ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಶಿಕ್ಷಣ ಸಮಾಜದಲ್ಲಿ ಬದಲಾವಣೆ ತರುತ್ತದೆ. ಗುಣಮಟ್ಟದ ಶಿಕ್ಷಣವು ಜವಾಬ್ದಾರಿಯುತ ನಾಗರೀಕನಾಗಿಸುತ್ತದೆ. ಪ್ರತಿಯೊಬ್ಬರಿಗೂ ಶಿಕ್ಷಣವಂತರಾಗುವಂತೆ ನೋಡಿಕೊಳ್ಳಬೇಕೆಂದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹ್ಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಇಲ್ಲದಿದ್ದಲ್ಲಿ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಅಲ್ಪಸಂಖ್ಯಾತ ಸಮುದಾಯದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ, ಬುದ್ಧ ಹಾಗೂ ಪಾರ್ಸಿ ಸಮುದಾಯಗಳು ಸೇರಿದಂತೆ ಯಾರೊಬ್ಬ ಮಕ್ಕಳು ಶಿಕ್ಷಣದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು. ಸರಕಾರಿ ಶಾಲೆಗಳಿಗೆ ನಿನ್ನೆ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳ ಸಂಖ್ಯೆ 25 ರಿಂದ 30 ಕಂಡುಬಂದಿದೆ. ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಗುಣಮಟ್ಟದ ಶಿಕ್ಷಣವನ್ನು ನೀಡಿದಲ್ಲಿ ಮಕ್ಕಳ ಸಂಖ್ಯೆ ಹೆಚ್ಚುತ್ತದೆ. ಇದಕ್ಕೆ ಒತ್ತು ನೀಡಬೇಕು. ಇದರ ಜೊತೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ – ಚಿಕ್ಕಮಂಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಅವರನ್ನು ಮುಂಬೈಯ ಮಂತ್ರಾಲಯದಲ್ಲಿ ಭೇಟಿ ಮಾಡಿ ಚರ್ಚಿಸಿದರು. ಮಾಜಿ ರಕ್ಷಣಾ ಸಚಿವರಾದ ದಿ. ಜಾರ್ಜ್ ಫೆರ್ನಾಂಡಿಸ್ ಅವರ ಮೂಲಕ ಕರಾವಳಿ ಪ್ರಯಾಣಿಕರ ಜೀವನಾಡಿಯಾಗಿ ರೂಪುಗೊಂಡ ಕೊಂಕಣ ರೈಲ್ವೆ ಆರ್ಥಿಕ ಮುಗ್ಗಟ್ಟಿನ ಸಂಕಷ್ಟದಲ್ಲಿದೆ. ಸುಮಾರು 750 ಕಿ.ಮೀ ಉದ್ದದ ಕೊಂಕಣ ರೈಲ್ವೆಯ ಮಾರ್ಗವನ್ನು ಅಭಿವೃದ್ಧಿಪಡಿಸಲು ಹಾಗೂ ಭವಿಷ್ಯದ ಸಂಚಾರ ಬೆಳವಣಿಗೆಯ ಸಾಮರ್ಥ್ಯ ಹೆಚ್ಚಿಸಲು ಇಡೀ ಮಾರ್ಗವನ್ನು ದ್ವಿಗುಣಗೊಳಿಸುವ ಅನಿವಾರ್ಯವಾಗಿದೆ. ಒಂದು ಅಂದಾಜಿನ ಪ್ರಕಾರ ಮಾರ್ಗದ ಹಳಿಗಳನ್ನು ದ್ವಿಗುಣಗೊಳಿಸುವುದು ಮತ್ತು ತುಂಬಾ ಅವ್ಯವಸ್ಥೆಯಲ್ಲಿರುವ ರೈಲ್ವೆ ನಿಲ್ದಾಣಗಳನ್ನು ಉತ್ತಮವಾಗಿ ನಿರ್ಮಾಣ ಮಾಡಲು 40,000 ಕೋಟಿ ರೂಪಾಯಿಗಳ ಅಗತ್ಯವಿದೆ, ಇಷ್ಟು ಹಣವನ್ನು ಬರಿಸಲು ಕೊಂಕಣ ರೈಲ್ವೆಯ ಆರ್ಥಿಕ ಸ್ಥಿತಿ ಸಹಕಾರಿಯಾಗಿಲ್ಲ. ಕೊಂಕಣ ರೈಲ್ವೆ ಹಾದುಹೋಗುವ ರಾಜ್ಯ ಸರಕಾರಗಳು ತಮ್ಮ ಪಾಲಿನ ಶೇರ್ಗಳನ್ನು ಬಿಟ್ಟುಕೊಟ್ಟರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಂಪಾರು ರೋಟರಿ ಕ್ಲಬ್ನ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ಗೆ ರನ್ನರ್ಸ್ ಪ್ರಶಸ್ತಿ ಪಡೆದುಕೊಂಡಿತು. ಯುಗಳ ಗೀತೆ ಪ್ರಥಮ, ಏಕ ವ್ಯಕ್ತಿಗಾಯನ ದ್ವಿತೀಯ, ಸಮೂಹ ನೃತ್ಯ ದ್ವಿತೀಯ, ಏಕ ಪಾತ್ರಾಭಿನಯ ದ್ವಿತೀಯ, ರಂಗೋಲಿ ದ್ವಿತೀಯ ಹಾಗೂ ಚಿತ್ರಕಲೆಗೆ ಪ್ರಥಮ ಪ್ರಶಸ್ತಿ ಲಭಿಸಿದೆ. ಈ ಸ್ಪರ್ಧೆಯಲ್ಲಿ ವಲಯದ ಏಳು ಕ್ಲಬ್ಗಳು ಭಾಗವಹಿಸಿದ್ದು, ಅ.25ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಸುಧಾಕರ್ ಶೆಟ್ಟಿ ಹಾಗೂ ಗಣ್ಯರು ಕ್ಲಬ್ನ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಮತ್ತು ಸದಸ್ಯರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಗಂಗೊಳ್ಳಿ ಪೊಲೀಸ್ ಠಾಣೆಯು ಇಡೀ ರಾಜ್ಯದಲ್ಲಿ 7ನೇ ಅತ್ಯುತ್ತಮ ಠಾಣೆಯಾಗಿ ಹೊರಹೊಮ್ಮಿರುವ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಅವರು ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗೌರವನ್ನು ಸಮರ್ಪಿಸಿದರು. ಬಳಿಕ ಮಾತನಾಡಿದ ಶಾಸಕರು ಕಳೆದ 10 ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯದ 10 ಠಾಣೆಗಳ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿ ಪೊಲೀಸ್ ಠಾಣೆಯು ಅಪರಾಧಗಳ ಪತ್ತೆ ಹಚ್ಚುವಿಕೆ, ಸಾರ್ವಜನಿಕರೊಂದಿಗೆ ಸಂಪರ್ಕ, ಜನಸ್ನೇಹಿ ಪೊಲೀಸಿಂಗ್, ಮಾದಕ ದ್ರವ್ಯ ತಡೆ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಸಂಬಂಧ ಇಡೀ ರಾಜ್ಯದಲ್ಲಿಯೇ 7ನೇ ಸ್ಥಾನ ಪಡೆದಿರುವುದು ಸಂತೋಷದ ವಿಚಾರ. ಈ ನಿಟ್ಟಿನಲ್ಲಿ ಈ ಸಾಧನೆಗಾಗಿ ದುಡಿದ ಈ ಹಿಂದಿನ ಠಾಣಾಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳು. ಗಂಗೊಳ್ಳಿ ಠಾಣೆಯ ಕಾರ್ಯ ವೈಖರಿಯು ಕ್ಷೇತ್ರದ ಹಾಗೂ ಜಿಲ್ಲೆಯ ಇತರ ಠಾಣೆಗಳಿಗೂ ಮಾದರಿಯಾಗಲಿ, ಎಂದು ಶಾಸಕರು ಇದೇ ಸಂದರ್ಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಅ.28: ಇಲ್ಲಿನ ಪೀಣ್ಯದ ಎಚ್ಎಂಟಿ ಲೇಔಟ್ನಲ್ಲಿರುವ ‘ರಥನ್ ಬೇಕರಿ’ಯಲ್ಲಿ ಮಂಗಳವಾರ ರಾತ್ರಿ ಪುಡಿರೌಡಿಗಳು ದಾಂದಲೆ ನಡೆಸಿ, ಬೇಕರಿ ಸಿಬ್ಬಂದಿ ಹಾಗೂ ಮಹಿಳಾ ಮಾಲೀಕರ ಮೇಲೆ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಬೇಕರಿಗೆ ತೆರಳಿದ ಮಹೇಶ್ ಹಾಗೂ ರಜತ್ ಎಂಬ ಪುಂಡರು, ಅಲ್ಲಿ ಟೀ ಮತ್ತು ಕಾಫಿ ಕುಡಿದಿದ್ದಾರೆ. ಬಳಿಕ ಬೇಕರಿ ಸಿಬ್ಬಂದಿ ಬಿಲ್ ಪಾವತಿಸುವಂತೆ ಕೇಳಿದಾಗ, ಒಮ್ಮೆಲೇ ಕೆರಳಿ ಅಸಭ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾರೆ. “ನಾನು ಜೈಲಿಗೆ ಹೋಗಿ ಬಂದವನು ಗೊತ್ತಾ? ದೊಡ್ಡ ರೌಡಿ ನಾನು, ನನ್ನ ಹತ್ತಿರವೇ ದುಡ್ಡು ಕೇಳ್ತಿಯಾ?” ಎಂದು ಅಹಂಕಾರದ ಮಾತುಗಳನ್ನಾಡುತ್ತಾ ಅಂಗಡಿಯಲ್ಲಿದ್ದವರ ಮೇಲೆ ಅಟ್ಯಾಕ್ ಮಾಡಲು ಮುಂದಾಗಿದ್ದಾರೆ. ಬೇಕರಿ ಆವರಣದಲ್ಲಿದ್ದ ಗಾಜಿನ ಬಾಟಲಿಗಳನ್ನು ಎತ್ತಿ ನೆಲಕ್ಕೆ ಅಪ್ಪಳಿಸಿ ಪುಡಿಪುಡಿ ಮಾಡಿ ಸೃಷ್ಟಿಸಿದ ಆತಂಕ ಸಣ್ಣದಾಗಿರಲಿಲ್ಲ. ಅಷ್ಟೇ ಅಲ್ಲದೆ, “ಇನ್ಮುಂದೆ ನಾನು ಮಾತ್ರವಲ್ಲ, ನಮ್ಮ ಹುಡುಗರು ಬಂದರೂ ಸರಿ, ಯಾರ ಹತ್ತಿರವೂ ದುಡ್ಡು ಕೇಳುವಂತಿಲ್ಲ! ಎಲ್ಲರಿಗೂ ಫ್ರೀಯಾಗಿ ಟೀ, ಕಾಫಿ ಕೊಡಬೇಕು” ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದ ಮುದೂರು ಗ್ರಾಮದ ಉದಯ ನಗರ ಶಶಿಧರ ಕೊರಗ ಅವರ ಮನೆಯಲ್ಲಿ ಆ ಭಾಗದ ಕೊರಗ ಸಮುದಾಯದ ಬಂಧುಗಳು ಹಾಗೂ ಪ್ರಮುಖರ ಜೊತೆ ಸಂವಾದ ನಡೆಸಿದರು. ಹಾಗೂ ಕೊರಗ ಬಂಧುಗಳ ದೈನಂದಿನ ಜೀವನದ ಬಗ್ಗೆ ಉಭಯ ಕುಶಲೋಪರಿ ನಡೆಸಿದರು. ಆ ಭಾಗದಲ್ಲಿ ಸುಮಾರು 60 ಮನೆಗಳು ಹಕ್ಕು ಪತ್ರ ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ, ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಾರದೇ ಇರುವುದು ಹಾಗೂ ರೇಷನ್ ಕಾರ್ಡ್ ಸಮಸ್ಯೆಗಳ ಬಗ್ಗೆ ಅರಿತುಕೊಂಡು ತಕ್ಷಣ ಫೋನ್ ಮೂಲಕ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರ ಜೊತೆಗೆ ಬೈಂದೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಪೂಜಾರಿ, ಪರಿಶಿಷ್ಟ ಪಂಗಡ ಮೋರ್ಚಾ ಅಧ್ಯಕ್ಷರಾದ ನಕ್ಷತ್ರ ನಾಯಕ್ ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ‘ಕನ್ನಡ ರಾಜ್ಯೋತ್ಸವ’ ಸಮಾರಂಭದಲ್ಲಿ ನವೆಂಬರ್ 1 ರಂದು ನೀಡಲಾಗುತ್ತಿರುವ ‘ಡಾ. ಹೆಚ್. ಶಾಂತಾರಾಮ ಯಕ್ಷಗಾನ ಪುರಸ್ಕಾರʼಕ್ಕೆ ಖ್ಯಾತ ಯಕ್ಷಗಾನ ಕಲಾವಿದ ಮಹಾಬಲೇಶ್ವರ ಭಟ್ ಕ್ಯಾದಗಿ ಆಯ್ಕೆಯಾಗಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕಾಡಗಿಯವರಾದ ಇವರು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳಲ್ಲಿ ಹೆಚ್ಚು ಮಿಂಚಿದವರು. ಹಾಸ್ಯ ಹಾಗೂ ಸ್ತ್ರೀ ಪಾತ್ರಗಳಲ್ಲೂ ಮೆಚ್ಚುಗೆ ಪಡೆದಿದ್ದಾರೆ. ಹಾಲಾಡಿ, ಸಾಲಿಗ್ರಾಮ, ಪೆರ್ಡೂರು ಮೇಳಗಳ ಕಲಾವಿದರಾಗಿ ತಿರುಗಾಟ ನಡೆಸಿದ್ದಾರೆ. ನಾಟಕ ರಂಗದಲ್ಲೂ, ರಂಗ ತಿರುಗಾಟ ನಡೆಸಿದ್ದಾರೆ. ದೂರದರ್ಶನ ಚಾನೆಲ್ಗಳ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದಾರೆ. ಧಾರಾವಾಹಿ, ಚಲನಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಇವರ ಕೊಡುಗೆ ಮಹತ್ವವಾದುದು. ನವೆಂಬರ್ 1ರಂದು ಮಧ್ಯಾಹ್ನ 2:00ರಿಂದ ನಡೆಯಲಿರುವ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದಲ್ಲಿ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಇಂದ್ರಾಳಿ ಯಕ್ಷಗಾನ ಕೇಂದ್ರದ ವತಿಯಿಂದ “ಶ್ರೀನಿವಾಸ ಕಲ್ಯಾಣ” ಎಂಬ ಯಕ್ಷಗಾನ ಪ್ರಸಂಗ ನಡೆಯಲಿದೆ. ನಂತರ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಹಾಗೂ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಅಂಪಾರು ಇದರ ವತಿಯಿಂದ ಆಯೋಜಿಸಲಾದ ‘ಸಂಜಯ ಸಿಂಚನ – ಮೌಲ್ಯಮಾಲಿಕೆ 3’ ಕಾರ್ಯಕ್ರಮ ನಡೆಯಿತು. ಮೌಲ್ಯ ಸಾರಥಿಯಾಗಿ ಭಾಗವಹಿಸಿದ ರಂಜನಾ ಪ್ರಭು ಅವರು ವಿದ್ಯಾರ್ಥಿಗಳಿಗೆ ಜೀವನಮೌಲ್ಯಗಳ ಮಹತ್ವವನ್ನು ತಿಳಿಸಿ, ಮಾತನಾಡಿ, ಪೋಷಕರನ್ನು ಗೌರವಿಸುವುದು, ಅವರನ್ನು ಪ್ರೀತಿಯಿಂದ ಕಾಣುವುದು, ಅವರ ಮಾತುಗಳಿಗೆ ಕಿವಿಗೊಡುವುದು ಹಾಗೂ ನಮ್ಮ ಮಾತುಗಳಿಂದಾಗಲಿ, ನಡವಳಿಕೆಯಿಂದಾಗಲಿ ಅವರಿಗೆ ನೋವುಂಟು ಮಾಡದಿರುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯವಾಗಿದೆ ಎಂದು ತಿಳಿಸಿದರು. ತಮ್ಮ ಜೀವನದ ಅನುಭವಗಳನ್ನು ಹಾಗೂ ವಿವಿಧ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಜೀವನದ ಅಮೂಲ್ಯ ಪಾಠಗಳನ್ನು ಮನಮುಟ್ಟುವಂತೆ ತಿಳಿಸಿದರು. ಅವರ ಬದುಕಿನ ಪಯಣವೇ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಪಾಠವಾಗಿ ಮೂಡಿಬಂತು. ಭಯ, ಭಕ್ತಿ ಹಾಗೂ ಆಸ್ತಿಕ ಮನೋಭಾವಗಳು ನಮ್ಮನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸುತ್ತವೆ. ತಪ್ಪುಗಳನ್ನು ಮಾಡದಂತೆ ಎಚ್ಚರಿಸುತ್ತವೆ. ಇಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸಿನ ಹಾದಿ ಸುಗಮವಾಗುತ್ತದೆ ಎಂಬ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಚುನಾವಣಾ ಆಯೋಗದ ಮೂಲಕ ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ- 2026 (ಎಸ್ಐಆರ್) ಪ್ರಕ್ರಿಯೆಯ ಮುಕ್ತಾಯಗೊಂಡು ಇಂದು ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿಯಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು10,14,143 ಮಂದಿ ಮತದಾರರಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಿನಿಂದ ನಡೆದ ಎಸ್ಐಆರ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದು, ಒಟ್ಟಾರೆಯಾಗಿ ಉಡುಪಿ ಜಿಲ್ಲೆಯಲ್ಲಿ 49,733 ಮತದಾರರು ಕಡಿಮೆಯಾಗಿದ್ದಾರೆ ಎಂದು ತಿಳಿಸಿದರು. ಎಸ್ಐಆರ್ ಪ್ರಕ್ರಿಯೆಯ ಕೊನೆಯಲ್ಲಿ ಅತ್ಯಂತ ಕಡಿಮೆ ಮತದಾರರ ಇಳಿಕೆ ಕಂಡುಬಂದ ಜಿಲ್ಲೆಯಲ್ಲಿ ಉಡುಪಿ ಜಿಲ್ಲೆ ಅತ್ಯಂತ ಕನಿಷ್ಠ ಇಳಿಕೆಯ ಮೂಲಕ ಅಗ್ರಸ್ಥಾನದಲ್ಲಿದೆ. ಇಲ್ಲಿ ಒಟ್ಟಾರೆ ಮತದಾರರ ಪೈಕಿ ಶೇ. 4.67ರಷ್ಟು ಮತದಾರರು ಮಾತ್ರ ಅನರ್ಹರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 6.95 ಇಳಿಕೆಯೊಂದಿಗೆ ಎರಡನೇ ಹಾಗೂ ಉತ್ತರ ಕನ್ನಡ ಜಿಲ್ಲೆ ಶೇ. 7.35 ಇಳಿಕೆಯೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯೊಂದು ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡ ಬೈಕಾಡಿ ಸರ್ಕಲ್ ಬಳಿ ಮಂಗಳವಾರ ರಾತ್ರಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಮೂಲತಃ ಕಲ್ಯಾಣಪುರದವ, ಪ್ರಸ್ತುತ ಬೈಕಾಡಿಯಲ್ಲಿ ನೆಲೆಸಿದ್ದ ಸುಜಿತ್ ಪಿಂಟೋ (43) ಎಂದು ಗುರುತಿಸಲಾಗಿದೆ. ರೌಡಿಶೀಟರ್ ಸುಜಿತ್ ಪಿಂಟೊ ರಿಕ್ಷಾ ಚಾಲಕ ಪ್ರಮೋದ್ ಗೆ ಹಣ ನೀಡಲು ಬಾಕಿ ಇದ್ದುಇದೇ ಕಾರಣಕ್ಕೆ ಪ್ರಮೋದ್ ಸುಜಿತ್ ಪಿಂಟೋನನ್ನು ತಾನು ಇರುವ ಸ್ಥಳಕ್ಕೆ ಬರುವಂತೆ ಕರೆದಿದ್ದನು. ಅದರಂತೆ ಸುಜಿತ್ ಪಿಂಟೊ ಅಲ್ಲಿಗೆ ಹೋಗಿದ್ದು ಇಬ್ಬರು ಮದ್ಯದ ಅಮಲಿನಲ್ಲಿ ಹೊಡೆದಾಟ ಮಾಡಿಕೊಂಡಿದ್ದರೆನ್ನಲಾಗಿದೆ. ಈ ವೇಳೆ ಸಿಟ್ಟಿಗೆದ್ದ ಪ್ರಮೋದ್ ಕಬ್ಬಿಣದ ರಾಡಿನಿಂದ ಸುಜಿತ್ ಪಿಂಟೊನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ರೌಡಿಶೀಟರ್ ಸುಜಿತ್ ಪಿಂಟೊ 2018ರಲ್ಲಿ ಮಣಿಪಾಲದಲ್ಲಿ ನಡೆದ ಕ್ಲಬ್ ಮಾಲಕ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಲಕ್ಷ್ಮಿನಗರದಲ್ಲಿ 2020ರಲ್ಲಿ ನಡೆದ…
