆಯುತ್ತದೆ. ಕಸೂತಿ ಕೌಶಲ್ಯಕ್ಕೆ ಸ್ಥಳೀಯವಾಗಿ ಉತ್ತಮ ಅವಕಾಶಗಳಿದ್ದು, ಕಲಿತ ಜ್ಞಾನವನ್ನು ಸಣ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರಕಾರ ಹಿರಿಯ ನಾಗರಿಕರ ಸುರಕ್ಷತೆ, ಘನತೆ ಮತ್ತು ಉತ್ಪಾದಕ ಜೀವನ ನಡೆಸಲು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಕಾಯಿದೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮರ್ಪಕವಾಗಿ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕರ ರಕ್ಷಣಾ ಕಾಯಿದೆ 2007 ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ನಾಗರಿಕರ ನಿರ್ವಹಣೆ ಹಾಗೂ ರಕ್ಷಣೆ ಕಾಯ್ದೆಯನ್ವಯ ಹಿರಿಯ ನಾಗರಿಕರ ಮಕ್ಕಳು, ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವುದು, ತ್ಯಜಿಸುವುದು ಕಂಡುಬಂದಲ್ಲಿ ಅಂತಹ ಮಕ್ಕಳು ಹಾಗೂ ಪೋಷಕರಿಗೆ ಮೂರು ತಿಂಗಳ ಜೈಲು ವಾಸ ಹಾಗೂ 5,000 ದಂಡ ವಿಧಿಸಲು ಅವಕಾಶವಿದೆ ಎಂದ ಅವರು, ಪಾಲನೆ ಪೋಷಣೆಗೆ ಅರ್ಜಿಗಳು ಹಾಗೂ ಆಸ್ತಿ ಸಂರಕ್ಷಣೆ ಅರ್ಜಿಗಳು ನ್ಯಾಯಾಧೀಕರಣದ ಮುಂದೆ ಬಂದಾಗ ಸಕಾಲದಲ್ಲಿ ನ್ಯಾಯ ಸಮ್ಮತವಾಗಿ ವಿಲೇವಾರಿ ಮಾಡಿ, ನ್ಯಾಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಟ್ಕೇರೆ ಸಮೀಪ ಕಾಳಾವರ ನಿವಾಸಿ ಪುರೋಹಿತ ನಾಗರಾಜ ನಾವುಡ (45) ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರದ್ಧೆಯಿಂದ ಪೌರೋಹಿತ್ಯ ವೃತ್ತಿಯನ್ನು ಮಾಡುತ್ತಾ, ಎಲ್ಲರ ವಿಶ್ವಾಸಕ್ಕೆ ಭಾಜನರಾಗಿದ್ದ ನಾವುಡರು ಯಕ್ಷಗಾನದ ಬಗ್ಗೆ ಅಪಾರವಾದ ಒಲವುಳ್ಳವರಾಗಿದ್ದರು. ತನ್ನ ಸಂಪಾದನೆಯ ಬಹುಭಾಗವನ್ನು ಕಲೆ ಕಲಾವಿದರಿಗಾಗಿ ವಿನಿಯೋಗಿಸುತ್ತಾ ಬಂದ ನಾವುಡರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳ ಹಾಗೂ ಗರ್ಭಿಣಿಯರ ಆರೋಗ್ಯ ರಕ್ಷಣೆ, ರಕ್ತಹೀನತೆ ತಡೆಗಟ್ಟುವುದು ಮತ್ತು ಪೌಷ್ಟಿಕ ಆಹಾರದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೊಸಬೇಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೇಂದ್ರ ಸರಕಾರದ ಪೋಷಣ್ ಅಭಿಯಾನ ಮತ್ತು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಸೋಮವಾರ ಆಯೋಜಿಸಲಾಯಿತು.  ಮುಖ್ಯ ಅಭ್ಯಾಗತರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಪ್ರೇಮಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಯೋಜನೆಯು ತಾಯಿ ಮತ್ತು ಮಗುವಿನ ಆರೋಗ್ಯವನ್ನು ಉತ್ತಮಪಡಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟಲು ಮನೆಯಲ್ಲಿಯೇ ವಹಿಸಬೇಕಾದ ಕಾಳಜಿಗಳ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕರೆ ನೀಡಿದರು. ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಅವರು ಪೋಷಣ್ ಅಭಿಯಾನದ ವಿವರ ನೀಡಿ, ಸೀಮಂತ, ಅನ್ನಪ್ರಾಶನ ಮುಂತಾದ ಸಾಂಪ್ರದಾಯಿಕ ಆಚರಣೆಗಳ ಮೂಲಕ ಜಾಗೃತಿ ತಲುಪಿಸುವ ಕಾರ್ಯವನ್ನು ಶ್ಲಾಘಿಸಿದರು. ಗ್ರಾಮ ಪಂಚಾಯತ್ ಪಿಡಿಒ ರವೀಂದ್ರರಾವ್ ಮಾತನಾಡಿ, ಗ್ರಾಮಸ್ಥರು ಪೌಷ್ಟಿಕ ಆಹಾರ, ಶುದ್ಧ ಕುಡಿಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಾಸಿಯಲ್ಲಿ ನಡೆದ ರಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಇತಿಹಾಸಿನಿ ಪಡುಕೋಣೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಅವಳು ಪಡುಕೋಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಂಭವಿಸುವ ಪ್ರತಿಯೊಂದು ಜನನ ಮತ್ತು ಮರಣದ ವಿವರಗಳನ್ನು ಯಾವುದೇ ತಪ್ಪುಗಳಿಗೆ ಆಸ್ಪದ ನೀಡದಂತೆ ನಿಖರವಾಗಿ ಮಾಹಿತಿ ದಾಖಲು ಮಾಡುವಂತೆ ನೋಂದಣಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಮತ್ತು ಮರಣ ನೋಂದಣಿಯು ಭವಿಷ್ಯದ ಕೆಲಸ ಕಾರ್ಯಗಳಿಗೆ ಇವುಗಳ ಪ್ರಮಾಣಪತ್ರವು ಅವಶ್ಯವಿದ್ದು, ಇದನ್ನು ಮನಗಂಡು ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಬೇಕು. ಜನನ ಮತ್ತು ಮರಣದ ವಿವರಗಳನ್ನು ದಾಖಲು ಮಾಡುವ ಕಾರ್ಯವನ್ನು ನೋಂದಣಾಧಿಕಾರಿಗಳು ಎಚ್ಚರಿಕೆಯಿಂದ ಜವಾಬ್ದಾರಿಯುತವಾಗಿ ತಪ್ಪುಗಳು ಆಗದಂತೆ ನೋಡಿಕೊಳ್ಳಬೇಕು. ನೋಂದಣಿ ಸಮಯದಲ್ಲಿ ತಂದೆ-ತಾಯಿಯರ ಹೆಸರು ಲಿಂಗ ತಪ್ಪು ನಮೂದು, ಬದಲು, ಸ್ಥಳ ಮಹಜರು ಮಾಡದೇ ಮರಣ ಪ್ರಮಾಣಪತ್ರ ಸೃಜನೆ, ನೋಂದಣಿ ಘಟಕದ ವ್ಯಾಪ್ತಿ ಮೀರಿ ನೋಂದಣಿ, ಮೂಲ ದಾಖಲೆಗಳನ್ನು ಪರಿಶೀಲಿಸದೇ ಘಟನೆಗಳ ಹೆಸರು, ದಿನಾಂಕ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2026ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ಇದೇ ಬರುವ ನವೆಂಬರ್ 06ರಂದು ಶುಕ್ರವಾರ ಸಂಜೆ ಕೋಟದ ಮಾಂಗಲ್ಯಮಂದಿರದ ಎದುರಿನ ಮೈದಾನದಲ್ಲಿ ಜರಗಲಿದೆ. ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ ಕಾರ್ಯಕ್ರಮ ಜರಗಲಿದ್ದು ಕನ್ನಡ ನಾಡುಕಂಡ ಶ್ರೇಷ್ಠ ಸಮಾಜ ಸುಧಾರಕ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ ಶಂಕರ್ ಇವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಿದೆ.ಉದ್ಯಮ ಕ್ಷೇತ್ರದ ಸಾಧಕ ಕಂಡ್ಲೂರು ಕೆ.ಎನ್ ಶ್ರೀನಿವಾಸ ಜೋಗಿ ಬೆಂಗಳೂರು ಇವರಿಗೆ ವಿಶೇಷ ಪುರಸ್ಕಾರ, ಅಂತಾರಾಷ್ಟ್ರೀಯ ಕರಾಟೆಪಟು ವಿಜಯ ಪೂಜಾರಿ ಹರ್ತಟ್ಟು ಇವರಿಗೆ ವಿಶೇಷ ಅಭಿನಂದನೆ ಕಾರ್ಯಕ್ರಮಗಳು ನಡೆಯಲಿದೆ ಎಂದು ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು ಇದರ ಭಾಗವಾಗಿ ಸಂಜೀವಿನಿ ಸಂಘ ರಚನೆಯ ಮೂಲಕ ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆಯುತ್ತಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹೇಳಿದರು. ಅವರು ಮಂಗಳವಾರ ಕೋಟತಟ್ಟು ಕಾರಂತ ಥೀಂ ಪಾರ್ಕ್ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಎನ್ ಆರ್ ಎಂ ಎಲ್ ಸಂಜೀವಿನಿ,ಜಿಲ್ಲಾ ಹಾಗೂ ತಾಲೂಕು ಪಂಚಾಯತ್, ಕೋಟತಟ್ಟು ಗ್ರಾಮಪಂಚಾಯತ್, ಸಿಂಧೂರ ಸಂಜೀವಿನಿ ಗ್ರಾಮ ಒಕ್ಕೂಟದ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಆರ್ಥಿಕ ವಹಿವಾಟು ತಮ್ಮ ಸ್ವ ಉದ್ಯೋಗಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಂಡು ಸರಕಾರದ ಅನುದಾನವನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು ತನ್ಮೂಲಕ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ಒತ್ತಿ ಹೇಳಿದ ಅವರು ಸಂಜೀವಿನಿ ಹಣಕಾಸು ವಹಿವಾಟುಗಳನ್ನು ಶಿಸ್ತುಬದ್ಧ ರೀತಿಯಲ್ಲಿ ನಿರ್ವಹಿಸಿ ಎಂದರಲ್ಲದೆ ಸಾಲ ಪಡೆದ ಹಣದಲ್ಲಿ ವಯಕ್ತಿಕ ಕಾರ್ಯಕ್ಕೆ ಬಳಕೆಯಾಗದೆ ಅದನ್ನು ತಮ್ಮ ಉತ್ಪಾದನಾ ಕ್ಷೇತ್ರಕ್ಕೆ ವಿನಿಯೋಗಿಸಿ ಎಂದು ಕರೆ ನೀಡಿದರು. ಕೋಟ ಆರಕ್ಷಕ ಠಾಣೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆಯ ವತಿಯಿಂದ “ಸೇವೆಗೆ ಸುದಿನ ಎಂಬ ಶೀರ್ಷಿಕೆಯಡಿ ಸಮಾಜದ ಕಣ್ಮಣಿ ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಅಂಗವಾಗಿ ತೆಕ್ಕಟ್ಟೆ ಗ್ರಾಮ ಪಂಚಾಯತ್ ಹಾಗೂ ಎಸ್ ಎಲ್‌ಆರ್ ಎಂ ಘಟಕದ ಸಹಯೋಗದಲ್ಲಿ ಕೊಮೆ ಬೀಚ್ ಕ್ಲಿನಿಂಗ್ ಹಾಗೂ ವಿವಿಧ ಸಮಾಜ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿತು. ಈ ಹಿನ್ನಲೆಯಲ್ಲಿ ಡಾ. ಜಿ. ಶಂಕರ್ ಅವರ ಶೈಕ್ಷಣಿಕ ಚಿಂತನೆಯಂತೆ, ಬೀಜಾಡಿ ಸರ್ಕಾರಿ ಪ್ರೌಢಶಾಲೆಗೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುರ್ಚಿಗಳನ್ನು ವಿತರಿಸಲಾಯಿತು. ಆರೋಗ್ಯ ಚಿಂತನೆಯಂತೆ ಅಶಕ್ತರಿಗೆ ಸಹಾಯಧನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಾನವರ ಅಂತ್ಯಕ್ರಿಯೆಯ ಪುಣ್ಯದ ಮೋಕ್ಷ ಕಾರ್ಯದಲ್ಲಿ ಅತ್ಯಂತ ಮಹತ್ವದ ಸೇವೆಗೈದ ಕೋಟೇಶ್ವರದ ಮೋಕ್ಷ ಸೂರಿ ಹಾಗೂ ತೆಕ್ಕಟ್ಟೆಯ ಚಂದ್ರ ದೇವಾಡಿಗ ಅವರನ್ನು ಗುರುತಿಸಿ ಸನ್ಮಾನಿಸಲಾಯಿತು. ತೆಕ್ಕಟ್ಟೆ ಎಸ್‌ಎಲ್‌ಆರ್‌ಎಂ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಇವರನ್ನು ಅಭಿನಂದಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಮೊಗವೀರ ಸಂಘಟನೆಯ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ಕೆಲಸ ಮಾಡುವಾಗ ನಮ್ಮಲ್ಲಿ ಆತ್ಮವಿಶ್ವಾಸ ಇರಬೇಕು. ಮೊದಲು ನಮ್ಮಲ್ಲಿ ನಾವು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಶಿಶು ಮಂದಿರಗಳಲ್ಲಿ ಶಿಬಿರಗಳ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಸುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಂಡು ಸಮಾಜದ ಆಸ್ತಿಯಾಗಬೇಕು ಎಂದು ಹಿಂದುಪರ ಸಂಘಟನೆಯ ಮುಖಂಡ ಶ್ರೀಧರ ನಾಯ್ಕ್ ಹೇಳಿದರು. ಅವರು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ದಸರಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಮಮತಾ ಜಿ.ಪೈ, ಸವಿತಾ ಆಚಾರ್ಯ, ಶಿಶು ಮಂದಿರದ ಸದಸ್ಯೆ ವಸಂತಿ ಎನ್.ಖಾರ್ವಿ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬಿ. ಲಕ್ಷ್ಮೀಕಾಂತ ಮಡಿವಾಳ ನಿರ್ವಹಿಸಿ, ವಂದಿಸಿದರು.

Read More