ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮ್ಯಾಟ್ರಿಮೋನಿ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ವ್ಯಕ್ತಿಯೊಬ್ಬರಿಗೆ ಸುಳ್ಳು ಪ್ರಕರಣ ಹಾಗೂ ಆತ್ಮಹತ್ಯೆ ಬೆದರಿಕೆ ಹಾಕಿ, ಸುಮಾರು 42.97 ಲಕ್ಷ ಹಣ ವಸೂಲಿ ಮಾಡಿರುವ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತಳನ್ನು ಬೈಂದೂರು ತಾಲೂಕಿನ ಮಯ್ಯಾಡಿ ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ವಾಸವಾಗಿರುವ ನಾಗರತ್ನ ಹೆಚ್. (42) ಹಾಗೂ ಮೂಲತಃ ಕಾರ್ಕಳ ತಾಲೂಕಿನ ಮಿರ್ಯಾರು ನಿವಾಸಿಯಾಗಿದ್ದು, ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ವಾಸವಾಗಿರುವ ಹೇಮಂತ್ (41) ಎಂದು ಗುರುತಿಸಲಾಗಿದೆ. ಉಡುಪಿಯ ನಿರ್ಮಾಣ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ ಕೆ. ಎಂಬವರು ವಿವಾಹಕ್ಕಾಗಿ ವಧುವನ್ನು ಹುಡುಕುತ್ತಿದ್ದ ಸಂದರ್ಭದಲ್ಲಿ, 2023ರ ಕೊನೆಯ ಭಾಗ ಅಥವಾ 2024ರ ಜನವರಿಯಲ್ಲಿ ಕನ್ನಡ ಜೋಡಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ನಾಗರತ್ನ ಹೆಚ್. ಎಂಬವರ ಪರಿಚಯವಾಗಿತ್ತು. ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಎಸ್. ಕಡಂಬಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ರೋಟರಿ ಕ್ಲಬ್ ಕಲ್ಯಾಣಪುರದ ಸಹಯೋಗದೊಂದಿಗೆ “Safe Streets, Smart Youth” ಶೀರ್ಷಿಕೆಯಡಿ ಸಂಚಾರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಲಕ್ಷ್ಮಿ ಜಿ. ಸ್ವಾಗತ ಭಾಷಣ ಮಾಡಿದರು. NSS ಸಂಯೋಜಕಿ ನಿರುಪಮಾ ಜಿ. ಎನ್. ಅವರು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅನೂಪ್ ನಾಯಕ್ ಅವರು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳು, ರಸ್ತೆ ಸುರಕ್ಷತೆ ಹಾಗೂ ಜವಾಬ್ದಾರಿಯುತ ವಾಹನ ಚಾಲನೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ರೋಟರಿ ಕ್ಲಬ್ ಕಲ್ಯಾಣಪುರದ ಅಧ್ಯಕ್ಷ ರೊಟೇರಿಯನ್ ಗಿರೀಶ್ಚಂದ್ರ ಆರ್. ಅವರು ಗೌರವಾನ್ವಿತ ಅತಿಥಿಗಳಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ರೋಬೊಸಾಫ್ಟ್ ಟೆಕ್ನಾಲಜೀಸ್ ಇವರ ಸಿಎಸ್ಆರ್ ನಿಧಿಯಿಂದ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕೊಠಡಿಗಳ ಉದ್ಘಾಟನೆಯನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ರೋಬೋಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯ ಸಿಇಒ ರಾನ್ ಮಹಾನ್ ಅವರು ನೆರವೇರಿಸಿದರು. ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿಶೇಷ ಮುತುವರ್ಜಿಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಗೆ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಸುಸಜ್ಜಿತ ಶಾಲಾ ಕೊಠಡಿಗಳು, ಶುದ್ದ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರಾಕ್ಟಿವ್ ಬೋರ್ಡ್, ಶಾಲೆಗೆ ಇಂಟರ್ಲಾಕ್ ಅಳವಡಿಕೆ, ಶಾಲಾ ಪೈಂಟಿಂಗ್, ಸುಸ್ಸಜಿತ ಗ್ರಂಥಾಲಯ, ಪೀಠೋಪಕರಣಗಳನ್ನು ಸಿಎಸ್ಆರ್ ನಿಧಿಯ ಮೂಲಕ ಒದಗಿಸಿ ಮಾದರಿ ಶಾಲೆಯನ್ನಾಗಿ ನಿರ್ಮಿಸಲಾಗಿದ್ದು ಇಂದು ಈ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಅದ್ದೂರಿಯಾಗಿ ನೆರವೇರಿತು. ರೋಬೋಸಾಫ್ಟ್ ಸಂಸ್ಥೆಯ ಸಿಇಓ ರಾನ್ ಮಹಾನ್ ಹಾಗೂ ಅವರ ಧರ್ಮಪತ್ನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 124ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಗೊಂಬೆ ಮನೆಯಲ್ಲಿ ಜರುಗಿತು. ಸಭಾ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ್ ಪೈ ಅವರು ಮಾತನಾಡಿ ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಶೀರ್ಷಿಕೆ ನಿಜವಾಗಿಯೂ ಶ್ಲಾಘನೀಯ. ಈ ವೇದಿಕೆಯಲ್ಲಿ ಅತೀ ಚಿಕ್ಕ ವಯಸ್ಸಿನಿಂದ ಹಿಡಿದು ವಯೋ ವೃದ್ಧರ ತನಕ ಅನೇಕ ಕಲಾವಿದರು ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ. ಇನ್ನು ಮುಂದೆಯೂ ಈ ಅಕಾಡೆಮಿ ಇನ್ನಷ್ಟು ಕಲಾವಿದರನ್ನು ಗುರುತಿಸಲಿ ಅನ್ನುವದೇ ನಮ್ಮೆಲ್ಲರ ಹಾರೈಕೆ ಎಂದು ಹಾರೈಸಿದರು. ನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ್ ಶ್ಯಾನುಭಾಗ್ ಬಂಟ್ವಾಡಿ, ರಮಾನಂದ ಕಿಣಿ ಅಂಪಾರು, ಕಿಶೋರ್ ಕುಮಾರ್ ಆರೂರು ಹಾಗೂ ಪೃಥ್ವಿ ಕಿಶೋರ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಿರಿಯ ಪ್ರತಿಭೆ ಪನ್ನಗ ಕೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಸ್ರೂರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ದೇವಾನಂದ ಶೆಟ್ಟಿ, ಕುಂದಾಪುರ ಕಲಾ ಕ್ಷೇತ್ರ ಟ್ರಸ್ಟ್ ಇದರ ಅಧ್ಯಕ್ಷರಾದ ಕಿಶೋರ ಕುಮಾರ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಲೇಜಿನ ವಿಶ್ವಸ್ಥ ಮಂಡಳಿಯ ಖಜಾಂಚಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹೆಬ್ರಿ ಸರ್ಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮನೋಜ್ ಎಂ. ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಸ್ಥ ಮಂಡಳಿಯ ಸದಸ್ಯರಾದ ಗಣೇಶ ಶೆಟ್ಟಿ ಮೊಳಹಳ್ಳಿ ವಹಿಸಿದರು. ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಆಳ್ವಾಸ ಕಾಲೇಜು ಮೂಡುಬಿದ್ರೆ ದ್ವಿತೀಯ ಸ್ಥಾನವನ್ನು ಶ್ರೀ ಶಾರದಾ ಕಾಲೇಜು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಶ್ಮಿ ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಬೆಸ್ಕಾಂ) ಪ್ರಧಾನ ವ್ಯವಸ್ಥಾಪಕರಾಗಿ ನೇಮಕ ಮಾಡಲಾಗಿದೆ. 2014ನೇ ಬ್ಯಾಚ್ನ ಕೆಎಎಸ್ ಅಧಿಕಾರಿಯಾಗಿರುವ ರಶ್ಮಿ ಎಸ್.ಆರ್. ಅವರು 2017ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದರು. ಬಳಿಕ 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು 2024ರ ಜುಲೈನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರತ್ನ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ನಂತರ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅವರು, 2025ರಲ್ಲಿ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದರು. ಇದೀಗ ರಾಜ್ಯ ಸರ್ಕಾರದ ಆದೇಶದಂತೆ ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಕುಂದಾಪುರದ ನೂತನ ಉಪವಿಭಾಗಾಧಿಕಾರಿಯಾಗಿ ಮೈಸೂರು ನಗರಾಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೈಬರ್ ಕ್ರೈಮ್ಗೆ ಒಳಗಾಗುವವರು ಸಮಾಜದ ಸುಶಿಕ್ಷಿತ ವ್ಯಕ್ತಿಗಳೇ ಆಗಿದ್ದು, ಯಾವುದೇ ಎಪಿಕೆ ಫೈಲ್ಸ್ಗಳನ್ನು ತೆರೆಯುವ ಮುಂಚೆ, ಸುಳ್ಳು ಆಪಾದನೆ ಹೊರಿಸಿ ಸಿಕ್ಕಿಸಿ ಹಾಕುವಂಥ ಡಿಜಿಟಲ್ ಎರೆಸ್ಟ್ ನಂಥ ನಯವಂಚನೆಯ ಬಗ್ಗೆ ಎಚ್ಚರವಿರಬೇಕು. ಭೀತಿ ಹುಟ್ಟಿಸಿ ನಡೆಸುವ ಮೋಸದ ಜಾಲದಲ್ಲಿ, ಆ್ಯಪ್ಗಳ ಸಾಲದ ಸುಳಿಯಲ್ಲಿ ಸಿಲುಕದ ಹಾಗೆ ಜಾಗೃತರಾಗುವ ಮಾಹಿತಿಯನ್ನು ಯುವಜನರು ಪಡೆಯುತ್ತಿರಬೇಕು” ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಂಜ ನಾಯ್ಕ ಹೇಳಿದರು. ಅವರು ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಕುಂದಾಪುರ ಪೊಲೀಸ್ ಠಾಣೆ ಅವರು ಆಯೋಜಿಸಿದ ‘ಸೈಬರ್ ಕ್ರೈಮ್ ಜಾಗೃತಿ ಅಭಿಯಾನ’ ಕಾರ್ಯಕ್ರಮದಲ್ಲಿ ಕರೆ ನೀಡಿದರು. ಕುಂದಾಪುರ ಠಾಣೆಯ ಪ್ರೊಬೆಷನರಿ ಸಬ್ ಇನ್ಸ್ ಪೆಕ್ಟರ್ ಮಂಜುಳಾ ಹಮ್ಮರ್ ಅವರು ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣದ ಪೋರ್ಟಲ್ಸ್ ಬಳಸುವ ಮೊದಲು ಸೆಕ್ಯೂರಿಟಿ ವ್ಯವಸ್ಥೆಯನ್ನು ಸರಿಯಾಗಿ ಅಳವಡಿಸಿ, ಡೀಪ್ ಫೇಕ್ ತಂತ್ರಜ್ಞಾನದ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು’ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇವರು ಏರ್ಪಡಿಸಿದ್ದ ಅಂತರ್ ಶಾಲಾ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಇತಿಹಾಸಿನಿ ಪಡುಕೋಣೆ ತೃತೀಯ ಸ್ಥಾನ ಗಳಿಸಿದ್ದಾಳೆ. ಇವಳು ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಇವಳಿಗೆ ಮುಖ್ಯ ಶಿಕ್ಷಕರು, ಅಧ್ಯಾಪಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇದೇ ಬರುವ ನವೆಂಬರ್ 6ರಂದು ಕೋಟದಲ್ಲಿ ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಸದ್ಭಾವನಾ ಕಾರ್ಯಕ್ರಮದ ಆಶಯಗೀತೆಯನ್ನು ಇತ್ತೀಚಿಗೆ ಕೋಟದ ಪಂಚವರ್ಣ ಕಚೇರಿಯಲ್ಲಿ ಇತ್ತೀಚಿಗೆ ಅನಾವರಣಗೊಳಿಸಲಾಯಿತು. ಸಾಹಿತಿ ಶಿಕ್ಷಕ ನರೇಂದ್ರ ಕುಮಾರ್ ಕೋಟ ರಚನೆ ಸಂಯೋಜನೆಯ ಸದ್ಭಾವನಾ ಎಂಬ ಗೀತೆಯನ್ನು ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಮಾಜಕ್ಕಾಗಿ ಸದಾ ತುಡಿತ ಹೊಂದಿದ ಪಂಚವರ್ಣದಂತಹ ಸಂಘಟನೆ ರಾಜ್ಯಕ್ಕೆ ಮಾದರಿಯಾಗಿದೆ ಇಂತಹ ಸಂಸ್ಥೆಯ ಆಶಯಗೀತೆ ರಚಿಸಿದ ಸಾಹಿತಿ ನರೇಂದ್ರ ಕುಮಾರ್ ಕೋಟ ಕಾರ್ಯ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಾಹಿತಿ ನರೇಂದ್ರ ಕುಮಾರ್ ಕೋಟ ಸದ್ಭವಾನ ಗೀತೆಯ ಪರಿಕಲ್ಪನೆಯನ್ನು ಸಭೆಯಲ್ಲಿ ತೆರೆದಿಟ್ಟರು. ಸಮಾಜಸೇವಕ ಅವಿನಾಶ್ ಕಾಮತ್,ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ರೋಟರಿ ಸಮುದಾಯದಳ ಕೋಟೇಶ್ವರ ಅಧ್ಯಕ್ಷೆ ಸುಪ್ರಿತಾ ಪುರಾಣಿಕ್ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಸುಬ್ರಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಸಹಯೋಗದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಸ್ಪರ್ಧೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ. ಕ್ಲಬ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ, ಬುಲ್ಬುಲ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸ್ಕೌಟ್ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿವೆ. ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್ನ ಮೂರು ತಂಡಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
